Categories
ಸಿನಿ ಸುದ್ದಿ

ಡಾಲರ್ಸ್ ಪೇಟೆಯ ದರೋಡೆಕೋರರು! ಟೀಸರ್ ಕೆರಳಿಸಿದ ಕುತೂಹಲ

ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್ ನಲ್ಲಿ ಬುಲೆಟ್ ಗಳ ಆರ್ಭಟ, ಹೊಡೆದಾಟ-ಬಡಿದಾಟ, ಹಣ, ವಿಲನ್ ಅಬ್ಬರ ಜೋರಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದೆ.

ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಟೀಸರ್ ರಿಲೀಸ್ ಮಾಡಿದ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಮಾತನಾಡಿ, ಡಾಲರ್ಸ್ ಪೇಟೆ ಸತ್ಯ ಘಟನೆಯಾಧಾರಿತ ಚಿತ್ರ. ತಮಿಳುನಾಡಿನ ಬ್ಯಾಂಕ್ ಒಂದ್ರಲ್ಲಿ ಬ್ಯಾಂಕ್ ಮ್ಯಾನರ್ ನಿಂದ 13 ಕೋಟಿ ಹಣ 100 ಜನಕ್ಕೆ ಮಿಸ್ ಆಗಿ ಡೆಪೋಸಿಟ್ ಆಗುತ್ತದೆ. ಅದು ಹೇಗೆ ಏನು ಅನ್ನೋದರ ಸುತ್ತ ಸಿನಿಮಾ ಸಾಗುತ್ತದೆ. ಇಡೀ ಸಿನಿಮಾವನ್ನು ಒಂದು ಪಾತ್ರದ ಮೇಲೆ ಡೆವಲಪ್ ಮಾಡಿಲ್ಲ. ಇದೊಂದು ಹೈಪರ್ ಲಿಂಕ್ ಹಾಗೂ ಡಾರ್ಕ್ ಕಾಮಿಡಿ ಥ್ರಿಲ್ಲರ್. ನಾಲ್ಕು ಐದು ಪಾತ್ರಗಳು ಒಂದು ಜಾಗದಲ್ಲಿ ಕ್ರಾಸ್ ಓವರ್ ಆಗುತ್ತೇ ಅನ್ನೋದು ಚಿತ್ರದ ಹೈಲೆಟ್. 50ರಷ್ಟು ಸಿನಿಮಾ ಬ್ಯಾಂಕ್ ನಡೆಯಲಿದೆ ಎಂದರು.

ಸೌಮ್ಯಾ ಮಾತನಾಡಿ, ನಾನು ಪೂಜಾ ಎಂಬ ಪಾತ್ರದಲ್ಲಿ ನಟಿಸಿದ್ದೇನೆ. ಈ ಸಿನಿಮಾದ ಭಾಗವಾಗಿರುವುದು ನನಗೆ ಖುಷಿಕೊಟ್ಟಿದೆ. ನಿರ್ಮಾಪಕಿ ಪೂಜಾ ಬೆನ್ನೆಲುಬಾಗಿ ನಿಂತು ಯಾವುದೇ ಕುಂದುಕೊರೆತೆ ಬಾರದೆ ನೋಡಿಕೊಂಡಿದ್ದಾರೆ. ನಿರ್ದೇಶಕರು ನನಗೆ ಕಥೆ ಹೇಳಿದಾಗ ತಕ್ಷಣ ಸಿನಿಮಾ ಮಾಡಲು ಒಪ್ಪಿಕೊಂಡೆ. ಥ್ರಿಲ್ಲರ್ ಜಾನರ್ ಆದರೂ ಪಾತ್ರಗಳು ಅಳುತ್ತಿದ್ದರು ಪ್ರೇಕ್ಷಕರು ನಗುವಂತೆ ಮಾಡುವ ಸನ್ನಿವೇಶ ಚಿತ್ರದಲ್ಲಿದೆ. ನಿಮ್ಮೆಲ್ಲರ ಸಹಕಾರ ಹೀಗೆ ಇರಲಿ ಎಂದರು.

ನಟ ವೆಂಕಟ್ ರಾಜು ಮಾತನಾಡಿ, ಡಾನ್ ಪಾತ್ರದಲ್ಲಿ ನಟಿಸಿದ್ದು, ನನ್ನ ಸ್ನೇಹಿತನಿಂದ ಈ ಪಾತ್ರ ಸಿಕ್ಕಿದೆ. ಮೂರು ತಿಂಗಳು ಪಾತ್ರಕ್ಕೆ ತಯಾರಿ ಮಾಡಿಕೊಂಡೆ. ಸೆಟ್ ನಲ್ಲಿ ಇಡೀ ಕುಟುಂಬದ ರೀತಿ ಎಲ್ಲರೂ ಟ್ರೀಟ್ ಮಾಡುತ್ತಿದ್ದರು. ಇದು ಒಳ್ಳೆ ಅನುಭವ. ಪ್ರತಿಯೊಬ್ಬರು ಸಿನಿಮಾ ಬೆಂಬಲ ಕೊಡಿ ಎಂದರು.

