ಯುವ ನಟ ಧನ್ವೀರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯುವ ನಿರ್ದೇಶಕ ರಘುಕುಮಾರ್ ಓ ಆರ್ ನಿರ್ದೇಶಿಸುತ್ತಿದ್ದಾರೆ. ಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಇದು ರಘುಕುಮಾರ್ ನಿರ್ದೇಶನದ ಚೊಚ್ಚಲ ಚಿತ್ರ. ಈ ಚಿತ್ರ ‘ಸಮೃದ್ಧಿ ಫಿಲಂಸ್’ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.
ರಘುಕುಮಾರ್ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ರಂಗಾಯಣ ರಘು , ರವಿಶಂಕರ್, ತಬಲನಾಣಿ, ಸಾಧುಕೋಕಿಲ ಇನ್ನಿತರ ಕಲಾವಿದರು ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಶುರು ಮಾಡುತ್ತೇವೆ ಎಂದು ಸಮೃದ್ಧಿ ಫಿಲಂಸ್ ನಿರ್ಮಾಣ ಸಂಸ್ಥೆ ತಿಳಿಸಿದೆ.
ನಿರ್ದೇಶಕ ರಘುಕುಮಾರ್ ಓ ಆರ್ ಕೆಲವು ವರ್ಷಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇವರು “ಕೋಟಿಗೊಬ್ಬ 3” ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಮತ್ತು ‘ದಿ ಬೆಲ್’ ಎಂಬ ಕಿರುಚಿತ್ರ ನಿರ್ಮಿಸಿ ನಿರ್ದೇಶಿಸಿದ್ದಾರೆ.
ದಿ ಬೆಲ್ ಕಿರುಚಿತ್ರ ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಅಲ್ಲಿ ಬಿಡುಗಡೆ ಆಗಿದ್ದು ಒಳ್ಳೆಯ ಪ್ರಶಂಸೆ ಗಳಿಸಿಕೊಂಡು ಶಾರ್ಟ್ ಫಿಲ್ಮ್ ಫೆಸ್ಟಿವಲ್ಸ್ ಅಲ್ಲಿ ತುಂಬಾನೇ ಮೆಚ್ಚುಗೆ ಪಡೆದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಚಿತ್ರದ ತಾಂತ್ರಿಕವರ್ಗ ಅದ್ಭುತವಾಗಿದ್ದು ಛಾಯಾಗ್ರಾಹಕರಾಗಿ ಕಾರ್ತಿಕ್ ಹಿನ್ನೆಲೆ ಸಂಗೀತ ಜುಡಾ ಸ್ಯಾಂಡಿ, ಶಬ್ದ ವಿನ್ಯಾಸ ರಾಜನ್ ಹಾಗೂ ಸಂಕಲನ ಉಮೇಶ್ ಆರ್ ಬಿ ಮಾಡುತ್ತಿದ್ದಾರೆ.
ಕನ್ನಡಕ್ಕೆ ಈಗಾಗಲೇ ಬಾಲಿವುಡ್ ನಟಿಮಣಿಗಳ ಆಗಗಮನ ಹೊಸದೇನಲ್ಲ. ಆದರೆ, ಈಗ ಬಾಲಿವುಡ್ ಅಂಗಳದಲ್ಲಿ ಬೇಡಿಕೆ ನಟಿಯಾಗಿರುವ ದೀಪಿಕಾ ಪಡಿಕೋಣೆ ಅವರನ್ನು ಕನ್ನಡ ಚಿತ್ರರಂಗಕ್ಕೆ ಪುನಃ ಕರೆತರುವ ಪ್ರಯತ್ನವೊಂದು ನಡೆಯುತ್ತಿದೆ.
ಹೌದು, ಹೀಗಂತ ಹೇಳಿದ್ದು ಬೇರಾರು ಅಲ್ಲ, ನಿರ್ದೇಶಕ ನಾಗಶೇಖರ್. ಅವರು ತಮ್ಮ ಹೊಸ ಚಿತ್ರಕ್ಕೆ ದೀಪಿಕಾ ಪಡುಕೋಣೆ ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ. ಚಿತ್ರದ ಪ್ರಮುಖ ಪಾತ್ರವೊಂದಕ್ಕೆ ಅವರನ್ನು ಕರೆತರಬೇಕೆಂಬ ಆಸೆ ನನ್ನದು. ಆದರೆ, ಅದು ಎಷ್ಟರ ಮಟ್ಟಿಗೆ ನೆರವೇರುತ್ತೆ ಅನ್ನೋದು ಗೊತ್ತಿಲ್ಲ. ಒಟ್ಟಾರೆ ಅದೊಂದು ದಾಖಲಾಗುವ ಸಿನಿಮಾ ಎಂಬುದು ನಾಗಶೇಖರ್ ಮಾತು.
