Categories
ಸಿನಿ ಸುದ್ದಿ

ಸಲಾರ್ ಪಾರ್ಟ್ 1 ಸೀಸ್ ಫೈರ್ ಟೀಸರ್ ರಿಲೀಸ್: ಪ್ರಭಾಸ್-ಪ್ರಶಾಂತ್ ನೀಲ್ ಧಮಾಕ

ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.
‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಸಲಾರ್’ ಚಿತ್ರವು ಆರಂಭದಿಂದಲೂ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಇಂದು ಮುಂಜಾನೆ 05:12ಕ್ಕೆ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಭರ್ಜರಿ ಆಕ್ಷನ್ ದೃಶ್ಯಗಳು ಮತ್ತು ಪವರ್ ಫುಲ್ ಸಂಭಾಷಣೆಗಳಿಂದ ಕೂಡಿರುವ ಈ ಟೀಸರ್, ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುವುದರ ಜೊತೆಗೆ, ಹೊಸ ದಾಖಲೆಯನ್ನು ಬರೆಯುವ ಎಲ್ಲಾ ಮುನ್ಸೂಚನೆಯನ್ನು ನೀಡಿದೆ.
‘ಕೆಜಿಎಫ್’ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್, ಈ ಬಾರಿ ‘ಸಲಾರ್’ ಮೂಲಕ ಇನ್ನೊಂದು ಹೊಸ ಪ್ರಪಂಚವನ್ನೇ ಸೃಷ್ಟಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇದುವರೆಗೂ ಕಂಡುಕೇಳರಿಯದ ಪ್ರಮಾಣದಲ್ಲಿ ಈ ಚಿತ್ರವು ನಿರ್ಮಾಣವಾಗುತ್ತಿದ್ದು, ಹೈದರಾಬಾದ್‌ ನ ರಾಮೋಜಿ ಫಿಲಂ ಸಿಟಿ ಬಳಿ 14 ಅದ್ಭುತ ಸೆಟ್ ಗಳನ್ನು ಈ ಚಿತ್ರಕ್ಕಾಗಿ ನಿರ್ಮಿಸಿ, ಅಲ್ಲಿ ಚಿತ್ರೀಕರಣ ಮಾಡಲಾಗಿದೆ.


ಈ ಚಿತ್ರದ ಕುರಿತು ಮಾತನಾಡುವ ನಿರ್ಮಾಪಕ ವಿಜಯ್ ಕಿರಗಂದೂರು, ‘ಈ ಚಿತ್ರ ಪ್ರಾರಂಭವಾದಾಗಲೇ ನಾವು ಇದು ಯಾವುದೋ ಒಂದು ಭಾಷೆಯ ಅಥವಾ ಪ್ಯಾನ್ ಇಂಡಿಯಾ ಸಿನಿಮಾವಲ್ಲ ಎಂದು ಹೇಳಿದ್ದೆವು. ಇದು ಎಲ್ಲ ಕಡೆ ಸಲ್ಲುವ ಭಾರತೀಯ ಚಿತ್ರವಾಗಬೇಕು ಎಂಬುದು ನಮ್ಮ ಆಸೆ. ಅದರಂತೆ ಈ ಚಿತ್ರ ಮೂಡಿಬಂದಿದ್ದು, ಬರೀ ಭಾರತದಲ್ಲಷ್ಟೇ ಅಲ್ಲ, ಹೊರದೇಶಗಳಲ್ಲೂ ಭಾರತೀಯ ಚಿತ್ರವಾಗಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ.

