ಚಲನಚಿತ್ರಗಳು, ಶಾರ್ಟ್ ಫಿಲಂ, ವೆಬ್ ಸಿರೀಸ್ ಮೊದಲಾದವುಗಳ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅಗತ್ಯವಿರುವ ತಂತ್ರಜ್ಞಾನ ಮತ್ತು ಸುಸಜ್ಜಿತ ಸೌಲಭ್ಯ ಹೊಂದಿರುವ ‘ರೆಡ್ ರಾಕ್ ಸ್ಟುಡಿಯೋ’ ಇತ್ತೀಚೆಗೆ ಲೋಕಾರ್ಪಣೆಗೊಂಡಿದೆ.
ಬೆಂಗಳೂರಿನ ನಾಗರಬಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸುಸಜ್ಜಿತ ರೀತಿಯಲ್ಲಿ, ಆಧುನಿಕ ಶೈಲಿಯಲ್ಲಿ ‘ಕಮರ್ ಫಿಲಂ ಫ್ಯಾಕ್ಟರಿ’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ವನ್ನು ನಟಿ ಪ್ರಿಯಾಂಕಾ ಉಪೇಂದ್ರ ಉದ್ಘಾಟಿಸಿದರು. ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಇದೇ ವೇಳೆ ಮಾತನಾಡಿದ ನಟಿ ಪ್ರಿಯಾಂಕಾ ಉಪೇಂದ್ರ, ‘ಇಂದಿನ ದಿನಗಳಲ್ಲಿ ಸಿನಿಮಾಗಳಿಗೆ ಕಂಟೆಂಟ್ ಮತ್ತು ಕ್ವಾಲಿಟಿ ತುಂಬ ಮುಖ್ಯ. ಇತ್ತೀಚೆಗೆ ಬರುತ್ತಿರುವ ಸಾಕಷ್ಟು ಹೊಸ ಸಿನಿಮಾ ಮೇಕರ್ಸ್ ತುಂಬ ಹೊಸದಾಗಿ ಯೋಚಿಸುತ್ತಿದ್ದಾರೆ.
ಅಂಥವರಿಗೆ ಕೈಗೆಟಕುವ ದರದಲ್ಲಿ ತಂತ್ರಜ್ಞಾನ ಲಭ್ಯತೆಯಿದ್ದರೆ ಗುಣಮಟ್ಟದಲ್ಲಿ ಸಿನಿಮಾ ಮಾಡಬಹುದು. ‘ರೆಡ್ ರಾಕ್ ಸ್ಟುಡಿಯೋ’ದಲ್ಲಿ ಇಂದಿನ ಸಿನಿಮಾ ಮೇಕರ್ಸ್ ಗೆ ಬೇಕಾದ ಎಲ್ಲ ಸೌಲಭ್ಯಗಳಿದ್ದು, ಇದರಿಂದ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ’ ಎಂದು ಆಶಿಸಿದರು.
ಇನ್ನು ನೂತನವಾಗಿ ಆರಂಭವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ದಲ್ಲಿ ಸಿನಿಮಾ ಮತ್ತು ದೃಶ್ಯ ಮಾಧ್ಯಮಗಳಿಗೆ ಬೇಕಾದ ಎಡಿಟಿಂಗ್, ಡಬ್ಬಿಂಗ್, ಡಿ.ಐ, ವಿಎಫ್ಎಕ್ಸ್, ಗ್ರೀನ್ ಮ್ಯಾಟ್ ಶೂಟ್, ಪೋಟೋ ಶೂಟ್, 5.1 & 7.1 ಸೌಂಡ್ ಸಿಸ್ಟಂ, ಅಟ್ಮೋಸ್ ಹೀಗೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳಿದ್ದು, ಕೈಗೆಟಕುವ ದರದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಒಂದೇ ಸೂರಿನಡಿ ಬೆಂಗಳೂರಿನಲ್ಲೇ ಮಾಡಬಹುದಾಗಿದೆ.
ಈ ಸಂದರ್ಭದಲ್ಲಿ ಹಾಜರಿದ್ದ ‘ಕಮರ್ ಫಿಲಂ ಫ್ಯಾಕ್ಟರಿ’ಯ ಕಮರ್, ಹಿರಿಯ ನಿರ್ದೇಶಕ ಬುಕ್ಕಾಪಟ್ಟಣ ವಾಸು,
ಮೊದಲಾದವರು ‘ರೆಡ್ ರಾಕ್ ಸ್ಟುಡಿಯೋ’ ದ ಹಿಂದಿನ ಉದ್ದೇಶ, ಲಭ್ಯವಿರುವ ಸೌಲಭ್ಯಗಳು, ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಪ್ರತಿಭಾ ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭವಾಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ.
ಇದು ನನ್ನ ಮೊದಲ ಚಿತ್ರ. ನನ್ನ ಮೇಲೆ ನಂಬಿಕೆ ಇಟ್ಟು ಇಂಥದ್ದೊಂದು ಅವಕಾಶ ಕೊಟ್ಟ ನಿರ್ಮಾಪಕಿ ಪ್ರತಿಭಾ ಅವರಿಗೆ ಧನ್ಯವಾದಗಳು. ಇದೊಂದು ಕಮರ್ಷಿಯಲ್ ಥ್ರಿಲ್ಲರ್ ನ ಚಿತ್ರ. ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ನಾನು ಹತ್ತು ವರ್ಷಗಳಿಂದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದೆ. ಇದೊಂದು ಹಳ್ಳಿ ಹಿನ್ನೆಲೆಯ ಚಿತ್ರ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಜೂನ್ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ. ಇದು ಕಮರ್ಷಿಯಲ್ ಚಿತ್ರವಾದರೂ ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳಿವೆ ಎಂದು ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ.
ಇದೊಂದು ಕೃಷಿ ಮತ್ತು ರೈತರ ಸಿನಿಮಾ ಎಂದು ಮಾತನಾಡಿದ ನಾಯಕ ಜಯ್ ಶೆಟ್ಟಿ, ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಧನ್ಯವಾದಗಳು ಎಂದರು.
