Categories
ಸಿನಿ ಸುದ್ದಿ

ಶೆಟ್ಟರ ಅಧಿಕ ಪ್ರಸಂಗ! ಹೊಸ ಸಿನಿಮಾದ ಫಸ್ಟ್ ಲುಕ್ ನಲ್ಲಿ ಪ್ರಮೋದ್ ಶೆಟ್ಟಿ ಶೈನಿಂಗ್

ಸ್ಯಾಂಡಲ್‌ವುಡ್‌ನ ಭರವಸೆಯ ಕಲಾವಿದರಲ್ಲಿ ಪ್ರಮೋದ್ ಶೆಟ್ಟಿ ಕೂಡ ಒಬ್ಬರು. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತು ಮಡಿಕೆ, ಕಾಂತಾರ ಹೀಗೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಅನ್ನೋ ಸಿನಿಮಾದಲ್ಲಿ ಹೀರೋ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಪ್ರಮೋದ್ ಶೆಟ್ಟಿ ಹೊಸದೊಂದು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಎಂಬ ಶೀರ್ಷಿಕೆ ಇಡಲಾಗಿದೆ. ಪ್ರಮೋದ್ ಶೆಟ್ಟಿ ಹುಟ್ಟುಹಬ್ಬ..ಅವರ ಜನ್ಮದಿನದ ಅಂಗವಾಗಿ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರವು ಒಂದು ಊರಿನಲ್ಲಿ ಆದ ಅಪಾರ್ಥವೂ ಅನಾಹುತವಾಗಿ, ಅನಾಹುತವು ಅಧಿಕ ಪ್ರಸಂಗವಾಗಿ ನಡೆಯುವ ಘಟನೆಗಳ ಸುತ್ತ ಸಿನಿಮಾ ಸಾಗುತ್ತದೆ. ವಡ್ಡಾರಾಧಕ ಹಾಗೂ ಶಬರಿ ಎನ್ನುವ ಎರಡು ಕಿರು ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ಪ್ರತಿಭೆ ಅನೀಶ್ ಶರ್ಮ ಆಕ್ಷನ್ ಕಟ್ ಹೇಳಿದ್ದಾರೆ. ರಾಘು ಶಿವಮೊಗ್ಗ, ಕಿರಣ್ ನಾಯಕ್, ಮಂಜುನಾಥ್ ಹೆಗಡೆ, ಕೆಜಿ ಕೃಷ್ಣಮೂರ್ತಿ ಚಂದ್ರಕಲಾ ಚಿತ್ರದ ಭಾಗವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಇಡುವಾಣಿ ಎನ್ನುವ ಒಂದು ಹಳ್ಳಿಯಲ್ಲಿ ಚಿತ್ರವನ್ನು ಚಿತ್ರಿಸಿದ್ದು ಇಡೀ ಊರಿಗೆ ಊರನ್ನೇ ಸಿನಿಮಾ ಸೆಟ್ಟನ್ನಾಗಿಸಿಕೊಂಡು ಊರು ಜನಗಳನ್ನೇ ಉಪಯೋಗಿಸಿಕೊಂಡು ಚಿತ್ರವನ್ನು ಚಿತ್ರೀಕರಿಸಲಾಗಿದೆ. ಸುಮತ್ ಶರ್ಮಾ ಛಾಯಾಗ್ರಹಣ, ಸಂಜೀವ್ ಜಾಗೀರ್ದಾರ್ ಸಂಕಲನ, ಚೇತನ್ ಕುಮಾರ್ ಸಂಗೀತ ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರಕ್ಕಿದೆ.

ಗನ್ನಿ ಬ್ಯಾಗ್ ಸ್ಟುಡಿಯೋ ಪ್ರೊಡಕ್ಷನ್ ನಡಿ ಚಿತ್ತರಂಜನ್ ಕಶ್ಯಪ್, ವಲ್ಲಭ್ ಸೂರಿ, ಸುನಿತ್ ಹಲಗೇರಿ ನಿರ್ಮಾಣ ಮಾಡಿದ್ದು, ಊರ್ ಮನೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

Categories
ಸಿನಿ ಸುದ್ದಿ

ಯುವಕರಿಗೊಂದು ಹೊಸ ಕ್ರೇಜ್: ಕ್ರೇಜಿ ಕೀರ್ತಿ ಸಿನಿಮಾ ಟ್ರೇಲರ್ ರಿಲೀಸ್

ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು‌ ಬಂದಿವೆ. ಆ ಸಾಲಿಗೆ ಈಗ ‘ಕ್ರೇಜಿ ಕೀರ್ತಿ’ ಎಂಬ ಸಿನಿಮಾ‌ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ.

ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ. ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದಿದೆ.

ನಿರ್ದೇಶಕ, ನಿರ್ಮಾಪಕರಾಗಿರುವ ಬಾಲಾಜಿ ಮಾಧವ ಶೆಟ್ಟಿ ಮಾತನಾಡಿ, ಇದು ಮೊದಲ ಸಿನಿಮಾ. ಸಾಕಷ್ಟು ಶ್ರಮ ವಹಿಸಿ ಸಿನಿಮಾ‌ ಮಾಡಿದ್ದೇವೆ. ಇದೊಂದು ಯುವಜನತೆಯ ಮೇಲೆ ಮಾಡಿರುವ ಸಿನಿಮಾ. ಕಾಲೇಜಿನ ವಿದ್ಯಾರ್ಥಿಗಳ ಲೈಫ್ ಸ್ಟೈಲ್ ಕುರಿತ ಕಥೆ ಇದೆ. ಒಂದೊಳ್ಳೆಯ ರೊಮ್ಯಾಂಟಿಕ್ ಕಥಾಹಂದರ ಸಿನಿಮಾದಲ್ಲಿದೆ. ಮನಸ್ಸಿಗೆ ಇಷ್ಟವಾಗುವಂತಹ ಹಾಡುಗಳು ಸಿನಿಮಾದ ಪ್ಲಸ್.

