ನಿರ್ದೇಶಕ ಸ್ಮೈಲ್ ಶ್ರೀನು ಅವರ ನಿರ್ದೇಶನದ ಓ ಮೈ ಲವ್ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಟ ಶಶಿಕುಮಾರ್ ಪುತ್ರ ಅಕ್ಷಿತ್ ಈ ಚಿತಗರದ ಹೀರೋ. ರಿಲೀಸ್ ಮೊದಲೇ ಸಾಕಷ್ಟು ಸದ್ದು ಮಾಡುತ್ತಿರುವ ಸಿನಿಮಾದಲ್ಲಿ ಹಕವಾರು ವಿಶೇಷತೆಗಳಿವೆ….
ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸಿರುವ, ಸ್ಮೈಲ್ ಶ್ರೀನು ಚಿತ್ರಕಥೆ ಸಂಭಾಷಣೆ ಹಾಗೂ ನಿರ್ದೇಶನವಿರುವ ಓ ಮೈ ಲವ್’ ಚಿತ್ರ ಈ ವಾರ ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ.
ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾದ ಮೇಕಿಂಗ್ ಅದ್ಭುತವಾಗಿದೆ. ಸದ್ಯ ಸ್ಯಾಂಡಲ್’ವುಡ್’ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸಿನಿಮಾಗಳ ಪೈಕಿ ‘ಓ ಮೈ ಲವ್’ ಮುಂಚೂಣಿಯಲ್ಲಿದೆ.
ಈ ಚಿತ್ರದ ಎಲ್ಲಾ ಹಾಡುಗಳಿಗೆ ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಹಾಡುಗಳಿಗಿದೆ.
ಹಿರಿಯ ನಿರ್ದೇಶಕ ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.