ಈಗಾಗಲೇ ದೇಶಾದ್ಯಂತ ಸಂಚಲನ ಮೂಡಿಸಿರುವ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯm ಚಕ್ರವರ್ತಿ ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರದ ಟೀಸರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡುತ್ತೇನೆ ಎಂದು ನಿರ್ದೇಶಕ ಆರ್ ಚಂದ್ರು ತಿಳಿಸಿದ್ದರು. ಅಷ್ಟರಲ್ಲಿ ಪುನೀತ್ ರಾಜಕುಮಾರ್ ಅವರ ಅಗಲಿಕೆಯ ಸುದ್ದಿಗೆ ಇಡೀ ಕರುನಾಡು ಮಂಕಾಯಿತು.
ಹೀಗಾಗಿ ನಿರ್ದೇಶಕ ಆರ್.ಚಂದ್ರು ಟೀಸರ್ ರಿಲೀಸ್ ಕುರಿತು ಮಾತಾಡಿದ್ದಾರೆ. ನಮ್ಮ ತಂಡಕ್ಕೂ ಅಪ್ಪು ಅವರ ಅಗಲಿಕೆ ಬಹಳ ನೋವು ತಂದಿದೆ. ಇಂತಹ ಸಂದರ್ಭದಲ್ಲಿ ಟೀಸರ್ ಬಿಡುಗಡೆ ಮಾಡಿ ಸಂಭ್ರಮಿಸುವುದು ಸರಿಯಲ್ಲ ಎಂಬ ಉದ್ದೇಶದಿಂದ “ಕಬ್ಜ” ಚಿತ್ರದ ಟೀಸರ್ ಬಿಡುಗಡೆ ಮಾಡಿಲ್ಲ
ಮುಂದಿನ ದಿನಗಳಲ್ಲಿ ಟೀಸರ್ ಲಾಂಚ್ ಮಾಡುವುದಾಗಿ ಟ್ವಿಟರ್ ಮೂಲಕ ಸಿನಿಪ್ರೇಕ್ಷಕರಿಗೆ ತಿಳಿಸಿದ್ದಾರೆ.
.