ಇಷ್ಟಕ್ಕೂ ನಾಗಶೇಖರ್ ಈ ಬಾರಿ ನಿರ್ದೇಶನಕ್ಕೆ ಕೈ ಹಾಕಿರೋದು ‘ಭೀಮಾ ಕೋರೆಗಾಂವ’ ಎಂಬ ಸಿನಿಮಾಗೆ. ಇದು ಕೋರೆಗಾಂವ ಘಟನೆ ಕುರಿತ ಚಿತ್ರ. ಈ ಸಿನಿಮಾದ ಶೀರ್ಷಿಕೆ ಅನಾವರಣಗೊಂಡಿದೆ. ಇಂಥದ್ದೊಂದು ಸಿನಿಮಾ ಮಾಡುವುದು ಸುಲಭವಲ್ಲ.
ಸಾಕಷ್ಟು ತಯಾರಿ ಬೇಕು. ಈ ಸಿನಿಮಾ ಶುರುವಿಗೆ ಮುನ್ನ ಹೇಗೆ ಮಾಡಬೇಕು, ಯಾರೆಲ್ಲಾ ಇರಬೇಕು, ಎಂಬಿತ್ಯಾದಿ ಚರ್ಚೆಗಳು ನಡೆಯಲಿವೆ. ಅಂದಹಾಗೆ, ಈ ಚಿತ್ರವನ್ನು ಛಲವಾದಿ ಕುಮಾರ್ ನಿರ್ಮಿಸುತ್ತಿದ್ದಾರೆ. ಸಿನಿಮಾದಲ್ಲಿ ಸ್ಟಾರ್ ನಟರೊಬ್ಬರು ಕಾಣಿಸಿಕೊಳ್ಳಲಿದ್ದಾರೆ. ಎಂಬುದು ವಿಶೇಷ. ಅಷ್ಟೇ ಅಲ್ಲ, ಭಾರತೀಯ ಚಿತ್ರರಂಗದ ಮೇರು ನಟರುಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಶೀರ್ಷಿಕೆ ಅನಾವರಣಗೊಂಡಿದೆ.
ಈ ಚಿತ್ರಕ್ಕೆ ಈಗಷ್ಟೇ ಚಾಲನೆ ಸಿಕ್ಕಿದೆ. ಎಲ್ಲವೂ ಚರ್ಚೆಯಾದ ಬಳಿಕ ಮುಂದಿನ ವರ್ಷಕ್ಕೆ ಚಿತ್ರ ಶುರುವಾಗಲಿದೆ ಎಂಬುದು ಚಿತ್ರತಂಡದ ಮಾಹಿತಿ. ಯಾರೆಲ್ಲ ಇರುತ್ತಾರೆ, ತಾಂತ್ರಿಕ ವರ್ಗ ಯಾರು ಎಂಬಿತ್ಯಾದಿ ವಿಷಯಗಳು ಇನ್ನಷ್ಟೇ ಹೊರ ಬರಬೇಕಿದೆ. ಈ ಸಿನಿಮಾಗೆ ಹಲವಾರು ಚಿಂತಕರು ಜೊತೆಯಾಗಿದ್ದಾರೆ. ಸುಮಾರು ಐವತ್ತು ಮಂದಿ ಈ ಕುರಿತು ಚರ್ಚೆ ನಡೆಸಲಿದ್ದಾರೆ. ಇನ್ನು, ನಾಗಶೇಖರ್ ಜೊತೆ ಚಕ್ರವರ್ತಿ ಚಂದ್ರಚೂಡ್ ಕೂಡ ಕೈ ಜೋಡಿಸಿದ್ದಾರೆ. ಸ್ಕ್ರಿಪ್ಟ್ ಕೆಲಸದಲ್ಲಿ ಅವರೂ ಇಲ್ಲಿದ್ದಾರೆ.
ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ರೈತ ಏನು ಮಾಡಬೇಕು? ಏನು ಮಾಡಬಾರದು? ಎಂದು ಹೇಳುವ ಕಥಾಹಂದರ ಹೊಂದಿರುವ “ಆದರ್ಶ ರೈತ” ಚಿತ್ರ ಈಗ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟಿ ಪ್ರಿಯಾ ಹಾಸನ್, ವೇಗಸ್ ಆಸ್ಪತ್ರೆ ಮುಖ್ಯಸ್ಥರಾದ ನಾರಾಯಣ ಸ್ವಾಮಿ , ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ, ಆರ್ ವಿ ಚೌಡಪ್ಪ(ACP) ಹಾಗೂ ನಿರ್ಮಾಪಕ ಆಂತರ್ಯ ಸತೀಶ್ ಅವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
ನನ್ನ ಕುಟುಂಬವೇ ಕೃಷಿಕರ ಕುಟುಂಬ. ನನ್ನ ತಂದೆ ರೈತ. ನನಗೂ ಚಿಕ್ಕಂದಿನಿಂದಲೂ ವ್ಯವಸಾಯ ಮಾಡಿ ಅಭ್ಯಾಸವಿದೆ. ವ್ಯವಸಾಯ ವೃತ್ತಿಯಿಂದಲೇ ನನ್ನ ತಂದೆ ನಮ್ಮನೆಲ್ಲಾ ವಿದ್ಯಾವಂತರನಾಗಿ ಮಾಡಿದ್ದಾರೆ. ನನಗೆ ಮೊದಲಿನಿಂದಲೂ ರೈತರ ಕುರಿತು ಸಿನಿಮಾ ಮಾಡುವ ಆಸೆ. ನಿರ್ದೇಶಕ ರಾಜೇಂದ್ರ ಕೊಣಿದೆಲ ಅವರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಜೊತೆಗೆ ಪ್ರಮುಖ ಪಾತ್ರವನ್ನು ಕೂಡ ಮಾಡಿದ್ದೇನೆ. ಸದ್ಯದಲ್ಲೇ ನಮ್ಮ ಚಿತ್ರ ಬಿಡುಗಡೆಯಾಗಲಿದೆ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಹಾಗೂ ನಟ ಡಾ.ಅಮರನಾಥ ರೆಡ್ಡಿ ವಿ.
ತೆಲುಗು ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕ , ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ನನಗೆ ಇದು ಮೊದಲ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ರಾಜೇಂದ್ರ ಕೊಣದೆಲ, ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ನಮ್ಮ ಚಿತ್ರದಲ್ಲಿ ರೈತ ಹೆಚ್ಚಿನ ಬಡ್ಡಿಗೆ ಸಾಲ ಮಾಡಬಾರದು.
ಸರ್ಕಾರ ಬ್ಯಾಂಕ್ ನಿಂದ ನೀಡುವ ಸಾಲವನ್ನೇ ಪಡೆಯಬೇಕು. ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಹೀಗೆ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡಿದ್ದೇವೆ. ಒಬ್ಬ ರೈತ ಇಂತಹ ಅನೇಕ ವಿಷಯಗಳನ್ನು ತಿಳಿದು ವ್ಯವಸಾಯ ಮಾಡಿದಾಗ “ಆದರ್ಶ ರೈತ” ಆಗುತ್ತಾನೆ ಎಂಬುದೆ ಚಿತ್ರದ ಕಥಾಹಂದರ ಎನ್ನುತ್ತಾರೆ.
ಕಲಾವಿದರಾದ ರೇಖಾ ದಾಸ್, ಸಿದ್ಧಾರ್ಥ್, ಮೈಸೂರು ಸುಜಾತ, ಸೂಫಿಯಾ, ಖುಷಿ ಮೆಹ್ತಾ, ಸಂಗೀತ, ಎಂ.ವಿ.ಸುರೇಶ್ ಹಾಗೂ ಚಿತ್ರಕ್ಕೆ ಸಂಗೀತ ನೀಡಿರುವ ಮುರಳಿಧರ್ ನಾವಡ, ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಮುಂತಾದವರು “ಆದರ್ಶ ರೈತ” ಚಿತ್ರದ ಕುರಿತು ಮಾತನಾಡಿದರು.
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಐದು ಹಾಡುಗಳನ್ನು ಸೇರಿಸಿ “ಸೌಂಡ್ಸ್ ಆಫ್ ಕಾಲಾಪತ್ಥರ್” ಎಂಬ ಹಾಡುಗಳ ಗುಚ್ಛವನ್ನು ಕೆಲವೇ ನಿಮಿಷಗಳಲ್ಲಿ ತೋರಿಸುವ ವಿಭಿನ್ನ ಪ್ರಯತ್ನಕ್ಕೆ ಚಿತ್ರತಂಡ ಮುಂದಾಯಿತು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.
