ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ
ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ದತ್ತಣ್ಣ, ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್, ಮಹೇಶ್ ಕಾಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನವಿದೆ.
ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.
ಆಗಸ್ಟ್ 23 ರಂದು ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ. ಈಗಾಗಲೇ ಕನ್ನಡ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿಸಿದೆ.
ಈಗ 2 ನಿಮಿಷ 22 ಸೆಕೆಂಡ್ ನ ಹಿಂದಿ ಟೀಸರ್ ಬಿಡುಗಡೆಯಾಗುತ್ತಿದ್ದು, ಈ ಮೂಲಕ ಚಿತ್ರದ ಕಥೆಯ ಬಗ್ಗೆ ಇನ್ನಷ್ಟು ಮಾಹಿತಿ ಬಿಟ್ಟುಕೊಡುತ್ತಿದ್ದೇವೆ ಹಾಗೂ ಹಿಂದಿ ಪ್ರಾದೇಶಿಕತೆಗೆ ತಕ್ಕಂತೆ ಟೀಸರ್ ಕಟ್ಸ್ ಇರುತ್ತದೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.
ಕಿರಣ್ ರಾಜ್ ಅವರು ಮಾಸ್ look ನಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಅಪೂರ್ವ, ರಾಧ್ಯ, ಸಮೀಕ್ಷಾ ಮೂವರು ನಾಯಕಿಯಾರಿದ್ದಾರೆ, ಸ್ಟಾರ್ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾವಾಗುತ್ತಿರುವ ಚೊಚ್ಚಲ ಚಿತ್ರ ಇದಾಗಿದ್ದು, ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ ಹೆಗ್ಡೆ ನಿರ್ಮಿಸಿದ್ದಾರೆ.
ರವಿ ಶಂಕರ್, ಮೈಕೋ ನಾಗರಾಜ್, ಮಂಡ್ಯ ರಮೇಶ್,ಗಿರೀಶ್ ಹೆಗ್ಡೆ , B ಸುರೇಶ, ಸೂರ್ಯ ಕುಂದಾಪುರ, ಧರ್ಮಣ್ಣ, ಉಗ್ರಂ ಮಂಜು, ಉಗ್ರಂ ರವಿ, ಮನಮೋಹನ್ ರೈ,ಅನಿಲ್ ಯಾದವ್ ,ಪ್ರಥ್ವಿ, ಧರ್ಮೇಂದ್ರ ಆರಸ್, ಸುಜಯ್ ಶಾಸ್ತ್ರಿ ಅನೇಕ ದೊಡ್ಡ ಕಲಾವಿದರು ಚಿತ್ರದಲ್ಲಿ ಅಭಿನಸಿದ್ದಾರೆ.
ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಪ್ರಮೋದ್ ಮರವಂತೆ ಗೀತರಚನೆ, ಸಚಿನ್ ಬಸ್ರೂರ್ ಹಿನ್ನೆಲೆ ಸಂಗೀತ, ರಾಘವೇಂದ್ರ B ಕೋಲಾರ ಛಾಯಾಗ್ರಾಹಣ ಉಮೇಶ R B ಸಂಕಲನ ಹಾಗೂ ಸತೀಶ್ ಅವರ ಕಲಾ ನಿರ್ದೇಶನ “ರಾನಿ” ಚಿತ್ರಕ್ಕಿದೆ.
ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್ಟೈನ್ಮೆಂಟ್ ಬ್ಯಾನರ್ಗಳ ಅಡಿಯಲ್ಲಿ ಈ ಚಿತ್ರವನ್ನು ನಟ ಹಾಗೂ ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ.
