ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಮೇ 28ರಂದು ಚುನಾವಣೆ ನಡೆಯಲಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್ ನಾಮಪತ್ರ ಸಲ್ಲಿಸಿದ್ದಾರೆ.
ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು.
ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿ ಭಾ.ಮ.ಹರೀಶ್ ಹೆಸರು ಕೇಳಿಬರುತ್ತಿದೆ.