Categories
ಸಿನಿ ಸುದ್ದಿ

ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಗುಬ್ಬಿಮರಿಯ ಹೋರಾಟ!

ಗುಬ್ಬಿ ಟೆಂಟ್ ಬ್ಯಾನರ್ ನಲ್ಲಿ ಆನಂದಬಾಬು ಹಾಗೂ ಡಾ.ನಿಶ್ಚಿತ ನಿರ್ಮಿಸಿರುವ ಹಾಗೂ ಮಧು ಡಕಣಾಚಾರ್ ನಿರ್ದೇಶನದ ಗುಬ್ಬಿಮರಿ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಿರ್ದೇಶಕ ಹಾಗೂ ನಿರ್ಮಾಪಕರ ಅಮ್ಮಂದಿರು ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಕೆಲವರಿಗೆ ಹೆಣ್ಣು ತಾಯಿಯಾಗಿ ಬೇಕು, ಹೆಂಡತಿಯಾಗಿ ಬೇಕು ಆದರೆ ಮಗಳಾಗಿ ಮಾತ್ರ ಬೇಡ. ಕಾಲ ಎಷ್ಟು ಮುಂದುವರೆದಿದ್ದರೂ, ಇನ್ನೂ ಕೆಲವು ವಿಕೃತ ಮನಸ್ಸಿನವರು ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಅಂತಹವರಿಗೆ ಈ ಸಿನಿಮಾ ಮೂಲಕ ಇದು ತಪ್ಪು ಎಂದು ಅರಿವು ಮೂಡಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ. ಎಲ್ಲರೂ ಕುಟುಂಬ ಸಮೇತ ನೋಡಬಹುದಾದ ಚಿತ್ರ ನಮ್ಮದು. ನಾನು ಈ ಹಿಂದೆ ಕೆಲವು ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿದ್ದೆ. ಇದು ಮೊದಲ ಚಿತ್ರ. ನಾನು ಕಥೆಯನ್ನು ಆನಂದಬಾಬು ಅವರಿಗೆ ಹೇಳಿದೆ. ಅವರು ನಿರ್ಮಾಣಕ್ಕೆ ಮುಂದಾದರು. ಅವರ ಮೂಲಕ ಡಾ. ನಿಶ್ಚಿತ ಪರಿಚಿತರಾದರು. ಇಬ್ಬರೂ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಹದೇವಸ್ವಾಮಿ ರಿಲೀಸ್ ಈ ಚಿತ್ರದ ಪಾರ್ಟನರ್ ಆಗಿದ್ದಾರೆ.


ಸುಂದರ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ದೀಪು – ಸಿದ್ದು ಛಾಯಾಗ್ರಹಣ, ಎ.ಟಿ.ರವೀಶ್ ಸಂಗೀತ ನಿರ್ದೇಶನ ಹಾಗೂ ಆದಿತ್ಯ ಕುಣಿಗಲ್ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ಮಧು ಡಕಣಾಚಾರ್ ಚಿತ್ರದ ಬಗ್ಗೆ ‌ಮಾಹಿತಿ ನೀಡಿದರು.

ನಿರ್ಮಾಪಕರಾದ ಆನಂದಬಾಬು ಹಾಗೂ ಡಾ. ನಿಶ್ಚಿತ ಚಿತ್ರದ ಕುರಿತು ಮಾತನಾಡಿದರು.

ಇದು ಮಕ್ಕಳ ಚಿತ್ರವಲ್ಲ. ಮಕ್ಕಳ ಜೊತೆಗೆ ಹಿರಿಯರು ನೋಡಬೇಕಾದ ಚಿತ್ರ. ನಿರ್ದೇಶಕರು ಒಳ್ಳೆಯ ಚಿತ್ರ ಮಾಡಿದ್ದಾರೆ. ನೋಡಿ ಹಾರೈಸಿ ಎಂದರು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಸುಂದರ್.

ಚಿತ್ರದಲ್ಲಿ ಅಭಿನಯಿಸಿರುವ ಮಾಸ್ಟರ್ ಚಿನ್ಮಯ್, ಮಾಸ್ಟರ್ ಸಂಜಯ್, ಸಿಂಧು, ಕಾಮಿಡಿ ಕಿಲಾಡಿಗಳು ಸಂತು, ಕಾಮಿಡಿ ಕಿಲಾಡಿಗಳು ಚಂದ್ರು, ಆಶಾ, ಪ್ರಿಯಾಂಕ (ಮಂಗಳಮುಖಿ) ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು.

Categories
ಸಿನಿ ಸುದ್ದಿ

ಇದು ಕನ್ನಡದ ಆಶಿಕಿ! ಹಾಡಿನ ಮೆರವಣಿಗೆಗೆ ದಿನಗಣನೆ…

‘ಕ್ವಾಟ್ಲೆ’ ಸಿನಿಮಾ ನಿರ್ದೇಶಕಿ ಜೆ ಚಂದ್ರಕಲ ಅವರ ನಿರ್ದೇಶನದ ‘ಆಶಿಕಿ’ ಸಿನಿಮಾ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಎಲ್ಲರ ಮನಸೂರೆಗೊಳ್ಳಲು ಸಜ್ಜಾಗಿದೆ. ಚಿತ್ರದ ‘ಯಾರಾ ಯಾರಾ’ ಹಾಡಿನ ವೀಡಿಯೋ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೂ ಮುನ್ನುಡಿ ಬರೆದಿದೆ ಚಿತ್ರತಂಡ.

ಲಿಯೋ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಸ್ವತಃ ಚಿತ್ರದ ನಿರ್ದೇಶಕಿ ಜೆ ಚಂದ್ರಕಲ ಸಾಹಿತ್ಯ ಬರೆದಿದ್ದು ಅಶ್ವಿನ್ ಶರ್ಮಾ ದನಿಯಾಗಿದ್ದಾರೆ.

