Categories
ಸಿನಿ ಸುದ್ದಿ

ಬ್ಯಾಟೆಮರ ಪುಸ್ತಕ ಬಿಡುಗಡೆ ಮಾಡಿದ ಕೋಟಿಗಾನಹಳ್ಳಿ ರಾಮಯ್ಯ ಮತ್ತು ನಟ ರಾಜ್ ಬಿ ಶೆಟ್ಟಿ

ಬರಹಗಾರನಾಗಿ ಗುರುತಿಸಿಕೊಂಡಿರುವ ಎ ಎಸ್ ಜಿ ಮೊದಲ ಕಥಾಸಂಕಲನವನ್ನು ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕಲಾಗ್ರಾಮದ ಸಂಭಾಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟರಾಜ್ ಬುದಾಳ್, ಜಯತೀರ್ಥ ಹಾಗೂ ದಯಾ ಗಂಗನಘಟ್ಟ ವಿಶೇಷ ಅತಿಥಿಗಳಾಗಿ ಆಗಮಿಸಿ ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದರು.

ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಆಲದಹಳ್ಳಿಯವರಾದ ಎ ಎಸ್ ಜಿ ತನ್ನ ಸುತ್ತಮುತ್ತಲಿನ ಕತೆಗಳನ್ನು ಅಕ್ಷರ ರೂಪಕ್ಕಿಳಿಸಿ ತಯಾರಿಸಿರುವ ಗ್ರಾಮೀಣ ಸೊಗಡಿನ ಕಥೆಗಳ ಗುಚ್ಛವೇ ಬ್ಯಾಟೆಮರ. ಎ ಎಸ್ ಜಿ ಅವರ ಈ ಪುಸ್ತಕ ಪ್ರೀತಿಗೆ ಕಾರಣ ಸಿನಿಮಾರಂಗ.

ಸಿನಿಮಾವನ್ನೇ ಉಸಿರಾಗಿಸಿಕೊಂಡು ಸಿನಿಮಾಕ್ಕಾಗಿ ತುಡಿಯುತ್ತಿರುವ ಎ ಎಸ್ ಜಿ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುವ ಹುಮ್ಮಸ್ಸಿನಲ್ಲಿದ್ದಾರೆ. ಅದಕ್ಕಾಗಿ ತಮ್ಮಲ್ಲಿನ ಪುಸ್ತಕ ಪ್ರೀತಿಯನ್ನು ತೆರೆದಿಟ್ಟಿದ್ದಾರೆ. ನನ್ನ ಪ್ರಕಾರ, ಸಾಹೇಬ, ತೂತುಮಡಿಕೆ, ಒಂದ್ ಕಥೆ ಹೇಳ್ಲಾ ಸಿನಿಮಾಗಳಿಗೆ ಬರಹಗಾರರಾಗಿ ಕೆಲಸ ಮಾಡಿರುವ ಎ ಎಸ್ ಜಿ ಡೈರೆಕ್ಟರ್ ಕ್ಯಾಪ್ ತೊಡ್ತಿದ್ದಾರೆ.

ಈಗಾಗಲೇ ಕಥೆ ಸಿದ್ಧ ಮಾಡಿಕೊಂಡು ನಿರ್ಮಾಪಕರ ಹುಡುಕಾಟದಲ್ಲಿ ತೊಡಗಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಬರಹಗಾರನಾಗಿ ಅನುಭವವಿರುವ ಎ ಎಸ್ ಜಿ ತಮ್ಮ ಇಷ್ಟು ವರ್ಷದ ಪರಿಶ್ರಮವೆಲ್ಲವನ್ನೂ ಹಾಕಿ ಸಿನಿಮಾ ನಿರ್ದೇಶನಕ್ಕಿಳಿಯುತ್ತಿದ್ದಾರೆ.

