Categories
ಸಿನಿ ಸುದ್ದಿ

ಆಗಸ್ಟ್ 10ಕ್ಕೆ ಜೈಲರ್ ಬಿಡುಗಡೆ: ರಜನಿಕಾಂತ್ ಫ್ಯಾನ್ಸ್ ಖುಷ್ ಹುವಾ

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ನಿರ್ದೇಶಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.

ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

Categories
ಸಿನಿ ಸುದ್ದಿ

ಜುಲೈ 21ಕ್ಕೆ ಬರ್ತಾಳೆ ಅಂಬುಜ! ಬೆಚ್ಚಿ ಬೀಳೋ ಕಥೆ ಹೇಳ್ತಾರೆ ಶುಭ-ರಜನಿ

ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು. ಹಾಗೇ ಎರಡನೇ ಚಿತ್ರದ ಹುಡುಕಾಟದಲ್ಲಿದ್ದಾಗ ಕಾಶೀನಾಥ್ ಸರ್ ಸಿಕ್ಕರು. ನಾನು ಗ್ಯಾರಂಟಿ ನೀಡುತ್ತೇನೆ. ಈ ಕಥೆ ನೀವೆಲ್ಲೂ ನೋಡಿರಲ್ಲ, ಕೇಳಿರಲ್ಲ,ಖಂಡಿತಾ ಚಿತ್ರ ನೋಡುವಾಗ ಬೆಚ್ಚಿ ಬೀಳುತ್ತೀರಾ..
ನಾವೂ ಸುಮ್ಮನೇ ಹೇಳುತ್ತಿಲ್ಲ, ಭರವಸೆ ನೀಡುತ್ತಿದ್ದೇವೆ. ಚಿತ್ರ ನೋಡಿದ‌ ಮೇಲೆ‌ ನೀವೇ ಶಾಕ್ ಆಗ್ತಿರ.


ಇದಕ್ಕೆ ಮೊದಲಿಗೆ ಕಲಾವಿದರಾಗಿ ಬಂದಿದ್ದು, ಶುಭಾ ಪೂಂಜಾ.
ರಜಿನಿ ಆಯ್ಕೆಯಾಗಿದ್ದೇ ವಿಚಿತ್ರ. ಸಿನಿಮಾನ ಒಂದಷ್ಟು ಜನ ಜೆನರಲ್ ಆಡಿಯನ್ಸ್ ನೋಡಿದ್ದಾರೆ.
ಅವರ ಕೈಕಾಲೇ ವೈಬ್ರೇಷನ್ ಆಗಿತ್ತು ಎಂದಿದ್ದಾರೆ.‌ಮತ್ತು ಚಿತ್ರದ ಕಥಾಹಂದರ ನೋಡಿ ಒಂದಷ್ಟು ಚರ್ಚೆ‌ ಮಾಡಿದ್ದಾರೆ.

ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ಮಾತನಾಡಿ, ನಾನು ಕಥೆ ಬರೆದಾಗ ಇಷ್ಟೊಂದು ಚೆನ್ನಾಗಿ ಬರುತ್ತೆ ಅಂತ ಗೊತ್ತಿರಲಿಲ್ಲ. ಎಲ್ಲರೂ ಶ್ರಮ ಹಾಕಿದ್ದಾರೆ. ರಜಿನಿ ಮೇಡಂಗೆ ಕಾಲು ನೋವಿದ್ದರು 25 ಕೆಜಿ ತೂಕದಷ್ಟು ಕಾಸ್ಟ್ಯೂಮ್ ಹಾಕಿಕೊಂಡು ಡ್ಯಾನ್ಸ್ ಮಾಡಿದ್ದಾರೆ. ಶುಭಾ ಮೇಡಂ ಎತ್ತರದ ಭಯ ಇದ್ರು 3km ಬೆಟ್ಟವನ್ನು ಹತ್ತಿ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಈ ಸಿನಿಮಾಗಾಗಿ ಎಲ್ಲರೂ ಎಫರ್ಟ್ ಹಾಕಿದ್ದಾರೆ. ವಿಶೇಷವಾಗಿ ನಿರ್ದೇಶಕ ಶ್ರೀನಿ ಅವರು ತುಂಬಾ ಕಷ್ಟಪಟ್ಟು ಇಷ್ಟಪಟ್ಟು ಅಂಬುಜ ಚಿತ್ರವನ್ನು ಎಲ್ಲರಿಗೂ ಇಷ್ಟವಾಗುವಂತೆ ಮಾಡುದ್ದಾರೆ. ನಿಮಗೂ ಸಿನಿಮಾ ಖಂಡಿತ ಇಷ್ಟವಾಗುತ್ತೆ ಎಂದಿದ್ದಾರೆ.

ಶುಭಾ ಪೂಂಜಾ ಮಾತನಾಡಿ, ನನ್ನ ಪಾತ್ರ ಒಂದು ಕ್ರೈಂ ರಿಪೋರ್ಟರ್ ಪಾತ್ರ. ತುಂಬಾ ಶೇಡ್ ಇದೆ. ನನಗೆ ತುಂಬಾ ಇಷ್ಟವಾದ ಪಾತ್ರ. ಸಿನಿಮಾನಾ‌ ನಾನು ನೋಡಿದ್ದೇನೆ. ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಶ್ರೀನಿ ಜೊತೆಗೆ ಇದು ಎರಡನೇ ಸಿನಿಮಾ. ಕ್ರೈಮ್, ಹಾರರ್, ಸಸ್ಪೆನ್ಸ್ , ಕಾಮಿಡಿ, ಸೆಂಟಿಮೆಂಟ್ ಎಲ್ಲ ಅಂಶವನ್ನು ಸಿನಿಮಾದಲ್ಲಿ ಹಾಕುತ್ತಾರೆ. ಫ್ಯಾಮಿಲಿ ಕುಳಿತು ನೋಡುವಂತಹ ಸಿನಿಮಾ ಎಂದರು.

ರಜಿನಿ ಮಾತನಾಡಿ, ಇದು ನನ್ನ ಮೊದಲನೇ ಚಿತ್ರ, ಮೊದಲನೇ ಚಿತ್ರದಲ್ಲಿ ಅದ್ಭುತವಾದ ಪಾತ್ರ ನೀಡಿದ್ದಕ್ಕೆ ಧನ್ಯವಾದಗಳು
ನನ್ನ ಪಾತ್ರ ಎಲ್ಲರನ್ನೂ ಕಾಡುವಂತೆ ಮೂಡಿ ಬಂದಿದೆ. ನಾನು ಹೇಳೋದಕ್ಕಿಂತ ಜನ ನೋಡಿ, ಮೆಚ್ಚಿಕೊಂಡರೆ ಖುಷಿಯಾಗುತ್ತದೆ ಎಂದು ತಿಳಿಸಿದರು.