ಇನ್ನು, ಈ ಸಿನಿಮಾ ಇಷ್ಟೊಂದು‌ ಚೆನ್ನಾಗಿ ಮೂಡಿ ಬರಲು ಕಾರಣ ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್. ಅವರಿಗೆ ಇಲ್ಲೊಂದು ವಿಶೇಷ ಎನಿಸುವ ಪಾತ್ರವಿದೆ. ಪಾತ್ರದ ಜೊತೆಗೆ ಸಿನಿಮಾ ಹೇಗೆ ಬರಬೇಕು, ಹೇಗಿರಬೇಕು ಎಂಬ ವಿಷಯಗಳ ಬಗ್ಗೆ ತಿಳಿಹೇಳುವ ಮೂಲಕ ಓಂ ಪ್ರಕಾಶ್ ರಾವ್ ಸಿನಿಮಾ ಅಚ್ಚುಕಟ್ಟಾಗಿ ಮೂಡಿ ಬರಲು ಕಾರಣರಾಗಿದ್ದಾರೆ. ಈ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರಲಿ ಎಂದರು.

ಈ ಸಿನಿಮಾದಲ್ಲಿ ನನಗೆ ಕೆಲಸ ಮಾಡಲು ನಿರ್ದೇಶಕರು ಅವಕಾಶ ಕೊಟ್ಟಿದ್ದಾರೆ. ಮೊದಲು ಒಂದು ಪಾತ್ರವಿದೆ. ಅದನ್ನು ನೀವೆ ಮಾಡಬೇಕು ಅಂತ ಹೇಳಿದಾಗ, ಕಥೆ ಕೇಳಿದೆ. ಚೆನ್ನಾಗಿತ್ತು. ಒಪ್ಪಿಕೊಂಡೆ. ಇನ್ನು, ಕೊರೊನಾ ಸಮಯದಲ್ಲಿ ನನಗೆ ಈ ಸಿನಿಮಾದಲ್ಲಿ ಕೆಲಸ‌ ಮಾಡುವ ಅವಕಾಶ ಕೊಟ್ಟಿದ್ದು ವಿಶೇಷ. ಆ ಕಾರಣಕ್ಕೆ ನಾನು ಸಿನಿಮಾದ ತೆರೆಯ ಮೇಲೂ ಮತ್ತು ಹಿಂದೆಯೂ ಇದ್ದು, ಒಂದೊಳ್ಳೆಯ ಸಿನಿಮಾ ಆಗಲು ಅವರ ಜೊತೆ ಕೈ ಜೋಡಿಸಿದ್ದೇನೆ ಎಂದು ಓಂಪ್ರಕಾಶ್ ರಾವ್ ತಿಳಿಸಿದರು.

ಹೀರೋ ಅಭಿಲಾಶ್ ಅವರಿಗೆ ಒಳ್ಳೆಯ ಭವಿಷ್ಯವಿದೆ. ಎಲ್ಲರೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ‌ ಮಾಡಿದ್ದಾರೆ. ಸಿನಿಮಾ ಯಶಸ್ಸು ಕಾಣಲಿ ಎಂದುವ ಓಂ ಪ್ರಕಾಶ್ ರಾವ್ ಹಾರೈಸಿದರು.

ನಾಯಕ ಅಭಿಲಾಶ್ ಮಾತನಾಡಿ, ಇಲ್ಲಿ ಸಾಕಷ್ಟು ಟ್ವಿಸ್ಟ್ ಗಳಿವೆ. ಇದು ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲ, ಎಲ್ಲಾ ವರ್ಗದವರು ನೋಡಬಹುದಾದ ಸಿನಿಮಾ. ಮನರಂಜನೆಗೆ ಇಲ್ಲಿ ಸಾಕಷ್ಟು ಜಾಗವಿದೆ. ಕ್ರೇಜಿ ಹುಡುಗಿ ಏನೆಲ್ಲಾ ಮಾಡುತ್ತಾಳೆ ಎಂಬುದನ್ನು‌ ಸಿನಿಮಾದಲ್ಲೇ ನೋಡಬೇಕು ಎಂದರು‌.

ನಾಯಕಿ ಸಾರಿಕ ರಾವ್ ಅವರಿಗೆ ಇಲ್ಲಿ‌ ಲವಲವಿಕೆಯ ಪಾತ್ರ ಇದೆಯಂತೆ. ಕೀರ್ತಿ ಎಂಬುದು ಅವರ ಪಾತ್ರದ ಹೆಸರು. ಅವರೇ ಹೇಳುವಂತೆ, ಸಿನಿಮಾದಲ್ಲಿ‌ ಸಾಕಷ್ಟು ಅನುಭವ ಆಗಿದೆ. ಓಂ ಪ್ರಕಾಶ್ ರಾವ್ ಅವರಿಂದ ಸಾಕಷ್ಟು ತಿಳಿದುಕೊಳ್ಳಲು ಸಾಧ್ಯವಾಗಿದೆ. ಅವರಿಲ್ಲಿ ಕ್ರಿಯೇಟಿವ್ ಡೈರೆಕ್ಟರ್ ಆಗಿ ಕೆಲಸ‌ ಮಾಡಿದ್ದಾರೆ. ಹೊಸತನ ಕಥೆ ಇಲ್ಲಿದೆ. ಹೊಸ ಜಾನರ್ ಸಿನಿಮಾಗೆ ನಿಮ್ಮೆಲ್ಲರ ಪ್ರೋತ್ಸಾಹ ಬೇಕು ಎಂದರು.

ಸಂಗೀತ ನಿರ್ದೇಶನ ಮಾಡಿರುವ ಲಯ ಕೋಕಿಲ ಅವರು, ಇಲ್ಲಿ ಎರಡು ಹಾಡು ಹಾಗು ಹಿನ್ನೆಲೆ ಸಂಗೀತ ನೀಡಿದ ಬಗ್ಗೆ ಮಾತಾಡಿದರು.