Categories
ಸಿನಿ ಸುದ್ದಿ

ಕಿಂಗ್ ಖಾನ್ ಡಂಕಿ ಟೀಸರ್ ಗೆ ಮಿಲಿಯನ್ಸ್ ವೀವ್ಸ್: ಈ ವರ್ಷ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್

ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ಕಂಡಿದ್ದಾರೆ. ಈ ವರ್ಷದಲ್ಲಿ ಪಠಾಣ್ ಮತ್ತು ಜವಾನ್‌ ಎರಡು ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಮೇಲಾಗಿ ಆ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲೂ ಸಾವಿರಾರು ಕೋಟಿ ಕಮಾಯಿ ಮಾಡಿವೆ. ಈ ಎರಡು ಸಿನಿಮಾಗಳ ಬಳಿಕ ಮತ್ತೊಂದು ವಿಭಿನ್ನ ಅವತಾರದಲ್ಲಿ ಎದುರಾಗಿ ಮನರಂಜನೆ ನೀಡಲು ಶಾರುಖ್‌ ಖಾನ್‌ ಸಿದ್ಧರಾಗಿದ್ದಾರೆ.

ರಾಜ್ ಕುಮಾರ್ ಹಿರಾನಿ ಸಾರಥ್ಯದ ಡಂಕಿ ಸಿನಿಮಾದ ಟೀಸರ್ ನಿನ್ನೆ ಕಿಂಗ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು. ಮಾಸ್ ಅವತಾರದಲ್ಲಿ ಅಬ್ಬರಿಸ್ತಿದ್ದ ಶಾರುಖ್ ಡಂಕಿ ಮೂಲಕ ಕ್ಲಾಸ್ ಅವತಾರದಲ್ಲಿ ದರ್ಶನ‌ ಕೊಟ್ಟಿದ್ದು, ಟೀಸರ್ 4 ಕೋಟಿ‌ ಮಿಲಿಯನ್ ವೀವ್ಸ್ ಕಂಡಿದೆ. ಈ ವರ್ಷದಲ್ಲಿ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್ ಇದಾಗಿದೆ.

ನಿನ್ನೆ ಮುಂಬೈನಲ್ಲಿ ನಡೆದ ಡಂಕಿ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾರುಖ್ ಖಾನ್, ಪಠಾಣ್ ಹಾಗೂ ಜವಾನ್ ಸಿನಿಮಾಗಿಂತ ಡಂಕಿ ಸಿನಿಮಾ ಅತಿ ಹೆಚ್ಚು ಮನರಂಜನೆ ನೀಡಲಿದೆ. ರಾಜ್ ಕುಮಾರ್ ಹಿರಾನಿ ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವಾಗಿದೆ. ಹಿರಾನಿ ಚಿತ್ರಗಳಲ್ಲಿ ಯಾವುದೇ ‌ನಿರ್ದಿಷ್ಟ ನಟನಿಗಿಂತ ಕಥೆಯೇ ನಾಯಕತ್ವ ವಹಿಸುತ್ತದೆ. ಶೀಘ್ರದಲ್ಲೇ ಡ್ರಾಪ್ 2 ಮತ್ತು ಡ್ರಾಪ್ 3 ವಿಡಿಯೋ ರಿಲೀಸ್ ಮಾಡುವುದಾಗಿ ತಿಳಿಸಿದರು.

ರಾಜ್ಕುಮಾರ್ ಹಿರಾನಿ ಅವರು ‘ಡಂಕಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಭಾವನೆಗಳಿಗೆ, ಹಾಸ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ಇರುತ್ತದೆ. ಎಂತಹುದೇ ಮಾಸ್ ಹೀರೋ ಆದರೂ ಅವರಿಗೆ ಬೇರೆಯದೇ ಗೆಟಪ್ ನೀಡುತ್ತಾರೆ. ‘ಡಂಕಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಶಾರುಖ್ ಖಾನ್ ಅವರು ಕ್ಲಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಶಾರುಖ್ ಖಾನ್ ಜೊತೆ ಈ ಚಿತ್ರದಲ್ಲಿ ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

Categories
ಸಿನಿ ಸುದ್ದಿ

ಇಂಡಿಯನ್ ಈಸ್ ಬ್ಯಾಕ್ : ಸೇನಾಪತಿ ಕಮಲ್ ಹಾಸನ್ ಗೆ ಕಿಚ್ಚ ಬೆಂಬಲ: ಹೇಗಿದೆ ಗೊತ್ತಾ ಇಂಡಿಯನ್-2 ಫಸ್ಟ್ ಗ್ಲಿಂಪ್ಸ್

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಶುಕ್ರವಾರ ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರ ಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಇಂಟ್ರೋ ವೀಡಿಯೋ ಐದು ಭಾಷೆಯಲ್ಲಿ ಬಿಡುಗಡೆಯಾಗಿದೆ.

ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

Categories
ಸಿನಿ ಸುದ್ದಿ

ಶುಗರ್ ಫ್ಯಾಕ್ಟರಿ ಸೇರಿದ ಅರ್ಮಾನ್ ಮಲಿಕ್: ಹಣೆಬರಹ ಅಂದ್ರು ಬಾಲಿವುಡ್ ಸಿಂಗರ್

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ.

ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಕೂಡ ಎಲ್ಲರ ಮನ ಗೆದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಬರುತ್ತಿದೆ.

ಡಾರ್ಲಿಂಗ್ ಕೃಷ್ಣ ಈವರೆಗೂ ಅಭಿನಯಿಸಿರುವ ಎಲ್ಲಾ ಚಿತ್ರಗಳಿಗಿಂತ “ಶುಗರ್ ಫ್ಯಾಕ್ಟರಿ” ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಚಿತ್ರ ಎನ್ನಲಾಗುತ್ತಿದೆ. ಅಭಿಮಾನಿಗಳು ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ‌.

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು ಕೂಡ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಇಂಡಿಯನ್ 2 ಸಿನಿಮಾಗೆ ಸುದೀಪ್ ಸಾಥ್: ನ.3ಕ್ಕೆ ಕಮಲ್ ಚಿತ್ರದ ಫಸ್ಟ್ ಗ್ಲಿಂಪ್ಸ್

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬೀಳಲಿದ್ದು, ಕಮಲ್ ಹಾಸನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಚಿತ್ರದ ಇಂಟ್ರೋ ವೀಡಿಯೋ ನಾಳೆ ರಿಲೀಸ್ ಆಗ್ತಿದೆ.

ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಲಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು ಇದ್ದಾರೆ.

ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

Categories
ಸಿನಿ ಸುದ್ದಿ

ದಸರಾ ಸಂಭ್ರಮದಲ್ಲಿ ಪ್ರೇತ ಅಬ್ಬರ! ಕಲಾಕರ್ ಪ್ರೆರತಕ್ಕೆ ಸಚಿವ ಭೈರತಿ ಸುರೇಶ್ ಸಾಥ್

ಪ್ರೇತ ಸಿನಿಮಾ ಮೂಲಕ ಕಲಾಕರ್ ಹರೀಶ್ ರಾಜ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಗೊತ್ತೇ ಇದೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದರಾದ ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ. ಈ ವೇಳೆ ಕಾಂತಾರದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮದ ಮೆರಗು ಹೆಚ್ಚಿಸಿದರು.

ಪ್ರೇತ ಸಿನಿಮಾದ ದೂರದ ಊರಿಗೆ ಎಂಬ ಹಾಡು HRP ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಭಾವುಕ ಗೀತೆಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಪ್ರವೀಣ್ ಶ್ರೀನಿವಾಸ್ ಮೂರ್ತಿ ಟ್ಯೂನ್ ಹಾಕಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಈ ಗಾನಬಜಾನ ಕೇಳುಗರ ಗಮನ ಸೆಳೆಯುತ್ತಿದೆ.

