Categories
ಸಿನಿ ಸುದ್ದಿ

ವಿದೇಶಕ್ಕೂ ಹಾರಿದ ಹಾಸ್ಟೆಲ್ ಹುಡುಗರು!

ಒಳ್ಳೆ ಸಿನಿಮಾಗಳಿಲ್ಲದೇ ಸೊರಗಿದ್ದ ಸ್ಯಾಂಡಲ್ ವುಡ್ ಇಂಡಸ್ಟ್ರೀಗೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರ ಹೊಸ ಚೈತನ್ಯ ತಂದು ಕೊಟ್ಟಿದೆ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕ್ವಾಟ್ಲೆಗೆ ಪ್ರೇಕ್ಷಕ ಹೊಟ್ಟೆ ಹುಣ್ಣಾಗುವಂತೆ ನಕ್ಕುತ್ತಿದ್ದಾರೆ. ಭರಪೂರ ಮನರಂಜನೆ ಉಣಬಡಿಸಿರುವ ಈ ಸಿನಿಮಾಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಬರೀ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಿಗೂ ಹಾಸ್ಟೆಲ್ ಹುಡುಗರ ಹವಾಳಿ ಹಬ್ಬಿದೆ. ಈಗ ವಿದೇಶದಲ್ಲಿಯೂ ಧಮಾಕ ಎಬ್ಬಿಸಲು ಬಾಯ್ಸ್ ರೆಡಿಯಾಗಿದ್ದಾರೆ.

ವಿದೇಶದಲ್ಲಿ ಹಾಸ್ಟೆಲ್ ಹುಡುಗರ ಹಂಗಾಮ
ಹಾಸ್ಟೆಲ್ ಹುಡುಗರ ಬೇಕಾಗಿದ್ದಾರೆ ಸಿನಿಮಾ ವಿದೇಶದಲ್ಲಿಯೂ ಬಿಡುಗಡೆಯಾಗುತ್ತಿದೆ. ಕೆನಡ, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಯುಕೆ ಅಂಡ್ ಯೂರೋಪ್ ದೇಶಗಳಲ್ಲಿ ಇದೇ ವೀಕೆಂಡ್ ನಿಂದ ತುಂಗಾ ಹಾಸ್ಟೆಲ್ ಬಾಯ್ಸ್ ಕ್ವಾಟ್ಲೆ ಶುರುವಾಗಲಿದೆ. ಆರಂಭದಿಂದಲೂ ತಮ್ಮ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರ ಎನ್ನುತ್ತಲೇ ಅತ್ಯುತ್ತಮ ಸಿನಿಮಾ ಎಂದು ಪ್ರೇಕ್ಷಕರಿಂದ ಬೆನ್ನು ತಟ್ಟಿಸಿಕೊಂಡಿರುವ ಚಿತ್ರತಂಡ ವಿಶ್ವಾದ್ಯಂತ ತಮ್ಮ ಸಿನಿಮಾವನ್ನು ಸಂಭ್ರಮಿಸುವ ತವಕದಲ್ಲಿದೆ.

ಹೈದ್ರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವರು ರಾಜ್ಯಗಳಲ್ಲಿ ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ, ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ.

ಇಡೀ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಹೊಸ ಹುರುಪು ತಂದುಕೊಟ್ಟಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ. ಕಳೆದ ಶುರುವಾರ ರಾಜ್ಯಾದ್ಯಂತ ತೆರೆಕಂಡ ಸಿನಿಮಾ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕಪ್ರಭುವಿಗೆ ಮನರಂಜನೆ ರಸದೌತಣ ನೀಡುವಲ್ಲಿ ಹೊಸಬರ ತಂಡ ಯಶಸ್ವಿಯಾಗಿದೆ.

Categories
ಸಿನಿ ಸುದ್ದಿ

ಸತ್ಯರಾಜ್ ಎಂಬ ಆರ ಸಿನಿಮಾದ ಕಲಾವಿದನಾದ ನಾನು….

