ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ತಿಳಿಸಿದ್ದಾರೆ. ಸುದೀಪ್ ಅವರ ಆಪ್ತರಾದ ವೀರಕಪುತ್ರ ಶ್ರೀನಿವಾಸ ಅವರು ಯಾವ ಫೋಟೋ ಬಳಸಬೇಕು ಮತ್ತು ಕನ್ನಡ ಬರವಣಿ ಹೇಗಿರಬೇಕು ಎಂಬ ಗೊಂದಲಕ್ಕೆ ಅಗತ್ಯವಿದ್ದ ಮಾಹಿತಿಯನ್ನು ನೀಡಿರುವುದನ್ನು ತಿಳಿಸಿದರು.
ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ ಎರಡನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಅವರು ಮಾತ್ರ.
ಈ ಹಿಂದೆ 2020ರಲ್ಲಿ ಡಾ.ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು ಎಂಬುದು ಬಿಟ್ಟರೆ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ.
ಈಗ ಎರಡನೆಯವರಾಗಿ ಕಿಚ್ಚ ಸುದೀಪ್ ಅವರು ಅಂತಹ ಗೌರವವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ತಾನೇ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವವನ್ನು ಪಡೆದಿದ್ದಂತಹ ಸುದೀಪ್ ಅವರು ಈಗ ಮರಳು ಶಿಲ್ಪ ಗೌರವಕ್ಕೂ ಪಾತ್ರರಾಗಿರುವುದು ಅವರ ಅಭಿಮಾನಿಗಳನ್ನು ಖುಷಿಯಿಂದ ಕುಣಿಯುವಂತೆ ಮಾಡಿದೆ.
ಕಿಚ್ಚ ಸುದೀಪ್ ಕನ್ಮಡ ಚಿತ್ರರಂಗ ಮಾತ್ರವಲ್ಲ, ಭಾರತೀಯ ಚಿತ್ರರಂಗ ಮೆಚ್ಚುವಂತಹ ನಟ. ಅವರು ಸೆಪ್ಟೆಂಬರ್ 2 ತಮ್ಮಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ಗುರುವಾರ ರಾತ್ರಿಯೇ ಪ್ರೀತಿಯ ನಾಯಕನ ಮನೆ ಎದುರು ಸಾಲುಗಟ್ಟಿ ನಿಂತು ಶುಭ ಕೋರಿದ್ದಾರೆ.
ಪ್ರತಿ ಹುಟ್ಟುಹಬ್ಬದಲ್ಲೂ ಅಭಿಮಾನಿಗಳು ದೊಡ್ಡ ಹಬ್ಬದಂತೆ ಸಡಗರದಿಂದ ಆಚರಿಸುತ್ತಾರೆ. ಈ ಬಾರಿಯೂ ಅದೇ ರೀತಿ ಹಬ್ಬ ಅಚರಿಸಿದ್ದಾರೆ. ಈ ನಡುವೆ ಕಿಚ್ಚ ಸುದೀಪ ಅವರು, ಸರ್ಕಾರದ ಪಶುಸಂಗೋಪನೆ ಇಲಾಖೆಯ ರಾಯಭಾರಿಯಾಗಿದ್ದಾರೆ. ಪಶು ಸಂಗೋಪನೆ ಇಲಾಖೆ ಜಾನುವರುಗಳ ರಕ್ಷಣೆಗೆ ಕೈಗೊಂಡಿರುವ ಮಹತ್ವಾಕಾಂಕ್ಷೆ ಯೋಜನೆಯದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ಆಗಿದ್ದಾರೆ.
ಅವರ ಹುಟ್ಟು ಹಬ್ಬದ ಸವಿನೆನಪಿಗೆ ಪಶು ಸಂಗೋಪನೆ ಇಲಾಖೆ ಸಚಿವರಾದ ಪ್ರಭು ಚವ್ಹಾಣ್ ಅವರು, ಸುದೀಪ್ ರಾಯಭಾರಿ ಆಗುವ ಮೂಲಕ ಗೋ ಸಂಪತ್ತಿನ ರಕ್ಷಣೆಗೆ ಕೈ ಜೋಡಿಸಬೇಕು ಎಂದಿದ್ದಾರೆ.
