Categories
ಸಿನಿ ಸುದ್ದಿ

ನೆಲ್ಸನ್ ಗೆ ಸಿಕ್ಕ ಕರಾವಳಿ ಬೆಡಗಿ: ವಿನೋದ್ ಪ್ರಭಾಕರ್ ಜೋಡಿಯಾದ ಶ್ವೇತಾ ಡಿಸೋಜಾ

ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ ಮರಿ ಟೈಗರ್ ವಿನೋದ್ ಪ್ರಭಾಕರ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನ್ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ನೆಲ್ಸನ್ ಗೆ ನಾಯಕಿ ಸಿಕ್ಕಿದ್ದಾಳೆ. ಮಾಸ್ ಮರಿ ಟೈಗರ್ ವಿನೋದ್ ಗೆ ಜೋಡಿಯಾಗಿ ಶ್ವೇತಾ ಡಿಸೋಜಾ ನಟಿಸಲಿದ್ದಾರೆ.

ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ ನೆಲ್ಸನ್ ಬಳಗ ಸೇರಿಕೊಂಡಿದ್ದಾರೆ. ಹಿಂದಿ ಸಿನಿಮಾ Y ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಈ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಸಿನಿಮಾಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

1960-90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದು, ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ.

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅರುಣ್ ಕುಮಾರ್ ನೆಲ್ಸನ್ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅರುಣ್ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ.

Categories
ಸಿನಿ ಸುದ್ದಿ

ಚಿತ್ರ ವಿಮರ್ಶೆ: ರುದ್ರನ ಗನ್ನಾಭಿಷೇಕ!

ವಿಜಯ್ ಭರಮಸಾಗರ

ರೇಟಿಂಗ್: 5/3

ಚಿತ್ರ: ಸೂರಿ ಬ್ಯಾಡ್ ಮ್ಯಾನರ್ಸ್
ನಿರ್ದೇಶನ: ಸೂರಿ
ನಿರ್ಮಾಣ: ಸುಧೀರ್
ತಾರಾಗಣ: ಅಭಿಷೇಕ್ ಅಂಬರೀಶ್,
ರಚಿತಾ ರಾಮ್, ತಾರಾ, ಶೋಭರಾಜ್, ಶರತ್ ಲೋಹಿತಾಶ್ವ, ಇತರರು.

‘ನಾವ್ ಏನ್ ಹೇಳ್ತಿವೋ ಅದನ್ನು ಮಾಡಿ ತೋರಿಸ್ಬೇಕು. ಬೇರೆ ಏನೋ ಮಾಡಿದ್ರೆ ಅದು ಬ್ಯಾಡ್ ಮ್ಯಾನರ್ಸ್…’

ಈ ಡೈಲಾಗ್ ಬರುವ ಹೊತ್ತಿಗೆ ಕಥೆ ಆಗಷ್ಟೇ ಟೇಕಾಫ್ ಆಗಿರುತ್ತೆ. ಹೇಳಿ ಕೇಳಿ ಇದು ಸೂರಿ ಚಿತ್ರ. ಹಾಗಾಗಿ ಇಲ್ಲಿ ಎಲ್ಲವೂ ರಾ ಅಂಶಗಳೇ. ಕಥೆ ಸರಳವಾಗಿದೆ. ಚಿತ್ರಕಥೆಯೇ ಇಲ್ಲಿ ಜೀವಾಳ. ಉಳಿದಂತೆ ಕಥೆಯ ವೇಗಕ್ಕೆ ಎಡಿಟಿಂಗ್ ಕೂಡ ಸಾಥ್ ನೀಡಿದೆ. ಸಿನಿಮಾದಲ್ಲಿ ರಗಡ್ ಅಂಶಗಳೇ ಹೆಚ್ಚು. ಅದಕ್ಕೆ‌ಸರಿಯಾಗಿ
ಆಯ್ಕೆ ಮಾಡಿಕೊಂಡ ಲೊಕೇಷನ್ ಕೂಡ ರಗಡ್ ಆಗಿವೆ.