ಇನ್ನೂ ಚಿತ್ರದ ನಾಯಕನಾಗಿ ದೀಪಕ್ ಸುಬ್ರಮಣ್ಯ ಮಾತನಾಡಿ ಇದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾ ನನ್ನ ಪಾತ್ರಕ್ಕೆ ವಿಶೇಷ ಸ್ಕೋಪ್ ಇದೆ ಎಂದರು.
ಪದ್ಮಜಾರಾವ್, ಜಗದೀಶ್ ಹಲ್ಕುಡೆ, ಶರಣಯ್ಯ ,ಕಾಮಿಡಿಕಿಲಾಡಿ ಗೋವಿಂದೇಗೌಡ, ಸಂದೇಶ್ ಶೆಟ್ಟಿ, ನಿಶಾ ಹೆಗಡೆ, ಆಶಾರಾಣಿ, ಗುರುದೇವ ನಾಗಾರಾಜ, ಬೇಬಿ ಆಕಾಂಕ್ಷ,
ಮೋಹನ್ ಮಾಸ್ಟರ್, ಕ್ಯಾಮೆರಾಮನ್ ಮುರಳೀಧರ್ , ಎಡಿಟರ್ ವಿಜಯ್ ಎಂ.ಕುಮಾರ್, ಹಿನ್ನೆಲೆ ಸಂಗೀತ ನಿರ್ಧೇಶಕ ತ್ಯಾಗರಾಜ್ ಎಂ.ಎಸ್, ಎಲ್ಲರೂ ಚಿತ್ರದ ಬಗ್ಗೆ ಉತ್ಸುಕರಾಗಿ ಮಾತನಾಡಿದರು.


ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ ಒಳಗೊಂಡ ಅಂಬುಜಾ ಸಿನಿಮಾಗೆ ಕಾಶಿನಾಥ್ ಡಿ ಮಡಿವಾಳರ್ ಬಂಡವಾಳ ಹೂಡಿದ್ದಾರೆ. ಮೊದಲ ಬಾರಿಗೆ ನಿರ್ಮಾಣಕ್ಕಿಳಿದಿರುವ ಇವರು, ಚಿತ್ರಕ್ಕೆ ಕಥೆ, ಸಾಹಿತ್ಯ ಕೂಡ ಬರೆದಿದ್ದಾರೆ. ಶ್ರೀನಿ ಹನುಂಮತರಾಜು ಎರಡನೇ ಸಿನಿಮಾ ಇದಾಗಿದೆ. ಪ್ರಸನ್ನ ಕುಮಾರ್ ಎಂ ಎಸ್ ಸಂಗೀತ ನಿರ್ದೇಶನ ಮಾಡಿದ್ದು, ಲಾಲಿ ಹಾಡನ್ನು ನಿರ್ಮಾಪಕ ಕಾಶಿನಾಥ್ ಮಗಳು, ಆಕಾಂಕ್ಷ ಅದ್ಭುತವಾಗಿ ಹಾಡಿದ್ದಾರೆ. ಚಿತ್ರದ ಸಹ ನಿರ್ಮಾಣದಲ್ಲಿ ಲೋಕೇಶ್ ಭೈರವ, ಶಿವಪ್ರಕಾಶ್ ಕೈ ಜೋಡಿಸಿದ್ದಾರೆ.
ಟ್ರೇಲರ್ ಮೂಲಕ ಗಮನಸೆಳೆಯುತ್ತಿರುವ ಅಂಬುಜಾ ಜುಲೈ 21ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಡೈಮಂಡ್ ಹಿಡಿದು ಕ್ರಾಸ್ ಮಾಡಿದ ಮಿತ್ರ ಅಂಡ್ ಮನೀಶ್! ರಾಮ್ ದೀಪ್ ನಿರ್ದೇಶನದ ಡೈಮಂಡ್ ಕ್ರಾಸ್ ರಿಲೀಸ್ ಗೆ ರೆಡಿ

ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಮೂಲಕ ನಿರ್ಮಾಣವಾಗಿರುವ, ರಾಮ್ ದೀಪ್ ನಿರ್ದೇಶನದ ” ಡೈಮಂಡ್‌ ಕ್ರಾಸ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ಹೊಸಪೇಟೆ ಉದ್ಯಮಿ ಮನೀಶ್ ಹಾಗೂ ನಟ ಮಿತ್ರ ಹಾಗೂ ಅವರ ಸ್ನೇಹಿತರ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ‌. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಚಿತ್ರದ ಕೆಲವು ತುಣುಕುಗಳನ್ನು ಬಿಡುಗಡೆ‌ ಮಾಡಲಾಗಿದೆ. ಜೇಡ್ರಳಿ ಕೃಷ್ಣಪ್ಪ ಹಾಗೂ ಜೈಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶುಭ ಕೋರಿದ್ದಾರೆ.

ಹೊಸಪೇಟೆ ಉದ್ಯಮಿ ಮನೀಶ್ ನನ್ನ ಮಿತ್ರರು ಎಂದು ಮಾತು ಶುರು ಮಾಡಿದ ನಟ ಮಿತ್ರ, ಮನೀಶ್ ಅವರಿಗೆ ಸಿನಿಮಾ‌ ನಿರ್ಮಾಣ ಮಾಡುವ ಆಸಕ್ತಿಯಿತ್ತು. ಆದರೆ ನಾನು ಮೊದಲು ಸಿನಿಮಾ ನಿರ್ಮಾಣ ಮಾಡಬೇಡಿ. ಸಾಕಷ್ಟು ಒಳ್ಳೆಯ ಚಿತ್ರಗಳು ನಿರ್ಮಾಣವಾಗಿವೆ. ಅಂತಹ ಚಿತ್ರಗಳನ್ನು ವಿತರಣೆ ಮಾಡುವ ಮೂಲಕ ಚಿತ್ರಮಂದಿರಗಳಿಗೆ ತರುವ ಪ್ರಯತ್ನ ಮಾಡಿ. ಆನಂತರ ಸಿನಿಮಾ ಮಾಡಿ ಎಂದು ಸಲಹೆ ನೀಡಿದೆ‌. ಅದಕ್ಕೆ ಮನೀಶ್ ಒಪ್ಪಿದರು. ನನ್ನ ಕೆಲವು ಸ್ನೇಹಿತರು ಇದಕ್ಕೆ ಜೊತೆಯಾದರು ಈಗ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಸಂಸ್ಥೆಯ ಮೂಲಕ ರಾಮ್ ದೀಪ್ ನಿರ್ದೇಶನದ “ಡೈಮಂಡ್ ಕ್ರಾಸ್” ಚಿತ್ರವನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತಿದ್ದೇವೆ ಎಂದರು.