ಅಭಿನಯದ ಜೊತೆಗೆ ಡೈರೆಕ್ಷನ್​ನಲ್ಲಿಯೂ ಅನುಭವ ಹೊಂದಿರುವ ಹರೀಶ್ ರಾಜ್ ಅವರ ‘ಹರೀಶ್ ರಾಜ್ ಪ್ರೊಡಕ್ಷನ್’ನ ಐದನೇ ಕೊಡುಗೆ ಪ್ರೇತ. ಈ ಪ್ರೊಡಕ್ಷನ್ ಮೂಲಕ ಈಗಾಗಲೇ ‌ನಾಲ್ಕು ಸಿನಿಮಾಗಳು ನಿರ್ಮಾಣವಾಗಿದ್ದು, ಇದೀಗ ‘ಪ್ರೇತ’ ಸಿನಿಮಾವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಅವರೇ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಪ್ರೇತ ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿಬರುತ್ತಿದೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಈವರೆಗೆ ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು 3 ವರ್ಷದ ಗ್ಯಾಪ್​ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ.ಶೀರ್ಷಿಕೆಯೇ ಹೇಳುವಂತೆ ‘ಪ್ರೇತ’ ಒಂದು ಹಾರರ್​ ಕಥೆಯುಳ್ಳ ಸಿನಿಮಾ. ಹರೀಶ್ ರಾಜ್​ ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ಹರೀಶ್ ರಾಜ್​ ಜೊತೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ, ಬಿ.ಎಂ. ವೆಂಕಟೇಶ್, ಅಮಿತ್ ಅವರು ಪಾತ್ರವರ್ಗದಲ್ಲಿ ಇದ್ದಾರೆ. ಕಿರಣ್ ಆರ್. ಹೆಮ್ಮಿಗೆ ಸಂಭಾಷಣೆ ಬರೆದಿದ್ದಾರೆ.

ಶಿವಶಂಕರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಅವರ ಸಂಗೀತ ಈ ಚಿತ್ರಕ್ಕಿದೆ. ಜೀವನ್ ಪ್ರಕಾಶ್ ಅವರು ಸಂಕಲನ, ಮಂಜು ಅವರು ಕಲಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಗೀತೆಗಳಿಗೆ ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ.

Categories
ಸಿನಿ ಸುದ್ದಿ

ದಿ ವೆಂಕಟ್ ಹೌಸ್ ನವೆಂಬರ್ 10ಕ್ಕೆ ರಿಲೀಸ್: ಇದು ಎಸ್ತರ್‌ ನರೋನ್ಹಾ ನಿರ್ದೇಶನದ ಚಿತ್ರ

ಸ್ಯಾಂಡಲ್‌ವುಡ್‌ನಲ್ಲಿ ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಈ ಬ್ಯೂಟಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿರುವ ಅವರು, ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಪ್ರಯತ್ನವೀಗ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ನ.10ರಂದು ‘ದಿ ವೆಕೆಂಟ್ ಹೌಸ್’ ಚಿತ್ರ ಬಿಡುಗಡೆಯಾಗಲಿದೆ.

‘ದಿ ವೆಕೆಂಟ್ ಹೌಸ್’ ಸಿನಿಮಾದ ಸ್ಯಾಂಪಲ್ಸ್ ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿದೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣವಿದ್ದರೆ, ವಿಜಯ್ ರಾಜ್ ಸಂಕಲನವಿದೆ. ‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಖಾಲಿ ಮನೆಯ ಸುತ್ತ ನಡೆಯುವ ಘಟನೆ ಆಧರಿತ ಸಿನಿಮಾ ಮಾಡಲಾಗಿದೆ.

ಅಂದ್ಹಾಗೆ ಎಸ್ತರ್‌ ನರೋನ್ಹಾ ಮಂಗಳೂರಿನವರಾದರು. ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಕನ್ನಡ ಸಿನಿಮಾ ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಹಾಡಿಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿರುವ ಎಸ್ತಾರ್ ಗ್ಲಾಮರ್ ನಂಬರ್ ಗೆ ಪ್ರೇಕ್ಷಕರ ಚಪ್ಪಾಳೆ ತಟ್ಟಿದ್ದಾರೆ.

ರಾಜ್ಯಾದ್ಯಂತ ರಿಲೀಸ್ ಆಗಿರುವ ಇನಾಮ್ದಾರ್ ಚಿತ್ರಕ್ಕೆ ಮೆಚ್ಚುಗೆ ಸಿಕ್ತಿದೆ. ನರೋನ್ಹಾ ಕುಣಿದು ಕುಪ್ಪಳಿಸಿರುವ ಸಿಲ್ಕು ಸಖತ್ ಹಿಟ್ ಆಗಿದೆ. ಈ ಖುಷಿ ಬೆನ್ನಲ್ಲೆ ಎಸ್ತರ್ ಚೊಚ್ಚಲ ಕನಸು ದಿ ವೆಕೆಂಟ್ ಹೌಸ್ ತೆರೆಗೆ ಬರ್ತಿದೆ.