ಮತ್ತೊಬ್ಬ ನಾಯಕಿ ರಿಶಾ ಗೌಡ ಅವರಿಗೆ ಇದು‌ ಮೊದಲ ಸಿನಿಮಾ. ಅವರ ಪಾತ್ರದ ಬಗ್ಗೆ ಹೆಚ್ಚೇನೂ ಹೇಳದ ಅವರು, ಆ ಪಾತ್ರ ಸಿನಿಮಾದ ಹೈಲೆಟ್. ಅದನ್ನು‌ ಸಿನಿಮಾದಲ್ಲೇ ನೋಡಬೇಕು ಎಂದರು ರಿಶಾ ಗೌಡ.

ಸಂದೀಪ್ ಮಾಧವ ಶೆಟ್ಟಿ ಇತರರು ಇದ್ದರು. ಚಿತ್ರದಲ್ಲಿ ರಂಗಾಯಣ ರಘು, ಪದ್ಮಜಾ ರಾವ್, ಪ್ರಕಾಶ್ ಶೆಣೈ, ಆಶಾ ಸುಜಯ್ ಇತರರು ಇದ್ದಾರೆ. ಮನೋಹರ ಅವರ ಛಾಯಾಗ್ರಹಣವಿದೆ. ಲಕ್ಷ್ಮಿನಾರಾಯಣ ರೆಡ್ಡಿ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಜವಾನ್ ಟ್ರೇಲರ್ ರಿಲೀಸ್; ಇನ್ಸ್ಟಾಗ್ರಾಮ್ ನಲ್ಲಿ ಬಿಡುಗಡೆ ಮಾಡುವ ಮೂಲಕ ಸೋಷಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟ ನಯನತಾರಾ

ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಬಿಡುಗಡೆಗೆ ಇನ್ನೊಂದೇ ವಾರವಿದ್ದರೂ, ಚಿತ್ರದ ಟ್ರೇಲರ್ ಬಿಡುಗಡೆಯಾಗಿಲ್ಲ ಎಂದು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗಾಗಿ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡಿದೆ.


ವಿಶೇಷವೆಂದರೆ, ಈ ಟ್ರೇಲರ್ ಬಿಡುಗಡೆ ಮಾಡಿರುವುದು ಚಿತ್ರದ ನಾಯಕಿ ನಯನತಾರಾ. ಇನ್ಸ್ಟಾಗ್ರಾಮ್ ನಲ್ಲಿ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಯನತಾರಾ ಸೋಷಿಯಲ್ ಮೀಡಿಯಾಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನೆಚ್ಚಿನ ನಟಿಯ ಚಿತ್ರವೊಂದರ ಟ್ರೇಲರ್ ಬಿಡುಗಡೆ ಆಗಿರುವುದು ಖುಷಿಯಾದರೆ, ನಯನತಾರಾ ಸೋಷಿಯಲ್ ಮೀಡಿಯಾಗೆ ಬಂದಿರುವುದು ಅವರ ಅಭಿಮಾನಿಗಳ ಖುಷಿಯನ್ನು ಇನ್ನಷ್ಟು ಹೆಚ್ಚಿಸಿದೆ.


ಈ ಟ್ರೇಲರ್ ನಲ್ಲಿ ರೋಚಕವೆನಿಸುವಂತಹ ಸಾಹಸಮಯ ದೃಶ್ಯಗಳು, ಎದೆ ಝಲ್ಲೆನಿಸುವ ಆಕ್ಷನ್ ದೃಶ್ಯಗಳು ಹೆಚ್ಚಿದ್ದು, ‘ಜವಾನ್’ ಪ್ರಪಂಚವನ್ನು ತೆರೆದಿಟ್ಟಿದೆ. ಕಣ್ಣು ಸೆಳೆಯುವ ದೃಶ್ಯಗಳಿರುವ ಈ ಟ್ರೇಲರ್ ಪ್ರೇಕ್ಷಕರ ನಿರೀಕ್ಷೆಗಳನ್ನು ಇನ್ನಷ್ಟು ಹೆಚ್ಚಾಗಿಸಿದ್ದು, ಚಿತ್ರ ಬಿಡುಗಡೆಗೆ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.


‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ನಡಿಯಲ್ಲಿ ಗೌರಿ ಖಾನ್ ನಿರ್ಮಿಸಿದರೆ, ಗೌರವ್ ವರ್ಮ ಸಹನಿರ್ಮಾಪಕರಾಗಿದ್ದಾರೆ. ಚಿತ್ರವು ಸೆ.07ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ಗುರುರಾಯರ ಸನ್ನಿಧಿಯಲ್ಲಿ ಚಿನ್ನದ‌ ಮಲ್ಲಿಗೆ ಹೂವು!

ಇತ್ತೀಚಿಗೆ ಟೈಟಲ್ ಮೂಲಕವೇ ಬಾರಿ ಸುದ್ದಿ ಮಾಡಿದ ಚಿತ್ರ ಚಿನ್ನದ ಮಲ್ಲಿಗೆ ಹೂವೇ ಈ ಸಿನಿಮಾ ತಂಡ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ಬಳಿಯಲ್ಲಿ ಸ್ಕ್ರಿಪ್ಟ್ ಪೂಜೆ ಸಲ್ಲಿಸಿ ರಾಯರ ಅನುಗ್ರಹಕ್ಕೆ ಪಾತ್ರರಾದರು.

ಈ ಪೂಜೆಯಲ್ಲಿ ರಾಜ್ ಕುಮಾರ್ ಅವರ ಪುತ್ರಿ ಲಕ್ಷ್ಮೀ ಗೋವಿಂದ ರಾಜು, ಹಾಗೂ ಎಸ್. ಎ.ಗೋವಿಂದ ರಾಜು ಸಿನಿಮಾದ ನಾಯಕ ನಟರಾದ ಷಣ್ಮುಖ ಗೋವಿಂದ, ನಿರ್ಮಾಪಕರಾದ ಶ್ವೇತಾ ಶೆಟ್ಟಿ, ನಿರ್ದೇಶಕರಾದ ನವಿಲುಗರಿ ನವೀನ್ ಪಿ ಬಿ ಕಲಾವಿದರಾದ ಅನಿಲ್, ಲಲಿತ್ ಇನ್ನೂ ಅನೇಕರು ಪೂಜೆಯಲ್ಲಿ ಭಾಗವಾಹಿಸಿ ಗುರುಗಳಿಂದ ಆಶೀರ್ವಾದ ಪಡೆದರು.

