ಅರ್ಜುನ್ ಚಕ್ರವರ್ತಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ಅರ್ಜುನ್ ಚಕ್ರವರ್ತಿ ವಿವರಿಸಿದ್ದಾರೆ. ವಿಕ್ರಾಂತ್ ರುದ್ರ ನಿರ್ದೇಶನದ ವಿಜಯ ರಾಮರಾಜು ಅರ್ಜುನ್ ಚಕ್ರವರ್ತಿಯಾಗಿ ನಟಿಸಿದ್ದು, ಸಿಜಾ ರೋಸ್ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಅರ್ಜುನ್ ಚಕ್ರವರ್ತಿ , 1980ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ ಕಬಡ್ಡಿ ಆಟಗಾರ ನೈಜ ಕಥೆಯನ್ನು ಆಧರಿಸಿದೆ. ಒಬ್ಬ ಕ್ರೀಡಾಪಟುವಿನ ಜೀವನದ ಹೋರಾಟಗಳು ಮತ್ತು ಗೆಲುವಿನ ಸುತ್ತಾ ಸಿನಿಮಾ ಸಾಗುತ್ತದೆ. ಪೋಷಕ ಪಾತ್ರಗಳಲ್ಲಿ ಅಜಯ್, ದಯಾನಂದ ರೆಡ್ಡಿ, ಅಜಯ್ ಘೋಷ್ ಮತ್ತು ದುರ್ಗೇಶ್ ಇದ್ದಾರೆ.
ವಿಘ್ನೇಶ್ ಬಾಸ್ಕರನ್ ಸಂಗೀತ ಮತ್ತು ಜಗದೀಶ್ ಚೀಕಾಟಿ ಛಾಯಾಗ್ರಹಣವಿದೆ. ಗ್ಯಾನೆಟ್ ಸೆಲ್ಯುಲಾಯ್ಡ್ ಅಡಿಯಲ್ಲಿ ನಿರ್ಮಾಪಕ ಶ್ರೀನಿ ಗುಬ್ಬಾಳ ಚಿತ್ರಕ್ಕೆ ಹಣ ಹಾಕಿದ್ದಾರೆ. ಚಿತ್ರವನ್ನು ತೆಲುಗು ಮತ್ತು ತಮಿಳಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಡಬ್ ಮಾಡಲಾಗುತ್ತದೆ.
ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ಶ್ರೀನಿ ಗುಬ್ಬಾಳ, ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್” ಕೇವಲ ಸಿನಿಮಾವಲ್ಲ. ಸವಾಲುಗಳನ್ನು ಮೀರಿ ಎದ್ದುನಿಲ್ಲುವ ಮತ್ತು ನಮಗೆಲ್ಲರಿಗೂ ಸ್ಫೂರ್ತಿ ನೀಡುವ ವ್ಯಕ್ತಿಗಳ ಅದಮ್ಯ ಮನೋಭಾವಕ್ಕೆ ಗೌರವವಾಗಿದೆ. ಅರ್ಜುನ್ ಚಕ್ರವರ್ತಿ ಸಿನಿಮಾ ಮೂಲಕ ನಾವು ಮಾನವ ಇಚ್ಛೆಯ ಶಕ್ತಿಯನ್ನು ಮತ್ತು ಮಾನವ ಆತ್ಮದ ವಿಜಯವನ್ನು ಪ್ರದರ್ಶಿಸಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.
ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು.
ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ಐಶ್ವರ್ಯ ಅವರು ಈಗಾಗಲೇ ನಟಿಯಾಗಿ ಜನಪ್ರಿಯರಾಗಿದ್ದು, ಉಮಾಪತಿ ಅವರು ನಟನಾಗಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಉಮಾಪತಿ ಅವರ ತಂದೆ ತಂಬಿ ರಾಮಯ್ಯ ಹೆಸರಾಂತ ಹಾಸ್ಯನಟರಾಗಿ ಜನಮನ್ನಣೆ ಪಡೆದಿದ್ದಾರೆ.
ನಿಶ್ಚಿತಾರ್ಥದಲ್ಲಿ ಉಮಾಪತಿ ಹಾಗೂ ಐಶ್ವರ್ಯ ಅವರ ಸುಂದರ ಉಡುಗೆ ಎಲ್ಲರ ಗಮನ ಸೆಳೆಯಿತ್ತು. ಉಮಾಪತಿ ಅವರಿಗೆ ಮನೀಶ್ ಮಲ್ಹೋತ್ರ ಹಾಗೂ ಐಶ್ವರ್ಯ ಅವರಿಗೆ ಜಯಂತಿ ರೆಡ್ಡಿ ಅವರು ವಸ್ತ್ರವಿನ್ಯಾಸ ಮಾಡಿದ್ದರು. ಆಕರ್ಷಕವಾಗಿದ್ದ ರೂಬಿ ಹರಳಿನ ಬಂಗಾರದ ನಿಶ್ಚಿತಾರ್ಥದ ಉಂಗುರಗಳನ್ನು ಜೈಪುರದಿಂದ ತರಿಸಲಾಗಿತ್ತು.