Categories
ಸಿನಿ ಸುದ್ದಿ

ವಸಂತ ಕಾಲದ ಹೂವು ಹಿಡಿದ ಧ್ರುವ: ಟೀಮ್ ಗೆ ಸಾಥ್ ಕೊಟ್ಟು ಸಿನಿಮಾ ಪ್ರೆಸೆಂಟ್ ಮಾಡಿದ ಸರ್ಜಾ

ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.

“ಇದು ಸಣ್ಣ ತಂಡವೊಂದು ಶ್ರದ್ಧೆಯಿಂದ ಬರಿ ಕಥೆಯನ್ನಷ್ಟೆ ನಂಬಿ ಮಾಡಿದ ಒಂದು ಅಚ್ಚು ಕಟ್ಟಾದ ಚಿತ್ರ. ವಿಭಿನ್ನ ಕಂಟೆಂಟ್ ನೊಂದಿಗೆ ಬರುತ್ತಿರುವ ಹೊಸಬರ ಚಿತ್ರಗಳಿಗೆ ಉತ್ತೇಜನ ಕೊಡುವುದು ಈ ಹೊತ್ತಿನ ಅಗತ್ಯ ಎಂದು ನನಗನಿಸುತ್ತದೆ.

ಹೀಗಾಗಿ ಈ ಉತ್ಸಾಹಿ ಯುವ ತಂಡಕ್ಕೆ, ಮುಖ್ಯವಾಗಿ ಒಂದು ಉತ್ತಮ ಚಿತ್ರಕ್ಕೆ ಬೆಂಬಲ ನೀಡುವ ಸಲುವಾಗಿ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದೇನೆ.
ಉತ್ತರ ಕರ್ನಾಟಕದ ಪರಿಸರ, ಕಾಲೇಜು ದಿನಗಳು, ತರಲೆ ಫ್ರೆಂಡ್ಸ್, ಮುದ್ದಾದ ಲವ್ ಸ್ಟೋರಿಗಳು ಇದನ್ನೆಲ್ಲ ನೀವು ಈ ಚಿತ್ರದಲ್ಲಿ ನೋಡಬಹುದು. ನಿಮ್ಮ ಟೀನೇಜ್ ಲೈಫ್ ಗೆ ಮತ್ತೆ ಹೋಗಿ ಆ ನೆನಪುಗಳನ್ನು ಮೆಲುಕು ಹಾಕೋ ಹಾಗೆ ಈ ಚಿತ್ರ ಮಾಡುತ್ತದೆ ಎನ್ನುವ ನಂಬಿಕೆ ನನಗಿದೆ” ಎನ್ನುತ್ತಾರೆ ಧ್ರುವ ಸರ್ಜಾ.

“ಒಂದು ಚಿತ್ರವನ್ನು ತಯಾರಿಸುವುದು ಎಷ್ಟು ಕಷ್ಟವೋ ಅದಕ್ಕಿಂತ ಹೆಚ್ಚಿನ ಕಷ್ಟ ಜನರಿಗೆ ಆ ಚಿತ್ರವನ್ನು ತಲುಪಿಸುವುದರಲ್ಲಿದೆ. ಈ ನಿಟ್ಟಿನಲ್ಲಿ ನಾವು ಚಿತ್ರವನ್ನು ಪ್ರೆಸೆಂಟ್ ಮಾಡಲು ಧ್ರುವ ಸರ್ಜಾ ಅವರನ್ನು ಸಂಪರ್ಕಿಸಿದೆವು. ಚಿತ್ರದ ಕಂಟೆಂಟ್ ಮೆಚ್ಚಿ ಅವರು ಚಿತ್ರವನ್ನು ಪ್ರೆಸೆಂಟ್ ಮಾಡಲು ಮುಂದೆ ಬಂದರು. ಇದು ನಮ್ಮ ಇಡೀ ತಂಡಕ್ಕೆ ಹೊಸ ಹುಮ್ಮಸ್ಸು ತಂದಿದೆ.