ಮ್ಯೂಸಿಕಲ್ ಲವ್ ಸ್ಟೋರಿ ಹಾಗೂ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಸಂದೀಪ್ ಕುಮಾರ್ ನಾಯಕರಾಗಿ ಅಭಿನಯಿಸಿದ್ದು ನಾಯಕಿಯಾಗಿ ಐಶ್ವರ್ಯ ಸಿಂಧೋಗಿ, ಹಾಗೂ ಇನ್ನೊಬ್ಬ ನಾಯಕನ ಪಾತ್ರದಲ್ಲಿ ಪ್ರದೀಪ್ ಕುಮಾರ್ ನಟಿಸಿದ್ದು ಗುರುಪ್ರಸಾದ್, ಸುಚೇಂದ್ರ ಪ್ರಸಾದ್, ತುಳಸಿ ಶಿವಮಣಿ, ಪ್ರಮೋದಿನಿ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇತ್ತಿಚೆಗಷ್ಟೆ ಸೆನ್ಸಾರ್ ಮಗಿಸಿರುವ ಆಶಿಕಿ ದಸರಾದಲ್ಲಿ ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ದು ಇದೇ ತಿಂಗಳಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು ಪ್ರತಿ ಹಾಡುಗಳು ಡಿಫ್ರೆಂಟ್ ಆಗಿ ಮೂಡಿ ಬಂದಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕಿ ಜೆ. ಚಂದ್ರಕಲಾ.

ಕುಲು ಮನಾಲಿ, ಕೇರಳ, ಆಂಧ್ರಪ್ರದೇಶ, ಪಂಜಾಬ್, ಚಂಡೀಗಡ, ಚಿಕ್ಕಮಗಳೂರು, ಆಗ್ರಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಶ್ರೀ ಲಕ್ಷ್ಮೀ ನರಸಿಂಹ ಮೂವೀನ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಜಿ. ಚಂದ್ರಶೇಖರ್ ಬಂಡವಾಳ ಹೂಡಿದ್ದು, ರಾಜರತ್ನ, ನಿತಿನ್ ಅಪ್ಪಿ ಛಾಯಾಗ್ರಾಹಣ, ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ನಗುವಿನ ಹೂಗಳ ಮೇಲೆ ಚಿತ್ರಕ್ಕೆ ಲಂಡನ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ…

ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿ ನಿರ್ವಹಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್.

ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ.

ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ ಮುಗಿಸಿದ್ದು 7.1 ಫೈನಲ್ ಔಟ್ ಪುಟ್ ದೊರೆತಿದೆ. ಔಟ್ ಪುಟ್ ಕಂಡು ನಿರ್ದೇಶಕ ವೆಂಕಟ್ ಭಾರದ್ವಾಜ್ ಹರುಷಗೊಂಡಿದ್ದು, ಸಂತಸ ಹಂಚಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ನಡೆಸುತ್ತಿದೆ. ಇದೀಗ ಚಿತ್ರದ ಬ್ಯಾಗ್ರೌಂಡ್ ಸ್ಕೋರ್ ಅಂದುಕೊಂಡಂತೆ ಯಶಸ್ವಿಯಾಗಿರೋದು ಚಿತ್ರತಂಡದ ಸಂಭ್ರಮ ಹೆಚ್ಚಿಸಿದೆ.

ನಾಯಕ ಅಭಿಷೇಕ್ ರಾಮದಾಸ್, ನಾಯಕಿ ಶರಣ್ಯಾ ಶೆಟ್ಟಿ ಚಿತ್ರದ ಪ್ರಚಾರ ಕಾರ್ಯವನ್ನು ವಿಭಿನ್ನವಾಗಿ ನಡೆಸುತ್ತಿದ್ದು, ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ. ರೋಮ್ಯಾಂಟಿಕ್ ಜೊತೆಗೆ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರವನ್ನು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ತೆಲುಗಿನ ಕೆ.ಕೆ ರಾಧಾ ಮೋಹನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಮೊದಲ ಕನ್ನಡ ಸಿನಿಮಾವಾಗಿದೆ.

ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ಮೊದಲ ವಾರ ಸಿನಿಮಾ ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

Categories
ಸಿನಿ ಸುದ್ದಿ

ಆಪರೇಷನ್ ಲಂಡನ್ ಕೆಫೆ ಪೋಸ್ಟರ್ ಬಂತು: ಇದು ಮೇಘಾಶೆಟ್ಟಿ ಬರ್ತ್ ಡೇ ಗಿಫ್ಟ್…

ಕನ್ನಡದ ಹುಡುಗಿ ಮೇಘಾ ಶೆಟ್ಟಿ ‘ಆಪರೇಷನ್ ಲಂಡನ್ ಕೆಫೆ’ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತು. ಇದೀಗ ಮಲ್ಲಿಗೆ ಮುಡಿದು ಮುದ್ದಾಗಿ ಕಾಣಿಸುವ ಮೇಘಾ ಶೆಟ್ಟಿಯ ಕಲರ್ಫುಲ್ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಅವರ ಹುಟ್ಟು ಹಬ್ಬಕ್ಕೆ ಇನ್ನಷ್ಟು ಮೆರುಗು ನೀಡಿ ಚಿತ್ರತಂಡ ಶುಭಾಶಯ ಕೋರಿದೆ.