ಕಣ್ಣಪ್ಪ ಚಿತ್ರವು ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುತ್ತದೆ. ನಾಸ್ತಿಕನಾದ ಕಣ್ಣಪ್ಪನ ವಿಸ್ಮಯಕಾರಿ ರೂಪಾಂತರವು ಈ ಚಿತ್ರದ ಕಥಾವಸ್ತು. ಈಶ್ವರನ ಅಪ್ರತಿಮ ಭಕ್ತನಾಗಿ ಮತ್ತು ಇತಿಹಾಸದ ಅತ್ಯಂತ ಅಸಾಧಾರಣ ಭಕ್ತರಲ್ಲಿ ಒಬ್ಬನಾದ ಕಣ್ಣಪ್ಪನ ಪಾತ್ರ ಮಾಡುವ ಅವಕಾಶ ಸಿಕ್ಕಿರುವುದು ತಮ್ಮ ಭಾಗ್ಯ ಎಂದು ವಿಷ್ಣು ಮಂಚು ಹೇಳಿಕೊಂಡಿದ್ದಾರೆ.
ಇದುವರೆಗೂ ಹಲವು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿರುವ ವಿಷ್ಣು ಮಂಚು, ಇದೇ ಮೊದಲ ಬಾರಿಗೆ ಪೌರಾಣಿಕ ಚಿತ್ರವೊಂದರಲ್ಲಿ ಚಿತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟಿದ್ದಾರೆ.
ಈ ಚಿತ್ರಕ್ಕೆ ಧೀಮಂತ ಲೇಖಕರಾದ ಪರುಚೂರಿ ಗೋಪಾಲಕೃಷ್ಣ, ತೋಟ ಪ್ರಸಾದ್, ತೋಟಪಲ್ಲಿ ಸಾಯಿನಾಥ್ ಮತ್ತು ಬುರ್ರಾ ಸಾಯಿ ಮಾಧವ್ ಚಿತ್ರಕಥೆ ಮತ್ತು ಸಂಭಾಷಣೆಯನ್ನು ರಚಿಸಿದ್ದು, ಮಣಿಶರ್ಮಾ ಮತ್ತು ಸ್ಟೀಫನ್ ದೇವಸ್ಸೆ ಸಂಗೀತ ಹಾಗೂ ಶೆಲ್ಡನ್ ಶಾ ಅವರ ಛಾಯಾಗ್ರಹಣವಿದೆ.
ಈ ಹಿಂದೆ ಸ್ಟಾರ್ ಪ್ಲಸ್ ಗಾಗಿ ಮಹಾಭಾರತ ಸರಣಿಯನ್ನು ನಿರ್ದೇಶಿಸಿದ್ದ ಮುಖೇಶ್ ಕುಮಾರ್ ಸಿಂಗ್, ಮೇರುಕೃತಿಯನ್ನು ನಿರ್ದೇಶಿಸುತ್ತಿದ್ದಾರೆ. ಬಾಲಿವುಡ್ ನಟಿ ನೂಪುರ್ ಸನೋನ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಭಕ್ತಿ ಪ್ರಧಾನ “ಕಣ್ಣಪ್ಪ” ( ಎ ಟ್ರೂ ಎಪಿಕ್ ಇಂಡಿಯನ್ ಟೇಲ್) ಚಿತ್ರ, ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಹುಭಾಷೆಗಳಲ್ಲಿ ಬರಲಿದೆ.
ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ “ಮಾರಕಾಸ್ತ್ರ” ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ “ಗ್ಲಾಮರು ಗಾಡಿ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.
ನಾನು ಸಿನಿಮಾ ಮಾಡುತ್ತೇನೆ ಎಂದಾಗ, ಬೇಡ ಅಂದವರೆ ಹೆಚ್ಚು. ಆದರೆ ಅವರುಗಳು ಹೇಳಿದ ತರಹ ಅನುಭವ ನನಗೆ ಈ ಚಿತ್ರದಲ್ಲಿ ಆಗಿಲ್ಲ. ಏಕೆಂದರೆ ಒಳ್ಳೆಯ ತಂಡದ ಸಹಕಾರ. ಆಕ್ಷನ್ ಕ್ವೀನ್ ಮಾಲಾಶ್ರೀ ಅವರು ಸೇರಿದಂತೆ ಬಹು ದೊಡ್ಡ ತಾರಾಬಳಗ ಹೊಂದಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಾನು ಈ ಚಿತ್ರದ ನಾಲ್ಕು ಹಾಡುಗಳನ್ನು ಹಾಡಿದ್ದೇನೆ ಹಾಗೂ ನಟಿಸಿದ್ದೇನೆ ಎನ್ನುತ್ತಾರೆ ನಟರಾಜ್. ನಟರಾಜ್ ಅವರ ಪತ್ನಿ ನಿರ್ಮಾಪಕಿ ಕೋಮಲ ನಟರಾಜ್ ಸಹ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.
