Categories
ಸಿನಿ ಸುದ್ದಿ

ದುಬೈನಲ್ಲಿ ಪಾಸಾಯ್ತು ಕನ್ನಡ ಚಿತ್ರ: ಡಿಸೆಂಬರ್ 13 ಕ್ಕೆ ಟೀಸರ್ ರಿಲೀಸ್

ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ “ದುಬೈ ದಸರಾ” ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ.

ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ “ಜಸ್ಟ್ ಪಾಸ್” ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

ಶ್ರೀ, ಪ್ರಣತಿ, ರಂಗಾಯಣರಘು ಸಾಧುಕೋಕಿಲ ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಮೂರನೇ ಕೃಷ್ಣಪ್ಪ ಸಿನಿಮಾದ ಹಾಡು ಬಂತು: ಇದು ಆನೇಕಲ್ ಭಾಗದ ಕಥೆ

ಲವ್ ಸ್ಟೋರಿ ಕಥೆ ಹೇಳಿ ಗೆದ್ದಿರುವ ನಿರ್ದೇಶಕ ನವೀನ್ ರೆಡ್ಡಿ ಹೊಸ ಕನಸು ‘ಮೂರನೇ ಕೃಷ್ಣಪ್ಪ’. ಅಕಿರ ಹಾಗೂ ರಿಲ್ಯಾಕ್ಸ್ ಸತ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ಅವರೀಗ ವಿಭಿನ್ನ ಶೀರ್ಷಿಕೆಯೊಂದಿಗೆ ಆನೇಕಲ್ ಭಾಗದ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ. ಸದ್ದಿಲ್ಲದೇ ಮೂರನೇ ಕೃಷ್ಣಪ್ಪ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಮೂರನೇ ಕೃಷ್ಣಪ್ಪ ಬಳಗವೀಗ ಪ್ರಮೋಷನ್ ಪಡಸಾಲೆಗಿಳಿದಿದೆ. ಅದರ ಮೊದಲ ಭಾಗವಾಗಿ ಕಳೆದ ವಾರವಷ್ಟೇ ಟೈಟಲ್ ಟೀಸರ್ ರಿಲೀಸ್ ಮಾಡಿ ಥ್ರಿಲ್ ಹೆಚ್ಚಿಸಿತ್ತು. ಇದೀಗ ಮೂರನೇ ಕೃಷ್ಣಪ್ಪ ಸಿನಿಮಾದ ಮೆಲೋಡಿ ಮಸ್ತಿಯೊಂದು ಅನಾವರಣಗೊಂಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಗೆಹರಿಯದ ಒಗಟುಗಳು ಎಂಬ ಸಾಹಿತ್ಯದ ಹಾಡು ಬಿಡುಗಡೆಯಾಗಿದೆ. ಸುಪ್ರಿತ್ ಶರ್ಮಾ ಎಸ್ ಈ ಹಾಡಿಗೆ ಸಾಹಿತ್ಯ ನೀಡುವುದರ ಜೊತೆಗೆ ಸಂಗೀತ ಕೂಡ ಒದಗಿಸಿದ್ದಾರೆ. ನಿಹಾಲ್ ಟೌರೊ ಬಗೆಹರಿಯದ ಒಗಟುಗಳು ಗೀತೆಗೆ ಧ್ವನಿಯಾಗಿದ್ದಾರೆ.