ನಾನು ಬಿಜಾಪುರ ಮೂಲದವಳು. ಆದರೆ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಒಂಬತ್ತು ವರ್ಷಗಳ ಕಾಲ ಮಾಡಲಿಂಗ್ ಮಾಡಿದ್ದೇನೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ನನ್ನ ಭಾಷೆ ಮತ್ತು ನಟನೆಯನ್ನು ತಿದ್ದಿತೀಡಿದ ನಿರ್ದೇಶಕ ಚೇತನ್ ಶೆಟ್ಟಿ ಅವರಿಗೆ ಧನ್ಯವಾದಗಳು ಎಂದರು ನಾಯಕಿ ನಿಶಾ ರಜಪೂತ್ .
ಪ್ರಮುಖಪಾತ್ರದಲ್ಲಿ ನಟಿಸಿರುವ ಅಶೋಕ್ ಕುಮಾರ್ ಹಾಗೂ ಮಧುರಗೌಡ ಕೂಡ ತಮ್ಮ ಪಾತ್ರದ ಕುರಿತು ಮಾತನಾಡಿದರು.
ಚಿತ್ರದಲ್ಲಿ ನಟಿಸಿರುವ ರಾಜೇಂದ್ರ ಕಾರಂತ್, ಅಶ್ವಿನ್ ಹಾಸನ್, ವಿಕ್ಟರಿ ವಾಸು, ಛಾಯಾಗ್ರಾಹಕ ರಾಜು ಹೆಮ್ಮಿಗೆಪುರ, ಕಾರ್ಯಕಾರಿ ನಿರ್ಮಾಪಕ ದಿನೇಶ್ ರಾಜನ್ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಹಾಜರಿದ್ದರು. ನಿರ್ಮಾಪಕಿ ಪ್ರತಿಭಾ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಅಲ್ಲಿ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. ಇದೇ ಮೊದಲ ಬಾರಿಗೆ ಗೌರಿ’ ಚಿತ್ರ ತಂಡ ಕಾಲೇಜಿನ ಕ್ಲಾಸ್ ರೂಂನಲ್ಲಿ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು. ಭಾರತದ ಸ್ಟಾರ್ ಕ್ರಿಕೆಟರ್; ಆರ್ಸಿಬಿಯ ಆಲ್ರೌಂಡರ್; ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕ ಪಾಟೀಲ್ಐ ಲವ್ ಯೂ ಸಮಂತ’ ಮ್ಯೂಸಿಕಲ್ ಟೀಸರನ್ನು ಬಿಡುಗಡೆಗೊಳಿಸಿದರು.
ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣ ದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತಾ; ಐ ಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ; ಸಂಭ್ರಮಿಸಿದರು. ಶ್ರೇಯಾಂಕ- ಸಮರ್ ಹುಕ್ ಸ್ಟೆಪ್: ಇದೇ ಸಂದರ್ಭದಲ್ಲಿಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜೊತೆ ಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಹೆಮ್ಮೆಯ ಕನ್ನಡತಿ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.
ಶ್ರೇಯಾಂಕ- ಸಮರ್ ಡ್ಯಾನ್ಸ್ಗೆ ನೆರೆದಿದ್ದವರು ಫಿದಾ ಆಗಿ ಹೋದರು. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿ ಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಆಟೋಗ್ರಾಫ್, ಸೆಲ್ಫಿಗೆ ಮುಗಿಬಿದ್ದರು. ಕ್ಲಾಸ್ ರೂಂನಲ್ಲಿ ಒಂದು ರೀತಿ ಹಂಗಾಮವೇ ಸೃಷ್ಟಿಯಾಯಿತು. ಕ್ಲಾಸ್ ರೂಂನಲ್ಲೇ ಕ್ರಿಕೆಟ್: ಮ್ಯೂಸಿಕಲ್ ಟೀಸರ್ ಬಿಡುಗಡೆಯ ನಂತರ ಕ್ಲಾಸ್ ರೂಂನಲ್ಲಿಯೇ ಶ್ರೇಯಾಂಕ ಕ್ರಿಕೆಟ್ ಆಡಿದ್ದು ನೆರೆದಿದ್ದವರನ್ನು ರೋಮಾಂಚನಗೊಳಿಸಿತು.
ಶ್ರೇಯಾಂಕ್ ವಿದ್ಯಾರ್ಥಿಗಳ ಬೌಲಿಂಗ್ಗೆ ಬ್ಯಾಟ್ ಬೀಸಿದರು. ಬಾಲ್ ಸಿಕ್ಕ ವಿದ್ಯಾರ್ಥಿಗಳಿಗೆ ಶ್ರೇಯಾಂಕರ ಆಟೋಗ್ರಾಫ್ನ ಬಾಲ್ ಅನ್ನು ಗಿಫ್ಟ್ ನೀಡಲಾಯಿತು. ಜೊತೆಗೆಗೌರಿ’ ಚಿತ್ರದ ವಿಶೇಷ ಚಾಕ್ಲೇಟ್ಗಳನ್ನು ಸಹ ವಿತರಿಸಲಾಯಿತು.
ಭರ್ಜರಿ ರೆಸ್ಪಾನ್ಸ್ ಗೌರಿ’ ಚಿತ್ರ ತಂಡಕ್ಕೆ ಎಟಿಎಂಇ ಕಾಲೇಜಿನ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ; ಸ್ವಾಗತ ಕೋರಲಾಯಿತು.ಗೌರಿ’ ಚಿತ್ರದ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ನಟ ಸಮರ್ಜಿತ್ ಲಂಕೇಶ್, ಖ್ಯಾತ ಕ್ರಿಕೆಟರ್ ಶ್ರೇಯಾಂಕ ಪಾಟೀಲ್.. ಇವರುಗಳು ಎಂಟ್ರಿಯಾಗುತ್ತಲೇ ವಿದ್ಯಾರ್ಥಿಗಳ ದಂಡೇ ಹರಿದುಬಂದು ಮುತ್ತಿಕೊಂಡಿತು. ಅವರ ಅಭಿಮಾನಕ್ಕೆ, ಪ್ರೀತಿಗೆ ಚಿತ್ರ ತಂಡ ಮೂಕ ವಿಸ್ಮಿತಗೊಂಡಿತು. ಟೈಂ ಬರುತ್ತೆ..’ ಹಾಡಿನ ಮೂಲಕ ಸೌಂಡ್ ಮಾಡಿದ್ದಗೌರಿ’ ಚಿತ್ರತಂಡ ಇದೀಗ ಐ ಲವ್ ಯೂ ಸಮಂತಾ..’ ಹಾಡಿನ ಮೂಲಕ ರೋಮ್ಯಾಟಿಕ್ ಫೀಲ್ ನೀಡಿದೆ.
