ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.
ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ.
ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.
ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.
ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದ “ಘೋಸ್ಟ್” ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.
ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಿನಿಮಾ ಮಾಡುವುದೇ ಒಂದು ಸಾಹಸ. ಸಿನಿಮಾ ಮಾಡಿ ಜನರಿಗೆ ತಲುಪಿಸುವುದು ಇನ್ನೂ ದೊಡ್ಡ ಸಾಹಸ. ಅದಕ್ಕೆ ಸರಿಯಾದ ರೀತಿಯ ಪ್ರಚಾರದ ಅವಶ್ಯಕತೆ ಬಹುಮುಖ್ಯ. ವಿಶೇಷ ರೀತಿಯ ಚಿತ್ರಕ್ಕೆ ವಿಶಿಷ್ಟ ಪ್ರಕಾರದ ಪ್ರಚಾರ ಬೇಕು. ವಿಶಿಷ್ಟ ರೀತಿಯಲ್ಲಿ ಪ್ರಚಾರ ನಡೆಸುತ್ತಿರುವುದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾತಂಡ. ಆರಂಭದ ದಿನದಿಂದಲೂ ನಾನಾ ಬಗೆಯಲ್ಲಿ ಚಿತ್ರಪ್ರೇಮಿಗಳನ್ನು ಸೆಳೆಯುತ್ತಿರುವ ಈ ಚಿತ್ರಕ್ಕೀಗ ಮತ್ತೊಬ್ಬ ಸ್ಟಾರ್ ಸಾಥ್ ಕೊಟ್ಟಿದ್ದಾರೆ. ಹಾಸ್ಟೆಲ್ ಹುಡುಗರಿಗೆ ದೂದ್ ಪೇಡಾ ಸಿಹಿ ಸಿಕ್ಕಿದೆ. ಅಂದರೆ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಪುನೀತ್ ರಾಜಕುಮಾರ್, ರಮ್ಯಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಬೆಂಬಲ ಕೊಟ್ಟಿರುವ ಈ ಚಿತ್ರದಲ್ಲಿ ದಿಗ್ಗಿ ಬಣ್ಣ ಹಚ್ಚಿದ್ದಾರೆ. ಆದರೆ ಅವರ ಪಾತ್ರವೇನೆಂಬುದನ್ನು ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ಜುಲೈ 7ಕ್ಕೆ ದಿಗಂತ್ ಲುಕ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದ್ದಾರೆ.
ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ.
ಪ್ರತಿ ಬಾರಿ ಯುನಿಕ್ ಕಾನ್ಸಎಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಜುಲೈನಲ್ಲಿ ತೆರೆಗೆ ಬರಲಿದೆ.
ಕೆಮಿಸ್ಟ್ರೀ ಆಫ್ ಕರಿಯಪ್ಪ, ಕ್ರಿಟಿಕಲ್ ಕೀರ್ತನೆಗಳು ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲೊಂದು ಹೊಸ ಭರವಸೆ ಮೂಡಿಸಿದವರು ನಿರ್ದೇಶಕ ಕುಮಾರ್. ಇವರ ಸಾರಥ್ಯದ ಮಗದೊಂದು ಪ್ರಯತ್ನ ನ್ಯಾನೋ ನಾರಾಯಣಪ್ಪ. ಕೆಜಿಎಫ್ ತಾತಾ ಖ್ಯಾತಿಯ ನಟ ದಿವಂಗತ ಕೃಷ್ಣೋಜಿ ರಾವ್ ನಾಯಕನಾಗಿ ನಟಿಸಿರುವ ಈ ಸಿನಿಮಾ ಜುಲೈ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಹಾಸ್ಯದ ಜೊತೆಗೆ ಭಾವಾನತ್ಮಕ ಅಂಶವನ್ನು ಹದವಾಗಿ ಬೆರೆಸಿ ಕುಮಾರ್ ನ್ಯಾನೋ ನಾರಾಯಣಪ್ಪ ಕಥೆ ಹೆಣೆದಿದ್ದಾರೆ.
‘ಮನಿ ಹಂಟರ್’ ಹಾಡು ಸೂಪರ್ ಬಿಡುಗಡೆ ಹೊಸ್ತಿಲಿನಲ್ಲಿರುವ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಮನಿ ಹಂಟರ್ ಹಾಡು ಬಿಡುಗಡೆಯಾಗಿದೆ. ನಿರ್ದೇಶಕ ಕುಮಾರ್ ಸಾಹಿತ್ಯದ ಸಿಂಗಿಂಗ್ ಗೆ ಅಂಕಿತಾ ಕುಂಡು ಧ್ವನಿಯಾಗಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. ಹಾಟ್ ಅಂಡ್ ಸ್ಪೈ ನಂಬರ್ ಗೆ ಗಿರಿ ಶಿವಣ್ಣ, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ಹೆಜ್ಜೆ ಹಾಕಿದ್ದಾರೆ.
ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ನಡಿ ಕುಮಾರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅನಂತು, ಅಪೂರ್ವಾ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಮಿಡಿ, ಕಾಡುವ ಕಥೆ, ಮನೆ ಮಂದಿಯೆಲ್ಲಾ ಕುಳಿತು ಕಣ್ತುಂಬಿಕೊಳ್ಳುವ ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ಥಿಯೇಟರ್ ಪ್ರವೇಶಿಸಲಿದೆ.
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಸಂಸ್ಥೆ ಯಿಂದ ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಇದು ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ.
2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನವಿದೆ.
ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.
ಅರಸು, ಆಕಾಶ್, ಅಜಿತ್, ಅತಿರಥ, ಅಭಯ್ ಸೇರಿದಂತೆ ಹಲವರು ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಸಾರಥ್ಯದ ಅಪರೂಪ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜುಲೈ 14ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಅಪರೂಪ ಸಿನಿಮಾ ಮೂಲಕ ಸುಘೋಷ್ ಮತ್ತು ಹೃತಿಕಾ ಕನ್ನಡ ಸಿನಿಮಾ ಲೋಕಕ್ಕೆ ನಾಯಕ ಹಾಗೂ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಹೊಸ ರೀತಿಯ ಪ್ರೇಮಕಥೆಯಾಗಿರುವ ಅಪರೂಪ ಸಿನಿಮಾದಲ್ಲಿ ನಾಯಕ ನಾಯಕಿಯ ನಡುವೆ ಬರುವ ಅಹಂ ವಿಲನ್ ಆಗುತ್ತದೆ. ಅದರಿಂದ ಏನೇನು ತೊಂದರೆ ಉಂಟಾಗುತ್ತದೆ ಅನ್ನೋದು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಾಯಕ ಸುಘೋಷ್ ಮೂಲತಃ ಮಂಡ್ಯದವರು.
ಚಿಕ್ಕಂದಿನಿಂದಲೇ ಸಿನಿಮಾ ಕನಸು ಕಟ್ಟಿಕೊಂಡವರು. ಮಹೇಶ್ ನಿರ್ದೇಶನದ ಅತಿರಥ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅವರ ನಟನೆ ನೋಡಿ ಅಪರೂಪ ಸಿನಿಮಾಗೆ ನಾಯಕರನಾಗಿ ನಟಿಸುವ ಅವಕಾಶ ನೀಡಿದ್ದಾರೆ.
ನೃತ್ಯದಲ್ಲಿಯೂ ಪರಿಣಿತರಾಗಿರುವ ಸುಘೋಷ್, ಕಷ್ಟಕರವಾದ ಸ್ಟೆಪ್ಸ್ ಗಳನ್ನು ಸರಾಗವಾಗಿ ಮಾಡಬಲ್ಲರು. ಅವರು ಹೆಜ್ಜೆ ಹಾಕಿರುವ ‘ಲವ್ ಗೆ ನೋ ನೋ’ ಎಂಬ ಹಾಡು ಈಗಾಗಲೇ ಸಖತ್ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ನಾಯಕಿ ಹೃತಿಕಾ ತೆಲುಗಿನ ಖ್ಯಾತ ನಟಿ ಅಮನಿ ಸಹೋದರನ ಪುತ್ರಿ. ವಿಷ್ಣುವರ್ಧನ್ ನಟನೆಯ ಅಪ್ಪಾಜಿ ಚಿತ್ರದಲ್ಲಿ ಅಮನಿ ನಾಯಕಿಯಾಗಿ ಬಣ್ಣ ಹಚ್ಚಿದ್ದರು.
