Categories
ಸಿನಿ ಸುದ್ದಿ

ಹೊಂದಿಸಿ ಬರೆದ ಅಶ್ವಿನಿ ಪುನೀತ್ ರಾಜ್‍ಕುಮಾರ್: ಸಿನಿಮಾ ಟ್ರೇಲರ್ ರಿಲೀಸ್ ಮಾಡಿ ಶುಭ ಹಾರೈಕೆ-ಫೆ.10ಕ್ಕೆ ಚಿತ್ರ ಬಿಡುಗಡೆ…

ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನ ಹೊಂದಿಸಿ ಬರೆಯಿರಿ ಸಿನಿಮಾ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಇತರರು ಇದ್ದಾರೆ.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ, ‘ಹೊಂದಿಸಿ ಬರೆಯಿರಿ’ ಎಂದಾಗ ನೆನಪಾಗೋದು ಬಾಲ್ಯ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಹೋಗಬೇಕು, ಬದುಕು ಬಂದಂತೆ ಸ್ವೀಕರಿಸಿ ಅನ್ನೋದು ಈ ಚಿತ್ರದ ಆಶಯ. ಐದು ಜನ ಸ್ನೇಹಿತರ ಹನ್ನೆರಡು ವರ್ಷದ ಜರ್ನಿ ಈ ಚಿತ್ರದಲ್ಲಿದೆ. ಕಾಲೇಜು, ಕಾಲೇಜು ನಂತರದ ದಿನಗಳು, ಮದುವೆ ಈ ಜರ್ನಿಯನ್ನು ಒಳಗೊಂಡಿದೆ. ತುಂಬಾ ಜನಕ್ಕೆ ಈ ಸಿನಿಮಾ ಕನೆಕ್ಟ್ ಆಗುತ್ತೆ. ಈ ಚಿತ್ರದ ಟೈಟಲ್ ನೀಡಿದ್ದು ಮಾಸ್ತಿ ಸರ್. ನನಗೆ ಈ ಚಿತ್ರ ಹೊಸತು. ಇಲ್ಲಿ ನಟಸಿರೋರೆಲ್ಲ ಅನುಭವಿಗಳು ಆದ್ದರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಈ ಸಿನಿಮಾ ಕೆಲಸ ಆರಂಭಿಸಿದೆವು. ಫೆಬ್ರವರಿ10ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹ ನೀಡಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ನಟ ಪ್ರವೀಣ್ ತೇಜ್ ಮಾತನಾಡಿ, ನಮ್ಮ ಚಿತ್ರದ ನಿಜವಾದ ನಾಯಕ ನಿರ್ದೇಶಕ ಹಾಗೂ ನಿರ್ಮಾಪಕ ರಾಮೇನಹಳ್ಳಿ ಜಗನ್ನಾಥ್. ಒಂದೊಳ್ಳೆ ತಂಡವನ್ನು ಕಟ್ಟಿಕೊಂಡು ಎಲ್ಲರನ್ನೂ ನಿಭಾಯಿಸಿ ತುಂಬಾ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಒಂದೊಳ್ಳೆ ಅನುಭವವನ್ನು ಈ ಸಿನಿಮಾ ನೀಡಿದೆ ಎಂದರು.

ನಟಿ ಭಾವನ ರಾವ್ ಮಾತನಾಡಿ, ಹೊಂದಿಸಿ ಬರೆಯಿರಿ ಕಥೆ ಕೇಳಿದಾಗ ಸಿಂಪಲ್ ಕಥೆ ಬಟ್ ಇದರಲ್ಲಿ ಬರುವ ಪಾತ್ರಗಳು ತುಂಬಾ ಕಾಂಪ್ಲಿಕೇಟ್ ಅನಿಸ್ತು. ನಮ್ಮ ಜೀವನದ ಹಾಗೆ ಕೆಲವು ಸನ್ನಿವೇಶಗಳಿಂದ ನಾವು ಜೀವನವನ್ನು ಕಾಂಪ್ಲಿಕೇಟ್ ಮಾಡಿಕೊಳ್ಳುತ್ತೇವೆ. ಚಿತ್ರದಲ್ಲಿ ನಾನು ಭೂಮಿಕ ಪಾತ್ರ ನಿರ್ವಹಿಸಿದ್ದೇನೆ. ಈ ಸಿನಿಮಾ ತುಂಬಾ ಜನಕ್ಕೆ ಕನೆಕ್ಟ್ ಆಗುತ್ತೆ. ನಿರ್ದೇಶಕರು ಈ ಸಿನಿಮಾ ಬಗ್ಗೆ ಆರಂಭದಿಂದಲೂ ತುಂಬಾ ಕ್ಲಿಯರ್ ಆಗಿದ್ದರು ಇಂತಹ ಬ್ಯೂಟಿಫುಲ್ ಸಿನಿಮಾ ಕೊಟ್ಟಿದ್ದಕ್ಕೆ ಅವರಿಗೆ ಧನ್ಯವಾದ ಎಂದರು.

ನಟ ಶ್ರೀ ಮಹದೇವ್ ಮಾತನಾಡಿ ಹೊಂದಿಸಿ ಬರೆಯಿರಿ ಎಂದಾಗ ಬಾಲ್ಯ ನೆನಪಾಗುತ್ತೆ. ಆದ್ರೆ ಕೇವಲ ಬಾಲ್ಯ ಅಲ್ಲ ಜೀವನ ಹೇಗೆ ನಡೀತಿದೆ, ನಾವು ಹೇಗಿರಬೇಕು. ಚಿಕ್ಕ ತಪ್ಪು ಎಷ್ಟು ದೊಡ್ಡದಾಗುತ್ತೆ ಎಲ್ಲವೂ ಈ ಸಿನಿಮಾದಲ್ಲಿ ರಿಯಲೈಜ್ ಆಗುತ್ತೆ. ಇಡೀ ಸಿನಿಮಾವನ್ನು ಮಾತಲ್ಲಿ ಹೇಳೋಕಾಗಲ್ಲ ಅಷ್ಟು ಡೆಪ್ತ್ ಆಗಿದೆ ಈ ಚಿತ್ರದ ಕಾನ್ಸೆಪ್ಟ್. ನನಗೆ ಈ ಚಿತ್ರ ತುಂಬಾ ಸ್ಪೆಶಲ್ ಎಂದರು.

ನಟಿ ಐಶಾನಿ ಶೆಟ್ಟಿ ಮಾತನಾಡಿ ಹೊಂದಿಸಿ ಬರೆಯಿರಿ ಸಿನಿಮಾ ಒಪ್ಪಿಕೊಳ್ಳಲು ಮೊದಲ ಕಾರಣ ಈ ಸಿನಿಮಾ ಕಥೆ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್. ಈ ಚಿತ್ರದ ಪಾತ್ರಗಳು ಬದುಕಿಗೆ ತುಂಬಾ ಹತ್ತಿರವಾಗುತ್ತೆ. ಮೊದಲ ಸಿನಿಮಾದಲ್ಲೇ ಇಷ್ಟೊಳ್ಳೆ ಸಬ್ಜೆಕ್ಟ್ ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕರು. ಚಿತ್ರದಲ್ಲಿ ಸನಿಹ ಪಾತ್ರ ಮಾಡಿದ್ದೇನೆ. ಈ ಪಾತ್ರ ಹಾಗೂ ಈ ಸಿನಿಮಾ ಭಾಗವಾಗಿರೋದಕ್ಕೆ ನನಗೆ ತುಂಬಾ ಹೆಮ್ಮೆಯಿದೆ. ಫೆಬ್ರವರಿ 10ರಂದು ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಂತಸ ಹಂಚಿಕೊಂಡರು.

ನವೀನ್ ಶಂಕರ್ ಮಾತನಾಡಿ ಈ ಸಿನಿಮಾ ಒಪ್ಪಿಕೊಳ್ಳಲು ಮೂಲ ಕಾರಣ ಈ ಚಿತ್ರದ ಆಶಯ. ಸಂಬಂಧಗಳ ಸುತ್ತ, ಸ್ನೇಹದ ಸುತ್ತ, ಬಾಂದವ್ಯದ ಸುತ್ತ ಈ ಸಿನಿಮಾ ಹೇಳ ಹೊರಟ ವಿಷಯ ಬಹಳ ಇಷ್ಟವಾಯ್ತು ಎಂದರು.

