ಸದ್ಯ ಸಲಗ ಜೋರು ಸದ್ದು ಮಾಡುತ್ತಿದೆ. ಅದರ ಬಗೆಗಿನ ಸುದ್ದಿಯೂ ಸಹ ಸಾಕಷ್ಟು ಕಡೆ ಚರ್ಚೆಯಾಗುತ್ತಿದೆ. ಸಲಗ ಎಲ್ಲೆಡೆ ಒಳ್ಳೆಯ ಮೆಚ್ಚುಗೆ ಪಡೆದಿರುವುದು ಎಲ್ಲರಿಗೂ ಗೊತ್ತಿದೆ. ಅಷ್ಟೇ ಅಲ್ಲ, ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಇದರ ಮಧ್ಯೆಯೇ ಒಂದು ಸುದ್ದಿ ಜೋರಾಗಿ ಓಡುತ್ತಿದ್ದು, ಬಹಳಷ್ಟು ಮಂದಿ ಕನ್‌ಫ್ಯೂಷನ್ ಮಾಡಿಕೊಂಡಿದ್ದಾರೆ. ಹಾಗಾದರೆ, ಆ ಸುದ್ದಿ ಏನು ಗೊತ್ತಾ? ಸಲಗ ಸಿನಿಮಾ ಒಟಿಟಿಯಲ್ಲಿ ಬರಲಿದೆ ಎಂಬ ಸುದ್ದಿಯೇ ಆ ಗೊಂದಲಗಳಿಗೆ ಕಾರಣ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಸ್ವತಃ ದುನಿಯಾ ವಿಜಯ್ ಅವರೇ ಯಾವುದೇ ಕಾರಣಕ್ಕೂ ಸಿನಿಮಾ ಒಟಿಟಿಗೆ ಬರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಲಗ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದನ್ನ ಸಹಿಸಿಕೊಳ್ಳಲಾಗದ ಕೆಲ ಕಿಡಿಗೇಡಿಗಳು ಸಿನಿಮಾ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ದುನಿಯಾ ವಿಜಯ್ ಪ್ರತಿಕ್ರಿಯೆ ಹೀಗಿದೆ. “ಕಳೆದ ವಾರ ಚಿತ್ರ ಪ್ರೇಕ್ಷಕರ ಮುಂದೆ ಬಂದಿದೆ. ಒಳ್ಳೆಯ ಕಲೆಕ್ಷನ್ ಕೂಡ ಆಗುತ್ತಿದೆ. ಇಷ್ಟಿದ್ದರೂ, ಸಿನಿಮಾ ಓಟಿಟಿಯಲ್ಲಿ ಬರಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಯಾವುದೇ ಸಲಗ ಓಟಿಟಿಯಲ್ಲಿ ಬರುವುದಿಲ್ಲ. ಚಿತ್ರಮಂದಿರದಲ್ಲೇ ಸಿನಿಮಾ ಇರಲಿದೆ. ಅಲ್ಲೇ ಸಿನಿಮಾ ನೋಡಿ ಎಂದಿದ್ದಾರೆ ವಿಜಯ್.
“ನಾವು ಸಿನಿಮಾ ಮಾಡಿದ್ದು ಥಿಯೇಟರ್‌ನಲ್ಲಿ ರಿಲೀಸ್ ಮಾಡಲು. ಓಟಿಟಿಯಲ್ಲಿ ರಿಲೀಸ್ ಮಾಡೋದಾಗಿದ್ರೆ, ಇಷ್ಟು ದಿನ ಕಾಯುತ್ತಿರಲಿಲ್ಲ. ಓಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ಕೇಳಿದಾಗಲೂ ನಾವು ಕೊಡಲ್ಲ ಎಂದಿದ್ದೆವು. ಸಲಗ ಚಿತ್ರ ಥಿಯೇಟರ್‌ನಲ್ಲೆ ಪ್ರದರ್ಶನ ಕಾಣುತ್ತೆ. ಯಾರು ಕೂಡ ಈ ಸುದ್ದಿಗೆ ಕಿವಿ ಕೊಡಬೇಡಿ. ಹೀಗೆ ಸುಳ್ಳು ಸುದ್ದಿಯನ್ನು ಹರಡುವ ಹುಳಗಳು ಇದ್ದೇ ಇರುತ್ತವೆʼ ಎಂದಿರುವ ವಿಜಯ್, ನಾನು ಸಲಗ ಚಿತ್ರ ನಿರ್ದೇಶನ ಮಾಡಲು ತೀರ್ಮಾನಿಸಿದಾಗಲೇ ಒಂದು ಕನಸು ಕಂಡಿದ್ದೆ. ಸಲಗ ಚಿತ್ರಮಂದಿರದಲ್ಲೇ ರಿಲೀಸ್ ಆಗಬೇಕು ಅಂತ. ಆ ಆಸೆ ಈಡೇರಿದೆ. ಇಂತಹ ಸುಳ್ಳು ಸುದ್ದಿ ಬಗ್ಗೆ ನಾವು ಕೇರ್ ಮಾಡಲ್ಲ, ಪ್ರೇಕ್ಷಕರು ನಮ್ಮೊಂದಿಗೆ ಇದ್ದಾಗ ತಲೆ ಕೆಡಿಸಿಕೊಳ್ಳಲ್ಲ ಎಂದಿದ್ದಾರೆ ಅವರು.