Categories
ಸಿನಿ ಸುದ್ದಿ

ಉಪ್ಪಿ ಹೊಸ ನಾಮ! ಬುದ್ಧಿವಂತ ನಿರ್ದೇಶಕನ ಚಿತ್ರಕ್ಕೆ ಅದ್ಧೂರಿ ಮುಹೂರ್ತ…

“A”, “ಓಂ” ನಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಉಪೇಂದ್ರ ನಾಯಕರಾಗೂ ಜನಪ್ರಿಯ. “ಉಪ್ಪಿ ೨” ಚಿತ್ರದ ನಂತರ ಉಪೇಂದ್ರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಸುದೀಪ್ ಆರಂಭ ಫಲಕ ತೋರಿದರು. ಶಿವರಾಜಕುಮಾರ್ ಕ್ಯಾಮೆರಾ ಚಾಲಾನೆ ಮಾಡಿದರು. ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಆಗಮಿಸಿ ಶುಭ ಕೋರಿದರು.

ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗೂ ನಟಿಸುತ್ತಿದ್ದಾರೆ.

ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ.

ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆ ಮಾಡಿದ್ದಾರೆ.

ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ.

ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ. ನಿಮ್ಮ ನಿರೀಕ್ಷೆ ಸುಳ್ಳು ಮಾಡುವುದಿಲ್ಲವೆಂದು ತಿಳಿಸಿದರು.

ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಹೇಳಿದರು.

ಉಪೇಂದ್ರ ಅವರು ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ ಮೂರನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ ಎಂದರು ಕೆ.ಪಿ.ಶ್ರೀಕಾಂತ್.

ನಾನು ಹಾಗೂ ಉಪೇಂದ್ರ ಅವರು ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ಪರಿಚಯ.
ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವೆಂದರು ಲಹರಿ ವೇಲು.

ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

.

Categories
ಸಿನಿ ಸುದ್ದಿ

ಶಿವಣ್ಣ-ಶರಣ್ ಜುಗಲ್ ಬಂದಿ; ಸಿಂಗಲ್ ಶಾಟ್ ಹಾಡಿಗೆ ಟೀಂ ‘ಬೈರಾಗಿ’ ಸಖತ್ ಸ್ಟೆಪ್ಸ್…

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ಬೈರಾಗಿ. ‘ಡಾಲಿ’ ಧನಂಜಯ್ ಹಾಗೂ ಪೃಥ್ವಿ ಅಂಬರ್ ಪ್ರಮುಖ ಭೂಮಿಕೆಯಲ್ಲಿರುವ ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡು ಶಿವರಾಜ್‌ಕುಮಾರ್ ಮತ್ತು ಶರಣ್ ಕಂಠಸಿರಿಯಲ್ಲಿ ಮೂಡಿಬಂದಿರೋದು ವಿಶೇಷ. ‘ವಜ್ರಕಾಯ’ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್ ದನಿಗೂಡಿಸಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯವಿರುವ ‘ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ…’ ಎಂಬ ಹಾಡು ಸಿಂಗಲ್ ಶಾಟ್’ನಲ್ಲಿ ಶೂಟ್ ಮಾಡಿರುವುದು ಮತ್ತೊಂದು ವಿಶೇಷ.

‘ರಿದಮ್ ಆಫ್ ಶಿವಪ್ಪ’ ಕಾನ್ಸೆಪ್ಟ್‌’ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ ‘ಬೈರಾಗಿ’ ತಂಡ ಹೆಜ್ಜೆ ಹಾಕಿದ್ದು, ದೇವನಹಳ್ಳಿ ಬಳಿಯಿರುವ ನೂತನ ಮಾಲ್’ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ‘ನಖರನಖ’ ಹಾಡಿಗೆ ಆ್ಯಂಥೋನಿ ದಾಸ್ ದನಿಗೂಡಿಸಿದ್ದರು.

ಇದೀಗ ‘ಸಂಡೆ-ಮಂಡೆ’ ಹಾಡು ಶಿವಣ್ಣ-ಶರಣ್ ದನಿಯಲ್ಲಿ ಮೂಡಿಬಂದಿದ್ದು ಜೆ.ಪಿ ಮ್ಯೂಸಿಕ್ ಯೂಟ್ಯೂಬ್ ಚಾನಲ್’ನಲ್ಲಿ ರಿಲೀಸ್ ಆಗಿದೆ. ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಹಿಟ್ಸ್ ದಾಖಲಾಗಿ ಟ್ರೆಂಡಿಂಗ್’ನಲ್ಲಿದೆ.

ವಿಜಯ್ ಮಿಲ್ಟನ್‌ ನಿರ್ದೇಶನವಿರುವ ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್, ಅನು ಪ್ರಭಾಕರ್, ಅಂಜಲಿ, ಯಶ ಶಿವಕುಮಾರ್, ಚಿಕ್ಕಣ್ಣ ಮೊದಲಾದವರ ತಾರಾದಂಡೇ ಇದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ‘ಬೈರಾಗಿ’ಗೆ ಬಂಡವಾಳ ಹೂಡಿದ್ದಾರೆ.

Categories
ಸಿನಿ ಸುದ್ದಿ

ನೈಟ್ ಕರ್ಫ್ಯೂ ಸಿನಿಮಾ ಮೂಲಕ ಮಾಲಾಶ್ರೀ ಕಂಬ್ಯಾಕ್:

ಕನ್ನಡ ಚಿತ್ರರಂಗದ ಎವರ್ ಗ್ರೀನ್ ಬ್ಯೂಟಿ.. ಕನಸಿನ ರಾಣಿ ಮಾಲಾಶ್ರೀ ಮತ್ತೆ ಸಿನಿಮಾ ಲೋಕಕ್ಕೆ ಕಂಬ್ಯಾಕ್ ಆಗ್ತಿದ್ದಾರೆ. ಪತಿ ಅಗಲಿಕೆ ನೋವಿನ ನಂತ್ರ ಒಂದಷ್ಟು ಗ್ಯಾಂಪ್ ತೆಗೆದುಕೊಂಡಿದ್ದ ಮಾಲಾಶ್ರೀ ನೈಟ್ ಕರ್ಫ್ಯೂ’ ಸಿನಿಮಾ ಮೂಲಕ ಬೆಳ್ಳಿತೆರೆಮೇಲೆ ದಿಬ್ಬಣ ಹೊರಡಲಿದ್ದಾರೆ.

ಈ ಹಿಂದೆ ‘ಪುಟಾಣಿ ಸಫಾರಿ’ ನಿರ್ದೇಶನ ಮಾಡಿದ್ದ ರವೀಂದ್ರ ವೆಂಶಿ ಈ ಚಿತ್ರಕ್ಕೆ ಕಥೆ ಬರೆದು, ‌ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ಸಂದರ್ಭದಲ್ಲಿ ಇಡೀ ತಂಡ ಭಾಗಿಯಾಗಿ ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು.

ಮಾಲಾಶ್ರೀ ಮಾತನಾಡಿ, ನನಗೆ ತುಂಬಾ ಗ್ಯಾಪ್ ಅನಿಸುತ್ತಿಲ್ಲ, ತುಂಬಾ ಖುಷಿಯಾಗ್ತಿದೆ. ಕಥೆಯಲ್ಲಿ ಹೊಸತನವಿದೆ. ಹೊಸ ತಂಡ ನನಗೆ ಹೊಸ ಅನುಭವ, ಚಾಲೆಂಜ್ ಇರುತ್ತದೆ. ನಾನು ಡಾಕ್ಟರ್ ಆಗಿ ಎರಡನೇ ಸಿನಿಮಾವಿದು ಎಂದು ಹೇಳಿದರು.
ತುಂಬಾ ಕಾರಣಕ್ಕೆ ಈ ಸಿನಿಮಾ ನನಗೆ ವಿಶೇಷವಾಗಿದೆ. ಮಾಲಾಶ್ರೀ ಅವರ ಜೊತೆ ಕೆಲಸ ಮಾಡ್ತಿರೋದು ಖುಷಿ ಕೊಟ್ಟಿದೆ. ಇದೊಂದು ಕ್ರೈಮ್ ಥ್ರಿಲ್ಲರ್. ಕೊರೋನಾ ಕಾಲಘಟ್ಟದಲ್ಲಿ ನಡೆಯುವ ಕಥೆ. ನಾನು ಡಾಕ್ಟರ್ ಪಾತ್ರ ಮಾಡಿದ್ದೇನೆ ಎಂದು ರಂಜನಿ ರಾಘವನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಿರ್ದೇಶಕ ರವೀಂದ್ರ ವಂಶಿ, ನೈಟ್ ಕರ್ಫ್ಯೂ ವಿಶೇಷ ಸಿನಿಮಾ. ಸಿನಿಮಾದಲ್ಲಿ ನಾಲ್ಕು ಅಂಶ ಮುಖ್ಯ. ಕಥೆ ಚಿತ್ರ-ಕಥೆ, ಸಂಭಾಷಣೆ. ಈ ಸಿನಿಮಾದಲ್ಲಿ, ವಿಶೇಷ ಕಥೆ, ನಿರೂಪಣಾ ಶೈಲಿ ಇದ್ದು, ಸಿನಿಮಾದ ತಾರಾಬಳಗ ತುಂಬಾ ಚೆನ್ನಾಗಿದೆ, ಟೆಕ್ನಿಕಲ್ ಡಿಪಾರ್ಟ್ ಚೆನ್ನಾಗಿದೆ. ನಿರ್ಮಾಣ ಎಲ್ಲದಕ್ಕೂ ಸಾಥ್ ಕೊಟ್ಟಿದ್ದಾರೆ ಎಂದರು.

ಇದೊಂದು ಆಕ್ಷನ್-ಥ್ರಿಲ್ಲರ್ ಚಿತ್ರವಾಗಿದ್ದು ಮೆಡಿಕಲ್ ಮಾಫಿಯಾ ಕುರಿತಾದ ಕಥೆ ಒಳಗೊಂಡಿದ್ದು, ಪ್ರಮೋದ್ ಶೆಟ್ಟಿ, ಬಲರಾಜ್ವಾಡಿ, ವರ್ಧನ್ ,ಅಶ್ವಿನ್, ರಂಗಾಯಣ ರಘು ಸಾಧು ಕೋಕಿಲ, ಮಂಜು ಪಾವಗಡ ಸೇರಿದಂತೆ ಹಲವು ಕಲಾವಿದರು ಸಿನಿಮಾದಲ್ಲಿದ್ದಾರೆ. ಸ್ವರ್ಣಗಂಗಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಿ.ಎಸ್ ಚಂದ್ರಶೇಖರ್ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಪ್ರಮೋದ್ ಭಾರತೀಯ ಕ್ಯಾಮೆರಾ ವರ್ಕ್, ಜಾಗ್ವಾರ್ ಸಣ್ಣಪ್ಪ ಸಾಹಸ ಸಿನಿಮಾಕ್ಕಿದೆ.

Categories
ಸಿನಿ ಸುದ್ದಿ

ಪರಿಮಳ ಡಿಸೋಜಾಗೆ ಪ್ರೇಮ್ ಹಾಡಿದ್ರು…

ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ.
ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ.

ಡಾ. ಗಿರಿಧರ್ ಹೆಚ್. ಟಿ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಪ್ರೇಮ್ ಅವರು ಹಾಡಿರುವ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಆ ಹಾಡಿನ ಚಿತ್ರೀಕರಣ ನಡೆಯಲಿದೆ.

ಹಿಂದು ಸಂಪ್ರದಾಯದ ಶ್ರೀಮಂತ ಕುಟುಂಬವೊಂದು ಸುಖ ಸಂತೋಷದಿಂದ ಜೀವನ ನಡೆಸುತ್ತಿರುತ್ತಾರೆ. ಆ ಮನೆಗೆ ಕ್ರಿಶ್ಚಿಯನ್ ಸಂಪ್ರದಾಯದ ಪರಿಮಳ ಡಿಸೋಜಾ ಸೊಸೆಯಾಗಿ ಬರುತ್ತಾಳೆ. ಜೊತೆಗೆ ‌ಮತ್ತಷ್ಟು ಸಂತೋಷ, ಆನಂದವನ್ನು ಹೊತ್ತು ತರುತ್ತಾಳೆ. ಎರಡುವರ್ಷಗಳ ನಂತರ ಆ ಮನೆಯಲ್ಲಿ ಯಾರು ಊಹಿಸದ ಘಟನೆ ನಡೆಯುತ್ತದೆ. ಆ ಘಟನೆಯಿಂದ ಮನೆಮಂದಿಯಲ್ಲಾ ಸಂಕಷ್ಟಕ್ಕೆ ಸಿಲುಕುತ್ತಾರೆ. ಮುಂದೇನು ನಡೆಯುತ್ತದೆ ಎಂಬುದೇ ಕುತೂಹಲ ಎನ್ನುವ ನಿರ್ದೇಶಕ ಗಿರಿಧರ್, ಇದೊಂದು ಸಸ್ಪೆನ್ಸ್ ಥ್ರಿಲ್ಲರ್, ಆಕ್ಷನ್ , ಸೆಂಟಿಮೆಂಟ್ ಹಾಗೂ ಕಾಮಿಡಿ ಎಲ್ಲವನ್ನು ಒಳಗೊಂಡಿರುವ ಚಿತ್ರ ಎಂದು ತಿಳಿಸುತ್ತಾರೆ.

ಕೋಮಲ ಬನವಾಸೆ , ವಿನೋದ್ ಶೇಷಾದ್ರಿ, ಶ್ರೀನಿವಾಸಪ್ರಭು, ಭವ್ಯ, ಪೂಜಾ ರಾಮಚಂದ್ರ, ಶಿವಕುಮಾರ್ ಆರಾಧ್ಯ, ಶಂಖನಾದ ಅಂಜನಪ್ಪ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌.

ನಾಲ್ಕು ಹಾಡುಗಳಿದ್ದು, ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ , ಕೆ.ಕಲ್ಯಾಣ್ ಹಾಗೂ ವಿನೋದ್ ಶೇಷಾದ್ರಿ ಬರೆದಿದ್ದಾರೆ. ಜೋಗಿ ಪ್ರೇಮ್, ರಾಜೇಶ್ ಕೃಷ್ಣನ್, ಅನುರಾಧ ಭಟ್, ನಕುಲ್ ಅಭ್ಯಂಕರ್, ಸುಪ್ರಿಯಾ ರಾಮ್, ಶೃತಿ ವಿ.ಎಸ್ ಹಾಡಿದ್ದಾರೆ. ಕೆ.ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಂಜೀವ್ ರೆಡ್ಡಿ ಅವರ ಸಂಕಲನವಿದೆ.

Categories
ಸಿನಿ ಸುದ್ದಿ

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ ಚಾರ್ಲಿ-777: 21 ಸಿಟಿಗಳಲ್ಲಿ ಪ್ರೀಮಿಯರ್‌ ಇದು ಮೊದಲ ಸಿನಿಮಾ ಎಂಬ ಹೆಗ್ಗಳಿಕೆ…

ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಮೇಲೆ ಧೂಳ್ ಎಬ್ಬಿಸಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ ಚಾರ್ಲಿ 777 ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡ್ತಿದೆ. ಈಗಾಗಲೇ ಟ್ರೇಲರ್ ನಲ್ಲಿಯೇ ತನ್ನ ತಾಕತ್ತು ತೋರಿಸಿರುವ ಚಾರ್ಲಿಗೆ ಚಿತ್ರರಸಿಕರು ಫುಲ್ ಫಿದಾ ಆಗಿದ್ದಾರೆ.

ಜೂನ್ 10ರಂದು ಸಿನಿಮಾ ತೆರೆಗೆ ಬರ್ತಿರೋದ್ರಿಂದ ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ರಾಜ್ಯ ರಾಜ್ಯ ಸುತ್ತಿ ಪ್ರಚಾರದ ಕಹಳೆ ಮೊಳಗಿಸಿರುವ ಚಾರ್ಲಿ ಅಂಗಳದಿಂದ ಮಸ್ತ್ ಖಬರ್ ವೊಂದು ರಿವೀಲ್ ಆಗ್ತಿದೆ. ಬರೋಬ್ಬರಿ‌ 21 ಸಿಟಿಗಳಲ್ಲಿ ಚಾರ್ಲಿ ಸಿನಿಮಾ ಪ್ರೀಮಿಯರ್ ಆಗ್ತಿದೆ.

ಹೊಸ ದಾಖಲೆ ಬರೆದ ಚಾರ್ಲಿ

ಹೇಳಿಕೇಳಿ ಇದು ಕಾಂಪಿಟೇಷನ್ ಯುಗ. ಅದ್ರಲ್ಲೂ ಚಿತ್ರರಂಗದಲ್ಲಂತೂ ಕೇಳ್ಬೇಕೆ. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಸದ್ದು ಮಾಡ್ತಿವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಒಂದೊಂದಾಗಿ ತೆರೆಗೆ ಬರ್ತಿವೆ. ಇಷ್ಟೆಲ್ಲಾ ಕಾಂಪಿಟೇಷನ್ ಇದ್ರೂ ಚಾರ್ಲಿ 777 ಸಿನಿಮಾ ರಿಲೀಸ್ ಗೂ ಮುನ್ನ ಹೊಸ ರೆಕಾರ್ಡ್ ಬರೆದಿದೆ. ಹೈದ್ರಾಬಾದ್, ಚೆನ್ನೈ, ದೆಹಲಿ, ಮಧುರೈ ಸೇರಿದಂತೆ ಬರೋಬ್ಬರಿ 21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಮೊದಲ ಸಿನಿಮಾ ಎಂಬ ಖ್ಯಾತಿ ಚಾರ್ಲಿ ಭತ್ತಳಿಕೆ ಸೇರಿದೆ.

ಎಲ್ಲೆಲ್ಲಿ ಯಾವಾಗಾ ಪ್ರೀಮಿಯರ್

21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಚಾರ್ಲಿ-777 ಸಿನಿಮಾ ಹೈದ್ರಾಬಾದ್, ವಾರಾಣಾಸಿ 7ರಂದು, ದೆಹಲಿಯಲ್ಲಿ 2ರಂದು, ಅಮೃತಸರ 2ರಂದು, ಮಧುರೈ, ಪಂಜಿಮ್, ಬರೋಡಾ, ವೈಜಾಕ್ ನಲ್ಲಿ 8ರಂದು, ಕೊಯ್ಯಮತ್ತೂರು, ಸೊಲ್ಲಾಪುರ,ತಿರುವನಂತಪುರ, ಅಹಮದಾಬಾದ್ ನಲ್ಲಿ 7ರಂದು, ಪುಣೆ, ಮುಂಬೈ, ಕಿಚ್ಚಿನ್, ಲಖನೌ, ಚೆನ್ನೈ, ಜೈಪುರ, ಕೋಲ್ಕತ್ 6ರಂದು, ನಾಗಾಪುರ, ಸೂರತ್ ನಲ್ಲಿ 9ರಂದು ಪ್ರೀಮಿಯರ್ ಆಗ್ತಿದ್ದು, ಈಗಾಗ್ಲೇ ಆಲ್ ಮೋಸ್ಟ್ ಆಲ್ ಟಿಕೆಟ್ ಸೋಲ್ಟ್ ಔಟ್ ಆಗಿವೆ.

ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಾರ್ಲಿ 777 ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಧರ್ಮ ಪಾತ್ರದಲ್ಲಿ ಮಿಂಚಿದ್ದು, ರಕ್ಷಿತ್ ಗೆ ಜೋಡಿಯಾಗಿ ಸಂಗೀತ ಶೃಂಗೇರಿ ನಟಿಸಿದ್ದಾರೆ. ನಟನೆ ಜೊತೆಗೆ ರಕ್ಷಿತ್ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಅವರ ಸಾಹಸ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಮೆಟಡೋರ್ ಜರ್ನಿ ಶುರು: ಜೂ.3ಕ್ಕೆ ಸಿನಿಮಾ ರಿಲೀಸ್

ಜೂನ್ 3ರಿಂದ ಕನ್ನಡ ಬೆಳ್ಳಿತೆರೆ ಮೇಲೆ ಮೆಟಡೋರ್ ಪಯಣ ಶುರುವಾಗಲಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾ ಥಿಯೇಟರ್ ಗೆ ಲಗ್ಗೆ ಇಡಲು ಅಣಿಯಾಗಿದೆ.

ನಿರ್ಮಾಪಕ ಕಿರಣ್ ಕುಮಾರ್ ಅವರು ಮಾತನಾಡಿ, ಇಂಜಿನಿಯರಿಂಗ್ ಬ್ಯಾಗ್ರೌಂಡ್ ನಮ್ಮದು. ಒಟ್ಟಿಗೆ ಶಾರ್ಟ್ ಮೂವೀಗಳನ್ನು ಮಾಡಿ ನಂತರ ಸಿನಿಮಾ ಮಾಡುವ ಕನಸು ಹೊತ್ತು ಈಗ ಸಿನಿಮಾ ಮಾಡಿದ್ದೇವೆ. ನಮ್ಮ ಚಿತ್ರದಲ್ಲಿ ಒಳ್ಳೆ ಕಂಟೆಂಟ್ ಇದೆ. ಬೀದಿನಾಟಕ ಮೂಲಕ ರಾಜ್ಯಾದ್ಯಂತ ಸಿನಿಮಾ ಪ್ರಚಾರ ಮಾಡಿದ್ದೇವೆ ಎಂದರು.

ನಿರ್ದೇಶಕ ಸುದರ್ಶನ್, ಕಲಾವಿದರು ಹೊಸಬರು. ನಾಟಕದ ಹಿನ್ನೆಲೆಯುಳ್ಳವರು. ಎಲ್ಲರೂ ನಮ್ ಸ್ನೇಹಿತರು. ಸಿನಿಮಾದಲ್ಲಿ ಐದು ಕಥೆ ಇದೆ. ಹೈಪರ್ ಲಿಂಕ್ ರೀತಿ. ಕಾಮಿಡಿ, ಥ್ರಿಲ್ಲರ್ ಎಲ್ಲಾ ಬಗೆ ಕಥೆ ಇದೆ. ಜೂನ್ 3ಕ್ಕೆ ಸಿನಿಮಾ ಬರ್ತಿದೆ. ಎಲ್ಲರೂ ಸಪೋರ್ಟ್ ಮಾಡಿ ಎಂದರು.

ಮೆಟಡೋರ್ ಮೂಲಕ ಭರ್ಜರಿ ಪ್ರಮೋಷನ್

ಮೆಟಡೋರ್ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಶುರುವಾಗಿದ್ದು, ಹೀಗಾಗಿ ಚಿತ್ರತಂಡ ಭರ್ಜರಿ ಪ್ರಮೋಷನ್ ಗೆ ಇಳಿದಿದೆ. ಮೆಟಡೋರ್ ವಾಹನಕ್ಕೆ ಸಿನಿಮಾದ ಪೋಸ್ಟರ್ ಅಂಟಿಸಿ, ಈ ಮೆಟಡೋರ್ ಮೂಲಕವೇ ರಾಜ್ಯಾದ್ಯಂತ ಪ್ರಮೋಷನ್ ನಡೆಸ್ತಿದೆ.

ಐದು ಕಥೆಯುಳ್ಳ ಹೈಪರ್ ಲಿಂಕ್ ಸಿನಿಮಾವಾಗಿರುವ ಮೆಟಡೋರ್ ಚಿತ್ರಕ್ಕೆ ಸುದರ್ಶನ್ ಜಿ ಶೇಖರ್ ನಿರ್ದೇಶನ ಮಾಡಿದ್ದು, ಈ ಹಿಂದೆ ಇವರು 13ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಕಿರಣ್, ರವಿ ಮೈಸೂರು, ಅರ್ಚನಾ ಮಹೇಶ್,‌ ಮೋಹನ್ ಬಾಬು ಸೇರಿದಂತೆ ಹೊಸ ತಾರಾಬಳಗ ಸಿನಿಮಾದಲ್ಲಿದೆ.

ಓಂ ಸ್ಟುಡಿಯೋ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ಕಿರಣ್ ಕುಮಾರ್ ಎಸ್ ಹೆಚ್ ಬಂಡವಾಳ ಹೂಡಿದ್ದು, ತಂಗಾಳಿ ನಾಗರಾಜ್ ಸಂಗೀತ, ಗೋಪಿನಾಥ್ ಕ್ಯಾಮೆರಾ, ಕುಮಾರ್ ಸಿಎಚ್ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ತೂತು ಮಡಿಕೆ ಟೈಟಲ್ ಟ್ರ್ಯಾಕ್ ಸಾಂಗ್ ಗೆ ಮೆಚ್ಚುಗೆಯ ಮಹಾಪೂರ!

ಪ್ರತಿಭಾನ್ವಿತ ತಂಡವೇ ಸೇರಿ ತಯಾರಿಸುವ ತೂತು ಮಡಿಕೆ ಸಿನಿಮಾ ರಿಲೀಸ್ ಹೊಸ್ತಿಲಿನಲ್ಲಿ ನಿಂತಿದ್ದು, ಚಿತ್ರತಂಡ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಮೋಷನ್ ಪೋಸ್ಟರ್ ಹಾಗೂ ಯಾಮಾರಿದೆ ಹೃದಯ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತೂತು ಮಡಿಕೆ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ.

ನಿತಿನ್ ನಾರಾಯಣ್ ಕ್ಯಾಚಿ-ಮ್ಯಾಚಿ ಸಾಹಿತ್ಯವಿರುವ ಹಾಡಿಗೆ, ಚೇತನ್ ನಾಯ್ಕ್ ಧ್ವನಿಯಾಗಿದ್ದು, ಸ್ವಾಮಿನಾಥನ್ ಆರ್.ಕೆ ಸಂಗೀತದ ಕಂಪು ಹಾಡಿನ ಇಂಪನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಯಾಮಾರಿದೆ ಹೃದಯ ಹಾಡಿನ ಚಿತ್ರೀಕರಣ ನಡೆದ ಜಾಗದಲ್ಲಿಯೇ ಟೈಟಲ್ ಟ್ರ್ಯಾಕ್ ಕೂಡ ಶೂಟ್ ಆಗಿದ್ದು, ಅಲ್ಲಿನ‌ ಸ್ಥಳೀಯರನ್ನು ಬಳಸಿಕೊಂಡು ಮೋಹನ್ ಮಾಸ್ಟರ್ ಹಾಡಿಗೆ ಕೊರಿಯೋಗ್ರಾಫಿ ಮಾಡಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಶೀರ್ಷಿಕೆ ಗೀತೆಗೆ ಮೆಚ್ಚುಗೆ ವ್ಯಕ್ತವಾಗ್ತಿದೆ.

ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ನಂತ್ರ ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಸಪೋರ್ಟಿಂಗ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದ ಚಂದ್ರ ಕೀರ್ತಿ ತೂತು ಮಡಿಕೆ ಸಿನಿಮಾದಲ್ಲಿ ನಾಯಕನಾಗಿ ಮಿಂಚಿದ್ದು, ಜೊತೆಗೆ ಸಿನಿಮಾದ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನಾಯಕಿಯಾಗಿ ಪಾವನಾ ಗೌಡ ನಾಯಕಿ ನಟಿಸಿದ್ದು, ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾಬಳಗ ಸಿನಿಮಾದಲ್ಲಿದೆ.

ಕಾಮಿಡಿ ಥ್ರಿಲ್ಲರ್ ಸಸ್ಪೆನ್ಸ್ ಕಥಾಹೂರಣದ ತೂತುಮಡಿಕೆ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ನಡಿ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದು, ನವೀನ್ ಚಲ್ಲ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಸಿನಿಮಾಕ್ಕಿದ್ದು, ಸದ್ಯ ಎರಡು ಹಾಡುಗಳನ್ನು ರಿಲೀಸ್ ಮಾಡಿರುವ ಚಿತ್ರತಂಡ ಶೀರ್ಷದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲಿದೆ.

Categories
ಸಿನಿ ಸುದ್ದಿ

ಮಹಾಶರಣರ ಜೀವನಾಧರಿತ ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು ಟ್ರೇಲರ್ ಬಿಡುಗಡೆ…

ಹನ್ನೆರಡನೆ ಶತಮಾನದ ಮಹಾಶರಣ ಶ್ರೀ ಅಲ್ಲಮಪ್ರಭು ಅವರ ಜೀವನಾಧಾರಿತ ವ್ಯೋಮಕಾಯ ಸಿದ್ದ
“ಶ್ರೀ ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಟ ನೆನಪರಲಿ ಪ್ರೇಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಇದಕ್ಕೆ ಸಾಕ್ಷಿಯಾದರು.

ನನಗೂ ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನ ಕ್ಷೇತ್ರವೇ ಬೇರೆ. ಆದರೂ ನನ್ನನ್ನು ಏಕೆ ಕರೆದರೂ ಎಂದು ಯೋಚಿಸುತ್ತಿದೆ? ಅವರು ನನ್ನ ಮೇಲಿಟ್ಟಿರುವ ಪ್ರೀತಿ ಅಪಾರ. ಹಾಗಾಗಿ ಬಂದಿದ್ದೀನಿ. ಕಮರ್ಷಿಯಲ್ ಚಿತ್ರಗಳ ಪೈಪೋಟಿ ಇರುವ ಈ ಸಮಯದಲ್ಲಿ ಇಂತಹ ಕಥೆ ಆಯ್ದುಕೊಂಡಿರುವ ನಿರ್ಮಾಪಕರಿಗೆ ಮೊದಲು ಧನ್ಯವಾದ ತಿಳಿಸಬೇಕು. ವೀರಭೂಮಿ, ಧರ್ಮಭೂಮಿ, ಪುಣ್ಯಭೂಮಿ ಅಂತ ಬೇರೆ ಯಾವ ದೇಶಕ್ಕೂ ಹೆಸರಿಲ್ಲ.‌ ಆ ಎಲ್ಲಾ ಹೆಸರುಗಳಿರುವುದು ನಮ್ಮ ಭಾರತಕ್ಕೆ ಮಾತ್ರ. ಭಾರತಕ್ಕೆ ಈ ರೀತಿಯ ಹೆಸರು ಬರಲು ಸಾಕಷ್ಟು ಜನ ಸಾಧು-ಸಂತರು ಇಲ್ಲಿ ಅವತರಿಸುವುದೇ ಕಾರಣ. ಅಂತಹ ಮಹಾಪುರುಷರಾದ ಶ್ರೀಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಶುಭವಾಗಲಿ ಎಂದು ಪ್ರಮೋದ್ ಮುತಾಲಿಕ್ ಹಾರೈಸಿದರು.

ನಮ್ಮದು ಪುಣ್ಯಭೂಮಿ. ಹಿಂದೆ ಎಷ್ಟೋ ಜನ ನಮ್ಮ ದೇಶದ ಸಂಪತ್ತು ಲೂಟಿ ಮಾಡಿದರೂ, ಇನ್ನೂ ನಮ್ಮಲ್ಲಿ ಸಂಪತ್ತು ಇದೆ ಅಂದರೆ ಅದಕ್ಕೆ ಈ ಸಾಧು-ಸಂತರ ಆಶೀರ್ವಾದವೇ ಕಾರಣ. ಮಹಾಶರಣ ಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಒಳಿತಾಗಲಿ ಎಂದರು ನಟ ನೆನಪಿರಲಿ ಪ್ರೇಮ್.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಕೋರಿದರು.

ಅಲ್ಲಮಪ್ರಭುಗಳು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಬಳಿಗಾವಿಯಲ್ಲಿ. ಆದರೆ ಅವರ ಕಾರ್ಯಕ್ಷೇತ್ರ ಬಾಗಲಕೋಟೆ ಬಳಿಯ ತೇರಾದಾಳ. ಚಾಮರಸ ಕವಿ ಬರೆದಿರುವ ಪ್ರಭುಲಿಂಗ ಲೀಲೆ ಆಧರಿಸಿ ಈ ಚಿತ್ರ ಮಾಡಿದ್ದೀವಿ.
ಹನ್ನೆರಡನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಮಾಡಿದ ಸಾಧನೆಗಳು ಅನಂತ. ಅನುಭವ ಮಂಟಪದ ಮೊದಲ ಆಧ್ಯಕ್ಷರು ಅವರು. ಅಂತಹ ಮಹಾಶರಣರ ಬಗ್ಗೆ ಸಿನಿಮಾ ಮಾಡಿರುವುದು ನಮ್ಮ ಪುಣ್ಯ ಎಂದು ತಿಳಿಸಿದ ನಿರ್ಮಾಪಕ ಮಾಧವಾನಂದ ಅವರು, ಮಹಾವೀರ ಪ್ರಭು ಅವರು ನಿರ್ಮಾಣಕ್ಕೆ ನನಗೆ ಜೊತೆಯಾಗಿದ್ದಾರೆ ಎಂದರು.

ನಾನು ಸುಮಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಹನ್ನೆರಡನೆಯ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಗೆ ತರುವುದು ಅಷ್ಟು ಸುಲಭವಲ್ಲ. ಆ ಪ್ರಯತ್ನ ಮಾಡಿದ್ದೇವೆ. ತೇರದಾಳ, ಬನವಾಸಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಿದ್ದೇವೆ ಎನ್ನುತ್ತಾರೆ ನಿರ್ದೇಶಕ ಶರಣ್ ಗದ್ವಾಲ್.

ಸಂಕಲನಕಾರ‌ ಕೆಂಪರಾಜ್, ಛಾಯಾಗ್ರಾಹಕ ಗಿರಿ ಅವರು ಈ ಚಿತ್ರದ ಕುರಿತು ಮಾತನಾಡಿದರು.

ಸಚಿನ್ ಸುವರ್ಣ, ನೀನಾಸಂ ಅಶ್ವಥ್, ರಮೇಶ್ ಪಂಡಿತ್, ಶೃಂಗೇರಿ ರಾಮಣ್ಣ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಫಿಲ್ಮ್ ಚೇಂಬರ್ ಗೆ ನೂತನ ಅಧ್ಯಕ್ಷರಾಗಿ ಭಾಮ.ಹರೀಶ್ ಆಯ್ಕೆ: ಸಾ.ರಾ.ಗೋವಿಂದು ಬಣಕ್ಕೆ ಸೋಲು…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64 ನೇ ವಾರ್ಷಿಕ‌ ಚುನಾವಣೆ ನಡೆದಿದ್ದು, ಭಾ.ಮ.ಹರಿಶ್ ಬಣಕ್ಕೆ ಭರ್ಜರಿ ಗೆಲುವು ಲಭಿಸಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿ ಆರು ಗಂಟೆಯವರೆಗೆ ನಡೆಯಿತು. ಈ ಬಾರಿ ಶೇ. 62 ರಷ್ಟು ಮತದಾನ ನಡೆಯಿತು. ಒಟ್ಟು
1176 ಮತದಾನವಾಗಿದೆ. ಆ ಪೈಕಿ
796 ನಿರ್ಮಾಪಕರು, 301 ವಿತರಕರು, 679 ಪ್ರದರ್ಶರು ಈ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಭಾ. ಮ. ಹರೀಶ್ ಅವರು ಅತೀ ಹೆಚ್ಚು 781 ಮತಗಳನ್ನು‌ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ್ತೊಮ್ಮೆ ಅಧ್ಯಕ್ಷ ಸ್ಥಾನ ಬಯಸಿ ಸ್ಪರ್ಧಿಸಿದ್ದ
ಸಾ.ರಾ.ಗೋವಿಂದು ಅವರು, 378 ಮತದಾನಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.


ಉಪಾಧ್ಯಕ್ಷ ರಾಗಿ ಜೈ ಗದೀಶ್, ಶ್ರೀನಿವಾಸ್, ಖಜಾಂಚಿಯಾಗಿ ಸಿದ್ಧರಾಜು, ಗೌರವ ಕಾರ್ಯದರ್ಶಿಯಾಗಿ ಸುಂಸರ್ ರಾಜ್, ಕುಮಾರ್, ಕುಶಾಲ್ ಇತರರು ಆಯ್ಕೆಯಾಗಿದ್ದಾರೆ.
ಸಾ.ರಾ.ಗೋವಿಂದು ಬಣದ ವಿರುದ್ಧ ಭಾ.ಮ.ಹರೀಶ್ ಬಣ ಭರ್ಜರಿ ಗೆಲುವು ಸಾಧಿಸಿದ್ದು, ಕನ್ನಡ ಚಿತ್ರರಂಗದ ಸೇವೆಗೆ ಸದಾ ಸಿದ್ಧ ಎಂದು ಬಣ ತಿಳಿಸಿದೆ.

Categories
ಸಿನಿ ಸುದ್ದಿ

ಬಾಂಡ್ ರವಿ ಭರ್ಜರಿ ಹೊಡೆದಾಟ: ಮಂಡ್ಯ ಹೈದನ ಖದರ್ ಹೇಗಿತ್ತು ಗೊತ್ತಾ…?

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗಲೇ 70ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಬೆಂಗಳೂರಿನ HMTಯಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿದೆ.

ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಾಹಸ ಸಂಯೋಜನೆಯಲ್ಲಿ ಭರ್ಜರಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಭರ್ಜರಿ ಆಕ್ಷನ್ ಸೀನ್ಸ್ ಭಾಗಿಯಾಗಿದ್ದರು.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದೊಂದು ಕಮರ್ಷಿಯಲ್, ಆಕ್ಷನ್-ಲವ್ ಸ್ಟೋರಿ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದಾರೆ.

ಈ‌ ಹಿಂದೆ ನರಸಿಂಹಮೂರ್ತಿ ಮಾದ ಮತ್ತು ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದರು. ಪ್ರಮೋದ್ ಗೆ ಜೋಡಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ನಟಿಸ್ತಿದ್ದಾರೆ.

ಮಲ್ಲಿಕಾರ್ಜುನ್ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ಖ್ಯಾತ ನಟ ರವಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದಾರೆ.

ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್ – ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಮಧುರ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಸಿನಿಮಾಕ್ಕಿದೆ.

error: Content is protected !!