ನಟಿ ಅರ್ಚನಾ ಕೊಟ್ಟಿಗೆ, ನಟಿ ಅರ್ಚನಾ ಜೋಯೀಸ್, ಅನಿರುದ್ದ್ ಆಚಾರ್ಯ ಮಾತಾಡಿದರು. ಸಾಗರ್ ಹೆಚ್.ಜಿ ಕ್ಯಾಮೆರಾ ಹಿಡಿದರೆ, ಜೋ ಕೋಸ್ಟ ಸಂಗೀತವಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಚಿತ್ರಕ್ಕಿದೆ. ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Categories
ಸಿನಿ ಸುದ್ದಿ

ಸಕೂಚಿ ಎಂಬ ವಾಮಾಚಾರ ಕುರಿತ ಚಿತ್ರ: ಟ್ರೇಲರ್ ರಿಲೀಸ್ ವೇಳೆ ನಡೆದ ಘಟನೆ ವಿಚಿತ್ರ…

ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಸಾಕಷ್ಟು ಮಾಟ-ಮಂತ್ರ ಕುರಿತಾದ ಸಿನಿಮಾಗಳು ಬಂದು ಹೋಗಿವೆ. ಇದೀಗ ಆ ಸಾಲಿಗೆ ಸೇರಲು ಸಿದ್ದವಾಗಿದೆ ‘ಸಕೂಚಿ’. ಹೌದು ಸಾವಿನ ಸೂಚಿ ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಜೇಂಕಾರ್ ಮ್ಯೂಸಿಕ್‌ನಲ್ಲಿ ರಿಲೀಸ್ ಆದ ಟ್ರೇಲರ್‌ಗೆ ಜಾಲತಾಣದಲ್ಲಿ ಒಳ್ಳೆ ರೆಸ್ಪಾನ್ಸ್ ಕೂಡ ಸಿಗುತ್ತಿದೆ. ಇದೇ ಫೆಬ್ರವರಿ 17ರಂದು ಸಿನಿಮಾ ಬಿಡುಗಡೆಯಾಗಲಿದೆ.

ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಅಶೋಕ ಚಕ್ರವರ್ತಿ ‘ಇದು ನಾನು ನಿರ್ದೇಶನ ಮಾಡಿರುವ ಮೊದಲ ಸಿನಿಮಾ. ಚಿತ್ರದಲ್ಲೊಂದು ವಿಭಿನ್ನವಾದ ಪಾತ್ರವಿದೆ. ಹಾಗಾಗಿ ನಾನು ಈ ಗೆಟಪ್‌ನಲ್ಲಿ ಇಲ್ಲಿಗೆ ಬಂದಿದ್ದೇನೆ ಎಂದು ಮಂತ್ರವಾದಿ ಗೆಟಪ್‌ನಲ್ಲಿ ಬಂದ ಕಾರಣ ತಿಳಿಸಿದರು. ನಂತರ ಮಾತನಾಡಿದ ಅವರು ‘ನಾನು ಈ ‘ಸಕೂಚಿ’ ಎಂಬ ಶಬ್ದವನ್ನು ಒಂದಿಷ್ಟು ಕಡೆ ಕೇಳಿದ್ದೆ. ಆ ನಂತರ ‘ಸಕೂಚಿ’ಗೆ ಅರ್ಥ ಅತಿ ಗೋರವಾದ ವಾಮಾಚಾರ ಎಂದು ಗೊತ್ತಾಯ್ತು. ಈ ಬ್ಲಾಕ್ ಮ್ಯಾಜಿಕ್ ಕತೆಯನ್ನು ತೆಗೆದುಕೊಂಡು ಕಮರ್ಶಿಯಲ್ ಆಗಿ ಸಿನಿಮಾ ಮಾಡಲಾಗಿದೆ.

ಇದರಲ್ಲಿ ನಾಯಕ ಹೇಗೆ ಸಕೂಚಿಗೆ ಒಳಗಾಗುತ್ತಾನೆ ಎಂಬುದು ಮುಖ್ಯವಾದ ಅಂಶ. ಶೂಟಿಂಗ್ ಟೈಮ್‌ನಲ್ಲಿ ಒಂದಷ್ಟು ಘಟನೆಗಳು ನಡೆದಿದ್ದು, ನಮ್ಮಗಳ ಗಮನಕ್ಕೆ ಬಂದಿದೆ. ಸಾಕಷ್ಟು ಕಷ್ಟಪಟ್ಟು ಇಷ್ಟಪಟ್ಟು ಸಿನಿಮಾ ಮಾಡಿದ್ದು, ಎಲ್ಲಾ ಕಲಾವಿದರು ಚನ್ನಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕಾಗಿ ನಾವು ಕತೆಯಾಗಿ ಬದುಕಿದ್ದೇವೆ. ಸಿನಿಮಾವನ್ನು ದೈವ ಬಬ್ಬುಸ್ವಾಮಿಗೆ ಅರ್ಪಣೆ ಮಾಡುತ್ತೇನೆ’ ಎನ್ನುವರು.

ನಾಯಕ ತ್ರಿವಿಕ್ರಮ ಸಾಮ್ರಾಟ್, ‘ನಾನು ನಟನೆ ಆರಂಭಿಸುವ ಮೊದಲೇ ಈ ಕಥೆ ಕೇಳಿದ್ದೆ. ಆಗಲೇ ನಂಗೆ ಕಥೆಯ ಬಗ್ಗೆ ಆಶ್ಚರ್ಯ ಆಗಿತ್ತು. ನಂತರ ಒಂದೆರಡು ಸಿನಿಮಾ ಆದ ಮೇಲೆ ಈ ಚಿತ್ರಕ್ಕೆ ನಾನು ಆಯ್ಕೆಯಾದೆ. ನಿರ್ದೇಶಕರು ತುಂಬಾ ಶ್ರಮ ಹಾಕಿ ಈ ಸಿನಿಮಾ ಮಾಡಿದ್ದಾರೆ. ನಾನಿಲ್ಲಿ ವಿಕ್ಕಿ ಮಾರ್ಟಿನ್ ಪಾತ್ರ ಮಾಡಿದ್ದು, ನನ್ನ ಪಾತ್ರದ ಮೂಲಕ ಸಂಬಂದ, ಸ್ನೇಹ, ಪ್ರೀತಿ ಎಲ್ಲಾ ತೋರಿಸಲಾಗಿದೆ. ಬ್ಲಾಕ್ ಮ್ಯಾಜಿಕ್ ಕುರಿತಾದ ಸಿನಿಮಾ ಇದಾಗಿದ್ದು, ಸಂಗೀತ ಚಿತ್ರದ ಹೈಲೈಟ್ ಎನ್ನಬಹುದು’ ಎಂದರು.

ನಾಯಕಿ ಡಯಾನ ಮಾತನಾಡಿ ‘ಕಥೆ ಕೇಳಿದಾಗ ಥ್ರಿಲ್ ಆದೆ. ಮೂಲತಃ ನಂಗೆ ಹಾರರ್ ಸಿನಿಮಾ ಅಂದ್ರೆ ತುಂಬಾ ಇಷ್ಟ. ನಾನಿಲ್ಲಿ ಇನೋಸೆಂಟ್ ಕಾಲೇಜ್ ಹುಡುಗಿಯಾಗಿ ನಟಿಸಿದ್ದು, ನಂತರ ನನ್ನ ಪಾತ್ರ ಬೇರೆ ಬೇರೆ ತರ ತೆರೆದುಕೊಳ್ಳುತ್ತದೆ. ಮೂರು ವರ್ಷದ ಹಿಂದೆ ಶುರುವಾದ ಈ ಸಿನಿಮಾ ಜರ್ನಿ ಮರೆಯಲಾಗದು’ ಎಂದರು.

ಚಿತ್ರದ ಸಹ ನಿರ್ಮಾಪಕರಾದ ಮಹಾವೀರ್ ಪ್ರಸಾದ್ ‘ಈ ಚಿತ್ರದಲ್ಲಿ ವಾಮಾಚಾರ, ಸಸ್ಪೆನ್ಸ್ ಕಥೆ ಇದ್ದು ಚ್ಯಾಲೆಂಜ್ ಆಗಿ ತೆಗೆದುಕೊಂಡು ಸಿನಿಮಾ ಮಾಡಲಾಗಿದೆ. ಹೊಸ ತಂಡವನ್ನು ನಿವೆಲ್ಲಾ ಬೆಳಿಸಬೇಕು’ ಎಂದು ಹೇಳಿದರು.

ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ ಬಿಟ್ ಗುರು ಬ್ಯಾಂಡ್ ಖ್ಯಾತಿಯ ಗಣೇಶ್ ಗೋವಿಂದಸ್ವಾಮಿ. ಸಕೂಚಿ ಅವರ ಮೊದಲ ಸಂಗೀತ ನಿರ್ದೇಶನದ ಚಿತ್ರವಾಗಿದೆ. ಅಶ್ವಿನ್ ಬಿ.ಸಿ ನಿರ್ಮಾಣದ ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿ ಮಧುಕರ್ ಜೆ ಹಾಗೂ ಮಹಾವೀರ್ ಪ್ರಸಾದ್ ಸಾಥ್ ನೀಡಿದ್ದಾರೆ. ಸತ್ಯ ಸಿನಿ ಡಿಸ್ಟಿಬ್ಯೂಟರ್ಸ್ ನ ಸತ್ಯ ಪ್ರಕಾಶ್ ಹಾಗೂ ಮಂಜುನಾಥ ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಆನಂದ್ ಸುಂದ್ರೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಹೇಶ್ ಸಂಕಲನ, ಕುಂಫು ಚಂದ್ರು ಸಾಹಸ, ಆನಂದ್ ನೃತ್ಯವಿದೆ. ಚಿತ್ರದಲ್ಲಿ ಸಂಜಯ್ ರಾಜ್ ನಟನೆಯ ಜೊತೆಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ‘ನೈಜ ಘಟನೆಗಳನ್ನು ಹೆಕ್ಕಿಕೊಂಡು ಈ ಸಿನಿಮಾ ಮಾಡಲಾಗಿದ್ದು ನಿಜವಾದ 30-40 ಮಂಗಳ ಮುಖಿಯರು ಅಭಿನಯ ಮಾಡಿದ್ದು ಇದು ಮಹತ್ವದ ವಿಷಯವಾಗಿದೆ’ ಎಂದರು ಸಂಜಯ್ ರಾಜ್.

