Categories
ಸಿನಿ ಸುದ್ದಿ

ಹೊಸ ವರ್ಷಕ್ಕೆ ಮ್ಯಾಟ್ನಿ ಸಾಂಗ್: ನೀನಾಸಂ ಸತೀಶ್ ನಟನೆ ಸಿನಿಮಾಗೆ ಡಾಲಿ ಸಾಥ್

ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಚಿತ್ರ “ಮ್ಯಾಟ್ನಿ”. ಬಹು ನಿರೀಕ್ಷಿತ ಈ ಚಿತ್ರದ ” ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ ಶಿವರಾಜ್ ಕೆ.ಆರ್ ಪೇಟೆ ಹೆಜ್ಜೆ ಹಾಕಿದ್ದಾರೆ. ಹೊಸವರ್ಷದ ಹರುಷವನ್ನು ಹೆಚ್ಚಿಸುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ನಿರ್ಮಿಸಿರುವ, ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಮ್ಯಾಟ್ನಿ” ಚಿತ್ರಕ್ಕಿದೆ. ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. .

Categories
ಸಿನಿ ಸುದ್ದಿ

ಶಿವಣ್ಣನ ಹೊಸ ಸಿನಿಮಾಗೆ ದಿನಕರ್ ತೂಗುದೀಪ ನಿರ್ದೇಶಕ

ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸ ವರ್ಷಕ್ಕೆ ಘೋಷಣೆಯಾಗಿದೆ. ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ.

ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Categories
ಸಿನಿ ಸುದ್ದಿ

ಜನವರಿಗೆ ಅಲೆಕ್ಸಾ ರಿಲೀಸ್: ಇದು ಅದಿತಿ ಪ್ರಭುದೇವ ಅಭಿನಯದ ಚಿತ್ರ

ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ.

ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿ.ಚಂದ್ರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದು, ಎ.ಪಿ.ಒ ಸಂಗೀತ ನೀಡಿದ್ದಾರೆ. ಸಾಯಿಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ಚಂದ್ರು, ರಾಮು, ಕಲೈ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ತೇಜ್ ನಾಯಕನಾಗಿ ಅಭಿನಯಿಸಿದ್ದಾರೆ‌. ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ,
ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಶೆಫ್ ಚಿದಂಬರನ ಜೊತೆ ಚಲ ರೆಚೆಲ್ ಡೇವಿಡ್

“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ ” ಶೆಫ್ ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ “ಅನು” ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌. ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ.

ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ “ಶೆಫ್ ಚಿದಂಬರ” ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್, ಕ್ಯಾರೆಕ್ಟರ್ ಟೀಸರ್ ಮೂಲಕ ಮನೆಮಾತಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಬಿಗ್ ಬಾಸ್ ಹುಡುಗಿ ಶೃತಿ ಪ್ರಕಾಶ್ ಅಭಿನಯದ ಫ್ರೈಡೆ ಚಿತ್ರ ಶುರು: ಇದು ಹೊಸ ದಿನಚರಿ ನಿರ್ದೇಶಕರ ಸಿನಿಮಾ

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ “ಮೇಡ್ ಇನ್ ಬೆಂಗಳೂರು” ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಫ್ರೈಡೆ” ಚಿತ್ರಕ್ಕೆ ಚಾಲನೆ ಸಿಕ್ಕಿದೆ. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ “ಹೊಸ ದಿನಚರಿ” ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Dees films ಸಂಸ್ಥೆ ನಿರ್ಮಾಣದ ನಾಲ್ಕನೇ ಚಿತ್ರ ಹಾಗೂ Dees films ಸಂಸ್ಥೆ, shoolin media ಸಂಸ್ಥೆಯ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಎರಡನೇ ಚಿತ್ರ “ಫ್ರೈಡೆ”. ಈ ಹಿಂದೆ “ಆಯನ”, ” ಹೊಸ ದಿನಚರಿ ” ಹಾಗೂ ” ಗ್ರೇ ಗೇಮ್ಸ್” ಚಿತ್ರಗಳನ್ನು ನಿರ್ಮಾಣ ಮಾಡಿದ್ದೆವು. ಇದು ನಾಲ್ಕನೇ ಚಿತ್ರ. “ಆಯನ” ಹಾಗೂ “ಗ್ರೇ ಗೇಮ್ಸ್” ಚಿತ್ರಗಳನ್ನು ನಾನೇ ನಿರ್ದೇಶಿಸಿದ್ದೇನೆ‌. “ಫ್ರೈಡೆ” ಚಿತ್ರವನ್ನು “ಹೊಸ ದಿನಚರಿ” ಚಿತ್ರದ ನಿರ್ದೇಶಕರಾದ ಕೀರ್ತಿ ಹಾಗೂ ವೈಶಾಖ್ ನಿರ್ದೇಶಿಸುತ್ತಿದ್ದಾರೆ. ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ನಿರ್ಮಾಪಕರು. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಸದಭಿರುಚಿ ಚಿತ್ರಗಳನ್ನು ನಿರ್ಮಿಸುವ ಇರಾದೆ ಇದೆ ಎಂದರು ಕ್ರಿಯೇಟಿವ್ ನಿರ್ಮಾಪಕರಾದ ಗಂಗಾಧರ್ ಸಾಲಿಮಠ.

