ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಿಸಿದೆ.
ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ 46 ವರ್ಷದ ಹಿಂದೆ ಡಾ.ರಾಜ್ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು. ಮಾರ್ಚ್ 22ರಂದು ನಡೆಯುವ ವಿವಿ ಘಟಿಕೋತ್ಸವದಲ್ಲಿ ಪುನೀತ್ಗೆ ಮರಣೋತ್ತರ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡಿ, “ಈ ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು.
ಈಗ ಮೈಸೂರು ವಿಶ್ವವಿದ್ಯಾಲಯ ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ ನೀಡಲು ತೀರ್ಮಾನಿಸಿದೆ” ಎಂದು ಹೇಳಿದ್ದಾರೆ.