ರೆಡ್ ಡ್ರಾಗ್ಯನ್ ಫಿಲ್ಮಂಸ್ ಪ್ರೊಡಕ್ಷನ್ ಹೌಸ್ ಎರಡನೇ ಕೊಡುಗೆ ಮೂರನೇ ಕೃಷ್ಣಪ್ಪ. ಈ ಹಿಂದೆ ರಿಲ್ಯಾಕ್ಸ್ ಸತ್ಯ ಚಿತ್ರವನ್ನು ಇದೇ ಪ್ರೊಡಕ್ಷನ್ ನಡಿ ಮೋಹನ್ ರೆಡ್ಡಿ ಜಿ, ರವಿಶಂಕರ್ ನಿರ್ಮಿಸಿದ್ದರು. ಇದೀಗ ಇದೇ ಪ್ರೊಡಕ್ಷನ್ ಹೌಸ್ ನಡಿ ಇವರಿಬ್ಬರು ಮೂರನೇ ಕೃಷ್ಣಪ್ಪ ಸಿನಿಮಾಗೆ ಹಣ ಹಾಕಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಹೊತ್ತು ಬಂದಿರುವ ಈ ಚಿತ್ರದಲ್ಲಿ ಸಂಪತ್ ಮೈತ್ರೀಯಾ, ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಶ್ರೀಪ್ರಿಯಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ತುಕಾಲಿ ಸಂತೋಷ್, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ.

ಮೂರನೇ ಕೃಷ್ಣಪ್ಪ ಸಿನಿಮಾ ಆನಂದ್ ರಾಜವಿಕ್ರಮ್ ಸಂಗೀತ, ಶ್ರೀಕಾಂತ್ ಸಂಕಲನ, ಯೋಗಿ ಛಾಯಾಗ್ರಹಣವಿದೆ. ಫ್ರೆಶ್ ಕಥೆಯೊಂದಿಗೆ ಸಿನಿಮಾಪ್ರೇಮಿಗಳ ಎದುರು ಬರ್ತಿರುವ ನವೀನ್ ರೆಡ್ಡಿ ತಮ್ಮ ಹೊಸ ಪ್ರಯೋಗವನ್ನು ಜನವರಿ ಅಥವಾ ಫೆಬ್ರವರಿ ತಿಂಗಳಂದು ಪ್ರೇಕ್ಷಕ ಎದುರು ತರಲು ಯೋಜನೆ ಹಾಕಿಕೊಂಡಿದ್ದಾರೆ.

Categories
ಸಿನಿ ಸುದ್ದಿ

ದುಬೈನಲ್ಲಿ ಡಂಕಿ ಡ್ರಾಪ್-4 ಶೂಟ್

ಪಠಾಣ್ ಮತ್ತು ಜವಾನ್ ಸಿನಿಮಾದ ಯಶಸ್ಸಿನ ಅಲೆಯಲ್ಲಿರುವ ಬಾಲಿವುಡ್ ಬಾದ್ಷಾ ಶಾರುಖ್ ಖಾನ್, ತಮ್ಮ ಮುಂದಿನ ಸಿನಿಮಾ “ಡಂಕಿ”ಗಾಗಿ ಎದುರು ನೋಡುತ್ತಿದ್ದಾರೆ. ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ರಾಜ್ ಕುಮಾರ್ ಹಿರಾನಿ ನಿರ್ದೇಶನ ಡಂಕಿ ಸಿನಿಮಾ, ಡಿ.21ರಂದು ಬಿಡುಗಡೆಯಾಗಲಿದ್ದು, ಈಗಾಗಲೇ ಟ್ರೇಲರ್ ನಿಂದ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ.

ಡಂಕಿ ಡ್ರಾಪ್-3 ಬಳಿಕ ಡಂಕಿ ಡ್ರಾಪ್-4 ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಅದಕ್ಕಾಗಿ ಭರದಿಂದ ಚಿತ್ರೀಕರಣ ನಡೆಸಲಾಗಿದೆ. ಬಿಡುಗಡೆ ಸಜ್ಜಾಗಿರುವ ಹೊತ್ತಲ್ಲೇ ಇದೀಗ ಚಿತ್ರೀಕರಣ ಅಂತಾ ಹುಬ್ಬೇರಿಸಬೇಡಿ. ಡಂಕಿ ಚಿತ್ರದ ಸ್ಪೆಷಲ್ ನಂಬರ್ ಇತ್ತೀಚಿಗಷ್ಟೇ ಅಬುದಬಿಯಲ್ಲಿ ಶೂಟ್ ಮಾಡಲಾಗಿದೆ. ಸುಹಾನಾ ಖಾನ್ ಡೆಬ್ಯು ಸಿನಿಮಾದ ಪ್ರೀಮಿಯರ್ ಮುಗಿಸಿ ಯುಎಇಗೆ ಹಾರಿದ ಶಾರುಖ್ ಅಂಡ್ ಟೀಂ, ಮೂರು ದಿನ ಸ್ಪೆಷಲ್ ನಂಬರ್ ಚಿತ್ರೀಕರಣ ನಡೆಸಿದೆ.

