ಚೊಚ್ಚಲ ನಿರ್ದೇಶನದ ಚಿತ್ರವನ್ನು ಯಶಸ್ವಿಯಾಗಿ ಮುಗಿಸಿದ ಶಶಿಧರ್
‘ಡಾಟರ್ ಆಫ್ ಪಾರ್ವತಮ್ಮ’ ಮೂಲಕ ನಿರ್ಮಾಪಕರಾದ ಶಶಿಧರ್ ಕೆ.ಎಂ.ಅವರು ಹೊಸದೊಂದು ಕಥೆ ಬರೆದು, ಅದಕ್ಕೆ ‘ಶುಗರ್ ಲೆಸ್’ ಎಂಬ ಹೆಸರಿಟ್ಟು ನಿರ್ದೇಶನ ಮಾಡಲು ಹೊರಟಿದ್ದು ಎಲ್ಲರಿಗೂ ಗೊತ್ತು. ಈಗ. ಆ ಚಿತ್ರದ ಹೊಸ ಸುದ್ದಿ ಅಂದರೆ, ಆ ಚಿತ್ರವನ್ನು ಶಶಿಧರ್ ತಮ್ಮ ಚಿತ್ರತಂಡದೊಂದಿಗೆ ಯಶಸ್ವಿಯಾಗಿ ಮುಗಿಸಿದ್ದಾರೆ.
ಹೌದು, ‘ಶುಗರ್ ಲೆಸ್’ ಇತ್ತೀಚೆಗಷ್ಟೆ ಸೆಟ್ಟೇರಿತ್ತು. ಈಗ ನೋಡಿದರೆ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ.
ಅವರ ಚೊಚ್ಚಲ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ನಿರ್ದೇಶನದ ಜರ್ನಿ ಶುರು ಮಾಡಿದ ಶಶಿಧರ್, ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆಯ ಸಂದೇಶ ಇರುವ ಸಿನಿಮಾ ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ‘ಶುಗರ್ ಲೆಸ್’ ಶುರು ಮಾಡಿದ್ದರು.
ಪುಷ್ಕರ್ ಫಿಲ್ಮ್ಸ್ ಸಹಯೋಗದಲ್ಲಿ ‘ಶುಗರ್ ಲೆಸ್’ ಚಿತ್ರದ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಶಶಿಧರ್, ಈ ಮೂಲಕ ಡಯಾಬಿಟಿಸ್ ಕುರಿತ ಕಥೆ ಹೇಳಿದ್ದಾರೆ. ಈ ಕಥೆ ಜೊತೆ ಒಂದು ಬ್ಲಾಕ್ ಕಾಮಿಡಿಯಲ್ಲೇ ಗಂಭೀರ ವಿಷಯ ಹೇಳಲು ಮುಂದಾಗಿರುವ ಅವರು,
ಇಂದು ಡಯಾಬಿಟಿಕ್ ಅನ್ನೋದು, ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇದೆ. ಆದರೆ, ಅದೇ ಸುಮಾರು 30 ವರ್ಷದ ಯುವಕನಿಗೆ ಡಯಾ ಬಿಟಿಸ್ ಬಂದಾಗ, ಅವರ ಬದುಕು ಹೇಗೆ ಇರುತ್ತೆ. ನಿತ್ಯ ಅವನ ಬದುಕಲ್ಲಿ ಏನೆಲ್ಲಾ ಸಮಸ್ಯೆ ಎದುರಾಗುತ್ತವೆ.
ಸಮಾಜದಲ್ಲಿ ಆ ವಿಷಯವನ್ನು ಹೇಳಿಕೊಳ್ಳಲೂ ಆಗದ ವ್ಯಕ್ತಿಗಳು ಎಷ್ಟೆಲ್ಲಾ ಯಾತನೆ ಅನುಭವಿಸುತ್ತಾರೆ ಎಂಬುದನ್ನು ಹೇಳುವ ಪ್ರಯತ್ನಕ್ಕೆ ಮುಂದಾಗಿದ್ದಾರಂತೆ ನಿರ್ದೇಶಕರು.
ಇನ್ನು ಇದೇ ಮೊದಲ ಸಲ ಯಾವ ಭಾಷೆಯಲ್ಲೂ ಈ ರೀತಿಯ ಕಂಟೆಂಟ್ ಇರದ ಕಾರಣ, ಅವರು ಇದನ್ನೇ ಇಟ್ಟು ಕೊಂಡು ಹೊಸ ವ್ಯಾಖ್ಯಾನದೊಂದಿಗೆ ಸಿನಿಮಾ ಮಾಡಲು ಹೊರಟಿದ್ದಾಗಿ ಹೇಳುತ್ತಾರೆ.
ತಮ್ಮ ದಿಶಾ ಎಂಟರ್‌ಟೈನರ್ಸ್ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಿಸುತ್ತಿದ್ದು, ಶಶಿಧರ್ ಗೆ ನಿರ್ಮಾಪಕ ಪುಷ್ಕರ್ ಕೈ ಜೋಡಿಸಿದ್ದು, ಈಗ ಯಶಸ್ವಿಯಾಗಿ ಸಿನಿಮಾ ಮುಗಿಸಿರುವ ಶಶಿಧರ್, ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಸಿನಿಮಾ ತರುವ ತಯಾರಿಯಲ್ಲಿದ್ದಾರೆ.