ಸ್ಯಾಂಡಲ್‌ವುಡ್‌ನಲ್ಲೀಗ ಹೊಸಬರಿಗೆ ವಿಫುಲ ಅವಕಾಶವಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ‘ಆರ’ ಎಂಬ ಸಿನಿಮಾ ನಿರ್ಮಿಸಿದ್ದು, ಇದೇ ವಾರ ಚಿತ್ರ ತೆರೆಗೆ ಬರ್ತಿದೆ. ಅಶ್ವಿನ್ ವಿಜಯಮೂರ್ತಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಪ್ರತಿಭಾನ್ವಿತ ನಟ ಸತ್ಯರಾಜ್ ವಿಭಿನ್ನ ಪಾತ್ರದಲ್ಲಿ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನಿಹದಲ್ಲಿದ್ದಾರೆ.

ಕಿರುತೆರೆ, ಹಿರಿತೆರೆ ಎರಡರಲ್ಲಿಯೂ ಅನುಭವಿರುವವರು ಸತ್ಯರಾಜ್ ಮೂಲತಃ ಬೆಂಗಳೂರಿನವರೇ..ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ಆಯ್ಕೆ ಮಾಡಿಕೊಂಡಿದ್ದು ಸಿನಿಮಾ ಕ್ಷೇತ್ರವನ್ನು. ಅದಕ್ಕೆ ಕಾರಣ ಸಿನಿಮಾ‌‌ ಮೇಲೆ ಸತ್ಯರಾಜ್ ಅವರಿಗಿದ್ದ ಸೆಳೆತ. ಬಾಲ್ಯದಿಂದಲೂ ಚಿತ್ರರಂಗದ ಮೇಲೆ ಆಸಕ್ತಿ ಹೊಂದಿದ್ದ ಅವರು ಆರಂಭಿಕ ದಿನಗಳಲ್ಲಿ ಸಿನಿಮಾ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆ ನಂತರ ಡೇಂಜರ್ ಝೋನ್ ಎಂಬ ಸಿನಿಮಾದ ಮೂಲಕ ಬಣ್ಣ ಹಚ್ಚಿದ್ದ ಸತ್ಯರಾಜ್, ಕಟ್ಟುಕಥೆದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡರು. ಗರುಡಾಕ್ಷ ಚಿತ್ರದಲ್ಲಿ ವಿಲನ್ ಆಗಿ ಅಬ್ಬರಿಸಿ ಅವರು ಆ ಬಳಿಕ ಸಾಲು ಸಾಲು ಅವಕಾಶಗಳನ್ನು ತಮ್ಮದಾಗಿಸಿಕೊಂಡರು.

ಕೆಜಿಎಫ್, ಶುಗರ್ ಲೆಸ್ ಸೇರಿದಂತೆ ಹಲವು ಚಿತ್ರದಲ್ಲಿ ನಟಿಸಿರುವ ಸತ್ಯರಾಜ್, ಬುದ್ಧಿವಂತ-2, ಆರ, ಮೆಹಾಬೂಬ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಆರ ಸಿನಿಮಾದಲ್ಲಿ ದಿಲ್ಲಿ ಕ್ರಿಸ್ಥ ಎಂಬ‌ ಖಡಕ್ ಖಳನಾಯಕನ ಪಾತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರಕ್ಕಾಗಿ ತುಳು ಭಾಷೆ ಕಲಿತಿದ್ದಾರಂತೆ. ಪದ್ಮಾವತಿ, ಕಮಲಿ, ಬ್ರಹ್ಮಗಂಟು, ನಾನು ನನ್ನ ಕನಸು, ಗೀತಾ, ಶಾಂತಂ ಪಾಪಂ, ಗಟ್ಟಿಮೇಳ , ಕೆಂಡಸಂಪಿಗೆ. ತ್ರಿಪುರ ಸುಂದರಿ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ನಟಿಸಿರುವ, ನಟಿಸುತ್ತಿರುವ ಸತ್ಯರಾಜ್, ಲಕ್ಷ್ಮೀ ರೈ ನಟನೆಯ ಝಾನ್ಸಿ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವ ಸತ್ಯರಾಜ್ ವಿಭಿನ್ನ ಪಾತ್ರಗಳ ನಿರೀಕ್ಷೆಯಲ್ಲಿದ್ದಾರೆ. ತಮ್ಮನ್ನು ಪ್ರೋತ್ಸಾಹಿಸುತ್ತಿರುವ ಸಿನಿಮಾಪ್ರೇಮಿಗಳಿಗೆ , ಕನ್ನಡಿಗರಿಗೆ ಧನ್ಯವಾದ ತಿಳಿಸಿರುವ ಸತ್ಯರಾಜ್ ಅವರು, ಖಳನಾಯಕನ ಪಾತ್ರಗಳಲ್ಲಿಯೂ ಅಭಿನಯಿಸುವ ಆಸಕ್ತಿ ತೋರಿದ್ದಾರೆ.