ಮ್ಯಾಜಿಕ್ ಮಾಡಿಐ ಲವ್ ಯೂ ಸಮಂತಾ’ ಐ ಲವ್ ಯೂ ಸಮಂತಾ.. ಹಾಡು ಸಖತ್ ಮೋಡಿ ಮಾಡಿದೆ. ಕವಿರಾಜ್ ಸಾಹಿತ್ಯದ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನದ ಈ ಹಾಡು ಇದೀಗ ಟ್ರೆಂಡ್ ಸೃಷ್ಟಿ ಮಾಡಿದೆ. ಯುವಕ-ಯುವತಿಯರಿಗೆ ಈ ಹಾಡು ಹಾಟ್ ಫೇವರಿಟ್ ಆಗಿದೆ. ಕಾರ್ಯಕ್ರಮದಲ್ಲಿ ಬಿಗ್ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ಮಿಸ್ ಟೀನ್ ಯುನಿವರ್ಸ್ ಸ್ವೀಜಲ್ ಮುಂತಾದವರು ಹಾಜರಿದ್ದರು.
ಮಂಜುಮ್ಮೆಲ್ ಬಾಯ್ಸ್ ಮಾಲಿವುಡ್ ಇಂಡಸ್ಟ್ರೀಗೆ ಈ ವರ್ಷ ಸಿಕ್ಕಂತಹ ಸೂಪರ್ ಡೂಪರ್ ಹಿಟ್ ಸಿನಿಮಾ.. ಭಾಷೆ ಗಡಿಯಿಲ್ಲದೆ ವಿಶ್ವದಾದ್ಯಂತ ಪ್ರೇಕ್ಷಕರು ಸಿನಿಮಾವನ್ನ ನೋಡಿ ಇಷ್ಟಪಡ್ತಿದ್ದಾರೆ.. ಪಾತ್ರದಾರಿಗಳ ಬಗ್ಗೆ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಇಂಚಿಚೂ ಮಾತನಾಡ್ತಿದ್ದಾರೆ.
ಇದೇ ವೇಳೆ ಡಾಟರ್ ಆಫ್ ಪಾರ್ವತಮ್ಮ, ವೀರಂ, ಶುಗರ್ ಲೆಸ್ ಚಿತ್ರಗಳನ್ನ ನಿರ್ಮಾಣ ಮಾಡಿದ್ದ ಶಶೀಧರ ಶುಗರ್ ಲೆಸ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದೀಗ ಮಲಯಾಳಂನಲ್ಲಿ ತಮ್ಮ ಮೊದಲ ಚಿತ್ರವನ್ನ ನಿರ್ದೇಶನ ಮಾಡಲು ಹೊರಟಿದ್ದಾರೆ. ಈ ಮೂಲಕ ಇದು ಶಶೀಧರ ಅವರ ಸಿನಿಜರ್ನಿಯ ಎರಡನೇ ಡೈರೆಕ್ಷನ್ ನ ಸಿನಿಮಾವಾಗಲಿದೆ.
ಹೌದು ಮಂಜುಮ್ಮೆಲ್ ಬಾಯ್ಸ್ ಬಗ್ಗೆ ಈಗಾಗಲೇ ಹೇಳಿದೆ ಕಾರಣ ಈ ಸಿನಿಮಾದ ಪಾತ್ರದಾರಿ ಶ್ರೀನಾಥ್ ಭಾಸಿ ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಮಾಲಿವುಡ್ ಸ್ಟಾರ್ ನಟ ನಮ್ಮ ಕನ್ನಡದ ಪ್ರೊಡ್ಯೂಸರ್ & ಡೈರೆಕ್ಟರ್ ಶಶೀಧರ ಕೆ ಎಮ್ ನಿರ್ದೇಶನ ಮಾಡ್ತಿರೋ ಚೊಚ್ಚಲ ಮಲಯಾಳಂ ಸಿನಿಮಾ ಸಿಬಿಲ್ ಸ್ಕೋರ್ ನಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.
ಈ ಸಿನಿಮಾವನ್ನು ಕನ್ನಡದ ನಿರ್ದೇಶಕ ಡೈರೆಕ್ಟ್ ಮಾಡ್ತಿರೋ ಕಾರಣ, ಹಾಗೆ ಮಲಯಾಳಂ ಸಿನಿಮಾ ಆಗಿರೋದ್ರಿಂದ ಈ ಸಿನಿಮಾದಲ್ಲಿ ಟೆಕ್ನಿಶಿಯನ್ಸ್ ಆರ್ಟಿರ್ಸ್ಟ್ ಕನ್ನಡ ಹಾಗೂ ಮಲಯಾಳಂ ನವರಾಗಿರುತ್ತಾರೆ.. ಸೋಹನ್ ಸೀನುಲಾಲ್, ದೀಪಕ್ ಪ್ರಿನ್ಸ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.