ಇದೇ ಉತ್ಸಾಹದಲ್ಲಿ ನವೆಂಬರ್ 10ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ” – ನಿರ್ದೇಶಕ ಸಚಿನ್ ಶೆಟ್ಟಿ. ವಸಂತಕಾಲದ ಹೂಗಳು ಚಿತ್ರದಲ್ಲಿ ಸಚಿನ್ ರಾಠೋಡ್ ಮತ್ತು ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಅಶೋಕ ರಾಠೋಡ್ ಹಾಗೂ ಸಿದ್ದು ರಸೂರೆ ನಿರ್ಮಾಣ ಮಾಡಿದ್ದಾರೆ. ಟೀನೇಜ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರ ಸಂಪೂರ್ಣವಾಗಿ ಬಿಜಾಪುರದಲ್ಲಿ ಚಿತ್ರಿಕರಣಗೊಂಡಿದೆ.

Categories
ಸಿನಿ ಸುದ್ದಿ

ಗಂಡ ಸಿನಿಮಾ ಟಿಕೆಟ್ ಕೊಂಡರೆ ಹೆಂಡತಿಗೆ ಫ್ರೀ! ಇದು ಅಥಿ ಐ ಲವ್ ಯು ಚಿತ್ರ ವಿಷಯ: ಟ್ರೇಲರ್ ಗೆ ಮೆಚ್ಚುಗೆ

ಇತ್ತೀಚೆಗೆ ಬರುತ್ತಿರುವ ಕನ್ನಡದ ಹೊಸ ಚಿತ್ರಗಳ ಹೊಸ ಪ್ರಯತ್ನವನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಅಂತಹುದೆ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ಅಥಿ” ಐ ಲವ್ ಯು ಚಿತ್ರ ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ನನ್ನ ನಿರ್ಮಾಣದ ಎರಡನೇ ಚಿತ್ರವಿದು. ನಿರ್ದೇಶಕ ಲೋಕೇಂದ್ರ ಸೂರ್ಯ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣ ಮಾಡಿದ್ದೇನೆ. ಸತಿಪತಿಯರ ಸಂಬಂಧದ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುತ್ತೇನೆ. ಬಿಡುಗಡೆಯ ಸಮಯದಲ್ಲಿ ನೂತನ ಯೋಜನೆ ಹಾಕಿಕೊಂಡಿದ್ದೇನೆ. ಗಂಡ ಟಿಕೆಟ್ ತೆಗೆದುಕೊಂಡರೆ ಹೆಂಡತಿಗೆ ಟಿಕೆಟ್ ಉಚಿತ ಹಾಗೂ ಹೆಂಡತಿ ಟಿಕೆಟ್ ತೆಗೆದುಕೊಂಡರೆ ಗಂಡನಿಗೆ ಉಚಿತ ಎಂದು ನಿರ್ಮಾಪಕ ರೆಡ್ & ವೈಟ್ ಸೆವೆನ್ ರಾಜ್ ತಿಳಿಸಿದರು.

ಈ ಚಿತ್ರದಲ್ಲಿರುವುದು “ಅಥಿ”ಹಾಗೂ “ವಸಂತ್” ಎಂಬ ಎರಡು ಪಾತ್ರಗಳು ಮಾತ್ರ ಎಂದು ಮಾತು ಆರಂಭಿಸಿದ ಚಿತ್ರದ ನಿರ್ದೇಶಕ ಲೋಕೇಂದ್ರ ಸೂರ್ಯ, ಇದು ಒಂದು ದಿನದಲ್ಲಿ ನಡೆಯುವ ಕಥೆ. ಪ್ರತಿದಿನ ಬೆಳಗ್ಗೆ ಕೆಲಸಕ್ಕೆ ಹೋಗುವ ಗಂಡ ದಿನ ರಾತ್ರಿ ವಾಪಸು ಬರುತ್ತಾನೆ. ಒಂದು ದಿನ ಇದಕ್ಕಿದಂತೆ ಗಂಡ ಮಧ್ಯಾಹ್ನ ಮನೆಗೆ ಬಂದಾಗ ಮನೆಯಲ್ಲಿ ಹೆಂಡತಿ ಏನು ಮಾಡುತ್ತಿರುತ್ತಾಳೆ? ಎಂಬುದನ್ನು ತೆರೆಯ ಮೇಲೆ ನೋಡಬೇಕು.