ಸಿನಿಮಾದವರಿಗೆ “ಫ್ರೈಡೆ” ಎಂದರೆ ವಿಶೇಷ. ನಮಗೂ ಹಾಗೆ. ಏಕೆಂದರೆ ನಮ್ಮ ಚಿತ್ರದ ಹೆಸರು “ಫ್ರೈಡೆ”. ಚಿತ್ರ ಬಿಡುಗಡೆಯಾಗುವುದು ” ಫ್ರೈಡೆ “. ಆ “ಫ್ರೈಡೆ”ಗೂ ನಮ್ಮ ಚಿತ್ರಕ್ಕೂ ನಂಟಿದೆ. “ಫ್ರೈಡೆ” ಬಿಡುಗಡೆಯಾದ ಹೊಸ ಚಿತ್ರವನ್ನು ನೋಡಲು ಹೋಗಿದ್ದ ದಂಪತಿ ಜೀವನದಲ್ಲಿ ನಡೆಯಬಾರದ ಘಟನೆ ನಡೆದು ಹೋಗುತ್ತದೆ.

ಅದೇ ಚಿತ್ರದ ಕಥಾಹಂದರ. ಮಧುಸೂದನ್ ಗೋವಿಂದ್, ಶೃತಿ ಪ್ರಕಾಶ್ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ‌. ನಾನು ಕಥೆ ರಚಿಸಿದ್ದು. ಚಿತ್ರಕಥೆಯನ್ನು ನಾನು ಹಾಗೂ ಕೀರ್ತಿ ಶೇಖರ್ ಬರೆದಿದ್ದೇವೆ. ಜನವರಿ ಮೊದಲವಾರದಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದು ನಿರ್ದೇಶಕರಲ್ಲೊಬ್ಬರಾದ ವೈಶಾಖ್ ಪುಷ್ಪಲತ.

ಮತ್ತೊಬ್ಬ ನಿರ್ದೇಶಕರಾದ ಕೀರ್ತಿ ಶೇಖರ್ ಮಾತನಾಡಿ, “ಫ್ರೈಡೆ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಮೂರು ಹಾಡುಗಳಿದೆ. ಅಶ್ವಿನ್ ಹೇಮಂತ್ ಸಂಗೀತ ನಿರ್ದೇಶನ ಹಾಗೂ ಸಂದೀಪ್ ವಲ್ಲೂರಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಲಿದೆ ಎಂದರು.

ಚಿತ್ರದ ಪ್ರಮುಖ ಪಾತ್ರಧಾರಿಗಳಾದ ಮಧುಸೂದನ್ ಗೋವಿಂದ್, ಶೃತಿ ಪ್ರಕಾಶ್ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ನಿರ್ಮಾಪಕರಾದ ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ಸಹ “ಫ್ರೈಡೆ” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಶ್ರೀ ಮುರಳಿಗೆ ಹೊಸಬರ ಪರಾಕ್! ಬರ್ತ್ ಡೇ ಗೆ ಸ್ಪೆಷಲ್ ಸಿನಿಮಾ ಅನೌನ್ಸ್

ಸ್ಯಾಂಡಲ್‌ವುಡ್‌ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಈ ಬಾರಿ ಅಭಿಮಾನಿಗಳ ಜೊತೆ ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದಾರೆ. ಕುಟುಂಬದಲ್ಲಿ ಸಾಕಷ್ಟು ನೋವುಗಳು ಇದ್ದರೂ ಅದನ್ನು ಬದಿಗಿಟ್ಟು ಫ್ಯಾನ್ಸ್ ಭೇಟಿ ಮಾಡುತ್ತಿದ್ದಾರೆ. ಶ್ರೀ ಜನ್ಮದಿನ ಅಂಗವಾಗಿ ಸಖತ್ ಉಡುಗೊರೆಗಳು ಸಿಕ್ಕಿವೆ.