ಈ ಚಿತ್ರವನ್ನು ತೀರ್ಥಹಳ್ಳಿ, ಆಗುಂಬೆ, ಮಲೆನಾಡು, ಶಿವಮೊಗ್ಗ, ಬೆಂಗಳೂರು ಪ್ರದೇಶಗಳಲ್ಲಿ ಶೂಟಿಂಗ್ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಛಾಯಾಗ್ರಹಣವನ್ನು ವಿ ಆರ್ ಚಂದ್ರು ಮತ್ತು ಪ್ರಮೋದ್ ಆರ್ ಇಬ್ಬರು ಮಾಡುತ್ತಿದ್ದಾರೆ.

ಸಂಕಲನವನ್ನು ಮಧು ತುಂಬಕೆರೆ ಮಾಡಿದರೆ ಸಂಗೀತವನ್ನು ಪ್ರಣವ್ ಸತೀಶ್ ನೀಡುತ್ತಿದ್ದರೆ ಸೆಪ್ಟಂಬರ್ ನಿಂದ ಶೂಟಿಂಗ್ ಶುರುವಾಗಲಿದೆ ಎಂದು ಚಿತ್ರ ತಂಡ ತಿಳಿಸಿದರು

Categories
ಸಿನಿ ಸುದ್ದಿ

ದಶಕದ ಬಳಿಕ ಕಿಚ್ಚ‌ ನಿರ್ದೇಶಕ! ಕೆಆರ್ ಜಿ ಸ್ಟುಡಿಯೋಸ್ ಕೆಕೆ ಸಿನಿಮಾ ನಿರ್ಮಾಣ; ಕಿಂಗ್ ಕಿಚ್ಚನ ಹವಾ ಶುರು ಗುರು

ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ಸುದೀಪ್ ಅವರು (ಸೆಪ್ಟೆಂಬರ್ 02) ಶನಿವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಈ ಚಿತ್ರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆ’ ಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.

ಸುದೀಪ್ ನಿರ್ದೇಶನದಲ್ಲಿ ಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡುವ ಕಾರ್ತಿಕ್ ಗೌಡ, ‘’ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದ್ದು, ಅವರು ನಟನೆಯ ಜೊತೆಗೆ ನಿರ್ದೇಶನ ಸಹ ಮಾಡುತ್ತಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ’ ಎನ್ನುತ್ತಾರೆ.

Categories
ಸಿನಿ ಸುದ್ದಿ

ಸ್ಟಾರ್ ಡೈರೆಕ್ಟರ್- ಸ್ಟಾರ್ ನಟ- ಸ್ಟಾರ್ ರೈಟರ್! ಇದು ಆರ್.ಚಂದ್ರು ಸಿನಿಮಾ! ಸುದೀಪ್ ಹೀರೋ: ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್

ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದಾರೆ. ಆರ್. ಚಂದ್ರು ಆಕ್ಷನ್ ಕಟ್ ಹೇಳಲಿದ್ದಾರೆ

ಆರ್. ಚಂದ್ರು ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಆರ್.ಚಂದ್ರು ಸದಾ ಒಂದಿಲ್ಲೊಂದು ಸಾಹಸಕ್ಕೆ‌ ಕೈ ಹಾಕುತ್ತಲೇ ಇರುತ್ತಾರೆ. ಅಂದರೆ, ನಿರ್ದೇಶನದ ಜೊತೆ ನಿರ್ಮಾಣದಲ್ಲೂ ಸೈ ಎನಿಸಿಕೊಂಡವರು. ಮೊದಲ ಬಾಲ್ ನಲ್ಲೇ ಸಿಕ್ಸರ್ ಬಾರಿಸಿದಂತೆ ಮೊದಲ ನಿರ್ದೇಶನದ ಸಿನಿಮಾದಲ್ಲೇ ಭರ್ಜರಿ ಗೆಲುವು ಕಂಡವರು. ಅಷ್ಟೇ ಅಲ್ಲ, ಮೊದಲ ನಿರ್ಮಾಣದ ಸಿನಿಮಾ ಮೂಲಕವೂ ಯಶಸ್ಸು ಕಂಡಿದ್ದು ಎಲ್ಲರಿಗೂ ಗೊತ್ತು.

ತಮ್ಮ ಕನಸಿನ ಕಬ್ಜ ಸಿನಿಮಾ ಮೂಲಕ ಸುದ್ದಿಯಾದವರು. ಮೂವರು ಸ್ಟಾರ್ ನಟರನ್ನು ಒಂದೇ ಸಿನಿಮಾದಲ್ಲಿ ತೋರಿಸುವ ಮೂಲಕ ಸುದ್ದಿಯಾದವರು.. ಈಗ ಮತ್ತೊಂದು ಹೊಸ ಸುದ್ದಿ ಮೂಲಕ ಸದ್ದು ಮಾಡುತ್ತಿದ್ದಾರೆ.

ಹೌದು, ಆರ್.ಚಂದ್ರು ಕಬ್ಜ ಸಿನಿಮಾದಲ್ಲಿ ಉಪೇಂದ್ರ, ಶಿವರಾಜ್ ಕುಮಾರ್ ಜೊತೆ ಸುದೀಪ್ ಅವರನ್ನು ನಿರ್ದೇಶಿಸಿದ್ದರು. ಈಗ ಸುದೀಪ್ ಅವರಿಗೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಸೆಪ್ಟೆಂಬರ್ 2 ಸುದೀಪ್ ಅವರ ಹುಟ್ಟು ಹಬ್ಬ. ಹಾಗಾಗಿ ಶುಕ್ರವಾರ ಮಧ್ಯರಾತ್ರಿ ಸುದೀಪ್ ಅವರ ಹೊಸ ಚಿತ್ರ ಅನೌನ್ಸ್ ಮಾಡಲು ಆರ್.ಚಂದ್ರು ನಿರ್ಧರಿಸಿದ್ದಾರೆ.