ಇದು ನನ್ನ ಮೊದಲ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದು ಮಾತನಾಡಿದ ನಿರ್ದೇಶಕ ಗುರುಮೂರ್ತಿ ಸುನಾಮಿ, “ಮಾರಕಾಸ್ತ್ರ” ಒಂದು ಕೌಟುಂಬಿಕ ಚಿತ್ರ. ಇದರಲ್ಲಿ ಆಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲವೂ ಇದೆ. ಈಗಾಗಲೇ ಟೀಸರ್ ಎಲ್ಲರ ಮನ ಗೆದ್ದಿದೆ. ಚಿತ್ರ ಕೂಡ ಸದ್ಯದಲ್ಲೇ ತೆರೆಗೆ ಬರಲಿದೆ ಎಂದು ತಿಳಿಸಿದರು.
ಚಿತ್ರದಲ್ಲಿ ಏಳು ಹಾಡುಗಳಿವೆ. ಆ ಪೈಕಿ ನಾಲ್ಕು ಹಾಡುಗಳನ್ನು ನಟರಾಜ್ ಅವರೆ ಹಾಡಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡನ್ನು ನಾನೇ ಬರೆದಿದ್ದೇನೆ. ಅನನ್ಯಾ ಭಟ್ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಮಂಜು ಕವಿ ತಿಳಿಸಿದರು.
“ಮಾರಕಾಸ್ತ್ರ” ಚಿತ್ರದ ನಿರ್ಮಾಪಕರು ಈಗಾಗಲೇ ಅರ್ಧದಷ್ಟು ಸೇಫ್ ಆಗಿದ್ದಾರೆ. ಮುಂಬೈ ಮೂಲದ ವ್ಯಕ್ತಿಯೊಬ್ಬರು ಈ ಚಿತ್ರದ ಹಿಂದಿ ರೈಟ್ಸ್ ಬಾರಿ ಮೊತ್ತಕ್ಕೆ ಖರೀದಿಸಿದ್ದಾರೆ ಎಂದು ನೃತ್ಯ ನಿರ್ದೇಶಕ ಹಾಗೂ ಕ್ರಿಯೇಟಿವ್ ಹೆಡ್ ಧನ ಕುಮಾರ್ ಮಾಹಿತಿ ನೀಡಿದರು.
ಚಿತ್ರದ ಛಾಯಾಗ್ರಹಕ ಅರುಣ್ ಸುರೇಶ್, ಸಂಕಲನಕಾರ ವಿಶ್ವ ಹಾಗೂ ಚಿತ್ರದಲ್ಲಿ ನಟಿಸಿರುವ ಆನಂದ್ ಆರ್ಯನ್, ರವಿಚೇತನ್, ಮೈಕೊ ನಾಗರಾಜ್, ಮನಮೋಹನ್ ರೈ, ಭರತ್ ಮುಂತಾದವರು “ಮಾರಕಾಸ್ತ್ರ” ಚಿತ್ರದ ಕುರಿತು ಮಾತನಾಡಿದರು. ಮಾಲಾಶ್ರೀ ಹಾಗೂ ಹರ್ಷಿಕಾ ಪೂಣಚ್ಛ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.
ಧರ್ಮ ಕೀರ್ತಿರಾಜ್ ಹಾಗೂ ಅದಿತಿ ಅಭಿನಯದ ತಲ್ವಾರ್ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ.
ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಇರುವ ಸಿನಿಮಾ. ಈ ಚಿತ್ರದಲ್ಲಿ ಕ್ಯಾಟ್ ಬರೀಸ್ ಎಂದೇ ಕರೆಸಿಕೊಳ್ಳುವ ಧರ್ಮ ಕೀರ್ತಿರಾಜ್ ಖಳನಟನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಧರ್ಮ ಕೀರ್ತಿರಾಜ್ ಅವರಿಗೂ ಈ ಸಿನಿಮಾ ಹೊಸ ಇಮೇಜ್ ಸಿಗುತ್ತದೆ ಎಂಬ ಭರವಸೆ ಇದೆ.
ಕಥೆ, ಚಿತ್ರಕಥೆ ಸಂಭಾಷಣೆ ಬರೆದು ರಾಘವ ಮುರಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಮುಮ್ತಾಜ್ ಚಿತ್ರ ನಿರ್ದೇಶಿಸಿದ್ದ ರಾಘವ ಮುರಳಿ ಮತ್ತು ಧರ್ಮ ಕೀರ್ತಿರಾಜ್ ಕಾಂಬಿನೆಷನ್ ನ ಎರಡನೇ ಸಿನಿಮಾ ಇದು.
ಇನ್ನು, ಈ ಚಿತ್ರದಲ್ಲಿ ಮಜಾಭಾರತ ಖ್ಯಾತಿಯ ಮಿನಿ ದರ್ಶನ್ ಎಂದೇ ಕರೆಸಿಕೊಳ್ಳುವ ಅವಿನಾಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಪಡೆಯುತ್ತಿರುವ ಅವಿನಾಶ್, ಮುಖ್ಯ ಪಾತ್ರ ನಿರ್ವಹಿಸಿದ್ದಾರೆ.
ಈ ಚಿತ್ರದ ಮತ್ತೊಂದು ವಿಶೇಷತೆ ಏನೆಂದರೆ ವಿಶೇಷ ಪಾತ್ರದಲ್ಲಿ ಜಯರಾಮ್ ಕಾರ್ತಿಕ್ (JK) ಕಲ್ಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರು ಮಂಗಳೂರಿನ ರೌಡಿ ಕಲ್ಕಿ ಎಂಬ ಪಾತ್ರ ನಿರ್ವಹಿಸುತ್ತಿರುವುದು ವಿಶೇಷತೆಗಳಲ್ಲೊಂದು.
ಈ ಚಿತ್ರ ಟಚ್ ಸ್ಟೋನ್ ಪಿಕ್ಚರ್ ಬ್ಯಾನರ್ ನಲ್ಲಿ ನಿರ್ಮಾಣವಾಗಿದ್ದು, ಸುರ್ನಳ್ಳಿ ಜಯರಾಮ್ ಅರ್ಪಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಬೈರಸಂದ್ರ ಬಂಡವಾಳ ಹಾಕಿದ್ದಾರೆ, ಶ್ರೀನಗರ ಕಿಟ್ಟಿ ಅಭಿನಯದ ಬಹುಪರಾಕ್ ಚಿತ್ರಕ್ಕೆ ಸಹ ನಿರ್ಮಾಪಕರಗಿದ್ದ ಇವರು ಈ ಚಿತ್ರವನ್ನು ತಮ್ಮ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ.
ಇವರು ಅನುಭವ ಇರುವ ಛಾಯಾಗ್ರಾಹಕರು ಆಗಿರುವುದರಿಂದ ಈ ಚಿತ್ರಕ್ಕೆ ತಾವೇ ಕ್ಯಾಮರಮಾನ್ ಆಗಿ ತಮ್ಮ ಕೈ ಚಳಕ ತೋರಿಸಿರುವುದು ಮತ್ತೊಂದು ವಿಶೇಷ.
ಕೆ.ಬಿ. ಪ್ರವೀಣ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಈ ಚಿತ್ರದ ಹಾಡುಗಳ ಹಕ್ಕುಗಳನ್ನು ಈಗಾಗಲೇ ಸರಿಗಮ ಆಡಿಯೋ ಕಂಪನಿ ದೊಡ್ಡ ಮೊತ್ತಕ್ಕೆ ಖರೀದಿಸಿದೆ.