2024 ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರ ಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ.
ಲಾಯಲ್ ವರ್ಲ್ಡ್ ಮಾರ್ಕೆಟ್ ನ ಎರಡನೇ ಶಾಖೆ ಬೆಂಗಳೂರಿನ ಹೆಬ್ಬಾಳದ ಫೀನಿಕ್ಸ್ ಮಾಲ್ ಆಫ್ ಏಷ್ಯಾ ನಲ್ಲಿಂದು ಶುಭಾರಂಭಗೊಂಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಾಯಲ್ ವರ್ಲ್ಡ್ ಮಾರ್ಕೆಟ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು. ದೈನಂದಿನ ಅಗತ್ಯ ವಸ್ತುಗಳ ಲಾಯಲ್ ವರ್ಲ್ಡ್ ಮಾರ್ಕೆಟ್ ಈಗಾಗಲೇ ಬೆಂಗಳೂರಿನ ವೈಟ್ ಫೀಲ್ಡ್ ಹಾಗೂ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ.
ಫೀನಿಕ್ಸ್ ಮಾಲ್ ಆಫ್ ಏಷ್ಯಾ ದಲ್ಲಿರುವ ಲಾಯಲ್ ವರ್ಲ್ಡ್ ಮಾರ್ಕೆಟ್ 25 ಸಾವಿರ ಚದರ ಅಡಿಯಷ್ಟು ವಿಸ್ತಾರವಿದ್ದು, ಒಂದು ಲಕ್ಷಕ್ಕೂ ಅಧಿಕ 100 ವಿಭಾಗಗಳ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಬ್ರ್ಯಾಂಡ್ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ.
ಲಾಯಲ್ ವರ್ಲ್ಡ್ ಮಾರ್ಕೆಟ್ ಹಲವಾರು ವಿಶೇಷತೆಗಳನ್ನು ಹೊಂದಿದೆ. ಇದು ಬ್ರೆಡ್, ಟೋಸ್ಟ್‌ಗಳು, ಚೌಕ್ಸ್ ಪೇಸ್ಟ್ರಿಗಳು ಮತ್ತು ಖಾರದ ಟ್ರೀಟ್‌ಗಳಂತಹ ವಿವಿಧ ತಾಜಾ ಉತ್ಪನ್ನಗಳು. ಹಾಗೆಯೇ ಪ್ರಪಂಚದಾದ್ಯಂತದ ಅತ್ಯುತ್ತಮ ಹಣ್ಣುಗಳು ಇಲ್ಲಿ ದೊರೆಯುತ್ತವೆ. ಯಾವುದೇ ವಯೋಮಾನದವರು ಬಂದರು ವಸ್ತುಗಳನ್ನು ಕೊಂಡುಕೊಳ್ಳಲು ಗೊಂದಲವಾಗುವುದಿಲ್ಲ. ಕ್ವಾಲಿಟಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಮೇಯ ಇಲ್ಲಿ ಇಲ್ಲವೇ ಇಲ್ಲ.
ಒಂದೇ ಸೂರಿನಡಿ ವಿವಿಧ ರೀತಿಯ ದೈನಂದಿನ ವಸ್ತುಗಳ ದೊರೆಯುತ್ತದೆ. ಅದರಲ್ಲೂ ಬೇಕರಿ ಉತ್ಪನ್ನಗಳಾದ ಕೇಕ್, ಬನ್, ಬ್ರೆಡ್ ಹಾಗೂ ಐಸ್ ಕ್ರೀಮ್ ರುಚಿ ಅದ್ಭುತವಾಗಿದೆ. ಹೊರಗಡೆ ಮಾರುಕಟ್ಟೆಗಿಂತ ಇಲ್ಲಿ ಕಡಿಮೆ ದರದಲ್ಲಿ ತರಕಾರಿಗಳು ಸಿಗುತ್ತವೆ. ಸಖತ್ ಫ್ರೆಶ್ ಎನಿಸುವ ಉತ್ಪನ್ನಗಳು ದೊರೆಯುತ್ತಿವೆ. ದುಬೈ ಮಾಲ್ ರೀತಿ ಲಾಯಲ್ ವರ್ಲ್ಡ್ ಮಾರ್ಕೆಟ್ ಫೀಲ್ ಕೊಡುತ್ತದೆ ಎನ್ನುತ್ತಾರೆ ಗ್ರಾಹಕರು.
