Categories
ಸಿನಿ ಸುದ್ದಿ

ಆರ್ಮುಗ ಪುತ್ರ ಈಗ ಹೀರೋ! ಮಗನ ಸಿನಿಮಾಗೆ ಅಪ್ಪನ ನಿರ್ದೇಶನ : ಎರಡು ದಶಕದ ಬಳಿಕ ಡೈರೆಕ್ಟರ್ ಆದ ರವಿಶಂಕರ್

ಖಳನಟ ರವಿಶಂಕರ್ ಪುತ್ರ ಈಗ ಹೀರೋ ಆಗುತ್ತಿದ್ದಾರೆ. ಅವರ ಮಗನ ಸಿನಿಮಾಗೆ ‘ಸುಬ್ರಹ್ಮಣ್ಯ’ ಎಂದು ಹೆಸರಿಡಲಾಗಿದ ಮಗನ ಸಿನಿಮಾಗೆ ಅಪ್ಪನೇ ಡೈರೆಕ್ಟರ್ ಎಂಬುದು ವಿಶೇಷ.

ಆರ್ಮುಗ ರವಿಶಂಕರ್ ಆ್ಯಕ್ಟರ್ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಕೂಡ ಹೌದು. ಸಿನಿಕರಿಯರ್ ಆರಂಭದಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದರು. ಅನಂತರ ಒಂದೊಂದೆ ಮೆಟ್ಟಿಲುಗಳನ್ನೇರುತ್ತಾ ನಟನಾಗುವ ತಮ್ಮ ಕನಸನ್ನ ಈಡೇರಿಸಿಕೊಂಡರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ `ಕೆಂಪೇಗೌಡ’ ಸಿನಿಮಾದಲ್ಲಿ ಆಮುರ್ಗಂ ಪಾತ್ರ ಪೋಷಣೆ ಮಾಡಿ ಜನಪ್ರಿಯತೆ ಗಳಿಸಿದರು. ಅಲ್ಲಿವರೆಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು ಕೂಡ ಬಿಗ್ ಬ್ರೇಕ್ ಸಿಕ್ಕಿರಲಿಲ್ಲ. ಆದರೆ, ಕೆಂಪೇಗೌಡ ಸಿನಿಮಾದಿಂದ ರವಿಶಂಕರ್ ಕರಿಯರ್ರೇ ಬದಲಾಯ್ತು. ನೇಮು-ಫೇಮು-ಕ್ರೇಜು-ಕಾಸು ಹೀಗೆ ಎಲ್ಲವೂ ಕೂಡ ಒಟ್ಟೊಟ್ಟಿಗೆ ದಕ್ಕಿತು, ಬೇಡಿಕೆ ಸೃಷ್ಟಿಯಾಯ್ತು. ಈಗಲೂ ಆ ಬೇಡಿಕೆ ತಗ್ಗಿಲ್ಲ, ಸದ್ಯಕ್ಕೆ ತಗ್ಗೋದು ಇಲ್ಲ ಅನ್ನೋದಕ್ಕೆ ಅವರ ಕೈಯಲ್ಲಿರುವ ಸಿನಿಮಾಗಳೇ ಸಾಕ್ಷಿ

ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. ದುರ್ಗಿ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ಅವತ್ತಿಗೆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿ ತೆಲುಗಿಗೆ ರಿಮೇಕ್ ಕೂಡ ಆಗಿತ್ತು. ರವಿಶಂಕರ್ ಗೆ ಈ ಚಿತ್ರದಿಂದ ಒಳ್ಳೆ ಹೆಸರು ಬಂದಿತ್ತು. ಆದರೆ, ಅದ್ಯಾಕೋ ಏನೋ ಗೊತ್ತಿಲ್ಲ ದುರ್ಗಿ ನಂತರ ಡೈರೆಕ್ಷನ್ ಕಡೆ ಮುಖ ಮಾಡಿರಲಿಲ್ಲ. ಇದೀಗ, 20 ವರ್ಷಗಳು ಉರುಳಿದ್ಮೇಲೆ ಮತ್ತೆ ಡೈರೆಕ್ಟರ್ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ. ಅದು ಅವರ ಮಗನ ಸಿನಿಮಾಗೆ ಅನ್ನೋದು ವಿಶೇಷ.

ಆರ್ಮುಗ ರವಿಶಂಕರ್ ಅವರಿಗೆ ಅದ್ವೆ ಎಂಬ ಮಗನಿದ್ದಾರೆ. ವಿದೇಶದಲ್ಲಿ ನಟನಾ ತರಬೇತಿಯನ್ನು ಪಡೆದುಕೊಂಡಿದ್ದಾರೆ. ವಿದ್ಯಾಭ್ಯಾಸವೆಲ್ಲ ಮುಗಿಸಿ ವಾಪಾಸ್ ಹುಟ್ಟೂರಿಗೆ ಮರಳಿರುವ ಮಗನನ್ನು ಬಣ್ಣದ ಜಗತ್ತಿಗೆ ಪರಿಚಯಿಸಿದ್ದಾರೆ. ತಾತನಂತೆ, ಅಪ್ಪ-ಚಿಕ್ಕಪ್ಪರಂತೆ ಕಲೆ ರಕ್ತಗತವಾಗಿ ಬಂದಿರುವುದರಿಂದ ಮುಖಕ್ಕೆ ಬಣ್ಣ ಹಚ್ಚಲು ಅದ್ವೆ ಕೂಡ ಓಕೆ ಹೇಳಿದ್ದು, ಪುತ್ರನ ಚೊಚ್ಚಲ ಚಿತ್ರಕ್ಕೆ ತಾವೇ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ ನಟ ಕಂ ನಿರ್ದೇಶಕ ರವಿಶಂಕರ್.