ಹೈಪರ್ ಲಿಂಕ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಲೂಸಿಯಾ ಪವನ್ ಪತ್ನಿ ಸೌಮ್ಯ ಜಗನ್ ಮೂರ್ತಿ, ಮೆಟ್ರೋ ಸಾಗಾ ಖ್ಯಾತಿಯ ಆಕರ್ಷ್ ಕಮಲ, ವೆಂಕಟ್, ರಾಜ್, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ದಿಯಾ ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ದತ್ತು ಬಣಕರ್, ಕೌಶಿಲ್, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಕಲಾಬಳಗ ಚಿತ್ರದಲ್ಲಿದೆ.

ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಛಾಯಾಗ್ರಹಣ, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ, ರಮೇಶ್ ಎಸ್, ಮನೋಹರ ಸಹಬರವಣಿಗೆ ಸಿನಿಮಾಕ್ಕಿದೆ. ಪೆಂಟ್ರಿಕ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಪೂಜಾ ಟಿ.ವೈ ಚಿತ್ರ ನಿರ್ಮಾಣ ಮಾಡಿದ್ದಾರೆ.

Categories
ಸಿನಿ ಸುದ್ದಿ

ಕುತೂಹಲದ ಸ್ತಬ್ಧ! ಟ್ರೇಲರ್ ಹೊರ ಬಂತು

ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ನಲ್ಲಿ ಡಾ.ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ತಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆಯಾಗಿದೆ. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು.

“ಸ್ಥಬ್ಧ” ಇದೊಂದು ಭ್ರಮೆಯ ಸುತ್ತ ನಡೆಯುವ ಕಥೆ. ಹಾರರ್, ಸಸ್ಪೆನ್ಸ್ ಥ್ರಿಲ್ಲರ್ ಎನ್ನಬಹುದು. ನಲವತ್ತೈದು ‌ದಿನಗಳ ಕಾಲ ಬೆಂಗಳೂರು, ಮಂಗಳೂರು, ಉಡುಪಿಯಲ್ಲಿ ಚಿತ್ರೀಕರಣ ‌ನಡೆದಿದೆ. ಹರ್ಷಿಕಾ ಪೂಣಚ್ಛ, ರಾಘವೇಂದ್ರ ರಾಜಕುಮಾರ್, ಪ್ರಿಯಾಂಕ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ನಿರ್ದೇಶಕ ಲಾಲಿ ರಾಘವ ಸೇರಿದಂತೆ ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ. ನಿರ್ಮಾಪಕರಿಗೆ ಧನ್ಯವಾದ. ಜೂನ್ 9 ರಂದು ಚಿತ್ರ ಬಿಡುಗಡೆಯಾಗಲಿದೆ ನೋಡಿ ಹಾರೈಸಿ ಎಂದರು ನಾಯಕ ಪ್ರತಾಪ್ ಸಿಂಹ.

ನಿರ್ಮಾಪಕ ವಿದ್ಯಾ ಸಾಗರ್ ನಮ್ಮಣ್ಣನ ಸ್ನೇಹಿತರು. ಚಿತ್ರದ ಕಥೆ ಕೇಳಿದ ಅವರು, ನಿರ್ಮಾಣಕ್ಕೆ ಮುಂದಾದರು. ನಮ್ಮ ತಂಡದ ಸಹಕಾರದಿಂದ ಚಿತ್ರ ಈಗ ಬಿಡುಗಡೆ ಹಂತಕ್ಕೆ ಬಂದಿದೆ. ಎಲ್ಲರಿಗೂ ಧನ್ಯವಾದ ಎಂದರು ನಿರ್ದೇಶಕ ಲಾಲಿ ರಾಘವ.

ಒಂದೊಳ್ಳೆ ಚಿತ್ರ ನಿರ್ಮಾಣ ಮಾಡಿರುವ ಖುಷಿಯಿದೆ ಎಂದು ನಿರ್ಮಾಪಕ ಡಾ.ವಿದ್ಯಾಸಾಗರ್ ತಿಳಿಸಿದರು.

ತಮ್ಮ ಪಾತ್ರದ ಬಗ್ಗೆ ನಾಯಕಿ ಹರ್ಷಿಕಾ ಪೂಣಚ್ಛ ಮಾಹಿತಿ ನೀಡಿದರು. ನಟ ಭಜರಂಗಿ ಪ್ರಸನ್ನ, ಸಂಗೀತ ನಿರ್ದೇಶಕ ಆರವ್ ರಿಷಿಕ್, ಛಾಯಾಗ್ರಹಕ ಪಿ.ವಿ.ಆರ್ ಸ್ವಾಮಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಹೊಸಬರ ಆಪರೇಷನ್ ರೆಡಿ: ಆಪರೇಷನ್ ಡಿ ಟ್ರೇಲರ್ ಹೊರ ತರಲು ತಂಡ ಸಜ್ಜು

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರಕ್ಕೆ ಡಬ್ಬಿಂಗ್, SFX, ಸಂಗೀತ ಸಂಯೋಜನೆ ಮುಕ್ತಯವಾಗಿ VFX ಕೆಲಸ ಆರಂಭವಾಗಿದೆ, ಶೀಘ್ರದಲ್ಲೇ ಟ್ರೇಲರ್ ಬಿಡುಗಡೆಯಾಗಲಿದೆ.

ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ತಿರುಮಲೇಶ್ ವಿ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.

ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಹಾಗೂ ಕ್ರಿಯೇಟಿವ್ ಹೆಡ್ ಆಗಿ ಸುರೇಶ್ .ಬಿ. ಕಾರ್ಯ ನಿರ್ವಹಿಸಿದ್ದಾರೆ.

ತಿರಮಲೇಶ್ ಅವರು ರಾಜ ರವಿಶಂಕರ್, ಸಿದ್ದರಾಜು, ಪ್ರಶಾಂತ್ ಜೊತೆಗೂಡಿ ಸಂಭಾಷಣೆ
ಬರೆದಿದ್ದಾರೆ.

ವೇದಿಕ ಹಾಗೂ ದ್ವೈಪಾಯನ‌ ಸಿಂಗ್ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಕೆಂಪಗಿರಿ ಒಂದು ಹಾಡು ಹಾಗೂ ವೇದಿಕ ಉಳಿದ ಎಲ್ಲಾ ಹಾಡುಗಳನ್ನು ರಚಿಸಿದ್ದಾರೆ.

ಅನಿರುದ್ಧ್ ಶಾಸ್ತ್ರಿ ಮೊದಲ ಬಾರಿಗೆ ಚಿತ್ರದ ನಾಲ್ಕು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ವೇದಿಕ ಹಾಗೂ ಪೃಥ್ವಿ ಭಟ್ ಸಾಥ್ ನೀಡಿದ್ದಾರೆ,

ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ತರ್ಮಾಕೋಲ್ ಶ್ರೀನಿವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ
ಈ ಚಿತ್ರದ ನೃತ್ಯ ನಿರ್ದೇಶಕರು.

ವಿನೋದ್ ದೇವ್, ಸುಹಾಸ್ ಆತ್ರೇಯ, ರುದ್ರೇಶ್ ಬೂದನೂರು ಈ ಚಿತ್ರದ ನಾಯಕರಾಗಿ ನಟಿಸಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ ಬಿ ಚನ್ನಪ್ಪ ಇದ್ದಾರೆ.

ಶಿವಮಂಜು, ವೆಂಕಟಾಚಲ, ಜೂ ನರಸಿಂಹರಾಜು, ಮಹೇಶ್ ಎಸ್ ಕಲಿ, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ, ಸಂಚಯ ನಾಗರಾಜ್,ಕಿರಣ್ ಈಡಿಗ, ರವಿಶಂಕರ್,ಶಿವಾನಂದ, ಸೂರ್ಯವಂಶಿ(ಶಿವು ಅಪ್ಪಾಜಿ), ನಂಜಪ್ಪ ಎಸ್ ದೊಡ್ಡಮದುರೆ ಆರ್ ಜೆ ಧೀರಜ್, ಪೃಥ್ವಿ ಬನವಾಸಿ, ಆಶಾ, ರೂಪ ಆರ್, ಧನಲಕ್ಷ್ಮೀ, ಕಿರಣ್, ನಾಗರಾಜ್ ದಾವಣಗೆರೆ, ಸಂತೋಷ್,ನಾಗರಾಜ್ ಕೀಲಗೆರೆ,ಖಾದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಜ್ಯೂನಿಯರ್ ಎನ್ ಟಿ ಆರ್ ಹೊಸ ಚಿತ್ರ ದೇವರ: ಪೋಸ್ಟರ್ ರಿಲೀಸ್ ಆಯ್ತು

RRR ಚಿತ್ರದ ನಂತರ ತೆಲುಗು ನಟ ಜ್ಯೂನಿಯರ್ ಎನ್ಟಿಆರ್ ಇದೀಗ ಕೊರಟಾಲ ಶಿವ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾದರೂ ಚಿತ್ರತಂಡ ಮಾತ್ರ ಇದುವರೆಗೂ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಜ್ಯೂನಿಯರ್ ಎನ್ಟಿಆರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರದ ಹೆಸರನ್ನು ಘೋಷಿಸಲಾಗಿದೆ. ಚಿತ್ರಕ್ಕೆ ‘ದೇವರ’ ಎಂಬ ಶೀರ್ಷಿಕೆ ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.


ಈ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು, ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು. ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.


‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.
2024ರ ಏಪ್ರಿಲ್ 06ಕ್ಕೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.

Categories
ಸಿನಿ ಸುದ್ದಿ

ರಿಷಿ ಹೊಸ ಸಿನಿಮಾ ಶುರು: ಕನ್ನಡ ತಮಿಳು ಭಾಷೆಯಲ್ಲಿ ಚಿತ್ರ ನಿರ್ಮಾಣ

ಕವಲುದಾರಿ ಮತ್ತು ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಅವರು ನಟಿಸುತ್ತಿರುವ ಬಹುಕೋಟಿ ಬಜೆಟ್ ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿರುತ್ತಾರೆ ಮತ್ತು ಕಥೆಯ ಆಯ್ಕೆಯಲ್ಲಿಯೂ ಕೂಡ ತುಂಬಾ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ.


ಈ ಚಿತ್ರ ಜೂನ್ ಎರಡರಂದು ಅಧಿಕೃತವಾಗಿ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಸಿನಿಮಾದ ಹೆಸರು. ನಿರ್ಮಾಣ ಸಂಸ್ಥೆ ಮತ್ತು ತಾರಾ ಬಳಗದ ಬಗ್ಗೆ ಜೂನ್ 2ರಂದು ಚಿತ್ರತಂಡ ತಿಳಿಸಲಿದೆ.
ಈ ಚಿತ್ರವನ್ನು ಡಿಯರ್ ವಿಕ್ರಂ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ ಎಸ್ ನಂದೀಶ್ ಅವರು ನಿರ್ದೇಶನ ಮಾಡಲಿದ್ದಾರೆ.