ಬಂತು ಪರಾಕ್ ಟೈಟಲ್ ಪೋಸ್ಟರ್

ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಯುವ ಪ್ರತಿಭೆಗಳ ಜೊತೆ ಬಘೀರ ಕೈ ಜೋಡಿಸಿದ್ದಾರೆ. ರೋರಿಂಗ್ ಸ್ಟಾರ್ ಜನ್ಮೋತ್ಸವದ ಸ್ಪೆಷಲ್ ಆಗಿ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಸಾರಥ್ಯದ ಚಿತ್ರಕ್ಕೆ ಪರಾಕ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್ ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಕ್ರಿಯೇಟರ್ ಹಾಗೂ ಡೈರೆಕ್ಟರ್ ಆಗಿರುವ ಹಾಲೇಶ್ ಗೆ ಮಂಜುನಾಥ್ ಬರವಣಿಗೆಯಲ್ಲಿ ಸಾಥ್ ಕೊಟ್ಟಿದ್ದಾರೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಪರಾಕ್ ಸಿನಿಮಾವನ್ನು ಬ್ರ್ಯಾಂಡ್ ಕೋಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ನಡಿ ನಿರ್ಮಾಣ ಮಾಡಲಾಗುತ್ತಿದೆ. ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಬಹುತೇಕ ಬೆಣ್ಣೆ ನಗರಿ ದಾವಣಗೆರೆ ಪ್ರತಿಭೆಗಳೇ ಒಂದಾಗಿ ಮಾಡುತ್ತಿರುವ ಪರಾಕ್ ಚಿತ್ರದ ಟೈಟಲ್ ಪೋಸ್ಟರ್ ಆಕರ್ಷಕವಾಗಿದೆ. ಹೊಸ ಅವತಾರದಲ್ಲಿ ಶ್ರೀ ದರ್ಶನ ಕೊಟ್ಟಿದ್ದಾರೆ. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ ಪರಾಕ್ ಬಳಗ ಮೇ ಅಥವಾ ಜೂನ್ ತಿಂಗಳಿನಿಂದ ಶೂಟಿಂಗ್ ಅಖಾಡಕ್ಕೆ ಧುಮುಕುವ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಮಂಡ್ಯಹೈದ ಟೈಟಲ್ ಸಾಂಗ್ ರಿಲೀಸ್: ಇಂಟ್ರಡಕ್ಷನ್ ಹಾಡಲ್ಲಿ ಅಭಯ್ ಹುಕ್ ಸ್ಟೆಪ್ಸ್

ಕನ್ನಡ ಚಿತ್ರರಂಗದಲ್ಲಿ ಮಂಡ್ಯ ಹೆಸರಿಗೆ ದೊಡ್ಡ ಮೌಲ್ಯವಿದೆ. ರೆಬೆಲ್ ಸ್ಟಾರ್‌ ಅಂಬರೀಶ್ ತವರು ಜಿಲ್ಲೆ ಅಲ್ಲದೆ ಆ ಭಾಗದ ಕಥೆ ಹೇಳುವ ಹಲವಾರು ಚಿತ್ರಗಳು ತೆರೆಗೆ ಬಂದಿವೆ. ಈಗ ಮತ್ತೊಬ್ಬ ಮಂಡ್ಯ ಹೈದ ತನ್ನ ಪ್ರೀತಿಗಾಗಿ ಹೇಗೆಲ್ಲ ಹೋರಾಡಿದ ಎಂಬುದನ್ನು ನಿರ್ದೇಶಕ‌ ವಿ.ಶ್ರೀಕಾಂತ್ ಅವರು ಹೇಳ ಹೊರಟಿದ್ದಾರೆ. ಮಂಡ್ಯಹೈದ ಚಿತ್ರದ ಟೈಟಲ್ ಸಾಂಗ್ ಕಾವೇರಮ್ಮನ ಮಡಿಲಲ್ ಹಾಡಿ ಬೆಳೆದವ್ನೆ ಎಂಬ ಸಾಹಿತ್ಯವಿರುವ ನಾಯಕನ ಇಂಟ್ರಡಕ್ಷನ್ ಹಾಡು ಬಿಡುಗಡೆಯಾಗಿದೆ, ಟೀಸರ್ ಬಿಡುಗಡೆಯೂ ಆಗಿದೆ.