Categories
ಸಿನಿ ಸುದ್ದಿ

ಲವ್ ಸಿನಿಮಾದ ಒಂಟಿ ಅಲ್ಲ ನಾನೀಗ ಹಾಡು ರಿಲೀಸ್

ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ ಹಾಕಿದ್ದಾರೆ. ಪ್ರೇಮಿಗಳ ನಡುವಿನ ಮಧುರ ಪ್ರೇಮಗೀತೆಯಾಗಿರುವ ಈ ಹಾಡಿನಲ್ಲಿ ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಕಾಣಿಸಿಕೊಂಡಿದ್ದಾರೆ.

ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್.ಎಸ್ ಲವ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಮೂಲಕ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.

ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಕಂಬಳಿಹುಳ ಖ್ಯಾತಿಯ ಶಿವ ಪ್ರಸಾದ್ ಹಿನ್ನಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ,‌ ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾಗಿರುವ ಸಿನಿಮಾ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ.

Categories
ಸಿನಿ ಸುದ್ದಿ

ಲವ್ ಚಿತ್ರದ ಒಂಟಿ ಅಲ್ಲ ನಾನೀಗ ಹಾಡು ಬಿಡುಗಡೆ

ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ ಹಾಕಿದ್ದಾರೆ. ಪ್ರೇಮಿಗಳ ನಡುವಿನ ಮಧುರ ಪ್ರೇಮಗೀತೆಯಾಗಿರುವ ಈ ಹಾಡಿನಲ್ಲಿ ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಕಾಣಿಸಿಕೊಂಡಿದ್ದಾರೆ.

ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್.ಎಸ್ ಲವ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಮೂಲಕ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.

ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಕಂಬಳಿಹುಳ ಖ್ಯಾತಿಯ ಶಿವ ಪ್ರಸಾದ್ ಹಿನ್ನಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ,‌ ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾಗಿರುವ ಸಿನಿಮಾ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ.

Categories
ಸಿನಿ ಸುದ್ದಿ

ಇದು ಕಲಾಕರ್ ಪ್ರೇತ! ಹರೀಶ್ ರಾಜ್ ಮತ್ತೆ ಬಂದ್ರು: ಸಿನಿ ಜರ್ನಿಗೆ 25 ವಸಂತ….

ತಮ್ಮ ಅಭಿನಯದ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕಲಾಕರ್ ಹರೀಶ್ ರಾಜ್ ಕಲಾ ಸೇವೆಗೆ ಭರ್ತಿ 25 ತುಂಬಿದೆ. ಬೆಳ್ಳಿ ಸಂಭ್ರಮದ ಖುಷಿಯಲ್ಲಿರುವ ಅವರೀಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ನಟನೆ ಜೊತೆಗೆ ನಿರ್ದೇಶನದಲ್ಲಿಯೂ ಹೆಸರು ಮಾಡಿರುವ ಹರೀಶ್ ರಾಜ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ತಮ್ಮದೇ ಹರೀಶ್ ರಾಜ್ ಪ್ರೊಡಕ್ಷನ್ ನಡಿ ಪ್ರೇತ ಎಂಬ ಚಿತ್ರ‌ ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಮೊಬೈಲ್ ಟರ್ಚ್ ಬೆಳಕಿನಲ್ಲಿ ಕತ್ತಲೇ ಕಾಡಿನಲ್ಲಿ ಭಯಭೀತರಾಗಿ ನಿಂತಿರುವ ಹರೀಶ್ ರಾಜ್, ಅವರ ಹಿಂದೆ ಭೂತದ ರೀತಿಯ ಆಕೃತಿ ಲುಕ್ ಸಿನಿಮಾಪ್ರೇಮಿಗಳ ಥ್ರಿಲ್ ಹೆಚ್ಚಿಸಿದೆ.