ಇಂದು ಆಯುಧಪೂಜೆ ಅಂಗವಾಗಿ ಅದ್ವೆ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ‌ ಮಾಡಲಾಗಿದೆ. ಈ ಚಿತ್ರಕ್ಕೆ ಸುಬ್ರಹ್ಮಣ್ಯ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಪೋಸ್ಟರ್ ನಲ್ಲಿ ದೈವಿಕ ಅಂಶಗಳು ಹೈಲೆಟ್ ಆಗಿವೆ. ಪೋಸ್ಟರ್ ನಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಮತ್ತು ಅವರ ವಾಹನ ನವಿಲನ್ನು ತೋರಿಸಲಾಗಿದೆ. ನಾಯಕ ಅದ್ವೆ ಒಂದು ಕೈಯಲ್ಲಿ ಜ್ವಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ನಿಗೂಢವಾಗಿ ಕಾಣುವ ಪುಸ್ತಕವನ್ನು ಇಟ್ಟುಕೊಂಡಿದ್ದಾರೆ.

ಅರ್ಜುನ್ ರೆಡ್ಡಿ ಸಿನಿಮಾ ಖ್ಯಾತಿಯ ರಾಜ್ ತೋಟ ಕ್ಯಾಮೆರಾ ಹಿಡಿದಿದ್ದು, ಕೆಜಿಎಫ್ ಸಲಾರ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರ್ ಸಂಗೀತ, ವಿಜಯ್ ಎಂ ಕುಮಾರ್ ಸಂಕಲನ, ಮಾಸ್ತಿ ಸಂಭಾಷಣೆ ಸುಬ್ರಹ್ಮಣ್ಯ ಸಿನಿಮಾಕ್ಕಿದೆ. ಎಸ್ ಜಿ ಮೂವೀ ಮೇಕರ್ಸ್ ಬ್ಯಾನರ್ ನಡಿ ತಿರುಮಲ ರೆಡ್ಡಿ ಮತ್ತು ಅನಿಲ್ ಕಡಿಯಾಲ ಬಂಡವಾಳ ಹಾಕಿದ್ದು, ಪ್ರವೀಣಾ ಕಡಿಯಾಲ ಹಾಗೂ ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸುಬ್ರಹ್ಮಣ್ಯ ಸಿನಿಮಾ ತಯಾರಾಗುತ್ತಿದ್ದು, ಡಿಸೆಂಬರ್ ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

Categories
ಸಿನಿ ಸುದ್ದಿ

ಪರ್ವ ಕಾದಂಬರಿ ಈಗ ಸಿನಿಮಾ: ಕಾಶ್ಮೀರಿ ಫೈಲ್ ನಿರ್ದೇಶಕ ಅಗ್ನಿ ಹೋತ್ರಿ ಡೈರೆಕ್ಟರ್; ಟೈಟಲ್ ರಿಲೀಸ್ ಮಾಡಿದ ಲೇಖಕ ಎಲ್.ಭೈರಪ್ಪ

ಕನ್ನಡದ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪ ಅವರ ‘ಪರ್ವ’ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಇದನ್ನು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಸಿನಿಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ‘ಪರ್ವ’ ಕೃತಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ‘ಒಂದು ವರ್ಷದ ಹಿಂದೆ ಪ್ರಕಾಶ್ ಬೆಳವಾಡಿ ನನಗೆ ಕರೆ ಮಾಡಿದ್ದರು. ಭೈರಪ್ಪನವರ ಜೊತೆ ಮಾತನಾಡುವಂತೆ ಹೇಳಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನೋಡಿ ಅವರು ಪರ್ವ ಸಿನಿಮಾ ಮಾಡುವಂತೆ ಹೇಳಿದರು. ಮಹಾಭಾರತದಲ್ಲಿ ನಾವು ಕೇಳದೆ ಇರುವಂತಹ ವಿಷಯಗಳನ್ನ ಬರೆದಿದ್ದಾರೆ. ಇದಕ್ಕಾಗಿ ಸಾಕಷ್ಟು ವರ್ಷಗಳ ಕಾಲ ಶ್ರಮಿಸಿದ್ದಾರೆ. ಈ ಸಿನಿಮಾ ಮೂರು ಪಾರ್ಟ್ಗಳಲ್ಲಿ ಬರುತ್ತದೆ’ ಎಂದು ಹೇಳಿದ್ದಾರೆ.