ಈ ಚಿತ್ರದಲ್ಲಿ 5 ಭರ್ಜರಿ ಸಾಹಸ ದೃಶ್ಯಗಳಿವೆ. ವಿನೋದ್, ಡ್ಯಾನಿ ಮತ್ತು ಕುಂಫು ಚಂದ್ರು ಅವರುಗಳು ಸಾಹಸ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದ ಇನ್ನೊಂದು ವಿಶೇಷತೆ ಏನೆಂದರೆ, ‘ರೋಜ್ ಹಿಡಿದು ಲವ್ ಮಾಡಿದ್ರೆ ಪ್ರೀತಿಸಿದ ಇಬ್ಬರು ನೋವು ಪಡ್ತಾರೆ, ಆದರೆ ಲಾಂಗ್ ಇಡ್ಕೊಂಡು ಜೀವನ ಮಾಡಿದ್ರೆ ಆ ಲಾಂಗ್ ನಿಂದ ಅದೆಷ್ಟು ಫ್ಯಾಮಿಲಿ ಹಾಳಾಗ್ತವೆ ಎಂಬ ಸಂದೇಶವನ್ನು ಈ ಚಿತ್ರ ದಲ್ಲಿ ಹೇಳಲಾಗಿದೆ. ಇದು ರಕ್ತ ಹರಿಸುವ ರೌಡಿಸಂ ಚಿತ್ರವಾಗಿದ್ದರೂ, ಅಲ್ಲಲ್ಲಿ, ಎಮೋಷನ್ ಟಚ್ ಇದೆ ಎಂಬುದು ಚಿತ್ರ ತಂಡದ ಮಾತು.
ಸದ್ಯ ಯು/ಎ ಸರ್ಟಿಫಿಕೇಟ್ ಪಡೆದಿರುವ ಈ ಚಿತ್ರ ರಿಲೀಸ್ ಆಗಲು ತಯಾರಿ ನಡೆಸಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಟೀಸರ್ ರಿಲೀಸ್ ಬಿಡುಗಡೆಯಾಗಲಿದೆ.
‘ ದಿಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾಗಿರುವ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ.
ಸ್ವಾತಂತ್ರ್ಯ ದಿನದ ಅಂಗವಾಗಿ ರಿಲೀಸ್ ಆಗಿದ್ದ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಕುರಿತ ಪ್ರಯೋಗದ ದೃಶ್ಯದೊಂದಿಗೆ ಆರಂಭವಾಗುವ ಟೀಸರ್ ನಲ್ಲಿ ಭಾರತೀಯ ವಿಜ್ಞಾನಿಗಳು ವ್ಯಾಕ್ಸಿನ್ ಗಾಗಿ ಪಟ್ಟ ಶ್ರಮವನ್ನು ಟೀಸರ್ ನಲ್ಲಿ ಕಟ್ಟಿಕೊಡಲಾಗಿದೆ.
ಕೋವಿಡ್ ವ್ಯಾಕ್ಸಿನ್ ಸುತ್ತ ಸಾಗುವ ಕಥೆಯಲ್ಲಿ ಪಲ್ಲವಿ ಜೋಶಿ, ಅನುಪಮ್ ಖೇರ್, ನಾನಾ ಪಾಟೇಕರ್ ಮತ್ತು ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಾಶ್ಮೀರಿ ಫೈಲ್ಸ್ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಬಂಡವಾಳ ಹೂಡಿದ್ದು, ಐ ಆ್ಯಮ್ ಬುದ್ಧ ಸಹಯೋಗದಲ್ಲಿ ಪಲ್ಲವಿ ಜೋಶಿ ಕೂಡ ಸಿನಿಮಾಕ್ಕೆ ಹಣ ಹಾಕಿದ್ದಾರೆ.
ಸೆಪ್ಟಂಬರ್ 28ರಂದೇ ‘ದಿ ವ್ಯಾಕ್ಸಿನ್ ವಾರ್’ ಚಿತ್ರ 11 ಭಾಷೆಯಲ್ಲಿ ತೆರೆ ಕಾಣಲಿದೆ. ಇದೇ ದಿನ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬೋದ ಸಲಾರ್ ಸಿನಿಮಾ ಕೂಡ ಬಿಡುಗಡೆಯಾಗಲಿದೆ.
ಸಿಕಾಡಾ ಪ್ಯಾನ್ ಇಂಡಿಯಾ ಚಿತ್ರದ ಕನ್ನಡದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯನ್ನು ಸ್ಯಾಂಡಲ್ವುಡ್ ತಾರೆಯರಾದ ಮೇಘನಾ ರಾಜ್ ಮತ್ತು ಪ್ರಜ್ವಲ್ ದೇವರಾಜ್ ಮಾಡಿದ್ದಾರೆ.. ಕರ್ನಾಟಕ ಮಾಜಿ ಕೃಷಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಅವರು ತಮ್ಮ ಹೃತ್ಪೂರ್ವಕ ಹಾರೈಕೆಗಳೊಂದಿಗೆ, ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸಿಕಾಡಾ ಚಿತ್ರತಂಡಕ್ಕೆ ಉತ್ತಮ ಯಶಸ್ಸನ್ನು ಕೋರುವ ಮೂಲಕ ತಂಡವನ್ನು ಬೆಂಬಲಿಸಿದ್ದಾರೆ.
ಸಿಕಾಡಾದಲ್ಲಿ ಹೊಸ ಪ್ರತಿಭೆಗಳಿವೆ. ಸಿಕಾಡಾ ನಿರ್ದೇಶಕರಾಗಿ ಶ್ರೀಜಿತ್ ಎಡವನ ಅವರ ಚೊಚ್ಚಲ ಚಿತ್ರ. ತಿರ್ನಾ ಫಿಲ್ಮ್ಸ್ ಮತ್ತು ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ವಂದನಾ ಮೆನನ್ ಮತ್ತು ಗೋಪಕುಮಾರ್ ಪಿ ನಿರ್ಮಿಸಿರುವ ಈ ಚಿತ್ರದಲ್ಲಿ ರಜಿತ್ ಸಿ.ಆರ್, ಗಾಯತ್ರಿ ಮಯೂರ, ಜೈಸ್ ಜೋಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಬೆಂಗಳೂರು, ಅಟ್ಟಪಾಡಿ, ವಾಗಮೋನ್, ಕೊಚ್ಚಿ ಮುಂತಾದೆಡೆ ಚಿತ್ರೀಕರಣ ನಡೆದಿದೆ.
ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಈ ಸಿನಿಮಾ ಮೂಡಿಬಂದಿದೆ. ‘ಸಿಕಾಡಾ’ ಚಿತ್ರದ ಒಂದು ವಿಶೇಷತೆಯೆಂದರೆ, ಪ್ರತಿ ಅವತರಣಿಕೆಯ ಚಿತ್ರಕ್ಕೂ ಪ್ರತ್ಯೇಕ ಟ್ಯೂನ್ ಗಳನ್ನು ಕಂಪೋಸ್ ಮಾಡಲಾಗಿದೆ. ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ನಾಲ್ಕು ಭಾಷೆಗಳಲ್ಲಿ ಆ ಭಾಷೆಯ ನೇಟಿವಿಟಿಗೆ ಹೊಂದುವಂತಹ ಟ್ಯೂನ್ ಗಳನ್ನು ಸಂಯೋಜಿಸಲಾಗಿವೆ. ನಾಲ್ಕು ಭಾಷೆಯ ಅವತರಣಿಕೆಗಳಿಗೆಂದೇ ಒಟ್ಟು 24 ಹೊಸ ಹಾಡುಗಳನ್ನು ಕಂಪೋಸ್ ಮಾಡಿರುವುದು ವಿಶೇಷ. ಇದು ಸಿಕಾಡಾದ ವಿಶಿಷ್ಟ ಲಕ್ಷಣವಾಗಿದೆ.