ಮಿತ್ರ ಅವರು ಕೊಟ್ಟ ಸಲಹೆ ಚೆನ್ನಾಗಿದೆ. ರಿವರ್ಸ್ ಪ್ಲೇ ಮೂಲಕ ನಾವು ಕೆಲಸ ಶುರು ಮಾಡಿದ್ದೇವೆ. ಮೊದಲು ಒಳ್ಳೆಯ ಚಿತ್ರಗಳನ್ನು ವಿತರಣೆ ಮಾಡಿ, ಆನಂತರ ನಿರ್ಮಾಣ ಮಾಡುತ್ತೇನೆ. ಈಗ ಮೊದಲ ಹೆಜ್ಜೆಯಾಗಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಚಿತ್ರ ಚೆನ್ನಾಗಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದು ಮನೀಶ್ ತಿಳಿಸಿದರು.

ಇದೊಂದು ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಚಿತ್ರ ಎಂದು ಚಿತ್ರದ ಕುರಿತು ಮಾತು ಆರಂಭಿಸಿದ ನಿರ್ದೇಶಕ ರಾಮ್ ದೀಪ್, ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರುವುದಾಗಿ ತಿಳಿಸಿ ತಮ್ಮ ತಂಡದ ಪರಿಚಯ ಮಾಡಿಕೊಟ್ಟರು.

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ರಾಮಚಂದ್ರ ಬಾಬು, ಮುಖ್ಯಪಾತ್ರಗಳಲ್ಲಿ ನಟಿಸಿರುವ ನಟಿ ರೂಪಿಕಾ, ರಜತ್ ಅಣ್ಣಪ್ಪ, ಮನು ಕೆ.ಎಂ , ಛಾಯಾಗ್ರಹಣ – ಸಂಕಲನ ಮಾಡಿರುವ ಸಂತೋಷ್ ರಾಧಾಕೃಷ್ಣನ್, ಸಂಗೀತ ನಿರ್ದೇಶಕ ಲೇಖನ್ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಅನೀಶ್ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಕೋರ್ಟ್ ಮೊರೆ ಹೋಗುವ ಕುರಿತು ಚಿತ್ರರಂಗ ಸಂಸ್ಥೆಗಳಿಗೆ ಕಿಚ್ಚ ಸುದೀಪ್ ಬರೆದ ಪತ್ರ ವಿವರಣೆ

ಇತ್ತೀಚಿಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಗಳಿಗೆ ಕಿಚ್ಚ ಸುದೀಪ್ ಅವರು ಗೌರವ ಪೂರ್ವಕವಾಗಿ ತಾವು ನ್ಯಾಯಾಲಯಕ್ಕೆ ಹೋಗುತ್ತಿರುವುದರ ಬಗ್ಗೆ ಒಂದು ಆಪ್ತ ವಿವರಣೆ ಸಲ್ಲಿಸಿದ್ದಾರೆ. ಅದರ ಸಂಕ್ಷಿಪ್ತ ವಿವರ ಇಲ್ಲಿದೆ.

ಸುದೀಪ್ ಇತ್ತೀಚೆಗೆ ಚಿತ್ರರಂಗದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದರು.

ನಿರ್ಮಾಪಕ ಎನ್.ಕುಮಾರ್ ಅವರು ಸುದೀಪ್ ಅವರಿಗೆ ಮುಂಗಡ ಹಣ ಕೊಟ್ಟರೂ ಅವರು ಡೇಟ್ ಕೊಟ್ಟಿಲ್ಲ ಅಂತ ಸಾರ್ವಜನಿಕವಾಗಿ ಆರೋಪಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ, ಸುದೀಪ್ ಮಾತ್ರ ಕುಮಾರ್ ಅವರು ಮಾಡಿದ ಆರೋಪಕ್ಕೆ ಉತ್ತರ ನೀಡಿರಲಿಲ್ಲ. ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ.

ಎಲ್ಲೆಡೆಯಿಂದಲೂ ಒಂದಷ್ಟು ಜೋರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸುದೀಪ್ ಅವರ ಆಪ್ತರಾದ ಜಾಕ್ ಮಂಜು ಮತ್ತು ಚಕ್ರವರ್ತಿ ಚಂದ್ರಚೂಡ್ ಅವರು ಪ್ರೆಸ್ ಮೀಟ್ ಮಾಡಿ, ಕುಮಾರ್ ಮಾಡಿದ ಆರೋಪ ಸುಳ್ಳು, ಸುದೀಪ್ ಏನೆಲ್ಲಾ ಒಳಿತು ಮಾಡಿದ್ದಾರೆ ಎಂಬ ಕುರಿತು ಮಾಹಿತಿ ನೀಡಿದ್ದರು.

ಇದರ ಬೆನ್ನಲ್ಲೇ ಈಗ ಸುದೀಪ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ಕಲಾವಿದರ ಸಂಘಗಳಿಗೆ ಸುಧೀರ್ಘ ಪತ್ರ ಬರೆದು, ನಾನು ಕೋರ್ಟ್ ಮೊರೆ ಹೋಗುತ್ತಿರುವುದಾಗಿ ವಿವರಿಸಿದ್ದಾರೆ.

Categories
ಸಿನಿ ಸುದ್ದಿ

ಜವಾನ್ ಪ್ರಿವ್ಯೂ ರಿಲೀಸ್: ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿದ ಶಾರುಖ್ ಚಿತ್ರ

ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆ.


‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಆರಂಭದಿಂದಲೂ ಬಹಳ ಕುತೂಹಲವಿತ್ತು. ಇಂದು ಬಿಡುಗಡೆಯಾದ ಟೀಸರ್, ಆ ನಿರೀಕ್ಷೆ ಮತ್ತು ಕುತೂಹಲಗಳನ್ನು ಇನ್ನೊಂದು ಹಂತಕ್ಕೆ ತಲುಪಿಸಿದೆ. ದೊಡ್ಡ ಬಜೆಟ್ ನಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ ಈ ಚಿತ್ರ ಆಕ್ಷನ್ ಮತ್ತು
ಎಮೋಷನ್ ಗಳನ್ನು ಹದವಾಗಿ ಹಿಡಿದಿಟ್ಟಿದೆ. ಚಿತ್ರದ ಕೆಲವು ಅದ್ಭುತ ಕ್ಷಣಗಳನ್ನು ಹಿಡಿದಿಡುವುದರ ಜೊತೆಗೆ, ‘ಜವಾನ್ ಪ್ರಪಂಚವನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.


‘ಕಿಂಗ್ ಖಾನ್’ ಅವರ ಧ್ವನಿಯಲ್ಲಿ ಪ್ರಾರಂಭವಾಗುವ ಈ ಪ್ರಿವ್ಯೂ, ನಂತರ ಚಿತ್ರ ಏನಿರಬಹುದು ಎಂದು ಪರಿಚಯಿಸಿಕೊಡುತ್ತದೆ. ಈ ಪ್ರಿವ್ಯೂನ ಒಂದು ವಿಶೇಷತೆಯೆಂದರೆ, ಇದುವರೆಗೂ ನೀವು ನೋಡದೆ ಇರುವ ಶಾರುಖ್ ಅವರನ್ನು ಇಲ್ಲಿ ಹಲವು ಅವತಾರಗಳಲ್ಲಿ ನೋಡಬಹುದು.

ಶಾರುಖ್ ಖಾನ್ ಅಲ್ಲದೆ, ಚಿತ್ರದಲ್ಲಿ ನಟಿಸಿರುವ ಹಲವು ಪ್ರತಿಭಾವಂತರ ತುಣುಕುಗಳು ಸಹ ಈ ಪ್ರಿವ್ಯೂನಲ್ಲಿ ಪರಿಚಯಿಸಲಾಗಿದೆ. ರೋಮಾಂಚನಗೊಳಿಸುವ ಆಕ್ಷನ್ ದೃಶ್ಯಗಳು, ಅದ್ದೂರಿ ಹಾಡುಗಳು, ‘ಬೇಕರಾರ್ ಕರಕೇ ಹಮೇ’ ಹಾಡಿಗೆ ಶಾರುಖ್ ಖಾನ್ ಅಭಿನಯ … ಇವೆಲ್ಲವೂ ಈ ಪ್ರಿವ್ಯೂ ಚಿತ್ರದ ಹೈಲೈಟ್ ಗಳಾಗಿದ್ದು, ಚಿತ್ರ ಬಿಡುಗಡೆಗೆ ಕಾಯುವಂತಾಗಿದೆ.


ದಕ್ಷಿಣ ಭಾರತದ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರ ಅಟ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಅನಿರುದ್ಧ್ ರವಿಚಂದರ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ. ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿರುವ ಅನಿರುದ್ಧ್ ಅವರ ಹಿನ್ನೆಲೆ ಸಂಗೀತ ಈ ಪ್ರಿವ್ಯೂನ ಇನ್ನೊಂದು ಹೈಲೈಟ್. ಈ ಪ್ರಿವ್ಯೂನಲ್ಲಿ ಗಮನಸೆಳೆಯುವ ಇನ್ನೊಂದು ಅಂಶವೆಂದರೆ ಅದು ಗ್ರ್ಯಾಮಿ ಪ್ರಶಸ್ತಿಗೆ ನಾಮಿನೇಟ್ ಆಗಿರುವ ರಾಜಕುಮಾರಿ ಅವರು ಹಾಡಿರುವ ‘ದಿ ಕಿಂಗ್ ಖಾನ್ ರಾಪ್’ ಎಂಬ ಹಾಡು.


‘ಜವಾನ್’, ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಚಿತ್ರವಾಗಿದ್ದು, ಅತ್ಯಂತ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ಶಾರುಖ್ ಜೊತೆಗೆ ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ವಿವಿಧ ಭಾಷೆಯ ನಟ-ನಟಿಯರು ಕಾಣಿಸಿಕೊಂಡಿದ್ದಾರೆ. ನಯನತಾರಾ, ವಿಜಯ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಗೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ದೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಿಯಾ ನಟಿಸಿರುವ ಈ ಚಿತ್ರವು ಎಲ್ಲ ಭಾಷೆಗಳ ಜನರಿಗೂ ತಲುಪವಂತೆ ಚಿತ್ರಿಸಲಾಗಿದೆ.


ಇದಕ್ಕೂ ಮುನ್ನ ಪೋಸ್ಟರ್ ಮತ್ತು ಸಣ್ಣ ಟೀಸರ್ ಮೂಲಕ ಜನರ ಗಮನ ಸೆಳೆದ ಟೀಸರ್, ಈಗ ಪ್ರಿವ್ಯೂ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದೆ. ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ನಡಿ ಗೌರಿ ಖಾನ್ ನಿರ್ಮಾಣ ಮಾಡಿದರೆ, ಗೌರವ್ ವರ್ಮ ಸಹ-ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ‘ಜವಾನ್’ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ದೇವರ ಕನಸಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಕ್ಷಿ: ಸಿನಿಮಾ ಟ್ರೇಲರ್ ಹೊರಬಂತು

ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಮಕ್ಕಳದೇವರ ಕನಸು ಚಿತ್ರ ಜುಲೈ 21 ರಂದು ತೆರೆಗೆ ಬರುತ್ತಿದೆ.

ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ ಅಶ್ವಿನಿ ಪುನೀತ್ ರಾಜಕುಮಾರ್ ಅವರು ರಿಲೀಸ್ ಬಮಾಡಿ ಶುಭ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರದ ಮೂರು ಹಾಡುಗಳನ್ನು ಪ್ರದರ್ಶಿಸಲಾಯಿತು. ಪಿ.ಆರ್.ಕೆ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ನಾನು ನ್ಯೂಯಾರ್ಕ್ ಫಿಲಂ ಅಕಾಡಮಿಯಲ್ಲಿ ಅಧ್ಯಯನ ‌ಮಾಡಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಸುರೇಶ್ ಲಕ್ಕೂರ್, “ದೇವರ ಕನಸು” ನನ್ನ ನಿರ್ದೇಶನದ ಮೊದಲ ಚಿತ್ರ. ಈ ಮಕ್ಕಳ ಚಿತ್ರ ಈಗಾಗಲೇ ಪ್ರತಿಷ್ಠಿತ ಕಾನ್ಸ್ ಫಿಲಂ ಫೆಸ್ಟಿವಲ್ ಸೇರಿದಂತೆ ಅನೇಕ ಫಿಲಂ ಫೆಸ್ಟಿವಲ್ ಗಳಲ್ಲಿ ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ.