ದಿ ಎಮೋಷನ್ಸ್ ಫ್ಯಾಕ್ಟರಿ ಗ್ರೂಪ್(EFG) ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರ್ತಿರೋ ಸಿನಿಮಾಗೆ ವಿವೇಕ್ ಶ್ರೀಕಂಠಯ್ಯ ಬಂಡವಾಳ ಹೂಡ್ತಿದ್ದಾರೆ. ಕೋ ಪ್ರೊಡ್ಯೂಸರ್ ಆಗಿ ವಿಕ್ರಮ್, ಲೈನ್ ಪ್ರೊಡ್ಯೂಸರ್ ಆಗಿ ದೀಪು ಕರುಣಾಕರಣ್ ಎಕ್ಸೆಕ್ಯೂಟೀವ್ ಪ್ರೊಡ್ಯೂಸರ್ ಆಗಿ ಶಾಜಿ ಫ್ರಾನ್ಸಿಸ್ ಕೈ ಜೋಡಿಸಿದ್ದಾರೆ.
ಸಿನಿಮಾದ DOP ಪ್ರದೀಪ್ ನಾಯರ್, ಡೈಲಾಗ್ಸ್ ಅರ್ಜುನ್ ಟಿ ಸತ್ಯನ್, ಎಡಿಟರ್ ಸೋಬಿನ್ ಕೆ ಸೋಮನ್. ಇನ್ನೂ ಕ್ರಿಯೇಟಿವ್ ಹೆಡ್ ಆಗಿ ಶರತ್ ವಿನಾಯಕ್ ಸಿನಿಮಾಗೆ ಜೊತೆಯಾಗಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೇ ಹೋಲುವ ಝಲಕ್ ಒಳಗೊಂಡ ಸಿಂಹಗುಹೆ ಚಿತ್ರದ ಟೀಸರ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ, ಪೆನ್ ಡ್ರೈವ್ ನಂಥ ವಿಚಾರಗಳೂ ಈ ಟೀಸರ್ ನಲ್ಲಿದೆ. ಈಗಾಗಲೇ ಬಿಡುಗಡೆಯಾದ ಈ ಟೀಸರ್ ಹಲವಾರು ಪ್ರಶ್ನೆ ಹಾಗು ಕುತೂಹಲ ಹುಟ್ಟು ಹಾಕಿದೆ.
ಸಮರ್ಥ, ತಾಜಾ ಚಿತ್ರಗಳ ನಂತರ ಎಸ್.ಜಿ.ಆರ್. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಹಗುಹೆ ಚಿತ್ರದ ಟೀಸರ್ ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ನಿರ್ದೇಶಕ ಎಸ್ಜಿಆರ್ ಮಾತನಾಡಿ, ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ಇರುವ ನಮ್ಮ ಚಿತ್ರದಲ್ಲಿ ಹೊರಗಡೆ ನಡೆಯುತ್ತಿರುವ ವಿಚಾರಗಳೇ ಇರಬಹುದು ಎನಿಸಿದರೂ ಅದು ಕಾಕತಾಳೀಯ. ವರ್ಷದ ಹಿಂದೆಯೇ ನಮ್ಮ ಚಿತ್ರ ಸೆನ್ಸಾರರ ಆಗಿತ್ತು. ಹೀರೋನೇ ಅಂಥಾ ವಿಡಿಯೋ ಮಾಡ್ತಾನಾ;? ಯಾರು ಯಾಕೆ ಮಾಡ್ತಾನೆ ಅನ್ನೋದೇ ಸಸ್ಪೆನ್ಸ್.
ಇನ್ನು ಅನೇಕ ವಿಚಾರಗಳು ಚಿತ್ರದಲ್ಲಿವೆ. ಸಮಾಜದಲ್ಲಿ ಹೇಗಿರಬೇಕು, ಹೇಗಿರಬಾರದು ಅಂತ ಮೆಸೇಜ್ ಹೇಳಿದ್ದೇವೆ. ಮೊಬೈಲ್ ನಿಂದ ಏನೇನಾಗುತ್ತೆ ಅನ್ನೋದೂ ಚಿತ್ರದಲ್ಲಿದೆ.
ಹಾಸನ, ಸಕಲೇಶಪುರ, ಮೂಡಿಗೆರೆ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಚಿತ್ರವೀಗ ಬಿಡುಗಡೆಗೆ ರೆಡಿ ಇದ್ದು, ಜೂನ್ ವೇಳೆಗೆ ರಿಲೀಸ್ ಮಾಡುವ ಪ್ಲಾನಿದೆ ಎಂದು ಹೇಳಿದರು.
ಸಹ ನಿರ್ಮಾಪಕ ಕೃಷ್ಣ ಮಾತನಾಡಿ, ಡೈರೆಕ್ಟರ್ ಬಂದು ಒಂಟಿ ಮನೆಯಲ್ಲಿ ಈ ಥರ ನಡೆಯುತ್ತೆ ಅಂತ ಹೇಳಿದರು. ಕಥೆ ಇಂಟರೆಸ್ಟಿಂಗ್ ಆಗಿದೆ ಅಂತ ನಿರ್ಮಾಣಕ್ಕೆ ಮುಂದಾದೆವು ಎಂದರು.
ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಮಾತನಾಡಿ, ನಾನು ಚಿತ್ರದ ಸಾಂಗ್, ಆರ್.ಆರ್. ಮಾಡಿದ್ದೇನೆ. ನಾನೂ ಸಹ ೨ 2 ಹಾಡುಗಳನ್ನು ಹಾಡಿದ್ದೇನೆ. ಈಗಾಗಲೇ ರಿಲೀಸ್ ಆಗಿರುವ ಸಾಂಗ್ ವೈರಲ್ ಆಗಿದೆ ಎಂದರು.
ನಟಿ ಅನುರಾಧಾ ಮಾತನಾಡಿ, ಈವರೆಗೆ ಸಣ್ಣಪುಟ್ಟ ರೋಲ್ ಮಾಡಿಕೊಂಡಿದ್ದೆ. ಇದೇ ಫಸ್ಟ್ ಟೈಂ ಸೆಕೆಂಡ್ ಲೀಡ್ ಮಾಡಿದ್ದೇನೆ. ಹಳ್ಳಿ ಹುಡುಗಿ ನಾಯಕನ ಲವರ್ ಪಾತ್ರ ಎಂದರು.