ಇದೊಂದು ರಾ ಕಂಟೆಂಟ್ ಸಿನಿಮಾ. ಕ್ರೈಮ್ ಹಿನ್ನೆಲೆಯ ಕಥೆ ನೋಡುಗರನ್ನು ಕೂರಿಸಿಕೊಳ್ಳುತ್ತೆ. ಮೊದಲರ್ಧ ಗನ್ ಸೌಂಡ್ ನಲ್ಲೇ ಚಿತ್ರ ಸಾಗುತ್ತೆ. ದ್ವಿತಿಯಾರ್ಧ ಅದರ ಸೌಂಡು ಇನ್ನೂ ಜಾಸ್ತಿ ಕೇಳುತ್ತೆ. ಅಲ್ಲಿಗೆ ಇದೊಂದು ಗನ್ ಮಾಫಿಯಾ ಕಥೆ ಅಂತ ಪ್ರತ್ಯೇಕವಾಗಿ ಹೇಳಬೇಕಿಲ್ಲ.
ಸೂರಿ ಅವರ ಫ್ಲೇವರ್ ಇಲ್ಲೂ ಮುಂದುವರೆದಿದೆ.

ನೋಡುಗನಿಗೆ ಸ್ವಲ್ಪ ಕನ್ಫ್ಯೂಷನ್ ಸಹಜ. ನೋಟ ಅತ್ತಿತ್ತ ಹರಿಸಿದರೆ ಗೊಂದಲ ಗ್ಯಾರಂಟಿ. ರಿವರ್ಸ್ ಸ್ಕ್ರೀನ್ ಪ್ಲೇ ಸಿನಿಮಾ ಆಗಿದ್ದರಿಂದ ಎಲ್ಲೂ ಬೋರ್ ಆಗಲ್ಲ. ಕೆಲವು ಕಡೆ ಅನಗತ್ಯ ಸೀನ್ ಎನಿಸಿದರೂ ಗನ್ ಸದ್ದಿನ ಮುಂದೆ ಎಲ್ಲವೂ ಗೌಣ. ಒಟ್ಟಾರೆ, ಚಿತ್ರ ಮಾಸ್ ಎಂಟರ್ಟೈನ್ಮೆಂಟ್ ಮೂಲಕ ರಸದೌತಣ ಕೊಡುತ್ತೆ. ಆಕ್ಷನ್ ಪ್ರಿಯರಿಗಂತೂ ಹತ್ತಿರ ಆಗುವ ಸಿನಿಮಾವಿದು.

ಕಥೆ ಏನು?
ರುದ್ರ ತನ್ನ ತಂದೆಯ ಕೆಲಸ ಪಡೆದು ಪೊಲೀಸ್ ಅಧಿಕಾರಿ ಆಗ್ತಾನೆ. ಘಟನೆಯಲ್ಲಿ ಸರ್ವೀಸ್ ಗನ್ ಕಳೆದುಕೊಳ್ತಾನೆ. ಅದನ್ನು ಹುಡುಕಿ ಹೊರಡುವ ಆತನಿಗೆ ಗನ್ ಮಾಫಿಯಾ ಪರಿಚಯವಾಗುತ್ತೆ. ಕಂಟ್ರಿ ಪಿಸ್ತೂಲ್‌ನಿಂದ ಹಿಡಿದು ಎಕೆ 47 ವರೆಗೂ ಅಲ್ಲಿ ಗನ್ ಮಾರಾಟವಾಗುತ್ತವೆ. ಗೋಡ ಅನ್ನೋ ಊರಲ್ಲಿ ರಾಶಿ ರಾಶಿ ಗನ್ ಉತ್ಪತ್ತಿಯಾಗುತ್ತವೆ. ಮಕ್ಕಳ ಕೈಯಲ್ಲೂ ಗನ್ನು. ಅಂತಹ ಊರಲ್ಲಿ ಗನ್ ಮಾಫಿಯಾ ತಂಡ ಪತ್ತೆ ಹಚ್ಚಿ ಹಿಗ್ಗಾ ಮುಗ್ಗಾ ಥಳಿಸೋಕೆ ರುದ್ರ ಮುಂದಾಗ್ತಾನೆ. ಆ ಬಳಿಕ ಒಂದಷ್ಟು ಘಟನೆಗಳು ನಡೆಯುತ್ತವೆ. ಅಲ್ಲಿಂದ ಕಥೆ ಇನ್ನೊಂದು ತಿರುವು ಪಡೆದುಕೊಳ್ಳುತ್ತೆ. ಇಲ್ಲಿ ಹೇರಳವಾಗಿಯೇ ಫೈಟ್ಸ್ ಇದೆ. ಭರಪೂರ ಮನರಂಜನೆಗೇನೂ ಕಮ್ಮಿ ಇಲ್ಲ.

