ಕೃಷ್ಣ ಸಾರ್ಥಕ್,ಜಗದೀಶ್ ಗೌಡ ನಿರ್ಮಾಣ ಮಾಡಿರೋ ಭೀಮ ಎಲ್ಲಾ ಆ್ಯಂಗಲ್ ನಿಂದ್ಲೂ ಚಿತ್ರರಂಗದಲ್ಲಿ ದೊಡ್ಡ ನಿರಿಕ್ಷೆಯನ್ನ ಹುಟ್ಟಿಸಿದೆ.ಅಲ್ಲದೆ ಈ ವರ್ಷದ ಬಹು ನಿರೀಕ್ಷಿತ ಚಿತ್ರವಾಗಿದೆ.
ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಭೀಮ ಸಿನಿಮಾ ಕೆಲಸಗಳು ಕೊನೆಯ ಹಂತ ತಲುಪುತ್ತಿದ್ದು, ಚಿತ್ರತಂಡ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್ ಮಾಡಿಕೊಳ್ಳುತ್ತಿದೆ.
ಹಾಗಾಗಿ ನವೆಂಬರ್ನಲ್ಲಿ ತೆರೆಗೆ ಸಿನಿಮಾ ತರೋದಕ್ಕೆ ಸಜ್ಜಾಗಿದೆ. ನವೆಂಬರ್ ನಲ್ಲಿ ದೀಪಾವಳಿ ಇರೋದ್ರಿಂದ ಅದೇ ಡೇಟ್ ಗೆ ಸಿನ್ಮಾನ ರಿಲೀಸ್ ಮಾಡ್ಬೇಕು ಅನ್ನೋ ನಿರ್ಧಾರಕ್ಕೆ ಬಂದಿದೆ. ಅಧಿಕೃತವಾಗಿ ಮುಂದಿನವಾರ ಡೇಟ್ ಅನೌನ್ಸ್ ಮಾಡುವುದರ ಜೊತೆಗೆ ಪ್ರಚಾರ ಕಾರ್ಯ ಶುರು ಮಾಡಲಿದೆ.
ದುನಿಯಾ ವಿಜಯ್,ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್,ಕಲ್ಯಾಣಿ,ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ,ವಿನೋದ್,ಗೌತಮ್ ಸಾಹಸ,ಧನು ನೃತ್ಯ ಭೀಮನಿಗಿದೆ.