ಇತ್ತೀಚೆಗಷ್ಟೇ ನಾಯಕ ಕವೀಶ್ ಶೆಟ್ಟಿಯ ಔಟ್ ಆಂಡ್ ಔಟ್ ಮಾಸ್ ಆಂಡ್ ಕಮರ್ಷಿಯಲ್ ಪೋಸ್ಟರ್ ಜೊತೆ ಚಿತ್ರದ ಟೈಟಲ್ ಬಿಡುಗಡೆಗೊಳಿಸಿದ ನಿರ್ದೇಶಕ ಸಡಗರ ರಾಘವೇಂದ್ರ ಈಗ ಈ ಪೋಸ್ಟರ್ ಮೂಲಕ ಚಿತ್ರಕ್ಕೆ ಇನ್ನೊಂದು ಸುಂದರವಾದ ಆಯಾಮ ಕೂಡ ಇದೆ ಎನ್ನುವ ಗುಟ್ಟು ಬಿಟ್ಟು ಕೊಟ್ಟಿದ್ದಾರೆ. ಚಿತ್ರದ ಕಥೆ ಮತ್ತು ಮೇಘಾ ಶೆಟ್ಟಿಯ ಪಾತ್ರದ ಬಗ್ಗೆ ಕೇಳಿದಾಗ ಅದಕ್ಕಿನ್ನೂ ಸಮಯವಿದೆ ಈಗಲೇ ಬೇಡ ಎನ್ನುತ್ತಾ ಮುಗುಳ್ನಕ್ಕು ಸುಮ್ಮನಾಗುವ ನಿರ್ದೇಶಕರು ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿರುವ ಬಗ್ಗೆ ತಿಳಿಸಿದ್ದಾರೆ.

ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ದೀಪಕ್ ರಾಣೆ ನಿರ್ಮಾಣ ಮಾಡುತ್ತಿರುವ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಲಾಂಛನದಡಿಯಲ್ಲಿ ಸಿದ್ಧವಾಗುತ್ತಿರುವ ಈ ಅದ್ಧೂರಿ ಬಜೆಟ್ಟಿನ ಬಹುಭಾಷಾ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ತೆರೆ ಕಾಣುವ ಎಲ್ಲಾ ನಿರೀಕ್ಷೆಯಿದೆ.

Categories
ಸಿನಿ ಸುದ್ದಿ

ಕರವೇ ಅಧ್ಯಕ್ಷರ ಪುತ್ರನ ಸಿನಿಮಾ ಎಂಟ್ರಿ: ಹೊಸಬರ ಸೈರನ್ ಬಲು ಜೋರು…

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆ ಆಗಮಿಸಿದೆ. ಸೈರನ್ ಮೊದಲ ಸಿನಿಮಾ. ಪ್ರವೀರ್ ಶೆಟ್ಟಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ರ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ಚಿಕ್ಕಣ್ಣ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕರು ಶುಭ ಕೋರಿದರು.

ಹೀರೋ ಪ್ರವೀರ್ ಶೆಟ್ಟಿ ಮಾತಾಡಿ, ಈ ಚಿತ್ರವನ್ನು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಅರ್ಪಿಸುತ್ತೇವೆ. ಈ ಚಿತ್ರದ ನಿರ್ದೇಶಕ ರಾಜ ವೆಂಕಯ್ಯ ಅವರು ನನ್ನನ್ನು ಭೇಟಿಯಾಗಿ ಕಥೆ ಹೇಳಿದರು. ತುಂಬಾ ಇಷ್ಟವಾಯಿತು. ಬಿಜು ಶಿವಾನಂದ್ ಅವರು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ಪ್ರವೀರ್ ಶೆಟ್ಟಿ.

ನಿರ್ದೇಶಕ ರಾಜ ವೆಂಕಯ್ಯ ಮಾತಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ಛಾಯಾಗ್ರಹಕನಾಗಿ, ಸಂಕಲನಕಾರನಾಗೂ ಕಾರ್ಯ ನಿರ್ವಹಿಸಿದ್ದೇನೆ. ಈಗ ಕನ್ನಡದಲ್ಲಿ “ಸೈರನ್” ಚಿತ್ರವನ್ನು ನಿರ್ದೇಶಿಸಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ನಾಯಕ ಪ್ರವೀರ್ ಶೆಟ್ಟಿ ತುಂಬಾ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಆಡಿಯೋ ರಿಲೀಸ್ ಸಮಯದಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾತನಾಡುತ್ತೇನೆ ಎಂದರು ನಿರ್ದೇಶಕ ರಾಜ ವೆಂಕಯ್ಯ.

ನಾಯಕಿ ಲಾಸ್ಯ ಹಾಗೂ ಸುಕನ್ಯ ತಮ್ಮ ಪಾತ್ರದ ಬಗ್ಗೆ, ನಾಗೇಶ್ ಆಚಾರ್ಯ ಛಾಯಾಗ್ರಹಣದ ಕುರಿತು ಮಾತನಾಡಿದರು.

ರೋಡಿನಲ್ಲಿ “ಸೈರನ್” ಸದ್ದಿಗೆ ಎಲ್ಲರೂ ದಾರಿ ಬಿಡುತ್ತಾರೆ. ಸ್ಯಾಂಡಲ್ ವುಡ್ ನಲ್ಲೂ ಈ “ಸೈರನ್” ಸಹ ಭಾರಿ ಸದ್ದು ಮಾಡಲಿ. ಭರ್ಜರಿ ಯಶಸ್ಸು ಕಾಣಲಿ. ಟೀಸರ್ ನಲ್ಲೇ ಪ್ರವೀರ್ ಶೆಟ್ಟಿ ಒಳ್ಳೆಯ ಭರವಸೆ ಮೂಡಿಸಿದ್ದಾರೆ. ಅವರಿಗೂ ಒಳ್ಳೆಯದಾಗಲಿ ಎಂದು ನಟ ಚಿಕ್ಕಣ್ಣ ಹಾರೈಸಿದರು.

ಪ್ರವೀಣ್ ಶೆಟ್ಟಿ ಅವರ ಸ್ನೇಹಿತರ ಬಳಗ ದೊಡ್ಡದು. ಮುಂದೆ ಈ ಸಿನಿಮಾದ ಕಾರ್ಯಕ್ರಮಗಳನ್ನು ಅರಮನೆ ಆವರಣದಲ್ಲಿ ಮಾಡುವಂತೆ ವಿನಂತಿಸುತ್ತೇನೆ. ಟೀಸರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ. ಶುಭವಾಗಲಿ ಎಂದರು ನಿರ್ಮಾಪಕ ಉಮಾಪತಿ ಗೌಡ.