ಯಾರು ಹೇಗೆ?
ಅಭಿಷೇಕ್ ಇಲ್ಲಿ ಮೊದ ಚಿತ್ರಕ್ಕೆ ಹೋಲಿಸಿದರೆ ಸಖತ್ ಆಗಿ ಕಾಣುತ್ತಾರೆ. ನಟನೆಯಲ್ಲಿ ಪ್ರಬುದ್ಧತೆ ಎದ್ದು ಕಾಣುತ್ತೆ. ಆಕ್ಷನ್ ಮೂಲಕ ಗಮನ ಸೆಳೆಯುವ ಅವರು, ಡ್ಯಾನ್ಸ್ ಸ್ಟೆಪ್ ನಲ್ಲಿ ನೀರಸ ಎನಿಸಿತ್ತಾರೆ. ಉಳಿದಂತೆ ಬಾಡಿ ಲಾಂಗ್ವೇಜ್, ಡೈಲಾಗ್ ಹರಿಬಿಡುವುದರಲ್ಲಿ ಇಷ್ಟ ಆಗ್ತಾರೆ.
ರಚಿತಾರಾಮ್ ಸ್ವಲ್ಪ ಹೊತ್ತು ಕಾಣಿಸಿಕೊಂಡರೂ ಇರುವಷ್ಟು ಸಮಯ ಕಾಡುತ್ತಾರೆ. ತಾರಾ ಅಮ್ಮನಾಗಿ ಇಷ್ಟವಾಗುತ್ತಾರೆ. ಉಳಿದಂತೆ ಬರುವ ಮಗಾಯಿ, ಫೀನಿಕ್ಸ್, ಗುನ್ನೀಸ್, ಶೋಲೆಬಾಬು, ಸಿಲ್ಕ್, ತಲ್ವಾರ್ ತಾತಯ್ಯ, ಹಂಡೆ ಪಾತ್ರಗಳು ಗಮನ ಸೆಳೆಯುತ್ತವೆ.


ಕುಡಿದ್ರೆ ಜುಮ್ ಅನ್ನುತ್ತೆ ಹಾಡು ಚೆನ್ನಾಗಿದೆ. ಆ ಹಾಡಲ್ಲೇ ಫೈಟ್ ಮಾಡಿರೋದು ಖುಷಿ ಕೊಡುತ್ತೆ. ಇನ್ನು ಸ್ಟಂಟ್ ಮಾಸ್ಟರ್
ರವಿವರ್ಮ ಕೆಲಸ ಅಬ್ಬರಿಸಿದೆ. ಚರಣ್ ಅವರ ಹಿನ್ನೆಲೆ ಸಂಗೀತದ ಕಥೆಗೆ ಪೂರಕವಾಗಿದೆ. ಶೇಖರ್ ಕ್ಯಾಮೆರಾ ಕೈಚಳಕ ಸೊಗಸಾಗಿದೆ.

Categories
ಸಿನಿ ಸುದ್ದಿ

ದಿ ಸೂಟ್ ! ಹೀಗೊಂದು ಸಿನಿಮಾದ ಆಡಿಯೋ ರಿಲೀಸ್

ಮದುವೆ ಮುಂತಾದ ಸಮಾರಂಭಗಳಲ್ಲಿ “ಸೂಟ್” ಧರಿಸಿದರೆ ಒಂದು ಕಳೆ. ಅಂತಹ “ಸೂಟ್” ಬಗ್ಗೆ ಸಿನಿಮಾವೊಂದು ಬರುತ್ತಿದ್ದು, ಬಿಡುಗಡೆಗೂ ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ನಿರ್ದೇಶಕ ಭಗತ್ ರಾಜ್, “ಸೂಟ್” ಗೆ ಅದರದೇ ಆದ ವಿಶೇಷತೆ ಇದೆ. ಎಂದಿಗೂ “ಸೂಟ್” ಹಾಕದವರು, ಮದುವೆ ಆರತಕ್ಷತೆಯಲ್ಲಾದರೂ “ಸೂಟ್” ಧರಿಸುವುದು ವಾಡಿಕೆ. ಅಂತಹ “ಸೂಟ್” ನಮ್ಮ ಚಿತ್ರದ ಕಥಾನಾಯಕ. ಈ ಚಿತ್ರದಲ್ಲಿ “ಸೂಟ್” ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು “ಸೂಟ್” ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. “ಸೂಟ್” ಬಗ್ಗೆ ಅನೇಕ ಗಣ್ಯರು ತಮಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ನಮ್ಮ ಚಿತ್ರ ಚಿತ್ರ ಮೂರು ಕಿರಣಗಳಿಂದ ಹೆಚ್ಚು ಪ್ರಕಾಶಿಸುತ್ತಿದೆ.

ಸಂಗೀತ ನಿರ್ದೇಶಕ ಕಿರಣ್ ಶಂಕರ್ ಸುಮಧುರ ಹಾಡುಗಳನ್ನು ನೀಡಿದ್ದಾರೆ. ಛಾಯಾಗ್ರಾಹಕ ಕಿರಣ್ ಹಂಪಾಪುರ ಅವರ ಛಾಯಾಗ್ರಹಣ “ಸೂಟ್” ನ ಅಂದವನೆ ಮತ್ತಷ್ಟು ಹೆಚ್ಚುಸಿದೆ‌. ರೇಖಾಚಿತ್ರಗಳ ಮೂಲಕ ಕಿರಣ್ ನಮ್ಮ ಚಿತ್ರಕ್ಕೆ ಜೀವ ತುಂಬಿದ್ದಾರೆ. ಇವರೆ ಆ ಮೂರು ಕಿರಣಗಳು. ಚಿತ್ರದಲ್ಲಿ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಸದ್ಯದಲ್ಲೇ “ಸೂಟ್” ತೆರೆಗೆ ಬರಲಿದೆ ಎಂದರು.

ವಿ.ನಾಗೇಂದ್ರ ಪ್ರಸಾದ್ ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ತಿಳಿಸಿ, “ಸೂಟ್” ಬಗ್ಗೆ ತಾವು ಬರೆದಿರುವ ಕಾವ್ಯವನ್ನು ವಾಚಿಸಿದರು.

ಚಿತ್ರದಲ್ಲಿ ಅಭಿನಯಿಸಿರುವ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಪ್ರಣಯ ಮೂರ್ತಿ, ದೀಪ್ತಿ ಕಾಪ್ಸೆ, ಭೀಷ್ಮ ರಾಮಯ್ಯ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರಗಳ ಕುರಿತು ಮಾತನಾಡಿದರು. ಅನಾರೋಗ್ಯದ ನಿಮಿತ್ತ ಕಾರ್ಯಕ್ರಮಕ್ಕೆ ಹಾಜರಾಗದ ಸಂಗೀತ ನಿರ್ದೇಶಕ ಕಿರಣ್ ಶಂಕರ್ ಹಾಡುಗಳ ಹಾಗೂ ಹಾಡಿದವರ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದರು.

ಛಾಯಾಗ್ರಾಹಕ ಕಿರಣ್ ಹಂಪಾಪುರ ಸೇರಿದಂತೆ ಅನೇಕ ತಂತ್ರಜ್ಞರು, ಕಲಾವಿದರು ಹಾಗೂ ಅತಿಥಿಗಳು ಆಡಿಯೋ ರಿಲೀಸ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ದ ಸೂಟ್” ಚಿತ್ರಕ್ಕೆ “ಅತಿಥಿದೇವೋ ಭವ” ಎಂಬ ಅಡಿಬರಹವಿದೆ.

Categories
ಸಿನಿ ಸುದ್ದಿ

ಲಿಡ್ಕರ್‌ಗೆ ಡಾಲಿ ರಾಯಭಾರಿ: ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಧನಂಜಯ ಸಾಥ್

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ. ನಟ‌ರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿಯಾಗಿದ್ದಾರೆ.

ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ.

ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ.

ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ.

ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ .

Categories
ಸಿನಿ ಸುದ್ದಿ

ಕನ್ನಡಕ್ಕೆ ಬಂದ ಬಿಂದು: ಕೆರೆಬೇಟೆ ಸಿನಿಮಾ ಮೂಲಕ ಚಿತ್ರರಂಗ ಸ್ಪರ್ಶ

ಸ್ಯಾಂಡಲ್ ವುಡ್ ಗೆ ಅನೇಕ ನಟಿಯರು ಎಂಟ್ರಿ ಕೊಡುತ್ತಿರುತ್ತಾರೆ. ಆದರೆ ಕೆಲವರು ಮಾತ್ರ ಗಟ್ಟಿಯಾಗಿ ಬೇರೂರುತ್ತಾರೆ ಮತ್ತು ಸ್ಟಾರ್ ಆಗಿ ಮೆರೆಯುತ್ತಾರೆ. ಇನ್ನು ಕೆಲವರು ಒಂದೆರಡು ಸಿನಿಮಾ ಮಾಡಿ ಮಾಯಾಗುತ್ತಾರೆ. ಇದೀಗ’ ಕೆರೆ ಬೇಟೆ’ ಸಿನಿಮಾ ಮೂಲಕ ಮತ್ತೋರ್ವ ನಟಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ‘ಕೆರೆ ಬೇಟೆ’ ಸಿನಿಮಾ ಮೂಲಕ ನಾಯಕಿಯಾಗಿ ಬಿಂದು ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಮತ್ತು ಮೋಶನ್ ಪೋಸ್ಟರ್ ಮೂಲಕ ಬಾರಿ ಸದ್ದು ಮಾಡಿರುವ ‘ಕೆರೆ ಬೇಟೆ’ ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈ ನಡುವೆ ನಾಯಕಿ ಬಿಂದು ಅವರ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ ಸಿನಿಮಾತಂಡ.

ಅಂದಹಾಗೆ ಬಿಂದುಗೆ ಇದು ಮೊದಲ ಸಿನಿಮಾ. ಕನ್ನಡದವರೇ ಆಗಿರುವ ಬಿಂದು ಈ ಸಿನಿಮಾ ಮೂಲಕ ಹಳ್ಳಿ ಹುಡುಗಿಯಾಗಿ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ. ಮೊದಲ ಸಿನಿಮಾದಲ್ಲೆ ವಿಭಿನ್ನ ಪಾತ್ರದಲ್ಲಿ ನಟಿಸುವ ಅವಕಾಶ ಪಡೆದಿರುವ ಬಿಂದು ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಎಕ್ಸಾಯಿಟ್ ಆಗಿದ್ದಾರೆ.

ಬೆಂಗಳೂರು ಮೂಲದ ನಟಿ ಬಿಂದು ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಸಿನಿಮಾದಲ್ಲಿ ನಟಿಸಬೇಕೆನ್ನುವುದು ಬಿಂದು ಅವರ ಕನಸಾಗಿತ್ತು. ಆ ಕನಸು ಈಗ ‘ಕೆರೆ ಬೇಟೆ’ ಸಿನಿಮಾ ಮೂಲಕ ನನಸುಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಂದು ಹೇಳಿದ್ದಿಷ್ಟು.

‘ಕಾಲೇಜು ದಿನಗಳಲ್ಲಿ
ಫ್ಯಾಷನ್ ವಾಕ್, ಕಲ್ಚರಲ್ ಆ್ಯಕ್ಟಿವಿಟಿ ಮತ್ತು
ಡ್ರಾಮ ಮಾಡುತ್ತಿದ್ದೆ, ಆಗ ನಮ್ಮ ಕಾಲೇಜ್ ಲೆಕ್ಚರರ್ಸ್ ನನ್ನ ಅಭಿನಯ ನೋಡಿ ಅಪ್ರಿಶಿಯೇಟ್ ಮಾಡುತ್ತಿದ್ದರು, ಆ ದಿನಗಲ್ಲಿ ನನಗೆ ಸಿನೆಮಾ ಬಗ್ಗೆ ಒಲವು ಮೂಡಿತು,
ಕೆಲವು ಸಿನಿಮಾಗಳ ಆಡಿಶನ್ ಗೆ ಹೋಗ್ತಾ ಇದ್ದೆ, ಅದೇ ರೀತಿ ಕೆರೆಬೇಟೆ ಸಿನಿಮಾಗು ಆಡಿಷನ್ ಕೊಟ್ಡಿದ್ದೆ, ಕೆಲ ದಿನಗಳ ನಂತರ, ಪ್ರೊಡಕ್ಷನ್ ಕಡೆಯಿಂದ ಕರೆ ಮಾಡಿ ನಾಯಕಿ ಪಾತ್ರಕ್ಕೆ ಆಯ್ಕೆ ಮಾಡಿದರು. ಬಳಿಕ ಅವರೇ ನಿನಾಸಮ್ ತರಬೇತು ದಾರರಿಂದ ಅಭಿನಯ ತರಬೇತಿ ಮಾಡಿಸಿದರು. ಈ ಅವಕಾಶ ಕೊಟ್ಟ ಕೆರೆಬೇಟೆ ಚಿತ್ರ ತಂಡಕ್ಕೆ ಕೃತಜ್ಞಳಾಗಿದ್ದೇನೆ’ ಎನ್ನುತ್ತಾರೆ.

ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ನಟಿಯಾಗಿ ಬೆಳೆಯುವ ಕನಸು ಕಂಡಿರುವ ಬಿಂದು ಕೆರೆಬೇಟೆ ಸಿನಿಮಾ ಮೂಲಕ ಅಭಿಮಾನಿಗಳ ಹೃದಯ ಗೆಲ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ

Categories
ಸಿನಿ ಸುದ್ದಿ

ನವೆಂಬರ್ 24ಕ್ಕೆ ಎಲೆಕ್ಟ್ರಾನಿಕ್ ಸಿಟಿ ರಿಲೀಸ್: ಸದ್ದಾಗುತ್ತಿದೆ ಟ್ರೇಲರ್


ಬೆಂಗಳೂರಿಗೆ ಐಟಿ ಸಿಟಿ ಎಂದು ಹೆಸರು ಬರಲು “ಎಲೆಕ್ಟ್ರಾನಿಕ್ ಸಿಟಿ” ಪ್ರಮುಖ ಕಾರಣ. ಅಷ್ಟು ಐಟಿ ಕಂಪನಿಗಳು ಅಲ್ಲಿದೆ. ಅಂತಹ ಪ್ರತಿಷ್ಠಿತ ಬಡಾವಣೆಯ ಹೆಸರೆ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆಯುತ್ತಿದೆ.

ಕೆ.ಪಿ.ಸಿ.ಸಿ ಜನರಲ್ ಸೆಕ್ರೆಟರಿ ಶಿವಣ್ಣ, ಶಿಕ್ಷಣ ತಜ್ಞ ವುಡೆ ಪಿ ಕೃಷ್ಣ ಹಾಗೂ ಚಲನಚಿತ್ರ ನಿರ್ದೇಶಕ ಲಿಂಗದೇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಆರ್ ಚಿಕ್ಕಣ್ಣ ನಿರ್ಮಿಸಿ , ನಿರ್ದೇಶಿಸಿರುವ “ಎಲೆಕ್ಟ್ರಾನಿಕ್ ಸಿಟಿ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.


ನಾನು ಹದಿನಾರು ವರ್ಷದಿಂದ ಐಟಿ ಉದ್ಯೋಗದಲ್ಲಿದ್ದೇನೆ‌. ಐಟಿ ಉದ್ಯೋಗಿಗಳ ಬದುಕಿನ ಬಗ್ಗೆ ಚಿತ್ರ ಮಾಡುವ ಅಸೆ ಬಂತು‌. ಐದು ವರ್ಷಗಳ ಹಿಂದೆ ಈ ಚಿತ್ರದ ಕಥೆ ಬರೆದೆ. ಕಥೆಯ ಕುರಿತು ಚಿತ್ರರಂಗದ ಅನೇಕರ ಜೊತೆ ಚರ್ಚಿಸಿ, 2021ರಲ್ಲಿ ಚಿತ್ರೀಕರಣ ಆರಂಭ ಮಾಡಿದೆ‌.