Categories
ಸಿನಿ ಸುದ್ದಿ

ಗಣರಾಜ್ಯೋತ್ಸವಕ್ಕೆ ಪ್ರಜಾರಾಜ್ಯ ಟ್ರೇಲರ್ ರಿಲೀಸ್…

‘ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ’ ಎಂಬ ಟ್ಯಾಗ್ ಲೈನ್ ಹೊಂದಿರುವ ‘ಪ್ರಜಾರಾಜ್ಯ’ ಚಿತ್ರ ಸದ್ಯ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಪ್ರತಿಯೊಬ್ಬ ಭಾರತೀಯ ನೋಡಲೇ ಬೇಕಾದ ಸಿನಿಮಾ ಇದು ಎಂಬುದು ತಂಡದ ಮಾತು. ಯಾಕಂದರೆ ಪ್ರಜೆಗಳು ಮನಸು ಮಾಡಿದರೆ ಏನೆಲ್ಲಾ ಮಾಡಬಹುದು ಎಂಬ ಅಂಶದ ಮೇಲೆ ಈ ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಸದ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಸಿದ್ದವಾಗುತ್ತಿದ್ದು, ಈ ಸಂದರ್ಭದಲ್ಲೇ ಸಿನಿಮಾ ಇದೇ ಫೆಬ್ರವರಿ 24ರಂದು ಬಿಡುಗಡೆಯಾಗಲಿದೆ.

ಅಂದಹಾಗೆ, ಈ ಚಿತ್ರಕ್ಕೆ ವೃತ್ತಿಯಲ್ಲಿ ವೈದ್ಯರಾಗಿರುವ ಡಾಕ್ಟರ್ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಟನೆಯ ಜೊತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ಮಾಪಕರು , ‘ಉಪೇಂದ್ರ ಸಿನಿಮಾ ನೋಡಿ, ನಿಜ ಸಂಗತಿಯನ್ನು ಹೀಗೂ ತೋರಿಸಬಹುದು ಎಂದು ಗೊತ್ತಾಯ್ತು. ನಮಗೆ ಹೋರಾಟದ ಮೂಲಕ ಸ್ವಾತಂತ್ರ‍್ಯ ಬಂತು. ಸ್ವಾತಂತ್ರ್ಯ ಬಂದು 75 ವರ್ಷವಾದರೂ ನಾವೆಲ್ಲಾ ಆರ್ಥಿಕವಾಗಿ ಸ್ವಾತಂತ್ರ್ಯವಾಗಿದ್ದೇವಾ! ನಾವು ಸ್ವಾತಂತ್ರ್ಯವನ್ನು ಹೇಗೆ ನಡೆಸಿಕೊಂಡು ಹೋಗಬೇಕು ಎಂಬುದನ್ನು ತಿಳಿಸಲು ಈ ಸಿನಿಮಾ ಮಾಡಲಾಗಿದೆ. ಪ್ರಜಾಪ್ರಭುತ್ವ ಎಂದರೆ! ಜನರಿಂದ ಜನರಿಗಾಗಿ ಇರುವ ಸರ್ಕಾರ. ಆದರೇ ಇಂದು ಕೆಲವರಿಂದ ಕೆಲವರಿಗಾಗಿ ಸರ್ಕಾರ ಇದೆ. ಸಂವಿಧಾನದ ನಾಲ್ಕನೇ ಅಂಗ ಮಾಧ್ಯಮ ಎಂದು ಹೇಳುತ್ತೇವೆ.

ಅದು ತನ್ನ ಕೆಲಸ ಮಾಡುತ್ತಿದೆಯಾ, ಸರಿಯಾಗಿ ಕೆಲಸ ಮಾಡಿದ್ರೆ ಎನೆಲ್ಲಾ ಮಾಡಬಹುದು ಎಂಬುದರ ಜೋತೆಗೆ ನಾವಿಂದು ಪ್ರತಿ ಮನುಷ್ಯ ಸರ್ಕಾರಕ್ಕೆ ಟ್ಯಾಕ್ಸ್ ಕಟ್ಟಬೇಕು. ನಾವು ಕಟ್ಟುವ ಟ್ಯಾಕ್ಸ್ ಸರಿಯಾಗಿ ಬಳಕೆಯಾದರೆ, ನಾವೆಲ್ಲಾ ಆರ್ಥಿಕವಾಗಿ ಸ್ವಾತಂತ್ರ‍್ಯರಾಗುತ್ತೇವೆ. ಎಂಬುದನ್ನು ತೋರಿಸಲಾಗಿದ್ದು, ಒಟ್ಟಿನಲ್ಲಿ ಈ ಸಿನಿಮಾ ಪ್ರಜೆಗಳಿಗೆ ತಿಳುವಳಿಕೆ ಮೂಡಿಸಲು ಮಾಡಲಾಗಿದೆ. ಪ್ರತಿ ಪ್ರಜೆ ನೋಡಲೇ ಬೇಕಾದ ಸಿನಿಮಾ ಇದು. ಇದನ್ನು ಪ್ರತಿ ಮತದಾರ ನೋಡಿದ್ರೆ ಬದಲಾವಣೆ ಕಂಡಿತ ಆಗುತ್ತದೆ’ ಎಂದು ಹೇಳಿದರು.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಮಾತನಾಡಿ ‘ನಾನು ಇದರಲ್ಲಿ ನಟನೆ ಕೂಡ ಮಾಡಿದ್ದೇನೆ. ಇಂದಿನ ಸಮಾಜದಲ್ಲಿ ಆಗು ಹೋಗುಗಳನ್ನು ಹೇಳುವ ಸಿನಿಮಾ ಇದು. ನಮ್ಮ ಮತದ ಮಹತ್ವ ತೋರಿಸುವ ಜೊತೆಗೆ ಸಮಸ್ಯೆ ಹೇಗೆ ಬಗೆಹರಿಸಿಕೊಳ್ಳಬೇಕು ಎಂಬುದನ್ನು ತೋರಿಸಲಾಗಿದೆ. ಇಂದು ಕೆಲಸ ಮಾಡದವ ಮಾಡುವವ ಎಲ್ಲರು ಟ್ಯಾಕ್ಸ್ ಕಟ್ಟುತ್ತಾನೆ. ಆ ಹಣ ಎನಾಯ್ತು ಎಂದು ಕೇಳುವ ಅಧಿಕಾರ ಕೂಡ ಪ್ರಜೆಗಿದೆ. ನಮ್ಮ ಟ್ಯಾಕ್ಸ್ ಸರಿಯಾಗಿ ಬಳಕೆಯಾದ್ರೆ ದೇಶದ ಎಲ್ಲಾ ಜನರಿಗೆ ಉಚಿತ ಶಿಕ್ಷಣ, ಆರೋಗ್ಯ ನೀಡಬಹುದು. ಇವೆರಡಕ್ಕಾಗಿ ಮನುಷ್ಯ ಇಂದು ವರ್ಷವಿಡಿ ದುಡಿತಾ ಇರುತ್ತಾನೆ. ಇಂತಹ ಸಮಾಜಕ್ಕೆ ಒಳ್ಳೆ ಸಂದೇಶ ನೀಡುವ ಸಿನಿಮಾಗಳು ಗೆಲ್ಲಬೇಕು’ ಎಂದರು.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ವಿ. ನಾಗೇಂದ್ರ ಪ್ರಸಾದ್, ‘ಆರ್ಥಿಕ ಸ್ವಾತಂತ್ರ‍್ಯದ ಕಲ್ಪನೆ ಎಷ್ಟರ ಮಟ್ಟಿಗೆ ತೆರೆಯ ಮೇಲೆ ಬಂದಿದೆ ಎಂಬುದು ಮುಖ್ಯ. ಸಮಾಜದಲ್ಲಿ ಸಿನಿಮಾ ಮಾದ್ಯಮ ಹಲವಾರು ಬದಲಾವಣೆ ಮಾಡುತ್ತಾ ಬಂದಿದೆ. ಅದಕ್ಕೆ ಉದಾಹರಣೆ ‘ಬಂಗಾರದ ಮನುಷ್ಯ’ ಸಿನಿಮಾ ನೋಡಿ ಹಲವಾರು ಯುವಕರು ನಗರದಿಂದ ಹಳ್ಳಿಗೆ ಹೋಗಿ ಕೃಷಿ ಮಾಡುತ್ತಿರುವುದು. ಇಂತಹ ಅದ್ಭುತ ಬದಲಾವಣೆ ಈ ಚಿತ್ರದ ಮೂಲಕ ಆಗಲಿ. ವಿಜಯ್ ಭಾರ್ಗವ್ ನಿರ್ದೇಶನದ ಜೊತೆ ನಟನೆ ಕೂಡ ಮಾಡಿದ್ದಾರೆ. ಹಾಡು, ಟ್ರೇಲರ್ ನೋಡಿದಾಗ ನಿರ್ದೇಶಕನ ಕೆಲಸದ ಜೋತೆ ಸಂಗೀತ, ಛಾಯಾಗ್ರಹಣ ಹೈಲೈಟ್ ಆಗುತ್ತದೆ ಎನಿಸಿದೆ. ಸದ್ಯ ರಾಜ್ಯದಲ್ಲಿ ಚುನಾವಣಾ ಕಾವು ಇರುತ್ತಿದ್ದು, ಇಂತ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಈ ಸಿನಿಮಾ ಮೂಲಕ ಬದಲಾವಣೆ ಆಗಲಿ’ ಎಂದರು.