ಕನ್ನಡದ ನಿರ್ಮಾಣ ಸಂಸ್ಥೆಯೊಂದು, ಪ್ಯಾನ್ ಇಂಡಿಯಾ ಸ್ಟಾರ್ ಒಬ್ಬರ ಚಿತ್ರವೊಂದನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮಾಡುತ್ತಿರುವುದು ಹೆಮ್ಮೆಯ ವಿಷಯ. ಕನ್ನಡದ ನಿರ್ಮಾಣ ಸಂಸ್ಥೆ, ನಿರ್ದೇಶಕರು, ತಂತ್ರಜ್ಞರು ಮತ್ತು ಕಲಾವಿದರು, ತೆಲುಗಿನ ಸ್ಟಾರ್ ನಟ ಪ್ರಭಾಸ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ತಮಿಳಿನ ಶ್ರುತಿ ಹಾಸನ್ ಹೀಗೆ ಎಲ್ಲ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಇಲ್ಲಿದ್ದಾರೆ. ಎಲ್ಲರನ್ನೂ ಸೇರಿಸಿ ಭಾರತೀಯ ಸಿನಿಮಾ ಮಾಡಿದ್ದೇವೆ. ಇವತ್ತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 28ಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎನ್ನುತ್ತಾರೆ.


ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಸಲಾರ್’ ಚಿತ್ರವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ. ವಿದೇಶಗಳಲ್ಲೂ ಚಿತ್ರದ ವಿಎಫ್ಎಕ್ಸ್ ಕೆಲಸ ನಡೆದಿದ್ದು, ಆಕ್ಷನ್ ದೃಶ್ಯಗಳಲ್ಲಿ ಬೇರೆ ದೇಶಗಳಿಂದ ಬಂದ ಹಲವು ನುರಿತ ಸಾಹಸ ಕಲಾವಿದರು ಕೆಲಸ ಮಾಡಿರುವುದು ಈ ಚಿತ್ರದ ವಿಶೇಷತೆಗಳಲ್ಲೊಂದು.
ದೊಡ್ಡ ಕ್ಯಾನ್ವಾಸ್ ಅಷ್ಟೇ ಅಲ್ಲ, ದೊಡ್ಡ ತಾರಾಗಣವೂ ಇರುವ ಈ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಮಿಕ್ಕಂತೆ ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ನಟಿಸಿದ್ದಾರೆ. ‘ಕೆಜಿಎಫ್’ ಚಿತ್ರಗಳಿಗೆ ಕೆಲಸ ಮಾಡಿದ ತಾಂತ್ರಿಕ ತಂಡವೇ ಈ ಚಿತ್ರಕ್ಕೂ ಕೆಲಸ ಮಾಡಿದ್ದು, ರವಿ ಬಸ್ರೂರು ಅವರ ಸಂಗೀತ, ಭುವನ್ ಗೌಡ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
‘ಸಲಾರ್ ಪಾರ್ಟ್ 1: ಸೀಸ್ ಫೈರ್ ಚಿತ್ರವು ಸೆಪ್ಟೆಂಬರ್ 28ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಜಯಂ ರವಿ ಹೊಸ ಸಿನಿಮಾ ಶುರು: ಜೀನಿ ಚಿತ್ರಕ್ಕೆ ಅದ್ಧೂರಿ ಮುಹೂರ್ತ

ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ಈಗ ಪ್ಯಾನ್ ಇಂಡಿಯಾ ಸ್ಟಾರ್..ಇತ್ತೀಚೆಗೆಷ್ಟೇ ಇರೈವನ್ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಅವರ 32ನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವೆಲ್ಸ್ ಫಿಲಂಸ್ ಇಂಟರ್‌ನ್ಯಾಶನಲ್‌ನಡಿ ಡಾ.ಇಶಾರಿ ಕೆ ಗಣೇಶ್ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಚೆನ್ನೈನಲ್ಲಿಂದು ಸೆಟ್ಟೇರಿರುವ ಈ ಸಿನಿಮಾಗೆ ಜೀನಿ ಎಂಬ ಟೈಟಲ್ ಇಡಲಾಗಿದೆ.

ಯುವ ನಿರ್ದೇಶಕ ಅರ್ಜುನನ್ ಜೆ ಆರ್ ನಿರ್ದೇಶನದಲ್ಲಿ ಜಯಂ ರವಿ ನಾಯಕನಾಗಿ ನಟಿಸುತ್ತಿದ್ದು, ಕೃತಿ ಶೆಟ್ಟಿ, ಕಲ್ಯಾಣಿ ಪ್ರಿಯದರ್ಶನ್, ವಾಮಿಕಾ ಗಬ್ಬಿ ಮತ್ತು ದೇವಯಾನಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಹೇಶ್ ಮುತ್ತುಸಾಮಿ ಛಾಯಾಗ್ರಹಣ, ಎ.ಆರ್. ರೆಹಮಾನ್ ಸಂಗೀತ ಸಂಯೋಜನೆ, ಪ್ರದೀಪ್ ಇ ರಾಘವ್ ಸಂಕಲನ, ಹಾಲಿವುಡ್ ಮತ್ತು ಅಂತರಾಷ್ಟ್ರೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಸ್ಟಂಟ್ ಕೊರಿಯೋಗ್ರಾಫರ್‌ಗಳಲ್ಲಿ ಒಬ್ಬರಾದ ಯಾನಿಕ್ ಬೆನ್ ಈ ಚಿತ್ರಕ್ಕೆ ಆಕ್ಷನ್ ಸೀಕ್ವೆನ್ಸ್ ಖದರ್ ಚಿತ್ರದಲ್ಲಿರಲಿದೆ.

ಜೀನಿ ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್‌ನ 25 ನೇ ಚಿತ್ರವಾಗಿದ್ದು, ದುಬಾರಿ ಬಜೆಟ್‌ನಲ್ಲಿ ತಯಾರಾಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿರುವ ಜೀನಿ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

Categories
ಸಿನಿ ಸುದ್ದಿ

ಲೈಕಾ ಪ್ರೊಡಕ್ಷನ್ ಹೊಸ ಸಿನಿಮಾ ಅನೌನ್ಸ್: 2018 ನಿರ್ದೇಶಕರ ಜೊತೆ ಕೈ ಜೋಡಿಸಿದ ಸುಭಾಷ್ ಕರಣ್

ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಇಂಡಿಯನ್-2, ರಜನಿ ಜೊತೆ ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳಿಗೆ ಹಣ ಸುರಿದಿರುವ ಸುಭಾಷ್ ಕರಣ್ ಈಗ ಸೆನ್ಸೇಷನಲ್ ಮೂವೀ 2018 ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ.

ಲೈಕಾ ಬರೀ ಸೂಪರ್ ಸ್ಟಾರ್ಸ್ ಸಿನಿಮಾಗಳನ್ನು ಮಾತ್ರವಲ್ಲ ಹೊಸ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸಿಕೊಡುತ್ತಿದೆ. ಮೋಸ್ಟ್ ಹ್ಯಾಪನಿಂಗ್ ಡೈರೆಕ್ಟರ್ ಜೂಡಾ ಆಂಥನಿ ಜೋಸೆಫ್ ಜೊತೆ ಸಿನಿಮಾ ಮಾಡುವುದಾಗಿ ಲೈಕಾ ಅನೌನ್ಸ್ ಮಾಡಿದೆ.

ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಬೆಳ್ಳಿತೆರೆಯಲ್ಲಿ ಅದ್ಭುತವಾಗಿ ಮೂಡಿಬಂದಿದ್ದು, ಕೇರಳ ಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ ಬಸ್ಟರ್ ಆಗಿದೆ.

ಈ ಚಿತ್ರವನ್ನು ನಿರ್ದೇಶಿಸಿದ್ದು, ಜೂಡಾ ಆಂಥನಿ ಜೋಸೆಫ್..ಇದೇ ನಿರ್ದೇಶಕರಿಗೆ ಈಗ ಲೈಕಾ ಸಿನಿಮಾ ಮಾಡುತ್ತಿವೆ. ಶೀಘ್ರದಲ್ಲಿಯೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಅಪ್ ಡೇಟ್ ನೀಡಲಿದೆ ಲೈಕಾ..

