ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್ಟೈನ್ಮೆಂಟ್ ಬ್ಯಾನರ್ಗಳ ಅಡಿಯಲ್ಲಿ ಈ ಚಿತ್ರವನ್ನು ನಟ ಹಾಗೂ ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ.
ಕಣ್ಣಪ್ಪ ಚಿತ್ರವು ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುತ್ತದೆ. ನಾಸ್ತಿಕನಾದ ಕಣ್ಣಪ್ಪನ ವಿಸ್ಮಯಕಾರಿ ರೂಪಾಂತರವು ಈ ಚಿತ್ರದ ಕಥಾವಸ್ತು. ಈಶ್ವರನ ಅಪ್ರತಿಮ ಭಕ್ತನಾಗಿ ಮತ್ತು ಇತಿಹಾಸದ ಅತ್ಯಂತ ಅಸಾಧಾರಣ ಭಕ್ತರಲ್ಲಿ ಒಬ್ಬನಾದ ಕಣ್ಣಪ್ಪನ ಪಾತ್ರ ಮಾಡುವ ಅವಕಾಶ ಸಿಕ್ಕಿರುವುದು ತಮ್ಮ ಭಾಗ್ಯ ಎಂದು ವಿಷ್ಣು ಮಂಚು ಹೇಳಿಕೊಂಡಿದ್ದಾರೆ.
ಇದುವರೆಗೂ ಹಲವು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿರುವ ವಿಷ್ಣು ಮಂಚು, ಇದೇ ಮೊದಲ ಬಾರಿಗೆ ಪೌರಾಣಿಕ ಚಿತ್ರವೊಂದರಲ್ಲಿ ಚಿತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟಿದ್ದಾರೆ.
ಈ ಚಿತ್ರಕ್ಕೆ ಧೀಮಂತ ಲೇಖಕರಾದ ಪರುಚೂರಿ ಗೋಪಾಲಕೃಷ್ಣ, ತೋಟ ಪ್ರಸಾದ್, ತೋಟಪಲ್ಲಿ ಸಾಯಿನಾಥ್ ಮತ್ತು ಬುರ್ರಾ ಸಾಯಿ ಮಾಧವ್ ಚಿತ್ರಕಥೆ ಮತ್ತು ಸಂಭಾಷಣೆಯನ್ನು ರಚಿಸಿದ್ದು, ಮಣಿಶರ್ಮಾ ಮತ್ತು ಸ್ಟೀಫನ್ ದೇವಸ್ಸೆ ಸಂಗೀತ ಹಾಗೂ ಶೆಲ್ಡನ್ ಶಾ ಅವರ ಛಾಯಾಗ್ರಹಣವಿದೆ.
ಈ ಹಿಂದೆ ಸ್ಟಾರ್ ಪ್ಲಸ್ ಗಾಗಿ ಮಹಾಭಾರತ ಸರಣಿಯನ್ನು ನಿರ್ದೇಶಿಸಿದ್ದ ಮುಖೇಶ್ ಕುಮಾರ್ ಸಿಂಗ್, ಮೇರುಕೃತಿಯನ್ನು ನಿರ್ದೇಶಿಸುತ್ತಿದ್ದಾರೆ. ಬಾಲಿವುಡ್ ನಟಿ ನೂಪುರ್ ಸನೋನ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಭಕ್ತಿ ಪ್ರಧಾನ “ಕಣ್ಣಪ್ಪ” ( ಎ ಟ್ರೂ ಎಪಿಕ್ ಇಂಡಿಯನ್ ಟೇಲ್) ಚಿತ್ರ, ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಹುಭಾಷೆಗಳಲ್ಲಿ ಬರಲಿದೆ.