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ “she is in love” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನವಿದೆ.
ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.
ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ.
ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ. ದರ್ಶನ್ ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾ ಪತ್ರ ನೀಡಿದೆ. “ಗರಡಿ” ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸೌಮ್ಯ ಫಿಲಂಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.
ನಿರಂಜನ್ ಬಾಬು ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಅವರ ಸಂಕಲನವಿರುವ “ಗರಡಿ” ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸೃಷ್ಟಿ ಪಾಟೀಲ್.
ಸೂರ್ಯ ನಾಯಕರಾಗಿ ನಟಿಸಿದ್ದಾರೆ. ಬಿ.ಸಿ.ಪಾಟೀಲ್, ಸೋನಾಲ್ ಮೊಂತೆರೊ, ರವಿಶಂಕರ್, ಧರ್ಮಣ್ಣ, ಸುಜಯ್ ಬೇಲೂರ್, ರಾಘವೇಂದ್ರ, ಚೆಲುವರಾಜ್, ಬಲ ರಾಜವಾಡಿ, ತೇಜಸ್ವಿನಿ ಪ್ರಕಾಶ್, ನಯನ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ವಿಕಾ ನಾಯ್ಡು ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.
ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ.
ನಟ ಅನೀಶ್ ಮಾತನಾಡಿ, ಪ್ರತಿಯೊಂದು ಅಂತ್ಯದಲ್ಲೊಂದು ಆರಂಭ ಇರುತ್ತದೆ ಎಂಬ ಹಾಗೇ ಬೆಂಕಿ ಕಲೆಕ್ಷನ್ ಎಲ್ಲಾ ನೋಡಿ ಎಂಡ್ ಪಾಯಿಂಟ್ ನಲ್ಲಿ ಇದ್ದೇನಾ ಅನಿಸಿತು. ನನ್ನಿಂದ ಪ್ರೇಕ್ಷಕರು ಬೇರೆಯದ್ದನ್ನೂ ನಿರೀಕ್ಷೆ ಮಾಡುತ್ತಿದ್ದಾರೆ ಎಂಬುವುದು ಗೊತ್ತಾಯಿತು. ನನಗೆ ಅಂತಾ ಮಾಡಿಕೊಂಡ ಸಬ್ಜೆಕ್ಟ್ ನ್ನು ನಿನಗೆ ಅಂತಾ ಹೇಳುತ್ತೇನೆ. ಆರಾಮ್ ಅರವಿಂದ್ ಸ್ವಾಮಿ ಎಂದು ಅನೌನ್ಸ್ ಮಾಡಿದ್ದೇನೆ ಎಂದು ಅಭಿಷೇಕ್ ಶೆಟ್ಟಿ ಹೇಳಿದರು. ನಿನಗೆ ಅಂತಾ ಮಾಡಿಕೊಂಡಿದ್ದನ್ನೂ ನನಗೆ ಯಾಕೆ ಹೇಳುತ್ತೀಯಾ? ಅಂದಾಗ, ಇಲ್ಲ ನಿಮಗೆ ಮಾಡುತ್ತೇನೆ ಎಂದು ಕಥೆ ಹೇಳಿದರು. ಕಥೆ ಇಷ್ಟವಾಯ್ತು 15 ನಿಮಿಷದಲ್ಲಿ ಸಿನಿಮಾ ಮಾಡೋಣಾ ಎಂದು ರೆಡಿಯಾದೆವು. ಸಿನಿಮಾ ಹುಚ್ಚಿರುವ ಎಲ್ಲರೂ ಸೇರಿ ಮಾಡಿರುವ ಸಿನಿಮಾವೇ ಆರಾಮ್ ಅರವಿಂದ್ ಸ್ವಾಮಿ ಎಂದರು.
ನಟಿ ಮಿಲನಾ ನಾಗರಾಜ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಕಥೆಯನ್ನು ಅಭಿಷೇಕ್ ಅವರು ಬಂದು ಕಥೆ ಹೇಳಿದರು. ಅನೀಶ್ ಅವರ ಜೊತೆ ಸಿನಿಮಾ ಮಾಡೋದು..ಈ ಎರಡು ನನಗೆ ಎಕ್ಸೈಟ್ ಅನಿಸಿತು. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವ ಅನುಭವ ನನಗೆ. ನಾನು ಸಿನಿಮಾ ನೋಡಿಲ್ಲ. ಸಿನಿಮಾ ನೋಡಲು ನಾನು ಎಕ್ಸೈಟ್ ಆಗಿದ್ದಾನೆ. ಅನೀಶ್ ಅವರಿಗೆ ಈ ಕಥೆ ವಿಭಿನ್ನವಾಗಿದೆ ಅನಿಸುತ್ತದೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿದೆ ಎಂದರು.
ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ, ಗುಳ್ಟು ಪ್ರೊಡ್ಯೂಸರ್ ಹಾಗೂ ಅಕಿರಾ ಸಿನಿಮಾ ಪ್ರೊಡ್ಯೂಸರ್ ಒಂದೊಳ್ಳೆ ಕಥೆ ಇದ್ದರೆ ಹೇಳಿ ಎಂದರು. ಕಥೆ ಹೇಳಿದೆ. ಅನೀಶ್ ಅವರಿಗೆ ಕಥೆ ಹುಡುಕುತ್ತಿರುವುದು ಎಂದು ಗೊತ್ತಾಯಿತು. ನಾನು ಒಂದು ಮಾಸ್ ಕಥೆ ಮಾಡಿಕೊಂಡು ಬಂದು ಹೇಳಿದೆ. ಒಪ್ಪಿಕೊಳ್ತಾರೆ ಎಂದುಕೊಂಡಿದ್ದರು, ಅವರು ಔಟ್ ಆಫ್ ದಿ ಬಾಕ್ಸ್ ಕಥೆ ಮಾಡಲು ರೆಡಿ ಇದ್ದರು. ಆಗ ಹೇಳಿದ್ದೇ ಆರಾಮ್ ಅರವಿಂದ್ ಸ್ವಾಮಿ ಕಥೆ. ಎಲ್ಲರೂ ಬಂದು ಆರಾಮ್ ಇದ್ದೀಯಾ ಅಂದು ಕೇಳ್ತಾರೆ. ಯಾರಿಗೂ ನಮ್ಮ ಕಷ್ಟ ಹೇಳೋದಿಕ್ಕೆ ಆಗಲ್ಲ. ಹೇಳಿದ್ರೆ ಸಹಾಯ ಮಾಡ್ತೀಯಾ ಅನ್ನುತ್ತೇವೆ. ಅವರು ನಕ್ಕು ಸುಮ್ಮನೇ ಆಗುತ್ತಾರೆ. ಈ ಬೇಸ್ ಲೈನ್ ಮೇಲೆ ಶುರುವಾದ ಕಥೆ. ಅದ್ಭುತವಾಗಿ ಸಿನಿಮಾ ಬಂದಿದೆ. ಎರಡು ಸಿನಿಮಾ ಆದಾಗ ಎಲ್ಲರೂ ಒಳ್ಳೆ ಭವಿಷ್ಯವಿದೆ ಎನ್ನುವರು. ಆದರೆ ಆರಾಮ್ ಅರವಿಂದ್ ಸ್ವಾಮಿಯೇ ನನ್ನ ಭವಿಷ್ಯ. ಈ ಸಿನಿಮಾದಿಂದ ನನ್ನ ಭವಿಷ್ಯ ಶುರುವಾಗ್ತಿದೆ. ಸಿನಿಮಾಗೆ ಏನೂ ಬೇಕು ಎಲ್ಲವನ್ನೂ ನಿರ್ಮಾಪಕರು ಕೊಟ್ಟಿದ್ದಾರೆ. ಪಾತ್ರ ವರ್ಗ ಎಲ್ಲಾ ಅಭಿನಯವೂ ಚೆನ್ನಾಗಿದೆ ಎಂದರು.
ನಟಿ ಹೃತಿಕಾ ಶ್ರೀನಿವಾಸ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ನನ್ನ ಎರಡನೇ ಸಿನಿಮಾ. ನನ್ನ ಪಾತ್ರ ಬಹಳ ವಿಭಿನ್ನವಾಗಿದೆ. ನನ್ನ ಪಾತ್ರ ಕೇಳಿದಾಗಲೇ ಥ್ರಿಲ್ ಆಗಿದ್ದೇ. ಪ್ರಾಕ್ಟೀಸ್ ಮಾಡಿ, ಹರ್ಡ್ ವರ್ಕ್ ಪಾತ್ರ ಮಾಡಿದ್ದೇನೆ,. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ಆರಾಮ್ ಅರವಿಂದ್ ಸ್ವಾಮಿ ಒಂದೊಳ್ಳೆ ಸಿನಿಮಾ. ನಿಮ್ಮ ಬೆಂಬಲ ಚಿತ್ರದ ಮೇಲೆ ಇರಲಿ ಎಂದರು.
ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರಾ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರಿಗೆ ಆರಾಮ್ ಅರವಿಂದ್ ಸ್ವಾಮಿ ಮೂರನೇ ಸಿನಿಮಾ.
ಈ ಚಿತ್ರದ ಮೂಲಕ ಅನೀಶ್ ತೇಜೇಶ್ವರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ ಜನವರಿ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲಿದೆ.