“ದೇವ” ಎನ್ನುವುದು ಈ ಚಿತ್ರದ ಮುಖ್ಯ ಪಾತ್ರಧಾರಿಯ ಹೆಸರು. ಈ ಪಾತ್ರದಲ್ಲಿ ಮಾಸ್ಟರ್ ದೀಪಕ್ ಅಭಿನಯಿಸಿದ್ದಾರೆ. ಈ ಹುಡುಗ ಕಾಣುವ ಕನಸು ಈಡೇರುವುದೊ ಅಥವಾ ಇಲ್ಲವೋ? ಎಂಬುದು ಕಥಾಹಂದರ. ‌ದೀಪಕ್, ಅಮೂಲ್ಯ, ಅಋಷಿ ವೇದಿಕ ಹಾಗೂ ಮಾಕ್ ಮಣಿ ಚಿತ್ರದ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ. ಜುಲೈ 21 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು.

ನಿರ್ಮಾಪಕರಾದ ಜಯ್ ಕುಮಾರ್, ಶೇಖರ್, ಕಥೆ ಬರೆದಿರುವ ಸುನೀಲ್ ರಾಮ್, ಹಾಡುಗಳು ಹಾಗೂ ಸಂಭಾಷಣೆ ರಚಿಸಿರುವ ಲಿಂಗರಾಜ್ ಇತಿಹಾಸ, ಸಂಗೀತ ನಿರ್ದೇಶಕ ಸ್ಯಾಂಡಿ ಹಾಗೂ ಚಿತ್ರದಲ್ಲಿ ನಟಿಸಿರುವ ಮಾಸ್ಟರ್ ದೀಪಕ್, ಬೇಬಿ ಅಮೂಲ್ಯ, ಅಋಷಿ ವೇದಿಕ, ಮಾಕ್ ಮಣಿ ಮುಂತಾದವರು ಮಾತನಾಡಿದರು.

.

Categories
ಸಿನಿ ಸುದ್ದಿ

ಸೆಪ್ಟೆಂಬರ್ 7 ಕ್ಕೆ ಜವಾನ್ ಆಗಮನ; ಇಂದು ಪ್ರಿವ್ಯೂ ರಿಲೀಸ್: ಇದು ಶಾರುಖ್ ಖಾನ್ ನಿರ್ಮಾಣದ, ಆಟ್ಲಿ ನಿರ್ದೇಶನದ ‌ಸಿನಿಮಾ

ಶಾರುಖ್ ಖಾನ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ ಸೋಮವಾರ (ಜುಲೈ 10)ಇಂದು ಬೆಳಿಗ್ಗೆ 10:30ಕ್ಕೆ ಬಿಡುಗಡೆಯಾಗಲಿದೆ .


ಯಾವಾಗ ‘ಕಿಂಗ್’ ಖಾನ್, ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ಜೊತೆಗೆ ಒಂದು ಚಿತ್ರ ಮಾಡುತ್ತಾರೆ ಎಂಬ ಎರಡು ವರ್ಷಗಳ ಹಿಂದೆ ಸುದ್ದಿಯಾಯಿತೋ, ಆಗಿನಿಂದಲೇ ‘ಜವಾನ್’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿದ್ದವು. ಒಬ್ಬರು ದೇಶದ ಸೂಪರ್ಸ್ಟಾರ್ ನಟ. ಇನ್ನೊಬ್ಬರು ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರಿಬ್ಬರೂ ಒಂದು ಸಿನಿಮಾಗೆ ಕೈಜೋಡಿಸಿದಾಗ, ಸಹಜವಾಗಿಯೇ ಬೆಟ್ಟದಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಅಭಿಮಾನಿಗಳ ವಲಯದಲ್ಲಿತ್ತು.


ಆದರೆ, ಚಿತ್ರತಂಡದವರು ಒಂದೆರೆಡು ಪೋಸ್ಟರ್ಸ್ ಬಿಡುಗಡೆ ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಚಿತ್ರದ ಬಗ್ಗೆ ರಹಸ್ಯ ಕಾಪಾಡಿಕೊಂಡಿದ್ದರು. ಈಗ ಚಿತ್ರದ ಬಿಡುಗಡೆ ಹತ್ತಿರ ಬರುತ್ತಿದ್ದಂತೆಯೇ, ಚಿತ್ರದ ಪ್ರಿವ್ಯೂ ಬಿಡುಗಡೆಯಾಗುವುದಕ್ಕೆ ವೇದಿಕೆ ಸಜ್ಜಾಗಿದೆ. ಈ ಪ್ರಿವ್ಯೂನಲ್ಲಿ ಚಿತ್ರದಲ್ಲಿನ ಶಾರುಖ್ ಅವರ ಫಸ್ಟ್ ಲುಕ್ ಹೊರ ಬೀಳಲಿದೆ.
ಬರೀ ಅಭಿಮಾನಿಗಳ ವಲಯದಲ್ಲಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿದೆ.

‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲಿಯವರ ನಿರ್ದೇಶನದಲ್ಲಿ ಮೂಡಿಬಂದಿದೆ

Categories
ಸಿನಿ ಸುದ್ದಿ

ಸಿನಿಮಾ ಜಗತ್ತಲ್ಲಿ ಬರಹಗಾರರ ಕೊರತೆ ಇದೆ : ನಿರ್ದೇಶಕ ರಾಜ್ ಬಿ.ಶೆಟ್ಟಿ

ಸಿನಿಮಾ ಜಗತ್ತಿನಲ್ಲಿ ಎಲ್ಲವೂ ಇದೆ. ಬರಹಗಾರರ ಕೊರತೆ ಇದೆ. ಕಥಾ ಲೋಕ ಮತ್ತು ಸಿನಿಮಾ ಲೋಕ ಹತ್ತಿರ ಬಂದಾಗ ಸಿನಿಮಾ ಕ್ಷೇತ್ರ ಶ್ರೀಮಂತ ಆಗುತ್ತದೆ ಎಂದು ನಟ ನಿರ್ದೇಶಕ ರಾಜ್ ಬಿ ಶೆಟ್ಟಿ ಹೇಳಿದ್ದಾರೆ.

ಸಾವಣ್ಣ ಪ್ರಕಾಶನದ ನಾಲ್ಕು ಪುಸ್ತಕಗಳ ಬಿಡುಗಡೆಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ್ದ ಅವರು ತಮ್ಮ ಅಭಿಪ್ರಾಯ ಹೇಳಿದರು.

ಇದೇ ವೇಳೆ ಅತಿಥಿಯಗಿ ಬಂದಿದ್ದ ನಟ ಡಾಲಿ ಧನಂಜಯ ಕೂಡ ಪುಸ್ತಕ ಕುರಿತು ಮಾತನಾಡಿದರು. ‘ನಟರಿಗೂ ಒಂದು ಖಾಸಗಿ ಬದುಕು ಇರುತ್ತದೆ. ಅಲ್ಲಿ ನಾವೂ ಎಲ್ಲರ ಹಾಗೆ ಇರುತ್ತೇವೆ. ನಮ್ಮ ಒಳಗೂ ಹುಡುಕಾಟ, ತೊಳಲಾಟ, ಸಂಘರ್ಷ ನಡೆಯುತ್ತಲೇ ಇರುತ್ತವೆ. ಒಂದು ಪ್ರೇಮಾಂಕುರ ಆಗಲಿ ಅಂತ ಕಾಯುತ್ತಿರುತ್ತವೆ. ನನ್ನ ಕೆಲಸಗಳ ನಡುವೆ ಓದು ಬಿಟ್ಟು ಹೋಗಿತ್ತು. ಈಗ ಮತ್ತೆ ಓದಲು ಶುರು ಮಾಡಿದ್ದೇನೆ ಎಂದು ಧನಂಜಯ ಹೇಳಿದರು.

ಸಾವಣ್ಣ ಪ್ರಕಾಶನದ ನಾಲ್ಕು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜೋಗಿ ಅವರ ಚಿಯರ್ಸ್, ಅಶ್ವತ್ಥಾಮನ್, ಕಥೆಕೂಟ ಸದಸ್ಯರ ಒಲವು ತುಂಬುವುದಿಲ್ಲ ಹಾಗೂ ಜಗದೀಶ ಶರ್ಮ ಸಂಪ ಅವರ ದಶಕಂಠ ರಾವಣ ಕೃತಿಗಳು ಅನಾವರಣಗೊಂಡವು. ಜೋಗಿ, ಗೋಪಾಲಕೃಷ್ಣ ಕುಂಟಿನಿ, ಜಮೀಲ್ ವೇದಿಕೆಯಲ್ಲಿದ್ದರು.

Categories
ಸಿನಿ ಸುದ್ದಿ

ಆಡೇ ನಮ್ಮ ಗಾಡ್ ಟೀಸರ್ ರಿಲೀಸ್: ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಚಿತ್ರ

ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವೆರೆಸ್ಟ್ ಇಂಡಿಯಾ ಎಂಟರ್ ಟೈನರ್ಸ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಆಡೇ ನಮ್ಮ God ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಹಾಸ್ಯಾಸ್ಪದವಾಗಿ ಕಟ್ಟಿಕೊಡಲಾಗಿದೆ. ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಪಿಂಕಿ ಎಲ್ಲಿ ಚಿತ್ರದ ಅನೂಪ್ ಶೂನ್ಯ, ಸಾರಿಕ ರಾವ್, ಬಿ ಸುರೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚಮ ವೇದ, ಶ್ರೀಗಂಧ, ಅರಗಿಣಿ, ಅರುಣೋದಯ, ರಂಗೋಲಿ, ಅಂಡಮಾನ್, ಮುಂಜಾನೆ ಮಂಜು, ಮುಸುಕು ಸಿನಿಮಾಗಳ ಖ್ಯಾತಿ ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಆಡೇ ನಮ್ಮ‌ God ಆಕ್ಷನ್ ಕಟ್ ಹೇಳಿದ್ದಾರೆ.

ನಿರ್ದೇಶಕ ಪಿ.ಎಚ್.ವಿಶ್ವನಾಥ್ ಮಾತನಾಡಿ, ಜನಗಳು ಯಾವುದಾದರೂ ಒಂದು ವಿಷಯಕ್ಕೆ ಬೇಗ ಪ್ರಭಾವಕ್ಕೆ ಒಳಗಾಗುತ್ತಾರೆ. ನಮ್ಮಲ್ಲಿ ಹಂದಿಯನ್ನು ವರಾಹ ಎಂದು ಪೂಜೆ ಮಾಡುತ್ತೇವೆ. ಹಾವು, ಕಪ್ಪೆ ಮೊಸಳೆ ಎಲ್ಲವನ್ನೂ ಪೂಜೆ ಮಾಡುತ್ತವೆ. ನಾವು ಪೂಜೆ ಮಾಡದ ಪ್ರಾಣಿಗಳು ಇಲ್ಲ. ಆಂದ್ರದ ಬಾರ್ಡರ್ ಊರೊಂದರಲ್ಲಿ ಚೇಳು ಸ್ವಾಮಿ ದೇಗುಲವಿದೆ ಜೀವಂತ ಚೇಳುಗಳನ್ನು ಪೂಜೆ ಮಾಡುತ್ತಾರೆ. ಈ ಬಗ್ಗೆ ಯೋಚನೆ ಮಾಡುತ್ತಾ ನಾನು ಕಂಡ ಒಬ್ಬ ವ್ಯಕ್ತಿ ಮತ್ತು ನನಗೇ ಆದ ಅನುಭವಗಳ ಆಧಾರದ ಮೇಲೆ ಆಡು‌ ಕೂಡ ಒಂದು ದೇವರು ಆಗಬಹುದು ಅನ್ನಿಸಿ ಅದನ್ನೇ ಚಿತ್ರವಾಗಿಸಿದ್ದೇವೆ. ಮೂಢನಂಬಿಕೆ ನಂಬಿಕೊಂಡು ಹೋಗುವ ಜನರ ಹಿಂದೆ ಇಡೀ ಸಿನಿಮಾವಿದೆ. ನಾಲ್ಕು ಜನ ಯುವಕರ ಜೀವನದಲ್ಲಿ ಒಂದು ಆಡು ಬಂದಾಗ ಏನಾಗುತ್ತದೆ ಎನ್ನುವುದು ಚಿತ್ರದ ತಿರುಳು. ನಾಲ್ಕೂ ಜನ ಯುವಕರು ಯಾವ ನುರಿತ ಕಲಾವಿದರಿಗಿಂತ ಕಡಿಮೆ ಇಲ್ಲದಂತೆ ನಟಿಸಿದ್ದು, ಚಿತ್ರವನ್ನು ಮನರಂಜನೆಯೊಂದಿಗೆ ಪ್ರೇಕ್ಷಕರಿಗೆ ಖುಷಿಕೊಡುವ ರೀತಿಯಲ್ಲಿ, ಕೊನೆಯವರೆಗೂ ಹಾಸ್ಯಮಯವಾಗಿ ಕಟ್ಟಿಕೊಡಲಾಗಿದೆ, ಆಡೇ ನಮ್GOD ಯಾವ ಕಟ್ಸ್ ಇಲ್ಲದೇ ಸೆನ್ಸಾರ್ ಆಗಿ ಬಿಡುಗಡೆಯ ಸಿದ್ಧತೆಯಲ್ಲಿದೆ ಎಂದರು.

ನಿರ್ಮಾಪಕರಾದ ಪ್ರೊ.ಬಿ.ಬಸವರಾಜ್ ಮಾತನಾಡಿ, ನಾನು ರಿಟೈಡ್ ಪ್ರೊಫೆಸರ್. ನಾನು ಮೊದಲಿನಿಂದಲೂ ಸಿನಿಮಾ ನೋಡುತ್ತಿದ್ದೆ. ನನಗೂ ಸಿನಿಮಾ ನಿರ್ಮಾಣ ಮಾಡುವ ಆಸೆ ಇತ್ತು. ರಿಟೈಡ್ ಆದ ಹತ್ತು ವರ್ಷದ ಬಳಿಕ ನನ್ನ ಆಸೆ ನೆರವೇರಿದೆ. ಪಿ ಎಚ್ ವಿಶ್ವನಾಥ್ ಹೆಸರಾಂತ ನಿರ್ದೇಶಕರು. ಆರು ತಿಂಗಳು ಲೋಕೇಷನ್ ನೋಡಿದೆವು. ಮೈಸೂರು ಹಾಗು ಬೆಂಗಳೂರಿನ ಸುತ್ತ ಮುತ್ತ ಯಾವ ರೀತಿಯ ಅಡಚಣೆಯೂ ಇಲ್ಲದೆ ಸರಾಗವಾಗಿ ಚಿತ್ರ ಮುಗಿದಿದೆ. ಸಿನಿಮಾ ಬಹಳ ಚೆನ್ನಾಗಿ ಬಂದಿದೆ ಎಂದರು.

ಹಿರಿಯ ನಟ ಬಿ.ಸುರೇಶ್ ಮಾತನಾಡಿ, ಕೊರೋನಾ ನಂತರದ ಕಾಲಘಟ್ಟದಲ್ಲಿ ಸಿನಿಮಾ ಮಾಡುವುದು ಸುಲಭದ ಕೆಲಸವಲ್ಲ. ಮೊದಲು ಸುಲಭ ಇತ್ತು ಅಂತಲ್ಲ. ಬಸವರಾಜ್ ಹಾಗೂ ವಿಶ್ವನಾಥ್ ಅವರು ದೊಡ್ಡ ಸಾಹಸ ಮಾಡಿದ್ದಾರೆ. ತುಂಬಾ ವಿಶಿಷ್ಟವಾದ ಕಥೆ. ಪಿ ಎಚ್ ವಿಶ್ವನಾಥ್ ಅವರ ಬಗ್ಗೆ ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಂಚಮವೇದ ಚಿತ್ರದಿಂದ ಇಲ್ಲಿವರೆಗೂ ಹಲವಾರು ಬಗೆಯ ಸಿನಿಮಾ ಮಾಡಿದ್ದಾರೆ. ಹೊಸಬರಿಗೆ ನಟನೆಯ ಭಾಷೆ, ಸಿನಿಮಾ ಹೇಳಿಕೊಟ್ಟಿದ್ದಾರೆ ಎಂದರು.

ನಟ ನಟರಾಜ್ ಮಾತನಾಡಿ, ಪುಟ್ಟಣ್ಣ ಕಣಗಾಲ್ ಸರ್ ಬಗ್ಗೆ ನಾವು ಕೇಳುತ್ತಿದ್ದೆವು. ಅವರ ಶಿಷ್ಯ ಅಂದರೆ ಹೇಗೆ ಇರ್ತಾರೆ ಎಂಬ ಭಯ ಇತ್ತು. ನೀನು ಮಾಡಿರುವ ಸಿನಿಮಾ ಎಲ್ಲಾ ನೋಡಿದ್ದೇನೆ ಕಥೆ ಹೇಳಬಹುದಾ ಎಂದರು. ಇಡೀ ಚಿತ್ರದ ಕಥೆ ಹೇಳಿದರು. ಬಳಿಕ ನನ್ನ ಪಾತ್ರದ ಬಗ್ಗೆ ತಿಳಿಸಿದರು. ಇಂತಹ ದಿಗ್ಗಜರ ಜೊತೆ ಸಿನಿಮಾ ಮಾಡಿರುವುದು ಖುಷಿ ಕೊಟ್ಟಿದೆ. ಸಾಂಗ್ಸ್, ಸಿನಿಮಾ ಎಲ್ಲವೂ ಚೆನ್ನಾಗಿ ಮೂಡಿಬಂದಿದೆ. ಹಿರಿಯ ತಂತ್ರ್ಯಜ್ಞರ ಜೊತೆ ಕೆಲಸ ಮಾಡಿರುವುದು ದೊಡ್ಡ ಅನುಭವ ಎಂದರು.

ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಅಕ್ಷಯ್ ವಿಶ್ವನಾಥ್ ಚಿತ್ರಕಥೆ-ಸಹ ನಿರ್ದೇಶನ ‘ಆಡೇ ನಮ್ God’ ಚಿತ್ರಕ್ಕಿದೆ. ಆರ್.ಕೆ. ಸ್ವಾಮಿನಾಥನ್ ಸಂಗೀತ, ಶಶಿಕುಮಾರ್ ಎಸ್ ಹಿನ್ನೆಲೆ ಸಂಗೀತದ ಹಾಡುಗಳಿಗೆ ಹೃದಯ ಶಿವ-ನಿತಿನ್ ನಾರಾಯಣ್ ಸಾಹಿತ್ಯ ಬರೆದಿದ್ದು, ರವೀಂದ್ರ ಸೊರಗಾವಿ-ಚೇತನ್ ನಾಯಕ್ ಧ್ವನಿಯಾಗಿದ್ದಾರೆ. ಶೀಘ್ರದಲ್ಲಿಯೇ ಚಿತ್ರವನ್ನು ತೆರೆಗೆ ತರಲು ತಂಡ ತಯಾರಿ ನಡೆಸುತ್ತಿದೆ.