ನಾವು ಹಾಗೂ ಪ್ರವೀಣ್ ಶೆಟ್ಟಿ ಅವರ ಮಗನ ಚಿತ್ರ ಭರ್ಜರಿ ಗೆಲುವು ಸಾಧಿಸಲಿ ಎಂದು ಲಹರಿ ವೇಲು ಹಾರೈಸಿದರು.

ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಪಳನಿ ಪ್ರಕಾಶ್, ಬಂಟರ ಸಂಘದ ಅಧ್ಯಕ್ಷರು ಸೇರಿದಂತೆ ಸಾಕಷ್ಟು ಗಣ್ಯರು ತಮ್ಮ ಮಾತುಗಳ ಮೂಲಕ ಚಿತ್ರಕ್ಕೆ ಶುಭ ಕೋರಿದರು‌.

Categories
ಸಿನಿ ಸುದ್ದಿ

ಜನಮನ್ನಣೆ ಪಡೆಯುತ್ತಿರುವ ಟಾಕೀಸ್ ಆಪ್: ಕನ್ನಡ ನಿರ್ಮಾಪಕರಿಗೆ ಮೂಡಿಸಿದ ಭರವಸೆ…

ಇತ್ತೀಚೆಗಷ್ಟೇ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ರಿಲೀಸ್ ಮಾಡಿದ್ದ ಟಾಕೀಸ್‌ ಆ್ಯಪ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಚ್ಚ ಕನ್ನಡದ ಅತ್ಯುತ್ತಮ ಗುಣಮಟ್ಟದ ಓಟಿಟಿ ವೇದಿಕೆ ಇದಾಗಿದ್ದು ಕನ್ನಡ ನಿರ್ಮಾಪಕರಿಗೆ ಹೊಸ ಭರವಸೆ ಮೂಡಿಸಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಆ್ಯಪ್‌ನಲ್ಲಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ ನೂರಾರು ಸಿನಿಮಾ, ಹತ್ತಾರು ವೆಬ್‌ ಸೀರೀಸ್‌, ಮಕ್ಕಳ ಕಥೆಗಳು ಸೇರಿದಂತೆ ಸಾಕಷ್ಟು ಕಂಟೆಂಟ್‌ಗಳು ಇಲ್ಲಿ ಲಭ್ಯವಿದ್ದು, ವೀಕ್ಷಕರಿಂದ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ, ನಾಟಕ, ಯಕ್ಷಗಾನ, ಮಕ್ಕಳ ಕಥೆ, ಕಾರ್ಟೂನ್‌ಗಳು ಸೇರಿದಂತೆ ಮನರಂಜನೆಗೆ ಹೆಚ್ಚು ಒತ್ತು ಕೊಡುವಲ್ಲಿ ನಮ್ಮ ತಂಡ ಉತ್ಸುಕವಾಗಿದೆ ಎಂದು ಸಂಸ್ಥೆಯ ಚೇರ್ಮನ್‌ ರತ್ನಾಕರ್‌ ಕಾಮತ್‌ ಅವರ ಮಾತು.

ಸ್ವಯಂಪ್ರಭಾ ಎಂಟರ್‌ಟೈನ್‌ಮೆಂಟ್‌ ಮತ್ತು ಪ್ರೊಡಕ್ಷನ್ಸ್‌ ಹೊರತಂದಿರುವ ಟಾಕೀಸ್‌ ಆ್ಯಪ್‌, ಈಗಾಗಲೇ ನಿರೀಕ್ಷೆ ಮೀರಿ ದಾದಾರರನ್ನು ಹೊಂದಿದೆ. 1200ಕ್ಕೂ ಅಧಿಕ ಕಲಾವಿದರು, 700ಕ್ಕೂ ಹೆಚ್ಚು ತಂತ್ರಜ್ಞರ ಪ್ರಯತ್ನದ ಫಲವಾದ`ಟಾಕೀಸ್‌ ಆಪ್ ಪ್ರತೀ ತಿಂಗಳು ಎಂಟು ಸಂಚಿಕೆಗಳ ಒಂದು ಹೊಸ ವೆಬ್‌ ಸೀರೀಸ್‌ ಹಾಗೂ ಪ್ರತಿ ವಾರ ಎರಡು ಹೊಸ ಕಂಟೆಂಟ್‌ಗಳನ್ನು ಹೊರತರುತ್ತಿದೆ.

ವಿಜಯ ರಾಘವೇಂದ್ರ, ಪ್ರಮೋದ್‌ ಶೆಟ್ಟಿ, ರಂಜನಿ ರಾಘವನ್‌, ದಿವ್ಯ ಉರುಡುಗ, ಮಂಜು ಪಾವಗಡ, ವೈಷ್ಣವಿ, ಭೂಮಿ ಶೆಟ್ಟಿ, ನಾಗೇಂದ್ರ ಶಾ, ನಿವೇದಿತಾ ಗೌಡ, ಚಂದನ್‌ ಶೆಟ್ಟಿ, ದೀಪಿಕಾ, ಚಂದನಾ ಮುಂತಾದವರು`ಟಾಕೀಸ್‌’ ಸಿನಿಮಾ, ವೆಬ್‌ ಸೀರೀಸ್‌ನ ಭಾಗವಾಗಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಹಕೂನ ಮಟಟ, ವನಜಾ, ಗರಂ ಮಸಾಲಾ, ಕರ್ಮ ರಿಟರ್ನ್‌, ವಿಟಮಿನ್‌ ಎಂ ಅಲ್ಲದೆ ಮುಂದಿನ ದಿನಗಳಲ್ಲಿ ಪೊಲೀಸ್‌ ಫೈಲ್ಸ್, ಜಾಲಿ ಬ್ಯಾಚುಲರ್ಸ್, ಲವ್‌ ಬರ್ಡ್ಸ್ ಹಾಗೂ ನಿವೃತ್ತ ಎಸ್‌.ಪಿ ಎಸ್‌.ಕೆ.ಉಮೇಶ್‌ ಅವರ ಕಥಾಸಂಕಲನ ಸೇರಿದಂತೆ ಸಾಕಷ್ಟು ವೆಬ್‌ ಸೀರೀಸ್‌, ಕಿರುಚಿತ್ರಗಳನ್ನು ವೀಕ್ಷಿಸಬಹುದಾಗಿದೆ.