ಶಾರುಖ್ ಖಾನ್ ಜತೆಗೆ ನಟಿ ತಾಪ್ಪಿ ಪನ್ನು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟ ವಿಕ್ಕಿ ಕೌಶಲ್ ಗೆಸ್ಟ್ ರೋಲ್ ಮಾಡಿದ್ದಾರೆ. ಸಂಜು ಸಿನಿಮಾದ ಬ್ಲಾಕ್ ಬಸ್ಟರ್ ಸಕ್ಸಸ್ ಬಳಿಕ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರು ಡಂಕಿ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

‘ಡಂಕಿ’ ಸಿನಿಮಾವನ್ನು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್‌ಟೈನ್ಮೆಂಟ್ ಹಾಗೂ ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಹಾಗೂ ಜಿಯೋ ಸಿನಿಮಾಸ್ ಬ್ಯಾನರ್‌ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಾಣ ಮಾಡಿದ್ದಾರೆ.

Categories
ಸಿನಿ ಸುದ್ದಿ

ಹಿರಿಯ ಕಲಾವಿದೆ ಲೀಲಾವತಿ ನಿಧನ

ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ (85) ಡಿಸೆಂಬರ್8 ರಂದು ನಿಧನರಾಗಿದ್ದಾರೆ.

ಶುಕ್ರವಾರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲ ನೀಡದೆ ಅವರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರಾದ ಲೀಲಾವತಿ ಅವರ ಮೂಲ ಹೆಸರು ಲೀಲಾ ಕಿರಣ್. ಆರಂಭದಲ್ಲಿ ನಾಟಕಗಳಲ್ಲಿ ಅಭಿನಯಿಸಿದ್ದರು. 1958ರಲ್ಲಿ ಸುಬ್ಬಯ್ಯ ಅವರು ನಿರ್ಮಿಸಿ ನಿರ್ದೇಶಿಸಿದ ‘ಭಕ್ತ ಪ್ರಹ್ಲಾದ’ ಚಿತ್ರದಲ್ಲಿ ನಟಿಸಿದರು. ನಂತರ ‘ಮಾಂಗಲ್ಯ ಯೋಗ’ ಚಿತ್ರದಲ್ಲಿ ಅವರಿಗೆ ಪ್ರಮುಖ ಪಾತ್ರ ಸಿಕ್ಕಿತು 1960ರಲ್ಲಿ ಬಿಡುಗಡೆಯಾದ ‘ರಣಧೀರ ಕಂಠೀರವ’ ಚಿತ್ರದಲ್ಲಿ ಅವರು ಡಾ ರಾಜಕುಮಾರ್ ಗೆ ನಾಯಕಿಯಾದರು. ಬಳಿಕ ‘ಕಿತ್ತೂರು ಚೆನ್ನಮ್ಮ’, ‘ರತ್ನಮಂಜರಿ’, ‘ಗಾಳಿಗೋಪುರ’, ‘ನಂದಾದೀಪ’, ‘ಕನ್ಯಾ ರತ್ನ’, ‘ಕುಲವಧು’, ‘ವೀರಕೇಸರಿ’, ‘ಭಕ್ತ ಕುಂಬಾರ’, ‘ಸಿಪಾಯಿ ರಾಮು’ ಮುಂತಾದ ಹಲವು ಚಿತ್ರಗಳಲ್ಲಿ ರಾಜಕುಮಾರ್ ಅವರ ಜೊತೆ ಅಭಿನಯಿಸಿದರು.