ಪ್ರೇತ.. ಟೈಟಲ್ ಹೇಳುವಂತೆ ಇದೊಂದು ಹಾರರ್ ಸಿನಿಮಾ. ಈ ಚಿತ್ರಕ್ಕೆ ಹರೀಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅಹಿರಾ ಶೆಟ್ಟಿ, ಅಮೂಲ್ಯ ಭಾರದ್ವಾಜ್, ಬಿ ಎಂ ವೆಂಕಟೇಶ್, ಅಮಿತ್ ತಾರಾಬಳಗದಲ್ಲಿದ್ದಾರೆ. ಕಿರಣ್ ಆರ್ ಹೆಮ್ಮಿಗೆ ಸಂಭಾಷಣೆ, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ, ಶಿವಶಂಕರ್ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಮಂಜು ಕಲಾ ನಿರ್ದೇಶನ ಚಿತ್ರಕ್ಕಿದೆ. ಹಾಡುಗಳಿಗೆ ಪ್ರಮೋದ್ ಮರವಂತೆ ಸಾಹಿತ್ಯ ಒದಗಿಸಿದ್ದಾರೆ.

ಪ್ರೇತ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿದ್ದು, ಕನ್ನಡ, ತಮಿಳು, ಹಿಂದಿ, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ಮೂಡಿಬರುತ್ತಿದೆ. ಈಗಾಗಲೇ ಶೂಟಿಂಗ್ ಮುಗಿಸಿ‌ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಪ್ರೇತ ಸಿನಿಮಾವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇನ್ನು, ವಿರಾಜಪೇಟೆ, ಮಡಿಕೇರಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.


ಕಲಾಕರ್, ಗನ್, ಶ್ರೀ ಸತ್ಯನಾರಾಯಣ, ಕಿಲಾಡಿ ಪೊಲೀಸ್ ಸೇರಿದಂತೆ ಹಲವು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿರುವ ಹರೀಶ್ ರಾಜ್ ಮೂರು ವರ್ಷದ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಸಹಜವಾಗಿ ನಿರೀಕ್ಷೆ ದುಪ್ಪಟ್ಟು ಮಾಡಿದೆ.

Categories
ಸಿನಿ ಸುದ್ದಿ

ಹೊಸಬರ ರಕ್ತಾಕ್ಷ: ಟೀಸರ್ ರಿಲೀಸ್ ಆಯ್ತು

ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ರಕ್ತಾಕ್ಷ ಸಿನಿಮಾದ ಆಕ್ಷನ್ ಟೀಸರ್ ರಿಲೀಸ್ ಆಗಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ನಾಯಕ ರೋಹಿತ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ರಗಡ್ ಆಗಿ ಅಬ್ಬರಿಸಿರುವ ಅವರು ಪ್ರಮೋದ್ ಶೆಟ್ಟಿ ಎದುರು ತೊಡೆ ತಟ್ಟಿ ಅಬ್ಬರಿಸಿದ್ದಾರೆ‌.

ಕಿಲ್ಲಿಂಗ್ ಲುಕ್ ಮೂಲಕವೇ ಗಮನಸೆಳೆದಿರುವ ರೋಹಿತ್ ಕನ್ನಡ ಚಿತ್ರರಂಗದ ಭರವಸೆ ನಾಯಕ ಎನಿಸಿಕೊಂಡಿದ್ದಾರೆ. ಟೀಸರ್ ಪ್ರಾಮಿಸಿಂಗ್ ಎನಿಸಿದ್ದು, ಧೀರೇಂದ್ರ ಡಾಸ್ ಸಂಗೀತ ಸಖತ್ ಕಿಕ್ ಕೊಡುತ್ತಿದೆ.