Categories
ಸಿನಿ ಸುದ್ದಿ

ಮಾಂಕ್ ದಿ ಯಂಗ್- ಇದು ಯಂಗ್ ಸ್ಟರ್ಸ್ ಚಿತ್ರ: ಗುಂಡು ಕುರಿತ ಕಥೆ- ಶುಭ ಕೋರಿದ ರಿಷಭ್…

ಹೊಸ ತಂಡ ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ, ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಸಾಕ ಮಾಸ್ಚಿತ್ ಸೂರ್ಯ ಮಾತಾಡಿ, “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು ಜನ ನಿರ್ಮಾಪಕರು. ಐದು ನಿರ್ಮಾಪಕರೂ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್‌ ವರ್ಕ್ ಬಿರುಸಿನಿಂದ ಸಾಗಿದೆ. ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ರಿಷಭ್ ಶೆಟ್ಟಿ ಹಾಗೂ ಭಾ.ಮ.ಹರೀಶ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ.

ನಾನು ಹದಿನೇಳನೇ ವಯಸ್ಸಿನಲ್ಲೇ ಆರ್ಮಿ ಸೇರಿದೆ. ನಲವತ್ತು ವರ್ಷಗಳು ಅಲ್ಲಿ ಸೇವೆ ಸಲ್ಲಿಸಿದ್ದೇನೆ. ಅಲ್ಲಿಂದ ಬಂದ ಮೇಲೆ ನನಗೆ ಚಿತ್ರದಲ್ಲಿ ನಟಿಸುವ ಆಸೆಯಾಯಿತು. ಈ ಹಿಂದೆ ಕೂಡ ಒಂದು ಚಿತ್ರದಲ್ಲಿ ಅಭಿನಯಿಸಿದ್ದೆ. ಇದು ಎರಡನೇ ಚಿತ್ರ. ಈ ಚಿತ್ರದ ಪಾತ್ರ ಕೂಡ ಚೆನ್ನಾಗಿದೆ ಎಂದರು ನಿರ್ಮಾಪಕರಲ್ಲೊಬ್ಬರಾದ ಕರ್ನಲ್ ರಾಜೇಂದ್ರನ್.

ನಿರ್ಮಾಪಕರು ಹಾಗೂ ನಟರೂ ಆಗಿರುವ ವಿನಯ್ ಬಾಬು ರೆಡ್ಡಿ, ಲಾಲ್ ಚಂದ್, ಗೋಪಿ ಚಂದ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಎಲ್ಲರು ತಮ್ಮ ಚಿತ್ರವನ್ನು ವಿಭಿನ್ನವಾಗಿ ಮಾಡಿದ್ದೇವೆ ಎನ್ನುತ್ತಾರೆ. ಅದೇ ರೀತಿ ನಾವು ಹೇಳುತ್ತೇವೆ. ಆದರೆ ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಟ್ರೇಲರ್ ನೋಡಿ ನೀವೇ ತೀರ್ಮಾನಿಸಿ. ನಿಜಕ್ಕೂ ಒಳ್ಳೆಯ ಅಡುಗೆ ಎಲ್ಲರಿಗೂ ರುಚಿಸುವ ಹಾಗೆ, ನಮ್ಮ ಚಿತ್ರ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು ಚಿತ್ರದ ನಿರ್ಮಾಪಕ ಹಾಗೂ ನಾಯಕ ಸರೋವರ.

ನಾನು ಹೊಳೆನರಸೀಪುರದ ಹುಡುಗಿ. ನನಗೆ ನಟಿಸುವ ಆಸೆ. ಆದರೆ ಅದಕ್ಕೆ ಮನೆಯವರ ಪ್ರೋತ್ಸಾಹ ಇರಲಿಲ್ಲ. ನಾನು ಸಿವಿಲ್ ಎಂಜಿನಿಯರಿಂಗ್ ಓದಿ ಹೈದರಾಬಾದಿನಲ್ಲಿ ಕೆಲಸ ಮಾಡುತ್ತಿದ್ದೆ‌. ಆದರೆ ನಟನೆಯ ಮೇಲಿನ ಆಸಕ್ತಿಯಿಂದ ಕೆಲಸ ಬಿಟ್ಟು ಬಂದು ಈ ಚಿತ್ರದಲ್ಲಿ ನಟಿಸಿದ್ದೇನೆ.

ಇದು ನನ್ನ ಮೊದಲ ಚಿತ್ರ. ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದೇನೆ. ಈ ಚಿತ್ರದ ಕಥೆ ಬ್ರಿಟೀಷರ ಕಾಲದಲ್ಲಿ ನಡೆಯುತ್ತದೆ. ಹಾಗಾಗಿ ಈ ಶೀರ್ಷಿಕೆ ಇಟ್ಟಿದ್ದಾರೆ ಎಂದು ನಾಯಕಿ ಸೌಂದರ್ಯ ಗೌಡ ಚಿತ್ರ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಹಿರಿಯ ನಟಿ ಉಷಾ ಭಂಡಾರಿ ಸಹ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಹಿರಿಯ ನಟ ಪ್ರಣಯ ಮೂರ್ತಿ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಬೆಳ್ಳಿಹಬ್ಬದ ಖುಷಿಯಲ್ಲಿ ಕಲಾಕಾರ್! ಹರೀಶ್ ರಾಜ್ ಬಣ್ಣಕ್ಕೆ 25 ವರುಷ…

ತಮ್ಮದೇ ಅಭಿನಯದ ಮೂಲಕ ಜನಮನ ಗೆದ್ದ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭ ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಅಲ್ಲಿದ್ದರು.