ನಿರ್ದೇಶನ ನನ್ನ ಕನಸು. ಆ ಕನಸನ್ನು ನನಸು ಮಾಡಿದ ನಿರ್ಮಾಪಕರಿಗೆ ನಾನು ಆಭಾರಿ. ಸೂರಿ ಅವರ ಬಳಿ ಹತ್ತು ವರ್ಷ ಕೆಲಸ ಮಾಡಿರುವ ಅನುಭವದಿಂದ ನಿರ್ದೇಶನ ನನಗೆ ಅಷ್ಟು ಕಷ್ಟವಾಗಲಿಲ್ಲ. ನಿರ್ದೇಶನ ಹಾಗೂ ನಟನೆ ಎರಡು ಒಟ್ಟಿಗೆ ಮಾಡುವುದು ಸ್ವಲ್ಪ ಕಷ್ಟ. ಆದರೆ ನಮ್ಮ ಚಿತ್ರತಂಡದ ಸಹಕಾರದಿಂದ “ಕಾಲಾಪತ್ಥರ್” ನಾವು ಅಂದುಕೊಂಡ ಹಾಗೆ ಅದ್ಭುತವಾಗಿ ಮೂಡಿಬಂದಿದೆ.
ಏನಾದರೂ ಹೊಸತು ಮಾಡಬೇಕು ಎಂದೆನಿಸಿ “ಸೌಂಡ್ಸ್ ಆಫ್ ಕಾಲಾಪತ್ಥರ್” ವಿಡಿಯೋವನ್ನು ಇಂದು ಬಿಡುಗಡೆ ಮಾಡಿದ್ದೇವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. “ಕಾಲಾಪತ್ಥರ್” ಶೀರ್ಷಿಕೆ ಬಗ್ಗೆ ಹೇಳಿದರೆ, ಕಥೆ ಹೇಳಿದಂತೆ. ಹಾಗಾಗಿ ಅದರ ಬಗ್ಗೆ ಸಿನಿಮಾ ನೋಡಿದ ಮೇಲೆ ತಿಳಿಯುವುದು ಎಂದು ನಾಯಕ ಹಾಗೂ ನಿರ್ದೇಶಕ ವಿಕ್ಕಿವರುಣ್ ತಿಳಿಸಿದರು.
ಚಿತ್ರದಲ್ಲಿ ಐದು ಹಾಡುಗಳಿದೆ. ಡಾ|| ವಿ.ನಾಗೇಂದ್ರ ಪ್ರಸಾದ್ ಹಾಗೂ ಪ್ರಮೋದ್ ಮರವಂತೆ ಗೀತರಚನೆ ಮಾಡಿದ್ದಾರೆ. ವಿಜಯ್ ಪ್ರಕಾಶ್, ಸಾಯಿ ವಿಘ್ನೇಶ್, ಅಭಿಷೇಕ್, ಐಶ್ವರ್ಯ ರಂಗರಾಜನ್, ಶಿವಾನಿ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಹಾಡುಗಳನ್ನು ಹಾಡಿದ್ದಾರೆ. ಇಂದು ಬಿಡುಗಡೆಯಾದ “ಸೌಂಡ್ಸ್ ಆಫ್ ಕಾಲಾಪತ್ಥರ್” ವಿಕ್ಕಿವರುಣ್ ಅವರ ಕಾನ್ಸೆಪ್ಟ್ ಎಂದು ಸಂಗೀತ ನಿರ್ದೇಶಕ. ಅನೂಪ್ ಸೀಳಿನ್ ತಿಳಿಸಿದರು.
ನಾನು ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಮಾತನಾಡಿದ ನಾಯಕಿ ಧನ್ಯ ರಾಮಕುಮಾರ್, ಗಂಗಾ ಎಂಬ ಹೆಸರಿನ ಶಿಕ್ಷಕಿ ಪಾತ್ರ ನನ್ನದು ಎಂದು ಹೇಳಿದರು.
“ಕಾಲಾಪತ್ಥರ್” ಚಿತ್ರ ಚೆನ್ನಾಗಿ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ತಿಳಿಸುತ್ತೇವೆ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ.
ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿ ಬಂದ “ತಿಮ್ಮನ ಮೊಟ್ಟೆಗಳು” ಚಿತ್ರಕ್ಕೆ ಸೆನ್ಸಾರ್ “ಯು” ಸರ್ಟಿಫಿಕೇಟ್ ನೀಡಿದೆ. ಆದರ್ಶ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನವಿದೆ.
ನಿರ್ದೇಶಕರೆ ಬರೆದ “ಕಾಡಿನ ನೆಂಟರು” ಎಂಬ ಕಥಾ ಸಂಕಲನದಿಂದ ಆಯ್ದ ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.
ಚಿತ್ರದಲ್ಲಿ ಶೃಂಗೇರಿಯ ರಂಗ ಪ್ರತಿಭೆ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ರಾಘು ರಾಮನಕೊಪ್ಪ, ಪ್ರಗತಿ ಪ್ರಭು, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರು ನಟಿಸಿದ್ದಾರೆ.