ನಾಯಕ ರವಿ ಶಿರೂರ್ ಅವರು ಅಭಿನಯದೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ನಿವಿಶ್ಕಾ ಪಾಟೀಲ್ ಚಿತ್ರದ ನಾಯಕಿ,
ಎ.ಸಿ. ಮಹೇಂದರ್ ಅವರ ಛಾಯಾಗ್ರಹಣ, ಶಿವನಂಜೇಗೌಡ ಅವರ ಸಾಹಿತ್ಯ, ಸೈ ರಮೇಶ್ ಅವರ ಕೊರಿಯೋಗ್ರಫಿ ಈ ಚಿತ್ರಕ್ಕಿದೆ,
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ “A”. ಈ ಚಿತ್ರ ತೆರೆಕಂಡು 26 ವರ್ಷಗಳಾಗಿದೆ. ಕಳೆದವಾರ ಈ ಚಿತ್ರ ಕರ್ನಾಟಕದಾದ್ಯಂತ ರೀ ರಿಲೀಸ್ ಕೂಡ ಆಗಿ ಜನರ ಮನ ಗೆಲ್ಲುತ್ತಿದೆ. ಈ ಸಂತಸವನ್ನು ನಾಯಕಿ ಚಾಂದಿನಿ ಹಾಗು ತಂಡ ಹಂಚಿಕೊಂಡಿದೆ.
26 ವರ್ಷಗಳ ಹಿಂದೆ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ ಚಿತ್ರ ಉಪೇಂದ್ರ ನಿರ್ದೇಶನದ “A” ಅಂದಿದ್ದು ನಾಯಕಿ ಚಾಂದಿನಿ. ಈ ಚಿತ್ರ ಇತ್ತೀಚೆಗೆ ರೀ ರಿಲೀಸ್ ಆಗಿ ಯಶಸ್ಚಿ ಪ್ರದರ್ಶನ ಕಾಣುತ್ತಿದೆ. ಬಹಳ ಸಂತೋಷವಾಗಿದೆ. ಈ ಚಿತ್ರಕ್ಕೆ ನಾನು ನಾಯಕಿಯಾಗಿ ಆಯ್ಕೆಯಾಗಿದ್ದು ನಿಜಕ್ಕೂ ಆಶ್ಚರ್ಯ. ನಾನು ಆಗ ಓದುತ್ತದೆ. ನ್ಯೂಯಾರ್ಕ್ ನಲ್ಲಿದೆ. ನನ್ನ ಫೋಟೊ ನೋಡಿದ ಉಪೇಂದ್ರ ಅವರು ನಾಯಕಿಯಾಗಿ ಆಯ್ಕೆ ಮಾಡಿದರು.
ನಿಜವಾಗಲೂ ಉಪೇಂದ್ರ ಅವರು ಬರೀ ಕರ್ನಾಟಕ ಅಷ್ಟೇ ಅಲ್ಲ. ಇಡೀ ದೇಶ ಕಂಡ ಅತ್ಯಂತ ಪ್ರತಿಭಾವಂತ ನಿರ್ದೇಶಕ. ಅವರಿಂದ ಮೊದಲ ಚಿತ್ರದಲ್ಲೇ ನಾನು ಸಾಕಷ್ಟು ಕಲಿತಿದ್ದೇನೆ. ಮೊದಲ ಚಿತ್ರದ ಚಿತ್ರೀಕರಣದ ಅನುಭವ ಈಗಲೂ ಕಣ್ಣ ಮುಂದೆ ಇದೆ. ನಾನು “A” ಚಿತ್ರದ ನಂತರ ಕನ್ನಡ ಸೇರಿದಂತೆ ದೇಶದ ವಿವಿಧ ಭಾಷೆಗಳ ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನನ್ನನ್ನು ಎಲ್ಲರೂ ಗುರುತಿಸುವುದು “A” ಚಿತ್ರದ ನಾಯಕಿ ಅಂತ. ಅಷ್ಟು ಹೆಸರು ತಂದುಕೊಟ್ಟಿದೆ ನನಗೆ ಈ ಚಿತ್ರ.
ಈ ಸಂದರ್ಭದಲ್ಲಿ ನಿರ್ದೇಶಕರಿಗೆ, ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಮತ್ತೊಂದು ಮುಖ್ಯವಾದ ವಿಷಯವೆಂದರೆ ಈ ಜನಪ್ರಿಯ ಚಿತ್ರವನ್ನು ಇನ್ನಷ್ಟು ಮುಂದುವರೆಸುವುದು ನನ್ನ ಹಂಬಲ. ಹಾಗಾಗಿ ‘A’ ಚಿತ್ರದ ಮುಂದುವರೆದ ಭಾಗ ಮಾಡುವುದಕ್ಕೆ ತೀರ್ಮಾನ ಮಾಡಿದ್ದೇನೆ. ಕಥೆ ಮತ್ತು ಚಿತ್ರಕಥೆಯನ್ನು ನಾನೇ ಬರದಿದ್ದೇನೆ. ನಿರ್ಮಾಪಕ ಮಂಜುನಾಥ್, ಸಂಗೀತ ನಿರ್ದೇಶಕ ಗುರುಕಿರಣ್ ಮುಂತಾದವರು ಜೊತೆಗಿದ್ದಾರೆ.
ಇನ್ನೊಂದು ವಿಷಯ ಬಾಕಿ ಇದೆ. ನಾವೆಲ್ಲರೂ ಹೋಗಿ ಉಪೇಂದ್ರ ಅವರ ಬಳಿ ಈ ಚಿತ್ರವನ್ನು ನೀವೇ ನಿರ್ದೇಶಿಸಬೇಕು ಹಾಗೂ ನಾಯಕರಾಗೂ ನಟಿಸಬೇಕು ಎಂದು ಮನವಿ ಮಾಡುವುದು. ಸದ್ಯದಲ್ಲೇ ಅವರನ್ನು ಭೇಟಿ ಮಾಡುತ್ತೇವೆ. ಅವರು ಒಪ್ಪುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ಸಿನಿಮಾ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರ ಪ್ರಾರಂಭವಾಗಲಿದೆ. ಆ ಚಿತ್ರದಲ್ಲಿದ್ದ ಬಹುತೇಕ ಚಿತ್ರತಂಡದ ಸದಸ್ಯರು ಈ ಚಿತ್ರದಲ್ಲೂ ಇರುತ್ತಾರೆ ಎಂದರು.
ಚಿತ್ರ ಆರಂಭವಾದಗಿನಿಂದ ಹಿಡಿದು ಬಿಡುಗಡೆಯಾಗುವವರೆಗಿನ ಮಾಹಿತಿಯನ್ನು ನಿರ್ಮಾಪಕ ಮಂಜುನಾಥ್ ನೀಡಿದರು. ಹಾಡುಗಳ ಕುರಿತು ಗುರುಕಿರಣ್ ಮಾತನಾಡಿದರು. ವಿ.ಮನೋಹರ್, ಗುರುದತ್ತ್, ಲೋಕಿ, ರಾಜಾರಾಮ್, ಜೋಶಿ ಮುಂತಾದ ಚಿತ್ರತಂಡದ ಸದಸ್ಯರು ಹಾಗೂ ವಿತರಕ ಶಂಕರ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಉಪೇಂದ್ರ ಅವರು ವಿದೇಶದಲ್ಲಿರುವುದರಿಂದ ವಿಡಿಯೋ ಮೂಲಕ ಖುಷಿ ಹಂಚಿಕೊಂಡರು.
ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. . ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.
ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.
ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.
ಜಿ9 ಕಮ್ಯುನಿಕೇಷನ್ ಮೀಟಿಯಾ ಅಂಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಮೂಲಕ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.
ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ, ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ನ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆ ಎಂದರು.
ನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ಸಾಮಾನ್ಯವಾಗಿ ನನ್ನ ಸಿನಿಮಾ ಹಾಡುಗಳ ಮೂಲಕ ಜನಪ್ರಿಯ. ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮ ಎನ್ನುತ್ತಾರೆ ನಟ ರವಿಚಂದ್ರನ್.
ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.
ಕಳೆದ ಮೂರೂವರೆ ದಶಕಗಳಿಂದ ತನ್ನದೆ ಸಾಮರ್ಥ್ಯವನ್ನು ಉಳಿಸಿಕೊಂಡು ಬರುತ್ತಿರುವ ಉದಯ ವಾಹಿನಿಯು ಈಗ ’ಶ್ರೀಮದ್ ರಾಮಾಯಣ’ ಧಾರವಾಹಿಯನ್ನು ವೀಕ್ಷಕರಿಗೆ ಉಣಬಡಿಸಲು ಸಿದ್ದತೆ ಮಾಡಿಕೊಂಡಿದೆ. ಅದ್ಬುತ ಕಾವ್ಯವನ್ನು ಹೊಸ ತಲೆಮಾರಿಗೆ ತಲುಪಿಸಲು ಮುಂದಾಗಿದೆ.
ರಾಮಾಯಣ ಭಾರತೀಯ ಸಂಸ್ಕ್ರತಿ, ಪರಂಪರೆ ಪ್ರತಿಬಿಂಬಿಸಲಿರುವುದು ವಿಶೇಷ. ರಾಮನ ಜೀವನ ಬಹುತೇಕ ಭಾರತೀಯರಿಗೆ ಮಾದರಿಯಾಗಿದೆ. ಆತನ ರಾಜ್ಯ ಪರಿಪಾಲನೆಯು ಇಂದಿಗೂ ರಾಮರಾಜ್ಯ ಅನ್ನುವ ಪದ ಈಗಲೂ ಬಳಸಲಾಗುತ್ತಿದೆ.
ರಾಮ ಮತ್ತು ಸೀತೆಯ ಪವಿತ್ರ ಪ್ರೇಮ, ಕಥೆಯಲ್ಲಿ ಧರ್ಮದ ಪಾಲನೆಯ ಮಾರ್ಗದಲ್ಲಿ ಎದುರಿಸಿದ ಅನೇಕ ಸವಾಲುಗಳು ಕುತೂಹಲಕಾರಿಯಾಗಿದೆ. ಸಂಪೂರ್ಣ ನೂತನ ದೃಶ್ಯ ವೈಭವಗಳು, ವೈವಿಧ್ಯಮಯ ನಟರ ತಂಡವು ಪೌರಾಣಿಕ ಪಾತ್ರಗಳಿಗೆ ಹೊಸ ಜೀವ ತುಂಬಲಿದೆ.
ಪ್ರತಿ ಸಂಚಿಕೆಯ 250 ವೀಕ್ಷಕರಿಗೆ ಒಟ್ಟು 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸೀರಿಯಲ್ ವೀಕ್ಷಿಸಿ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಮಿಸ್ಡ್ ಕಾಲ್ ಮೂಲಕ ಸರಿ ಉತ್ತರ ನೀಡಿದವರಿಗೆ
ತಲಾ ಒಂದು ಸಾವಿರ ಬಹುಮಾನವನ್ನು ಅಂದೇ ಸಂದಾಯವಾಗುವಂತೆ ಯೋಜನೆ ರೂಪಿಸಲಾಗಿದೆ. ಸೀರಿಯಲ್ ಸೋಮವಾರದಿಂದ ಶನಿವಾರದವರೆಗೆ ಮೇ 20ರಿಂದ ಸಂಜೆ 6 ಗಂಟೆಗೆ ಉದಯ ಟಿವಿದಲ್ಲಿ ಪ್ರಸಾರವಾಗಲಿದೆ.
ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್, ರೊಮ್ಯಾನ್ಸ್ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್, ಈ ಬಾರಿ ಲೀಗಲ್-ಥ್ರಿಲ್ಲರ್ ಶೈಲಿಯ ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್ಮೆಂಟ್ʼ ಸಿನಿಮಾ ಪೋಸ್ಟರ್, ಫಸ್ಟ್ಲುಕ್ ಮತ್ತು ಟೀಸರ್ಗಳಲ್ಲಿ ದಿಗಂತ್ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಹೊಸ ಪಾತ್ರದ ಬಗ್ಗೆ ದಿಗಂತ್ ಮನಬಿಚ್ಚಿ ಮಾತನಾಡಿದ್ದಾರೆ.
ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?
ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿದೆ. ಇಂದಿನ ಜನರೇಶನ್ನ ಬೆಂಗಳೂರಿನಂತಹ ಸಿಟಿಯಲ್ಲಿರುವ ಯುವಕರನ್ನು ಪ್ರತಿನಿಧಿಸುವಂತೆ ನನ್ನ ಪಾತ್ರವಿದೆ. ತನ್ನ ಇಷ್ಟದಂತೆ ಜೀವನ ನಡೆಸಲು ಹೊರಟ ಹುಡುಗನೊಬ್ಬನ ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳು, ಏನೆಲ್ಲ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂಬುದರ ಸುತ್ತ ನನ್ನ ಪಾತ್ರವಿದೆ.
ನಿಮ್ಮ ಪ್ರಕಾರ ʼದ ಜಡ್ಜ್ಮೆಂಟ್ʼ ಅಂದ್ರೇನು?
ನನ್ನ ಪ್ರಕಾರ, ʼದ ಜಡ್ಜ್ಮೆಂಟ್ʼ ಒಂದು ಕೋರ್ಟ್ ರೂಂ ಡ್ರಾಮಾ ಸಿನಿಮಾ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ). ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ. ಇದೊಂದು ಲೀಗಲ್-ಥ್ರಿಲ್ಲರ್ ಶೈಲಿಯ ಸಿನಿಮಾವಾಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ಸಿನಿಮಾದ ಬಗ್ಗೆ ಏನೂ ಕುತೂಹಲ ಬಿಟ್ಟುಕೊಡಲಾರೆ.
ʼದ ಜಡ್ಜ್ಮೆಂಟ್ʼ ಸಿನಿಮಾ ಒಪ್ಪಿಕೊಳ್ಳಲು ಕಾರಣ?
ಮೊದಲೇ ಹೇಳಿದಂತೆ, ನಾನು ಇಲ್ಲಿಯವರೆಗೆ ಮಾಡಿದ ಸಿನಿಮಾಗಳಿಗಿಂತ ವಿಭಿನ್ನ ಕಥೆ, ಪಾತ್ರ ಎರಡೂ ಈ ಸಿನಿಮಾದಲ್ಲಿದೆ. ರವಿಚಂದ್ರನ್ ಅವರಂಥ ದೊಡ್ಡ ನಟರ ಜೊತೆ ಅಭಿನಯಿಸುವ ಅವಕಾಶ, ತುಂಬ ದೊಡ್ಡ ಸ್ಟಾರ್ ಕಾಸ್ಟಿಂಗ್, ತುಂಬ ವೃತ್ತಿಪರವಾಗಿರುವ ನಿರ್ದೇಶಕ ಗುರುರಾಜ್ ಕುಲಕರ್ಣಿ ಮತ್ತು ಸಿನಿಮಾದ ಬಗ್ಗೆ ತುಂಬ ಪ್ಯಾಶನೇಟ್ ಆಗಿರುವ ತಂಡ. ಇವೆಲ್ಲವೂ ಈ ಸಿನಿಮಾ ಒಪ್ಪಿಕೊಳ್ಳಲು ಕಾರಣವಾಯಿತು.
ರವಿಚಂದ್ರನ್ ಜೊತೆಗಿನ ಚಿತ್ರೀಕರಣದ ಅನುಭವ ಹೇಗಿತ್ತು?
ನಾನು ರವಿ ಸರ್ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಮೊದಲ ಬಾರಿಗೆ ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿ ಅವರೊಂದಿಗೆ ಅಭಿನಯಿಸುವ ಅವಕಾಶ ಸಿಕ್ಕಿದ್ದಕ್ಕೆ ತುಂಬ ಖುಷಿಯಾಗಿದೆ. ರವಿ ಸರ್ ಜೊತೆಗೆ ಶೂಟಿಂಗ್ ಮಾಡುವಾಗ, ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ಅವರಿಂದ ಕಲಿತುಕೊಳ್ಳುವುದು, ಮಾತಿಗೆ ಕುಳಿತುಕೊಂಡರೆ ಅವರಿಂದ ತಿಳಿದುಕೊಳ್ಳುವುದು ಸಾಕಷ್ಟು ವಿಷಯಗಳು ಇರುತ್ತದೆ.
ಶೂಟಿಂಗ್ನಲ್ಲಿ ರವಿಚಂದ್ರನ್ ಅವರಿಂದ ಕಲಿತದ್ದು ?
ನಾವೆಲ್ಲ ಸಿನಿಮಾವನ್ನು ಆಡಿಯನ್ಸ್ ಆಗಿ ಅಥವಾ ಕಲಾವಿದರಾಗಿ ನೋಡಿದರೆ, ರವಿ ಸರ್ ಸಿನಿಮಾವನ್ನು ಬೇರೆಯದ್ದೇ ದೃಷ್ಟಿಕೋನದಲ್ಲಿ ನೋಡುತ್ತಾರೆ. ಅವರು ಆಡಿಯನ್, ಆರ್ಟಿಸ್ಟ್, ಟೆಕ್ನೀಶಿಯನ್, ಮೇಕರ್ ಎಲ್ಲವೂ ಆಗಿರುವುದರಿಂದ, ಸಿನಿಮಾವನ್ನು ಅವರು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ. ಸಿನಿಮಾ ವಿಷಯದಲ್ಲಿ ಅವರ ಜ್ಞಾನ ತುಂಬ ಅಪಾರ. ಸಿನಿಮಾ ಮೇಕಿಂಗ್ ಬಗ್ಗೆ ಅವರು ಹೇಳುವ ವಿಷಯಗಳು ಬೇರೆಲ್ಲೂ ಕಲಿತುಕೊಳ್ಳಲು ಸಿಗದಂತವು.
ನಿಮ್ಮ ಪಾತ್ರದ ತಯಾರಿ ಹೇಗಿತ್ತು?