Categories
ಸಿನಿ ಸುದ್ದಿ

BAD ಬಾಯ್ ಗೆ ಗೋಲ್ಡನ್ ಟಚ್: ಫಸ್ಟ್ ಲುಕ್ ರಿಲೀಸ್ ಮಾಡಿದ ಗಣೇಶ್

ಪಿ.ಸಿ ಶೇಖರ್ ನಿರ್ದೇಶನದ ಹತ್ತನೇ ಚಿತ್ರ ಹಾಗೂ ನಕುಲ್ ಗೌಡ(ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ “BAD” ಚಿತ್ರದ ಫಸ್ಟ್ ಲಕ್ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

ಇದು ನಾಯಕ ಪ್ರಧಾನ ಚಿತ್ರವಲ್ಲ‌‌. ಏಳು ಮುಖ್ಯಪಾತ್ರಗಳಿದೆ. ಮನುಷ್ಯನಲ್ಲಿ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯವೆಂಬ ಅರಿಷಡ್ವರ್ಗಗಳಿರುತ್ತದೆ. ಈ ಆರು ಅರಿಷಡ್ವರ್ಗಗಳನ್ನು ನಮ್ಮ ಚಿತ್ರದ ಆರು ಪಾತ್ರಗಳು ಪ್ರತಿನಿಧಿಸುತ್ತದೆ. ಆ ಪೈಕಿ “ಕ್ರೋಧ”ವನ್ನು ಪ್ರತಿನಿಧಿಸುತ್ತಿರುವ ನಕುಲ್ ಗೌಡ ಅವರ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಸಾಮಾನ್ಯವಾಗಿ ” ಕ್ರೋಧ” ವನ್ನು ಕಿರಿಚುವುದು, ಅರಚುವುದು ಮುಂತಾದ ವಿಚಿತ್ರ ರೀತಿಗಳಿಂದ ತೋರಿಸುತ್ತಾರೆ. ನಾವು ಮುಖದ ಹಾವಭಾವದಲ್ಲಿ “ಕ್ರೋಧ” ವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ಇದೊಂದು ವಿಭಿನ್ನ ಕಥೆಯ ಚಿತ್ರ ಎಂದು ತಿಳಿಸಿರುವ ಮುಖ್ಯ ಪಾತ್ರಧಾರಿ ನಕುಲ್, ನನ್ನದು ಈ ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರ. ಕ್ರೋಧವನ್ನು ಚಿತ್ರದಲ್ಲಿ ಭೀಕರವಾಗಿ ತೋರಿಸಿಲ್ಲ. ನಿರ್ದೇಶಕ ಪಿ‌.ಸಿ.ಶೇಖರ್ ಉತ್ತಮವಾದ ಕಥೆ ಮಾಡಿದ್ದಾರೆ. ಚಿತ್ರಕಥೆ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಬಹುತೇಕ ಭಾಗದ ಚಿತ್ರೀಕರಣ ಸೆಟ್ ನಲ್ಲೇ ನಡೆದಿರುವುದು ವಿಶೇಷ ಎನ್ನುತ್ತಾರೆ.

ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ” BAD” ಚಿತ್ರದಲ್ಲಿ “ರೋಷಮಾನ್ ಎಫೆಕ್ಟ್” ಎಂಬ ವಿಶೇಷ ವಿಧಾನವನ್ನು ಬಳಸಿಕೊಳ್ಳಲಾಗಿದೆ‌.

ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ “BAD” ಚಿತ್ರಕ್ಕಿದೆ.