ಪ್ರವೀಣ್. ಎಸ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜ್ ಅವರ ಸಂಕಲನ ಹಾಗೂ ಹೇಮಂತ್ ಜೋಯ್ಸ್ ಸಂಗೀತ ಚಿತ್ರಕ್ಕಿದೆ. ರಕ್ಷಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿರುವ ಮೂರು ಹಾಡುಗಳಿಗೆ ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ದನಿಯಾಗಿದ್ದಾರೆ.
ಮನುಷ್ಯನ ನಂಬಿಕೆ ಮತ್ತು ಆತನ ಆಚರಣೆಗಳ ಮೇಲೆ ಕೇಂದ್ರೀಕೃತವಾಗಿರುವ ಕಥಾವಸ್ತುವನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸುತ್ತಲಿನ ಹಲವು ಸುಂದರ ಜಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಇದೀಗ ಮೇಕಿಂಗ್ ಟೀಸರ್ ಬಿಡುಗಡೆ ಮಾಡಿರುವ ಚಿತ್ರ ತಂಡ ಮಾರ್ಕೆಟಿಂಗ್ ಕೆಲಸದಲ್ಲಿ ತೊಡಗಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ತಯ್ಯಾರಿ ನಡೆಸಿದೆ.
ತಮ್ಮ ನಟನೆಯಿಂದ ಜನಮನ ಗೆದ್ದ ನಟ ಚಿರಂಜೀವಿ ಸರ್ಜಾ. ಚಿಕ್ಕ ವಯಸ್ಸಿನಲ್ಲೇ ಅವರು ಎಲ್ಲರನ್ನೂ ಬಿಟ್ಟು ಹೋಗಿದ್ದು ನೋವಿನ ವಿಷಯ. ಚಿರು ತಮ್ಮ ನಿಧನಕ್ಕೂ ಮುಂಚೆ “ರಾಜಮಾರ್ತಾಂಡ” ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಚಿತ್ರೀಕರಣ ಸಹ ಮುಕ್ತಾಯವಾಗಿತ್ತು. ಆದರೆ ಡಬ್ಬಿಂಗ್ ಮಾತ್ರ ಬಾಕಿಯಿತ್ತು. ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಸರ್ಜಾ ಧ್ವನಿ(ಡಬ್ಬಿಂಗ್) ನೀಡಿದರು. ಚಿತ್ರವನ್ನು ಪೂರ್ಣ ಮಾಡಲು ಮೇಘನಾರಾಜ್ ಸರ್ಜಾ ಅವರು ನೀಡಿದ ಸಹಕಾರ ಮರೆಯಯವಂತಿಲ್ಲ.
ಶಿವಕುಮಾರ್ ಅವರು ನಿರ್ಮಿಸಿರುವ, ರಾಮನಾರಾಯಣ್ ನಿರ್ದೇಶಿಸಿರುವ ಹಾಗೂ ಚಿರಂಜೀವಿ ಸರ್ಜಾ ನಾಯಕನಾಗಿ ನಟಿಸಿರುವ “ರಾಜ ಮಾರ್ತಾಂಡ” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಅಣ್ಣ ಚಿರು ಎಂದರೆ ತಮ್ಮ ಧ್ರುವ ಅವರಿಗೆ ತುಂಬಾ ಪ್ರೀತಿ. ಹಾಗಾಗಿ “ರಾಜ ಮಾರ್ತಾಂಡ” ಚಿತ್ರವನ್ನು ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ದಿನದಂದು ಬಿಡುಗಡೆ ಮಾಡಲು ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧರಿಸಿದ್ದಾರೆ.
ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚತ್ರಕ್ಕಿದೆ.
ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ‘ಲೈನ್ ಮ್ಯಾನ್’. ಟಕ್ಕರ್ ಹಾಗೂ ರನ್ ಆಂಟೋನಿ ಚಿತ್ರ ನಿರ್ದೇಶಿಸಿದ್ದ ರಘು ಶಾಸ್ತ್ರಿ ಈ ಚಿತ್ರದ ಸಾರಥಿ. ಈಗಾಗಲೇ ಶೂಟಿಂಗ್ ಮುಗಿಸಿರುವ ಲೈನ್ ಮ್ಯಾನ್ ಸೆನ್ಸಾರ್ ಪಾಸಾಗಿದ್ದು, ಯು ಸರ್ಟಿಫಿಕೇಟ್ ಸಿಕ್ಕಿದೆ.
ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ಲೈನ್ ಮ್ಯಾನ್ ಸಿನಿಮಾಗೆ ತ್ರಿಗುಣ್ ನಾಯಕ. ಆರ್.ಜಿ.ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಇದು ನಾಯಕನಾಗಿ ಚೊಚ್ಚಲ ಹೆಜ್ಜೆ. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದು, ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದ್ದಾರೆ.
ಹಳ್ಳಿ ಕಡೆ ದಿನಾ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ಸಂಬಂಧಿಸಿ ತೊಂದರೆ ಸರಿಪಡಿಸುವ ‘ಲೈನ್ ಮ್ಯಾನ್’ ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ ‘ಲೈನ್ ಮ್ಯಾನ್’ ಪಾತ್ರದಲ್ಲಿದ್ದಾರೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ.
ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ. , ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಚಾಮರಾಜನಗರ ಚಂದಕವಾಡಿ ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಸೆನ್ಸಾರ್ ಪಾಸಾಗಿರುವ ಲೈನ್ ಮ್ಯಾನ್ ಅಕ್ಟೋಬರ್ ಮೊದಲ ವಾರ ತೆರೆಗೆ ಬರಲಿದೆ
ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್ ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.
70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.
ಟೈಗರ್ ನಾಗೇಶ್ವರ್ ರಾವ್ ಅಕ್ಟೋಬರ್ 20ರಂದು ವಿಶ್ವಾದ್ಯಂತ ಬಾಕ್ಸಾಫೀಸ್ ಭೇಟೆಗಿಳಿಯಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ. ಕಾರ್ತಿಕೇಯ-2, ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಜ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ ಟೈಗರ್ ನಾಗೇಶ್ವರ್ ರಾವ್ ಚಿತ್ರ ನಿರ್ಮಿಸಿದ್ದಾರೆ. ವಂಶಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಹಿರಿಯ ನಟ ರಾಘವೇದ್ರ ರಾಜ್ಕುಮಾರ್, ಶೃತಿ ಹಾಗು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಭಾವೈಕ್ಯತೆಯ ಸಂದೇಶ ಸಾರುವ, ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ “13”. ಇದೇ ತಿಂಗಳ 15ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆ ಕಾಣುತ್ತಿರುವ ಈ ಚಿತ್ರದಲ್ಲಿ ರಾಘಣ್ಣ ಅವರು ಮೋಹನ್ ಕುಮಾರ್ ಎಂಬ ಹಿಂದೂ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರೆ, ನಟಿ ಶೃತಿ ಅವರು ಸಾಹಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ.
ನಟ ರಾಗಣ್ಣ ಮಾತನಾಡಿ, ನಾನು ಈ ಕಥೆ ಕೇಳಬೇಕಾದರೆ ಅಲ್ಲಿ ನನಗೆ ನಾಯಕನ ಪಾತ್ರ ಕಾಣಲಿಲ್ಲ, ಒಂದು ಪಾತ್ರ ಕೊನೆ ವರೆಗೆ ಪ್ರೇಕ್ಷಕರನ್ನು ಕರೆದುಕೊಂಡು ಹೋಗುತ್ತೆ ಅದೇ ನನ್ನ ಪಾತ್ರ ಅನಿಸಿತು. ಈ ಚಿತ್ರದ ನಿಜವಾದ ಹೀರೋ ಅಂದರೆ ಕಂಟೆಂಟ್, ಈಗ ಜನರನ್ನು ಥೇಟರ್ ವರೆಗೂ ಕರೆದುಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿದೆ. ಈ ಚಿತ್ರದಲ್ಲಿ ನಾನೊಬ್ಬ ಹಿಂದೂ, ಶೃತಿ ಅವರು ಮುಸ್ಲಿಂ ಮಹಿಳೆ, ಈತ ಅಲ್ಲಾ ಕಾಪಾಡು ಅಂದರೆ, ಆಕೆ ಕೃಷ್ಣಾ ಕಾಪಾಡು ಅನ್ನುತ್ತಾಳೆ. ಚಿತ್ರದಲ್ಲಿ ಇಬ್ಬರೂ ತಮ್ಮ ಜಾತಿ, ಧರ್ಮವನ್ನು ಬಿಟ್ಟು ಒಂದಾಗಿಬಿಡ್ತಾರೆ. ಅದೇ ನನಗೆ ಇಷ್ಟವಾಗಿದ್ದು ಎಂದು ಹೇಳಿದರು.
ನಿರ್ದೇಶಕ ನರೇಂದ್ರಬಾಬು ಮಾತನಾಡಿ, ಚಿಕ್ಕವನಿದ್ದಾಗ ಅಣ್ಣಾವ್ರ ಸಿನಿಮಾ ನೋಡಲು ಕ್ಯೂನಲ್ಲಿ ನಿಲ್ತಿದ್ದ ನಾನು ಈಗ ಅವರ ಪಕ್ಕದಲ್ಕಿ ಕುಳಿತಿರುವುದು ನನ್ನ ಅದೃಷ್ಟ. ನಮ್ಮ ಚಿತ್ರ 6 ದಿನಗಳ ಹಬ್ಬ, ಇದು 5ನೇ ಹಬ್ಬ, ಸಿನಿಮಾ ನಾವಂದುಕೊಂಡಿದ್ದಕ್ಕಿಂತಲೂ ಅದ್ಭುತವಾಗಿ ಮೂಡಿ ಬಂದಿದೆ. 13 ಕೋಟಿ ಹಣದ ಸುತ್ತ ನಡೆಯುವ ಕಥೆಯಿದು. ನಿಜವಾಗಿಯೂ ಈ ಚಿತ್ರವನ್ನು ನಾನು ಮಾಡಿದ್ದಲ್ಲ. ಆ ದೇವರೇ ನನ್ನಿಂದ ಮಾಡಿಸಿದ್ದು, ಇವತ್ತಿನವರೆಗೂ ಚಿತ್ರದ ಕೊನೆಗೆ ಏನಾಗುತ್ತೆ ಅಂತ ಯಾರಿಗೂ ಗೊತ್ತಿಲ್ಲ, ಎಲ್ಲರಿಗೂ ಅವರವರ ಪಾತ್ರ ಮಾತ್ರವೇ ಗೊತ್ತು. ಪಾರ್ಟ್ 2ಗೆ ಕಥೆ ರೆಡಿ ಇದೆ. ಹಾಡು, ಟೀಸರನ್ನು ನೋಡಿದವರೆಲ್ಲರೂ ಇಷ್ಟಪಟ್ಟಿದ್ದಾರೆ. ಚಿತ್ರದ ಬಗ್ಗೆ ಈವರೆಗೂ ಯಾರಿಂದಲೂ ಒಂದಾದರೂ ನೆಗೆಟಿವ್ ಮೆಸೇಜ್ ಬಂದಿಲ್ಲ.
ಎಲ್ಲರೂ ಯಾವಾಗ ಸಿನಿಮಾ ಬರುತ್ತೆ ಅಂತಾನೇ ಕೇಳ್ತಿದಾರೆ. ಇದು ನನ್ನ ನಿರ್ದೇಶನದ ಎಂಟನೇ ಸಿನಿಮಾ, ಆದರೂ ಒಂದು ಕಡೆ ಭಯ ಅನ್ನೋದು ಇರುತ್ತೆ. ಐಟಂ ಸಾಂಗ್, ಡ್ರಿಂಕ್ಸ್ ಸೀನ್ ಇರೋದ್ರಿಂದ ಯಾವುದೇ ಕಟ್ ಹೇಳದೆ ಚಿತ್ರಕ್ಕೆ ಯು/ಎ ಕೊಟ್ಟಿದ್ದಾರೆ. ನಿರ್ಮಾಪಕರೂ ತುಂಬಾ ಸಪೋರ್ಟ್ ಮಾಡುತ್ತಿದ್ದಾರೆ. ಕೊನೆ ಹಂತಕ್ಕೆ ಕಥೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಾಗ ಪಾರ್ಟ್ -1, ಪಾರ್ಟ್- 2 ಆಯ್ತು. ಆ ಥಾಟ್ ಮಾತ್ರ ಕಂಟಿನ್ಯೂ ಆಗುತ್ತೆ. ಮುಖ್ಯ ಪಾತ್ರಗಳು ಹಾಗೇ ಇರುತ್ತೆ. ನಿರ್ಮಾಪಕರಿಗೆ ಹೇಳಿದ ಮೇಲೇನೇ ಪಾರ್ಟ್ -1 ಅಂತ ಪೋಸ್ಟರ್ನಲ್ಲಿ ಹಾಕ್ಕೊಂಡಿರುವುದು.