ಶ್ರೀಜಿತ್ ಎಡವನ ಸಂಗೀತ ಸಂಯೋಜಕರೂ ಹೌದು. ಅವರು “ಪ್ರೀತಿ ನನ್ನ ಕವಿಯೆ” ಮತ್ತು “ನೆಂಜೋಡು ಚೆರ್ತು” ನಂತಹ ಸಂಗೀತ ಹಿಟ್ಗಳನ್ನು ಸಂಯೋಜಿಸುವ ಮೂಲಕ ತಮಿಳು ಮತ್ತು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದರು. ಈ ಚಿತ್ರದ ಹಾಡುಗಳಿಗೆ ಅದ್ಭುತವಾದ ಸಾಹಿತ್ಯವನ್ನು ರವಿತೇಜ ಅಮರನಾರಾಯಣ ಬರೆದಿದ್ದಾರೆ. ನವೀನ್ ರಾಜ್ ಚಿತ್ರಕ್ಕೆ ಸಿನಿಮಾಟೋಗ್ರಾಫರ್ ಆಗಿದ್ದು, ಶೈಜಿತ್ ಕುಮಾರನ್ ಸಂಕಲನ ಮಾಡಿದ್ದಾರೆ. ಹಾಡುಗಳು ಶೀಘ್ರದಲ್ಲೇ ಜ್ಯೂಕ್ ಬಾಕ್ಸ್ಗೆ ಬರಲಿವೆ. ಧ್ವನಿ ವಿನ್ಯಾಸವು ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ.
ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ (Aradhanaa) ಎಂದು ಬದಲಿಸಿಕೊಂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ಕಾಟೇರ” ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ.
ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ.
ಈ ಹೆಸರು ಬರೀ “ಕಾಟೇರ” ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ
. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ವಿನಂತಿಸಿದ್ದಾರೆ.
ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ” ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಬರೆದುಕೊಟ್ಟರೆ, ನಟ ಡಾ.ರಾಘವೇಂದ್ರ ರಾಜಕುಮಾರ್ ಶೀರ್ಷಿಕೆ ಅನಾವರಣ ಮಾಡಿದರು.
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನವಿಲುಗರಿ ನವೀನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಡಾ. ರಾಜಕುಮಾರ್ ಮೊಮ್ಮಗ (ಲಕ್ಷ್ಮೀ ಹಾಗೂ ಗೋವಿಂದರಾಜ್ ಅವರ ಪುತ್ರ) ಷಣ್ಮುಖ ಗೋವಿಂದರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.
ನಾಗೇಂದ್ರ ಪ್ರಸಾದ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ಪಾತ್ರಗಳ ಆಡಿಷನ್ ನಡೆಯುತ್ತಿದೆ. ಪ್ರಣವ್ ಸತೀಶ್ “ಚಿನ್ನದ ಮಲ್ಲಿಗೆ ಹೂವೇ”ಗೆ ಸಂಗೀತ ನೀಡುತ್ತಿದ್ದು, ಮಧು ತುಂಬಕೆರೆ ಅವರ ಸಂಕಲನವಿರಲಿದೆ.
ಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ “ವಾಮನ” ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್ ಟೀಸರ್ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಈ ಸಂದರಭದಲ್ಲಿ ಮಾತನಾಡಿದ, ನಿರ್ದೇಶಕ ಶಂಕರ್ ರಾಮನ್, ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆಕ್ಷನ್ ಚಿತ್ರ. ಚಿತ್ರದಲ್ಲಿ ಆಕ್ಷನ್ ಹೇಗಿರುತ್ತದೆ ಎಂದು ತೋರಿಸುವುದಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೇವೆ. ಈ ಚಿತ್ರದಲ್ಲಿ ಒಟ್ಟು ನಾಲ್ಕು ಫೈಟ್ ಗಳಿವೆ. ಮೂರು ಫೈಟ್ ಗಳಿಗೆ ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇನ್ನೊಂದು ಫೈಟ್ ನಲ್ಲಿ ಕಥೆ ಜೊತೆಜೊತೆಯಾಗಿ ಸಾಗುತ್ತದೆ.