ಲೀಲಾವತಿಯವರಿಗೆ ಅತ್ಯುತ್ತಮ ಪೋಷಕ ನಟಿ ಲಭಿಸಿದೆ. ‘ಗೆಜ್ಜೆಪೂಜೆ’, ‘ಸಿಪಾಯಿ ರಾಮು’ ಹಾಗೂ ‘ಡಾಕ್ಟರ್ ಕೃಷ್ಣ’ ಚಿತ್ರಗಳಿಗೆ ಅವರು ಪ್ರಶಸ್ತಿ ಪಡೆದಿದ್ದಾರೆ. ನಟನೆ ಜೊತೆ ಅವರು ತಮ್ಮ ಮಗ ವಿನೋದ್ ರಾಜ್ ಅಭಿನಯದ ‘ಕಾಲೇಜ್ ಹೀರೋ’ ಚಿತ್ರದ ಮೂಲಕ ನಿರ್ಮಾಪಕಿಯಾದರು. ಅನಂತರ ‘ಕನ್ನಡದ ಕಂದ’, ‘ಯಾರದು?’ ಚಿತ್ರಗಳನ್ನು ನಿರ್ಮಿಸಿದರು.

Categories
ಸಿನಿ ಸುದ್ದಿ

ಯಶ್ ಸಿನಿಮಾ‌ ಘೋಷಣೆ: ಟಾಕ್ಸಿಕ್ ಸಿನಿಮಾ ಹೆಸರು: ಇದು ಕೆವಿಎನ್ ಪ್ರೊಡಕ್ಷನ್ಸ್ ಚಿತ್ರ

ಯಶ್‍ ಅಭಿನಯದ 19ನೇ ಚಿತ್ರದ ಘೋಷಣೆಯಾಗಿದೆ. ಕೆವಿಎನ್‍ ಪ್ರೊಡಕ್ಷನ್ಸ್ ಈ ಚಿತ್ರ ನಿರ್ಮಿಸುತ್ತಿದ್ದು, ಗೀತು ಮೋಹನ್‍ ದಾಸ್‍ ನಿರ್ದೇಶಿಸುತ್ತಿದ್ದಾರೆ ಅಧಿಕೃತವಾಗಿದೆ. ಅಂದಹಾಗೆ ‘ಟಾಕ್ಸಿಕ್‍’ ಎಂಬುದು ಯಶ್ ಅಭಿನಯದ ಹೊಸ ಚಿತ್ರದ ಹೆಸರು. ಯಶ್ ಅವರೇ ಇದನ್ನು ಅನೌನ್ಸ್ ಮಾಡಿದ್ದಾರೆ.

ಯಶ್‍ ಅಭಿನಯದ ‘ಕೆಜಿಎಫ್‍ 2’ ನಂತರ ಯಶ್‍ ಅಭಿನಯದ ಹೊಸ ಚಿತ್ರ ಯಾವುದೂ ಘೋಷಣೆಯಾಗಿರಲಿಲ್ಲ. ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನದಲ್ಲಿ ನಟಿಸುವ ಬಗ್ಗೆ ಮಾತು ಕೇಳಿಬರುತ್ತಿತ್ತು. ಈಗ ಯಶ್ ಅದನ್ನು ಸ್ಪಷ್ಟಪಡಿಸಿದ್ದಾರೆ.

ಈ ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಲಿದೆ ಎಂಬುದನ್ನೂ ಕೂಡ ಸ್ಪಷ್ಟಪಡಿಸಲಾಗಿದೆ.