“ಪ್ರೀತಿಯ ರಾಯಭಾರಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಪುಟ್ಟ ಅಭಿಮಾನಿಯ ಅಸೆ ಈಡೇರಿಸಿದ ಕಿಚ್ಚ: ಹೃದಯವಂತಿಕೆ ಮೆರೆದ ಸುದೀಪ್

ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ ಸುದೀಪಿಯನ್ಸ್ ಗೂ ಇದ್ದೇ ಇರುತ್ತದೆ. ಆ ಆಸೆ ಈಡೇರಿಕೆಗೆ ಸಮಯ ಕೂಡಿ ಬರಬೇಕು ಅಷ್ಟೇ. ಈಗ ಸುದೀಪ್ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ.. ಜೀವನದಲ್ಲಿ ಒಮ್ಮೆಯಾದ್ರೂ ತಮ್ಮ ನೆಚ್ಚಿನ ಸ್ಟಾರ್ ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ. ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಸಲಾಂ ಎಂದಿದ್ದಾರೆ.

Categories
ಸಿನಿ ಸುದ್ದಿ

ಪ್ರಜ್ವಲ್ ಹುಟ್ಟು ಹಬ್ಬಕ್ಕೆ ಮಾಫಿಯಾ ಪೋಸ್ಟರ್ ಬಂತು

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಸಿನಿಮಾ “ಮಾಫಿಯಾ”.
ಜುಲೈ 4 ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್ ಅವರಿಗೆ “ಮಾಫಿಯಾ” ಚಿತ್ರತಂಡ ಶುಭಾಶಯ ಕೋರಿದೆ.

ಚಿತ್ರೀಕರಣ ಮುಕ್ತಾಯವಾಗಿ, ಪೋಸ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿರುವ ಈ ಚಿತ್ರವನ್ನು ಆಗಸ್ಟ್ ನಲ್ಲಿ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ. “ಮಾಫಿಯಾ” ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ‌. ಇದು ಅವರ ನಟನೆಯ ಮೂವತ್ತೈದನೇ ಚಿತ್ರವೂ ಹೌದು.

ಈ ಚಿತ್ರದಲ್ಲಿ ಮೂರು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Categories
ಸಿನಿ ಸುದ್ದಿ

ಕೋಮಲ್ ಬರ್ತ್ ಡೇಗೆ ರೋಲೆಕ್ಸ್ ಪೋಸ್ಟರ್ ರಿಲೀಸ್: ಸಖತ್ ಲುಕ್ ನಲ್ಲಿ ಸೆನ್ಸೇಷನಲ್ ಸ್ಟಾರ್

ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೋಮಲ್ ಜನುಮದಿನ ಉಡುಗೊರೆಯಾಗಿ ‘ರೋಲೆಕ್ಸ್’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸೂಟು ಬೂಟೂ ತೊಟ್ಟು ಸ್ಟೈಲೀಶ್ ಲುಕ್ ನಲ್ಲಿ ಸೆನ್ಸೇಷನಲ್ ಸ್ಟಾರ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ಟೈಟಲ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿರುವ ‘ರೋಲೆಕ್ಸ್’ಗೆ ಶ್ರೀನಿವಾಸ್ ಮಂಡ್ಯ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಕೋಮಲ್ ಗೆ ಜೋಡಿಯಾಗಿ ಪಂಚತಂತ್ರ ಬ್ಯೂಟಿ ಸೋನಲ್ ಮೊಂಟೆರೋ ನಟಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ. ಈಗಾಗಲೇ ಶೇಖಡ 50ರಷ್ಟು ರೋಲೆಕ್ಸ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ.