ತಮ್ಮ ಸಿನಿ ಪಯಣ ಕುರಿತು ಮಾತಿಗಿಳಿದ ಹರೀಶ್‌ರಾಜ್‌ ಹೇಳಿದ್ದಿಷ್ಟು. 1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು ನಟಿಸಿದ್ದ
“ದೋಣಿ ಸಾಗಲಿ” ಚಿತ್ರದ ಮೂಲಕ ನನ್ನ ಸಿನಿಪಯಣ ಆರಂಭವಾಯಿತು. ಅದೇ ವರ್ಷ ಗಿರೀಶ್ ಕಾಸರವಳ್ಳಿ ಅವರು ನಿರ್ದೇಶಿಸಿದ್ದ “ತಾಯಿ ಸಾಹೇಬ” ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಅದರಲ್ಲಿ ನಾನು ಜಯಮಾಲ ಅವರ ಮಗನ ಪಾತ್ರ ನಿರ್ವಹಣೆ ಮಾಡಿದ್ದೆ. ಇಂದಿನ ಸಮಾರಂಭಕ್ಕೆ ನನ್ನ ಮೊದಲ ಸಿನಿಮಾ ನಿರ್ಮಾಪಕರಾದ ಮಧುಸೂದನ್ ಗೌಡ ಅವರು, ಖ್ಯಾತ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ ಸರ್, ಸುನೀಲ್ ಪುರಾಣಿಕ್ ಹಾಗೂ ಭಾ.ಮ.ಹರೀಶ್ ಸರ್ ಬಂದಿರುವುದು ಖುಷಿಯಾಗಿದೆ.

ನಾನು, ಸುನೀಲ್ ಪುರಾಣಿಕ್ ಅವರು ಫಣಿ ರಾಮಚಂದ್ರ ನಿರ್ದೇಶನದ “ದಂಡ ಪಿಂಡಗಳು” ಧಾರಾವಾಹಿಯಲ್ಲಿ ಜೊತೆಗೆ ನಟಿಸಿದ್ದೆವು. ಇದೆಲ್ಲಾ ನೆನಪಿಸಿಕೊಂಡರೆ ಇಷ್ಟು ಬೇಗ 25 ವರ್ಷಗಳು ಕಳೆದು ಹೋಯಿತಾ? ಅನಿಸುತ್ತದೆ. ಈ ಇಪ್ಪತ್ತೈದು ವರ್ಷಗಳಲ್ಲಿ 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಾಡಿದ್ದೇನೆ. ಗಿರೀಶ್ ಕಾಸರವಳ್ಳಿ, ಗಿರೀಶ್ ಕಾರ್ನಾಡ್, ರಾಜೇಂದ್ರ ಸಿಂಗ್ ಬಾಬು ಅವರಂತಹ ಶ್ರೇಷ್ಠ ನಿರ್ದೇಶಕರ ಚಿತ್ರಗಳಲ್ಲಿ ನಟಿಸಿದ್ದೇನೆ.


ಬಿಗ್ ಬಾಸ್ ನನಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದೆ. ನಾನು ಏನಾದರೂ ಈ ರಂಗದಲ್ಲಿ ಸಾಧನೆ ಮಾಡಿದ್ದೀನಿ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಹಾಗೂ ಮಾಧ್ಯಮದವರು. ಇಡೀ ಚಿತ್ರರಂಗಕ್ಕೆ ನಾನು ಚಿರ ಋಣಿ ಎಂದರು ಹರೀಶ್ ರಾಜ್.

ಸ್ನೇಹಿತರೊಬ್ಬರ ಮೂಲಕ ನನಗೆ ಹರೀಶ್ ರಾಜ್ ಪರಿಚಯವಾದರು. ರಬಕವಿಯಲ್ಲಿ “ತಾಯಿಸಾಹೇಬ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಜಯಮಾಲ, ಶಿವರಾಮಣ್ಣ ಭಾಗವಹಿಸಿದ್ದರು. ತುರ್ತು ಕಾರ್ಯದ ನಿಮಿತ್ತ ಶಿವರಾಮಣ್ಣ ಬೆಂಗಳೂರಿಗೆ ತೆರಳಬೇಕಾಯಿತು. ಆಗ ತಕ್ಷಣ ಹರೀಶ್ ರಾಜ್ ಅವರಿಗೆ ಫೋನ್ ಮಾಡಿ, ನಾಳೆ ನಿಮ್ಮ ಪಾತ್ರದ ಚಿತ್ರೀಕರಣವಿದೆ. ರಾತ್ರಿಯೇ ಹೊರಟು ಬನ್ನಿ ಎಂದೆ. ಬೆಳಗ್ಗೆ ಬಂದರು. ಯಾವುದೇ ಆಯಾಸವಿಲ್ಲದೆ ಅಂದಿನ ಚಿತ್ರೀಕರಣದಲ್ಲಿ ಲವಲವಿಕೆಯಿಂದ ಭಾಗವಹಿಸಿ, ಎಲ್ಲರ ಮೆಚ್ಚುಗೆ ಪಡೆದರು. ನಂತರ ನನ್ನ “ದ್ವೀಪ” ಚಿತ್ರದಲ್ಲೂ ಅಭಿನಯಿಸಿದ್ದರು. ಆ ಚಿತ್ರದ ಅಭಿನಯಕ್ಕಾಗಿ ಇವರು ರಾಷ್ಟ್ರೀಯ ಪ್ರಶಸ್ತಿ ರೇಸ್ ನಲ್ಲಿ ಇದ್ದರು ಎಂದು ನನಗೆ ನಿಧಾನವಾಗಿ ತಿಳಿಯಿತು. ಒಟ್ಟನಲ್ಲಿ ಹರೀಶ್ ರಾಜ್ ಉತ್ತಮ ನಟ.‌ ಮುಂದೆ ಸಹ ಅವರಿಗೆ ಒಳ್ಳೆಯ ಅವಕಾಶಗಳು ಸಿಗಲಿ ಎಂದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾರೈಸಿದರು.

ತಮ್ಮ ಹರೀಶ್ ರಾಜ್ ಒಡನಾಟದ ಬಗ್ಗೆ ಸುನೀಲ್ ಪುರಾಣಿಕ್ ನೆನಪಿಸಿಕೊಂಡರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಶುಭಾಶಯ ತಿಳಿಸಿದರು.

Categories
ಸಿನಿ ಸುದ್ದಿ

ವಿಜಯಾನಂದ ಟೀಸರ್ ಗೆ ಭರಪೂರ ಮೆಚ್ಚುಗೆ: ಇದು ವಿಜಯ ಸಂಕೇಶ್ವರ ಬಯೋಪಿಕ್…

ಈಗಾಗಲೇ ನಾನಾ ಭಾಷೆಯಲ್ಲಿ ಹಲವು ಪ್ರಮುಖ ವ್ಯಕ್ತಿಗಳ, ಸಾಧಕರ ಜೀವನ ಚರಿತ್ರೆ ಕುರಿತು ಸಿನಿಮಾಗಳು ಬಂದಿವೆ. ಬಯೋಪಿಕ್ ಸಿನಿಮಾಗಳು ಸುಮ್ಮನೆ ಆಗುವುದಿಲ್ಲ. ಅದರಲ್ಲೂ ಸಾಧನೆ‌ ಮಾಡಿ ಸಾವಿರಾರು ಮಂದಿ ಬದುಕನ್ನ ಹಸನು ಮಾಡಿದವರ ಸಿನಿಮಾಗಳೇ ಹೆಚ್ಚು. ಈಗ ಕನ್ನಡದಲ್ಲೂ ಅಂತಹ ಸಾದಕರೊಬ್ಬರ ಬಯೋಪಿಕ್ ಸಿನಿಮಾವೊಂದು ಶುರುವಾಗಿದೆ.‌ಅದು ಬೇರಾರೂ ಅಲ್ಲ, ಸಾರಿಗೆ ಕ್ಷೇತ್ರ ಮತ್ತು ಮಾಧ್ಯಮ ರಂಗದಲ್ಲಿ ಛಾಪು ಮೂಡಿಸಿರುವ ಯಶಸ್ವಿ ಉದ್ಯಮಿ ವಿಜಯ ಸಂಕೇಶ್ವರ ಅವರದು.‌ಅವರ ಬಯೋಪಿಕ್ ಸಿನಿಮಾಗೆ ಇಟ್ಟ ಹೆಸರು ವಿಜಯಾನಂದ….

ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ ಅಡಿಯಲ್ಲಿ “ವಿ ಆರ್ ಎಲ್ ಫಿಲಂ ಪ್ರೊಡಕ್ಷನ್ಸ್” ಹೆಸರಿನ ಸ್ವಂತ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿ, ಅವರ ನಿರ್ಮಾಣ ಸಂಸ್ಥೆಯ ಚೊಚ್ಚಲ ಕನ್ನಡ ಸಿನಿಮಾ “ವಿಜಯಾನಂದ ನಿರ್ಮಿಸಿದ್ದಾರೆ.

ಇದು‌ ವಿಜಯ ಸಂಕೇಶ್ವರರ ಜೀವನಾಧಾರಿತ ಚಿತ್ರ. 1976 ರಲ್ಲಿ ಒಂದೇ ಟ್ರಕ್‌ನೊಂದಿಗೆ ತನ್ನ ಪ್ರಯಾಣ ಶುರುಮಾಡಿ , ಇಂದು ಭಾರತದ ಅತಿದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರ ಅದ್ಭುತ ಮತ್ತು ರೋಮಾಂಚನಕಾರಿ ಕಥೆ ಇಲ್ಲಿದೆ. ಈ ಕಥೆ ವಿಜಯ ಸಂಕೇಶ್ವರ ಮತ್ತು ಅವರ ಪುತ್ರ ಆನಂದ ಸಂಕೇಶ್ವರ ಅವರ ಯಶಸ್ಸಿನ ಕಥೆ ಒಳಗೊಂಡಿದೆ.


“ವಿಜಯಾನಂದ” ಚಿತ್ರದ ಮೊದಲ ಅಧಿಕೃತ ಟೀಸರ್ ಈಗ ರಿಲೀಸ್ ಆಗಿದ್ದು, ಎಲ್ಲೆಡೆ ಮೆಚ್ಚುಗೆ ಪಡೆದು ಲಕ್ಷಗಟ್ಟಲೆ ವೀಕ್ಷಣೆ ಪಡದಿದೆ.
ಇದು ತಮಿಳು, ತೆಲುಗು ಮತ್ತು ಮಳಯಾಳಂ ಭಾಷೆಗಳಲ್ಲೂ ತೆರೆ ಕಾಣಲಿದೆ. ಇನ್ನು ಈ ಹಿಂದೆ “ಟ್ರಂಕ್” ಸಿನಿಮಾ ನಿರ್ದೇಶಿಸಿದ್ದ ರಿಷಿಕಾ ಶರ್ಮಾ ಈ ಚಿತ್ರದ ನಿರ್ದೇಶಕರು.”ವಿಜಯಾನಂದ” ಸಿನಿಮಾಗೆ ವಿಜಯ ಸಂಕೇಶ್ವರ ಅವರ ಪಾತ್ರಕ್ಕೆ “ಟ್ರಂಕ್” ಚಿತ್ರದಲ್ಲಿ ನಾಯಕರಾಗಿದ್ದ ನಿಹಾಲ್ ಬಣ್ಣ ಹಚ್ಚಿದ್ದಾರೆ.