Categories
ಸಿನಿ ಸುದ್ದಿ

ಮರೀಚಿ ಆಟ ಶುರು ಗುರು: ಡಿಸೆಂಬರ್ 8ರಿಂದ ರಾಜ್ಯಾದ್ಯಂತ ಅಬ್ಬರ

ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ ಸಿನಿಮಾದ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಡಿಸೆಂಬರ್ 8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಟೀಸರ್ ಮೂಲಕ ಗಮನಸೆಳೆದಿರುವ ಮರೀಚಿ ಸಿನಿಮಾದ ಮಸಣವು ಮನಸು ಎಂಬ ಹೃದಯ ಸ್ಪರ್ಶಿ ಗೀತೆಯನ್ನು, ಇಂದು ರೆಬಲ್ ಸ್ಟಾರ್ ಅಂಬರೀಶ್ ಪುಣ್ಯ ಭೂಮಿಯಲ್ಲಿ ಅನಾವರಣ ಮಾಡಲಾಯಿತು. ಈ ವೇಳೆ ನಿರ್ದೇಶಕ ಸಿದ್ಧ್ರುವ್ ಅಂಬಿ ಸಮಾಧಿ ಬಳಿ ಮಸಣವು ಮನಸು ಎಂಬ ಗೀತೆ ರಿಲೀಸ್ ಮಾಡಿದ್ಯಾಕೆ ಎಂಬ ಕಾರಣ ಬಿಚ್ಚಿಟ್ಟರು.

ನಿರ್ದೇಶಕ ಸಿದ್ಧ್ರುವ್ ಮಾತನಾಡಿ, ಡಿಸೆಂಬರ್ 8ರಂದು ನಮ್ಮ ಸಿನಿಮಾ ಬರ್ತಿದೆ. ನಿಮ್ಮೆಲ್ಲರ ಬೆಂಬಲ ನಮಗೆ ಇರಲಿ. ಅಂಬರೀಶ್ ಅಣ್ಣನ ಸಿನಿಮಾಗಳ ನೋಡುತ್ತಾ ಬೆಳೆದವರು. ಅವರ ಅಭಿಮಾನಿಯಾಗಿದ್ದೇನೆ. ನಾನು ಮೊದಲ ಸಿನಿಮಾ ಮಾಡುವಾಗ ಅಂಬರೀಶಣ್ಣ ಕ್ಲ್ಯಾಪ್ ಮಾಡಬೇಕೆಂಬ ಆಸೆ ಇತ್ತು. ಆದ್ರೆ ಅವರು ನಮ್ಮದೊಂದಿಗೆ ಇಲ್ಲ. ಹೀಗಾಗಿ ಅವರ ಮುಂದೆಯೇ ಒಂದು ಸಾಂಗ್ ರಿಲೀಸ್ ಮಾಡಬೇಕು ಎನಿಸಿತು. ನಮ್ಮ ತಂಡದವರು ತೀರ್ಮಾನ ಮಾಡಿ ಇಲ್ಲಿ ಸಾಂಗ್ ಬಿಡುಗಡೆ ಮಾಡಲು ನಿರ್ಧಾರ ತೆಗೆದುಕೊಂಡೆವು. ಈ ಸಾಹಿತ್ಯದ ಹಾಡಿಗೂ ಜಾಗಕ್ಕೂ ಸಂಬಂಧವಿದೆ. ಲಿರಿಕಲ್ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಸಾಹಿತ್ಯ ಅದ್ಭುತವಾಗಿದೆ. ಸಿನಿಮಾ ತುಂಬ ಚೆನ್ನಾಗಿ ಬಂದಿದೆ. ಥಿಯೇಟರ್ ನಲ್ಲಿ ಮರೀಚಿ ಸಿನಿಮಾ ನೋಡಿ ಎಂದರು.