ಉಳಿದ ಭಾಗದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆದಷ್ಟು ಬೇಗ ಶೂಟಿಂಗ್ ಮುಗಿಸಿ ಸೆಪ್ಟಂಬರ್ ವೇಳೆಗೆ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಪ್ರಜ್ವಲ್ ಬರ್ತ್ ಡೇಗೆ ಬಂತು ಗಣ ಟೀಸರ್

ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಕ್ಷಣದಲ್ಲಿ ಪ್ರಜ್ವಲ್ ನಾಯಕರಾಗಿ ನಟಿಸಿರುವ “ಗಣ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್ ದೇವರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ಕನ್ನಡ ಚಿತ್ರ ನಿರ್ಮಾಣ ಮಾಡಬೇಕೆಂಬ ಆಸೆಯಾಯಿತು. ಹಾಗಾಗಿ “ಗಣ” ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪಾರ್ಥು, ಸೋಶಿಯಲ್ ಮೀಡಿಯಾದಲ್ಲಿ ನಾನು ಪ್ರಜ್ವಲ್ ಅವರನ್ನು ಫಾಲೋ ಮಾಡುತ್ತಿದ್ದೆ‌. ಅದರಲ್ಲಿ ಪ್ರಜ್ವಲ್ ಅವರ ಅಭಿಮಾನಿಗಳು ಯಾವ ರೀತಿ ಚಿತ್ರ ನಿರೀಕ್ಷಿಸುತ್ತಿದ್ದರೊ, ಅದೇ ತರಹದ ಚಿತ್ರ ಮಾಡಿದ್ದೇವೆ. ಪ್ರಜ್ವಲ್ ದೇವರಾಜ್ ಅವರು ಈವರೆಗೂ ಮಾಡಿರದ ಪಾತ್ರ ಎನ್ನಬಹುದು. ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ನಡೆಯುತ್ತಿದೆ. ಹರಿಪ್ರಾಸಾದ್ ಜಕ್ಕ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ ಎಂದರು.

ಕನ್ನಡದ ಕಲಾವಿದರು ಹಾಗೂ ತಂತ್ರಜ್ಞರ ಜೊತೆ ಕೆಲಸ ಸಿನಿಮಾ ಮಾಡಬೇಕೆಂದು ಬಂದ ಪಾರ್ಥು ಅವರಿಗೆ ಅಭಿನಂದನೆ ತಿಳಿಸಿ “ಗಣ” ಚಿತ್ರದ ಬಗ್ಗೆ ಮಾತು ಆರಂಭಿಸಿದ ಪ್ರಜ್ವಲ್ ದೇವರಾಜ್, “ಗಣ” ನಾನು ಈವರೆಗೂ ಮಾಡಿರುವ ಚಿತ್ರಗಳಲ್ಲೇ ಬೇಗ ಮುಗಿದಿರುವ ಚಿತ್ರ ಹಾಗೂ ಡಿಫರೆಂಟ್ ಜಾನರ್ ನ ಚಿತ್ರ ಕೂಡ. 1993 ಹಾಗೂ 2023 ಎರಡು ಕಾಲಘಟ್ಟದಲ್ಲಿ ಈ ಕಥೆ ನಡೆಯುತ್ತದೆ‌. ಸಮಯದ ಜೊತೆ ಹೋರಾಡುವ ಚಿತ್ರ ಎನ್ನಬಹುದು. ನನ್ನ ಜೊತೆ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಅದ್ಭುತವಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ಚಿತ್ರದಲ್ಲಿ ನಟಿಸಿರುವ ವೇದಿಕ, ಕೃಷಿ ತಾಪಂಡ, ಶಿವರಾಜ್ ಕೆ.ಆರ್ ಪೇಟೆ, ಮಾಸ್ಟರ್ ರಘುನಂದನ್, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಛಾಯಾಗ್ರಹಕ ಜೈ ಆನಂದ್, ಕಲಾ ನಿರ್ದೇಶಕ ಸತೀಶ್, ಸಂಕಲನಕಾರ ಹರೀಶ್ ಕೊಮ್ಮೆ ಹಾಗೂ ಗೋಪಿ ಅವರು “ಗಣ”ದ ಬಗ್ಗೆ ಮಾತನಾಡಿದರು. ಶ್ರೀನಿವಾಸ್ ಚಿಕ್ಕಬಳ್ಳಾಪುರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

Categories
ಸಿನಿ ಸುದ್ದಿ

ಕೋಮಲ್ ಹುಟ್ದಬ್ಬಕ್ಕೆ ಯಲಾಕುನ್ನಿ ಫಸ್ಟ್ ಲುಕ್: ವಜ್ರಮುನಿ ಗೆಟಪ್ ಗೆ ಫ್ಯಾನ್ಸ್ ಫಿದಾ

ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಹಾಗೂ ಎನ್ ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ “ಯಲಾ ಕುನ್ನಿ” ಚಿತ್ರದ ಫಸ್ಟ್ ಲುಕ್ ನಾಯಕ ಕೋಮಲ್ ಕುಮಾರ್ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ. ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಕೋಮಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಈ ಫಸ್ಟ್ ಲುಕ್ ನಲ್ಲಿ ಕೋಮಲ್ ಅವರು ಹಿರಿಯ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಫಸ್ಟ್ ಲುಕ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರರಂಗದ ಗಣ್ಯರು ಈ ಫಸ್ಟ್ ಲುಕನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

“ಯಲಾಕುನ್ನಿ” ಚಿತ್ರದಲ್ಲಿ ಕೋಮಲ್ ಅವರು ಬಹುಭಾಗ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.”ಮೇರಾ ನಾಮ್ ವಜ್ರಮುನಿ ” ಎಂಬ ಅಡಿಬರಹ ಹಾಗೂ “ನರಕ ತುಂಬಿ ಮರಳಿ ಬಂದ ರಾಮನ ಗುಣದ ರಾವಣ” ಎಂಬ ಬರಹದೊಂದಿಗೆ “ಯಲಾಕುನ್ನಿ” ಚಿತ್ರ ಬರಲಿದೆ. ನವರಸ ನಾಯಕ ಜಗ್ಗೇಶ್ ರವರ ಮಗ “ಯತಿರಾಜ್” ಮತ್ತು ವಜ್ರಮುನಿ ಅವರ ಮೊಮ್ಮಗ ಆಕರ್ಶ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ವಿಶೇಷ.

Categories
ಸಿನಿ ಸುದ್ದಿ

ಹೊಂಬಾಳೆ ಫಿಲಂಸ್ ನ ಬಹು ನಿರೀಕ್ಷಿತ ‘ಸಲಾರ್’ ಚಿತ್ರದ ಟೀಸರ್ ಜುಲೈ 6ಕ್ಕೆ ರಿಲೀಸ್

ಈ ವರ್ಷದ ಅತೀ ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್’. ಪ್ರಭಾಸ್ ನಾಯಕರಾಗಿ ನಟಿಸಿರುವ ಈ ಚಿತ್ರದ ಟೀಸರ್ ಜುಲೈ 6 ರಂದು ಬಿಡುಗಡೆಯಾಗುತ್ತಿದೆ.
ಚಿತ್ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರ ಹೇಗೆ ಮೂಡಿಬಂದಿರಬಹುದು ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದು, ಆ ಎಲ್ಲಾ ಕುತೂಹಲಗಳಿಗೆ ಜುಲೈ 6 ರ ಗುರುವಾರ ತೆರೆಬೀಳಲಿದೆ.
ಜುಲೈ 06ರಂದು ಬೆಳಿಗ್ಗೆ 5.12ಕ್ಕೆ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ಕಳೆದ ವರ್ಷ ಭಾರತೀಯ ಚಿತ್ರರಂಗಕ್ಕೆ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದಂತಹ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಸಲಾರ್’ ಚಿತ್ರವನ್ನು ನಿರ್ಮಿಸುತ್ತಿದೆ.

ಕಳೆದ ಎರಡು ವರ್ಷಗಳಿಂದ ಚಿತ್ರತಂಡದವರು ಚಿತ್ರೀಕರಣ ಮಾಡುತ್ತಿದ್ದರೂ, ಚಿತ್ರದ ಬಗ್ಗೆ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

error: Content is protected !!