ಪ್ರಮುಖ ಪಾತ್ರಗಳಲ್ಲಿ ಅನಂತನಾಗ್, ವಿನಯಾ ಪ್ರಸಾದ್, ರವಿಚಂದ್ರನ್, ಪ್ರಕಾಶ್ ಬೆಳವಾಡಿ, ಅನೀಶ್ ಕುರುವಿಲ್ಲಾ, ಸಿರಿ ಪ್ರಹ್ಲಾದ್ ಮತ್ತು ಭರತ್ ಬೋಪಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ದಕ್ಷಿಣ ಭಾರತೀಯ ಚಿತ್ರ ರಂಗದ ಗೋಪಿ ಸುಂದರ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

ರವಿ ವರ್ಮಾ ಸಾಹಸವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ಹಿಡಿದಿದ್ದಾರೆ. ಕುಮಾರ್ ಸಂಕಲನವಿದೆ.

Categories
ಸಿನಿ ಸುದ್ದಿ

ಇದು ಇವರ ಸೆಕೆಂಡ್ ಲೈಫ್‌ ಸ್ಟೋರಿ! ಇಲ್ಲಿ ಏನೇನು ಆಗುತ್ತೆ ಅನ್ನೋದೇ‌ ಸಸ್ಪೆನ್ಸ್

ಯಾರಾದರೂ ದೊಡ್ಡ ಅನಾಹುತದಿಂದ ಪಾರಾದಾಗ ಆಡುವ ಮಾತು ನನಗೆ ಇದು “2nd ಲೈಫ್” ಅಂತ. ಈಗ ಅದೇ ಹೆಸರಿನ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ.

ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ನಿರ್ಮಿಸಿರುವ “2nd ಲೈಫ್” ಚಿತ್ರವನ್ನು ರಾಜು ದೇವಸಂದ್ರ ನಿರ್ದೇಶಿಸಿದ್ದಾರೆ. ಈ ಹಿಂದೆ ಇವರು “ಅಕ್ಷತೆ” ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದು ನಾಲ್ಕನೇ ಚಿತ್ರ. ಈ ಚಿತ್ರದ ಬಗ್ಗೆ ಅವರು ಹೇಳಿದ್ದಿಷ್ಟು…

ಇದು ನನ್ನ ನಾಲ್ಕನೇ ನಿರ್ದೇಶನದ ಚಿತ್ರ. ಥ್ರಿಲ್ಲರ್ ಕಥಾಹಂದರ ಹೊಂದಿದೆ ಈ ಚಿತ್ರ. ಮಂಜುಳ ರಮೇಶ್ ಅವರು ಕಥೆ, ಚಿತ್ರಕಥೆ ಬರೆದಿದ್ದಾರೆ. ನಾನು ನಿರ್ದೇಶನ ಮಾಡಿದ್ದೇನೆ. ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಚಿತ್ರ ಇದಾಗಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ತಿಳಿಸಿದರು.

ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ವಿಭಿನ್ನ ಕಥೆಯಿರುವ ಚಿತ್ರ ನಮ್ಮದು. ಮಗು ಹುಟ್ಟಿದ ಕೆಲವೆ ದಿನಗಳಲ್ಲಿ ಕರಳು ಬಳ್ಳಿ(ಹೊಕ್ಕಳ ಬಳ್ಳಿ) ಬೀಳುತ್ತದೆ. ಇದನ್ನು ಶೇಖರಿಸಿಡುವ ಕಾರ್ಯ ಈಗ ಭರದಿಂದ ಸಾಗಿದೆ. ಇದನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ. ಅಂತಹ ಕಥಾವಸ್ತು ಆಧರಿಸಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಒಂದು ಬೇಜಾರಿನ ಸಂಗತಿ ಅಂದರೆ, ಹೊಸ ಪ್ರಯತ್ನಗಳಿಗೆ ಪ್ರೋತ್ಸಾಹ ನೀಡುವ ಪುನೀತ್ ರಾಜಕುಮಾರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಬೇಕಿತ್ತು.

ಈ ಸಲುವಾಗಿ ಚರ್ಚಿಸಲು ಅವರು ನಮಗೆ ಸ್ನೇಹಿತರೊಬ್ಬರ ಮೂಲಕ ಸಮಯವನ್ನು ನೀಡಿದ್ದರು. ಆದರೆ ವಿಧಿಬರಹವೇ ಬೇರೆಯಾಗಿತ್ತು. ಈಗ ನಮ್ಮ ಚಿತ್ರದ ಹಾಡು ಪಿ.ಆರ್.ಕೆ ಮೂಲಕವೇ ಬಿಡುಗಡೆಯಾಗಿರುವುದು ಖುಷಿಯ ವಿಚಾರವೆಂದು ನಾಯಕ ಆದರ್ಶ್ ಗುಂಡುರಾಜ್ ತಿಳಿಸಿದರು.

ಈ‌ ಚಿತ್ರದಲ್ಲಿ ನನ್ನದು ಅಂಧ ಪಾತ್ರ. ಡೈರೆಕ್ಟರ್ ನನಗೆ ಕಥೆ ಬಗ್ಗೆ ಏನು ಹೇಳಿಲ್ಲ. ಪಾತ್ರದ ಕುರಿತು ಮಾತ್ರ ಹೇಳಿದ್ದಾರೆ ಎಂದರು ನಾಯಕಿ ಸಿಂಧೂ ರಾವ್.

ಸಂಗೀತ ನಿರ್ದೇಶಕ ಆರವ್ ಕೌಶಿಕ್, ಛಾಯಾಗ್ರಹಕ ರಮೇಶ್ ಕೊಯಿರ ಹಾಗೂ ನಟ ಶಿವಪ್ರದೀಪ್, ನವೀನ್ ಶಕ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

error: Content is protected !!