ನಮ್ಮ ಚಿತ್ರವನ್ನು ಮದುವೆಯಾದ ದಂಪತಿಗಳು ಹಾಗೂ ಪ್ರೀತಿ ಮಾಡುತ್ತಿರುವವರು ನೋಡಿ. ಚಿತ್ರದಲ್ಲಿ ಸಮಾಜಕ್ಕೆ ಒಂದೊಳ್ಳೆ ಉತ್ತಮ ಸಂದೇಶ ಕೊಡುವ ಪ್ರಯತ್ನ‌ ಮಾಡಿದ್ದೇವೆ‌. ನಾನು ನಿರ್ದೇಶನದೊಂದಿಗೆ ನಾಯಕನಾಗೂ ಅಭಿನಯಿಸಿದ್ದೇನೆ. ಸಾತ್ವಿಕ ಈ ಚಿತ್ರದ ನಾಯಕಿ. ಎರಡೇ ಪಾತ್ರಗಳು ಮಾತ್ರ ನಿಮಗೆ ತೆರೆಯ ಮೇಲೆ ಕಾಣುವುದು. ಉಳಿದ ಪಾತ್ರಗಳು ಧ್ವನಿಯ ಮೂಲಕ ಚಿತ್ರಕ್ಕೆ ಜೀವ ತುಂಬಿದೆ‌.

ಕಥೆಯನ್ನು ನಾನೇ ಬರೆದಿದ್ದೇನೆ. ಸಂಕಲನ ಹಾಗೂ ಛಾಯಾಗ್ರಹಣದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಸದ್ಯದಲ್ಲೇ ತೆರೆಗೆ ಬರುತ್ತಿರುವ ನಮ್ಮ ಚಿತ್ರವನ್ನು ದಂಪತಿಗಳು ಬಂದು ನೋಡಿ ತಮ್ಮ ಅಭಿಪ್ರಾಯ ತಿಳಿಸಿ ಎಂದರು.

ಸಂಗೀತ ನಿರ್ದೇಶಕ ಅನಂತ್ ಆರ್ಯನ್, ಕಲರಿಸ್ಟ್ ಜೇಕಬ್ ಮ್ಯಾಥ್ಯೂ, ಕಾಸ್ಟ್ಯೂಮ್ ಡಿಸೈನರ್ ಋತು ಚೈತ್ರ, ಕಲಾ‌ ನಿರ್ದೇಶಕ ಕ್ರಿಯೇಟಿವ್ ವಿಜಯ್, ವಿತರಕ ಜೈದೇವ್ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ “ಅಥಿ” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಜೈ ಗದಾ ಕೇಸರಿ: ಇದು ಆಂಜನೇಯನ ಗಧೆಯ ಮಹತ್ವ ಸಾರುವ ಚಿತ್ರ

ಕಳೆದ 3 ದಶಕಗಳಿಂದ ಸಹ ನಿರ್ದೇಶಕ, ಸಂಕಲನಕಾರನಾಗಿ ಕೆಲಸ ಮಾಡಿರುವ ಯತೀಶ್ ಕುಮಾರ್ ವಿ. ಈಗ ಸ್ವತಂತ್ರ ನಿರ್ದೇಶಕನಾಗಿದ್ದಾರೆ. ಈಗಾಗಲೇ ಶ್ರೀರಾಮನ ಪರಮಭಕ್ತ ಶ್ರೀ ಆಂಜನೇಯನ ಕುರಿತಂತೆ ಸಾಕಷ್ಟು ನಿರ್ದೇಶಕರು ಸಿನಿಮಾ ಮಾಡಿದ್ದಾರೆ.