ಚಿತ್ರದ ಟ್ರೇಲರ್‌ಗೆ ಸಂತೋಷ ಹೆಗಡೆ ವಿಶೇಷ ಶುಭಾಶಯ ತಿಳಿಸಿದ್ದಾರೆ. ಯುವ ಪ್ರತಿಭೆ ವಿಜಯ್ ಭಾರ್ಗವ ನಿರ್ದೇಶದ ಈ ಚಿತ್ರದಲ್ಲಿ ದೇವರಾಜ್, ಸುಧಾರಾಣಿ, ಅಚ್ಚುತ್ ಕುಮಾರ್, ಟಿ.ಎಸ್ ನಾಗಬರನ್, ದಿವ್ಯಾ ಗೌಡ, ತಬಲಾ ನಾಣಿ, ಗಣೇಶ ರಾವ್ ಮುಂತಾದ ದೊಡ್ಡ ತಾರಾಗಣವಿದೆ. ಚಿತ್ರಕ್ಕೆ ವಿಜೇತ್ ಮಂಜಯ್ಯ ಸಂಗೀತ, ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಶ್ರೀಕಾಂತ್ ಸಂಕಲನವಿದೆ. ಅಂದಂಗೆ ಈ ಚಿತ್ರವನ್ನು ವೆಂಕಟ್ ಗೌಡ ರಾಜ್ಯಾದ್ಯಂತ ವಿತರಣೆ ಮಾಡಲಿದ್ದಾರೆ.

Categories
ಸಿನಿ ಸುದ್ದಿ

ರೊಮ್ಯಾಂಟಿಕ್ ಥ್ರಿಲ್ಲರ್ ಸ್ಟೋರಿಯ ಟ್ರೇಲರ್ ರಿಲೀಸ್: ಲಾಂಗ್ ಡ್ರೈವ್ ಬಿಡುಗಡೆಗೆ ರೆಡಿ…

ಹೆಸರೇ ಹೇಳುವಂತೆ ಲಾಂಗ್‌ಡ್ರೈವ್ ಒಂದು ಜರ್ನಿ ಕಥೆಯಾಗಿದ್ದು, ರೊಮ್ಯಾಂಟಿಕ್ ಥ್ರಿಲ್ಲರ್ ಜಾನರ್‌ನಲ್ಲಿ ಮೂಡಿ ಬಂದಿದೆ. ಈ ಚಿತ್ರವನ್ನು ಗುಡ್‌ವೀಲ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಮಂಜುನಾಥ್‌ಗೌಡ ಬಿ.ಆರ್.(ಶಬರಿ ಮಂಜು) ಅವರು ನಿರ್ಮಿಸಿದ್ದಾರೆ. ಈಗಿನ ಕಾಲದ ಬಹುತೇಕ ಯುವಕ, ಯುವತಿಯರಲ್ಲಿ ಲಾಂಗ್‌ ಡ್ರೈವ್ ಹೋಗೋ ಕ್ರೇಜ್ ಇದ್ದೇ ಇರುತ್ತದೆ. ಈ ಕಂಟೆಂಟ್ ಇಟ್ಟುಕೊಂಡು ನಿರ್ದೇಶಕ ಶ್ರೀರಾಜ್ ಅವರು ಲಾಂಗ್‌ ಡ್ರೈವ್ ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಫೆಬ್ರವರಿ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಅರ್ಜುನ್ ಯೋಗಿ, ಸುಪ್ರೀತಾ ಸತ್ಯನಾರಾಯಣ್, ತೇಜಸ್ವಿನಿ ಪ್ರಕಾಶ್ , ಬಲ ರಾಜವಾಡಿ ಸೇರಿದಂತೆ ಅನೇಕರು ನಟಿಸಿದ್ದಾರೆ. ನಿರ್ಮಾಪಕ ಶಬರಿ ಮಂಜು ಕೂಡ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವೇಳೆ ಮಂಜು ಮಾತನಾಡಿ, ನನ್ನ ಮೊದಲ ಚಿತ್ರವಿದು, ಸಿನಿಮಾ‌ ಮಾಡಬೇಕೆನ್ನುವುದು ಬಹುದಿನಗಳ ಕನಸು. ಚಿತ್ರದಲ್ಲಿ ಮಣಿ ಎಂಬ ಪಾತ್ರ ಮಾಡಿದ್ದೇನೆ. ಆತ ರೌಡಿನೂ ಅಲ್ಲ, ಒಂಥರಾ ಸೋಂಬೇರಿ, ಆತನಿಗೆ ನಾಟಕದ ಹುಚ್ಚು, ನಾಯಕ‌ ನಾಯಕಿ‌ ಜೊತೆ ಇವನ ಪಾತ್ರ ಹೇಗೆ ಲಿಂಕ್ ಆಗುತ್ತೆ ಅನ್ನೋದು ಚಿತ್ರ ದಲ್ಲಿದೆ. 23ವರ್ಷದಿಂದ ಟ್ರಾವೆಲ್ ಬ್ಯುಸಿನೆಸ್ ಮಾಡುತ್ತಿದ್ದೇನೆ. ಈ ಥರದ ಘಟನೆ ಎಲ್ಲರ ಲೈಫ್ ನಲ್ಲೂ ಆಗಿರತ್ತೆ. ನಮ್ಮ ಸ್ನೇಹಿತನ ಜೀವನದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇನೆ ಎಂದರು.

ನಾಯಕ ಅರ್ಜುನ್‌ ಯೋಗಿ, ಈ ಚಿತ್ರದಲ್ಲಿ ಎರಡು ಶೇಡ್ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾನು ಅಣ್ಣಾ ಬಾಂಡ್ ಚಿತ್ರದಲ್ಲಿ ಜೂನಿಯರ್ ಆರ್ಟಿಸ್ಟ್ ಆಗಿ ಚಿತ್ರರಂಗಕ್ಕೆ ಬಂದೆ. ಇದು ನಾಯಕನಾಗಿ ನಟಿಸಿರುವ 3ನೇ ಚಿತ್ರ. ಈ ಥರದ ಘಟನೆ ಎಲ್ಲರ ಜೀವನದಲ್ಲಿ ನಡೆದಿರುತ್ತೆ, ತೊಂದರೆಯಾದರೆ ತಿರುಗಿ ಬೀಳುವ ಪಾತ್ರ ನನ್ನದು. ಕೆಲಸ ಹುಡುಕುತ್ತಿರುವ ಹುಡುಗ. ಲಾಂಗ್ ಡ್ರೈವ್ ಗೂ ಮುಂಚೆ ಮತ್ತು ನಂತರ ಏನಾಗಿತ್ತು ಎನ್ನುವುದು ಕಥೆ. ಸಿನಿಮಾ ದಿಂದ ಈಚೆ ಬಂದ ಮೇಲೆ ಮಹಿಳೆಯರ ಸುರಕ್ಷತೆ ಕುರಿತ ಸಂದೇಶವೂ ಚಿತ್ರದಲ್ಲಿದೆ ಎಂದರು.


ನಟಿ ತೇಜಸ್ವಿನಿ ಶೇಖರ್, ಅನಿರೀಕ್ಷಿತವಾಗಿ ಈ ಚಿತ್ರ ಸಿಕ್ಕಿತು. ಪ್ರತಿಯೊಬ್ಬರಿಗೂ ಇಷ್ಟವಾಗುವ ಕಥೆ. ಮೀರಾ ಎಂಬ ಮುಗ್ದ ಹುಡುಗಿಯ ಪಾತ್ರ ಎಂದರೆ, ಮತ್ತೊಬ್ಬ ನಟಿ‌ ಸುಪ್ರೀತಾ ಸತ್ಯನಾರಾಯಣ್ ಮಾತನಾಡಿ ನಾನೊಬ್ಬ ಡಾಕ್ಡರ್ ಪಾತ್ರ ಮಾಡಿದ್ದೇನೆ. ಲಾಕ್ ಡೌನ್ ಸಮಯದಲ್ಲಿ ಚಿತ್ರೀಕರಣ ನಡೆಯಿತು ಎಂದು ಹೇಳಿದರು.

ಛಾಯಾಗ್ರಾಹಕ ಕಿಟ್ಟಿ ಕೌಶಿಕ್, ಕಲಾವಿದ ಬಾಲ ರಾಜವಾಡಿ ಚಿತ್ರದ ಕುರಿತು ಮಾತನಾಡಿದರು.