ಪಲ್ಲವಿ ಜೋಷಿ ಮಾತನಾಡಿ, ‘ಪರ್ವ ಕಾದಂಬರಿಯನ್ನು ಸಿನಿಮಾ ಮಾಡುತ್ತಿರುವುದು ಜವಾಬ್ದಾರಿ ಹೆಚ್ಚಿಸಿದೆ. ಈ ವಿಷಯವನ್ನು ನಿರ್ವಹಿಸುವುದು ಅಷ್ಟು ಸುಲಭವಲ್ಲ. ಭೈರಪ್ಪ ಸರ್ ಗುರಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿರುವುದು ಖುಷಿ ಕೊಟ್ಟಿದೆ. ಪರ್ವ ಸಿನಿಮಾವನ್ನು 3 ಭಾಗದಲ್ಲಿ ಕನ್ನಡ ಹಾಗೂ ಹಿಂದಿ ಎರಡು ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಕಾಶ್ ಇಲ್ಲದೇ ಇದು ಆಗುತ್ತಿರಲಿಲ್ಲ’ ಎಂದರು.

ಎಸ್.ಎಲ್. ಭೈರಪ್ಪ ಮಾತನಾಡಿ, ‘ಪರ್ವ ಕಾದಂಬರಿಯನ್ನು ಸಿನಿಮಾ ಮಾಡಲು ಬಂದಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಅನುಭವವಿದೆ. ಇವರು ಮಾಡಿರುವ ಸಿನಿಮಾಗಳು ಸಕ್ಸಸ್ ಆಗಿವೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಸಿನಿಮಾ ಮಾಡಬೇಕು. ನಿಜವಾದ ಮಹಾಭಾರತ ಏನೋ ಅನ್ನೋದನ್ನು ತೋರಿಸಬಹುದು. ಸಿನಿಮಾ ಮಾಡಲು ನನ್ನ ಒಪ್ಪಿಗೆ ಇದೆ. ಹಾರೈಕೆ ಇದೆ’ ಎಂದರು.

ಪರ್ವ ಕಾದಂಬರಿಯ ವಿಷಯ ಏನ್ನು ಅನ್ನುವುದು ಓದಿದವರಿಗೆ ಗೊತ್ತೇ ಇದೆ. ಮಹಾಭಾರತವನ್ನ ಆಯಾ ಪಾತ್ರಗಳ ಮೂಲಕ ಮತ್ತೊಮ್ಮೆ ಹೇಳಿರೋದೇ ಈ ಪರ್ವ ಕಾದಂಬರಿಯ ವಿಶೇಷ. ಅಂತಹ ಈ ಒಂದು ಕಾದಂಬರಿಯನ್ನ ಕ್ಲಾಸಿಕ್ ಕೃತಿ ಅಂತಲೇ ಪರಿಗಣಿಸಲಾಗುತ್ತದೆ. ಇದೀಗ ಈ ಪರ್ವ ಕಾದಂಬರಿಗೆ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Categories
ಸಿನಿ ಸುದ್ದಿ

ಇವರ ಅರ್ದಂಬರ್ದ ಪ್ರೇಮಕಥೆ ರಿಲೀಸ್ ಗೆ ರೆಡಿ

ಬಿಗ್‌ಬಾಸ್ ಜೋಡಿ ದಿವ್ಯಾ ಉರಡುಗ ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ. ಈಗ ಬೆಳ್ಳಿತೆರೆಯ ಮೇಲೂ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ದಂಬರ್ದ ಪ್ರೇಮಕಥೆ. ಮುಂದಿನ ತಿಂಗಳು ರಿಲೀಸ್ ಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದನ್ನು ಅಭಿಮಾನಿಗಳೇ ಬಿಡುಗಡೆ ಮಾಡಿದರು. ನಿರ್ದೇಶಕರೇ ಸಾಹಿತ್ಯ ರಚಿಸಿದ ‘ಹುಚ್ಚುಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಮ್ಯಾಜಿಕಲ್ ಕಂಪೋಜರ್ ಅರ್ಜುನ್ ಜನ್ಯ ಈ ಹಾಡಿಗೆ ಮ್ಯೂಸಿಕ್ ಕಂಪೋಜ್ ಮಾಡಿದ್ದು, ವಾಸುಕಿ ವೈಭವ್, ಪೃಥ್ವಿ ಭಟ್ ದನಿಯಾಗಿದ್ದಾರೆ.

ಈಗಾಗಲೇ ಅರ್ದಂಬರ್ದ ಪ್ರೇಮಕಥೆ
ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದಿದ್ದು ಸೆನ್ಸಾರ್ ಪ್ರಕ್ರಿಯೆ ನಡೆಯುತ್ತಿದೆ. ಅರವಿಂದ್ ಕೌಶಿಕ್ ನಿರ್ದೇಶನದ ನಮ್ ಏರಿಯಾಲ್ ಒಂದಿನ ಚಿತ್ರದ ಮೂಲಕ ಪೂರ್ಣ ಪ್ರಮಾಣದ ಸಂಗೀತ ಸಂಯೋಜಕರಾಗಿದ್ದ ಅರ್ಜುನ್ ಜನ್ಯ ಮತ್ತೊಮ್ಮೆ ಅರವಿಂದ್ ಜೊತೆ ಸೇರಿ ಚೆಂದದ ಹಾಡುಗಳನ್ನು ಕಂಪೋಜ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್ ನಾನು ಈ ಕಥೆ ಶುರು ಮಾಡಿದಾಗಲೇ ನಾಯಕಿ ಪಾತ್ರಕ್ಕೆ ದಿವ್ಯ ಅವರನ್ನು ಆಯ್ಕೆ ಮಾಡಿದೆ. ಅವರನ್ನು ಒಪ್ಪಿಸಿದ ಮೇಲೆ ಅರವಿಂದ್ ಹೀರೋ ಪಾತ್ರ ಮಾಡಿದರೆ ಹೇಗೆ ಅನಿಸಿತು, ದಿವ್ಯಾ ಮೂಲಕ ಅವರನ್ನು ಕೇಳಿದಾಗ ಉತ್ತರ ಹೇಳಲು 2 ದಿನ ತಗೊಂಡರು. ಅಲ್ಲದೆ ಅರ್ಜುನ್‌ಜನ್ಯ ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ 4 ಅದ್ಭುತವಾದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ.

