“ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ.
ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು)
, ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯವಾಗು ಅಭಿನಂದಿಸಿದ್ದಾರೆ.
ಸಮಾರಂಭವನ್ನು ಆಯೋಜಿಸಿ, ನ್ಯಾಚುರಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ. ಹಿರಿಯ ನಟ ಬಿ.ಎಂ.ವೆಂಕಟೇಶ್ ಹಾಗೂ ನಿರ್ದೇಶಕ ಎಂ.ಆನಂದರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅನಿರುದ್ಧ್ ಜತಕರ್ ಕುಟುಂಬದ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿರುದ್ಧ್, ಅಭಿಮಾನಿಗಳ ಈ ಪ್ರೀತಿಗೆ ಮನತುಂಬಿ ಬಂದಿದೆ. ಅವರಿಗೆ ನನ್ನ ಧನ್ಯವಾದ ಎಂದರು.