ಮಾಡೆಲಿಂಗ್ ಲೋಕದಲ್ಲಿ ಛಾಪು ಮೂಡಿಸಿರುವ ರೋಹಿತ್ ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಕ್ತಾಕ್ಷ ಸಿನಿಮಾವನ್ನು ವಾಸುದೇವ ಎಸ್.ಎನ್ ನಿರ್ದೇಶನ ಮಾಡುತ್ತಿದ್ದಾರೆ. ಅಂದ್ಹಾಗೆ ವಾಸುದೇವ್ ಆಕ್ಷನ್ ಕಟ್ ಹೇಳುತ್ತಿರುವ ಚೊಚ್ಚಲ ಸಿನಿಮಾವಿದು. ರೋಹಿತ್ ಜೊತೆ ಒಂದಷ್ಟು ಉತ್ಸಾಹಿ ಪ್ರತಿಭೆಗಳು ಸೇರಿ ‘ರಕ್ತಾಕ್ಷ’ ಸಿನಿಮಾಗೆ ದುಡಿದಿದ್ದಾರೆ.

ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದ್ರ ಡಾಸ್ ಸಂಗೀತ ನೀಡಿದ್ದಾರೆ. ಕೆಜಿಎಫ್ ನಟಿಸಿರುವ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ಪ್ರಭು, ವಿಶ್ವ, ಭದ್ರಿ ನಾರಾಯಣ, ಗುರುದೇವ ನಾಗರಾಜ, ಬಸವರಾಜ ಆದಾಪುರ ನಟಿಸಿದ್ದಾರೆ. ಖಳನಾಯಕ ಪಾತ್ರದಲ್ಲಿ ನಟ ಪ್ರಮೋದಶೆಟ್ಟಿ ಅಭಿನಯಿಸಿದ್ದಾರೆ.
ಈಗಾಗಲೇ ವಸಿಷ್ಠ ಸಿಂಹ ಅವರು ಹಾಡಿರುವ ರಕ್ತಾಕ್ಷ ಟೈಟಲ್ ಟ್ರ್ಯಾಕ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಸದ್ಯ ಟೀಸರ್ ಮೂಲಕ ರಕ್ತಾಕ್ಷ ಸಿನಿಮಾ ನಿರೀಕ್ಷೆ ದುಪ್ಪಟ್ಟು ಮಾಡಿದೆ.

Categories
ಸಿನಿ ಸುದ್ದಿ

ಬ್ಯಾಡ್ ಹುಡುಗನ ಜೊತೆ ಅಪೂರ್ವ ನಟಿ! ಪಿ.ಸಿ. ಶೇಖರ್ ಸಿನಿಮಾದ ಪ್ರೀತಿಯ ಪ್ರತಿನಿಧಿ

ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ “ನಾನು, ಅದು ಮತ್ತು ಸರೋಜ” ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್, ಪಿ.ಸಿ.ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸಿದ್ದಾರೆ.

“BAD” ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರುಪಾತ್ರಗಳಿದೆ ಎಂದು ಮೊದಲೆ ತಿಳಿಸಲಾಗಿತ್ತು. ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ.


ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು. ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌ ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್(ಗುಲಾಬಿ ಬಣ್ಣ) ಶೇಡ್ ನಲ್ಲಿ ಚಿತ್ರಿಸಲಾಗಿದೆ ಎನ್ನುತ್ತಾರೆ ನಿರ್ದೇಶಕರು.

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ “BAD” ಚಿತ್ರಕ್ಕಿದೆ.

“ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ “BAD” ಚಿತ್ರದಲ್ಲಿ “ಕ್ರೋಧ” ವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಹಾಸ್ಯ ನಟ ನರಸಿಂಹರಾಜು ಜನ್ಮ ಶತಮಾನೋತ್ಸವ : ವರ್ಷವಿಡೀ ಶತಮಾನಕ್ಕೊಬ್ಬ ಹಾಸ್ಯ ಚಕ್ರವರ್ತಿಯ ಶತಮಾನೋತ್ಸವ ಆಚರಣೆ

ಜುಲೈ 24, ಕರುನಾಡ ಕಂಡ ಹೆಮ್ಮೆಯ ಹಾಸ್ಯನಟ ದಿ.ಟಿ.ಆರ್ ನರಸಿಂಹರಾಜು ಅವರ ಹುಟ್ಟುಹಬ್ಬ. ಈ ಬಾರಿ ವಿಶೇಷವೆಂದರೆ, ಇದು ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು “ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ” ಎಂಬ ಹೆಸರಿನಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ವರ್ಷಪೂರ್ತಿ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿಶ್ಚಯಿಸಿದ್ದಾರೆ.
ನರಸಿಂಹರಾಜು ಅವರ ಹುಟ್ಟುಹಬ್ಬದಂದೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್ ಹಾಗೂ ಹಿರಿಯನಟ ಬೆಂಗಳೂರು ನಾಗೇಶ್ ಸೇರಿದಂತೆ ವಿವಿಧ ಗಣ್ಯರು ಜನ್ಮ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ, ನರಸಿಂಹರಾಜು ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡರು.


ನರಸಿಂಹರಾಜು ಅವರ ಶತಮಾನೋತ್ಸವ ಸಮಾರಂಭ ಬರೀ ಕುಟುಂಬದವರಲ್ಲ. ಎಲ್ಲರೂ ಸೇರಿ ಮಾಡಬೇಕಾದ ಕಾರ್ಯಕ್ರಮ ಎಂದು ಆಗಮಿಸಿದ್ದ ಎಲ್ಲಾ ಗಣ್ಯರು ತಿಳಿಸಿದರು. ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ಸಹ ಉಪಸ್ಥಿತರಿದ್ದರು.

ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬವನ್ನು “ಶತಮಾನಕ್ಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ” ಎಂಬ ಹೆಸರಿನಿಂದ ವರ್ಷಪೂರ್ತಿ ಆಚರಿಸಲಾಗುವುದು. ನರಸಿಂಹರಾಜು ಅವರ ಹೆಸರಿನಲ್ಲಿ ಮೂರು ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿದೆ. ದೊಡಮಟ್ಟದ ಸಮಾರಂಭ ಆಯೋಜಿಸಿ ಈ ಪ್ರಶಸ್ತಿಗಳನ್ನು ನೀಡಲಾಗುವುದು.

ಮೊದಲು ನರಸಿಂಹರಾಜು ಅವರನ್ನು ಯುವಜನತೆಗೆ ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ(ಹಾಸ್ಯದ ಕುರಿತು) ಆಯೋಜಿಸಲಾಗುವುದು.

. ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ). ಆಯೋಜಿಸಲಾಗುವುದು.

ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಸಕ್ರಿಯವಾಗಿರುವ ನಾಟಕ ಕಂಪನಿಗಳಿದೆ. ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ನರಸಿಂಹರಾಜು ಅವರ ಜನಪ್ರಿಯ ನಾಟಕಗಳನ್ನು ಅಹೋರಾತ್ರಿ ಆಯೋಜಿಸುವ ಯೋಜನೆ ಇದೆ. ಆಗಸ್ಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಸಮಾರಂಭ ನಡೆಸುವ ಸಿದ್ದತೆ ಕೂಡ ನಡೆಯುತ್ತಿದೆ.
ಈ ಎಲ್ಲಾ ಕಾರ್ಯಕ್ರಮಗಳು ಮುಂದಿನ ಆರು ತಿಂಗಳಲ್ಲಿ ಮೊದಲನೇ ಭಾಗಿ ನಡೆಯಲಿದೆ. ಮುಂದಿನ ಆರು ತಿಂಗಳ ಕಾರ್ಯಕ್ರಮಗಳನ್ನು ಮುಂಬರುವ ದಿನಗಳಲ್ಲಿ ತಿಳಿಸುವುದಾಗಿ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ ತಿಳಿಸಿದರು.

Categories
ಸಿನಿ ಸುದ್ದಿ

ನಿರ್ದೇಶಕ ಆರ್.ಚಂದ್ರು ಸಿನಿ ಜರ್ನಿಗೆ ಒಂದುವರೆ ದಶಕ: ತಾಜ್ ಮಹಲ್ ಸಿನಿಮಾದಿಂದ ಕಬ್ಜವರೆಗೆ ಯಶಸ್ವಿ ಚಂದ್ರಯಾನ…

ಮೊದಲ ಬಾಲ್ ನಲ್ಲಿ ಸಿಕ್ಸರ್ ಬಾರಿಸೋದು ಅಂದರೆ ಅದೊಂಥರಾ ಪರ್ಫೆಕ್ಟ್ ಬ್ಯಾಟಿಂಗ್ ನಿಂದ ಮಾತ್ರ ಸಾಧ್ಯ. ಅದರಲ್ಲೂ ಎಲ್ಲವೂ ಸರಿಯಾಗಿ ಕನೆಕ್ಟ್ ಆಗಬೇಕು. ಬೌಲರ್ ಎಸೆಯೋ ಬಾಲನ್ನು ಸರಿಯಾಗಿ ತನ್ನ ಬ್ಯಾಟ್ ಗೆ ಕನೆಕ್ಟ್ ಮಾಡಿಕೊಂಡಾಗ ಮಾತ್ರ ಆ ಬಾಲನ್ನು ಮುಲಾಜಿಲ್ಲದೆ ಬೌಂಡರಿ ದಾಟಿಸಬಹುದು. ಈಗ ಕ್ರಿಕೆಟ್ ಉದಾಹರಣೆ ಹೇಳೋಕೂ ಕಾರಣವಿದೆ.

‘ತಾಜ್ ಮಹಲ್’ ಎಂಬ ಮೊದಲ ಸಿನಿಮಾ ನಿರ್ದೇಶನದಲ್ಲೇ ಭರ್ಜರಿ ಸಕ್ಸಸ್ ಕಂಡ ಆರ್. ಚಂದ್ರು ಅವರ ಸಿನಿ ಪಯಣಕ್ಕೆ ಭರ್ತಿ ಹದಿನೈದು ವಸಂತಗಳು ಮುಗಿದು, ಹದಿನಾರನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.

ಹೌದು, ಆರ್.‌ಚಂದ್ರು ಅವರ ಚೊಚ್ಚಲ ಸಿನಿಮಾ ತಾಜ್ ಮಹಲ್ ಸಿನಿಮಾ ಬಿಡುಗಡೆಯಾಗಿ ಹದಿನೈದು ವರ್ಷಗಳಾಗಿವೆ. ಆ ಸಿನಿಮಾ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ನಾಯಕ ಅಜೇಯ್ ರಾವ್ ಅವರಿಗೂ ದೊಡ್ಡ ಗೆಲುವು ಕೊಟ್ಟ ಈ ಸಿನಿಮಾ, ಸಂಗೀತ ನಿರ್ದೇಶಕ ಭಿಮನ್ ರಾಯ್ ಅವರಿಗೂ ಖುಷಿಯ ಅಲೆಯಲ್ಲಿ ತೇಲಿಸಿತ್ತು. ಈ ಮೂಲಕ ನಿರ್ದೇಶಕ ಆರ್. ಚಂದ್ರು ಅವರನ್ನು ಭರವಸೆ ನಿರ್ದೇಶಕರನ್ನಾಗಿಸಿದ್ದು ಸುಳ್ಳಲ್ಲ.

ಆ ಸಿನಿಮಾ ಕೊಟ್ಟ ಗೆಲುವು ಇಂದು ಆರ್. ಚಂದ್ರು ಅವರನ್ನು ಬಹು ಬೇಡಿಕೆ ನಿರ್ದೇಶಕರನ್ನಾಗಿಸಿದೆ. ಕೇವಲ ನಿರ್ದೇಶಕ ಮಾತ್ರವಲ್ಲ, ನಿರ್ಮಾಪಕರಾಗಿಯೂ ಸಕ್ಸಸ್ ಕಂಡವರು. ಕನ್ನಡದ‌ಬಹುತೇಕ ಸ್ಟಾರ್ ನಟರನ್ನು ನಿರ್ದೇಶಿಸಿದ ಹೆಗ್ಗಳಿಕೆ ಅವರದು. ದೇಶಾದ್ಯಂತ ಸದ್ದು ಮಾಡಿದ ‘ಕಬ್ಜ’ ಕೂಡ ಆರ್. ಚಂದ್ರು ಅವರನ್ನು ಒಂದೊಳ್ಳೆಯ ನಿರ್ದೇಶಕ ಮತ್ತು ನಿರ್ಮಾಪಕ ಅಂತ ಹೇಳಿತು. ಸಿನಿಮಾನೇ ಉಸಿರಾಗಿಸಿಕೊಂಡಿರುವ ನಿರ್ದೇಶಕ ಆರ್.ಚಂದ್ರು ಕನ್ನಡಕ್ಕೆ ಸದಭಿರುಚಿಯ ಸಿನಿಮಾ ಕೊಡುತ್ತಲೇ ಬಂದಿದ್ದಾರೆ. ತಮ್ಮ ಮೊದಲ ಸಿನಿಮಾದ ಸಕ್ಸಸ್ ಹಾಗು ಹದಿನೈದು ವರ್ಷಗಳನ್ನು ಪೂರೈಸಿರುವ ಕುರಿತು ಹೇಳುವುದಿಷ್ಟು…

‘ತೃಪ್ತಿ ಎನ್ನುವುದು ಪ್ರಯತ್ನದಲ್ಲಿರುತ್ತದೆಯೇ ಹೊರತು ಪ್ರಾಪ್ತಿಯಲ್ಲಿಲ್ಲ. ಪೂರ್ಣ ಪ್ರಯತ್ನವೇ ಪರಿಪೂರ್ಣ ಗೆಲುವು. ಆ ಗೆಲುವಿಗೆ ಇಂದು ಸಾರ್ಥಕ ಹದಿನೈದು ವರ್ಷಗಳು. ಕನ್ನಡ ಚಿತ್ರರಂಗಕ್ಕೆ ಅಂಬೆಗಾಲಿಟ್ಟು ಇಂದು ನಾನು ಹದಿನೈದು ವಸಂತಗಳನ್ನು ಪೂರೈಸಿ 16 ರ ಹರೆಯಕ್ಕೆ ಕಾಲಿಡುತ್ತಿದ್ದೇನೆ. ನನ್ನನ್ನು ಈ ದಾರಿಯಲ್ಲಿ ಕೈ ಹಿಡಿದು ನಡೆಸಿದ ಪ್ರತಿಯೊಬ್ಬರಿಗೂ ನಾನು ಆಭಾರಿಯಾಗಿದ್ದೇನೆ’

ಅದೇನೆ ಇರಲಿ, ಆರ್.ಚಂದ್ರು ದೊಡ್ಡ ಕನಸುಗಾರ. ಎಷ್ಟೇ ಕಷ್ಟವಾದರೂ ತಾನು ಅಂದುಕೊಂಡಂತೆ ಸಿನಿಮಾ ಮಾಡುವ ಅದ್ಭುತ ಫಿಲ್ಮ್ ಮೇಕರ್. ಕನ್ನಡಕ್ಕೆ ಇನ್ನಷ್ಟು ಅದ್ಭುತ ಹಾಗು ಯಶಸ್ಸಿನ ಸಿನಿಮಾಗಳನ್ನು ಕೊಡಲಿ ಎಂಬುದು ಸಿನಿ ಲಹರಿ ಆಶಯ.

Categories
ಸಿನಿ ಸುದ್ದಿ

ಸೆಪ್ಟೆಂಬರ್ 15ಕ್ಕೆ ಬುದ್ಧಿವಂತನ ಆಗಮನ: ಇದು ಉಪೇಂದ್ರ ಸಿನಿಮಾ

ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ “ಬುದ್ದಿವಂತ 2” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

“ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ.

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ “ಬುದ್ದಿವಂತ 2”.

ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಉಪೇಂದ್ರ ಅವರಿಗೆ ನಾಯಕಿಯರಾಗಿ
ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

error: Content is protected !!