ಮೂವರು ದಿಗ್ಗಜರ ಚಿತ್ರ!

ಈ ಚಿತ್ರಕ್ಕೆ ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಇದೆ. ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್. ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ.

ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟು ಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.

ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನ ಇದಡ ಅಂದಮೇಲೆ ನಿರೀಕ್ಷೆ ಗ್ಯಾರಂಟಿ.

ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ.

ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ.

Categories
ಸಿನಿ ಸುದ್ದಿ

ಹೊಸಬರ ಅನಾವರಣ! ಅರ್ಜುನ್ ಯೋಗಿ-ಸಾರಿಕಾ ರಾವ್ ಸಿನಿಮಾದ ಸಾಂಗ್ ರಿಲೀಸ್

ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ ಜಿ, ರಚನಾ ಬಿ. ಹೆಚ್ ನಿರ್ಮಾಣದ ಅನಾವರಣ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏನಾಗಿದೆ ಎಂಬ ಪ್ರೇಮಗೀತೆಗೆ ಶಶಿಕುಮಾರ್ ಬೆಳವಾಡಿ ಸಾಹಿತ್ಯ ಬರೆದಿದ್ದು, ವಿಶಾಲ್ ಸಿ ಕೃಷ್ಣ ಟ್ಯೂನ್ ಹಾಕಿದ್ದಾರೆ. ಅರ್ಜುನ್ ಯೋಗಿ, ಸಾರಿಕಾ ರಾವ್ ಹಾಡಿನಲ್ಲಿ ಮಿಂಚಿದ್ದಾರೆ.

ನಿರ್ದೇಶಕ ಹರೀಶ್ ಕುಮಾರ್ ಮಾತನಾಡಿ, ಇದು ನಮ್ಮ ಹಲವಾರು ವರ್ಷದ ಕನಸು. ನಾನು 15 ವರ್ಷ ರಂಗಭೂಮಿಯಲ್ಲಿ ದುಡಿದೆವು. ಸಿನಿಮಾ ಸೆಳೆತ ಬಂತು. 40 ಕಿರುಚಿತ್ರ ನಿರ್ದೇಶಿಸಿದ್ದೇವೆ. ನಮ್ಮ ಕಥೆ ಒಳ್ಳೆ ಒಮ್ಮತ ಬಂತು. ಹೀಗಾಗಿ ಚಿತ್ರ ಮಾಡಲು ಹೆಜ್ಜೆ ಇಟ್ಟೆವು. ಚಿತ್ರದಲ್ಲಿ ಬರುವ ಹಲವಾರು ವಿಶೇಷತೆಗಳ ಅನಾವರಣ. ನಮ್ಮ ನಿರ್ದೇಶಕರ ಪಯಣಕ್ಕೆ ಅನಾವರಣ. ಒಳ್ಳೆ ಸಾಹಿತ್ಯದ ಅನಾವರಣ, ಇಬ್ಬರು ಬೆನ್ನುತಟ್ಟಿದ ನಿರ್ಮಾಪಕ ಅನಾವರಣ.. ನಮ್ಮದೇ ಕಥೆ ಅನಿಸುವ ಸಿನಿಮಾವಿದು ಎಂದರು.

ನಿರ್ದೇಶಕ ಮಂಜುನಾಥ್ ಮಾತನಾಡಿ, ತುಂಬಾ ಪ್ರೀತಿ ಮಾಡುವವರು, ತುಂಬಾ ಪ್ರೀತಿಯಾದರೆ ಯಾವ ರೀತಿ, ಕಾಟ, ಭಾದೆ ಇರುತ್ತದೆ ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದೇವೆ ಎಂದರು.

ಅರ್ಜುನ್ ಯೋಗಿ ಮಾತನಾಡಿ, ನನ್ನ ಹಿಂದಿನ ಸಿನಿಮಾ ಚೇಸ್ ನೋಡಿ ಕಾಲ್ ಮಾಡಿದ್ದರು. ಚಿತ್ರ ರಿಲೀಸ್ ದಿನ ನಮ್ಮ ಕೆಲಸ ನೋಡಿ ಮೆಚ್ಚಿ ಇನ್ನೊಂದು ಕೆಲಸ ಕೊಡ್ತಾರೆ ಅದೇ ಖುಷಿ ವಿಚಾರ. ಅನಾವರಣ ಚಿತ್ರಕ್ಕೆ ಇಬ್ಬರು ನಿರ್ದೇಶಕರು. ಅವರು ಏನ್ ಕಥೆ ಹೇಳಿದ್ದರು ಅದಕ್ಕಿಂತ ದುಪ್ಪಟ್ಟಾಗಿ ಸಿನಿಮಾ ಮೂಡಿಬಂದಿದೆ. ಗ್ಲಿಂಪ್ಸ್, ಟ್ರೇಲರ್ ನೋಡಿದ್ದೇನೆ. ಈ ತಂಡ ಗೆದ್ದರೆ ಇನ್ನೊಂದಿಷ್ಟು ಸಿನಿಮಾಗಳು ಹುಟ್ಟಿಕೊಳ್ಳುತ್ತದೆ. ತುಂಬಾ ಚೆನ್ನಾಗಿ ಕಥೆ ಕಟ್ಟಿದ್ದಾರೆ. ನನಗೆ ಬಹಳ ಇಷ್ಟವಾಗಿದೆ. ನಾನು ಸಾಫ್ಟ್ ವೇರ್ ಇಂಜಿನಿಯರ್ ಪಾತ್ರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ ಎಂದರು.