ಇವತ್ತಿನ ಕಾಲದಲ್ಲಿ ಪ್ರೀತಿ ಎನ್ನುವುದು ಒಂದು ಭಾವನೆ, ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದನ್ನು ನಿಭಾಯಿಸಿಕೊಂಡು ಹೋಗೋದು ಕಷ್ಟ. ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಅದು ಬದುಕಬೇಕಾಗಿರುತ್ತೆ, ಇವತ್ತಿನ ಹಾಡು ಚಿತ್ರದ ಕಥೆಯನ್ನೇ ಹೇಳುತ್ತೆ, ಇದರ ನಂತರ ಇವರಿಬ್ಬರು ಲವ್ ಮಾಡ್ತಾರಾ ಇಲ್ವಾ ಅನ್ನೋದೇ ಕುತೂಹಲ, ಚಿತ್ರವೀಗ ಬಿಡುಗಡೆಯ ಹಂತದಲ್ಲಿದ್ದು, ಈಗ ಪ್ರಚಾರ ಶುರು ಮಾಡಿದ್ದೇವೆ, ನವೆಂಬರ್‌ನಲ್ಲಿ ತೆರೆಗೆ ತರೋ ಪ್ಲಾನಿದೆ ಎಂದರು.

ನಾಯಕ ಅರವಿಂದ್ ಮಾತನಾಡಿ ಅಭಿನಯ ನಿಜವಾಗಿಯೂ ಕಷ್ಟದ ಕೆಲಸವೇ. ಒಂದಷ್ಟು ದಿನ ವರ್ಕ್ಷಾಪ್ ಮಾಡಿ ನಂತರ ಬಣ್ಣ ಹಚ್ಚಿದೆ. ಆರಂಭದ 2-3 ದಿನ ಸ್ವಲ್ಪ ಕಷ್ಟವಾಗಿತ್ತು, ನಿರ್ದೇಶಕ ಅರವಿಂದ್ ಹಾಗೂ ದಿವ್ಯಾ ಇಬ್ಬರೂ ನನಗೆ ತುಂಬಾ ಹೇಳಿಕೊಟ್ಟರು. ನಾನೇನೇ ಮಾಡಿದ್ರೂ ಅದಕ್ಕೆ ನಿರ್ದೇಶಕರೇ ಕಾರಣ ಎಂದು ಹೇಳಿದರು.


ನಾಯಕಿ ದಿವ್ಯಾ ಮಾತನಾಡಿ ಈ ಹಾಡನ್ನು ಅಭಿಮಾನಿಗಳಿಗೋಸ್ಕರ ಡೆಡಿಕೇಟ್ ಮಾಡೋಣ ಎಂದು ಅವರಿಂದಲೇ ರಿಲೀಸ್ ಮಾಡಿಸಿದ್ದೇವೆ, ನನ್ನ ಪಾತ್ರದ ಬಗ್ಗೆ ಹೇಳೋದಾದ್ರೆ ಆಕೆ ಸ್ವಲ್ಪ ಮುಂಗೋಪಿಯಾದರೂ, ಮನಸು ಹೂವಿನಂಥದ್ದು, ಜನ ಅವಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲ್ಲ, ಆಕೆಗಿರುವ ರಿಯಲ್ ಲೈಫ್ ಪ್ರಾಬ್ಲಂಗಳಿಂದ ಹಾಗೆ ನಡೆದುಕೊಳ್ತಾಳೆ ಅಷ್ಟೇ ಎಂದು ತನ್ನ ಪಾತ್ರದ ಕುರಿತು ವಿವರಿಸಿದರು.

ಬಕ್ಸಾಸ್ ಮೀಡಿಯಾ, ಆರ್‌ಎಸಿ ವಿಷುವಲ್ಸ್ ಮತ್ತು ಲೈಟ್ಹೌಸ್ ಮೀಡಿಯಾದ ಸಹಕಾರದೊಂದಿಗೆ ಈ ಚಿತ್ರವನ್ನು ನಿರ್ಮಿಸಿದೆ. ಬಕ್ಸಸ್ ಪರವಾಗಿ ದಿವ್ಯಾ ಉತ್ತಪ್ಪ, ಲೈಟ್ ಹೌಸ್ ನ ಸಂತೋಷ್ ಉಪಸ್ಥಿತರಿದ್ದರು. ರ‍್ಯಾಪರ್ ಅಲೋಕ್, ಶ್ರೇಯಾ ಬಾಬು, ವೆಂಕಟಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿಶ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹಿರಿಯನಟ ದ್ವಾರಕೀಶ್ ಪುತ್ರ ಅಭಿಲಾಷ್ ವಿಶೇಷ ಪಾತ್ರದ ಮೂಲಕ 25 ವರ್ಷಗಳ ನಂತರ ನಟನೆಗೆ ಮರಳಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಘೋಸ್ಟ್ ಎಂಟ್ರಿ ಆಗ್ತಾ ಇದೆ ದಾರಿ ಬಿಡಿ: ಕಥೆ ಕೇಳಿ ಬಿಡಲಿಲ್ಲ ಅಂದ್ರು ಶಿವಣ್ಣ- ಅಕ್ಟೋಬರ್ 19ಕ್ಕೆ ಚಿತ್ರ ತೆರೆಗೆ