ಅಶೋಕ್ , ಅರುಣಾ ಬಲರಾಜ್, ಅವಿನಾಶ್, ಕುರಿಪ್ರತಾಪ್ , ದಿನೇಶ್ ಮಂಗಳೂರು, ವಿಜಯ್ ಚೆಂಡೂರು, ಕಡ್ಡಿಪುಡಿ ಚಂದ್ರು, ಮೋಹನ್ ಜುನೇಜಾ ಅಪರೂಪ ಸಿನಿಮಾದ ಭಾಗವಾಗಿದ್ದಾರೆ. ಪ್ರಜ್ವಲ್ ಪೈ ಸಂಗೀತ ಹಾಡುಗಳಿಗೆ ಅರ್ಮನ್ ಮಲ್ಲಿಕ್, ಅನಿರುದ್ಧ್ ಶಾಸ್ತ್ರೀ, ಸಂಗೀತ ರವೀಂದ್ರನಾಥ್, ಪ್ರಜ್ವಲ್ ಪೈ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡಿಗೆ ಧ್ವನಿಯಾಗಿರುವುದು ವಿಶೇಷ.
ಯುವ ಪ್ರತಿಭೆ ಅಭಿಲಾಷ್ ಹಾಗೂ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.
ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್, ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.
ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಜಹಾಂಗೀರ್, ಸುಮನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ವನಿತಾ ಎಚ್.ಎನ್. ಹಾಗೂ ಹರೀಶ್ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಎರಡನೆ ಹಂತದ ಚಿತ್ರೀಕರಣಕ್ಕೆ ತಯಾರಾಗುತ್ತಿದೆ.
ಹಿರಿಯ ನಿರ್ದೇಶಕ ಹಾಗು ಗೀತ ಸಾಹಿತಿ ಸಿ.ವಿ. ಶಿವಶಂಮಕರ್ ನಿಧನರಾಗಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ತಮ್ಮದೇ ಕೊಡುಗೆ ನೀಡಿದ್ದ ಶಿವಶಂಕರ್ ಅವರು, ಇಂದಿಗೂ ನೆನಪಿಸುವ ಗೀತೆಗಳನ್ನು ರಚಿಸಿದ್ದಾರೆ.
ಬಾಲನಟರಾಗಿ ರಂಗಭೂಮಿ ಪ್ರವೇಶಿಸಿದ ಇವರು, ಸ್ಕೂಲ್ ಮಾಸ್ಟರ್, ರತ್ನಗಿರಿ ರಹಸ್ಯ, ಕೃಷ್ಣ ಗಾರುಡಿ, ಧರ್ಮ ವಿಜಯ, ಭಕ್ತ ವಿಜಯ, ರತ್ನ ಮಂಜರಿ, ವೀರ ಸಂಕಲ್ಪ, ಆಶಾ ಸುಂದರಿ, ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವಶಂಕರ್ ನಟಿಸುವುದರ ಜೊತೆಗೆ ಸಾಹಿತ್ಯವನ್ನೂ ರಚಿಸಿದ್ದಾರೆ. ‘ಮನೆ ಕಟ್ಟಿ ನೋಡು’ , ಪದವೀಧರ, ನಮ್ಮ ಊರು, , ಮಹಡಿಯ ಮನೆ,ಹೊಯ್ಸಳ, ಮಹಾತಪಸ್ವಿ, ವೀರಮಹಾದೇವ , ಕನ್ನಡ ಕುವರ ಚಿತ್ರ ಗಳನ್ನು ನಿರ್ದೇಶಿಸಿದ್ದಾರೆ ಶಿವಶಂಕರ್.
1991 ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1994 ರಲ್ಲಿ ರಾಜ್ಯೋತ್ಸವ ಪ್ರಶ್ತಿ, ಸಿಂಗನಲ್ಲೂರು ಪುಟ್ಟಸ್ವಾಮಯ್ಯ ರಾಜಕುಮಾರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.
ಶಿವಶಂಕರ್ ಅವರು ಬರೆದ ಗೀತೆಗಳಲ್ಲಿ ಅಪಾರ ಮೆಚ್ಚುಗೆ ಪಡೆದ ಗೀತೆಗಳಿವು.
ಕನ್ನಡದಾ ರವಿಮೂಡಿ ಬಂದಾ, ಮುನ್ನಡೆಯ ಬೆಳಕನ್ನು ತಂದಾ
ನಾಡಚರಿತೆ ನೆನಪಿಸುವ ವೀರ ಗೀತೆಯಾ, ಹಾಡು ನೀನು ಕನ್ನಡಿಗಾ ದೇಶಗೀತೆಯ
ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೇ, ಭಿಕ್ಷುಕನಾದರೂ ಕನ್ನಡ ಮನ್ನಲ್ಲೇ ಮಡಿವೇ
ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್ ಹಬ್ಬಕ್ಕೆ ಕುರುಬಾನಿ ಕೊಡಲು ಮಾಲೀಕ ತೀರ್ಮಾನ ನಡೆಸಿದ್ದರು.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು. ಅಭಿಮಾನಿಗಳು ಹಾಗೂ ಚಿತ್ರತಂಡದ ಮನವಿಗೆ ಪ್ರತಿಫಲ ಸಿಕ್ಕಿದ್ದು, 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡದಿರಲು ಮಾಲೀಕರು ತೀರ್ಮಾನ ನಡೆಸಿದ್ದಾರೆ.
ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದ ಮಾಲೀಕ ಯುನೀಸ್ ಗಡೇದ್ ಬಕ್ರೀದ್ ಹಬ್ಬಕ್ಕೆ ಕುರ್ಬಾನಿ ಕೊಡಲೆಂದೇ ಎರಡೂವರೆ ವರ್ಷದ ಹಿಂದೆ 7 ಸ್ಟಾರ್ ಸುಲ್ತಾನ್ ಟಗರನ್ನು 1 ಲಕ್ಷ 88 ಸಾವಿರದ ಐನೂರು ರೂ ಗೆ ಖರೀದಿಸಿದ್ದರು. ಆದರೆ ಕುರ್ಬಾನಿಗೂ ಮುನ್ನ ಟಗರನ್ನು ಕಾಳಗಕ್ಕೆ ಇಳಿಸಲಾಗಿದ್ದು ಟಗರು ಅನೇಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಇಲ್ಲಿಯ ವರೆಗೆ 34 ಕಣಗಳಲ್ಲಿ ಪ್ರಥಮ ಬಹುಮಾನ ಗಳಿಸಿದ್ದು ಸುಮಾರು 20 ಲಕ್ಷದಷ್ಟು ಹಣ, ಬೆಳ್ಳಿ, ಬಂಗಾರ, ಬೈಕ್ಗಳನ್ನ ಗೆದ್ದು ಬೀಗಿದೆ.
ಹೀಗಾಗಿ ಮಾಲೀಕ ಯುನೀಸ್ ಈ ಟಗರಿಗೆ 7 ಸ್ಟಾರ್ ಸುಲ್ತಾನ್ ಎಂದು ಹೆಸರಿಟ್ಟರು. ಆದ್ರೆ ಅಂದುಕೊಂಡಂತೆ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಈ ಟಗರನ್ನ ಕುರ್ಬಾನಿ ನೀಡಲು ನಿರ್ಧರಿಸಿದ್ದರು. ಸಾಧಕ ಟಗರನ್ನು ಕುರ್ಬಾನಿ ಮಾಡದಂತೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಹೀಗಾಗಿ ಅಭಿಮಾನಿಗಳ ಒತ್ತಾಸೆಗೆ ಮಣಿದು 7 ಸ್ಟಾರ್ ಸುಲ್ತಾನನ ಕುರ್ಬಾನಿ ಕೊಡದಿರಲು ಯುನೀಸ್ ನಿರ್ಧರಿಸಿದ್ದಾರೆ.
ಯಾವಾಗ ರಿಲೀಸ್ ‘ಟಗರು ಪಲ್ಯ’?
ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಮೂರನೇ ಕೊಡುಗೆ ಟಗರು ಪಲ್ಯ. ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.
ನಟ, ನಿರ್ಮಾಪಕ ಕಮ್ ನಿರ್ದೇಶಕ ಕೃಷ್ಣೇಗೌಡ ಅವರು ಕನ್ನಡ ಸಿನಿರಂಗದಲ್ಲಿ ಒಂದಷ್ಟು ಸದ್ದು ಮಾಡಿದವರು. ಕನ್ನಡ ಸಿನಿಮಾರಂಗದ ಒಳಿತಿಗೆ ಹೋರಾಡುತ್ತಲೇ ತಮ್ಮ ನೇರ ಮಾತುಗಳ ಮೂಲಕ ಒಂದಷ್ಟು ಗೆಳೆಯರಿಗೆ ಹತ್ತಿರವಾದವರು. ಸಿನಿಮಾರಂಗವನ್ನು ಆಳವಾಗಿ ಪ್ರೀತಿಸುವ, ಯೋಚಿಸುವ ಕೃಷ್ಣೇಗೌಡರು ಈಗಾಗಲೇ ಸದಭಿರುಚಿಯ ಮತ್ತು ಸೂಕ್ಷ್ಮತೆಯ ಅಂಶಗಳಿರುವ ಕಥೆ ಆಯ್ಕೆ ಮಾಡಿಕೊಂಡು ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಆ ಸಾಲಿಗೆ ನಾನು ಕುಸುಮ ಸಿನಿಮಾ ಕೂಡ ಸೇರಿದೆ ಎಂಬುದು ವಿಶೇಷ.