Categories
ಸಿನಿ ಸುದ್ದಿ

ಮತ್ತೆ ಗಂಡ-ಹೆಂಡತಿ ಚಿತ್ರ: ನಿರ್ದೇಶಕ ಸಿದ್ದು ಈಗ ಸಂತೋಷ! ಮೊದಲ ಆ್ಯಕ್ಷನ್-ಕಟ್ ಹೇಳಿದ ಸಂತೋಷ ಸಂಗೀತ ಸಿನಿಮಾ ಬಿಡುಗಡೆಗೆ ರೆಡಿ

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರ “ಸಂತೋಷ ಸಂಗೀತ”. ಈಗ ರಿಲೀಸ್ ಅಗಲು ರೆಡಿಯಾಗಿದೆ. ಮೊದಲ ಸಲ ನಿರ್ದೇಶನ ಮತ್ತು ನಿರ್ಮಾಣದ ಜವಬ್ದಾರಿ ಹೊತ್ತಿರುವ ಸಿದ್ದು ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಂದಹಾಗೆ, ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿ ಚಿತ್ರದ ಮೇಕಿಂಗ್ ವೀಡಿಯೋ ಕೂಡ ಈ ವೇಳೆ ಪ್ರದರ್ಶಿಸಲಾಯಿತು.

ನಾನು ಮೂಲತಃ ಎಂ.ಸಿ.ಎ ಪದವೀಧರ. ಸಿನಿಮಾ ಪ್ರೇmಮಿ. ಯಾವುದೇ ಸಿನಿಮಾ ಬಂದರೂ ಮಿಸ್ ಮಾಡದೆ ನೋಡುವವನು. ಚೆನ್ನಾಗಿರುವ ಸಿನಿಮಾ ನೋಡಿದರೆ, ನಾನು ಈ ರೀತಿ ಸಿನಿಮಾ ಮಾಡಬೇಕೆಂದು ಆಸೆ ಪಡುತ್ತಿದ್ದವನು. ಆ ಆಸೆ ಈಗ ಈಡೇರಿದೆ. ಲಾಕ್ ಡೌನ್
ಸಮಯದಲ್ಲಿ ಕಥೆ ಬರೆದಿದ್ದೆ. ಅದನ್ನು ಈಗ ಸಿನಿಮಾ ರೂಪದಲ್ಲಿ ತಂದಿದ್ದೀನಿ. ನಾನೇ ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದಲ್ಲಿ ಲವ್, ಕಾಮಿಡಿ, ವ್ಯಾಪಾರ ಹೀಗೆ ಎಲ್ಲಾ ತರಹದ ಕಮರ್ಷಿಯಲ್ ಅಂಶಗಳು ಈ ಚಿತ್ರದಲ್ಲಿದೆ. ಇದನ್ನು ಕಮರ್ಷಿಯಲ್ ಲವ್ ಜಾನರ್ ನ ಸಿನಿಮಾ ಎನ್ನಬಹುದು ಎನ್ನುತ್ತಾರೆ ಸಿದ್ದು.

ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ಈ ಚಿತ್ರದ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ನಿಜಜೀವನದಲ್ಲೂ ಪತಿ -ಪತ್ನಿಯಾಗಿರುವ ಅರ್ನವ್ ಹಾಗೂ ರಾಣಿ ತೆರೆಯ ಮೇಲೂ ನಾಯಕ-ನಾಯಕಿಯಾಗಿ ನಟಿಸಿರುವುದು ಈ ಚಿತ್ರದ ವಿಶೇಷ. ದೊಡ್ಡಣ್ಣ, ಅವಿನಾಶ್, ಲಯ ಕೋಕಿಲ, ಕವನ, ಅಮಿತ್,
ಕಾಮಿಡಿ ಕಿಲಾಡಿಗಳು ಖ್ಯಾತಿಯ
ಲೋಕೇಶ್ ಸೂರ್ಯ ಮಡೆನೂರು ಮನು, ಹನೀಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ‌ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಹಾಗೂ ನಿರ್ದೇಶಕ ಸಿದ್ದು ಎಸ್ ತಿಳಿಸಿದರು.

” ಹೊಂಬಣ್ಣ”, “ಪ್ರೇಮಂ” ಚಿತ್ರಗಳಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಅರ್ನವ್ ವಿನ್ಯಾಸ್, ಈ ಚಿತ್ರದಲ್ಲಿ ನನ್ನದು ಉದ್ಯಮಿಯ ಪಾತ್ರ. ನಿರ್ದೇಶಕರ ಕಥೆ ಚೆನ್ನಾಗಿದೆ. ನಿರೂಪಣೆ ಕೂಡ ಹೊಸದಾಗಿದೆ. ಪ್ರತಿ ಪಾತ್ರಕ್ಕೂ ಆದ್ಯತೆ ಇದೆ. ವಿಶೇಷ ಎನಿಸುವ ಒಂದಷ್ಟು ಹೊಸ ಅಂಶಗಳಿವೆ ಎಂದು ಹೇಳಿದರು.

ಗಂಡ – ಹೆಂಡತಿ ಇಬ್ಬರು ಒಂದೇ ಉದ್ಯಮದಲ್ಲಿದ್ದಾಗ ಯಾವೆಲ್ಲಾ ಸವಾಲು ಎದುರಾಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದರು ನಾಯಕಿ ರಾಣಿ ವರದ್.

ಕವನ ಹಾಗೂ ಫಸ್ಟ್ rank ರಾಜು ಖ್ಯಾತಿಯ ಅಮಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ಜೆ.ಪಿ ನಗರದ ಮಾಜಿ ಕಾರ್ಪೋರೇಟರ್ ಚಂದ್ರಶೇಖರ್ ರಾಜು ಅವರು “ಸಂತೋಷ ಸಂಗೀತ” ಚಿತ್ರತಂಡಕ್ಕೆ ಶುಭ ಕೋರಿದರು.

error: Content is protected !!