ನಟಿ ಸಾರಿಕಾ ಮಾತನಾಡಿ, ತುಂಬಾ ಪೊಸೆಸಿವ್ ನೆಸ್ ಆಗಿರುವ ಹುಡುಗಿ ಪಾತ್ರ ನನ್ನದು. ನಿಮಗೆ ಎಲ್ಲರಿಗೂ ಕೋಪ ಬರುತ್ತದೆ ಅಂತಹ ಕಾರೆಕ್ಟರ್. ಗಂಡ ಎಲ್ಲಿ ಹೋಗಲಿ ಬಿಡ್ಲಿ ಅವನಿಗೆ ಅಷ್ಟು ಟಾರ್ಚರ್ ಕೊಟ್ಟಾಗಿ ಬಿಟ್ಟಿದ್ದೇನೆ. ಶೂಟಿಂಗ್ ಸೆಟ್ ನಲ್ಲಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ದೇನೆ. ಶೂಟಿಂಗ್ ಅನಿಸುತ್ತನೆ ಇರಲಿಲ್ಲ. ಹಾಲಿಡೇ ತರ ಇತ್ತು. ಮಂಜು ಸರ್ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ನಿಮ್ಮ ಆಶೀರ್ವಾದ ನಮ್ಮ ಇಡೀ ತಂಡದ ಮೇಲೆ ಇರಬೇಕು ಎಂದರು.

ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ,ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರತಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ ತಾರಾಬಳಗದಲ್ಲಿದ್ದಾರೆ. ಆಗಿದೆ. ಹರೀಶ್ ಕುಮಾರ್, ಮಂಜುನಾಥ್ ಪಿಳ್ಳಪ್ಪ ಇಬ್ಬರು ಅನಾವರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ವೆಂಕಿ ಸಂಕಲನ, ಶಶಿಕುಮಾರ್ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ವಿಶಾಲ್ ಸಿ ಕೃಷ್ಣ ಸಿನಿಮಾಕ್ಕಿದೆ. ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಶೂಟಿಂಗ್ ಮುಗಿಸಿ ಸೆನ್ಸಾರ್ ಅಂಗಳ ಹೋಗಲು ರೆಡಿಯಾಗಿದೆ.

Categories
ಸಿನಿ ಸುದ್ದಿ

ಇದು ಹೊಸಬರ ಲವ್! ನಿರೀಕ್ಷೆಯ ಟ್ರೇಲರ್ ಬಂತು: ಅಕ್ಟೋಬರ್ 6ಕ್ಕೆ ರಿಲೀಸ್

ಈ ಹಿಂದೆ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಇದೀಗ ” ಲವ್” ಮಾಡಿದ ಖುಷಿಯಲ್ಲಿದ್ದಾರೆ. ಅಂದರೆ, ಲವ್ ಸಿನಿಮಾ ಮಾಡಿದ್ದಾರೆ.. ಶೀರ್ಷಿಕೆ ಹೇಳುವಂತೆ ಪ್ರೇಮ ಕಥಾಹಂದರದ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹಿಂದೂ ಹುಡುಗ ಹಾಗೂ ಮುಸ್ಲಿಂ ಹುಡುಗಿಯ ನಡುವೆ ಪ್ರೀತಿಗೆ ಮನೆಯವರು, ಇಡೀ ಸಮಾಜದವರು ಎದುರು ನಿಂತಾಗ ಏನಾಗುತ್ತದೆ ಎಂಬ ಸುತ್ತ ಟ್ರೇಲರ್ ಸಾಗುತ್ತದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಅತಿಥಿಗಳಾಗಿ ನಿರ್ದೇಶಕ ಸಂಘದ ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ನಾಗೇಂದ್ರ ಅರಸ್, ಖಜಾಂಚಿ ಮಂಜು, ನಟ ಅಮಿತ್, ನಿರ್ದೇಶಕ ಮಹೇಶ್ ಕುಮಾರ್ ಭಾಗಿಯಾಗಿದ್ದರು.

ಮಹೇಶ ಸಿ ಅಮ್ಮಳ್ಳಿದೊಡ್ಡಿ ಮಾತನಾಡಿ, ಹೊಸಬರಿಗೆ ಮಾಸ್ ಮೂವೀ ವರ್ಕ್ ಆಗುವುದಿಲ್ಲ ಎಂಬ ಕಾರಣ ಲವ್ ಜಾನರ್ ಮಾಡಿದ್ದೇನೆ. ಸಿನಿಮಾ ಈಗಾಗಲೇ ಸೆನ್ಸಾರ್ ಪಾಸಾಗಿದೆ. ನೈಜ ಘಟನೆಯಿಂದ ಪ್ರೇರೇಪಿತನಾಗಿ ಸಿನಿಮಾ ಮಾಡಿದ್ದೇನೆ. ಜನವರಿಗೆ ಶೂಟಿಂಗ್ ಶುರು ಮಾಡಿ ಮಾರ್ಚ್ ಗೆ ಮುಗಿಸಿದ್ದೇವೆ ಎಂದರು.

ಪ್ರಜಯ್ ಜಯರಾಮ್ ಮಾತನಾಡಿ, ಕಳೆದ ಏಳೆಂಟು ವರ್ಷಗಳಿಂದ ಇಂಡಸ್ಟ್ರೀಯಲ್ಲಿದ್ದೇನೆ. ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಲು ಬಂದಿದ್ದೆ. ಆದರೆ ನೀವೇ ಹೀರೋ ಅಂದರು ಖುಷಿಯಾಗಿತು. ಇದೇ ಅಕ್ಟೋಬರ್ 6ಕ್ಕೆ ಲವ್ ಸಿನಿಮಾ ರಿಲೀಸ್ ಆಗುತ್ತಿದೆ ಪ್ರತಿಯೊಬ್ಬರು ಬೆಂಬಲಿಸಿ ಎಂದರು.

ವೃಷ ಪಾಟೀಲ ಮಾತನಾಡಿ, ನಾನು ಉತ್ತರ ಕರ್ನಾಟಕದ ಹುಡುಗಿ. ಇದು ನನ್ನ ಮೊದಲ ಸಿನಿಮಾ. ಒಂದಷ್ಟು ಕಿರುಚಿತ್ರಗಳಲ್ಲಿ ನಟಿಸಿದ್ದೇನೆ. ಕಥೆ ಕೇಳಿದೆ ಇಷ್ಟವಾಯಿತು. ಸಿನಿಮಾ ಒಪ್ಪಿಕೊಂಡೆ ಎಂದು ತಿಳಿಸಿದರು.

ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಎರಡನೇ ಹೆಜ್ಜೆ. ಈ ಹಿಂದೆ ಮಹೇಶ ಓ ಎಂಬ ಹಾರರ್ ಚಿತ್ರ ನಿರ್ದೇಶಿಸಿದ್ದು, ಈಗ ಪ್ರೇಮಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ.

ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.

ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್ ಲವ್ ಚಿತ್ರ ನಿರ್ಮಿಸುತ್ತಿದ್ದು, ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಶಿವಪ್ರಸಾದ್ ಹಿನ್ನೆಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

ನೈಜ ಘಟನೆಯ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ, ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಅಕ್ಟೋಬತ್ 6ಕ್ಕೆ ಲವ್ ಸಿನಿಮಾ ತೆರೆಗೆ ಬರ್ತಿದ್ದು, ಪೊಗರು ಸಿನಿಮಾ ನಿರ್ಮಿಸಿದ್ದ ಬಿಕೆ ಗಂಗಾಧರ್ ರಾಜ್ಯಾದ್ಯಂತ ಚಿತ್ರ ವಿತರಣೆ ಮಾಡಲಿದ್ದಾರೆ.

Categories
ಸಿನಿ ಸುದ್ದಿ

ಭಾವಪೂರ್ಣ ಎಂಬ ಅರ್ಥಪೂರ್ಣ ಚಿತ್ರ: ರಮೇಶ್ ಪಂಡಿತ್ ಹೈಲೆಟ್

ಚೇತನ್ ಮುಂಡಾಡಿ ನಿರ್ದೇಶನದ, ಪ್ರಶಾಂತ್ ಅಂಜನಪ್ಪ ನಿರ್ಮಾಣದ ಹಾಗೂ ರಮೇಶ್ ಪಂಡಿತ್ ನಾಯಕರಾಗಿ ನಟಿಸಿರುವ “ಭಾವಪೂರ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂತರ ಚಿತ್ರದ ಕುರಿತು ತಂಡದ ಸದಸ್ಯರು ಮಾಹಿತಿ ನೀಡಿದರು.

” ಭಾವಪೂರ್ಣ” ಒಬ್ಬ ಮಧ್ಯ ವಯಸ್ಸು ಮೀರಿದ ಮುಗ್ಧನ ಭಾವ ತೀರ ಯಾನ. ಸಾವಿನಾಚೆಗೂ ತಾನು ಈ ಭೂಮಿ ಮೇಲೆ ಬದುಕಿದ್ದೆ ಅನ್ನೋ ಕುರುಹನ್ನು ಬಿಟ್ಟು ಹೋಗುವ ಪ್ರಯತ್ನ ಎಂದು ಕೊಂಡು ಪ್ರತಿ ಹೆಜ್ಜೆಯಲ್ಲೂ ಪಡುವ ಬವಣೆ, ಆಗುವ ಒದ್ದಾಟ, ಅವಘಡ ಮತ್ತು ಮನತಟ್ಟುವ ಮುಗ್ದ ತಮಾಷೆಗಳು.
ಇನ್ನೊಬ್ಬ ಯುವಕ. ಕನಸುಗಳಿಗೆ ಬಣ್ಣ ಹಚ್ಚಿ ಬದುಕನ್ನು ಬಲೂನ್ ನಂತೆ ಹಾರಿ ಬಿಡುವೆ ಎನ್ನುವ ಹುಮ್ಮಸ್ಸಿನ ಪ್ರೀತಿಯ ಪಯಣ.

ತನಗೆ ಬೇಕಾದಂತೆ ತನ್ನ ಬದುಕು ರೂಪಿಸಿಕೊಳ್ಳಬಹುದು ಎನ್ನುವ ಕಿಚ್ಚಿನಿಂದ ಹೊರಟವನು.ಇವರು ತಾವು ಅಂದುಕೊಂಡಿದ್ದನ್ನು ಸಾಧ್ಯವಾಗಿಸುವರೇ? ಎನ್ನುವುದೇ ” ಭಾವಪೂರ್ಣ ” ಎದೆ ಬಡಿತದ ಕಥಾವಸ್ತುವಾಗಿ ಕಾಡುವುದು ಎಂದರು ನಿರ್ದೇಶಕ ಚೇತನ್ ಮುಂಡಾಡಿ.

ನನಗೆ ಸುಮಾರು ವರ್ಷಗಳಿಂದ ಚಿತ್ರರಂಗದವರೊಂದಿಗೆ ಒಡನಾಟವಿದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ಚೇತನ್ ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ‌. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುತ್ತೇವೆ ಎಂದು ನಿರ್ಮಾಪಕ ಪ್ರಶಾಂತ್ ಆಂಜನಪ್ಪ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಶೈಲಶ್ರೀ ಧರ್ಮೇಂದ್ರ ಅರಸ್, ಅಥರ್ವ ಪ್ರಕಾಶ್, ಛಾಯಾಗ್ರಾಹಕ ಪ್ರಸನ್ನ,
ಹಿನ್ನೆಲೆ ಸಂಗೀತ ನೀಡುರುವ ಅಕ್ಷಯ್ ಹಾಗೂ ಸಂಕಲನಕಾರ ಕೀರ್ತಿರಾಜ್ . ಡಿ. “ಭಾವಪೂರ್ಣ” ದ ಬಗ್ಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ತಮ್ಮ ಸಿನಿಮಾ ಅಂಕಣಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿ(ತೀರ್ಪುಗಾರರ ವಿಶೇಷ ಪ್ರಶಸ್ತಿ)ಪಡೆದಿರುವ ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಲಾಯಿತು. ನಿರ್ದೇಶಕರಾದ ಲಿಂಗದೇವರು ಹಾಗೂ ಸತ್ಯಪ್ರಕಾಶ್ ಇದ್ದರು.

