ಜಗ್ಗೇಶ್ ಅವರ ಮೇಲೆ ಇತ್ತೀಚೆಗೆ ದರ್ಶನ್ ಫ್ಯಾನ್ಸ್ ಮುಗಿಬಿದ್ದದ್ದು ದೊಡ್ಡ ಸುದ್ದಿಯಾಗಿದ್ದ ಬೆನ್ನಲ್ಲೇ ದರ್ಶನ್ ಅವರು ಜಗ್ಗೇಶ್ ಅವರಿಗೆ ಸಾರಿ ಕೇಳಿದ್ದಾರೆ! ಅಷ್ಟೇ ಅಲ್ಲ, ಆ ಮೂಲಕ ಅವರು ದೊಡ್ಡತನವನ್ನೂ ಮೆರೆದಿದ್ದಾರೆ. ಹೌದು, ಜಗ್ಗೇಶ್ ಅವರು ದರ್ಶನ್ ಅವರ ಅಭಿಮಾನಿಗಳ ಬಗ್ಗೆ ಇತ್ತೀಚೆಗೆ ತುಂಬಾನೇ ಕೇವಲವಾಗಿ ಮಾತನಾಡಿದ್ದರು. ಆ ಮಾತು ದೊಡ್ಡ ಸುದ್ದಿಯಾಗಿ, ಎಲ್ಲೆಡೆ ವೈರಲ್ ಆಗಿತ್ತು. ಸಾಕಷ್ಟು ವಿವಾದಕ್ಕೀಡಾಗಿತ್ತು. ಜಗ್ಗೇಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಾತಾಡಿದ್ದರು.
ಅದು ಸಹಜವಾಗಿಯೇ ದರ್ಶನ್ ಅವರ ಫ್ಯಾನ್ಸ್‌ಗೆ ಬೇಸರವಾಗಿತ್ತು. ರೊಚ್ಚಿಗೆದ್ದ ದರ್ಶನ್ ಫ್ಯಾನ್ಸ್ , ಇತ್ತೀಚೆಗೆ ಜಗ್ಗೇಶ್ ಅಭಿನಯದ “ತೋತಾಪುರಿ” ಚಿತ್ರದ ಚಿತ್ರೀಕರಣ ನಡೆಯುವ ವೇಳೆ ದಿಢೀರನೆ ದರ್ಶನ್ ಫ್ಯಾನ್ಸ್ ಮುತ್ತಿಗೆ ಹಾಕಿ ಆಕ್ರೋಶಗೊಂಡಿದ್ದರು. ಜಗ್ಗೇಶ್ ಕೂಡ ಅದರಿಂದ ಕಕ್ಕಾಬಿಕ್ಕಿಯಾಗಿದ್ದರು. ಮರುದಿನ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದರು. ಆದರೆ, ದರ್ಶನ್ ಮಾತ್ರ ಜಗ್ಗೇಶ್ ಅವರ ಮಾತಿಗೆ ಯಾವುದೇ ಉತ್ತರ ನೀಡಿರಲಿಲ್ಲ. ಜಗ್ಗೇಶ್ ಮಾತಾಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ, ವಾಹಿನಿಯೊಂದರ ಮುಂದೆ ಪ್ರತಿಕ್ರಿಯಿಸಿರುವ ದರ್ಶನ್, “ನೋಡಿ, ಇದು ಎಲ್ಲಿಂದ ಎಲ್ಲಿಗೆ ಸ್ಪ್ರೆಡ್ ಆಯ್ತು ನನಗೆ ಗೊತ್ತಿಲ್ಲ. ಅಲ್ಲೀ ಏನಾಯ್ತು ಅನ್ನೋದು ಗೊತ್ತಿಲ್ಲ. ಬಟ್ ಒಂದು ನನ್ನ ಸೆಲಿಬ್ರಿಟಿಗಳಿಂದ ಅವರಿಗೆ ಬೇಜಾರಾಗಿದ್ದರೆ ನನ್ ಸೆಲಿಬ್ರಿಟಿಗಳ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಅವರು ಸೀನಿಯರ್. ದಯವಿಟ್ಟು ಕ್ಷಮಿಸಿಬಿಡಿ ಜಗ್ಗೇಶ್ ಸಾರ್. ಅವರು ದೊಡ್ಡೋರು” ಅಂತ ಹೇಳುವ ಮೂಲಕ ನಿಜಕ್ಕೂ ದೊಡ್ಡತನ ಮೆರೆದಿದ್ದಾರೆ ದರ್ಶನ್.