ಕನ್ನಡ ಮಾತ್ರವಲ್ಲ, ಸಾಗರದಾಚೆಗೂ ಅವರ ಸಿನೀಮಾಗಳು ಸುದ್ದಿ ಮಾಡಿವೆ. ಹಲವು ರಾಷ್ಟ್ರ ಪ್ರಶಸ್ತಿಗಳನ್ನೂ ಪಡೆದುಕೊಂಡಿವೆ. ಇತ್ತೀಚೆಗೆ ಅವರ ಪಿಂಕಿ ಎಲ್ಲಿ ? ಶಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿ, ನೋಡುಗರ ಗಮನ ಸೆಳೆದಿತ್ತು. ಈಗ ಮತ್ತೊಂದು ಕಾಡುವ ಹೊಸ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ.
ಹೌದು, ಅವರ ನಿರ್ಮಾಣ ನಿರ್ದೇಶನದ ‘ನಾನು ಕುಸುಮ’ ಸಿನಿಮಾ ಜೂನ್ 30 ರಂದು ತೆರೆ ಕಾಣುತ್ತಿದೆ. ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ ಕಥೆ ಆಧರಿಸಿ ತಯಾರಾಗಿರುವ ‘ನಾನು ಕುಸುಮ’ ಚಿತ್ರಕ್ಕೆ ಕೃಷ್ಣೇಗೌಡ ನಿರ್ಮಾಪಕರು. ಅಷ್ಟೇ ಅಲ್ಲ, ನಿರ್ದೇಶಕರೂ ಹೌದು.
ಕುಸುಮಳ ಕಥೆ ಏನು?
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೆಲ್ಲ ಸಮಸ್ಯೆಗಳಿಗೆ ಸಿಲುಕುತ್ತಾಳೆ, ಯಾವೆಲ್ಲ ಶೋಷಣೆ ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥೆ ಸಾಗುತ್ತದೆ. ಭಾವುಕ ಮತ್ತು ಭಾವನಾತ್ಮಕ ಅಂಶಗಳು ಇಲ್ಲಿ ಹೈಲೆಟ್. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭಾ ಸಂಶಿಮಠ್, ವಿಜಯ್ ಇತರರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇತ್ತೀಚೆಗೆ ನಡೆದ ‘14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಪ್ರದರ್ಶನಗೊಂಡ ಈ ಸಿನಿಮಾ, ಪ್ರಥಮ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.
‘ನಾನು ಕುಸುಮ’ ಈಗಾಗಲೇ ‘ಇಂಡಿಯನ್ ಪನೋರಮಾ’, ‘ರಾಜಸ್ಥಾನ್ ಫಿಲಂ ಫೆಸ್ಟಿವಲ್’, ‘ತ್ರಿಶೂರ್ ಫಿಲಂ ಫೆಸ್ಟಿವಲ್’ ಸೇರಿದಂತೆ ಹಲವು ಪ್ರತಿಷ್ಠಿತ ಚಲನ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.
ನಾನು ಕುಸುಮ’ ಸಿನಿಮಾಗೆ ಅರ್ಜುನ್ ರಾಜಾ ಕ್ಯಾಮೆರಾ ಹಿಡಿದಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಆಸ್ಪತ್ರೆ, ವಾರ್ಡ್, ಗಲ್ಲಿ, ಮನೆ… ಹೀಗೆ ಸಿನಿಮಾದಲ್ಲಿ ಬರುವ ಎಲ್ಲ ಸ್ಥಳಗಳನ್ನು ನೈಜ ಲೊಕೇಶನ್ ಗಳಲ್ಲೇ ಚಿತ್ರೀಕರಿಸಲಾಗಿದೆ.
ಸಿಂಕ್ ಸೌಂಡ್ ನಲ್ಲಿ ಹಿನ್ನೆಲೆ ಧ್ವನಿಗ್ರಹಣ ಮಾಡಿರುವುದು ಸಿನಿಮಾದ ವಿಶೇಷ. ಈಗಾಗಲೇ ಚಿತ್ರೋತ್ಸವಗಳ ಮೂಲಕ ಚಿತ್ರರಂಗದಲ್ಲಿ ಅನೇಕ ಖ್ಯಾತನಾಮರ ಗಮನ ಸೆಳೆದಿರುವ ‘ನಾನು ಕುಸುಮ’ ಜೂನ್ 30 ರಂದು ರಾಜ್ಯಾದ್ಯಂತ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.