ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರತಿಭಾ ಅವರು ನಿರ್ಮಾಣ ಮಾಡುತ್ತಿರುವ ಹಾಗೂ ಕಲೈ ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ನಿರ್ಮಾಪಕಿ ಪ್ರತಿಭಾ ಮಂಗಳೂರಿನ ಮೂಲದವರು. ಇಪ್ಪತ್ತುವರ್ಷಗಳಿಂದ ರಾಜಲಕ್ಷ್ಮೀ ಟ್ರಾವಲ್ಸ್ ನಡೆಸುತ್ತಿರುವ ಇವರು ನಿರ್ಮಿಸುತ್ತಿರುವ ಮೂರನೇ ಚಿತ್ರವಿದು.
23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಕಲೈ , ನೃತ್ಯ ನಿರ್ದೇಶಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮದನ್ – ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ ಮಾಡಿರುವ ಕಲೈ, ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು.
ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಅದ್ದೂರಿ ಸೆಟ್ ಗಳಲೇ 80 ದಿನಗಳ ಕಾಲ ನಡೆಯಲಿದೆ. ಅರು ಭರ್ಜರಿ ಫೈಟ್ ಗಳು ಹಾಗೂ ಆರು ಹಾಡುಗಳು ಈ ಚಿತ್ರದಲ್ಲಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಶಂಕರ್ ಹಾಗೂ ಚಂದ್ರಮೌಳಿ(ಕೆ.ಜಿ.ಎಫ್ ಖ್ಯಾತಿ) ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.