ಈ ಚಿತ್ರದಲ್ಲಿ ಯುವನಟ ಅಭಯ್ ಚಂದ್ರಶೇಖರ್ ಮಂಡ್ಯ ಹುಡುಗನಾಗಿ ಕಾಣಿಸಿಕೊಂಡಿಸಿದ್ದು, ಭೂಮಿಕಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಮನಸಾಗಿದೆ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟಿದ್ದ, ಅಭಯ್ ಈಗ ತಮ್ಮ ಎರಡನೇ ಚಿತ್ರದಲ್ಲಿ ಪಕ್ಕಾ ಮಂಡ್ಯಹುಡುಗನಾಗಿ ಹೊರಹೊಮ್ಮಿದ್ದಾರೆ.

ತೇಜಸ್ ಕ್ರಿಯೇಶನ್ಸ್‌ ಮೂಲಕ ಅಭಯ್ ತಂದೆ ಚಂದ್ರಶೇಖರ್ ಈ ಚಿತ್ರವನ್ನು ನಿರ್ಮಿಸಿದ್ದು, ವಿ.ಶ್ರೀಕಾಂತ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ವೇದಿಕೆಯಲ್ಲಿ ನಿರ್ಮಾಪಕ ಚಂದ್ರಶೇಖರ್ ಮಾತನಾಡುತ್ತ ಇದು ನಮ್ಮ ಬ್ಯಾನರ್‌ನ ಐದನೇ ಹಾಗೂ ಅಭಯ್ ನಟನೆಯ ಎರಡನೇ ಚಿತ್ರ. ಟೈಟಲ್ ಕೇಳಿದಾಗ ವಿಲೇಜ್ ಕಾನ್ಸೆಪ್ಟ್ ಅನ್ನೋದು ಗೊತ್ತಾಗುತ್ತೆ, ಪ್ರೀತಿ ಎಲ್ಲರಿಗೂ ಗೊತ್ತಿರುವ ಪದ. ಅದೊಂದು ವಿಸ್ಮಯ, ಇದರ ಅರ್ಥ ಯಾರಿಗೂ ಗೊತ್ತಿಲ್ಲ, ಅದನ್ನು ಪಡೆಯಲು ಕೆಲವರು ಸಾಯ್ತಾರೆ, ಮತ್ತೆ ಕೆಲವರು ಸಾಯಿಸ್ತಾರೆ, ನಮ್ಮ ಹೀರೋ ಕೂಡ ಈ ಪ್ರೀತಿಯನ್ನು ಪಡೆಯಲು ಹೋಗಿ ಯಾರನ್ನಾದರೂ ಸಾಯಿಸ್ತಾನಾ ಅಥವಾ ತಾನೇ ಸಾಯ್ತಾನಾ ಎನ್ನುವುದೇ ಕಥೆ.

ನಮ್ಮ ಚಿತ್ರ ಶೇ.90ರಷ್ಟು ಕಥೆ ಮಂಡ್ಯ ಭಾಗದಲ್ಲೇ ನಡೆದರೆ, ಉಳಿದದ್ದು ಬೆಂಗಳೂರಲ್ಲಿ ನಡೆಯುತ್ತದೆ. 15 ಜನ ಕಾಮಿಡಿ ಕಿಲಾಡಿಗಳು ಕಲಾವಿದರು ನಟಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಸುರೇಂದ್ರನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಟೈಟಲ್‌ಟ್ರ‍್ಯಾಕ್ ಇಂದು(ಸೋಮವಾರ) ಬೆಳಿಗ್ಗೆಯಷ್ಟೇ ಬಿಡುಗಡೆಯಾಗಿದೆ. ಈ ಹಾಡಿಗೆ ಕಿಶೋರ್ ಕೊರಿಯಾಗ್ರಾಪ್ ಮಾಡಿದ್ದು, ಛಾಯಾಗ್ರಾಹಕ ಮನುಗೌಡ ಸೆರೆಹಿಡಿದಿದ್ದಾರೆ, ಈಗ ಟೀಸರ್ ರಿಲೀಸಾಗಿದೆ ಎಂದರು.

ನಿರ್ದೇಶಕ ವಿ.ಶ್ರೀಕಾಂತ್ ಮಾತನಾಡಿ ಕಮರ್ಷಿಯಲ್ ಎಂಟರ್‌ಟೈನರ್ ಹಾಗೂ ಲವ್ ಜೊತೆ ಫ್ಯಾಮಿಲಿ ಸೆಂಟಿಮೆಟ್ ಚಿತ್ರ ಇದಾಗಿದ್ದು ನನ್ನ ಮೊದಲ ಚಿತ್ರಕ್ಕೆ ಇಂಥ ಒಳ್ಳೇ ತಂಡ ಸಿಕ್ಕಿರುವುದು ಖುಷಿಯಾಗಿದೆ, ಮಂಡ್ಯ ಹೈದನ ಲೈಫ್ ಸ್ಟೈಲ್ ಹೇಗಿರುತ್ತೆ, ಆತ ಲವ್ ಮಾಡಿದರೆ ಹೇಗಿರುತ್ತೆ ಅನ್ನೋದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಚಿತ್ರವೀಗ ಸೆನ್ಸಾರ್ ಹಂತದಲ್ಲಿದೆ ಎಂದರು.

ನಾಯಕ ಅಭಯ್ ಮಾತನಾಡಿ, ಚಿತ್ರದಲ್ಲಿ ನಾನು ಶಿವ ಹೆಸರಿನ ಮಂಡ್ಯ ಹುಡುಗನಾಗಿದ್ದು, ಶಿವನ ಜೀವನದಲ್ಲಿ ಆಗುವ ಘಟನೆಗಳೇ ಈ ಚಿತ್ರದ ಹೈಲೈಟ್. ಚಿತ್ರದ ಟೀಸರ್, ಸಾಂಗ್ ರಿಲೀಸಾಗಿದೆ, ಈ ಹಾಡಿಗೆ ಕಿಶೋರ್ ಅವರು ತುಂಬಾ ಚೆನ್ನಾಗಿ ಹುಕ್‌ಸ್ಟೆಪ್ಸ್ ಮಾಡಿದ್ದಾರೆ, 3 ಸಾಹಸ ದೃಶ್ಯಗಳನ್ನು ಥ್ರಿಲ್ಲರ್ ಮಂಜು ಅವರು ಮಾಡಿಕೊಟ್ಟಿದ್ದಾರೆ, ನಮ್ಮ ತಂದೆಯವರು ಎಲ್ಲಾ ವಿಭಾದಲ್ಲಿ ಇನ್ ವಾಲ್ವ್ ಆಗಿ ಚಿತ್ರ ಅತ್ಯುತ್ತಮವಾಗಿ ಬರುವಂತೆ ನೋಡಿಕೊಂಡಿದ್ದು, ಸಿನಿಮಾಗೆ ಏನು ಬೇಕೋ ಅದನ್ನು ಪ್ರೊವೈಡ್ ಮಾಡಿದ್ದಾರೆ. ಚಿತ್ರದಲ್ಲಿ ಪ್ರಮುಖವಾಗಿ 3 ಮೆಸೇಜ್‌ಗಳಿವೆ, ಪ್ರೀತಿಸುವವರಿಗೆ, ಪೋಷಕರಿಗೆ ಹಾಗೂ ಸ್ನೇಹಿತರಿಗೆ ಸಂದೇಶವಿದೆ ಎಂದು ಹೇಳಿದರು. ಉಳಿದಂತೆ ನಟರಾದ ತೇಜಸ್, ಗಜೇಂದ್ರ, ದರ್ಶನ್ ಸೂರ್ಯ, ಸುಖೇಶ್, ಚಿದಂಬರ ಚಿಕ್ಕದಾಗಿ ಮಾತನಾಡಿದರು.

ನಾಯಕಿ ಭೂಮಿಕಾ ಗೀತಾ, ಮನೆಯೇ ಮಂತ್ರಾಲಯ ಸೀರಿಯಲ್ ಅಲ್ಲದೆ ೩ ಸಿನಿಮಾಗಳಲ್ಲೂ ಅಭಿನಯಿಸಿದ್ದು, ಇಲ್ಲಿ ಹಳ್ಳಿಹುಡುಗಿ ಪ್ರಿಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಬಲ ರಾಜವಾಡಿ, ಸುನಂದ ಅಲ್ಲದೆ ನಿರ್ಮಾಪಕ ಚಂದ್ರಶೇಖರ್ ಅವರು ಕಥೆಗೆ ಟ್ವಿಸ್ಟ್ ಕೊಡುವಂಥ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Categories
ಸಿನಿ ಸುದ್ದಿ

ತೆರೆ ಮೇಲೆ ಗಂಡ ಹೆಂಡ್ತಿ ಜೋಡಿ: ಸೈಕೋ ಥ್ರಿಲ್ಲರ್ ಸಿನಿಮಾಗೆ ಚಂದನ್ ಶೆಟ್ಟಿ- ನಿವೇದಿತಾ ಮೋಡಿ

ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ದಂಪತಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಪುನೀತ್ ಶ್ರೀನಿವಾಸ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ ನಂದಕಿಶೋರ್ ಅವರ ಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ ನಿರ್ದೇಶನಕ್ಕಿಳಿಯುತ್ತಿದ್ದಾರೆ.
ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು ಆರಂಭಿಸುತ್ತಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ.

ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮುಂದಿನ ತಿಂಗಳಿಂದ ಆರಂಭಿಸಿ ಬಹುತೇಕ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಬ್ಯಾಕ್ ಬೆಂಚರ್ಸ್ ಸಾಂಗ್ ರಿಲೀಸ್ ಮಾಡಿದ್ರು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್

ನೋಡುಗರಿಗೆ ಪರಿಶುದ್ಧ ಮನೋರಂಜನೆಯ ರಸದೌತಣ ಉಣಬಡಿಸಲು ಹೊಸತಂಡವೊಂದು ಸಿದ್ದವಾಗಿದೆ. ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ ” ಬ್ಯಾಕ್ ಬೆಂಚರ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಇತ್ತೀಚೆಗೆ ಈ ಚಿತ್ರದ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಕುಲ್ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆನ್ ಲೈನ್ ಮೂಲಕ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಸುಮಾರು ಒಂದು ವರ್ಷಗಳ ಕಾಲ ವರ್ಕ್ ಶಾಪ್ ನಡೆಸಿ ಈ ಚಿತ್ರದ ಚಿತ್ರೀಕರಣ ಮಾಡಿದ್ದೇವೆ‌ ಎಂದು ಮಾತನಾಡಿದ ನಿರ್ದೇಶಕ ಬಿ.ಆರ್ ರಾಜಶೇಖರ್, “ಬ್ಯಾಕ್ ಬೆಂಚರ್ಸ್” ಚಿತ್ರದಲ್ಲಿ ಮನೋರಂಜನೆ ಪ್ರಮುಖಾಂಶ. ಎಲ್ಲರಿಗೂ ಕಾಲೇಜು ದಿನಗಳನ್ನು ನೆನಪಿಸುವ ಚಿತ್ರವಿದು. ನಮ್ಮ ಚಿತ್ರದಲ್ಲಿ ಬೇರೆ ಏನು ಇಲ್ಲ.. ಮನೋರಂಜನೆಯೇ ಎಲ್ಲಾ.. ಮೂವತ್ತೈದು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ಸಾಕಷ್ಟು ಹೊಸ ಪ್ರತಿಭೆಗಳೆ ಹೆಚ್ಚಾಗಿ ಅಭಿನಯಿಸಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಹಾಗೂ ಮನೋಹರ್ ಜೋಶಿ ಅವರ ಛಾಯಾಗ್ರಹಣವಿದೆ ಎಂದರು.

ಚಿತ್ರದಲ್ಲಿ ಏಳು ಹಾಡುಗಳಿದೆ. ಮೊದಲ ಹಾಡು ಈಗ ಬಿಡುಗಡೆಯಾಗಿದೆ. ಜನಪ್ರಿಯ ಗೀತರಚನೆಕಾರರು ಹಾಗೂ ಗಾಯಕರ ಕಂಠಸಿರಿಯಲ್ಲಿ ಹಾಡುಗಳು ಮೂಡಿ ಬರುತ್ತಿದೆ. “ಲವ್ ಮಾಕ್ಟೇಲ್ 2” ಚಿತ್ರದ ನಂತರ ನಾನು ಸಂಗೀತ ನೀಡುತ್ತಿರುವ ಚಿತ್ರವಿದು ಎಂದು ಸಂಗೀತ ನಿರ್ದೇಶಕ ನಕುಲ್ ಭಯಂಕರ್ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎನ್ ಎಸ್ ಬಿ ಅಕಾಡೆಮಿ ಚೇರ್ಮನ್ ಶ್ರೀಧರ್ ಹಾಗೂ “Rajeev” “ಬ್ಯಾಕ್ ಬೆಂಚರ್ಸ್” ಗೆ ಶುಭ ಕೋರಿದರು.

ಚಿತ್ರದಲ್ಲಿ ನಟಿಸಿರುವ ಅರವಿಂದ್ ಕುಪ್ಳಿಕರ್, ರಂಜನ್ ನರಸಿಂಹಮೂರ್ತಿ, ಜತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್, ಅನುಶಾ ಸುರೇಶ್, ಮನೋಜ್ ಶೆಟ್ಟಿ, ನಮಿತಾ ಗೌಡ ಮುಂತಾದವರು ತಮ್ಮ ಪಾತ್ರ ಪರಿಚಯ ಮಾಡಿಕೊಂಡರು.

Categories
ಸಿನಿ ಸುದ್ದಿ

ಕದನ ವಿರಾಮಕ್ಕೆ ಚಾಲನೆ!

ಶ್ರೀಬ್ರಹ್ಮಲಿಂಗೇಶ್ವರ ಫಿಲಂಸ್ ಬ್ಯಾನರ್ ನಲ್ಲಿ ಕೆ.ಭಾಸ್ಕರ್ ನಾಯ್ಕ್ (ಮಾರಣಕಟ್ಟೆ) ಹಾಗೂ ಸಾಮ್ರಾಟ್ ಮಂಜುನಾಥ್.ವಿ(ಗರುಡಾಚಾರ್ ಪಾಳ್ಯ) ನಿರ್ಮಿಸುತ್ತಿರುವ‌ ಹಾಗೂ ಮುರಳಿ ಎಸ್ ವೈ ನಿರ್ದೇಶನದ “ಕದನ ವಿರಾಮ” ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಬಿಲ್ಡರ್ ಸುರೇಶ್ ಆರಂಭ‌ ಫಲಕ ತೋರಿದರು. ಉದ್ಯಮಿ ಚಿಕ್ಕಣ್ಣ ಕ್ಯಾಮೆರಾ ಚಾಲನೆ ಮಾಡಿದರು.

“ರಿವಿಲ್” ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. “ಕದನ ವಿರಾಮ” ಎಂದರೆ ಭೂಮಿ ಹಾಗೂ ಮನುಷ್ಯನ ನಡುವೆ ನಡೆಯುವ ಕಥೆ(ಲ್ಯಾಂಡ್ ವಿಚಾರವಾಗಿ). ನಿರ್ಮಾಪಕ ಭಾಸ್ಕರ್ ನಾಯ್ಕ್ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಸಂಭಾಷಣೆ ಬರೆದಿದ್ದೇನೆ. ಐದು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

ವಿ.ಮನೋಹರ್ ಸಂಗೀತ ನಿರ್ದೇಶನ ಹಾಗೂ ರಿಜೊ ಪಿ ಜಾನ್ ಅವರ ಛಾಯಾಗ್ರಹಣವಿರುವ “ಕದನ ವಿರಾಮ” ಚಿತ್ರದ ಬಹುತೇಕ ಚಿತ್ರೀಕರಣ ಕುಂದಾಪುರದಲ್ಲಿ ನಡೆಯಲಿದೆ. ಈ ತಿಂಗಳ ಕೊನೆಗೆ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಮುರಳಿ ಎಸ್ ವೈ ತಿಳಿಸಿದ್ದಾರೆ.

ಆಕಾಶ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು ಹಿಂದೆ “ನವರಂಗಿ” ಸೇರಿದಂತೆ ಎರಡು ಚಿತ್ರಗಳಲ್ಲಿ ನಟಿಸಿದ್ದರು. ಸುಮಾರು ಏಳು ವರ್ಷಗಳ ನಂತರ ಆಕಾಶ್ ಶೆಟ್ಟಿ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಛಾಯಾಶ್ರೀ “ಕದನ ವಿರಾಮ” ಚಿತ್ರದ ನಾಯಕಿ. ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ‌.

error: Content is protected !!