ಕನ್ನಡ ಚಿತ್ರರಂಗದ ಮೋಹಕತಾರೆ ರಮ್ಯಾ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ರಮ್ಯಾ ಸ್ಯಾಂಡಲ್ ವುಡ್ ಕ್ವೀನ್ ಆಗಿ ಅಬ್ಬರಿಸಿದ್ದು ಗೊತ್ತೇ ಇದೆ. ನಾಯಕಿಯಾಗಿ ಬಿಝಿಯಾಗಿದ್ದ ಸಮಯದಲ್ಲೇ ಅವರು, ಚಿತ್ರರಂಗಕ್ಕೆ ಬ್ರೇಕ್ ನೀಡಿ, ರಾಜಕೀಯದತ್ತ ಮುಖ ಮಾಡಿದ್ದರು. ಇನ್ನೇನು ಸಿನಿಮಾರಂಗವನ್ನು ಮರೆತೇ ಬಿಟ್ಟರು ಅಂದುಕೊಳ್ಳುತ್ತಿದ್ದಂತೆಯೇ ಅವರು ಪುನಃ ಚಿತ್ರರಂಗಕ್ಕೆ ರೀ ಎಂಟ್ರಿಯಾಗಿದ್ದಾರೆ.
ಹೌದು ಆ ಕುರಿತಂತೆ ಸ್ವತಃ ರಮ್ಯಾ ಅವರೇ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅವರು ಈಗ ನಟಿಯಾಗಿ ಅಲ್ಲ, ನಿರ್ಮಾಪಕಿಯಾಗಿ ಇಂಡಸ್ಟ್ರಿ ಗೆ ಎಂಟ್ರಿಯಾಗುತ್ತಿದ್ದಾರೆ. ಆ ಬಗ್ಗೆ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅದೇನೆ ಇರಲಿ ರಮ್ಯಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ ಅವರು ಆ್ಯಪಲ್ ಬಾಕ್ಸ್ ನಿರ್ಮಾಣ ಸಂಸ್ಥೆ ಮೂಲಕ ಸದ್ಯ ಎರಡು ಸಿನಿಮಾಗಳನ್ನು ನಿರ್ಮಿಸಲು ರೆಡಿಯಾಗಿದ್ದಾರೆ. ಆ ಎರಡು ಸಿನಿಮಾಗಳು ಕೆ ಆರ್ ಜಿ ಸ್ಟುಡಿಯೋಸ್ ಮೂಲಕ ವಿತರಣೆಯಾಗಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿವೆ.
ಸದ್ಯ ರಮ್ಯಾ ನಿರ್ಮಾಣ ಮಾಡುವ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನಷ್ಟು ವಿವರಗಳನ್ನು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಿದ್ದಾರೆ.
2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ ಅವರಿಂದ ಅನುಮತಿ ಪಡೆದ ಹರೀಶ್ ಎಂ.ಡಿ ಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
“ತನುಜಾ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಪತ್ರಕರ್ತ ವಿಶ್ವೇಶ್ವರ ಭಟ್ ಬಿಡುಗಡೆ ಮಾಡಿ ಶುಭ ಹಾರೈಸಿದರು.
ನಾನು ಮೊದಲು ಪರಿಶ್ರಮ ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್ ಅವರನ್ನು ಅಭಿನಂದಿಸುತ್ತೇನೆ. ಅವರಿಂದಲೇ ತನುಜಾ ಪರೀಕ್ಷೆ ಬರೆಯಲು ಸಾಧ್ಯವಾಗಿದ್ದು. ನನ್ನ ಅಂಕಣ ಓದಿ ಕೆಲವರು ಚಿತ್ರ ಮಾಡುವುದಾಗಿ ಹೇಳಿದರು. ಅದರಲ್ಲಿ ಹರೀಶ್ ಕೂಡ ಒಬ್ಬರು. ಅವರ ಸಿನಿಮಾ ಮೇಲಿನ ಆಸಕ್ತಿ ಹಾಗೂ ಶ್ರದ್ದೆ ನಿಜಕ್ಕೂ ನನಗೆ ಆಶ್ಚರ್ಯ ಉಂಟು ಮಾಡಿತು ಚಿತ್ರ ಮಾಡುವಲ್ಲಿ ಹರೀಶ್ ರವರು ಸಾಕಷ್ಟು ಪರಿಶ್ರಮವನ್ನ ಪಟ್ಟಿದ್ದಾರೆ ಬಹಳ ಕನಸುಗಳನ್ನು ಭರವಸೆ ಇಟ್ಟುಕೊಂಡಿರುವ ನಿರ್ದೇಶಕ ತನುಜಾ ಚಿತ್ರವನ್ನು ಅವರು ಚೆನ್ನಾಗಿ ನಿರ್ದೇಶಿಸಿದ್ದಾರೆ. ನಾನು ಕೂಡ ಅಭಿನಯಿಸಿದ್ದೇನೆ. ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಾಗೂ ಸಚಿವ ಸುಧಾಕರ್ ಅವರು ಸಹ ತನುಜಾ ಪರೀಕ್ಷೆ ಬರೆಯಲು ಮಾಡಿದ್ದ ಉಪಕಾರ ಸ್ಮರಣೀಯ. ಈ ಚಿತ್ರದ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೆ ತಂದಿದ್ದು, ಚಿತ್ರದ ಕೊನೆಯಲ್ಲಿ ಅವರು ಕೆಲವು ಸೆಕೆಂಡ್ ಗಳ ಕಾಲ ಅವರು ಮಾತನಾಡುವ ಸಾಧ್ಯತೆ ಇದೆ ಎಂದು ಪತ್ರಕರ್ತ ವಿಶ್ವೇಶ್ವರ ಭಟ್ ತಿಳಿಸಿದರು.