ಮಸಣವು ಮನಸು ಎಂಬ ಹೃದಯ ಸ್ಪರ್ಶಿ ಗೀತೆಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದು, ಕೆ. ಎಸ್ ಹರಿಶಂಕರ್ ಧ್ವನಿಯಾಗಿದ್ದಾರೆ. ಮರೀಚಿ ಲವ್ ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ . ವಿಜಯ ರಾಘವೇಂದ್ರ, ಸೋನು ಗೌಡ ಜತೆಗೆ ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಎಸ್.ಎಸ್. ಆರ್‌. ಕೆ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. . ಸಸ್ಪೆನ್ಸ್ ಥ್ರಿಲ್ಲರ್‌ ಅಂಶಗಳ ಮರೀಚಿ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದ್ದು, ಪೊಲೀಸ್ ಅವತಾರದಲ್ಲಿ ವಿಜಯ್ ರಾಘವೇಂದ್ರ ಮಿಂಚಿದ್ದಾರೆ. ಡಿಸೆಂಬರ್ 8ಕ್ಕೆ ರಾಜ್ಯಾದ್ಯಂತ ಸಿದ್ಧ್ರುವ್ ಚೊಚ್ಚಲ ಕನಸ್ಸು ಪ್ರೇಕ್ಷಕರ ಎದುರು ಹಾಜರಾಗಲಿದೆ.

Categories
ಸಿನಿ ಸುದ್ದಿ

ಕೃಷ್ಣಂ ಪ್ರಣಯ ಸಖಿ ಶೂಟಿಂಗ್ ಮುಗೀತು: ಇದು ಗಣೇಶ್ ಸಿನಿಮಾ

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಡಬ್ಬಿಂಗ್ ನಡೆಯುತ್ತಿದ್ದು, ಡಬ್ಬಿಂಗ್ ಕೂಡ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಲಿದೆ.

ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು.

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ.

ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಲೇಡಿಸ್ ಬಾರ್ ಟೀಸರ್ ಮತ್ತು ಸಾಂಗ್ಸ್ ಬಂತು

ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ರಾಜಕಾರಣಿ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರೆ, ಹಾಡುಗಳನ್ನು ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಹೊರ ಬಂದಿವೆ.

“ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ‌. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ ಎಂದು ನಿರ್ದೇಶಕ ಎ.ಎನ್ ಮುತ್ತು ತಿಳಿಸಿದರು.

ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ ಟಿ.ಎಂ.ಸೋಮರಾಜು, ಸಿನಿಮಾ ರಂಗ ಪರಿಚಯವೇ ಇಲ್ಲ. ನನ್ನ ಗೆಳೆಯ ರಾಜಶೇಖರ್ ನನ್ನನ್ನು ಈ ರಂಗಕ್ಕೆ ಕರೆದುಕೊಂಡು ಬಂದಿದ್ದಾರೆ. ನಿರ್ದೇಶಕ ಎ.ಎನ್ ಮುತ್ತು ಅವರು ಹೇಳಿದ ಕಥೆ ಇಷ್ಟವಾಯಿತು ನಿರ್ಮಾಣ ಮಾಡಿದ್ದೇನೆ. ಪ್ರಮುಖಪಾತ್ರದಲ್ಲೂ ನಟಿಸಿದ್ದೇನೆ. ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹ ನೀಡಿ ಎಂದರು.

ಸಹ ನಿರ್ಮಾಪಕ ರಾಜಶೇಖರ್ ಚಿತ್ರ ಸಾಗಿ ಬಂದ ಬಗ್ಗೆ ಮಾಹಿತಿ ನೀಡಿದರು.
ಸಂಗೀತ ನಿರ್ದೇಶಕ ಹರ್ಷ ಕಾಗೋಡ್, ಛಾಯಾಗ್ರಾಹಕ ವೀನಸ್ ಮೂರ್ತಿ, ಸಾಹಸ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ಶಿವಾನಿ, ಮಾಧುರಿ, ಗಣೇಶ್ ರಾವ್, ಆರಾಧ್ಯ ಮುಂತಾದವರು “ಲೇಡಿಸ್ ಬಾರ್” ಬಗ್ಗೆ ಮಾತನಾಡಿದರು.