ಈ ಫೈಟ್ ಪ್ರೇಕ್ಷಕರಿಗೆ ಬೇರೆ ತರಹದ ಅನುಭವ ಕೊಡುತ್ತದೆ ಎಂಬ ನಂಬಿಕೆ ನನಗಿದೆ. ಸಾಹಸ ದೃಶ್ಯವನ್ನು ವಿಕ್ರಮ್ ಮೋರ್ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಜ್ ಮತ್ತು ವಿಕ್ರಮ್ ಮೋರ್ ಜೊತೆಗೆ ಜಾಲಿ ಬಾಸ್ಟಿನ್ ಅವರ ನೆರವು ಮತ್ತು ಮಾರ್ಗದರ್ಶನವಿದೆ. ಈ ಮೂವರೂ ಸಾಹಸ ನಿರ್ದೇಶಕರಿಗೆ ನಮ್ಮ ಚಿತ್ರತಂಡದಿಂದ ಧನ್ಯವಾದಗಳು.
ವಾಮನ ಚಿತ್ರವನ್ನು ಸೆಪ್ಟೆಂಬರ್ ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ. ಧನ್ವೀರ್ ಅವರ ಚಿತ್ರ ಬಿಡುಗಡೆಗೆ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ವಾಮನ ಅಂದರೆ ದಶಾವತಾರದಲ್ಲಿ ಬರುವ ಐದನೇ ಅವತಾರ. ದುಷ್ಟತ್ವವೇ ಸರ್ವಸ್ವ ಎನ್ನುವ ಜನರ ವಿರುದ್ಧ ವಾಮನ ಹೇಗೆ ಹೋರಾಡುತ್ತಾನೆ ಎಂಬುದು ಚಿತ್ರದ ಕಥೆ. ಇಲ್ಲಿ ರೌಡಿಸಂ, ಭೂಗತಲೋಕ ಮತ್ತು ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಕಥೆ ಸಾಗುತ್ತಿದೆ. ಈ ಚಿತ್ರದ ಹೈಲೈಟ್ ಅಂದರೆ ಸೆಂಟಿಮೆಂಟ್ ದೃಶ್ಯಗಳು. ಈ ಚಿತ್ರದಲ್ಲಿ ಒಂದು ಒಳ್ಳೆಯ ಸಂದೇಶವಿದೆ ಎಂದರು.
ಈ ಚಿತ್ರದಲ್ಲಿ ನನ್ನದು ಎರಡು ಶೇಡ್ ಪಾತ್ರ. ಚಿತ್ರದಲ್ಲೊಂದು ಒಳ್ಳೆಯ ಸಂದೇಶವಿದೆ. ನಿರ್ದೇಶಕರು ಮೂಲತಃ ಒಳ್ಳೆಯ ಬರಹಗಾರರು. ಅವರೊಂದು ಎಳೆಯನ್ನು ಹೇಳಿದ್ದರು. ಬಹಳ ಇಷ್ಟವಾಗಿ, ಅದನ್ನು ಬೆಳೆಸಿ ಎಂದು ಹೇಳಿದ್ದೆ. ಆ ಎಳೆ ಚಿತ್ರವಾಗಿ, ಇದೀಗ ಬಿಡುಗಡೆಗೆ ಬಂದಿದೆ. ಇಂದು ಗಣ್ಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಆಕ್ಷನ್ ಟೀಸರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ಸೇರಿದಂತೆ ಬೇರೆ ಊರುಗಳಲ್ಲಿ ಸಹ ಚಿತ್ರದ ಪ್ರಮೋಷನ್ ಮಾಡುತ್ತೇವೆ ಎಂದರು ಧನ್ವೀರ್.
ಈ ಚಿತ್ರದಲ್ಲಿ ನನ್ನದು ಬಹಳ ಮುದ್ದಾದ ಮತ್ತು ಅಷ್ಟೇ ಸರಳವಾದ ಪಾತ್ರ. ನನಗಂತೂ ಬಹಳ ಇಷ್ಟವಾದ ಪಾತ್ರ ಇದು. ಚಿತ್ರ ನೋಡಿದ ಜನರಿಗೂ ಇಷ್ಟವಾಗುತ್ತೆ ಎಂಬ ನಂಬಿಕೆ ಇದೆ ಎಂಬುದು ಕರೀಷ್ಮಾ ನಾಣಯ್ಯ ಮಾತು.