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಘೋಸ್ಟ್’ ಅಕ್ಟೋಬರ್‍ 19ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಈ ಸಿನಿಮಾ ಸುಮಾರು ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದಿನವೊಂದಕ್ಕೆ 1500ಕ್ಕೂ ಹೆಚ್ಚು ಪ್ರದರ್ಶನಗಳು ಕಾಣಲಿವೆ.

ಈ ಸಿನಿಮಾ ಮೇಲೆ ಶಿವರಾಜ್ ಕುಮಾರ್ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ಅವರು ಏಕತಾನತೆ ಮುರಿಯಲು ಈ ಚಿತ್ರ ಮಾಡಿದ್ದಾರಂತೆ. ‘ಈ ಚಿತ್ರವನ್ನು ಅವರು ಒಪ್ಪಲು ಕಾರಣ ಸಿನಿಮಾದ ಹೊಸತನವಂತೆ. ಒಂದೇ ತರಹದ ಪಾತ್ರಗಳನ್ನು ಬಿಟ್ಟು ಬರುವ ಉದ್ದೇಶದಿಂದ ಈ ಚಿತ್ರವನ್ನು ಒಪ್ಪಿಕೊಂಡಿದ್ದಾಗಿ ಶಿವರಾಜಕುಮಾರ್ ಪತ್ರಕರ್ತರ ಮುಂದೆ ಹೇಳಿಕೊಂಡಿದ್ದಾರೆ. ಹಾಗಾಗಿಯೇ ಅವರು, ಈ ಸಿನಿಮಾದ ಕಥೆ ಕೇಳಿದ‌ ಬಳಿಕ ಚಿತ್ರದಲ್ಲಿ ನಟಿಸಲು ಒಪ್ಪಿದ್ದಾರೆ.

‘ಘೋಸ್ಟ್’ ಸಿನಿಮಾದ ಪಾತ್ರವೇ ವಿಶೇಷವಾಗಿದೆ. ಇಲ್ಲಿ ಮೂರು ಶೇಡ್‍ಗಳಲ್ಲಿ ಕಾಣಿಸಿಕೊಂಡಿದ್ದು, ಕೇವಲ 48 ಗಂಟೆಗಳಲ್ಲಿ ನಡೆಯುವ ಕಥೆ ಇದಾಗಿದೆ. ಖಂಡಿತ ಪ್ರೇಕ್ಷಕರಿಗೂ ಚಿತ್ರ ಇಷ್ಟವಾಗಲಿದೆ ಎಂಬುದು ಶಿವರಾಜಕುಮಾರ್ ಮಾತು.

ನಿರ್ದೇಶಕ ಶ್ರೀನಿ ಅವರು ಮೈಸೂರಿನ ಶಕ್ತಿಧಾಮದಲ್ಲಿ ಶಿವಣ್ಣ ಅವರಿಗೆ ಈ ಕಥೆ ಹೇಳಿದ್ದರಂತೆ. ಈ ಕಥೆ ಮಾಡಿಕೊಂಡಾಗ, ಶಿವಣ್ಣ ಅವರೇ ಈ ಸಿನಿಮಾದಲ್ಲಿ ನಟಿಸಿದರೆ ಚೆನ್ನಾಗಿರುತ್ತೆ ಅಂದುಕೊಂಡಿದ್ದೆವು. ಶಿವಣ್ಣ ಕೂಡ ಕಥೆ ಕೇಳಿ ನಟಿಸಲು ಒಪ್ಪಿದರು. ಸಿನಿಮಾದ ವಿಶೇಷ ಅಂದರೆ ಶೇ. 70ರಷ್ಟು ಕಥೆ ಜೈಲಲ್ಲೇ ನಡೆಯುತ್ತದೆ. ನಿರ್ಮಾಪಕರ ಸಹಕಾರದಿಂದ ಸಿನಿಮಾ ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿ ಮೂಡಿಬಂದಿದೆ ಈ ವಾರ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಅನ್ನೋದು ಮತ್ತೊಂದು ವಿಶೇಷ. ಇದರ ಜೊತೆಯಲ್ಲಿ ಅಮೇರಿಕಾ, ಕೆನಡ ಸೇರಿದಂತೆ ಇತರೆ ದೇಶಗಳಲ್ಲೂ ಏಕಕಾಲಕ್ಕೆ ಬಿಡುಗಡೆ ಕಾಣಲಿದೆ ಎನ್ನುತ್ತಾರೆ ಶ್ರೀನಿ.