ಸಾಮಾನ್ಯವಾಗಿ ಪ್ರತಿ ಸಿನಿಮಾದ ಪಾತ್ರಗಳಿಗೂ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಆದರೆ ನಿಜ ಹೇಳಬೇಕೆಂದರೆ, ಈ ಸಿನಿಮಾಕ್ಕೆ ಅಷ್ಟೊಂದು ತಯಾರಿ ಮಾಡಿಕೊಂಡಿರಲಿಲ್ಲ. ಅದಕ್ಕೆ ಕಾರಣ ನಿರ್ದೇಶಕ ಗುರುರಾಜ್. ಈ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟತೆಯಿತ್ತು. ಪ್ರತಿಯೊಂದನ್ನೂ ಕಲಾವಿದರಿಗೆ ಅರ್ಥೈಸಿ ಅವರಿಂದ ಅಭಿನಯ ತೆಗೆಸುತ್ತಿದ್ದರು. ಅದನ್ನು ಬಿಟ್ಟರೆ ಸಿನಿಮಾದಲ್ಲಿ ಬರುವ ಡ್ಯಾನ್ಸ್ ನಂಬರ್ಗೆ ಒಂದಷ್ಟು ತಯಾರಿ ಮಾಡಿಕೊಳ್ಳಬೇಕಾಯಿತು
.
ನಿಮ್ಮ ಮತ್ತು ಧನ್ಯಾ ಕೆಮಿಸ್ಟ್ರಿ ಹೇಗಿದೆ?
ʼದ ಜಡ್ಜ್ಮೆಂಟ್ʼ ಸಿನಿಮಾದಲ್ಲಿ ಮೊದಲ ಬಾರಿಗೆ ನಾನು ಧನ್ಯಾ ರಾಮಕುಮಾರ್ ಜೋಡಿಯಾಗಿ ಅಭಿನಯಿಸಿದ್ದೇವೆ. ನಮ್ಮಿಬ್ಬರದ್ದೂ, ಇಂದಿನ ಜನರೇಶನ್ ಯುವ ಜೋಡಿಯನ್ನು ಪ್ರತಿನಿಧಿಸುವಂಥ ಪಾತ್ರ. ಇಬ್ಬರ ಕೆಮಿಸ್ಟ್ರಿ ತುಂಬ ಚೆನ್ನಾಗಿದೆ. ಕಲಾವಿದೆಯಾಗಿ ಬೆಳೆಯಬೇಕೆಂಬ ಧನ್ಯಾ ಅವರ ಉದ್ದೇಶ, ಅವರ ಉತ್ಸಾಹ ಎರಡೂ ಮೆಚ್ಚುವಂಥದ್ದು. ʼದ ಜಡ್ಜ್ಮೆಂಟ್ʼ ಸಿನಿಮಾದ ನಂತರ ʼಪೌಡರ್ʼ ಸಿನಿಮಾದಲ್ಲೂ ನಾವಿಬ್ಬರೂ ಒಟ್ಟಿಗೇ ಅಭಿನಯಿಸುತ್ತಿದ್ದೇವೆ.
ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಏನು ಹೇಳುವಿರಿ?
ʼದ ಜಡ್ಜ್ಮೆಂಟ್ʼ ಸಿನಿಮಾದ ನಿರ್ದೇಶಕ ಗುರುರಾಜ್ ಮೂಲತಃ ಸಾಫ್ಟ್ವೇರ್ ಹಿನ್ನೆಲೆಯಿಂದ ಸಿನಿಮಾಕ್ಕೆ ಬಂದವರು. ಸಾಕಷ್ಟು ವಿಷಯಗಳ ಬಗ್ಗೆ ಅವರಿಗೆ ಆಳವಾದ ಜ್ಞಾನವಿದೆ. . ಬಿಗ್ ಕಾಸ್ಟಿಂಗ್, ಬಿಗ್ ಬಜೆಟ್ ಇಟ್ಟುಕೊಂಡು ಅಂದುಕೊಂಡಂತೆ, ಪ್ಲಾನ್ ಪ್ರಕಾರ ಇಡೀ ಸಿನಿಮಾವನ್ನು ನಿರ್ದೇಶಕರು ಮತ್ತು ಚಿತ್ರತಂಡ ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದೆ. ತುಂಬ ಪ್ಯಾಶನೇಟ್ ಆಗಿ ಎಲ್ಲರೂ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ.
ದ ಜಡ್ಜ್ಮೆಂಟ್ʼ ಮೇಲೆ ನಿಮ್ಮ ನಿರೀಕ್ಷೆ ?
ನನ್ನ ಪ್ರಕಾರ, ʼದ ಜಡ್ಜ್ಮೆಂಟ್ʼ ಮಾಮೂಲಿ ಎಂಟರ್ಟೈನ್ಮೆಂಟ್ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್-ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ. ಆಡಿಯನ್ಸ್ಗೆ ಖಂಡಿತವಾಗಿಯೂ ʼದ ಜಡ್ಜ್ಮೆಂಟ್ʼ ಒಂದು ಒಳ್ಳೆಯ ಅನುಭವ ಕೊಟ್ಟು, ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.
ಪ್ರಚಾರದ ವೇಳೆ ಪ್ರೇಕ್ಷಕರ ಕಡೆಯಿಂದ ಹೇಗೆ ರೆಸ್ಪಾನ್ಸ್ ಸಿಗುತ್ತಿದೆ?
ಈಗಾಗಲೇ ʼದ ಜಡ್ಜ್ಮೆಂಟ್ʼ ಸಿನಿಮಾದ ಟೈಟಲ್ ಪೋಸ್ಟರ್, ಕ್ಯಾರೆಕ್ಟರ್ ಫಸ್ಟ್ಲುಕ್, ಟೀಸರ್ ಮಾತ್ತು ಹಾಡು ಬಿಡುಗಡೆಯಾಗಿದೆ. ಎಲ್ಲದಕ್ಕೂ ಸೋಶಿಯಲ್ ಮೀಡಿಯಾಗಳಲ್ಲಿ ಆಡಿಯನ್ಸ್ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಬಹುತೇಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ.