ಅನಾಥನಾಗಿ ಬೇರೆಯವರ ಆಶ್ರಯದಲ್ಲಿ ಬೆಳೆದ ಗೌರಿಬಿದನೂರಿನ ರೋಷನ್.ಎಂ.ರಾವ್ ಭರತನಾಟ್ಯ ಪ್ರವೀಣ, ಮುಂಬೈನಲ್ಲಿ ನಟನೆ ತರಭೇತಿ ಪಡೆದುಕೊಂಡು ಬಂದಿದ್ದಾರೆ. ಮುಂದೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯಾಗಿ, ಸ್ಕ್ರಿಪ್ಟ್ ಬರೆದುಕೊಂಡು ಹಲವು ಚಿತ್ರಗಳಿಗೆ ಸೆಟ್ ಕೆಲಸ ನಿರ್ವಹಿಸಿ, ಮಧ್ಯೆ ’ತಲ್ವಾರ್’ ಕಿರುಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದೆಲ್ಲಾ ಅನುಭವದಿಂದ ’ಭೈರ್ಯ ಕೆಎ-೦7’ ಚಿತ್ರಕ್ಕೆ ಕಥೆ ಬರೆದು ನಾಯಕನಾಗಿ ನಟಿಸುತ್ತಿದ್ದಾರೆ. ಇವರ ಪ್ರತಿಭೆಯನ್ನು ಗುರುತಿಸಿರುವ ಕನ್ನಡ ಪ್ರೇಮಿ ಬಾಗಲಕೋಟೆಯ ಷರೀಫ ಬೇಗಂ ನಡಾಫ್, ಎನ್ಜಿಓ ಸಂಘ ನಡೆಸುತ್ತಿದ್ದು, ಸಾಧನೆ ಮಾಡುವ ಸಲುವಾಗಿ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಹಿತೈಷಿ ಉದ್ಯಮಿ ಜಿ.ಬಾಲಾಜಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.
ಭೂಗತ ಲೋಕದ ಕಥೆಯಲ್ಲಿ ನಾಯಕನ ಹೆಸರು ಶೀರ್ಷಿಕೆಯಾಗಿರುತ್ತದೆ. ಬೆಂಗಳೂರಿನ ಡಾನ್ಗಳ ಕುರಿತಂತೆ ಸಾಕಷ್ಟು ಸಿನಿಮಾಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿದ್ದಾರೆ. ಕೆಜಿಎಫ್ದಲ್ಲಿರುವ ಚಿನ್ನದ ಗಣಿಯನ್ನು ರಕ್ಷಣೆ ಮಾಡಿದವರು ಯಾರು? ಅಂದು ಅಧ್ಯಕ್ಷರಾಗಿದ್ದವರು ಯಾರು?
ಇವತ್ತಿನವರೆಗೂ ಅದು ಯಾಕೆ ಸರ್ಕಾರದ ಅಧೀನದಲ್ಲಿಲ್ಲ? ಇಂತಹ ಎಲ್ಲಾ ರೀತಿಯ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಇಷ್ಟೆಲ್ಲಾ ವಿಷಯಗಳನ್ನು ಸಂಶೋಧನೆ ನಡೆಸಿ, ಅಧ್ಯಯನ ಮಾಡಿ ಚಿತ್ರಕಥೆಯನ್ನು ತಂಡದೊಂದಿಗೆ ಸೇರಿಕೊಂಡು ಸಿದ್ದಪಡಿಸಲಾಗಿದೆ. 1970 ರಿಂದ 1985ರ ತನಕ ಸಿನಿಮಾವು ಸಾಗುತ್ತದೆ.
ಶಿವಮೊಗ್ಗ ಮೂಲದ ಆಶಿಕಾರಾವ್ ನಾಯಕಿಯಾಗಿ ಎರಡನೇ ಅವಕಾಶ. ಇನ್ನುಳಿದಂತೆ ನಿರ್ದೇಶಕ, ಹಿರಿಯ ಪೋಷಕ ಕಲಾವಿದರು, ಹೆಸರಾಂತ ತಂತ್ರಜ್ಘರು ಚಿತ್ರದಲ್ಲಿ ಇದ್ದಾರೆ. ಇವೆಲ್ಲಾ ಮಾಹಿತಿಗಳನ್ನು ಮುಂದಿನ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನೀಡುವುದಾಗಿ ರೋಷನ್ ಮಾಧ್ಯಮದವರನ್ನು ಕೋರಿಕೊಂಡಿದ್ದಾರೆ. ಬೆಂಗಳೂರು, ಕೋಲಾರ, ಕೆಜಿಎಫ್ ಕಡೆಗಳಲ್ಲಿ 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿ, ಕ್ಲೈಮಾಕ್ಸ್ ಬಾಕಿ ಇದ್ದು, ಅದನ್ನು ಹೆಚ್ಎಂಟಿ ಕಾರ್ಖಾನೆಯಲ್ಲಿ ಸೆಟ್ ಹಾಕಿ ಸೆರೆಹಿಡಿಯಲು ಯೋಜನೆ ಹಾಕಲಾಗಿದೆ.