ನಿರ್ಮಾಪಕ ಸಂದೇಶ್ ಅವರು ಸಿನಿಮಾ ಮೇಲೆ ತುಸು ಹೆಚ್ಚೇ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಶಿವಣ್ಣ ಅವರು ಅದಾಗಲೇ ಏಳೆಂಟು ಚಿತ್ರಗಳಿಗೆ ಸಹಿ ಹಾಕಿದ್ದರು. ಆದರೆ, ಕಥೆ ಕೇಳಿ ನಮಗೆ ಮೊದಲ ಆದ್ಯತೆ ಕೊಟ್ಟಿದ್ದಾರೆ. ಈ ಹಿಂದೆ ನಮ್ಮ ಬ್ಯಾನರ್ ನಲ್ಕಿ ಶಿವಣ್ಣ ಎರಡು ಚಿತ್ರಗಳಲ್ಲಿ ನಟಿಸಿದ್ದರು. ಎರಡೂ ಚಿತ್ರಗಳು ಕೂಡ ಗೆಲುವು ಕಂಡಿದ್ದವು. ಈ ಚಿತ್ರದ ಮೂಲಕ ಹ್ಯಾಟ್ರಿಕ್‍ ಗೆಲುವಿನ ನಿರೀಕ್ಷೆ ಇದೆ ಎಂದರು.

ಶಿವರಾಜಕುಮಾರ್ ಜೊತೆಯಲ್ಲಿ ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ವಿಜಯಲಕ್ಷ್ಮೀ ಸಿಂಗ್​ ಸೇರಿದಂತೆ ಹಲವರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತವಿದೆ. ಮಹೇಂದ್ರ ಸಿಂಹ ಕ್ಯಾಮೆರಾ ಹಿಡಿದಿದ್ದಾರೆ.

Categories
ಸಿನಿ ಸುದ್ದಿ

ಹಾಯ್ ನಾನ್ನ ಸಿನಿಮಾ ಟೀಸರ್ ರಿಲೀಸ್: ಇದು ಮಗಳ ಬಾಂಧವ್ಯ ಇರುವ ನಾನಿ ಚಿತ್ರ

ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನಾನ್ನ.. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಹಾಡು ಭಾರೀ ಸದ್ದು ಮಾಡಿತ್ತು. ಇದೀಗ ಟೀಸರ್ ಅನಾವರಣಗೊಂಡಿದೆ. ತಂದೆ ಮತ್ತು ಮಗಳ ಬಾಂಧವ್ಯದ ಜೊತೆಗೆ ಪ್ರೀತಿ ಕಥಾಹಂದರವೇ ಟೀಸರ್ ನ ಹೈಲೆಟ್.. ತಾಯಿ ಇಲ್ಲದ ಮಗಳಿಗೆ ಅಪ್ಪನೇ ಸರ್ವಸ್ವ. ಅಪ್ಪನಿಗೆ ಮಗಳ ಜೀವ. ಈ ಚೆಂದದ ಕುಟುಂಬಕ್ಕೆ ಎಂಟ್ರಿಯಾಗುವ ನಾಯಕಿ. ಆ ನಂತರ ಏನಾಗುತ್ತದೆ ಅನ್ನೋದೇ ಟೀಸರ್ ಹೈಲೆಟ್ಸ್.

ನಾನಿ ಮತ್ತು ಮೃಣಾಲ್ ಠಾಕೂರ್ ಜೋಡಿಯಾಗಿ ನಟಿಸಿದ್ದಾರೆ‌. ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ.

ಮೋಹನ್ ಚೆರುಕುರಿ, ಮೂರ್ತಿ ಕಲಗಾರ, ಡಾ. ವಿಜೇಂದ್ರ ರೆಡ್ಡಿ ಅವರು ‘ವೈರ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಸಾನೂ ಜಾನ್ ವರ್ಗೀಸ್ ISC ಅವರ ಛಾಯಾಗ್ರಹಣ ಈ ಚಿತ್ರಕ್ಕೆ ಇರಲಿದೆ.

‘ಹೃದಯಂ’ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಅವರು ಸಂಗೀತ ನಿರ್ದೇಶನ ಮಾಡುತ್ತಿರುವುದು ವಿಶೇಷ. ಸಂಕಲನದ ಜವಾಬ್ದಾರಿಯನ್ನು ಪ್ರವೀಣ್ ಆಂಥೋನಿ ಅವರು ನಿಭಾಯಿಸುತ್ತಿದ್ದಾರೆ. ಡಿಸೆಂಬರ್ 7ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಸ್ಪಾರ್ಕ್ ಲೈಫ್ ಟ್ರೇಲರ್ ರಿಲೀಸ್: ನವೆಂಬರ್ 17ಕ್ಜೆ ತೆಲುಗು ನಟ ವಿಕ್ರಾಂತ್ ಚಿತ್ರ

ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ಸ್ಪಾರ್ಕ್ ಲೈಫ್ ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಈಗಾಗಲೇ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸ್ಪಾರ್ಕ್ ಲೈಫ್ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದೆ.