2022 ರಲ್ಲಿ ಚಿತ್ರ ಸಿದ್ದವಾಯಿತು. ಈವರೆಗೂ ನಲವತ್ತೆರಡಕ್ಕೂ ಅಧಿಕ ಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿರುವ ನಮ್ಮ ಚಿತ್ರ ಮೂವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ವಿವಿಧ ಭಾಗಗಳಲ್ಲಿ ಪಡೆದುಕೊಂಡಿದೆ.

ನವೆಂಬರ್ 24 ಚಿತ್ರ ತೆರೆಗೆ ಬರಲಿದೆ ನೋಡಿ ಹಾರೈಸಿ ಎಂದರು ನಿರ್ದೇಶಕ – ನಿರ್ಮಾಪಕ ಆರ್ ಚಿಕ್ಕಣ್ಣ.
ಈ ಚಿತ್ರದಲ್ಲಿ ನಾನು ಐಟಿ ಉದ್ಯೋಗಿ. ಚಿಕ್ಕಣ್ಣ ಅವರ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಈ ಚಿತ್ರದಿಂದ ನನಗೆ “ಘೋಸ್ಟ್” ಚಿತ್ರದಲ್ಲಿ ನಟಿಸುವ ಅವಕಾಶ ದೊರೆಯಿತು ಎಂದು ನಾಯಕ ಆರ್ಯನ್ ಶೆಟ್ಟಿ ತಿಳಿಸಿದರು.

ನಾಯಕಿಯರಾದ ದಿಯಾ ಆಶ್ಲೇಶ, ರಕ್ಷಿತ ಕೆರೆಮನೆ ಹಾಗೂ ನಟಿ ರಶ್ಮಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಕಲನಾಕಾರ ಸೌಂದರ್ ರಾಜ್ ಹಾಗೂ ಕಲಾ ನಿರ್ದೇಶಕ ಹಂಪಿ ಸುಂದರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ದೆವ್ವದ ಜೊತೆ ಪ್ರಥಮ್ ಫಸ್ಟ್ ನೈಟ್! ಶುರುವಾಯ್ತು ಹೊಸ ಚಿತ್ರ

ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭ ಕೋರಿದ್ದಾರೆ.

“ಫಸ್ಟ್ ನೈಟ್ ವಿತ್ ದೆವ್ವ” ಹಾರಾರ್ ವಿತ್ ಕಾಮಿಡಿ ಜಾನರ್ ನ ಚಿತ್ರ ಎಂದು ಮಾತನಾಡಿದ ನಾಯಕ ಪ್ರಥಮ್, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನಾನು ಈ ಚಿತ್ರಕ್ಕೆ ಕಥೆ ಬರೆಯಲು “ವಿಕ್ರಮ್ ಮತ್ತು ಬೇತಾಳ” ಕಥೆ ಸ್ಪೂರ್ತಿ. ಸಾಕಷ್ಟು ಹಾರಾರ್ ಚಿತ್ರ ಬಂದಿದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ತೋರಿಸುತ್ತಿದ್ದೇವೆ‌.

ನಿಖಿತ ಅವರು ನನ್ನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಂಗೀತಾ, ಹರೀಶ್ ರಾಜ್, ತನುಜಾ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಮಾನ್ಯ ಸಿಂಗ್ ದೆವ್ವದ ಪಾತ್ರ ಮಾಡುತ್ತಿದ್ದಾರೆ. ನನ್ನ ಸ್ನೇಹಿತ ನವೀನ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂದು ತಿಳಿಸಿದರು.

ಪ್ರಥಮ್ ಬರೆದಿರುವ ಕಥೆ ಚೆನ್ನಾಗಿದೆ. ನಾನು ಛಾಯಾಗ್ರಹಣದೊಂದಿಗೆ ನಿರ್ದೇಶನವನ್ನು ಮಾಡುತ್ತಿದ್ದೇನೆ‌. ಇಂದಿನಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಿದೆ. ಹಾಡಿನ ಚಿತ್ರೀಕರಣ ಹೊರದೇಶದಲ್ಲಿ ನಡೆಯಲಿದೆ ಎಂದರು ನಿರ್ದೇಶಕ ಪಿ.ವಿ.ಆರ್ ಸ್ವಾಮಿ.