ಜಗ್ಗೇಶ್ ಅವರು ಇತ್ತೀಚೆಗೆ ಮಾತನಾಡುವಾಗ, “ಎಂಥಾ ಟೈಮಲ್ಲಿ ಅವರ ಪರ ನಾನಿದ್ದೆ. ಒಮ್ಮೆ ಪೊಲೀಸರು ಬರಿಗಾಲಲ್ಲಿ ನಿಲ್ಲಿಸಿದ್ದರು. ಆಗ ನಾನು ಅವರ ಜೊತೆಗಿದ್ದೆ. ಆಗೆಲ್ಲಾ ಆಗ ಯಾಕೆ ಅಭಿಮಾನಿಗಳು ಬರಲಿಲ್ಲ” ಎಂದು ಜಗ್ಗೇಶ್ ಮಾತಾಡಿದ್ದರು. ಆದರೆ, ದರ್ಶನ್ ಅವರ ಮಾತುಗಳನ್ನು ಕೇಳಿಸಿಕೊಂಡಿದ್ದರೂ ಸುಮ್ಮನಿದ್ದರು. ಆದರೆ, ವಾಹಿನಿಯೊಂದರ ಜೊತೆ ಮಾತಾಡುವಾಗ, “ನಮ್ ಸೆಲಿಬ್ರಿಟಿಗಳಿಂದ ತಪ್ಪಾಗಿದ್ದರೆ ಕ್ಷಮಿಸಿ. ನಮ್ಮ ಸೆಲಿಬ್ರಿಟಿಗಳು ಹೋಗಿದ್ದು ಗೊತ್ತಿಲ್ಲ. ಅಲ್ಲಿ ಏನಾಯ್ತು ಅನ್ನೋದು ಗೊತ್ತಿಲ್ಲ. ಆದರೂ ಅವರು ನಮ್ಮ ಸೀನಿಯರ್. ತುಂಬಾ ದೊಡ್ಡೋರು. ಅವರಿಗೆ ನಾನು ನಮ್ ಸೆಲಿಬ್ರಿಟಿಗಳ ಪರವಾಗಿ ಕ್ಷಮೆ ಕೇಳ್ತೀನಿ” ಎನ್ನುವ ಮೂಲಕ ದೊಡ್ಡತನ ಮೆರೆದಿದ್ದಾರೆ.
ಜಗ್ಗೇಶ್, ಅವರೂ ಸಹ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ಮೂಲಕ ಪದೇ ಪದೇ ಇಂಡಸ್ಟ್ರಿ ಹಾಳಾಗೋಯ್ತು, ಒಳರಾಜಕೀಯ ನಡೀತಾ ಇದೆ ಅಂತ ಹೇಳಿಕೊಂಡಿದ್ದರು. ಆದರೆ, ದರ್ಶನ್ ಮಾತ್ರ ಒಂದೇ ಮಾತಲ್ಲಿ ಉತ್ತರ ಕೊಡುವ ಮೂಲಕ ವಿವಾದಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಅದೇನೆ ಇದ್ದರೂ, ದರ್ಶನ್ ಅವರು ಅವರ ಫ್ಯಾನ್ಸ್‌ಗೆ ತುಂಬಾ ಇಷ್ಟ ಆಗೋದು, ಫ್ಯಾನ್ಸ್‌ಗಳನ್ನು ಸೆಲಿಬ್ರಿಟಿಗಳು ಎಂದು ಕರೆದಾಗ. ಈಗ ಅಭಿಮಾನಿಗಳನ್ನು ಸೆಲಿಬ್ರಿಟಿಗಳು ಅಂತ ಹೇಳಿ ಮತ್ತಷ್ಟು ಫಾನ್ಸ್‌ಗೆ ಇಷ್ಟವಾಗಿದ್ದಾರೆ.
ಮನಸು ಹಗುರವಾಯಿತು- ಧನ್ಯವಾದ ದರ್ಶನ್
ಜಗ್ಗೇಶ್ ಟ್ವೀಟ್ ಮೂಲಕ ದಚ್ಚುಗೆ ಧನ್ಯವಾದ
ಹೀಗಂತ ನಟ ಜಗ್ಗೇಶ್, ಟ್ವೀಟ್ ಮಾಡಿದ್ದಾರೆ. ಯಾವಾಗ ದರ್ಶನ್ ಅವರು ವಾಹಿನಿಯೊಂದರ ಮೂಲಕ ಜಗ್ಗೇಶ್ ಅವರಿಗೆ ಕ್ಷಮೆ ಇರಲಿ ಅಂತ ಹೇಳಿಕೆ ಕೊಟ್ಟರೋ, ಆಗಲೇ, ಜಗ್ಗೇಶ್ ಅವರು ತಮ್ಮ ಟ್ವೀಟ್ ಮೂಲಕ ದರ್ಶನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅವರ ಟ್ವೀಟ್‌ನಲ್ಲಿ ” ಸಮಯ ಸಂದರ್ಭ, ವಿಷ ಘಳಿಗೆ, ಪ್ರೀತಿ ವಿಶ್ವಾಸಕ್ಕೆ, ತಾತ್ಕಾಲಿಕ ಸಮಸ್ಯೆ. ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ, ಅಪನಂಬಿಕೆ ದೂರ ಸರಿದು, ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ.
ಕನ್ನಡಕ್ಕೆ ಒಗ್ಗಟ್ಟಿರಲಿ, ಧನ್ಯವಾದ ದಾಸ ದರ್ಶನ್. ಮನಸು ಹಗುರವಾಯಿತು. ಧನ್ಯವಾದ ಮಾಧ್ಯಮ ಮಿತ್ರರಿಗೆ, ಧನ್ಯವಾದ ಕನ್ನಡದ ಮನಗಳಿಗೆ, ಇನ್ನೆಂದೂ ಇಂತಹ ದಿನ ಬರದಿರಲಿ” ಎಂದು ಟ್ವೀಟ್ ಮಾಡಿದ್ದಾರೆ.