ಚಿತ್ರದಲ್ಲಿ ಆಕ್ಷನ್ ಇಲ್ಲ, 3 ಕಮರ್ಷಿಯಲ್ ಸಾಂಗ್ ಇದ್ದು, ಸಂಗೀತ ನಿರ್ದೇಶಕ ಶೋಗನ್ಬಾಬು 19 ವರ್ಷದ ಹುಡುಗ, ಅದ್ಭುತವಾದ ಮ್ಯೂಸಿಕ್ ಕೊಟ್ಟಿದ್ದಾರೆ. ಪ್ರಮೋದ್ ಶೆಟ್ಟಿ ಅವರು ಬ್ಯುಸಿ ಇದ್ದರೂ ನಮಗೋಸ್ಕರ ಬಂದಿದ್ದಾರೆ. ನಾನು ಮುಸ್ತಫಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಒಂದು ಡೈಲಾಗ್ನಿಂದಲೇ ಸಿನಿಮಾ ಎಂಡ್ ಆಗುತ್ತೆ. ಜಯಸಿಂಹ ಅದ್ಭುತವಾದ ಸಂಭಾಷಣೆ ಬರೆದಿದ್ದಾರೆ. ರಾಗಣ್ಣ ಅವರನ್ನು ರಾತ್ರಿ 12 ಗಂಟೆಗೆಲ್ಲಾ ಉಳಿಸಿಕೊಂಡು ಶೂಟಿಂಗ್ ಮಾಡಿದ್ದೇವೆ ಎಂದು ಹೇಳಿದರು. ನಿರ್ಮಾಪಕರಲ್ಲೊಬ್ಬರಾದ ಸಂಪತ್ ಮಾತನಾಡಿ, ಕಾತುರದಿಂದ ಕಾದಂಥ ಸಿನಿಮಾ. ಚೆನ್ನಾಗಿ ಬಂದಿದೆ. ದೊಡ್ಡಮಟ್ಟದಲ್ಲಿ ರಿಲೀಸ್ ಮಾಡುತ್ತಿದ್ದೇವೆ. ಜಾಕ್ ಮಂಜು ಅವರು ಡಿಸ್ಟ್ರಿಬ್ಯೂಷನ್ ಮಾಡುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಿಂದ ಟ್ಯಾಬುಲೋ ಎಲ್ಲಾ ಕಡೆ ಹೋಗ್ತಿದೆ ಎಂದರು. ಉಳಿದಂತೆ ಮಂಜುನಾಥ ಗೌಡ, ಮಂಜುನಾಥ್ ಹೆಚ್.ಎಸ್. ಕೇಶವಮೂರ್ತಿ ಸಿ. ಚಿತ್ರದ ಕುರಿತಂತೆ ಮಾತನಾಡಿದರು.
ನಂತರ ನಟ ಪ್ರಮೋದ್ ಶೆಟ್ಟಿ ಮಾತನಾಡಿ, ನಿರ್ಮಾಪಕರು ಚಿತ್ರದ ಜೊತೆಗೆ ಸೋಷಿಯಲ್ ವರ್ಕ್ ಮಾಡುತ್ತಿರುವುದು ಕೇಳಿ ತುಂಬಾ ಖುಷಿಯಾಯ್ತು. ರಾಗಣ್ಣ, ಶೃತಿ ಅವರ ಸಿನಿಮಾದಲ್ಲಿ ನಾನಿರುವುದೇ ಖುಷಿಯ ವಿಚಾರ, ನಾನು ನಿಮ್ಮ ಮುಖಕ್ಕೆ ಹೊಗೆ ಬಿಡುವ ಸೀನ್ ಮಾಡಲ್ಲ ಆಂದಾಗ ರಾಗಣ್ಣ ಅವರೇ ಯಾಕೆ ಮಾಡಲ್ಲ ಅಂತ ನನ್ನನ್ನು ಹುರಿದುಂಬಿಸಿದರು. ಅವರು ತಮ್ಮ ಜೊತೆಯಲ್ಲಿ ಆಕ್ಟ್ ಮಾಡುವವರನ್ನು ಮೋಟಿವೇಟ್ ಮಾಡುತ್ತಾರೆ ಎಂದು ಹೊಗಳಿದರು. ಉಳಿದಂತೆ ಲೋಕೇಶ್, ದಿಲೀಪ್ ಪೈ, ವಿನಯ ಸೂರ್ಯ ಮಾತನಾಡಿದರು.
ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜೈರಾಮ್ ನಿರ್ದೇಶನದಲ್ಲಿ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸುತ್ತಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಸೆಪ್ಟೆಂಬರ್ 7 ನಾಯಕ , ಶೈಲೇಂದ್ರ ಹುಟ್ಟುಹಬ್ಬ. ಅದೇ ದಿನ “ಚೇಸರ್” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸುಮಂತ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡಲು ಚಿತ್ರತಂಡ ಮುಂದಾಗಿದೆ.
ಸಸ್ಪೆನ್ಸ್ ವಿತ್ ಆಕ್ಷನ್ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ಎಂ.ಜೈರಾಮ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸುತ್ತಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.