ತಮ್ಮ ಪ್ರಥಮ ಚಿತ್ರ ಓ ಟಿ ಟಿ ಯಲ್ಲಿ ಬಿಡುಗಡೆಗೊಂಡು ಅದ್ಭುತ ಯಶಸ್ಸು ಸಾಧಿಸಿರುವುದು ನಿರ್ದೇಶಕರಿಗೆ ಮತ್ತೊಂದು ಚಿತ್ರ ಮಾಡಲು ಹುಮ್ಮಸ್ಸು ಮತ್ತು ಪ್ರೋತ್ಸಾಹ ಕೊಟ್ಟಿದೆ. ಡಿಯರ್ ವಿಕ್ರಂ ಚಿತ್ರವನ್ನು ಓಟಿಟಿಯಲ್ಲಿ ನೋಡಿದ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ರೀಮೇಕ್ ಮಾಡಲು ಮಾತುಕತೆ ನಡೆಸುತ್ತಿದೆ.


ನೈಜ ಘಟನೆಗಳ ಆದರಿಸಿದ ಚಿತ್ರ “ಡಿಯರ್ ವಿಕ್ರಂ”, ನಕ್ಸಲ್ ಮತ್ತು ರಾಜಕೀಯ ಕಥಾಂದರ ಗಳನ್ನು ಒಳಗೊಂಡ ಚಿತ್ರವಾಗಿತ್ತು. ಓ ಟಿ ಟಿ ಯಲ್ಲಿ ಬಿಡುಗಡೆಗೊಂಡ ನಂತರ ತುಂಬಾ ಜನ ಇದು ಥಿಯೇಟರ್ ನಲ್ಲಿ ಬಿಡುಗಡೆ ಆಗಬೇಕಾಗಿತ್ತು ಎಂದು ಮಾತನಾಡಿದ್ದಾರೆ..
ಆದರೆ ನಿರ್ದೇಶಕರು ನೇರವಾಗಿ ಓಟಿಟಿ ನಲ್ಲಿ ಬಿಡುಗಡೆಗೊಂಡಿದ್ದಕ್ಕೆ ಯಾವುದೇ ಬೇಸರವಿಲ್ಲ ಯಾಕೆಂದರೆ ಪ್ರಸ್ತುತ ಕಾಲದಲ್ಲಿ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಅನಿವಾರ್ಯ.

ಥಿಯೇಟರ್ ನಷ್ಟೇ ಓಟಿಟಿ ಕೂಡ ಮನರಂಜನೆಯನ್ನು ಜನಕ್ಕೆ ತಲುಪಿಸುವ ಒಂದು ಮಾಧ್ಯಮ ಎಂದು ಹೇಳಿದ್ದಾರೆ.
ಆದರೆ ಈಗ ತಯಾರಿ ನಡೆಯುತ್ತಿರುವ ಈ ಚಿತ್ರ, ಚಿತ್ರಮಂದಿರಗಳಲ್ಲಿ ಮತ್ತು ಓ ಟಿ ಟಿ ಯಲ್ಲಿ ಬಿಡುಗಡೆಗೊಳ್ಳುತ್ತದೆ.
ತಾರಾ ಬಳಗದಲ್ಲಿ ತೆಲುಗಿನ ಕೆಲವು ಪ್ರಖ್ಯಾತ ನಟರು ಕೂಡ ನಟಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ಲವ್‌ ಯು ಅಭಿ: ಭರಪೂರ ಥ್ರಿಲ್ ಕೊಡುವ ಸಸ್ಪೆನ್ಸ್ ಥ್ರಿಲ್ಲರ್! ಮೇ 19ರಿಂದ ಜಿಯೋ ಸಿನಿಮಾದಲ್ಲಿ ಕನ್ನಡ ವೆಬ್‌ ಸಿರೀಸ್‌: ಇದು ಉಚಿತ ವೀಕ್ಷಣೆ!!

ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್‌ ಯು ಅಭಿ’ ಎಂಬ ಕನ್ನಡ ವೆಬ್‌ ಸಿರೀಸ್‌ ಮೇ 19ರಂದು ‘JioCinema’ದಲ್ಲಿ ನೇರವಾಗಿ ಬಿಡುಗಡೆಗೊಳ್ಳುತ್ತಿದೆ. ಇದನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ!


ಕಾಳಿ ವೇಲಾಯುಧಂ ನಿರ್ಮಾಣ ಮಾಡಿ ನಿರ್ದೇಶಿಸಿರುವ ‘JioCinema’ ಒರಿಜಿನಲ್‌ ವೆಬ್‌ ಸಿರೀಸ್‌ನಲ್ಲಿ ಅದಿತಿ ಪ್ರಭುದೇವ, ವಿಕ್ರಮ್‌ ರವಿಚಂದ್ರನ್‌ ಮತ್ತು ರವಿಶಂಕರ್‍ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.
ಎಲ್ಲರೊಳಗೊಬ್ಬ ಶಿವ: ಹಿರಿಯ ನಟ ರವಿಚಂದ್ರನ್‌ ಅವರ ಪುತ್ರ ವಿಕ್ರಮ್‌ ರವಿಚಂದ್ರನ್ ಅವರಿಗೂ ಇದು ಮೊದಲ ವೆಬ್‌ ಸಿರೀಸ್‌. ತಮ್ಮ ಪಾತ್ರದ ಕುರಿತು ತುಂಬ ಉತ್ಸಾಹದಿಂದ ವಿವರಿಸುತ್ತಾರೆ ವಿಕ್ರಮ್. ‘ಶಿವ ನಿಮ್ಮನ್ನು ಕಾಡುತ್ತಾನೆ, ನಿಮ್ಮ ಮನಸ್ಸನ್ನು ಚುಚ್ಚುತ್ತಾನೆ.

ಯಾಕೆಂದರೆ ಈ ಶಿವ ಎಲ್ಲರೊಳಗೂ ಇದ್ದಾನೆ. ಹಲವು ನಿಗೂಢಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಅದನ್ನು ಯಾರೊಂದಿಗೂ ಹಂಚಿಕೊಳ್ಳದ ವ್ಯಕ್ತಿ ಆತ. ಒಂದೊಮ್ಮೆ ಅವನು ಹಂಚಿಕೊಳ್ಳಲು ಯತ್ನಿಸಿದರೂ ಪರಿಸ್ಥಿತಿ ಅದಕ್ಕೆ ವಿರುದ್ಧವಾದ ಸನ್ನಿವೇಶವನ್ನು ಸೃಷ್ಟಿಸಿಬಿಡುತ್ತದೆ. ‘ಪ್ರೇಮ ಮತ್ತು ಯುದ್ಧದಲ್ಲಿ ಎಲ್ಲವೂ ನ್ಯಾಯೋಚಿತವೇ’ ಎಂಬ ಮಾತಿದೆ. ಆದರೆ ಶಿವ ಮತ್ತು ಅವನ ಬದುಕಿನ ವಿಷಯಕ್ಕೆ ಬಂದಾಗ, ಅವನ ಪ್ರೇಮದಲ್ಲಿಯೂ, ಬದುಕಿನಲ್ಲಿ ಹೋರಾಟದಲ್ಲಿಯೂ ನ್ಯಾಯೋಚಿತವಾಗಿದ್ದು ನಡೆಯುವುದೇ ಇಲ್ಲ’. ಎಂದು ತಮ್ಮ ಪಾತ್ರದ ಕುರಿತು ವಿವರಿಸುತ್ತಾರೆ ಶಿವನ ಪಾತ್ರಕ್ಕೆ ಜೀವ ತುಂಬಿದ ವಿಕ್ರಮ್ ರವಿಚಂದ್ರನ್.


ವಿಕ್ರಮ್, ಅದಿತಿ ಜೋಡಿ- ರವಿಶಂಕರ್ ಅಬ್ಬರದ ಮೋಡಿ:
ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅದಿತಿ ಪ್ರಭುದೇವ ‘ಲವ್‌ ಯು ಅಭಿ’ಯ ಮೂಲಕ ವೆಬ್‌ ಸಿರೀಸ್‌ ಜಗತ್ತಿಗೂ ಜಿಗಿದಿದ್ದಾರೆ. ಇವರಿಬ್ಬರ ಕ್ಯೂಟ್‌ ಕಾಂಬಿನೇಷನ್‌ ಜೊತೆ ಖ್ಯಾತ ನಟ ರವಿಶಂಕರ್‍ ಅವರ ಅಬ್ಬರದ ಭರ್ಜರಿ ಮಸಾಲೆಯೂ ಇದೆ. ಪೊಲೀಸ್‌ ಅಧಿಕಾರಿಯಾಗಿ ರವಿಶಂಕರ್‍ ಅವರ ಆರ್ಭಟವನ್ನು ನೋಡಿಯೇ ಸವಿಯಬೇಕು.
‘ಎಲ್ಲ ಕಲಾವಿದರೂ ತಮ್ಮದೇ ಆದ ರಿದಮ್ ನಲ್ಲಿ, ಮನೋಭಾವದಲ್ಲಿ ನಟಿಸುತ್ತ ಹೋಗುತ್ತಿರುತ್ತೇವೆ. ಕಲಾವಿದರ ಜರ್ನಿ ಹಾಗೆಯೇ ಇರುತ್ತದೆ. ಒಂದೊಂದ್ಸಲ ಅದು ಬ್ರೇಕ್ ಆಗಬೇಕಾಗುತ್ತದೆ. ಅಭಿ ನನ್ನ ನಟನಾಪಯಣವನ್ನು ಹಾಗೆ ಬ್ರೇಕ್ ಮಾಡಿದಂಥ ಪಾತ್ರ. ನನ್ನ ಇಡೀ ವ್ಯಕ್ತಿತ್ವಕ್ಕೇ ಚಾಲೆಂಜ್ ಮಾಡಿದಂಥ ಪಾತ್ರ. ಆ ಪಾತ್ರದಲ್ಲಿ ನಟಿಸುತ್ತ ನನ್ನ ವ್ಯಕ್ತಿತ್ವದಲ್ಲೂ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದೀನಿ. ಐ ಲವ್ ಅಭಿ. ಬಹುಶಃ ತುಂಬ ಜನರಿಗೆ ಅಭಿ ಇಷ್ಟ ಆಗ್ತಾಳೆ’ ಎಂದು ತುಂಬ ವಿಶ್ವಾಸದಿಂದ ಹೇಳುತ್ತಾರೆ ಅದಿತಿ ಪ್ರಭುದೇವ.


ಹಲವು ಭಾವಗಳ ಸಂಗಮ:
ಪ್ರೇಮ, ವಿರಹ, ಕೊಲೆ, ತನಿಖೆ ಹೀಗೆ ನೋಡುಗರನ್ನು ಕುರ್ಚಿಯ ತುದಿಯಲ್ಲಿ ಕೂಡುವಂತೆ ಮಾಡಬಲ್ಲ ಎಲ್ಲ ಅಂಶಗಳೂ ಇದರಲ್ಲಿದೆ. ಒಂದು ಸಾವಿನ ಸುತ್ತ ಬೆಳೆಯುತ್ತ ಹೋಗುವ ಈ ಕಥನದಲ್ಲಿ ಮನಸ್ಸನ್ನು ಭಾವುಕಗೊಳಿಸುವ ಸನ್ನಿವೇಶಗಳಿವೆ, ದಾಂಪತ್ಯದ ಮಧುರ ಕ್ಷಣಗಳನ್ನು ಉಣಬಡಿಸುವ ದೃಶ್ಯಗಳಿವೆ, ಪ್ರೇಮದ ವ್ಯಾಮೋಹ ಮತ್ತು ಸತ್ಯದ ಹಂಬಲದ ನಡುವಿನ ಘರ್ಷಣೆಯೂ ಇದೆ. ಅನುಮಾನ, ವಂಚನೆ, ಮುಗ್ಧ ಪ್ರೇಮ, ಒಳ್ಳೆಯತನ, ಸ್ವಾರ್ಥ, ಪ್ರಾಮಾಣಿಕತೆ ಎಲ್ಲ ಗುಣಗಳೂ ಸೇರಿ ರೂಪುಗೊಂಡ ಅಪರೂಪದ ರಸಪಾಕ ‘ಲವ್‌ ಯು ಅಭಿ’. ಮೂವತ್ತು ನಿಮಿಷಗಳ ಏಳು ಎಪಿಸೋಡ್‌ಗಳಲ್ಲಿ ಅಭಿಯ ಬದುಕಿನ ಕಥೆಯನ್ನು ಹೇಳಲಾಗಿದೆ.


ಯುವನಟರ ಧಮಾಲ್; ಅನುಭವಿಗಳ ಕಮಾಲ್:
ಕನ್ನಡ ದೃಶ್ಯಮಾಧ್ಯಮ ಲೋಕಕ್ಕೆ ಹೊಸ ಫ್ಲೇವರ್ ಪರಿಚಯಿಸಲಿರುವ ಈ ಸಸ್ಪೆನ್ಸ್ ಥ್ರಿಲ್ಲರ್‍ ಕಥೆಯಲ್ಲಿ ಹೊಸ ಉತ್ಸಾಹದ ನಟರ ಜೊತೆಗೆ ವಿನಯಾ ಪ್ರಸಾದ್, ರಚಿತಾ ಮಹಾಲಕ್ಷ್ಮಿ, ಅಶೋಕ್ ಶರ್ಮ, ಶ್ರೀನಾಥ್, ಅಂಬಿಕಾ, ಶ್ರೀನಿವಾಸ ಮೂರ್ತಿ, ಸುಂದರ್‍ರಾಜ್‌ ಹೀಗೆ ಅನುಭವಿ ಕಲಾವಿದರ ದಂಡೂ ಇದೆ.
‘ಲವ್‌ ಯು ಅಭಿ’ಗೆ ಅರುಣ್ ಬ್ರಹ್ಮ ಅವರ ಕ್ಯಾಮೆರಾ ಚಳಕವಿದ್ದು, ಪ್ರದಿಪ್‌ ರಾಘವ್ ಸಂಕಲನ ಮಾಡಿದ್ದಾರೆ. ನಿಜಿಲ್‌ ದಿನಕರ್‍ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವನ್ನು ನಿರ್ವಹಿಸಿದ್ದಾರೆ. ಅಭಿಲಾಷ್‌ ಗೌಡ ಮತ್ತು ಜಿ.ವಿ. ಸತೀಶ್‌ ಕುಮಾರ್ ಜಂಟಿಯಾಗಿ ಮಾತುಗಳನ್ನು ಪೋಣಿಸಿದ್ದಾರೆ.

Categories
ಸಿನಿ ಸುದ್ದಿ

ರಿಚ್ಚಿ ಮೆಚ್ಚಿದ ಕುನಾಲ್ : ಗೌಸ್ ಪೀರ್ ಬರೆದ ಹಾಡು ಹೊರಬಂತು

ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.

ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ”ರಿಚ್ಚಿ” ಅವರಿಗಾಗಿ ಬಂದಿದ್ದೇನೆ. ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ಸಾಂಗ್ ಇಂದು ಮೆಲೋಡಿ ಸಾಂಗ್ ಬಿಡುಗಡೆಯಾಗಿದೆ. ಅಗಸ್ತ್ಯ ಅವರ ಸಂಗೀತ ಸಂಯೋಜನೆ ಚೆನ್ನಾಗಿದೆ. ಚಿನ್ನಿಪ್ರಕಾಶ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೌಸ್ ಫೀರ್ ಹಾಡು ಬರೆದಿದ್ದಾರೆ. “ರಿಚ್ಚಿ” ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಕುನಾಲ್ ಗಾಂಜಾವಾಲ ಹಾರೈಸಿದರು.


2005 ನೇ ಇಸವಿಯಲ್ಲಿ “ಆಕಾಶ್” ಚಿತ್ರದ ಹಾಡು ಹಾಡಲು ಬಂದಾಗ ಡಾ.ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಕೈಗೊಂದು ಮುತ್ತು ಕೊಟ್ಟಿದ್ದರು. ಅದು ನನ್ನ ಜೀವನದಲ್ಲಿ ಮರೆಯಲಾಗದ ಘಟನೆ ಎಂದ ಕುನಾಲ್ ಗಾಂಜಾವಾಲ, ಪುನೀತ್ ರಾಜಕುಮಾರ್ ಅವರೊಟ್ಟಿಗಿನ ಒಡನಾಟವನ್ನು ನೆನಪಿಸಿಕೊಂಡರು.

“ರಿಚ್ಚಿ” ಒಂದು ಪ್ರೇಮಕಥೆಯ ಚಿತ್ರ. ನಾನು ಚಿಕ್ಕಂದಿನಿಂದಲೇ ಕುನಾಲ್ ಗಾಂಜಾವಾಲ ಅವರ ಅಭಿಮಾನಿ. ನನ್ನ ಚಿತ್ರಕ್ಕೆ ಅವರು ಹಾಡಬೇಕೆಂಬುದು ನನ್ನ ಆಸೆ. ಅದು ಈಡೇರಿದೆ. ಎರಡು ಹಾಡುಗಳನ್ನು ಅವರು ಹಾಡಿದ್ದಾರೆ. ಒಂದು ಈಗ ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರ ಬರಲಿದೆ. ಆಗಸ್ಟ್ ನಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಾಯಕ, ನಿರ್ಮಾಪಕ ಹಾಗೂ ನಿರ್ದೇಶಕ “ರಿಚ್ಚಿ” ಹೇಳಿದರು.

ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕ ರಾಕೇಶ್ ರಾವ್, ಪ್ರಕೃತಿ ಬನವಾಸಿ, ನಿರ್ಮಾಪಕರಾದ ಅಣಜಿ ನಾಗರಾಜ್, ವೆಂಕಟೇಶ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಕನ್ನಡ ಸಿನಿ ಪ್ರೇಮಿಗಳಿಗೆ ಪಿವಿಆರ್- ಐನಾಕ್ಸ್ ಬಂಪರ್ ಆಫರ್ ! ಮೇ 19ರಿಂದ 25ರವರೆಗೆ ಕನ್ನಡದ ಬ್ಲಾಕ್ ಬಸ್ಟರ್ಸ್ ಸಿನಿಮಾಗಳು ರೀ-ರಿಲೀಸ್

ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವುದೇ ಒಂದು ಅದ್ಭುತ ಅನುಭವ. ಆದರೆ ಪಿವಿಆರ್ ಹಾಗೂ ಐನಾಕ್ಸ್​ ಗಳಂಥಹಾ ಮಲ್ಟಿಪ್ಲೆಕ್ಸ್​ಗಳು ಕೊಡುವ ಸೇವೆಗಿಂತಲೂ ಹೆಚ್ಚೇ ಶುಲ್ಕವನ್ನು ಪಡೆಯುತ್ತವೆ ಎಂಬುದು ಗ್ರಾಹಕರ ಅಪವಾದ. ಇದೀಗ ಪಿವಿಆರ್ ಹಾಗೂ ಐನಾಕ್ಸ್ ಜಂಟಿಯಾಗಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಬಂಪರ್ ಆಫರ್ ಕೊಟ್ಟಿದೆ.

ಪಿವಿಆರ್ ಹಾಗೂ ಐನಾಕ್ಸ್ ಕನ್ನಡ ಸಿನಿಮಾಗಳನ್ನು ಸಂಭ್ರಮಿಸುವ ಸುವರ್ಣ ಅವಕಾಶವನ್ನು ನೀಡಿದೆ. ಕನ್ನಡ ಸ್ಪೆಷಲ್ ಎಂಬ ವಿಶೇಷ ಆಫರ್ ನೀಡಿದೆ. ಅಂದರೆ ಕನ್ನಡ ಇಂಡಸ್ಟ್ರಿಯ ಬ್ಲಾಕ್ ಬಸ್ಟರ್ ಚಿತ್ರಗಳನ್ನು ರೀ ರಿಲೀಸ್ ಮಾಡುತ್ತಿದೆ. ಅದು ಕಡಿಮೆ ಬೆಲೆಯಲ್ಲಿ. ಕೇವಲ 99 ರೂಪಾಯಿಂದ ಟಿಕೆಟ್ ಶುರು ಮಾಡಿದೆ. ಹಾಗಿದ್ರೆ ಪಿವಿಆರ್ ಹಾಗೂ ಐನಾಕ್ಸ್ ಗಳಲ್ಲಿ ಮತ್ತೊಮ್ಮೆ ರಿಲೀಸ್ ಆಗಲಿರುವ ಬ್ಲಾಕ್ ಬಸ್ಟರ್ಸ್ ಚಿತ್ರಗಳಿವು.

  1. ರಾಜಕುಮಾರ
  2. ಯಜಮಾನ
  3. ಕೆಜಿಎಫ್-1
  4. ಮಫ್ತಿ
  5. ಮಾಸ್ಟರ್ ಪೀಸ್
  6. ಗಂಧದಗುಡಿ
  7. ಗರುಡ ಗಮನ ವೃಷಭ ವಾಹನ

ಯಾವಾಗ ಯಾವ ಚಿತ್ರ ರಿಲೀಸ್

ಪವರ್ ಸ್ಟಾರ್‌ ಪುನೀತ್ ರಾಜ್ ಕುಮಾರ್ ನಟನೆಯ ಫ್ಯಾಮಿಲಿ ಎಂಟರ್ ಟೈನರ್ ಸೂಪರ್ ಹಿಟ್ ಸಿನಿಮಾ ರಾಜಕುಮಾರ ಇದೇ ಶುಕ್ರವಾರದಂದು ರೀ ರಿಲೀಸ್ ಆಗ್ತಿದ್ರೆ, ಶನಿವಾರದಂದು ಯಜಮಾನ, ಭಾನುವಾರ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ -1, ಸೋಮವಾರ ಶಿವಣ್ಣ ಶ್ರೀಮುರಳಿ ನಟನೆಯ ಮಫ್ತಿ, ಮಂಗಳವಾರದಂದು ಯಶ್ ನಟನೆಯ ಮಾಸ್ಟರ್ ಪೀಸ್, ಬುಧವಾರ ಅಪ್ಪು ಕನಸಿನ ಕೂಸು ಗಂಧದಗುಡಿ ಸಿನಿಮಾ ರಿಲೀಸ್ ಆಗಲಿವೆ.

ಗುರುವಾರ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ www.pvrcinemas.com ಭೇಟಿ ನೀಡಿ ಹಾಗೂ ಬುಕ್ ಮೈ ಶೋ ನಲ್ಲಿ ಟಿಕೇಟ್ಸ್ ಲಭ್ಯವಿದೆ.

Categories
ಸಿನಿ ಸುದ್ದಿ

ಮತ್ತೆ ಮದ್ವೆಯಾದ ಪವಿತ್ರಾ ನರೇಶ್ ಏನಂದ್ರು ಗೊತ್ತಾ?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ
ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು.

ಇದು ನಿಮ್ಮ ಜೀವನದ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವಿತ್ರಾ ಲೋಕೇಶ್, ”ಒಂದೆರಡು ನಿಮಿಷದ ಟೀಸರ್‌ ಟ್ರೇಲರ್‌ ನೋಡಿ ಯಾವ ನಿರ್ಧಾರಕ್ಕೂ ಬರಬೇಡಿ, ಸಿನಿಮಾ ನೋಡಿದರೆ ನಾವು ಏನು ಹೇಳಲು ಹೊರಟಿದ್ದೇವೆ ಎನ್ನುವುದು ಅರ್ಥವಾಗುತ್ತದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡಲು ಹೊರಟಿದ್ದೇವೆ. ಈಗಲೇ ಸಿನಿಮಾ ಕಥೆಯನ್ನು ಹೇಳಲು ಸಾಧ್ಯವಿಲ್ಲ. ನಮ್ಮ ಜೀವನಕ್ಕೂ ಸಿನಿಮಾಗೂ ಏನೂ ಸಂಬಂಧ ಇಲ್ಲ. ಸಿನಿಮಾ ಬೇರೆ, ವೈಯಕ್ತಿಕ ಜೀವನವೇ ಬೇರೆ.

ನನ್ನ‌ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ, ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್‌ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು” ಎಂದು ಪವಿತ್ರಾ ಹೇಳಿದರು.

ನರೇಶ್‌ ಮಾತನಾಡಿ, ”ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ? ನಾನಂತೂ ಸಿಂಗಲ್‌ ಅಲ್ಲ, ಪವಿತ್ರಾ ಹಾಗೂ ನಾವಿಬ್ಬರೂ ಲಿವ್‌ ಇನ್‌ ರೀಲೇಶನ್‌ಶಿಪ್‌ನಲ್ಲಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡರು.

ಮಳ್ಳಿ ಪೆಳ್ಳಿ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮಳ್ಳಿ ಪೆಳ್ಳಿ’ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ.

ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.‌ ಮೇ 26ಕ್ಕೆ ಮಳ್ಳಿ ಪೆಳ್ಳಿ ಎಂಬ ಟೈಟಲ್ ನಡಿ ತೆಲುಗಿನಲ್ಲಿ ಸಿನಿಮಾ ತೆರೆ ಕಾಣುತ್ತಿದೆ. ಕನ್ನಡದಲ್ಲಿ ಇನ್ನೂ ರಿಲೀಸ್ ಡೇಟ್ ಫೈನಲ್ ಆಗಿಲ್ಲ.

Categories
ಸಿನಿ ಸುದ್ದಿ

ತುಪ್ಪದ ಹುಡುಗಿ ಹುಟ್ದಬ್ಬಕ್ಕೆ ಫ್ಯಾನ್ಸ್ ಬಿಗ್ ಪ್ಲಾನ್: ಮೇ.24ರಂದು ರಾಗಿಣಿ ಬರ್ತ್ ಡೇಗೆ ಸಾಮಾಜಿಕ ಕಾರ್ಯಕ್ರಮ

ಮೇ 24 ರಂದು ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.


ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಮೇ 24 ರಂದು ಬೆ.10 ರಿಂದ ಸಂಜೆ 5 ರವರೆಗೂ ಆರೋಗ್ಯ ತಪಾಸಣೆ,‌‌ ನೇತ್ರ ತಪಾಸಣೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.

ಜನರಿಗೆ ಉಪಕಾರವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಗಿಣಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

error: Content is protected !!