ಶ್ರೀರಾಜ್ ಮಾತನಾಡಿ, ನಾನೊಬ್ಬ ಡೈರೆಕ್ಟರ್ ಆಗಬೇಕೆಂದು 14 ವರ್ಷ ಗಳ ಹಿಂದೆ ಚಿತ್ರರಂಗಕ್ಕೆ ಬಂದೆ. ಕವಿರಾಜ್, ರವಿ ಶ್ರೀವತ್ಸ ಅವರಜೊತೆ ಡೈಲಾಗ್ ರೈಟರ್ ಆಗಿದ್ದೆ. 24ಗಂಟೆಗಳಲ್ಲಿ ನಡೆಯುವ ಕಥೆ ಇದಾಗಿದ್ದು, 18ರಿಂದ 70 ವರ್ಷಗಳವರೆಗೆ ಎಲ್ಲಾ ವಯೋಮಾನದವರೂ ಸಹ ನೋಡುವಂಥ ಕಂಟೆಂಟ್ ಚಿತ್ರದಲ್ಲಿದ್ದು, ಚಿತ್ರ ನೋಡುವ ಪ್ರತಿಯೊಬ್ಬರಿಗೂ ಕನೆಕ್ಟ್ ಆಗುತ್ತದೆ. ಅವರ ಜೀವನದಲ್ಲಿ ಹಿಂದೆ ಆಗಿ ಹೋಗಿರುವ ಘಟನೆಗಳು ನೆನಪಾಗುತ್ತದೆ. ನಮ್ಮ ನಡುವೆ ಪ್ರತಿದಿನ ನಡೆಯುವ ಘಟನೆಗಳೇ ಈ ಸಿನಿಮಾದಲ್ಲಿವೆ. ಬೆಂಗಳೂರು, ತಾವರೆಕೆರೆ, ಮೈಸೂರು ಹಾಗೂ ರಾಮನಗರದ ಸುತ್ತಮುತ್ತ 35ರಿಂದ 40 ದಿನಗಳ ಕಾಲ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರಕ್ಕೆ ಯು/ಎ ಸೆನ್ಸಾರ್ ಪ್ರಮಾಣ ಪತ್ರವೂ ಸಿಕ್ಕಿದೆ. ನಾವು ಎಲ್ಲೇ ಹೋದರೂ ಮನೆಯಲ್ಲಿ ತಿಳಿಸಿ ಹೋಗಬೇಕು ಎಂದು ಚಿತ್ರದ ಮೂಲಕ ಹೇಳಿದ್ದಾರೆ.

ಚಿತ್ರದ ಉಳಿದ ತಾರಾಗಣದಲ್ಲಿ ಬಲ ರಾಜ್ವಾಡಿ, ಮಹೇಶ್ ಗುರು, ಮೋಹನ್ ಅನ್ನಳ್ಳಿ ಮುಂತಾದವರಿದ್ದಾರೆ. ಈ ಚಿತ್ರದಲ್ಲಿ ಮೂರು ಹಾಡುಗಳಿದ್ದು 2 ಹಾಡನ್ನು ಮಾತ್ರವೇ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ವಿಕಾಸ್ ವಸಿಷ್ಠ ಅವರ ಸಂಗೀತ ಸಂಯೋಜನೆ, ರಾಮಿ ಶೆಟ್ಟಿ ಪವನ್ ಅವರ ಸಂಕಲನ, ಕಿಟ್ಟಿ ಕೌಶಿಕ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ, ಹಾಡುಗಳಿಗೆ ವಿಕಾಸ ವಸಿಷ್ಠ, ಶರತ್ ಆಸ್ಕರ್, ಜೀವನ್ ಅವರ ಸಾಹಿತ್ಯವಿದ್ದು, ರಾಜೇಶ್ ಕೃಷ್ಣನ್, ಮಾನಸ ಹೊಳ್ಳ, ಸ್ಪರ್ಶ ಆರ್.ಕೆ, ದನಿಯಾಗಿದ್ದಾರೆ.

Categories
ಸಿನಿ ಸುದ್ದಿ

ಕೋಟಿ ಮಂದಿಗೆ ಚಂದನ್ ಶೆಟ್ಟಿ ಡ್ಯಾಶ್! ಸೂತ್ರಧಾರಿ ಸಾಂಗು ಎಲ್ಲರಿಗೂ ಗುಂಗು…

ಹೊಸ ವರ್ಷದ ಸಂಭ್ರಮಕ್ಕಾಗಿ ಡಿಸೆಂಬರ್ ಕೊನೆಯಲ್ಲಿ ‘ಸೂತ್ರಧಾರಿ’ ಚಿತ್ರದ “ಡ್ಯಾಶ್” ‘ ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಡಿಮೆ ಸಮಯದಲ್ಲೇ ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.

ಇತ್ತೀಚೆಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್, ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ ರೆಸ್ಪಾನ್ಸ್ ಯಾವ ಹಾಡಿಗೂ ಸಿಕ್ಕಿಲ್ಲ. ನನ್ನ ಚಿತ್ರದಲ್ಲಿ ಹಿಟ್ ಗೀತೆಯೊಂದು ಬರಬೇಕೆಂದು ಆಸೆಯಿತ್ತು. ಈಗ ಈಡೇರಿದೆ. ಹೊಸ ವರ್ಷಕ್ಕಾಗಿಯೇ ಈ‌‌ ಸಾಂಗ್ ಮಾಡಿದ್ದೆವು. ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿದ್ದು, ಆ ಹಾಡುಗಳು ಅದ್ಭುತವಾಗಿದೆ. ಫೆಬ್ರವರಿಯಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಏಪ್ರಿಲ್, ಮೇನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದೇವೆ. ಈ ಒಂದು ಕೋಟಿ ವೀಕ್ಷಣೆಯ ಸಕ್ಸಸ್ ಚಿತ್ರತಂಡಕ್ಕೆ ಸಲ್ಲುತ್ತದೆ’ ಎಂದರು.

ಈ ಹಾಡನ್ನು ಬರೆದು, ಸಂಗೀತ ಸಂಯೋಜಿಸುವ ಜೊತೆಗೆ ನಾಯಕನಾಗೂ ನಟಿಸಿರುವ ಚಂದನ್ ಶೆಟ್ಟಿ ಮಾತನಾಡಿ, ‘ಸಾಂಗ್ ರಿಲೀಸ್ ಆದ ಮೂರು ವಾರದಲ್ಲೇ ಒಂದು ಕೋಟಿ ವೀಕ್ಷಣೆ ಆಗಿರುವುದು ಮಾಧ್ಯಮಗಳ ಸಹಕಾರದಿಂದ. ಈ ಗೀತೆಗೆ ನಾನು ಹಾಗೂ ಚೇತನ್ ಸೇರಿ ಸಾಹಿತ್ಯ ಬರೆದಿದ್ದೇವೆ’ ಎಂದರು.

‘ಪ್ರಾರಂಭದಲ್ಲಿ ನಿರ್ಮಾಪಕರಿಗೆ ಹಾಡು ಚೆನ್ನಾಗಿ ಬರಬೇಕು ಸರ್. ಇದೇ ಮೊದಲಬಾರಿ ನಾನು ಬೇರೆ ಸಿನಿಮಾವೊಂದರ ಹಾಡಿನಲ್ಲಿ ನಟಿಸುತ್ತಿದ್ದೆನೆ ಎಂದಿದ್ದೆ. ಇಂದು ಈ ಗೀತೆಯಲ್ಲಿ ನಾನಿರುವುದು ಖುಷಿಯಾಗಿದೆ ಎನ್ನುತ್ತಾರೆ ನಟಿ ಸಂಜನಾ ಆನಂದ್.

‘ಈ ಗೀತೆ ನಮ್ಮ ಸಿನಿಮಾಗೆ ಆಮಂತ್ರಣ ಆಗಿದ್ದು, ಹಾಡು ನೋಡಿ ಬಂದ ಜನರನ್ನು ಇಡೀ ಸಿನಿಮಾವನ್ನು ನೋಡುವ ಹಾಗೆ ಮಾಡುವ ಜವಾಬ್ದಾರಿ ನನ್ನದು ಎಂದು ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.

ಕೊರಿಯೋಗ್ರಾಫರ್ ಮೋಹನ್ ಮಾಸ್ಟರ್ ಮಾತನಾಡಿ, ಈ ಹಾಡು ಕೇವಲ ಎರಡು ದಿನಗಳಲ್ಲಿ ಆಗಿದೆ. ನನ್ನ ಮತ್ತು ಚಂದನ್ ಶೆಟ್ಟಿ ಕಾಂಬಿನೇಷನ್ ನ 2ನೇ ಹಿಟ್
ಗೀತೆ ಇದು ಎಂದರು.

ಈ ಸಂತಸದ ಸಮಾರಂಭದಲ್ಲಿ ನಟ ತಬಲಾನಾಣಿ, ಕಿರಣ್, ನಟಿ ಪಲ್ಲವಿ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಾಹಿತಿ ಕಿನ್ನಾಲ್ ರಾಜ್ ತಮ್ಮ ಅನುಭವ ಹಂಚಿಕೊಂಡರು.
ಸಸ್ಪೆನ್ಸ, ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಈ ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಓ ಮನಸೇ ಎಂಬ ತ್ರಿಕೋನ ಪ್ರೇಮಕಥೆ: ಹಾಡು ಹೊರಬಂತು…

ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ನಟಿಸಿರುವ ‘ಓ ಮನಸೇ’ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಯೂಟ್ಯೂಬ್ ನಲ್ಲೂ ಸದ್ಯ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿವೆ.’ ಶ್ರೀ ಫ್ರೆಂಡ್ಸ್ ಮೂವಿ ಮೆಕರ್ಸ್’ ಲಾಂಛನದಲ್ಲಿ ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ನಿರ್ಮಾಪಕರು ಮಾತನಾಡಿ, ‘ಇದು ನಮ್ಮ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. ಮುಂದೆಯೂ ಜನರಿಗೆ ಸದಭಿರುಚಿ ಸಿನಿಮಾ ಕೊಡುವ ಉದ್ದೇಶದಿಂದ ಈ ಸಿನಿಮಾ ಮಾಡಲಾಗಿದೆ. ಒಂದು ಒಳ್ಳೆ ಸಿನಿಮಾ ಮಾಡಿದ ಖುಷಿ ನಮಗೆಲ್ಲಾ ಇದೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಜೊತೆ ನಾಯಕಿಯಾಗಿ ಸಂಚಿತ ಪಡುಕೋಣೆ ಅದ್ಬುತವಾಗಿ ನಟಿಸಿದ್ದಾರೆ. ಟ್ರೇಲರ್ ಗೆ ಯೂಟ್ಯೂಬ್‌ನಲ್ಲಿ ಒಳ್ಳೆ ರೆಸ್ಪಾನ್ಸ್ ಬಂದಿದೆ. ಈಗ ಹಾಡುಗಳು ಬಿಡುಗಡೆಯಾಗಿದೆ. ನಮ್ಮ ಬ್ಯಾನರ್ ನಿಂದ ಇನ್ನು ಹತ್ತಾರು ಸಿನಿಮಾ ಮಾಡುವ ಯೋಜನೆ ಇದೆ’ ಎಂದು ಹೇಳಿದರು.

ಈ ಮೊದಲು ‘ನವರಂಗಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದ ಉಮೇಶ್ ಗೌಡ, ಈಗ ಮೂರನೇ ಪ್ರಯತ್ನವಾಗಿ ‘ಓ ಮನಸೇ’ ನಿರ್ದೇಶನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈಗಾಗಲೇ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಒಳ್ಳೆ ಪ್ರಶಂಸೆ ಸಿಕ್ಕಿದ್ದು, ಈಗ ಹಾಡುಗಳಿಗೂ ಒಳ್ಳೆ ರೆಸ್ಪಾನ್ಸ್ ಬರುತ್ತಿದೆ. ಇದೊಂದು ನೈಜಘಟನೆ ಆಧಾರಿತ ಸಿನಿಮಾ ಎಂಬುದು ವಿಶೇಷ’ ಎಂದು ಹೇಳಿದರು.

ವಿಜಯರಾಘವೇಂದ್ರ ಮಾತನಾಡಿ, ‘ಸಿನಿಮಾ ಪ್ರಮೋಷನ್‌ನಲ್ಲಿ ಆಡಿಯೋ ಬಿಡುಗಡೆ ಎಂಬುದು ಮುಖ್ಯವಾದ ಹಂತ. ಸಿನಿಮಾ ಮಾಡೋದು ಮುಖ್ಯವಲ್ಲ ಜನರಿಗೆ ಅದನ್ನು ತಲುಪಿಸುವುದು ಮುಖ್ಯ. ನಿರ್ಮಾಪಕರು ಒಳ್ಳೆ ಪ್ರಯತ್ನ ಮಾಡಿದ್ದಾರೆ.ಇದರಲ್ಲಿ ನಾನು ಪೊಲೀಸ್ ಪಾತ್ರ ಮಾಡಿದ್ದು, ಚಿತ್ರದಲ್ಲಿ ಕಾಮಿಡಿ. ಆ್ಯಕ್ಷನ್, ಲವ್ ಹೀಗೆ ಎಲ್ಲಾ ಅಂಶಗಳಿವೆ. ಇದು ನನಗೆ ಸ್ಪೆಷಲ್ ಸಿನಿಮಾ ಎನ್ನಬಹುದು’ ಎಂದರು.

‘ಕೊರೋನಾ ಟೈಮ್‌ನಲ್ಲಿ ನನಗೆ ಈ ಸಿನಿಮಾ ಸಿಕ್ಕಿದ್ದು, ಕಮ್ ಬ್ಯಾಕ್ ಜರ್ನಿ ಎನ್ನಬಹುದು. ನಾನು ಈ ಚಿತ್ರದಲ್ಲಿ ಲವರ್ ಬಾಯ್ ಹಾಗೂ ನೆಗಟಿವ್ ಸೈಡ್ ಪಾತ್ರ ಮಾಡಿದ್ದೇನೆ’ ಎಂದು ನಾಯಕ ಧರ್ಮ ಕೀರ್ತಿರಾಜ್ ತಿಳಿಸಿದರು.

‘ಇದು ತ್ರಿಕೋನ ಪ್ರೇಮ ಕಥೆ” ಒಳಗೊಂಡ ಸಿನಿಮಾ. ಈ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ ಎಂದರು ನಾಯಕಿ ಸಂಚಿತಾ ಪಡುಕೋಣೆ.

ಎ2 ಮ್ಯೂಸಿಕ್‌ ಮೂಲಕ ಬಿಡುಗಡೆ ಆಗಿರುವ ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್, ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ, ನಟಿ ಶಾನ್ವಿ ಶ್ರೀವಾತ್ಸವ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಅಣಜಿ ನಾಗರಾಜ್, ಪುಟ್ಟಣ್ಣ ಇತತರು ಅಥಿತಿಗಳಾಗಿ ಆಗಮಿಸಿದ್ದರು.

ಕವಿರಾಜ್, ಡಾ. ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ವಿಶೇಷವಾಗಿ ಎರಡು ಗೀತೆಗಳನ್ನು ಥೈಲ್ಯಾಂಡ್‌ನ ಸುಂದರ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿವೆ. ಬಂಡೆ ಚಂದ್ರು, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಚಿತ್ರಕ್ಕೆ ಎಂ.ಆರ್ ಸೀನು ಛಾಯಾಗ್ರಹಣ, ಶ್ರೀನಿವಾಸ್ ಬಾಬು ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ.

Categories
ಸಿನಿ ಸುದ್ದಿ

ಕ್ರೀಮ್ ಶೂಟಿಂಗ್ ಮುಕ್ತಾಯ: ಇದು ಬೆಂಗಳೂರು ನೈಜ ಘಟನೆ‌ ಚಿತ್ರ…

ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ ನಿರ್ದೇಶನದ “ಕ್ರೀಮ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಬಹು ನಿರೀಕ್ಷಿತ ಈ ಚಿತ್ರದ ನಾಯಕಿಯಾಗಿ ಸಂಯುಕ್ತ ಹೆಗಡೆ ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್, ಅರುಣ್ ಸಾಗರ್ ಮುಂತಾದವರು ಇದ್ದಾರೆ.

ಕಳೆದವರ್ಷ ಈ ಚಿತ್ರ ಆರಂಭವಾಗಿದ್ದು, ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂತರ ಚಿತ್ರತಂಡದಿಂದ ಈ ಚಿತ್ರದ ಕುರಿತು ಯಾವುದೇ ವಿಷಯ ಹೊರಬಂದಿರಲಿಲ್ಲ. ಅಂತಹ ವಿಷಯ ಚಿತ್ರದಲ್ಲಿ ಏನಿರಬಹುದು? ಎಂಬ ಕೌತುಕ ಎಲ್ಲರಲ್ಲೂ ಇದೆ.
ಬೆಂಗಳೂರಿನಲ್ಲಿ ನಡೆದ ನೈಜಘಟನೆ ಆಧರಿಸಿದ‌ ಚಿತ್ರವೆಂಬ ಮಾಹಿತಿ ಇದೆ.

ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗಡೆ ಅವರಿಗೆ ಪೆಟ್ಟು ಬಿದ್ದ ವಿಷಯ ಮಾತ್ರ ತಿಳಿದಿತ್ತು. ಸಂಯುಕ್ತ ಅವರು ಚೇತರಿಸಿಕೊಂಡ ನಂತರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈಗ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರುವಾಗಲಿದೆ.

ಸುನೋಜ್ ವೇಲಾಯುಧನ್ ಛಾಯಾಗ್ರಹಣ, ಶಿವು (ಕೆಜಿಎಫ್) ಕಲಾ ನಿರ್ದೇಶನ, ಆರ್ಯನ್ ಸಂಕಲನ ಹಾಗೂ ಪ್ರಭು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಸೆರಗಿಗಾಗಿ ಸೈಟು-ಬಂಗಾರ ಮಾರಿದರು! ಇದು ಕೆಂಡದ‌ ಸೆರಗಿನ ವಿಷಯ: ಭೂಮಿ ಶೆಟ್ಟಿ ಕುಸ್ತಿಗೆ ಕ್ಷಣಗಣನೆ: ಕೆಂಡದ‌ ಸೆರಗೊಳಗೆ ಕನಸಿನ ರಾಣಿಯ ಆರ್ಭಟ…

ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ಭೂಮಿ ಶೆಟ್ಟಿ ಮುಖ್ಯ ಭೂಮಿಕೆಯ ಹಾಗೂ ಕನಸಿನ ರಾಣಿ ಮಾಲಾಶ್ರೀ ನಟಿಸಿರುವ ‘ಕೆಂಡದ ಸೆರಗು’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರ ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಸಿನಿಮಾ. ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ನಟಿಸಿದ್ದಾರೆ.

ನಟಿ ಮಾಲಾಶ್ರೀ ಮಾತನಾಡಿ, ಒಂದೊಳ್ಳೆ ಸಬ್ಜೆಕ್ಟ್ ಚಿತ್ರದಲ್ಲಿದೆ. ಸಿನಿಮಾ ಕೆಲಸ ಆದ ಮೇಲೆ ಒಮ್ಮೆ ನನಗೆ ತೋರಿಸಿ ಎಂದು ಹೇಳಿದ್ದೆ. ರಫ್ ಸ್ಕೆಚ್ ನೋಡಿದ್ದೀನಿ ತುಂಬಾ ಚೆನ್ನಾಗಿ ಬಂದಿದೆ ಸಿನಿಮಾ. ನಾನು ಪೋಲೀಸ್ ಪಾತ್ರ ತುಂಬಾ ಮಾಡಿದ್ದೀನಿ ಆದರೆ ಇಲ್ಲಿವರೆಗೆ ಮಾಡಿರುವ ಪಾತ್ರಕ್ಕಿಂತ ಡಿಫರೆಂಟ್ ಫೀಲ್ ಈ ಪಾತ್ರ ನೀಡಿದೆ. ಈ ಚಿತ್ರ ಕೇವಲ ಕುಸ್ತಿ ಬಗ್ಗೆ ಅಂತಲ್ಲ ಹೆಣ್ಣುಮಗಳೊಬ್ಬಳ ನೋವಿನ ಕಥೆ ಚಿತ್ರದಲ್ಲಿದೆ. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಈ ಸಿನಿಮಾದ ಭಾಗವಾಗಿದ್ದಕ್ಕೆ ತುಂಬಾ ಖುಷಿ ಇದೆ. ನಾನೇ ಈ ಚಿತ್ರಕ್ಕೆ ಡಬ್ ಮಾಡುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡರು.

ರಾಕಿ ಸೋಮ್ಲಿ ಮಾತನಾಡಿ, ‘ಕೆಂಡದ ಸೆರಗು’ ನಾನೇ ಬರೆದ ಕಾದಂಬರಿ ಆಧಾರಿತ ಸಿನಿಮಾ. ನಿರ್ಮಾಪಕ ಕೊಟ್ರೇಶ್ ಹಾಗೂ ನಾನು ಇಬ್ಬರು ಸ್ನೇಹಿತರು. ಅವರಿಗೆ ನಾನು ಈ ಕಾದಂಬರಿ ಬಗ್ಗೆ ಹೇಳಿದಾಗ, ಸಿನಿಮಾ ಮಾಡೋಣ ಎಂದರು. ಭೂಮಿ ಶೆಟ್ಟಿ ತಮ್ಮ ಪಾತ್ರವನ್ನು ಅದ್ಭುತವಾಗಿ ನಿವರ್ಹಿಸಿದ್ದಾರೆ. ಸಿನಿಮಾ ಮಾಡುವಾಗ ಮಾಲಾಶ್ರೀ ಮೇಡಂ ಕೈನಲ್ಲಿ ಒಂದು ಪಾತ್ರ ಮಾಡಿಸಬೇಕು ಎಂದು ಒಂದು ಆಲೋಚನೆ ಬಂತು. ಕಥೆ ಕೇಳಿದ ಮೇಲೆ ಒಪ್ಪಿಕೊಂಡರು. ಸಿನಿಮಾ ಚಿತ್ರೀಕರಣದಲ್ಲೂ ಸಪೋರ್ಟ್ ಮಾಡಿದ್ರು. ಕಮರ್ಶಿಯಲ್ ಆಗಿ ಮೂಡಿ ಬಂದಿದೆ. ಕುಸ್ತಿಗೆ ಹೆಚ್ಚು ಫೋಕಸ್ ನೀಡಲಾಗಿದೆ. ಡಬ್ಬಿಂಗ್ ಕೆಲಸ ನಡೆಯುತ್ತಿದೆ ಚಿತ್ರದಲ್ಲಿ ಆರು ಹಾಡುಗಳಿವೆ ಎಂದರು.

ಭೂಮಿ ಶೆಟ್ಟಿ ಮಾತನಾಡಿ, ಮಹಿಳೆ ಎಲ್ಲಿ ಪ್ರಧಾನವಾಗಿರುತ್ತಾಳೆ ಆ ರೀತಿಯ ಪಾತ್ರ ಮಾಡಲು ನಾನು ಕಾತುರದಿಂದ ಕಾಯುತ್ತಿದ್ದೆ. ಅದೇ ಸಮಯದಲ್ಲಿ ಕೆಂಡದ ಸೆರಗು ಸಿನಿಮಾ ಸಿಕ್ತು. ಕಥೆ, ಅದರ ಸುತ್ತಮುತ್ತ ಇರುವ ಪಾತ್ರಗಳು, ಸಿನಿಮಾದಲ್ಲಿನ ಶೇಡ್ ಎಲ್ಲವನ್ನು ಕೇಳಿ ಇಷ್ಟವಾಯ್ತು. ಚಾಲೆಂಜಿಂಗ್ ಪಾತ್ರ ನಾನು ಮಾಡಲೇಬೇಕು ಎಂದು ಒಪ್ಪಿಕೊಂಡೆ. ಕುಸ್ತಿಗೆ ಹಂಡ್ರೆಡ್ ಪರ್ಸೆಂಟ್ ಗಿಂತ ಜಾಸ್ತಿ ಎಫರ್ಟ್ ಹಾಕಿದ್ದೇನೆ. ನನ್ನ ಪಾತ್ರಕ್ಕಿರುವ ಶೇಡ್ಸ್ ತುಂಬಾ ಚೆನ್ನಾಗಿದೆ. ಸಮಾಜದಲ್ಲಿ ವೇಶ್ಯೆ ಹಾಗೂ ಆಕೆಯ ಮಗಳನ್ನು ಬೇರೆಯದ್ದೇ ರೀತಿ ನೋಡುತ್ತಾರೆ ಆದರೆ ಆಕೆಗೂ ಅವಕಾಶ ನೀಡಿದರೆ ಏನ್ ಬೇಕಿದ್ರು ಸಾಧಿಸುತ್ತಾಳೆ ಎನ್ನುವ ಎಳೆ ಚಿತ್ರದ್ದು. ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದರು.

ನಿರ್ಮಾಪಕ ಕೆ. ಕೊಟ್ರೇಶ್ ಗೌಡ ಮಾತನಾಡಿ ದಾವಣಗೆರೆಯಲ್ಲಿ ನನ್ನದೊಂದು ಬೀಡ ಅಂಗಡಿ ಇದೆ. ಸಿನಿಮಾ ಮಾಡಬೇಕು ಎಂದು ನಾನು ರಾಕಿ ಸೋಮ್ಲಿ ಮಾತನಾಡುತ್ತಿದ್ವಿ. ಪ್ರೊಡ್ಯೂಸರ್ ಗಾಗಿ ಒಂದು ವರ್ಷ ಹುಡುಕಾಟ ನಡೆಸಿದ್ವಿ ನಂತರ ನಂದೇ ಒಂದು ಸೈಟ್ ಇತ್ತು, ಬಂಗಾರ ಇತ್ತು ಅದನ್ನು ಮಾರಿ ಸಿನಿಮಾ ಮಾಡಿದ್ದೀನಿ. ರಾಕಿ ನನ್ನ ಸ್ನೇಹಿತ ಅತನಿಗೆ ಸಪೋರ್ಟ್ ಮಾಡಬೇಕು, ಜೊತೆಗೆ ‘ಕೆಂಡದ ಸೆರಗು’ ಪುಸ್ತಕದಲ್ಲಿ ಕುಸ್ತಿ ಬಗ್ಗೆ ತುಂಬಾ ಡಿಟೈಲ್ ಆಗಿ ಬರೆದಿದ್ದಾರೆ. ಸಿನಿಮಾ ಮಾಡಿದರೆ ಕ್ಲಿಕ್ ಆಗುತ್ತೆ ಎಂದು ಬಂಡವಾಳ ಹಾಕಿದ್ದೀನಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದರು.

ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಇದು ತಬಲನಾಣಿ ಗೆಳೆಯರ ನಿರ್ಮಾಣದ ಚಿತ್ರ! ನೆನಪಿರಲಿ ಪ್ರೇಮ್ ಸ್ಪೆಷಲ್ ಗೆಸ್ಟ್…

ಕೆ ಆರ್ ಎಸ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಚಿತ್ರದ ಮುಹೂರ್ತ ನೆರವೇರಿದೆ. ಈಗಾಗಲೇ ‘ಜೂಟಾಟ’, ‘ಗುಬ್ಬಚ್ಚಿ’ ಸಿನಿಮಾ ನಿರ್ದೇಶಿಸಿರುವ ಅಥರ್ವ ಆರ್ಯ ನಿರ್ದೇಶನದಲ್ಲಿ ಇದು ಮೂರನೇ ಚಿತ್ರ. ಚಿತ್ರದಲ್ಲಿ ಸಂಜಯ್ ಹಾಗೂ ಜೀವಿತ ವಸಿಷ್ಠ ನಾಯಕ ನಾಯಕಿಯಾಗಿ ನಟಿಸುತ್ತಿದ್ದು, ನೆನಪಿರಲಿ ಪ್ರೇಮ್ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

ತಬಲ ನಾಣಿ ಮಾತನಾಡಿ, ಮೊದಲ ಬಾರಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಸಮಾನ ಮನಸ್ಕ ಸ್ನೇಹಿತರೆಲ್ಲರೂ ಸೇರಿ ಕೆ ಆರ್ ಎಸ್ ಪ್ರೊಡಕ್ಷನ್ಸ್ ಎಂಬ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇವೆ. ನೆನಪಿರಲಿ ಪ್ರೇಮ್ ಚಿತ್ರದ ಪ್ರಮುಖ ಪಾತ್ರವೊಂದನ್ನು ಮಾಡುತ್ತಿದ್ದಾರೆ ಜೊತೆಗೆ ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಚಿತ್ರದ ಕಥೆ ಮತ್ತು ನಿರ್ದೇಶನವನ್ನು ಅಥರ್ವ ಆರ್ಯ ಮಾಡುತ್ತಿದ್ದು, ಸಂಭಾಷಣೆಯನ್ನು ನಾನು ಹಾಗೂ ಅಥರ್ವ ಆರ್ಯ ಬರೆದಿದ್ದೇವೆ. ಚಿತ್ರದಲ್ಲಿ ತಂದೆ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ 45ರಿಂದ 60 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ಬಗ್ಗೆ ತಬಲ ನಾಣಿ ಮಾಹಿತಿ ಹಂಚಿಕೊಂಡರು.

ನಟ ನೆನಪಿರಲಿ ಪ್ರೇಮ್ ಮಾತನಾಡಿ, ತಬಲ ನಾಣಿ ಮತ್ತು ಸ್ನೇಹಿತರು ಕೆ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಮೊದಲ ಬಾರಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಪ್ರೊಡಕ್ಷನ್ ಮೊದಲ ಸಿನಿಮಾದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು ಅನ್ನೋದು ಅವರ ಆಸೆ ಅದರಂತೆ ಹೊಸ ನಿರ್ದೇಶಕ, ನಟ, ನಟಿಗೆ ಅವಕಾಶ ನೀಡಿದ್ದಾರೆ. ನಾನೂ ಕೂಡ ಈ ಚಿತ್ರದಲ್ಲಿ ಒಂದು ಪಾತ್ರ ಮಾಡುತ್ತಿದ್ದೇನೆ. ಚಿತ್ರದ ಕಥೆ ಕೇಳಿ ತುಂಬಾ ಇಷ್ಟ ಆಯ್ತು. ಸಿನಿಮಾದಲ್ಲಿ ತುಂಬಾ ಚೆನ್ನಾಗಿರೋ ಟ್ವಿಸ್ಟ್ ಇದೆ. ನನ್ನ ಪಾತ್ರ ತುಂಬಾ ಇಂಟ್ರಸ್ಟಿಂಗ್ ಆಗಿದೆ ಯಾರಿಗೂ ಈ ಪಾತ್ರ ಬಿಟ್ಟುಕೊಡಬಾರದು ನಾನೇ ಮಾಡಬೇಕು ಎಂದು ಇಷ್ಟಪಟ್ಟು ಮಾಡುತ್ತಿರುವ ಪಾತ್ರವಿದು. ಹೊಸ ಕಲಾವಿದರು, ನಿರ್ದೇಶಕರಿಗೆ ಪ್ರೋತ್ಸಾಹ ನೀಡಿ ಎಂದು ನೆನಪಿರಲಿ ಪ್ರೇಮ್ ಚಿತ್ರತಂಡಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಅಥರ್ವ ಆರ್ಯ ಮಾತನಾಡಿ, ತಬಲ ನಾಣಿ ಸರ್ ಜೊತೆ 12 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ತುಂಬಾ ದಿನಗಳಿಂದ ಸಿನಿಮಾ ಮಾಡಬೇಕು ಎಂದು ಇಬ್ಬರು ಪ್ಲ್ಯಾನ್ ಮಾಡುತ್ತಿದ್ವಿ. ಈಗ ಕಾಲ ಕೂಡಿ ಬಂದಿದೆ. ಇದು ಕಂಟೆಂಟ್ ಬೇಸ್ಡ್ ಸಿನಿಮಾ. ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆಗೆ ಬೆಲೆ ಸಿಗದೇ ಇದ್ದಾಗ, ಆತ ಕಡೆಗಣನೆಗೆ ಒಳಗಾದಾಗ ಆತ ಯಾವ ರೀತಿ ಸಫರ್ ಮಾಡುತ್ತಾನೆ ಅನ್ನೋದು ಚಿತ್ರದ ಒನ್ ಲೈನ್ ಕಹಾನಿ.

ತಬಲ ನಾಣಿ ತಂದೆ ಪಾತ್ರವನ್ನು ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಡಾನ್ಸರ್ ಆಗಿರುವ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ನೆನಪಿರಲಿ ಪ್ರೇಮ್ ಕೂಡ ಚಿತ್ರದ ಪ್ರಮುಖ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. ಸಿನಿಮಾದ ಟೈಟಲ್ ಬಗ್ಗೆ ಸದ್ಯದಲ್ಲೇ ಅಪ್ಡೇಟ್ ನೀಡಲಾಗುವುದು ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಾಯಕ ನಟ ಸಂಜಯ್ ಮಾತನಾಡಿ, ಈ ಚಿತ್ರದ ಪಾತ್ರ ಸಿಕ್ಕಿರೋದು ಲವ್ಲಿ ಸ್ಟಾರ್ ಪ್ರೇಮ್ ಅವರಿಂದ ಅವರಿಗೂ ಹಾಗೂ ತಬಲ ನಾಣಿ ಸರ್ ಗೆ ಧ್ಯನ್ಯವಾದಗಳು. ಒಂದು ಅದ್ಭುತ ಸಿನಿಮಾ. ಚಿತ್ರದಲ್ಲಿ ಅವಕಾಶ ಕೊಟ್ಟಿದ್ದಕ್ಕೆ ತುಂಬಾ ಥ್ಯಾಂಕ್ಸ್. ಹೊಸಬರಿಗೆ ಸಹಕಾರ ನೀಡಿ ಪ್ರೋತ್ಸಾಹಿಸಿ ಎಂದು ತಿಳಿಸಿದರು.

ಚಿತ್ರದ ನಾಯಕಿ ಜೀವಿತ ವಸಿಷ್ಠ ಮಾತನಾಡಿ ಕೆ ಆರ್ ಎಸ್ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದೆ. ಒಂದೊಳ್ಳೆ ಕಾನ್ಸೆಪ್ಟ್ ಚಿತ್ರದಲ್ಲಿದೆ. ನನ್ನ ಪಾತ್ರ ತುಂಬಾ ಚೆನ್ನಾಗಿದೆ. ನಟನೆಗೆ ತುಂಬಾ ಅವಕಾಶವಿದೆ. ಅವಕಾಶ ನೀಡಿದ್ದಕ್ಕಾಗಿ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು ಎಂದರು.

ಕೆ ಆರ್ ಎಸ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಾಗಾರ್ಜುನ ಆರ್ .ಡಿ ಕ್ಯಾಮೆರಾ ವರ್ಕ್, ಆಕಾಶ್ ಪರ್ವ ಸಂಗೀತ ನಿರ್ದೇಶನ, ವೇದಿಕ್ ವೀರ ಸಂಕಲನವಿದೆ. ಬಾಲ ರಾಜ್ವಾಡಿ, ಗಿರೀಶ್ ಜತ್ತಿ, ಮಿತ್ರ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

Categories
ಸಿನಿ ಸುದ್ದಿ

ಪವರ್ ಬರ್ತ್ ಡೇಗೆ ಕಬ್ಜ ರಿಲೀಸ್: ಅಪ್ಪು ಹುಟ್ದಬ್ಬಕ್ಕೆ ಚಂದ್ರು ಚಿತ್ರ ಪ್ರದರ್ಶನ…

ಕರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”, 2023 ರ ಮಾರ್ಚ್ 17 ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ನಾಡಿನ ದೊಡ್ಡ ಹಬ್ಬವಾದ ಯುಗಾದಿ ಕೂಡ ಸಮೀಪದಲ್ಲಿರುವುದು ವಿಶೇಷ.

ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಹಾಗೂ ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ.

ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.

ಕಳೆದವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ವಿಯಾಗಿ ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಾಗಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ”ದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆಭಿಮಾನಿಗಳ ಕಾತುರಕ್ಕೆ ಚಿತ್ರತಂಡದಿಂದ ಉತ್ತರ ಸಿಕ್ಕಿದೆ.

ಈಗಾಗಲೇ ಫಸ್ಟ್ ಲುಕ್, ಟೀಸರ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಕಬ್ಜ” ಚಿತ್ರ ಅತೀ ದೊಡ್ಡ ಯಶಸ್ಸು ಕಾಣಲಿ ಎಂಬುದೇ ಪ್ರತಿಯೊಬ್ಬ ಕನ್ನಡಾಭಿಮಾನಿಯ ಹಾರೈಕೆ.

error: Content is protected !!