ವಿಶ್ವೇಶ್ವರ ಭಟ್ ಅವರ ಅಂಕಣದಿಂದ ಪ್ರೇರಿತನಾದ ನಾನು, ಈ ಚಿತ್ರದ ನಿರ್ದೇಶನಕ್ಕೆ ಮುಂದಾದೆ. ನನ್ನ ಹಲವು ಸ್ನೇಹಿತರು ಬಂಡವಾಳ ಹೂಡಿದರು. ಒಂದು ದಿನದಲ್ಲಿ ನಡೆಯುವ ಕಥೆಯಿದು. ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಮುಂತಾದ ಗಣ್ಯರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ.
ನಾನು ಈ ಸಿನಿಮಾ ಮಾಡದೆ ಹೋಗಿದ್ದರೆ, ನನಗೆ ತುಂಬಾ ನಷ್ಟವಾಗುತ್ತಿತ್ತು. ಈ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನನಗೆ ಖುಷಿಯಾಗಿದೆ ಎಂದರು “ತನುಜಾ” ಪಾತ್ರಧಾರಿ ಸಪ್ತ ಪಾವೂರ್.
ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್. ಆಗಿನ ಮುಖ್ಯಮಂತ್ರಿಗಳಿಗೆ ವಿಶೇಷಾಧಿಕಾರಿಯಾಗಿದ್ದ ಡಾ ಕೆ.ಆರ್ ಕಾರ್ತಿಕ್ ತಮ್ಮ ಅನುಭವ ಹಂಚಿಕೊಂಡರು.
ಚಿತ್ರದಲ್ಲಿ ನಿರ್ದೇಶಕರ ಕೆಲವು ಗೆಳೆಯರು ನಿರ್ಮಾಪಕರಾಗಿದ್ದು ಚಂದ್ರಶೇಖರ್ ಗೌಡ ಹಾಗೂ ಪ್ರಕಾಶ್ ಮದ್ದೂರು ನಿರ್ಮಾಪಕರ ಪರವಾಗಿ ಮಾತನಾಡಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಇಂತಹ ಒಳ್ಳೆಯ ಪ್ರಯತ್ನ ಮಾಡಿರುವ ಚಿತ್ರತಂಡಕ್ಕೆ ಶುಭಾಶಯ ಹೇಳಿದರು.
ಹರೀಶ್ ಎಂ.ಡಿ ಹಳ್ಳಿ ನಿರ್ದೇಶನವಿರುವ ಈ ಚಿತ್ರದ ನಿರ್ಮಾಪಕರು ಚಂದ್ರಶೇಖರ ಗೌಡ ಹಾಗೂ ಮನೋಜ್ ಬಿ ಜಿ. ಪ್ರಕಾಶ್ ಮದ್ದೂರು, ಅನಿಲ್ ಷಡಾಕ್ಷರಿ, ಗಿರೀಶ .ಕೆ – ಗೋವರ್ಧನ ಬಿ, ಅವಿನಾಶ್ ಗೌಡ ಈ ಚಿತ್ರದ ಸಹ ನಿರ್ಮಾಪಕರು. ಪ್ರದ್ಯೋತನ್ ಸಂಗೀತ ನಿರ್ದೇಶನ, ರವೀಂದ್ರನಾಥ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ರಘುನಂದನ್ ಎಸ್ ಕೆ.
ಬೆಂಗಳೂರು ಕುಮಾರ್ ಫಿಲಂಸ್ ಬ್ಯಾನರ್ ನಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”.
ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅದ್ಧೂರಿ ವೆಚ್ಚದಲ್ಲಿ, ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ.
“ಮಾಫಿಯಾ” ಚಿತ್ರ ತುಂಬಾ ಚೆನ್ನಾಗಿ ಮೂಡಿ ಬರುತ್ತಿದ್ದು, ಪ್ರಜ್ವಲ್ ಅವರ ಈವರೆಗಿನ ಸಿನಿಪಯಣದ ಅತ್ಯುತ್ತಮ ಚಿತ್ರವಾಗಲಿದೆ ಎಂಬ ಭರವಸೆಯಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಹ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರ ಸಹಕಾರಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕುಮಾರ್.