ಆದರೆ, ಆ ಆಂಜನೇಯನ ಗದೆಯ ಪ್ರಾಮುಖ್ಯತೆ, ವಿಶೇಷತೆಗಳನ್ನಿಟ್ಟುಕೊಂಡು ಯಾರೂ ಸಹ ಸಿನಿಮಾ ಮಾಡಿಲ್ಲ. ಯತೀಶ್ ಕುಮಾರ್ ಅವರಿಂದ ಅಂಥದ್ದೊಂದು ಪ್ರಯತ್ನ ನಡೆದಿದೆ.

ಆಂಜನೇಯನ ಗದೆಯ ಮಹತ್ವದ ಬಗ್ಗೆ ಹಾಗೂ ಅದರ ಸುತ್ತಲೂ ನಡೆಯುವ ಕಥೆಯನ್ನು ಇಟ್ಟುಕೊಂಡು ‘ಜೈ ಗಧಾಕೇಸರಿ’ ಎಂಬ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಚಿತ್ರದುರ್ಗ, ಹೊಸಪೇಟೆ, ಸಿಂಧನೂರು ಸುತ್ತಮುತ್ತ ೭೦ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು, ಚಿತ್ರವೀಗ ಸೆನ್ಸಾರ್ ಹಂತದಲ್ಲಿದೆ.

ಬಸವರಾಜ್ ಭಜಂತ್ರಿ ಮೂವೀ ಮೇಕರ್ಸ್‌ ಮೂಲಕ‌ ಬಸವರಾಜ್ ಭಜಂತ್ರಿ ಅವರು ಜೈ ಗಧಾ ಕೇಸರಿ ಚಿತ್ರವನ್ನು ನಿರ್ಮಿಸಿದ್ದು, ಈಶ್ವರ್ ನಾಯಕ್ ಅವರ ಸಹ ನಿರ್ಮಾಣವಿದೆ. ಯತೀಶ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

ಈ ಚಿತ್ರದಲ್ಲಿ ನಾಯಕನಾಗಿ ಈಶ್ವರ್ ನಾಯಕ್, ನಾಯಕಿಯರಾಗಿ ಜೀವಿತಾ ಹಾಗೂ ಕೋಮಲ ನಟಿಸಿದ್ದು, ಅವಿನಾಶ್, ಧರ್ಮ, ಅರವಿಂದರಾವ್, ಹೊನ್ನವಳ್ಳಿ ಕೃಷ್ಣ, ಪ್ರಶಾಂತ್ ಸಿದ್ದಿ, ರಾಜ್ ಚರಣ್ ಬ್ರಹ್ಮವರ್ ಉಳಿದ ಪಾತ್ರಗಳಲ್ಲಿದ್ದಾರೆ.

ಇನ್ನು ಈ ಚಿತ್ರದಲ್ಲಿ 5 ಹಾಡುಗಳಿದ್ದು, ಜಾರ್ಜ್ ಥಾಮಸ್ ಶ್ಯಾಮ್, ಕಾರ್ತೀಕ್ ವೆಂಕಟೇಶ್, ಪ್ರಸನ್ನ ಭೋಜಶೆಟ್ಟರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ೮ ಸಾಹಸ ದೃಶ್ಯಗಳಿಗೆ ಸುಪ್ರೀಂ ಸುಬ್ಬು, ಸೂರಿ, ರಾಮ್ ದೇವ್ ಜಾನಿ, ಅಲ್ಟಿಮೇಟ್ ಶಿವು. ವೈಲೆಂಟ್ ವೇಲು ಸಾಹಸ ಸಂಯೋಜನೆ ಮಾಡಿದ್ದಾರೆ. ಶ್ಯಾಮ್ ಸಿಂಧನೂರು ಅವರ ಛಾಯಾಗ್ರಹಣ, ಪೂಜಾ.ಸಿ. ಅವರ ಸಂಕಲನ, ಮಂಜು ಹೊಸಪೇಟೆ ಸಹನಿರ್ದೇಶನ ಈ ಚಿತ್ರಕ್ಕಿದೆ.

error: Content is protected !!