Categories
ಸಿನಿ ಸುದ್ದಿ

ಇದು ಹೊಸಬರ ಡಬ್ಬ ಚಿತ್ರ: ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್

ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಪೂರ್ಣ ಪ್ರಮಾಣ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಪ್ರಕಾಶ್ ಮೊದಲ ಕನಸಿಗೆ ಮಂಜು ಗುರಪ್ಪ ಹಣ ಹಾಕಿದ್ದು, ರಾಮ್ ಗುಡಿ ನಾಯಕನಾಗಿ ನಟಿಸಿದ್ದು, ಆದ್ಯಾ ಪ್ರಿಯಾ ಹರಿತಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಚಿತ್ರತಂಡ ತಂಡ ಭಾಗಿಯಾಗಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಈ ವೇಳೆ ಮಾತನಾಡಿದ ನಿರ್ದೇಶಕ ಪ್ರಕಾಶ್ ಕೆ (ಅಂಬ್ಳೆ), ಈ ಸಿನಿಮಾದಲ್ಲಿ ಖಾಲಿ ಡಬ್ಬ ಕೂಡ ಒಂದು ಪಾತ್ರ. ವಯಸ್ಸು ಸಮಯ ಮೀರಿದೆ ಪ್ರತಿಯೊಬ್ಬರ ಲೈಫು ಖಾಲಿ. ಹೀಗಾಗಿ ಚಿತ್ರಕ್ಕೆ ಖಾಲಿ ಡಬ್ಬ ಎಂದು ಹೆಸರು ಇಡಲಾಗಿದೆ. ಈ ಹಿಂದೆ ಹತ್ತು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ಈ ಅನುಭವದಿಂದ ಈಗ ನಿರ್ದೇಶನಕ್ಕಿಳಿದಿದ್ದೇನೆ. ಚಿತ್ರಕಥೆ, ಸಂಭಾಷಣೆ ಬರೆದು ಸಿನಿಮಾ ನಿರ್ದೇಶನ ಮಾಡುತ್ತಿದ್ದೇನೆ,. ಐದು ಹಾಡುಗಳಿಗೆ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದು ಸಂಗೀತ ನಿರ್ದೇಶನ ಮಾಡಿದ್ದಾರೆ. ಇಡೀ ತಂಡಕ್ಕೆ ನಾಗೇಂದ್ರ ಪ್ರಸಾದ್ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು,

ನಟ ರಾಮ್ ಗುಡಿ ಮಾತನಾಡಿ, ಖಾಲಿ ಡಬ್ಬ ಟೈಟಲ್ ಇಟ್ಟಾಗ್ಲೇ ನೆಗೆಟಿವ್ ಟಾಕ್ ಆಗಿತ್ತು. ಇನ್ನೂ ಕೆಲವರು ಚೆನ್ನಾಗಿದೆ ಎಂದರು. ಮೂಲ ಕಥೆಗಾರರು ಜೀವನವೊಂದು ಖಾಲಿ ಡಬ್ಬಾ ಅಂತಾ ಇಡೀ ಎಂದರು. ಇದು ಕೇವಲ ಸಿನಿಮಾವಲ್ಲ. ತೇರು ಇದ್ದಂಗೆ. ಎಲ್ಲರೂ ಕೈ ಜೋಡಿಸಿದರು. ಸರಿಯಾದ ಸಮಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡರೆ ಮಾತ್ರ ಜೀವನವೆಂಬ ಡಬ್ಬ ತುಂಬುತ್ತದೆ, ಇಲ್ಲ ಎಂದರೆ ಜೀವನೇ ಖಾಲಿ ಡಬ್ಬವಾಗುತ್ತದೆ ಎಂದರು.

ವಿ.ನಾಗೇಂದ್ರ ಪ್ರಸಾದ್ ಮಾತನಾಡಿ, ಡೈರೆಕ್ಟರ್ ಹೇಳಿದಂತೆ ಸಿನಿಮಾದಲ್ಲಿ ಖಾಲಿ ಡಬ್ಬಾ ಅಕ್ಷಶರಃ ಪಾತ್ರ. ಡಬ್ಬವನ್ನು ಸಂಕೇತವಾಗಿ ಇಟ್ಟುಕೊಂಡು ಕಥೆ ಹೇಳಲಾಗಿದೆ. ಎಮೋಷನಲ್, ಲವ್, ಫ್ಯಾಮಿಲಿ ಎಲ್ಲಾ ಇರುವಂತಹ ಕಥೆ,. ಕಾಲ್ಪನಿಕ ಅನಿಸಿದ್ರೂ ವಾಸ್ತವ ಅನಿಸುವ ಕಥೆ ಚಿತ್ರದಲ್ಲಿದೆ. ಈ ಸಿನಿಮಾದಲ್ಲಿನಟ ಅದ್ಭುತವಾಗಿ ನಟಿಸಿದ್ದಾರೆ. ನಾಯಕಿಯರು ಇಬ್ಬರು ಚೆನ್ನಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಒಳ್ಳೆ ಹಾಡುಗಳು ಬಿದ್ದಿವೆ ಎಂದು ತಿಳಿಸಿದರು.

ಖಾಲಿ ಡಬ್ಬ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಬೆಂಗಳೂರು ಮಂಡ್ಯ ಮೈಸೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ಕುರಿ ಪ್ರತಾಪ್, ಮಜಾಭಾರತ ಸೀತಾರಾಮ್, ಸುಧಾ, ಹನುಮಕ್ಕ ಹಾಗೂ ವಿ ನಾಗೇಂದ್ರ ಪ್ರಸಾದ್ ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದ ಜೊತೆಗೆ ಈ ಚಿತ್ರಕ್ಕೆ ಸಾಹಿತ್ಯ ಬರೆದು ಹಾಡುಗಳಿಗೆ ಸಂಗೀತವನ್ನು ನಾಗೇಂದ್ರ ಪ್ರಸಾದ್ ಒದಗಿಸಿದ್ದಾರೆ.ಎಸ್ ಯು ಎ ಎಂಟರ್ ಟೈನ್ಮೆಂಟ್ ನಡಿ ಮಂಜು ಗುರಪ್ಪ ನಿರ್ಮಾಣ ಮಾಡಿದ್ದು, ಅಪ್ಪಾಜಿ, ಸೌಮ್ಯಾ ರಾಮ್, ಲಕ್ಷ್ಮೀ ಮಹೇಂದ್ರ, ಚಿಕ್ಕೇಗೌಡ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.

ಲಕ್ಕಿ ಕ್ಯಾಮೆರಾ ಹಿಡಿದಿದ್ದು, ವೆಂಕಟ್ ಯುಡಿವಿ ಸಂಕಲನ, ಗಿರೀಶ್ ನೃತ್ಯ ಸಂಯೋಜನೆ ಖಾಲಿ ಡಬ್ಬಾ ಚಿತ್ರಕ್ಕಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಸೆನ್ಸಾರ್ ಅಂಗಳದಲ್ಲಿರುವ ಚಿತ್ರ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ.

Categories
ಸಿನಿ ಸುದ್ದಿ

ಗೋಲ್ಡ್ ರೇಟ್ ಗಗನ: ಮಾರಿಗೋಲ್ಡ್ ವಿಭಿನ್ನ; ಟ್ರೇಲರ್ ಬಂತು ಏಪ್ರಿಲ್ 5 ಕ್ಕೆ ಚಿತ್ರ ರಿಲೀಸ್

ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು ಮಾರಿಗೋಲ್ಡ್ ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ ಹಾಗೂ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಹೀಗೆ ಪಾತ್ರಗಳ ಮೇಲೆ ಇಡೀ ಕಥೆ ಸುತ್ತುತ್ತದೆ. ಸಂಪತ್ ಮೈತ್ರೇಯಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ನಿರ್ಮಾಪಕ ರಘುವರ್ಧನ್ , ಇದು ಆಕ್ಷನ್, ಥ್ರಿಲ್ಲರ್ ಜಾನರ್ ಚಿತ್ರ. ಬೆಂಗಳೂರು, ಸಕಲೇಶಪುರ ಸುತ್ತ ಮುತ್ತ ಚಿತ್ರೀಕರಣ ನಡೆಸಿದ್ದೇವೆ ಎಂದು ಹೇಳಿದರು.
ನಿರ್ದೇಶಕ ರಾಘವೇಂದ್ರ ಎಂ.ನಾಯ್ಕ್ ಮಾತನಾಡಿ, ಈ ಚಿತ್ರ ಆಗಲು ನಿರ್ಮಾಪಕ ರಘುನಂದನ್, ದಿಗಂತ್ ಹಾಗೂ ವಿಜಯ್ ಭರಮಸಾಗರ ಕಾರಣ. ಹಲವು ವರ್ಷಗಳಿಂದ ಜೊತೆಯಾಗಿ ಕೆಲಸ ಮಾಡಿದ ಕಲಾವಿದರೇ ಇದರಲ್ಲಿದ್ದರಿಂದ ಎಲ್ಲೂ ತೊಂದರೆಯಾಗಲಿಲ್ಲ ಎಂದರು.

ನಟ ದಿಗಂತ್ ಮಾತನಾಡಿ ನಿರ್ದೇಶಕ ರಘು ಜೊತೆ ಹಿಂದೆಯೇ ಕೆಲಸ ಮಾಡಬೇಕಿತ್ತು. ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದೇವೆ. ಹೊಗೆ ಧೂಳಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಒಮ್ಮೊಮ್ಮೆ ಏಳೆಂಟು ಟೇಕ್ ಆಗುತ್ತಿತ್ತು. ಚಿತ್ರ ನೋಡಿದಾಗ ಯಾಕೆ ಅಷ್ಟೊಂದು ಟೇಕ್ ತೆಗೆದುಕೊಂಡರು ಎನ್ನುವುದು ಗೊತ್ತಾಯಿತು.

ನಾನೇನಾ ಆಕ್ಟ್ ಮಾಡಿರುವುದು ಅನ್ನಿಸಿತು. ನನ್ನ ಬೆನ್ನು ನಾನೇ ತಟ್ಟಿಕೊಂಡು ಖುಷಿ ಪಟ್ಟೆ . ನಿರ್ಮಾಪಕರು ತುಂಬಾ ತಿಳಿದುಕೊಂಡಿದ್ದಾರೆ. ಅವರೇ ನಿರ್ದೇಶಕರಾಗಿದ್ದರೂ ಹೊಸ ಪ್ರತಿಭೆಗೆ ಅವಕಾಶ ಕೊಟ್ಟಿದ್ದಾರೆ. ವೀರ ಸಮರ್ಥ ಒಳ್ಳೇ ಸಾಂಗ್ ಕೊಟ್ಟಿದ್ದಾರೆ ಎಂದರು.

ನಟಿ ಸಂಗೀತ ಮಾತನಾಡಿ ಶಾಲೆಯಲ್ಲಿ ಇರುವಾಗ ದಿಗಂತ್ ಮೇಲೆ ಕ್ರಷ್ ಆಗಿತ್ತು. ಅವರ ಜೊತೆ ಫೋಟೋ ತೆಗೆಸಿಕೊಂಡರೆ ಸಾಕು ಅನ್ನಿಸಿತ್ತು. ಈಗ ಅವರ ಜೊತೆ ನಟಿಸಿದ್ದ ಖುಷಿ ಆಗಿದೆ. ಅವರ ಜೊತೆ ಲವ್ ಸ್ಟೋರಿ ಚಿತ್ರ ಮಾಡುವ ಆಸೆ ಇತ್ತು ಆದರೆ ಆಕ್ಷನ್ ಸಿನಿಮಾ ಸಿಕ್ಕಿತ್ತು. ದಿಗಂತ್ ಜೊತೆ ನಟಿಸುತ್ತಿರುವುದಕ್ಕೆ ಖುಷಿ ಇದೆ ಎಂದು ಹೇಳಿಕೊಂಡರು.

ಕಲಾವಿದರಾದ ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಗಣೇಶ್ ರಾವ್ ಕೇಸರ್ ಕರ್, ವಜ್ರಾಂಗ್ ಶೆಟ್ಟಿ, ಮಹಂತೇಶ್ ಹಿರೇಮಠ್ ,ಸಂಗೀತ ನಿರ್ದೇಶಕ ವೀರ್ ಸಮರ್ಥ, ಸಂಭಾಷಣೆಕಾರ ರಘು ನಿಡವಳ್ಳಿ, ಸಾಹಿತಿ ಕವಿರಾಜ್, ಛಾಯಾಗ್ರಾಹಕ ಕೆಎಸ್ ಚಂದ್ರಶೇಖರ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Categories
ಸಿನಿ ಸುದ್ದಿ

ಜೀನಿ ಫಸ್ಟ್ ಲುಕ್ ರಿಲೀಸ್: ಇದು ತಮಿಳು ನಟ ಜಯಂ ರವಿ ಚಿತ್ರ

ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು ನಟ ಜಯಂರವಿ ಜೀನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್ ಜೂನಿಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ.

ಜೀನಿ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿದೆ. ಸರಪಣಿಯಲ್ಲಿ ಬಂಧಿಯಾಗಿರುವ ಜಯಂರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್ ನಲ್ಲಿ ಮಿಂಚಿದ್ದಾರೆ.

ಜಯಂರವಿ ನಾಯಕನಾಗಿ ನಟಿಸಿರುವ ಕಲ್ಯಾಣಿ ಪ್ರಿಯದರ್ಶನ್, ಕೃತಿ ಶೆಟ್ಟಿ ಮತ್ತು ವಾಮಿಕಾ ಗಬ್ಬಿ ನಾಯಕಿಯರಾಗಿ ನಟಿಸಿದ್ದಾರೆ. ಆಸ್ಕರ್ ವಿಜೇತ ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಜೀನಿ ಚಿತ್ರದ 75% ಶೂಟಿಂಗ್ ಕಂಪ್ಲೀಟ್ ಆಗಿದ್ದು, ಕೇವಲ 3 ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ. ಇನ್ನೂ 10 ದಿನಗಳಲ್ಲಿ ಆ ಚಿತ್ರೀಕರಣ ಮುಗಿಸಿ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ತೊಡಗಿಸಿಕೊಳ್ಳಲಿದೆ.

ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್‌ನ ಡಾ. ಇಶಾರಿ ಕೆ. ಗಣೇಶ್ ಜೀನಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮಹೇಶ್ ಮುತ್ತುಸ್ವಾಮಿ ದೃಶ್ಯಗಳನ್ನು ಕ್ಯಾ,ಮೆರಾ ಹ್ಯಾಂಡಲ್ ಮಾಡಿದ್ದು, ಪ್ರದೀಪ್ ಇ ರಾಗವ್ ಸಂಕಲನ, ಯಾನಿಕ್ ಬೆನ್ ಆಕ್ಷನ್ ದೃಶ್ಯಗಳ ನಿರ್ದೇಶನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಹೊಸಪೇಟೆಯಲ್ಲಿ ಯುವ ಅಬ್ಬರ: ಯುವ ಪ್ರೀ ರಿಲೀಸ್ ಸಂಭ್ರಮ

“ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ಚಿತ್ರದಲ್ಲಿ ನಟಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಭಾಗವಹಿಸಿದ್ದರು. ಚಿತ್ರದ ಅನೇಕ ತಂತ್ರಜ್ಞರು ಸಹ ಉಪಸ್ಥಿತರಿದ್ದರು.

“ಯುವ” ಚಿತ್ರ ಆಗಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಕಾರಣ.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು(ಯುವ ರಾಜಕುಮಾರ್)” ವನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದರು. ವಿಜಯ್ ಕಿರಗಂದೂರ್ ಅವರು ಒಪ್ಪಿ ಈ ಚಿತ್ರ ನಿರ್ಮಾಣ ಮಾಡಿದರು. ಯುವ ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಯುವ ಅವರು ಓಡುವ ಸನ್ನಿವೇಶವನ್ನು ಚಿತ್ರದ ಮೊದಲ ಸನ್ನಿವೇಶವಾಗಿ ಚಿತ್ರಿಸಿಕೊಳ್ಳಲಾಗಿದೆ. ಕಾರಣ, ಯುವ ಅವರು ಯಾವಾಗಲೂ ಚಿತ್ರರಂಗದಲ್ಲಿ ಓಡುವ ಕುದುರೆಯಾಗಿರಲಿ ಎಂದು. ಇನ್ನು ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ.

ಇದೇ ಮಾರ್ಚ್ 29 ರಂದು ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ, ನನ್ನ ತಂಡಕ್ಕೆ ಹಾಗೂ ವಿಶೇಷವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

ನಾನು ಮೊದಲು ನನ್ನ‌ ಚಿಕ್ಕಪ್ಪ ಪುನೀತ್ ರಾಜಕುಮಾರ್ ಹಾಗೂ ಚಿಕ್ಕಮ್ಮ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ಯುವ ರಾಜಕುಮಾರ್, ಏಕೆಂದರೆ ನನ್ನನ್ನು ನಾಯಕನನ್ನಾಗಿ ಮಾಡಿ ಎಂದು ಅವರಿಬ್ಬರು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಸರ್ ಗೆ ಹೇಳಿದ್ದಾರೆ. ಅವರಿಂದಲೇ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ನಾನು ಚಿರ ಋಣಿ.

ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಹಿರಿಯ ನಟರಾದ ಅಚ್ಯುತಕುಮಾರ್, ಸುಧಾರಾಣಿ ಮುಂತಾದವರಿಂದ ಸಾಕಷ್ಟು ಕಲಿತಿದ್ದೇನೆ‌. ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್ ಮುಂತಾದವರು “ಯುವ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಈ ಸಮಾರಂಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರ ಗಾಯನ, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಸಹ ಅದ್ಭುತವಾಗಿ ಮೂಡಿಬಂತು.

Categories
ಸಿನಿ ಸುದ್ದಿ

ಸಿದ್ಲಿಂಗು2 ಶುರುವಾಯ್ತು: ಯೋಗಿ ಮತ್ತೆ ಬಂದ್ರು

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾನ ಕೈಗೆತ್ತಿಕೊಂಡಿದ್ದಾರೆ. ಲೂಸ್ಮಾದ ಯೋಗಿ ಜೊತೆಗೇನೇ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಮೋಹಕತಾರೆ ರಮ್ಯಾ & ಆಂಡಾಳಮ್ಮ ಇರ್ತಾರಾ..? ಡಬಲ್ ಮೀನಿಂಗ್ ಇರುತ್ತಾ ಇರಲ್ವಾ ಅನ್ನೋದ್ರ ಕಂಪ್ಲೀಟ್ ಕಹಾನಿ ಇದು.

ಸಿದ್ಲಿಂಗು ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ಮೇಕಿಂಗ್. ಹೌದು.. ಎಲ್ಲಾ ಌಂಗಲ್ನಿಂದ ಸಿದ್ಲಿಂಗು ವ್ಹಾವ್ ಫೀಲ್ ತರಿಸಿದ ಸಿನಿಮಾ ಆಗಿತ್ತು. ಇದೀಗ ಅದ್ರ ಸೀಕ್ವೆಲ್ ಸಿದ್ಲಿಂಗು-2 ಸೆಟ್ಟೇರಿದೆ.

ಜಮಾಲಿಗುಡ್ಡ ಚಿತ್ರದ ನಿರ್ಮಾಪಕ ಶ್ರೀಹರಿ ರೆಡ್ಡಿ ಅವ್ರು ತಮ್ಮ ನಿಹಾರಿಕಾ ಫಿಲಂಸ್ ಬ್ಯಾನರ್ನಡಿ ಈ ಚಿತ್ರವನ್ನ ನಿರ್ಮಿಸುತ್ತಿದ್ದು, ವಿಜಯ್ ಪ್ರಸಾದ್ ಅವರೇ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಅಬ್ಬಿಗೆರೆ ಬಳಿ ಇರೋ ಶೆಟ್ಟಿಹಳ್ಳಿ ವಾರ್ಡ್ನ ನಿವಾಸಿಯಾದ ಶ್ರೀಹರಿ ರೆಡ್ಡಿ ಅವ್ರ ಮನೆದೇವ್ರ ಆಲಯದಲ್ಲಿ ಸಿನಿಮಾ ಮುಹೂರ್ತ ಕಂಡಿದೆ. ನಂತ್ರ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ, ಮಾಧ್ಯಮಗಳಿಗೆ ಒಂದಷ್ಟು ಮಾಹಿತಿ ನೀಡಿತು.

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಸಿನಿಮಾಗಳ ಬಳಿಕ ಡಬಲ್ ಮೀನಿಂಗ್ ಡೈಲಾಗ್ಸ್ಗೆ ಕಡಿವಾಣ ಹಾಕಿ, ಹೊಸ ಹುರುಪು ಹುಮ್ಮಸ್ಸಿನಿಂದ ಸಿದ್ಲಿಂಗು-2 ಮಾಡೋಕೆ ಮುಂದಾಗಿದ್ದಾರೆ ವಿಜಯ್ ಪ್ರಸಾದ್. ಇಲ್ಲಿ ಬರೀ ಮೀನಿಂಗ್ ಇರಲಿದೆ. ಡಬಲ್ ಮೀನಿಂಗ್ ಇರಲ್ಲ ಅಂತ ಜನಕ್ಕೆ ಕೈ ಮುಗಿದರು. ಅಲ್ಲದೆ, ಯಾರೂ ನಂಬಲಾರದ ಸ್ಥಿತಿಯಲ್ಲಿದ್ದ ತನ್ನನ್ನ ನಂಬಿದ ಪ್ರೊಡ್ಯೂಸರ್ಗೆ ಥ್ಯಾಂಕ್ಸ್ ಹೇಳಿದ್ರು. ಈ ಬಾರಿ 6ರಿಂದ 60 ವರ್ಷದ ಎಲ್ಲರೂ ನೋಡಬಹುದಾದ ಸಿನಿಮಾ ಕೊಡೋ ಭರವಸೆ ನೀಡಿದ್ರು.

ನಾಯಕನಟ ಲೂಸ್ಮಾದ ಯೋಗಿ ಮಾತನಾಡಿ, ಇದು ನನ್ನ ಕರಿಯರ್ಗೆ ಮಹತ್ವದ ತಿರುವು ಕೊಟ್ಟ ಸಿನಿಮಾ. ಹಾಗಾಗಿ ಅದ್ರ ಸೀಕ್ವೆಲ್ ಬರ್ತಿರೋದು ಖುಷಿಯ ವಿಚಾರ. ಹದಿನೈದು ವರ್ಷದ ಗೆಳತಿ ಸೋನು ಗೌಡ ಜೊತೆ ಇಲ್ಲಿಯವರೆಗೂ ಸಿನಿಮಾ ಮಾಡೋ ಅವಕಾಶಗಳು ಸಿಗಲೇ ಇಲ್ಲ. ಇದೀಗ ಒಟ್ಟಿಗೆ ಕೆಲಸ ಮಾಡ್ತಿರೋದು ಸಂತೋಷವಾಗ್ತಿದೆ. ರಮ್ಯಾ ಅವ್ರು ಇರಲ್ಲ, ಆಂಡಾಳಮ್ಮನನ್ನ ಬಿಡಲ್ಲ ಅಂದ್ರು.

ಕಿರಗೂರಿನ ಗಯ್ಯಾಳಿಗಳು ಸಿನಿಮಾದ ಪಾತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಡೈರೆಕ್ಟರ್, ಸಿದ್ಲಿಂಗು-2ಗೆ ಆಫರ್ ಮಾಡಿದ್ದು ನಿಜಕ್ಕೂ ಸರ್ಪ್ರೈಸ್ ಅಂದ್ರು ಸೋನು ಗೌಡ. ಕಲಾವಿದೆಯಾಗಿ ನಾನು ಕೊಟ್ಟ ಪಾತ್ರಕ್ಕೆ ಜೀವ ತುಂಬುತ್ತೇನೆ ಅಂತ ಅವಕಾಶ ನೀಡಿದ ಡೈರೆಕ್ಟರ್ಗೆ ಧನ್ಯವಾದ ಹೇಳಿದ್ರು, ಅಲ್ಲದೆ ಯೋಗಿ ಬಗ್ಗೆ ಕೊಂಡಾಡಿದ್ರು.

ಅನೂಪ್ ಸೀಳಿನ್ ಸಂಗೀತ, ಅರಸು ಅಂತಾರೆ ಸಾಹಿತ್ಯ ಚಿತ್ರಕ್ಕಿರಲಿದ್ದು, ಪದ್ಮಜಾ ರಾಜ್, ಆಂಟೊನಿ ಕಮಲ್, ಮಹಾಂತೇಶ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿರಲಿದೆ. ಮುಂದಿನ ವಾರದಿಂದ ಶೂಟಿಂಗ್ ಶುರುವಾಗಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಮಾಡಲು ಟೀಂ ನಿರ್ಧರಿಸಿದೆ.

Categories
ಸಿನಿ ಸುದ್ದಿ

ತೆಲುಗು ನಟ ಮೋಹನ್ ಬಾಬು ಹುಟ್ದಬ್ಬದಂದೇ ವಿವಿ ವಾರ್ಷಿಕೋತ್ಸವ

ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಹಾಗೂ ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಅದ್ಧೂರಿಯಾಗಿ ನೆರವೇರಿದೆ.

ತೆಲುಗಿನ ಖ್ಯಾತ ನಟ ಮೋಹನ್‍ ಬಾಬು ಅವರ ಹುಟ್ಟುಹಬ್ಬ ಮತ್ತು ಮೋಹನ್‍ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಇತ್ತೀಚಿಗೆ ತಿರುಪತಿಯಲ್ಲಿ ಅದ್ದೂರಿಯಾಗಿ ನೆರವೇರಿದ್ದು ವಿಶೇಷ. ಈ ಸಂದರ್ಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್‍ ಲಾಲ್,‍ ಬಾಲಿವುಡ್‍ ಖ್ಯಾತ ನಟ ಮುಖೇಶ್‍ ರಿಶಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಮೋಹನ್‍ ಬಾಬು, ವಿಷ್ಣು ಮಂಚು, ‘ಕಣ್ಣಪ್ಪ’ ಚಿತ್ರತಂಡದ ಸದಸ್ಯರು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Categories
ಸಿನಿ ಸುದ್ದಿ

ತಪಸ್ಸಿ ಇದು ಮಹಿಳಾ ಪ್ರಧಾನ ಚಿತ್ರ: ರವಿಚಂದ್ರನ್ ವಿಶೇಷ ಪಾತ್ರ

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ. ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿ ಇದೆ. ಅದನ್ನು ಆರೇಳು ತಿಂಗಳಿನಿಂದ ನೀವೇ ಮಾಡಬೇಕು ಎಂಬ ಹಠ ಅವರದ್ದು. ಮ್ಯಾಥ್ಯೂ ನನಗೆ ತುಂಬಾ ಕ್ಲೋಸ್ ಫ್ರೆಂಡ್. ತುಂಬಾ ಶಿಸ್ತಿನಿಂದ ನಡೆದುಕೊಳ್ಳುವ ವ್ಯಕ್ತಿ. ರವಿ ಬೋಪಣ್ಣ ಸಿನಿಮಾದಿಂದ ನನಗೆ ಪರಿಚಯ. ಅದಕ್ಕೂ ಮುಂಚೆಯಿಂದಲೂ ಗಾಂಧಿನಗರದಲ್ಲಿ ಇದ್ದಾರೆ. ಅವರೇ ಈ ಸ್ಟೋರಿ ಮಾಡಿದ್ದಾರೆ. ನೀವೇ ಮಾಡಬೇಕು. ಒಂದು ಸಾಮಾಜಿಕ ಸಂದೇಶ ಸಾರಬೇಕು. ತೂಕವಾದ ಪಾತ್ರ. ಇಡೀ ಸಿನಿಮಾಗೆ ನ್ಯಾಯ ಒದಗಿಸಲು ನನ್ನ ಸೆಲೆಕ್ಟ್ ಮಾಡಿದ್ದಾರೆ ಎಂದರು.

ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಮಾತನಾಡಿ, ರವಿಚಂದ್ರನ್ ಸರ್ ಅವರಿಂದಲೇ ಈ ಪ್ರಾಜೆಕ್ಟ್ ಶುರುವಾಗಿದೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಈ ಚಿತ್ರದಲ್ಲಿ ಸ್ಟ್ರಾಂಗ್ ಮೆಸೇಜ್ ಇದೆ. ಜನರಿಗೆ ಅದು ತಲುಪಬೇಕು ಎಂದರೆ ರವಿಚಂದ್ರನ್ ಸರ್ ಅಂತಹ ತಾಕತ್ತು ಇರುವ ವ್ಯಕ್ತಿ ಬಿಟ್ಟು ಬೇರೆ ಯಾರು ಇಲ್ಲ ಎನಿಸಿತು. ಇದು ಮಹಿಳಾ ಪ್ರಧಾನ ಸಿನಿಮಾ. ಇದ್ರಲ್ಲಿ ಒಂದು ಸ್ಟ್ರಾಂಗ್ ಮೆಸೇಜ್ ಇದೆ ಎಂದರು.

ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾವಾಗಿರುವ ತಪಸ್ಸಿಯಲ್ಲಿ ಪ್ರಾಧ್ಯಾಪಕರಾಗಿ ಡಾಕ್ಟರ್ ವಿ ರವಿಚಂದ್ರನ್ ನಟಿಸ್ತಿದ್ದು, ಅಮ್ಮಯ್ರ ಗೋಸ್ವಾಮಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ವಿನಯ ಪ್ರಸಾದ್, ಪ್ರಜ್ವಲ್, ಸಚಿನ್, ಅನುಷ ಕಿಣಿ, ಭಾಸ್ಕರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ತಪಸ್ಸಿ ಸಿನಿಮಾಗೆ ವಿರೇಶ್ ಕ್ಯಾಮರಾ ಹಿಡಿಯುತ್ತಿದ್ದು, ಅರುಣ್ . ಪಿ.ಥಾಮಸ್ ಸಂಕಲನ, ಆರವ್ರಿಷಿಕ್ ಸಂಗೀತ ನಿರ್ದೇಶನವಿರಲಿದೆ. ಸ್ಪೆನ್ಸರ್ ಮ್ಯಾಥ್ಯೂ ನಿರ್ದೆಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದು, ಆರ್ ಗಂಗಾಧರ್ ಕಾರ್ಯಕಾರಿ ನಿರ್ಮಾಪಕನಾಗಿ ಸಾಥ್ ಕೊಟ್ಟಿದ್ದಾರೆ. ಬೆಂಗಳೂರು ಸುತ್ತಮುತ್ತ ‘ತಪಸ್ಸಿ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

Categories
ಸಿನಿ ಸುದ್ದಿ

ರಾಮ್ ಚರಣ್ ಜೊತೆ ಶ್ರೀದೇವಿ ಪುತ್ರಿ ಸಿನಿಮಾ ಶುರು: ಇದು ಚೆರ್ರಿ 16ನೇ ಚಿತ್ರ

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹೈದ್ರಾಬಾದ್ ನಲ್ಲಿ ನೆರವೇರಿದೆ.

ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು. ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಇದು ರಾಮ್‌ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಾಮ್‌ಚರಣ್ ಜೋಡಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ಅನಿಸುತ್ತಿರುವುದು ವಿಶೇಷ.

Categories
ಸಿನಿ ಸುದ್ದಿ

ಮಿಸ್ ಗೈಡ್ ಮಾಡಿದ ಮಂಜು ಕವಿ! ಹೊಸ ಸಿನಿಮಾ ಟೀಸರ್ ಬಂತು

ಸೀಟಡೀಲ್ ಫಿಲಂಸ್ ಹಾಗೂ ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಹಾಗೂ ಸುಬ್ಬು ನಿರ್ಮಿಸಿರುವ ಮಿಸ್ ಗೈಡ್ ಚಿತ್ರಕ್ಕೆ ಮಂಜುಕವಿ ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದು, ಸಂಗೀತವನ್ನು ನೀಡಿರುವ “ಮಿಸ್ ಗೈಡ್” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಟೀಸರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಗಗನ್ ರಾಜ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದವರು “ಮಿಸ್ ಗೈಡ್” ಬಗ್ಗೆ ಮಾಹಿತಿ ನೀಡಿದರು.

ಇದು ನಾನು ನಿರ್ದೇಶಿಸಿರುವ ಎರಡನೇ ಚಿತ್ರ. ನನ್ನ ಕಥೆ ಮೆಚ್ಚಿ ನಾಗರಾಜ್ ಹಾಗೂ ಸುಬ್ಬು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಾವು – ಮುಂಗುಸಿಯ ಕಥೆಯನ್ನು ಆದರ್ಶವಾಗಿಟ್ಟುಕೊಂಡು ಈ ಕಥೆ ಹೆಣೆಯಲಾಗಿದೆ.ಮುಂಗುಸಿಯೊಂದು ಮಗುವನ್ನು ಕಾಪಾಡಲು ಹಾವಿನೊಂದಿಗೆ ಸೆಣೆಸಾಡುತ್ತದೆ. ಆದರೆ ಮುಂಗುಸಿಯ ಬಾಯಲ್ಲಿ ರಕ್ತ ನೋಡಿದ ಮಗುವಿನ ತಾಯಿ ಮುಂಗುಸಿ ತನ್ನ ಮಗುವಿಗೆ ಏನೋ ಮಾಡಿದೆ ಅಂದುಕೊಳ್ಳುತ್ತಾಳೆ.

ಈ ಕಥೆಯೇ ನಮ್ಮ ಚಿತ್ರಕ್ಕೆ ಸ್ಪೂರ್ತಿ. ಇನ್ನು ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಎಲ್ಲಾ ಮುಕ್ತಾಯವಾಗಿದ್ದು, ಚಿತ್ರ ತೆರೆಗೆ ಬರುವ ಹಂತದಲ್ಲಿದೆ. ಚಿತ್ರತಂಡದ ಸಹಕಾರದಿಂದ “ಮಿಸ್ ಗೈಡ್” ಅಂದುಕೊಂಡ ಹಾಗೆ ಬಂದಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ನಾನೇ ಗೀತರಚನೆ ಮಾಡಿ ಸಂಗೀತ ನೀಡಿದ್ದೀನಿ. ತಾಯಿ – ಮಗನ ಸೆಂಟಿಮೆಂಟ್ ಹಾಡನ್ನು ಜನಪ್ರಿಯ ಗಾಯಕ ಗುರುಕಿರಣ್ ಹಾಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಮಂಜು ಕವಿ.

ಚಿತ್ರದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾಗಿರುವುದಾಗಿ ನಿರ್ಮಾಪಕರಾದ ನಾಗರಾಜ್ ಹಾಗೂ ಸುಬ್ಬು ಹೇಳಿದರು. ಚಿತ್ರದ ಪ್ರಮುಖ ಪಾತ್ರದಲ್ಲಿ ನಟನೆ ಕೂಡ ಮಾಡಿರುವುದಾಗಿ ಸುಬ್ಬು ತಿಳಿಸಿದರು.

ಚಿತ್ರದ ಕಥೆ ಹಾಗೂ ನನ್ನ ಪಾತ್ರ ಎರಡು ಚೆನ್ನಾಗಿದೆ ಎಂದರು ನಾಯಕ ನಿತೀಶ್ ವಿನಯ್ ರಾಜ್. ಮತ್ತು ಸುಬ್ಬು,ಫರೀನ್ ಹಾಗೂ ರಕ್ಷ ಈ ಚಿತ್ರದ ನಾಯಕಿಯರು.

ನಟರಾದ ಜಗದೀಶ್ ಕೊಪ್ಪ, ಪ್ರಾಣೇಶ್, ಹಿನ್ನೆಲೆ ಸಂಗೀತ ನೀಡಿರುವ ವಿನು ಮನಸು ಹಾಗೂ ಸಾಹಸ ನಿರ್ದೇಶಕ ಮಾಸ್ ಮಾದ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಹ ನಿರ್ದೇಶಕರಾಗಿ ಎಸ್‌ ಜೆ ಸಂಜಯ್,
ಸಂಗೀತ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ. ಸಾಕಷ್ಟು ರಂಗಭೂಮಿ ಕಲಾವಿದರೆ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ.

Categories
ಸಿನಿ ಸುದ್ದಿ

ಝೈದ್ ಖಾನ್ ಹೊಸ ಚಿತ್ರದ ಪೋಸ್ಟರ್ ರಿಲೀಸ್: ಇದು ಅನಿಲ್ ಕುಮಾರ್ ಚಿತ್ರ

“ಬನಾರಸ್” ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

error: Content is protected !!