Categories
ಸಿನಿ ಸುದ್ದಿ

ಪ್ರೀತಿಯ ಚಮತ್ಕಾರ: ಅವರಿಬ್ಬರ ಒಲವು ಮಂದಾರ! ಸೆಪ್ಟೆಂಬರ್15ಕ್ಕೆ ಹೊಸ ಲವ್ ಸ್ಟೋರಿ

ಒಲವು ಬದುಕಿನ ಮಂದಾರ…. ಇದು ಹಾಡೊಂದರಲ್ಲಿ ಬರುವ ಆಲು. ಈ ಹಿಂದೆ ಒಲವೇ ಮಂದಾರ ಸಿನಿಮಾ ಬಂದಿತ್ತು. ಈಗ ಒಲವೇ ಮಂದಾರ 2 ಸರದಿ. ಹೌದು, ಎಸ್ ಆರ್ ಪಾಟೀಲ್ ನಿರ್ದೇಶನದ ಸಿನಿಮಾ ಇದು. ಈ ಸಿನಿಮಾಗೆ ಸನತ್ ಹೀರೋ. ‘ಒಲವೇ ಮಂದಾರ 2’ ಚಿತ್ರ ತೆರೆಗೆ ಬರಲು ರೆಡಿಯಾಗಿದೆ. ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ.

“ಒಲವೇ ಮಂದಾರ 2” ಪರಿಶುದ್ಧ ಪ್ರೇಮಕಥೆ ಎಂದು ಮಾತು ಆರಂಭಿಸಿದ ನಿರ್ದೇಶಕ ಎಸ್.ಆರ್.ಪಾಟೀಲ್, ಈ ಪ್ರಪಂಚದಲ್ಲಿ ಪ್ರೀತಿ ಮಾಡುವವರನ್ನು ಅವರ ತಂದೆ ತಾಯಿ ತಮ್ಮ ಮಕ್ಕಳು ಕ್ರೈಮ್ ಮಾಡಿರುವ ಹಾಗೆ ನೋಡುತ್ತಾರೆ. ‌ಅದರಲ್ಲೂ ಹೆಚ್ಚಾಗಿ ಹೆಣ್ಣು ಮಕ್ಕಳನ್ನು. ಇದು ತಪ್ಪು. ಒಬ್ಬರನೊಬ್ಬರು ಅರಿತುಕೊಂಡು‌ ಮಾಡುವ ಪ್ರೀತಿ ಯಾವತ್ತು ತಪ್ಪಲ್ಲ,

ಹಾಗೆ ಪ್ರೀತಿ ಮಾಡಿದವರು ಕೊನೆಯ ಕ್ಷಣದವರೆಗೂ ತಮ್ಮ ಪ್ರೀತಿಯನ್ನು ಅವರ ತಂದೆ ತಾಯಿಗೆ ಒಪ್ಪಿಸಲು ಪ್ರಯತ್ನಿಸಬೇಕು ಹೊರತು ಬೇರೆ ನಿರ್ಧಾರ ತೆಗೆದುಕೊಳ್ಳಬಾರದು ಎಂಬ ಸಂದೇಶ ಈ ಚಿತ್ರದಲ್ಲಿದೆ.

ನನಗೆ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒಲವೇ ಮಂದಾರ” ಚಿತ್ರ ಇಷ್ಟ. ಹಾಗಾಗಿ ಶೀರ್ಷಿಕೆ ಇಟ್ಟಿದ್ದೇವೆ‌ ಹೊರತು, ಆ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದ ಕಥೆಯೆ ಬೇರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಿಟ್ ಆಗಿದ್ದು, ಚಿತ್ರ ಇದೇ ಸೆಪ್ಟೆಂಬರ್ 15 ರಂದು ತೆರೆಗೆ ಬರಲಿದೆ. ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಪ್ರೋತ್ಸಾಹ ನೀಡಿ ಎಂದರು.

“ಕಮರೊಟ್ಟು ಚೆಕ್ ಪೋಸ್ಟ್” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನನಗೆ ಇದು ಎರಡನೇ ಚಿತ್ರ. ನಾಯ ನಟನಾಗಬೇಕೆಂಬುದು ನನ್ನಂತಹ ಮಧ್ಯಮ ವರ್ಗದ ಹುಡುಗನ ಕನಸು. ಆ ಕನಸನ್ನು ನನಸ್ಸಾಗಿಸಿದ ಎಲ್ಲರಿಗೂ ಧನ್ಯವಾದ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕ ಸನತ್ ತಿಳಿಸಿದರು.

ನಿರ್ಮಾಪಕರಾದ ರಮೇಶ್ ಮರಗೋಳ, ಬಿ.ಎಂ.ಸತೀಶ್ ಹಾಗೂ ಸಹ ನಿರ್ಮಾಪಕರಾದ ಯಲ್ಲಾಲಿಂಗ ಮುಗುಟಿ ಹಾಗೂ ರಾಮದೇವ್ ರಾಥೋಡ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ಡಾ ಕಿರಣ್ ತೋಟಂಬೈಲ್ ಹಾಡುಗಳ ಬಗ್ಗೆ ಹಾಗೂ ನಾಯಕಿ ಪ್ರಜ್ಞಾ ಭಟ್, ಅನುಪಾ ಸತೀಶ್, ಹಿರಿಯ ನಟಿ ಭವ್ಯ, ಕಲಾವಿದೆ ಮಂಜುಳಾ ರೆಡ್ಡಿ ಅನುಭವ ಹಂಚಿಕೊಂಡರು.

ಡಿಂಗ್ರಿ ನಾಗರಾಜ್, ಕಾಮಿಡಿ ಕಿಲಾಡಿ ಮಡೆನೂರ ಮನು ,ಶಿವಾನಂದ ಸಿಂದಗಿ ಸೇರಿದಂತೆ ಅನೇಕ ಕಲಾವಿದರ ಇದ್ದಾರೆ.

error: Content is protected !!