ಚಿತ್ರ: ಟಗರು ಪಲ್ಯ ನಿರ್ದೇಶನ: ಉಮೇಶ್ ಬಿ. ಕೃಪ ನಿರ್ಮಾಣ : ಧನಂಜಯ ತಾರಾಗಣ: ನಾಗಭೂಷಣ, ಅಮೃತಾ ಪ್ರೇಮ್, ರಂಗಾಯಣ ರಘು, ತಾರಾ, ಬಿರಾದಾರ, ಶರತ್ ಲೋಹಿತಾಶ್ವ, ಮಹಾಂತೇಶ್, ಹುಲಿ ಕಾರ್ತಿಕ್, ವಾಸುಕಿ ವೈಭವ್, ಚೈತ್ರಾ ಶೆಣೈ ಇತರರು.
‘ತಾಯಿ ನಮ್ಮವ್ವಂಗೆ ಹೆಂಗೋ ನನ್ ಲವ್ ವಿಷ್ಯ ಗೊತ್ತಾಗದೆ ಕಾಪಾಡಮ್ಮ…’
ನಾಯಕಿ ಈ ಡೈಲಾಗ್ ಹೇಳುವ ಹೊತ್ತಿಗೆ, ಆ ಹಳ್ಳಿ ಜನರೊಟ್ಟಿಗೆ ಊರ ಗೌಡ ತನ್ನ ಮಗಳ ಮದ್ವೆ ಸೆಟ್ಟೇರಿದರೆ, ಇಲ್ಲಿ ಬಂದು ಪೂಜೆ ಮಾಡಿಸಿ, ಟಗರು ಬಲಿ ಕೊಟ್ಟು ಬಾಡೂಟ ಹಾಕಿಸ್ತೀನಿ ಅಂತ ಬೆಟ್ಟದ ಕೆಳಗಿರುವ ನದಿ ಸಮೀಪದ ಕಾಡೊಳಗಿರುವ ಹೆಣ್ ದೇವ್ರಿಗೆ ಹರಕೆ ತೀರಿಸಲು ಬಂದಿರ್ತಾನೆ. ಅಲ್ಲಿ ಹರಕೆ ಈಡೇರುತ್ತಾ, ಮಗಳ ಮದ್ವೆ ನಡೆಯುತ್ತಾ, ಜನ ಬಾಡೂಟ ಸವಿತಾರ ಅನ್ನೋದೇ ಕಥೆ.
ಒಂದೇ ಮಾತಲ್ಲಿ ಹೇಳುವುದಾದರೆ, ಇದೊಂದು ಅಪ್ಪಟ ದೇಸಿ ಕಥೆಯ ಚಿತ್ರ. ಪಕ್ಕಾ ಹಳ್ಳಿ ಸೊಗಡು ತುಂಬಿರುವ ಕಥಾವಸ್ತು. ಸಿನಮಾದ ಮುಖ್ಯ ಆಕರ್ಷಣೆ ಅಂದರೆ, ಭಾಷೆ ಮತ್ತು ಇಡೀ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿರೋದು.
ಇಲ್ಲಿ ನಿರ್ದೇಶಕರ ಜಾಣ್ಮೆ ಎದ್ದು ಕಾಣುತ್ತೆ. ರಾಶಿ ಪಾತ್ರಗಳನ್ನು ಕಟ್ಟಿಕೊಂಡು ಕಾಡೊಳಗಿನ ನದಿ ಬದಿಯ ಕಲ್ಲು ದೇವರನ್ನು ಪೂಜಿಸುವ ಮತ್ತು ಅಲ್ಲಿ ನಡೆಯುವ ಡ್ರಾಮಾಗಳೆ ಸಿನಿಮಾದ ತಾಕತ್ತು.
ಹೊಡಿ ಬಡಿ ಕಡಿ ಸಿನಿಮಾಗಳ ಮಧ್ಯೆ ಕುಟುಂಬ ಪ್ರೀತಿಯ ಕಥೆ ಕಟ್ಟಿಕೊಡುವ ಮೂಲಕ ನೋಡುಗರನ್ನು ನಗಿಸುವ ಮತ್ತು ಸಂಬಂಧಗಳ ಮೌಲ್ಯ ಸಾರುವಲ್ಲಿ ಚಿತ್ರ ಯಶಸ್ವಿ.
ಮೊದಲರ್ಧ ಹಾಸ್ಯಮಯವಾಗಿಯೇ ಸಾಗುವ ಸಿನಿಮಾದಲ್ಲಿ ಎಲ್ಲೂ ತೆಗೆದು ಹಾಕುವ ಅಂಶಗಳಿಲ್ಲ. ಯಾವ ದೃಶ್ಯದಲ್ಲೂ ಅನಗತ್ಯ ಮಾತಾಗಲಿ, ಅಸಹ್ಯ ತರುವ ದೃಶದಯಗಳಾಗಲಿ ಇಲ್ಲ. ಸಿನಿಮಾ ನೋಡುವಾಗ, ನಮ್ಮ ಅಕ್ಕಪಕ್ಕದ ಮನೆಯ ಕಥೆಯೇನೋ ಎಂಬ ಫೀಲ್ ಬರುತ್ತೆ. ಅದಕ್ಕೆಕಾರಣ ನಿರ್ದೇಶಕರು ಆಯ್ಕೆ ಮಾಡಿಕೊಂಡ ಕಥೆ ಮತ್ತು ನಿರೂಪಿಸಿರುವ ಜಾಣತನ.
ಗ್ರಾಮೀಣ್ಯ ಭಾಗದಲ್ಲಿ ನಡೆಯೋ ದೇವರ ಆಚರಣೆ, ಆಚಾರ, ವಿಚಾರಗಳ ಜೊತೆಗೆ ನಂಬಿಕೆಯ ಸುತ್ತಬಕಥೆ ಸಾಗುತ್ತೆ. ಹಾಗಾಗಿ ಇಲ್ಲಿ ಯಾವುದು ಡಮ್ಮಿ ಎನಿಸಲ್ಲ. ಎಲ್ಲವೂ ನೈಜತೆ ಎನಿಸುತ್ತೆ. ಆಯ್ಕೆ ಮಾಡಿಕೊಂಡ ಪಾತ್ರಗಳೂ ಕೂಡ ಸಿನಿಮಾ ವೇಗ ಹೆಚ್ಚಿಸಲು ಕಾರಣವಾಗಿವೆ.
ಮೊದಲಿಗೆ ಕಥೆ ಗಮನ ಸೆಳೆದರೆ, ಅದರೊಳಗಿನ ಭಾಷೆ ಆಪ್ತವೆನಿಸುತ್ತೆ. ದೇವ್ರ ಆಚರಣೆ ಅಂದರೆ ಗ್ರಾಮೀಣ ಜನರ ಭಕ್ತಿ, ನಂಬಿಕೆ, ಉತ್ಸಾಹ. ಅದಿಲ್ಲೂ ಚಾಚು ತಪ್ಪದೆ ಸೆರೆಹಿಡಿಯುವಲ್ಲಿ ನಿರ್ದೇಶಕರು ಯಶಸ್ವಿ.
ಇನ್ನು ಮೊದಲರ್ಧ ಚಿತ್ರ ಸಾಕಷ್ಟು ನಗಿಸಿಕೊಂಡೇ ಸಾಗುತ್ತೆ. ದ್ವಿತಿಯಾರ್ಧ ಕೂಡ ಸಣ್ಣ ತಿರುವು ಪಡೆದು ಒಂದಷ್ಟು ಸಂಬಂಧಗಳ ಮೌಲ್ಯ ಬಗ್ಗೆ ಹೇಳುತ್ತೆ. ಇಲ್ಲೂ ಪ್ರೀತಿ, ನಂಬಿಕೆ, ಕುಟುಂಬಗಳ ನಡುವಿನ ಬಾಂಧವ್ಯ ಇತ್ಯಾದಿ ಅಂಶಗಳು ಕಾಡುತ್ತವೆ. ಆ ಕಾರಣಕ್ಕೆ ಟಗರು ಪಲ್ಯ ಇಷ್ಟವಾಗುತ್ತೆ.
ಕಥೆ ಏನು?
ಮಗಳಿಗೆ ಸಿಟಿ ಹುಡುಗನ ಹುಡುಕಿ ಮದ್ವೆ ಸೆಟ್ಟಾದರೆ ಊರ ಬೆಟ್ಟದ ಬಳಿ ಇರುವ ಹೆಣ್ ದೇವ್ರಿಗೆ ಟಗರು ಬಲಿ ಕೊಟ್ಟು ಬಾಡೂಟ ಹಾಕಿಸ್ತೀನಿ ಎಂಬುದು ಗೌಡನ ಹರಕೆ. ಜನರ ಜೊತೆ ಹೋಗುವ ಗೌಡನ ಟಗರು ದೇವ್ರ ಮುಂದೆ ತಲೆ ಅಲ್ಲಾಡಿಸಿ, ಒದರಬೇಕು. ಆದರೆ, ಆ ಟಗರು ಒದರೋದೇ ಇಲ್ಲ. ಅಲ್ಲಿಗೆ ಬಲಿ ಕೊಡುವಂತೆಯೂ ಇಲ್ಲ. ಈ ನಂಬಿಕೆ ಪ್ರತೀತಿ ಮುಂದುವರೆಯುತ್ತಲೇ ಟಗರು ಬಲಿ ಕೊಡುವ ಪ್ರಸಂಗ ನಡೆಯುತ್ತೆ. ಅದೇ ಸಿನಿಮಾದ ಟ್ವಿಸ್ಟು. ಟಗರು ಯಾಕೆ ಒದರಲ್ಲ? ಹರಕೆ ಈಡೇರುತ್ತಾ? ಮಗಳ ಮದ್ವೆ ನಡೆಯುತ್ತಾ? ಬಾಡೂಟ ಸವಿಯಲು ಬಂದ ಜನರ ಆಸೆ ಫಲಿಸುತ್ತಾ ಅನ್ನೋದೇ ಕಥೆ. ಇಂತಹ ಮಜವಾದ ಕಥೆಯುಳ್ಳ ಚಿತ್ರ ನೋಡುವ ಕುತೂಹಲ ಇದ್ದರೆ ಮಿಸ್ ಮಾಡಬೇಡಿ.
ಯಾರು ಹೇಗೆ?
ನಾಗಭೂಷಣ ಚಿಕ್ಕನ ಪಾತ್ರ ಮೂಲಕ ಕಾಡುತ್ತಾರೆ, ನಗಿಸಿ ಅಳಿಸುತ್ತಾರೆ. ಅಮೃತಾ ಪ್ರೇಮ್ ಮೊದಲ ಬಾಲ್ ನಲ್ಲೇ ಬೌಂಡರಿ ಬಾರಿಸಿದ್ದಾರೆ. ಸಿಕ್ಕ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರಿಗೆ ಮುಂದೆ ಚಿತ್ರರಂಗದಲ್ಲಿ ಭವಿಷ್ಯ ಎದ್ದು ಕಾಣುತ್ತೆ. ರಂಗಾಯಣ ರಘು ಪಾತ್ರ ಕೊನೆಯವರೆಗೂ ನೆನಪಲ್ಲುಳಿಯುತ್ತೆ. ಒಬ್ಬ ತಂದೆಯಾಗಿ ಅವರು ಆಪ್ತವೆನಿಸುತ್ತಾರೆ. ತಾರಾ ಅಮ್ಮನಾಗಿ ಇಷ್ಟವಾಗುತ್ತಾರೆ. ಶರತ್ವಲೋಹಿತಾಶ್ವ, ಬಿರಾದಾರ, ಮಹಾಂತೇಶ್, ಚಿತ್ರಾ ಶೆಣೈ, ವಾಸುಕಿ ವೈಭವ್ ಸೇರಿದಂತೆ ಹಲವರು ಪಾತ್ರಕ್ಕೆ ಮೋಸ ಮಾಡಿಲ್ಲ. ಹಾಡು ಹಾಗು ಹಿನ್ನೆಲೆ ಸಂಗೀತ ಕಥೆಗೆ ಪೂರಕ. ಛಾಯಾಗ್ರಹಣ ಕೂಡ ಪರಿಸರದ ಅಂದ ಹೆಚ್ಚಿಸಿದೆ.
ಕೊನೆ ಮಾತು : ಇಲ್ಲಿ ಸಂಬಂಜ ಅನ್ನೋದು ದೊಡ್ದು ಕನಾ ಅನ್ನೋದನ್ನು ಸಾಬೀತು ಮಾಡಲಾಗಿದೆ. ಅದೇ ಇಲ್ಲಿ ಭಾವುಕ ಪಯಣ ಅದು ಹೇಗೆ ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು.
ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ.
ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಹಿನ್ನೆಲೆ ಸಂಗೀತ, ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಈ ತಂಡ ಹೊಸ ಪ್ರಾಜೆಕ್ಟ್ ಗೆ ಒಂದಾಗಿದೆ.
ಸೂರರೈ ಪೋಟ್ರೂ ಮೂಲಕ ಧಮಾಕ ಎಬ್ಬಿಸಿದ್ದ ಸೂರ್ಯ ಹಾಗೂ ಸುಧಾ ಕೊಂಗರ ಹೊಸ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಮಾಲಿವುಡ್ ಹ್ಯಾಂಡ್ಸಮ್ ಹಂಕ್ ದುಲ್ಕರ್ ಸಲ್ಮಾನ್, ನಜ್ರಿಯಾ ಫಹದ್ ಹಾಗೂ ವಿಜಯ್ ವರ್ಮಾ ಸೂರ್ಯ 43 ಚಿತ್ರದ ಭಾಗವಾಗಿದ್ದಾರೆ.
ತಾತ್ಕಾಲಿಕವಾಗಿ #Suriya43 ಎಂದು ಟೈಟಲ್ ಇಡಲಾಗಿದೆ. ಸೂರ್ಯ ಒಡೆತನದ 2D ಎಂಟರ್‌ಟೈನ್‌ಮೆಂಟ್ ನಡಿ ಜ್ಯೋತಿಕಾ, ಸೂರ್ಯ ಮತ್ತು ರಾಜಶೇಖರ್ ಕರ್ಪೂರಸುಂದರಪಾಂಡಿಯನ್ ನಿರ್ಮಿಸಲಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಜಿವಿ ಪ್ರಕಾಶ್ ಸಂಗೀತ ನಿರ್ದೇಶಿಸ್ತಿರುವ 100 ಚಿತ್ರ ಇದಾಗಿರೋದು ಮತ್ತೊಂದು ವಿಶೇಷ..ಸೂರರೈ ಪೋಟ್ರೂ ಮೂಲಕ ಮೋಡಿ ಮಾಡಿದ್ದ ಸೂರ್ಯ, ಸುಧಾ ಹಾಗೂ ಜಿವಿ ಪ್ರಕಾಶ್ ಹೊಸ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ.
ಗೊಂಬೆಗಳ ಲವ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.
ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಉಪೇಂದ್ರ ಮಾತನಾಡಿ, ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು.
ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ ಅಣ್ಣ ಟೀಸರ್ ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ ಮಾಡಿದ್ದೀರಿ ಎಂದರು.
ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ಲಾಕ್ ಡೌನ್ ಆದ್ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಮಲಯಾಳಂ, ತಮಿಳು ಇಂಡಸ್ಟ್ರೀಗೆ ಕಥೆ ತೆಗೆದುಕೊಂಡು. ಆದರೆ ನನಗೆ ತೃಪ್ತಿಯಾಗಲಿಲ್ಲ. ಇಲ್ಲೇ ಏನಾದರೂ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು.
ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ ಎಂದರು.
ನಿರ್ಮಾಪಕ ಬಿ.ಎಂ.ಶ್ರೀರಾಮ್ (ಕೋಲಾರ) ಮಾತನಾಡಿ, ಉಪ್ಪಿ ಕಾರ್ಯಕ್ರಮಕ್ಕೆ ಬಂದಿದ್ದು ಬಹಳ ಖುಷಿ ಆಯ್ತು. ನಾವು ತುಂಬ ಬಡತನದಿಂದ ಮೇಲೆ ಬಂದವರು. ನಾವು ಈ ಮಟ್ಟದಲ್ಲಿ ಬೆಳೆಯಲು ಐದು ಜನರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ. ಅದರಲ್ಲಿ ಉಪ್ಪಿ ಸರ್ ಕೂಡ ಒಬ್ಬರು. ತಂದೆ ತಾಯಿ ಆಶೀರ್ವಾದ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಇದ್ದೀವಿ. ಅರುಣ್ ಅವರನ್ನು ನನ್ನ ಸ್ನೇಹಿತರು ರೆಫರ್ ಮಾಡಿದ್ದರು. ಇದು ಚಾಮರಾಜನಗ ಆಚಾರ,ವಿಚಾರ ಅಂಶಗಳು ಇರುವುದರಿಂದ ಕಥೆ ಒಪ್ಪಿಕೊಂಡೆ. ವಿನೋದ್ ಸರ್ ಅಪ್ರೋಚ್ ಮಾಡಿದ್ವಿ. ಕಥೆ ಹೇಳಿದ್ವಿ ಒಪ್ಪಿಕೊಂಡರು. ಟೀಸರ್ ಮಾಡಿದ್ಮೇಲೆ ಅರುಣ್ ಟೀ ಮೇಲೆ ಭರವಸೆ ಹೆಚ್ಚಾಯ್ತು ಎಂದರು.
‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್‌ಸ್ಟರ್ ಕಥೆ. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.
ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.
ಯುವ ರಾಜಕುಮಾರ್ ಅಭಿನಯದ ಯುವ ಸಿನಿಮಾ ರಿಲೀಸ್ ಡೆಡಟ್ ಅನೌನ್ಸ್ ಆಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ.
ಇಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ “ಕೆ ಜಿ ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಜನಪ್ರಿಯ ಚಿತ್ರಗಳ ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಚೊಚ್ಚಲ ಚಿತ್ರ “ಯುವ” ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.
ಅಭಿಮಾನಿಗಳಲ್ಲಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ 2024 ರ ಮಾರ್ಚ್ 28 ರಂದು ಬಿಡುಗಡೆಯಾಗುತ್ತಿದೆ. ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹೊಂಬಾಳೆ ಫಿಲಂಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