ಚಿತ್ರದ ನಾಯಕಿರಾದ ನಿಖಿತ ಹಾಗೂ ಮಾನ್ಯ ಸಿಂಗ್, ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಶ್ರೀನಿವಾಸಮೂರ್ತಿ, ಸಂಗೀತ, ಹರೀಶ್ ರಾಜ್ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ಅದ್ವಿಕ್ ವರ್ಮ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ನವೆಂಬರ್ 22ಕ್ಕೆ ಡಂಕಿಯ ಲಪ್ ಟಪ್ ಗಯಾ ಹಾಡು ರಿಲೀಸ್: ಇದು ಮೊದಲ ರೊಮ್ಯಾಂಟಿಕ್ ಸಾಂಗ್

ಶಾರುಖ್‌ ಖಾನ್‌ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಡಂಕಿ ಸಿನಿಮಾದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ.

ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

Categories
ಸಿನಿ ಸುದ್ದಿ

ಬರ್ತ್ ಡೇ ಖುಷಿಯಲ್ಲಿ ಡಂಕಿ ಡೈರೆಕ್ಟರ್ : ರಾಜ್ ಕುಮಾರ್ ಹಿರಾನಿ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರ

ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್. ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು ಜನ್ಮದಿನದ ಸಂಭ್ರಮ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ ಡಂಕಿ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.

ಸಾಮಾನ್ಯವಾಗಿ ರಾಜ್ ಕುಮಾರ್ ಹಿರಾನಿ ಚಿತ್ರಗಳು ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶಗಳನ್ನು ಒಳಗೊಂಡಿರುತ್ತದೆ. ಫ್ಯಾಮಿಲಿ ಕುಳಿತು ನೋಡುವ ಸಿನಿಮಾಗಳಾಗಿರುತ್ತವೆ. ಇಂತಹ ಸ್ಟಾರ್ ಡೈರೆಕ್ಟರ್ ಶಾರುಖ್ ಖಾನ್ ಗೆ ಡಂಕಿ ಎಂಬ ಸಿನಿಮಾ ಅನೌನ್ಸ್ ಮಾಡಿರುವುದು ಗೊತ್ತೇ ಇದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ನಾಯಕನಾಗಿ ಶಾರುಖ್ ಖಾನ್ ನಟಿಸಿದ್ದು, ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಅತೀ ದೊಡ್ಡ ತಾರಾಬಳಗದ ಡಂಕಿ' ಸಿನಿಮಾ ವಿಶ್ವದಾದ್ಯಂತ ಕಣಕ್ಕಿಳಿಯಲು ಸಜ್ಜಾಗಿದ್ದು,ಸಲಾರ್’ ಎದುರು ಸ್ಪರ್ಧಿಸಲು ಸಿದ್ದವಾಗಿದೆ. ಇದೇ ಡಿಸೆಂಬರ್ 22ರಂದು ಮೋಸ್ಟ್ ಅವೈಟೆಡ್ ಡಂಕಿ ತೆರೆಗಪ್ಪಳಿಸಲಿದೆ.

Categories
ಸಿನಿ ಸುದ್ದಿ

ಝೀಬ್ರಾ ಶೂಟಿಂಗ್ ಮುಗೀತು; ಇದು ಡಾಲಿ- ಸತ್ಯದೇವ್ ಚಿತ್ರ

ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.

ಝೀಬ್ರಾ ಎಂಬ ಮಾಸ್ ಎಂಟರ್‌ಟೇನರ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇಬ್ಬರದ್ದೂ 26ನೇ ಸಿನಿಮಾ ಎಂಬುದು ವಿಶೇಷ.

ಝೀಬ್ರಾ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್‌, ಸತ್ಯರಾಜ್‌, ಸುನೀಲ್‌ ವರ್ಮ, ಜೆನಿಫರ್‌ , ಸುರೇಶ್‌ಚಂದ್ರ ಮೆನನ್‌, ಕಲ್ಯಾಣಿ ನಟರಾಜ್‌ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಪ್ಯಾನ್ ಇಂಡಿಯಾ ‘ZEBRA’ ಚಿತ್ರಕ್ಕೆ ಕೆಜಿಎಫ್​ ಚಿತ್ರ ಖ್ಯಾತಿಯ ರವಿ ಬಸ್ರೂರು ಸಂಗೀತ ಕೊಟ್ಟಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ.

error: Content is protected !!