ಈ ವೇಳೆ ಮಾತನಾಡಿದ ನಾಯಕ ವಿಕ್ರಾಂತ್, ಸ್ಪಾರ್ಕ್ ಸಿನಿಮಾ ನನ್ನ ಮೂರು ವರ್ಷದ ಕನಸು. ಎಲ್ಲರಿಗೂ ಟ್ರೇಲರ್ ಇಷ್ಟವಾಗಿದೆ ಎಂದು ಭಾವಿಸುತ್ತೇನೆ. ಈ ಚಿತ್ರಕ್ಕಾಗಿ ಒಂದುವರೆ ವರ್ಷ ಕಥೆ ಬರೆದೆ. ಇನ್ನೊಂದುವರೆ ವರ್ಷ ನಿರ್ಮಾಣದಲ್ಲಿ ತೊಡಗಿಸಿಕೊಂಡೆ. ಮೇಕಿಂಗ್ ನಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಕಾಮಿಡಿ, ಪ್ರೀತಿ, ಥ್ರಿಲ್ಲಿಂಗ್ ಎಲಿಮೆಂಟ್ ಎಲ್ಲವೂ ಸಿನಿಮಾದಲ್ಲಿದೆ. ನಾನು ನಾಯಕನಾಗಿಯೂ ಬಣ್ಣ ಹಚ್ಚಿದ್ದೇನೆ ಎಂದರು.

ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಷಾರ್ ಧಿಲ್ಲೋನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಮಲಯಾಳಂನ ಹಿರಿಯ ನಟ ಗುರು ಸೋಮಸುಂದರಂ ಖಳನಾಯಕನಾಗಿ ನಟಿಸಿದ್ದಾರೆ. ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಬ್ರಹ್ಮಾಜಿ, ಶ್ರೀಕಾಂತ್ ಅಯ್ಯಂಗಾರ್, ಚಮ್ಮಕ್ ಚಂದ್ರ, ಅನ್ನಪೂರ್ಣಮ್ಮ, ರಾಜಾ ರವೀಂದ್ರ ಮುಂತಾದ ತಾರಾಬಳಗದಲ್ಲಿದ್ದಾರೆ.

ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಾಂತ್ ನಾಯಕನಾಗಿ ನಟಿಸುವುದರ ಜೊತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ‘ಹೃದಯಂ’ ಮತ್ತು ಕುಶಿ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡುತ್ತಿದ್ದಾರೆ.

ಆಕ್ಷನ್ ದೃಶ್ಯಗಳ ಜೊತೆಗೆ ಎಮೋಷನ್ಸ್, ಲವ್ ಮುಂತಾದ ಅಂಶಗಳನ್ನು ಇಟ್ಟುಕೊಂಡು ಸ್ಪಾರ್ಕ್ ಲೈಫ್ ಸಿನಿಮಾ ಮಾಡಲಾಗಿದೆ. ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗಿರುವ ಈ ಚಿತ್ರ, ನವೆಂಬರ್ 17ಕ್ಕೆ ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಬ್ಲಿಂಕ್ ಚಿತ್ರದ ಹಾಡು ಬಂತು: ಸಖಿಯೇ ಅಂದ್ರು ದೀಕ್ಷಿತ್

ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬ್ಲಿಂಕ್ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಆಗಂತುಕ ಸಾಂಗ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬ್ಲಿಂಕ್ ಅಂಗಳದಿಂದ ಸಖಿಯೆ ಎಂಬ ಮೆಲೋಡಿ ಹಾಡು ಅನಾವರಣಗೊಂಡಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಗೀತೆಗೆ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದು, ಪ್ರಸನ್ನ ಕುಮಾರ್ ಎಂ.ಎಸ್ ಸಾಹಿತ್ಯ ಒದಗಿಸಿದ್ದಾರೆ.

ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತನಾಡಿ, ರಂಗಭೂಮಿ ಜೊತೆ ಜೊತೆಯಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ಮಾಡಿದ ಬೆಂಬಲ ಮಾಡಿದೆ ಎಂದರು.

ನಾಯಕ ದೀಕ್ಷಿತ್ ಮಾತನಾಡಿ, ಬ್ಲಿಂಕ್ ಸಿನಿಮಾ ಯಾವುದೇ ಪರ್ಟಿಕ್ಯೂಲರ್ ಜಾನರ್ ಗೆ ಬೀಳಲ್ಲ. ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಅನ್ನೋವುದನ್ನು ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. ಬಟ್ ಇದು ಹಾಗಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು.. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ ಎಂದರು.

ನಾಯಕಿ ಮಂದಾರ ಮಾತನಾಡಿ, ನಾನು ಸ್ವಪ್ನ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಮ್ಮ ನಿರ್ದೇಶಕರು ನನಗೆ ಐದಾರು ವರ್ಷಗಳಿಂದ ಪರಿಚಯ. ಅವರೇ ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸುತ್ತಿದ್ದರು. ಅಂದಿನಿಂದ ಅವರು ನನಗೆ ಸ್ನೇಹಿತರು. ಬ್ಲಿಂಕ್ ಸಿನಿಮಾದ ಸ್ಕ್ರೀಪ್ಟ್ ಕೇಳಿದಾಗ ಖುಷಿಯಾಯಿತು. ನಾನು ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ. ಕನ್ನಡದಲ್ಲಿ ಲೂಸಿಯಾ, ಬೆಲ್ ಬಾಟಂ, ರಂಗಿತರಂಗ ಸಿನಿಮಾಗಳು ಹೇಗೆ ಕ್ರಾಂತಿ ಮಾಡಿದವೋ. ಹಾಗೆಯೇ ಈ ಚಿತ್ರವೂ ಮೈಲಿಗಲ್ಲಾಗಲಿದೆ ಎಂಬ ಭರವಸೆ ಇದೆ ಎಂದರು.

ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರ್ತಿರುವ ಬ್ಲಿಂಕ್ ಕನ್ನಡದಲ್ಲಿ ಒಂದು ಹೊಸ ಶೈಲಿಯ ಸಿನಿಮಾ , ವಿನೂತನ ಚಿತ್ರಕಥೆಯ ಈ ಚಿತ್ರ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ಬ್ಲಿಂಕ್ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ unexpected ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ.

Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು, ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

Categories
ಸಿನಿ ಸುದ್ದಿ

ವಿಷ್ಣು ಮಂಚು ನಟನೆಯ ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಸಿನಿಮಾಗೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ಶಿವರಾಜಕುಮಾರ್ ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.


ಶಿವರಾಜ್‍ಕುಮಾರ್ ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು. ಹಲವು ವರ್ಷಗಳ ಹಿಂದೆ ಶಿವರಾಜ್‍ಕುಮಾರ್ ಅವರು, ‘ಶಿವ ಮೆಚ್ಚಿದ ಕಣ್ಣಪ್ಪ’ ಚಿತ್ರದಲ್ಲಿ ಮೊದಲು ದಿಣ್ಣನಾಗಿ, ಆ ನಂತರ ಶಿವನ ಅನುಗ್ರಹಕ್ಕೆ ಪಾತ್ರವಾಗುವ ಕಣ್ಣಪ್ಪನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ಪಾತ್ರವನ್ನು ತೆಲುಗಿನಲ್ಲಿ ವಿಷ್ಣು ಮಂಚು ಮಾಡುತ್ತಿದ್ದಾರೆ ಎನ್ನುವುದು ವಿಶೇಷ.
‘ಕಣ್ಣಪ್ಪ’ ಚಿತ್ರದಲ್ಲಿ ಶಿವರಾಜ್‍ಕುಮಾರ್ ಅವರ ಪಾತ್ರವೇನು? ಎಂಬ ವಿಷಯವನ್ನು ಚಿತ್ರತಂಡ ಸದ್ಯಕ್ಕೆ ರಹಸ್ಯವಾಗಿಟ್ಟಿದೆ. ಆದರೆ, ಶಿವಣ್ಣ ಅವರ ಪಾತ್ರ ಇಡೀ ಚಿತ್ರದ ಹೈಲೈಟ್‍ ಆಗಲಿದ್ದು, ಅಭಿಮಾನಿಗಳಿಗೆ ಬಹಳ ಇಷ್ಟವಾಗಲಿದೆ ಎಂಬುದು ಚಿತ್ರತಂಡದ ಅಭಿಪ್ರಾಯ.


ಈ ಹಿಂದೆ ಸ್ಟಾರ್ ಪ್ಲಸ್‍ ವಾಹಿನಿಗಾಗಿ ‘ಮಹಾಭಾರತ’ ಸರಣಿಯನ್ನು ನಿರ್ದೇಶಿಸಿದ್ದ ಮುಕೇಶ್‍ ಕುಮಾರ್ ‍ಸಿಂಗ್‍, ಈ ಪೌರಾಣಿಕ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಟ ಮತ್ತು ನಿರ್ಮಾಪಕ ಡಾ. ಮೋಹನ್‍ ಬಾಬು ನಿರ್ಮಿಸುತ್ತಿರುವ ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯ ಚಿತ್ರೀಕರಣ ಈಗಾಗಲೇ ನ್ಯೂಜಿಲ್ಯಾಂಡ್‍ನಲ್ಲಿ ಪ್ರಾರಂಭವಾಗಿದೆ.

Categories
ಸಿನಿ ಸುದ್ದಿ

ಅಕ್ಟೋಬರ್ 18ಕ್ಕೆ ಮೈಸೂರಲ್ಲಿ ಘೋಸ್ಟ್ ಸಿನಿಮಾಗೆ ಶುಭಕೋರಿ ಅದ್ದೂರಿ ಮೆರವಣಿಗೆ

ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ.

ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ.

ಜ್ವಾಲಾಮುಖಿ ಡಾ.ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್ ಲ್ಯಾಂಡ್ಸ್ ಚಿತ್ರಮಂದಿರ ತಲುಪಲಿದೆ. ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್, ನಿರ್ಮಾಪಕರಾದ ಸಂದೇಶ್ ಮುಂತಾದವರು ಈ ಅದ್ದೂರಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.


ಮೈಸೂರಿನಲ್ಲಿ ಈಗ ದಸರಾ ಸಡಗರ. ಅದರೊಂದಿಗೆ “ಘೋಸ್ಟ್” ಚಿತ್ರ ಸಹ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಆನಂದವನ್ನು ಮತ್ತಷ್ಟು ಹೆಚ್ಚಿಸಲಿದೆ.

Categories
ಸಿನಿ ಸುದ್ದಿ

ಭಗೀರಥ ಚಿತ್ರಕ್ಕೆ ಒಂದೇ ಹಂತದ ಚಿತ್ರೀಕರಣ ಮುಕ್ತಾಯ

ಸಾಯಿ ರಮೇಶ್ ಪ್ರೊಡಕ್ಷನ್ಸ್ ನಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣವಾಗಿದೆ. ಸದ್ಯ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ “ಭಗೀರಥ” ಚಿತ್ರಕ್ಕಿದೆ.

ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ, ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

error: Content is protected !!