ಈ ಸಾಹಸ ಸನ್ನಿವೇಶದ ನಂತರ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿರುತ್ತದೆ. ಆ ಹಾಡಿನ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.
ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
“ಮದಿಪು” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ. ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ.
ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಚಿತ್ರ. ಇದು ತೊಂಬತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಭಾವನೆಗಳೇ ಇಲ್ಲಿನ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಚಿತ್ರದ ಮುಖ್ಯ ಕಥಾಹಂದರ.
ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ ಮತ್ತೊಂದು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ.ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ.ಮಠ, ವಿನ್ಯಾ, ಉಗ್ರಂ ಮಂಜು, ಜೆಜಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಚೇತನ್ ಮುಂಡಾಡಿ ಚಿತ್ರದ ಕುರಿತು ಮಾಹಿತಿ ನೀಡಿದರು.
ಈ ಚಿತ್ರದಲ್ಲಿ ಧರ್ಮಣ್ಣ ಎನ್ನುವ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಅನ್ವೇಷಣೆಯ ಮೇಲೆ ಕಥೆ ಸಾಗುತ್ತದೆ ಎಂದು ರಮೇಶ್ ಪಂಡಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.
ನನಗೆ ಅಳುವ ಹಾಗೂ ಸಂದೇಶ ನೀಡುವ ಚಿತ್ರಗಳಲ್ಲಿ ಆಸಕ್ತಿ ಇಲ್ಲ. ಜನ ಸಿನಿಮಾ ನೋಡಲು ಬರುವುದು ತಮ್ಮ ನಿತ್ಯದ ಕಷ್ಟಗಳನ್ನು ಮರೆಯುವುದಕ್ಕಾಗಿ. ಚಿತ್ರದಲ್ಲೂ ದುಖದ ಸಂಗತಿ ಇದ್ದರೆ ಯಾರು ಇಷ್ಟ ಪಡುವುದಿಲ್ಲ. ಹಾಗಾಗಿ ಚೇತನ್ ಮುಂಡಾಡಿ ಒಳ್ಳೆಯ ಮನೋರಂಜನೆಯಿರುವ ಕಥೆ ಮಾಡಿಕೊಂಡಿದ್ದಾರೆ. ಅವರಿಗೆ ಬೇಕಾದನ್ನು ಒದಗಿಸುವುದನ್ನು ನಾನು ಮಾಡುತ್ತೇನೆ ಎಂದರು ನಿರ್ಮಾಪಕ ಪ್ರಶಾಂತ್ ಅಂಜನಪ್ಪ.
ರಮೇಶ್ ಪಂಡಿತ್
ವಿ.ಮನೋಹರ್ ಸಂಗೀತ ನಿರ್ದೇಶನ, ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನ, ಸುಂದರ್ ಸಂಭಾಷಣೆ ಹಾಗೂ ಅನಂತರಾಜ್ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಸುಂದರ್ ವೀಣಾ ಸಂಭಾಷಣೆ ಬರೆದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಬಹಳ ದಿನಗಳ ನಂತರ ಮ್ಯೂಸಿಕಲ್ ಲವ್‌ಸ್ಟೋರಿ ಹೊಂದಿರುವ ಚಿತ್ರವೊಂದು ತೆರೆಗೆ ಬರಲು ಅಣಿಯಾಗಿದೆ. ಪ್ರೇಮಲೋಕ, ಎಕ್ಸ್ ಕ್ಯೂಸ್ ಮಿ ಚಿತ್ರಗಳ ನಂತರ ಅದೇ ಜಾನರ್‌ನಲ್ಲಿ ತಯಾರಾಗಿರುವ ಮತ್ತೊಂದು ಚಿತ್ರದ ಹೆಸರು ರಿದಂ. ಚಿತ್ರೋದ್ಯಮದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಅನುಭವ ಇರುವ ಮಂಜು ಮಿಲನ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರವಿದು.
ಈಗಾಗಲೇ ಬಿಡುಗಡೆಯ ಹಂತ ತಲುಪಿರುವ ರಿದಂ, ಸದ್ಯದಲ್ಲೇ ಸೆನ್ಸಾರ್ ಗೆ ಹೋಗಲಿದೆ. ಚಿತ್ರದಲ್ಲಿ ನಾಯಕನಾಗೂ ನಟಿಸಿರುವ ಮಂಜುಮಿಲನ್ ಈಗಾಗಲೇ ತಮ್ಮ ಬ್ಯಾನರ್ ಮೂಲಕ 2 ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ್ದು, ಇದು ಅವರ ಮೂರನೇ ಚಿತ್ರ. ಜೋಗಿ ಪ್ರೇಮ್, ಕಾಶೀನಾಥ್, ವಾಸು ಅವರಂಥ ನಿರ್ದೇಶಕರ ಬಳಿ ಕೆಲಸ ಮಾಡಿರುವ ಇವರು, ಒಬ್ಬ ಸಿಂಗರ್ ಹಾಗೂ ವಯಲಿನ್ ನುಡಿಸೋ ಯುವತಿಯ ನಡುವೆ ನಡೆಯುವ ಲವ್‌ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳ ಹೊರಟಿದ್ದಾರೆ. ಚಿತ್ರದ ನಾಯಕಿಯಾಗಿ ಕೃಷ್ಣತುಳಸಿ ಖ್ಯಾತಿಯ ಮೇಘಶ್ರೀ ಅವರು ಕಾಣಿಸಿಕೊಂಡಿದ್ದಾರೆ.
ಈಗಾಗಲೇ ಬೆಂಗಳೂರು, ಮೈಸೂರು, ಮೇಲುಕೋಟೆ ಅಲ್ಲದೆ ಸಾಗರದಾಚೆಯ ಸಿಂಗಪೂರ್‌ನಲ್ಲಿ ಸುಮಾರು 62 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದಾರೆ. ಚಿತ್ರದಲ್ಲಿ ಸಪ್ತಸ್ವರಗಳನ್ನು ಪ್ರತಿನಿಧಿಸುವಂತೆ ಏಳು ಸುಂದರವಾದ. ಹಾಡುಗಳಿದ್ದು, ಎ.ಟಿ. ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮಲ್ಲಿಕಾರ್ಜುನ್ ಚಿತ್ರಕ್ಕೆ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ. ಹಿರಿಯ ಕಲಾವಿದರಾದ ಸುಮನ್, ಪದ್ಮಾವಾಸಂತಿ, ವಿನಯಾಪ್ರಸಾದ್, ಗಿರಿಜಾ ಲೋಕೇಶ್ ಈ ಚಿತ್ರದಲ್ಲಿ ನಟಿಸಿದ್ದಾರೆ.
ಫ್ಯಾಮಿಲಿ ಸೆಂಟಿಮೆಂಟ್ ಜೊತೆಗೆ ಒಂದು ಎಮೋಷನಲ್ ಲವ್‌ಸ್ಟೋರಿಯನ್ನು ರಿದಂ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹೇಳಹೊರಟಿರುವ ನಿರ್ದೇಶಕ ಕಮ್ ನಾಯಕ ಮಂಜು ಮಿಲನ್ ಅವರು ಮುಂದಿನ ತಿಂಗಳು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಚಿತ್ರರಂಗದಲ್ಲೀಗ ಹೊಸ ಬಗೆಯ ಸಿನಿಮಾ ಬಿಡುಗಡೆಯ ಪರ್ವ. ಹೌದು, ಸ್ಯಾಂಡಲ್ ವುಡ್ ಈಗ ಭಾರತೀಯ ಚಿತ್ರರಂಗದಲ್ಲೇ ನ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರಿಲೀಸ್ ಆದ ಒಂದಷ್ಟು ಸಿನಿಮಾಗಳು ದೊಡ್ಡ ಮಟ್ಟದ ಯಸಸ್ಸು ಕಾಣಿಸಿಕೊಂಡಿವೆ. ಈಗಲೂ ಬಿಡುಗಡೆಗೆ ನಿರೀಕ್ಷೆ ಸಿನಿಮಾಗಳು ಸೇರಿವೆ. ಅ ಸಾಲಿಗೆ “ಲಕ್ಕಿ ಮ್ಯಾನ್” ಕೂಡ ಸೇರಿದೆ. ಈ ನಿರೀಕ್ಷೆಗೆ ಕಾರಣ ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿರುವುದು. ಇಡೀ ಚಿತ್ರದ ಹೈಲೆಟ್ ಅವರ ಪಾತ್ರ ಈ ಚಿತ್ರದಲ್ಲಿ ಅವರದು ವಿಶೇಷ ಪಾತ್ರ. ಅದನ್ನು ತೆರೆಯ ಮೇಲೆ ನೋಡಬೇಕು. ಈಗಾಗಲೇ “ಲಕ್ಕಿ ಮ್ಯಾನ್” ಚಿತ್ರವನ್ನ ಅದ್ದೂರಿಯಾಗಿ ತೆರೆಮೇಲೆ ತರಲು ಚಿತ್ರತಂಡ ಜೋರು ತಯಾರಿ ನಡೆಸಿದೆ.
ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳುವಂತೆ, ನಾನು ನನ್ನ ಮಾತೃಭಾಷೆಯಲ್ಲಿ ನಿರ್ದೇಶನ ಮಾಡುತ್ತಿರುವ ಮೊದಲ ಚಿತ್ರವಿದು. ಈ ಚಿತ್ರದ ಕಥೆಯೇ ನಾನು ಸಿನಿಮಾ ಮಾಡಲು ಕಾರಣ. ಚಿತ್ರದಲ್ಲಿ ಸೆಂಟಿಮೆಂಟ್ , ಲವ್ ಮತ್ತು ಎಮೋಷನಲ್ ಇದೆ. ಭರಪೂರ ಮನೋರಂಜನೆಯೂ ಇದೆ. ಈ ಚಿತ್ರಕ್ಕೆ ಭಗವಂತ, ಭಾಗ್ಯವಂತ ಹಾಗೂ ಲಕ್ಕಿ ಮ್ಯಾನ್ ಎಂಬ ಶೀರ್ಷಿಕೆ ಆಯ್ಕೆ ಮಾಡಿದ್ದೆವು. ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯಿಸಬೇಕು ಎಂಬ ಉದ್ದೇಶದಿಂದ ಅವರನ್ನು ಭೇಟಿ ಮಾಡಲು ಹೋದಾಗ ಅವರೇ ಕಥೆ ಕೇಳಿ ತ ಲಕ್ಕಿ ಮ್ಯಾನ್ ಟೈಟಲ್ ತುಂಬಾ ಸೂಕ್ತ ಎಂದು ಸೂಚಿಸಿದರು. ಈಗ ನಾನೊಬ್ಬ ನಿರ್ದೇಶಕನಾಗಿ ಇಲ್ಲಿ ಮಾತನಾಡಲು ಅಪ್ಪು ಅವರೇ ಕಾರಣ. ನನ್ನ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದು, ಅದರಲ್ಲಿ ಅಪ್ಪು ಅವರ ಜೊತೆ ಕೆಲಸ ಮಾಡಿದ್ದು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ.
ಅವರು ತೋರಿಸಿದ ಪ್ರೀತಿ, ಕಾನ್ಫಿಡೆಂಟ್, ಸ್ಟ್ರೆಂಥ್ ಇವತ್ತು ನಾನಿಲ್ಲಿ ನಿಲ್ಲಲು ಕಾರಣ. ಅಪ್ಪು ಅವರು ತುಂಬಾ ಅರ್ಥಗರ್ಭಿತವಾದ ಪಾತ್ರವನ್ನು ಮಾಡಿದ್ದು, ಅವರು ಚಿತ್ರದಲ್ಲಿ 45 ನಿಮಿಷಕ್ಕೂ ಹೆಚ್ಚು ಇರಲಿದ್ದಾರೆ. ಅಲ್ಲದೆ ವರನಟ ಡಾ.ರಾಜ್‌ಕುಮಾರ್ ಅವರ ಮೇಲೆ ರಚಿಸಲಾಗಿರುವ ಹಾಡೊಂದರಲ್ಲಿ ಪುನೀತ್ ಜೊತೆ ನಮ್ಮ ಸೋದರ ಪ್ರಭುದೇವಾ ಕೂಡ ಹೆಜ್ಜೆ ಹಾಕಿದ್ದಾರೆ. ಒಂದು ಫ್ಯಾಂಟಸಿ ಡ್ರಾಮಾವನ್ನು ಲಕ್ಕಿಮ್ಯಾನ್ ಚಿತ್ರದಲ್ಲಿ ತರುತ್ತಿದೇವೆ. ಲಕ್ಕಿ ಮ್ಯಾನ್ ಚಿತ್ರವನ್ನ ಎಲ್ಲರೂ ಬೆಂಬಲಿಸಿ ಎಂದರು.
ಹೀರೋ ಕೃಷ್ಣ, ಪುನೀತ್ ಅವರ ಜೊತೆಗಿನ ಅನುಭವ ಹಂಚಿಕಕೊಂಡು, ನಾನು ಅಪ್ಪು ಸರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಅವರೊಟ್ಟಿಗೆ ಅಭಿನಯಿಸಿದ್ದೀನಿ ಕೂಡ. ಈ ಚಿತ್ರ ನನಗೆ ಬಹಳ ವಿಶೇಷ. ನಾನು ಹಾಗೂ ನನ್ನ ನಾಯಕ ನಟಿಯರು ಅಪ್ಪು ಸರ್ ಹಾಗೂ ಪ್ರಭುದೇವ ಸಾರ್ ಜೊತೆ ಡ್ಯಾನ್ಸ್ ನಲ್ಲಿ ಕುಣಿಯಬೇಕಿತ್ತು. ನನಗೆ ಡ್ಯಾನ್ಸ್ ಅಷ್ಟಾಗಿ ಬರದ ಕಾರಣ ನಾನು ನಿರ್ದೇಶಕರ ಬಳಿ ರಿಕ್ವೆಸ್ಟ್ ಮಾಡಿ ಹೊರ ಉಳಿದೆ. ಒಟ್ಟಾರೆ ಈ ಚಿತ್ರ ಬಹಳ ಉತ್ತಮವಾಗಿ ಮೂಡಿಬಂದೆ ಎಂದರು.