ಸಿರಿ ಮ್ಯೂಸಿಕ್ ನಲ್ಲಿ ಹಾಡುಗಳನ್ನು ನೋಡಿ, ನಿಮಗನಿಸಿದನ್ನು ಕಾಮೆಂಟ್ ಮಾಡಿ. ಉತ್ತಮ ಕಾಮೆಂಟ್ ಗೆ ನಿರ್ಮಾಪಕರು ಮೊಬೈಲ್‌ ನೀಡಲಿದ್ದಾರೆ ಎಂದು ಸಿರಿ ಮ್ಯೂಸಿಕ್ ಚಿಕ್ಕಣ್ಣ ತಿಳಿಸಿದರು.

Categories
ಸಿನಿ ಸುದ್ದಿ

ಮೇಗಳ ಮನೆ ಹುಡುಗನ ಕಾಂಗರೂ: ಇದು ಆದಿತ್ಯ ಚಿತ್ರ

“ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯ ಮಾತಿನ ಜೋಡಣೆ(ಡಬ್ಬಿಂಗ್) ನಡೆಯುತ್ತಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿರುವ ಕಥೆವಿದು. ಇನ್ನು “ಕಾಂಗರೂ” ಶೀರ್ಷಿಕೆ ಕುರಿತು ಹೇಳುವುದಾದರೆ, “ಕಾಂಗರೂ” ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಬಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟು ಕಾಪಾಡುತ್ತದೆ, ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಕಥೆಯಾಗಿರುತ್ತದೆ ಎಂದು ನಿರ್ದೇಶಕರು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ, ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಮಾಫಿಯಾ ಟೀಸರ್ ಗೆ ಮೆಚ್ಚುಗೆ: ಇದು ಪ್ರಜ್ವಲ್ ರೆಡ್ ಮಾರ್ಕೆಟ್ ಮಾಫಿಯಾ!

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು.
ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಮೊದಲು ಮಾತನಾಡಿದ ನಿರ್ದೇಶಕ ಲೋಹಿತ್, ಈವರೆಗೂ ಯಾರು ತೋರಿಸಿರದ “ಮಾಫಿಯಾ” ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ.‌ ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು.

ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ “ಮಾಫಿಯಾ” ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ ಎಂದರು ನಿರ್ಮಾಪಕ ಕುಮಾರ್ ಬಿ.

“ಸಿಕ್ಸರ್” ಚಿತ್ರದಿಂದ ನನ್ನ ಸಿನಿ ಜರ್ನಿ ಸಾಗಿಬಂದಿದೆ. ಮೂವತ್ತೈದು ಚಿತ್ರಗಳನ್ನು ಪೂರೈಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಇನ್ನು “ಮಾಫಿಯಾ” ಚಿತ್ರದ ಬಗ್ಗೆ ಹೇಳಬೇಕಾದರೆ, ಕುಮಾರ್ ಅವರು ಒಳ್ಳೆಯ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಲೋಹಿತ್ ಅವರ ವಯಸ್ಸು ಚಿಕ್ಕದಾಗಿದ್ದರೂ ಕೆಲಸದಲ್ಲಿ ಅಸಾಧಾರಣ. ನಾನು, ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ಪ್ರಜ್ವಲ್ ದೇವರಾಜ್.

ಪಟಪಟ ಎಂದು ಮಾತನಾಡುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕಿ ಅದಿತಿ ಪ್ರಭುದೇವ ಹೇಳಿದರು. ನಟ ಶೈನ್ ಶೆಟ್ಟಿ, ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ , ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಹಾಗೂ ಛಾಯಾಗ್ರಾಹಕ ಪಾಂಡಿಕುಮಾರ್ ಸೇರಿದಂತೆ ಅನೇಕರು “ಮಾಫಿಯಾ” ಚಿತ್ರದ ಬಗ್ಗೆ ಮಾತನಾಡಿದರು.

error: Content is protected !!