ನಾಯಕಿ ಸಂಗೀತಾ ಶೃಂಗೇರಿ, ಚಿತ್ರದಲ್ಲಿ ಅನು ಎಂಬ ಬೋಲ್ಡ್ ಹುಡುಗಿಯ ಪಾತ್ರ ಮಾಡಿದ್ದಾರಂತೆ. ಮಿಡಲ್‌ಕ್ಲಾಸ್ ಹುಡುಗಿ, ಮ್ಯಾರೇಜ್ ಬಗ್ಗೆ ಕನ್‌ಪ್ಯೂಸ್ ಇರುವ ಪಾತ್ರವಂತೆ. ಮತ್ತೊಬ್ಬ ನಾಯಕಿ ರೋಷನಿ ಪ್ರಕಾಶ್ ಅವರಿಲ್ಲಿ ಮೀರಾ ಎನ್ನುವ ಪಾತ್ರದಲ್ಲಿ ನಟಿಸಿದ್ದೇನೆ. ಕವಲುದಾರಿ ಚಿತ್ರದ ನಂತರ ಇಲ್ಲಿ ನಟಿಸಿದ್ದಾರೆ.
ಚಿತ್ರದಲ್ಲಿ ರಂಗಾಯಣ ರಘ, ಸಾಧುಕೋಕಿಲ ಮುಂತಾದವರು ಅಭಿನಯಿಸಿದ್ದಾರೆ. ಧನಂಜಯ ಅವರು ಈ ಚಿತ್ರದಲ್ಲಿ ಅಪ್ಪು, ಪ್ರಭುದೇವಾ ಅಭಿನಯದ ಬಾರೋ ರಾಜಾ ಹಾಡೋಣ ಬಾರೋ ಎನ್ನುವ ಹಾಡೂ ಸೇರಿದಂತೆ 6 ಹಾಡುಗಳನ್ನೂ ರಚಿಸಿದ್ದಾರೆ. ಜೀವಾಶಂಕರ್ ಛಾಯಾಗ್ರಹಣವಿದೆ. ಪರ್ಸಾ ಪಿಕ್ಚರ್ಸ್ ಲಾಂಛನದಲ್ಲಿ ಪಿ.ಆರ್. ಮೀನಾಕ್ಷಿ ಸುಂದರಂ ಹಾಗೂ ಸುಂದರ ಕಾಮರಾಜ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಹಾಡುಗಳಿಗೆ ವಿ2 ವಿಜಯ್ ಮತ್ತು ವಿಕ್ಕಿ ಅವರ ಸಂಗೀತವಿದೆ
ವಿಜಯ್ ಕಿರಗಂದೂರು ಅರ್ಪಿಸುತ್ತಿರುವ ಹೊಸ ಚಿತ್ರಕ್ಕೆ ಡಾಲಿ ಧನಂಜಯ ಹೀರೋ ಆಗಿದ್ದಾರೆ. ಹೌದು, ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ.
ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ.
“ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
“ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ. ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. “ಹೊಯ್ಸಳ” ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ.
ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿದೆ.
ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ನಿರ್ಮಾಣ ಮಾಡಿರುವ ‘ಸೆಪ್ಟಂಬರ್ 13 ಸಿನಿಮಾ’ ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಹೆಸರಾಂತ ನಿರ್ಮಾಪಕ ಡಾ.ರಾಜಾ ಬಾಲಕೃಷ್ಣನ್ ಈ ಸಿನಿಮಾಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನ, ಛಾಯಾಗ್ರಾಹಣ ಜವಾಬ್ದಾರಿಯನ್ನೂ ನಿಭಾಯಿಸಿ ಸಿನಿಮಾದಲ್ಲಿ ಖಳನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳು ಚಿತ್ರತಂಡ ಮಾಧ್ಯಮದವರ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದೆ.
ಚಿತ್ರದ ನಿರ್ಮಾಪಕ ಇವಾನ್ ನಿಗ್ಲಿ ಮಾತನಾಡಿ, ಈ ಕಥೆ ಬರೆಯೋದಿಕ್ಕೆ ಕಾರಣ ಇದೆ. ನನಗೆ ಮೊದಲು ಕೊರೋನಾ ಬಂತು. ಆ ನಂತ್ರ ನನ್ನ ಪತ್ನಿ.. ಆ ಬಳಿಕ ನನ್ನ ಮಗನಿಗೆ ಬಂತು. ತುಂಬಾ ಸೀರೀಯಸ್ ಆಗಿಬಿಡ್ತು. ಈ ಸ್ಫೂರ್ತಿಯಿಂದ ಕಥೆ ಬರೆದಿದ್ದೇನೆ. ನಾನು ಕಿರುಚಿತ್ರಗಳು, ಧಾರಾವಾಹಿ ಮಾಡಿದ್ದೇನೆ. ನಾನು ಈ ಮೊದಲ ಮಲಯಾಳಂ, ತಮಿಳು ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೂರನೇ ಚಿತ್ರ. ಈ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿರುವುದರ ಜೊತೆಗೆ ನಟನೆ ಕೂಡ ಮಾಡಿದ್ದೇನೆ ಎಂದು ತಿಳಿಸಿದರು.
ವಿನಯ ಪ್ರಸಾದ್ ಮಾತನಾಡಿ, ನರ್ಸ್ ಜೀವನ ಬಹಳ ಚಾಲೆಂಜಿಂಗ್. ಪ್ರತಿಯೊಬ್ಬರು ನರ್ಸ್ ಗಳನ್ನು ನಾವು ಭೇಟಿ ಮಾಡೇ ಇರ್ತಿವಿ. ಎಂತಹ ಚಾಲೆಂಜಿಂಗ್ ಅಂದ್ರೆ ಅವರು. ಪ್ರತಿ ನಿಮಿಷ, ರೋಗ ರುಜಿನ ಕೋಪ ಆತಂಕ ಇದರ ಜೊತೆಯಲಿ ಜೀವನ ಮಾಡ್ತಾರೆ. ಇದರ ಪ್ರಮುಖ ಭಾಗವೇ ರೋಗ ರುಜಿನ. ಅಂತಹವರು ತಮ್ಮ ಮನೆಗೆ ಹೋಗಿ ಹೇಗೆ ಜೀವನ ಮಾಡ್ತಾರೆ? ಹೇಗೆಲ್ಲಾ ಸಮಸ್ಯೆಗಳನ್ನು ಎದುರಿಸ್ತಾರೆ? ಅನ್ನೋದು ಚಿತ್ರದ ತಿರುಳು ಅಂತಾ ಹೇಳಿದರು.
ನಿರ್ದೇಶಕ ಡಾ.ರಾಜಾ ಬಾಲಕೃಷ್ಣನ್ ಮಾತನಾಡಿ, ಒಂದಷ್ಟು ಹಿರಿಯರು ಜೊತೆಗೆ ಒಂದಷ್ಟು ಹೊಸಬರು ಸೇರಿ ಸಿನಿಮಾ ಮಾಡಿದ್ದೇವೆ. ನಾನು ಕನ್ನಡ ಇಂಡಸ್ಟ್ರೀಗೆ ಹೊಸಬ. ಹೊಸಬರು ನನಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತರು, ಇಡೀ ತಂಡಕ್ಕೆ ಧನ್ಯವಾದ ಎಂದರು.
ಕೋವಿಡ್ ಸಮಯದಲ್ಲಿ ಜಗತ್ತು ನಲುಗಿ ಹೋಗಿತ್ತು. ಈ ಸಮಯದಲ್ಲಿ ಸಮರ್ಪಣಾ ಭಾವದಿಂದ ದುಡಿದವರು ವೈದ್ಯರು. ಅದ್ರಲ್ಲಿಯೂ ನರ್ಸಿಂಗ್ ಸಮುದಾಯದ ಸೇವೆ ಗಣನೀಯ. ಇಂತಹ ನರ್ಸಿಂಗ್ ಜೀವನದ ಕಥೆಯನ್ನೊಳಗೊಂಡ ‘ಸೆಪ್ಟಂಬರ್ 13 ಸಿನಿಮಾ’ ಸಿನಿಮಾದಲ್ಲಿ ಹಿರಿಯ ಕಲಾವಿದರಾದ ವಿನಯ ಪ್ರಸಾದ್, ಜೈ ಜಗದೀಶ್, ಯಮುನಾ ಶ್ರೀನಿಧಿ ನಟಿಸಿದ್ದು, ಶ್ರೀಯಾರಿಧಿಬನ್ ನಾಯಕಿಯಾಗಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಉಳಿದಂತೆ ಒಂದಷ್ಟು ಯುವ ಪ್ರತಿಭೆಗಳು ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಶೀರ್ಘದಲ್ಲಿ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ.