ರಮೇಶ್ ರೆಡ್ಡಿ ನಿರ್ಮಾಣದ ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆ ಮಾಡುತ್ತಿರೋದು ಗೊತ್ತೇ ಇದೆ. ಆ ಸಿನಿಮಾಗೆ ಈಗ ನಾಯಕಿ ಬೇಕಾಗಿದೆ. ಹೌದು, ಅರ್ಜುನ್ ಜನ್ಯ ಮೊದಲ ಸಲ ನಿರ್ದೇಶಿಸುತ್ತಿರುವ ಚಿತ್ರಕ್ಕೆ ಹೀರೋಯಿನ್ ಹುಡುಕಾಟ ನಡೆಯುತ್ತಿದೆ.
“ನಾತಿಚರಾಮಿ”, ” ಗಾಳಿಪಟ ೨” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ “45” ಪ್ಯಾನ್ ಇಂಡಿಯಾ ಚಿತ್ರವನ್ನು ಖ್ಯಾತ ಸಂಗೀತ ಸಂಯೋಜಕ ಅರ್ಜುನ್ ಜನ್ಯ ನಿರ್ದೇಶಿಸುತ್ತಿದ್ದಾರೆ. ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮೂವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಮಹತ್ವಾಕಾಂಕ್ಷೆಯ ಈ ಚಿತ್ರಕ್ಕೆ ಚಿತ್ರತಂಡ ನಾಯಕಿಯ ಹುಡುಕಾಟ ನಡೆಸುತ್ತಿದೆ. ನಾಯಕಿಯ ಪಾತ್ರಕ್ಕೆ ಕನ್ನಡ ಬರುವವರಿಗೆ ಮೊದಲ ಆದ್ಯತೆ. ಆಸಕ್ತಿ ಇರುವವರು ತಮ್ಮ ಇತ್ತೀಚಿನ ಎಡಿಟ್ ಮಾಡದ ಫೋಟೊ ಹಾಗೂ ಚಿಕ್ಕ ವಿಡಿಯೋ ತುಣುಕನ್ನು [email protected] ಗೆ ಕಳುಹಿಸಬಹುದು.
‘ಭೀಷ್ಮ’ ಸಿನಿಮಾ ನಂತರ ಮತ್ತೊಮ್ಮೆ ನಿತಿನ್ ಹಾಗೂ ರಶ್ಮಿಕಾ ಮಂದಣ್ಣ ಜೋಡಿ ತೆರೆ ಮೇಲೆ ಮೋಡಿ ಮಾಡಲು ರೆಡಿಯಾಗಿದ್ದಾರೆ. ಇಂದು ನಿತಿನ್,ರಶ್ಮಿಕಾ ಮಂದಣ್ಣ ಜೋಡಿಯ ಹೊಸ ಸಿನಿಮಾ ಸೆಟ್ಟೇರಿದ್ದು, ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಿರ್ಮಾಣದಲ್ಲಿ ನಿತಿನ್, ರಶ್ಮಿಕಾ ಮಂದಣ್ಣ ಸಿನಿಮಾ ಮೂಡಿ ಬರುತ್ತಿದೆ. ಮತ್ತೊಮ್ಮೆ ಈ ಜೋಡಿ ‘ಭೀಷ್ಮ’ ಸಿನಿಮಾ ನಿರ್ದೇಶಕ ವೆಂಕಿ ಕುದುಮುಲ ಜೊತೆ ಕೈ ಜೋಡಿಸಿದ್ದಾರೆ. ಇಂದು ಮೂವರ ಕಾಂಬಿನೇಶನ್ ಒಳಗೊಂಡ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಮೆಗಾ ಸ್ಟಾರ್ ಚಿರಂಜೀವಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ‘ಭೀಷ್ಮ’ ಚಿತ್ರಕ್ಕೂ ವಿಭಿನ್ನವಾಗಿ ಸಿನಿಮಾ ಮೂಡಿ ಬರಲಿದೆ ಅನ್ನೋದಕ್ಕೆ ಬಿಡುಗಡೆಯಾಗಿರುವ ವೀಡಿಯೋ ತುಣುಕು ಸಾಕ್ಷಿಯಾಗಿದೆ.
ನವೀನ್ ಯಾರ್ನೇನಿ ಮತ್ತು ವೈ.ರವಿ ಶಂಕರ್ ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಟ ಕಿರೀಟಿ ರಾಜೇಂದ್ರ ಪ್ರಸಾದ್ ಮತ್ತು ವೆನ್ನೆಲ್ಲಾ ಕಿಶೋರ್ ಚಿತ್ರದ ತಾರಾಬಳಗದಲ್ಲಿದ್ದಾರೆ.
ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಸಾಯಿ ಶ್ರೀರಾಮ್ ಕ್ಯಾಮೆರಾ ವರ್ಕ್, ಪ್ರವಿನ್ ಪುಡಿ ಸಂಕಲನ, ರಾಮ್ ಕುಮಾರ್ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ. ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ದಂತಚೋರ ವೀರಪ್ಪನ್ ಅವರ ಮಗಳು ಹಾಗೂ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, ‘ಮಾವೀರನ್ ಪಿಳ್ಳೈ’ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಇತ್ತೀಚೆಗೆ ಹಾಡುಗಳ ಬಿಡುಗಡೆಯಾಗಿದೆ.
ಚೆನ್ನೈನ ಪ್ರಸಾದ್ ಲ್ಯಾಬ್ನಲ್ಲಿ ನಡೆದ ಈ ಸಮಾರಂಭದಲ್ಲಿ ವೀರಪ್ಪನ್ ಪತ್ನಿ ಮುತ್ತು ಲಕ್ಷ್ಮೀ, ಆಲ್ ಪೀಪಲ್ಸ್ ಪೊಲಿಟಿಕಲ್ ಪಾರ್ಟಿ ಅಧ್ಯಕ್ಷೆ ರಾಜೇಶ್ವರಿ ಪ್ರಿಯಾ, ನಟ ಕೂಲ್ ಸುರೇಶ್, ನಿರ್ದೇಶಕ ಪೇರರಸು, ನಿರ್ಮಾಪಕ ಕೆ.ಎನ್.ಆರ್. ರಾಜ ಮುಂತಾದವರು ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ರಾಜ, ‘ಪ್ರತಿ ಸಂಸಾರದಲ್ಲೂ ಕುಡಿತದಿಂದ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತವೆ. ಕುಡಿತದಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದೇವೆ’ ಎಂದು ಹೇಳಿದರು. ವಿಜಯಲಕ್ಷ್ಮೀ ಅವರಿಗೆ ಬಾಲ್ಯದಿಂದಲೂ ನಟಿಸುವ ಆಸಕ್ತಿ ಇತ್ತಂತೆ. ‘ಮೊದಲಿನಿಂದಲೂ ನಟಿಸುವ ತುಡಿತ ಇತ್ತು. ಈಗ ಅವಕಾಶ ಸಿಕ್ಕಿದೆ. ಕುಡಿತದಿಂದಾಗಿ ಪ್ರತೀ ಮನೆಯಲ್ಲೂ ಸಾಕಷ್ಟು ಮಹಿಳೆಯರು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಅಂಥ ಮಹಿಳೆಯರ ಕುರಿತು ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿದೆ. ಅದೇ ಕಾರಣಕ್ಕೆ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದು ಹೇಳಿದರು.
ಒಂದು ಚಿತ್ರದಲ್ಲಿ ಯಾರು ನಟಿಸಿದ್ದಾರೆ ಅಥವಾ ಚಿತ್ರವನ್ನು ಯಾರು ನಿರ್ದೇಶಿಸಿದ್ದಾರೆ ಎಂಬುದು ಮುಖ್ಯವಲ್ಲ, ಚಿತ್ರದ ಕಥಾವಸ್ತು ಮುಖ್ಯ ಎಂದ ನಿರ್ದೇಶಕ ಪೇರರಸು, ‘ನಮ್ಮ ಚಿತ್ರರಂಗದಲ್ಲಿ ಮುಖ್ಯಮಂತ್ರಿಗಳ ಮಗನೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಾಗೆಯೇ, ವೀರಪ್ಪನ್ ಮಗಳು ಸಹ ಇದೀಗ ಚಿತ್ರರಂಗಕ್ಕೆ ಬಂದಿದ್ದಾರೆ. ಚಿತ್ರರಂಗ ಎಲ್ಲರನ್ನೂ ಕೈಬೀಡಿ ಕರೆಯುತ್ತದೆ. ನಾವು ಸಹ ವಿಜಯಲಕ್ಷ್ಮೀ ಅವರನ್ನು ಬಹಳ ಪ್ರೀತಿಯಿಂದ ಚಿತ್ರರಂಗಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ’ ಎಂದು ವಿಜಯಲಕ್ಷ್ಮೀ ಅವರಿಗೆ ಚಿತ್ರರಂಗಕ್ಕೆ ಸ್ವಾಗತ ಕೋರಿದರು.
‘ಇಂದು ದೊಡ್ಡವರಷ್ಟೇ ಅಲ್ಲ, ಸಣ್ಣ ಮಕ್ಕಳು ಸಹ ಕುಡಿಯುವ ವೀಡಿಯೋಗಳು ಬಿಡುಗಡೆಯಾಗಿ ಎಲ್ಲರಿಗೂ ಆಘಾತ ತಂದಿದೆ. ಈ ಚಿತ್ರದಲ್ಲಿ ‘ಸಾರಾಯಂ ಅಭಯಂ’ ಎಂಬ ಹಾಡಿದ್ದು, ಕುಡಿತದ ವಿರುದ್ಧದ ಅಭಿಯಾನದಲ್ಲಿ ಬಳಸಿಕೊಳ್ಳಬಹುದು. ಜನ ಮತ ಚಲಾಯಿಸುತ್ತಾರೋ, ಇಲ್ಲವೋ ಎಂಬ ಭಯದಿಂದ ಯಾವ ರಾಜಕಾರಿಣಿಯೂ ಕುಡಿತವನ್ನು ನಿಷೇಧಿಸುವ ಮಾತಾಡುವುದಿಲ್ಲ. ಅವರ ಭಾಷಣಗಳಲ್ಲಿ, ಮಾತುಗಳಲ್ಲಿ ಕುಡಿತ ಕುರಿತು ಪ್ರಸ್ತಾಪವೇ ಇರುವುದಿಲ್ಲ.
ಮುಂದಿನ ದಿನಗಳಲ್ಲಿ ಸಾರಾಯಿ ತರಹ ಗಾಂಜ ಅಂಗಡಿಗಳು ಪ್ರಾರಂಭವಾದರೂ ಆಶ್ಚರ್ಯವಿಲ್ಲ. ಆಗಾಗ ಆನ್ಲೈನ್ ರಮ್ಮಿಯಿಂದ ಜನ ಸಾಯುವ ಬಗ್ಗೆ ಕೇಳುತ್ತಿರುತ್ತೇವೆ. ಆದರೆ, ಕುಡಿತದಿಂದ ಪ್ರತೀ ದಿನ ನೂರಾರು ಜನ ಸಾಯುತ್ತಿದ್ದಾರೆ. ಆನ್ಲೈನ್ ರಮ್ಮಿಯನ್ನು ನಿಷೇಧಿಸಬೇಕು ಎನ್ನುವವರು ಕುಡಿತವನ್ನು ನಿಷೇಧಿಸಬೇಕು ಎಂದು ಆಗ್ರಹಿಸುವುದಿಲ್ಲ.
ಮಹಿಳೆಯರಿಗೆ ಸಾವಿರಾರು ರೂಪಾಯಿ ಬೇಕಿಲ್ಲ. ಅವರಿಗೆ ಎಸಿ ಬಸ್ ಬೇಕಿಲ್ಲ. ನೀಟ್ ಪರೀಕ್ಷೆಗಳು ಮುಖ್ಯವಲ್ಲ. ಜನಸಾಮಾನ್ಯರಿಗೆ ಸಮಸ್ಯೆ ಆಗಿರುವ ಸಾರಾಯಿಯನ್ನು ಮೊದಲು ನಿಷೇಧಿಸಿ’ ಎಂದು ಆಗ್ರಹಿಸಿ. ಈ ಚಿತ್ರಕ್ಕೆ ಮಂಜುನಾಥ ಅವರ ಛಾಯಾಗ್ರಹಣ ಮತ್ತು ರವಿವರ್ಮ ಸಂಗೀತವಿದೆ. ಪ್ರೇಮ್ ಹಿನ್ನೆಲೆ ಸಂಗೀತ ಸಂಯೋಜಿಸಿದರೆ, ಜೂಲಿಯನ್ ಸಂಕಲನಕಾರರಾಗಿ ದುಡಿದಿದ್ದಾರೆ.
‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಬೆಳ್ಳಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ‘ದಿಯಾ’ ಸಿನಿಮಾದಲ್ಲಿ ಸಿಂಪಲ್ ಹುಡುಗನ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದ ದೀಕ್ಷಿತ್, ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಸರಾ’ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಮಾರ್ಚ್ 30ರಂದು ‘ದಸರಾ’ ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದ್ದು, ಸೂರಿ ಪಾತ್ರದ ಮೂಲಕ ದೀಕ್ಷಿತ್ ಶೆಟ್ಟಿ ತೆರೆ ಮೇಲೆ ಬರುತ್ತಿದ್ದಾರೆ.
ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ನ್ಯಾಚುರಲ್ ಸ್ಟಾರ್ ನಾನಿ, ಕೀರ್ತಿ ಸುರೇಶ್ ಅಭಿನಯದ ‘ದಸರಾ’ ಸಖತ್ ಬಝ್ ಕ್ರಿಯೇಟ್ ಮಾಡಿದೆ. ಟೀಸರ್ ಮೂಲಕ ವರ್ಲ್ಡ್ ವೈಡ್ ಸಖತ್ ಸೌಂಡ್ ಮಾಡಿರುವ ಈ ಚಿತ್ರ ನಾನಿ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಪ್ರಾಜೆಕ್ಟ್. ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ನ್ಯಾಚುರಲ್ ಸ್ಟಾರ್ ಜೊತೆ ಸ್ಕ್ರೀನ್ ಶೇರ್ ಮಾಡಿರೋದು ವಿಶೇಷ.
ನಾನಿ ಸರ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಾಣವಾದ ‘ಮೀಟ್ ಕ್ಯೂಟ್’ ವೆಬ್ ಸೀರೀಸ್ ನಲ್ಲಿ ನಟಿಸಿದ್ದೆ. ವೆಬ್ ಸೀರೀಸ್ ಸಹ ನಿರ್ದೇಶಕರಾದ ವಿನಯ್ ನನ್ನ ಅಭಿನಯ ನೋಡಿ ದಸರಾ ಸಿನಿಮಾಗೆ ರೆಫರ್ ಮಾಡಿದ್ರು. ನಾನಿ ಸರ್ ಕೂಡ ವೆಬ್ ಸೀರೀಸ್ ನಲ್ಲಿ ನನ್ನ ಅಭಿನಯ ನೋಡಿ ಮೆಚ್ಚಿಕೊಂಡಿದ್ರು ಇದ್ರಿಂದ ದಸರಾ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ತು ಎನ್ನುತ್ತಾರೆ ದೀಕ್ಷಿತ್ ಶೆಟ್ಟಿ.
ಚಿತ್ರದಲ್ಲಿ ಸೂರಿ ಎಂಬ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಇಡೀ ಸಿನಿಮಾದಲ್ಲಿ ಈ ಪಾತ್ರ ಕ್ಯಾರಿಯಾಗುತ್ತೆ. ಹತ್ತು ತಿಂಗಳು ‘ದಸರಾ’ ಸಿನಿಮಾ ತಂಡದೊಂದಿಗೆ ಕೆಲಸ ಮಾಡಿದ್ದೇನೆ. ಈ ಚಿತ್ರ ಅದ್ಭುತ ಅನುಭವ ನೀಡಿದೆ. ನಿರ್ದೇಶಕರ ಜೊತೆಗೆ ನಾನಿ ಸರ್ ಕೂಡ ನನ್ನ ಪಾತ್ರ ನಿರ್ವಹಿಸಲು ಒಂದಿಷ್ಟು ಸಲಹೆ ನೀಡುತ್ತಿದ್ರು ಎಂದು ತಮ್ಮ ಪಾತ್ರ ಹಾಗೂ ‘ದಸರಾ’ ತಂಡದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ ದೀಕ್ಷಿತ್ ಶೆಟ್ಟಿ.
‘ದಿಯಾ’ ನಂತರ ದೀಕ್ಷಿತ್ ಶೆಟ್ಟಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದೇ ರೀತಿಯ ಕಥೆ, ಪಾತ್ರಕ್ಕೆ ಸೀಮಿತವಾಗದೇ ಅಳೆದು ತೂಗಿ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ‘ಕೆಟಿಎಂ’ ಹಾಗೂ ‘ಬ್ಲಿಂಕ್’ ಸಿನಿಮಾಗಳು ಕನ್ನಡದಲ್ಲಿ ಬಿಡುಗಡೆಗೆ ರೆಡಿಯಾಗಿವೆ. ಅದಕ್ಕೂ ಮೊದಲು ‘ದಸರಾ’ ಮೂಲಕ ಸೂರಿ ಪಾತ್ರದಲ್ಲಿ ತೆರೆ ಮೇಲೆ ರಂಜಿಸಲು ರೆಡಿಯಾಗಿದ್ದಾರೆ ದೀಕ್ಷಿತ್ ಶೆಟ್ಟಿ.
ಸ್ಟಾರ್ ಕ್ರಿಯೇಷನ್ಸ್ ಮೂಲಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಅವರು ನಿರ್ಮಿಸಿರುವ, ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ “ರಾನಿ” ಚಿತ್ರದ ಪೋಸ್ಟರ್ ಯಗಾದಿ ಹಬ್ಬಕ್ಕೆ ಬಿಡುಗಡೆಯಾಗಿದೆ. ನಾಯಕ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಕಿರಣ್ ರಾಜ್ 13,000 ಅಡಿ ಎತ್ತರದಿಂದ ಜಿಗಿದು ಟೈಟಲ್ ಬಿಡುಗಡೆ ಮಾಡಿ ಚಿತ್ರರಂಗ ಹಾಗೂ ಪ್ರೇಕ್ಷಕರಿಂದ ಪ್ರಶಂಸೆ ಪಡೆದುಕೊಂಡಿದ್ದರು. ಈಗ ಬಿಡುಗಡೆಯಾಗಿರುವ ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್ ಮಾಡಿದ್ದಾರಂತೆ.
ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿವೆ. “ರಾನಿ” ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದೆ. 5 ಸೆಟ್ ಗಳಲ್ಲಿ ಚಿತ್ರಿಕರಣ ಈಗಾಗಲೇ ಮುಗಿದಿದೆ. ಈಗಾಗಲೇ ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.
ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ. “ಸಿಂಗಾರ ಸಿರಿಯೆ” ಹಾಡು ಬರೆದಿರುವ ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ.
ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಸೂಕ್ಷ್ಮ ಕಥೆಯುಳ್ಳ, ಪಕ್ಕ ಆಕ್ಷನ್ ಚಿತ್ರ ಇದಾಗಿದ್ದು, ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಬಿಡುಗಡೆ ಯಾಗಲಿದೆ. ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿಯರು ಯಾರು ಎಂಬುದನ್ನು ತಿಳಿಸುತ್ತೇವೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.
‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.
ಮೆರ್ಲಿನ್ ಬಾಬಾಜಿ ಅಮೇರಿಕದಲ್ಲಿ ಖ್ಯಾತಿ ಗಳಿಸಿರುವ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ. ಕಳೆದ ವರ್ಷ ಇವರ ‘ವೈಬ್ಸ್’ ಸಾಂಗ್ ಬಿಡುಗಡೆಯಾಗಿ ಪ್ರಪಂಚದಾದ್ಯಂತ ಜನಪ್ರಿಯ ಗೊಂಡಿತ್ತು. ಸೋಶಿಯಲ್ ಮೀಡಿಯಾ ಸೆನ್ಸೇಶನ್ ಆಗಿದ್ದ ‘ವೈಬ್ಸ್’ ಸಾಂಗ್ ಹತ್ತು ಮಿಲಿಯನ್ ವೀವ್ಸ್ ಪಡೆದುಕೊಂಡಿತ್ತು. ಇದೀಗ ಮತ್ತೊಂದು ವೀಡಿಯೋ ಸಾಂಗ್ ಮೂಲಕ ಮೆರ್ಲಿನ್ ಸೆನ್ಸೇಶನ್ ಕ್ರಿಯೇಟ್ ಮಾಡಲು ಸಜ್ಜಾಗಿದ್ದಾರೆ. ತಮ್ಮ ಹೊಸ ವೀಡಿಯೋ ಹಾಡಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿರುವ ನಟಿ ಹಾಗೂ ಮಾಡೆಲ್ ಇತಿ ಆಚಾರ್ಯ ಅವರ ಜೊತೆ ಕೈ ಜೋಡಿಸಿರೋದು ವಿಶೇಷ.
ಮೆರ್ಲಿನ್ ಬಾಬಾಜಿ ಕಳೆದ ಒಂದು ವರ್ಷದಿಂದ ನನಗೆ ಪರಿಚಿತರು. ಅವರ ಸಂಗೀತದ ದೊಡ್ಡ ಅಭಿಮಾನಿ ನಾನು. ‘ಲವ್ ಹರ್ ಟೂ ಮಚ್’ ಸಾಂಗ್ ಕೇಳಿದ ಮೇಲೆ ತುಂಬಾ ಇಷ್ಟವಾಯ್ತು. ನಾನು ಈ ಹಾಡಿನಲ್ಲಿ ನಟಿಸುವೆ ಎಂದು ಹೇಳಿದೆ ಎಂದು ಇತಿ ಆಚಾರ್ಯ ಸಂತಸ ಹಂಚಿಕೊಂಡಿದ್ದಾರೆ.
ಇತಿ ಆಚಾರ್ಯ ಸಹೋದರ ಅಭಿ ಆಚಾರ್ಯ ಕೂಡ ಅಮೇರಿಕಾದಲ್ಲಿ ಸಂಗೀತ ಕಲಾವಿದರಾಗಿದ್ದು, 2023ರ ಗ್ರ್ಯಾಮ್ಮಿ ಅವಾರ್ಡ್ ನಲ್ಲಿ ಇವರ ಹೆಸರು ನಾಮ ನಿರ್ದೇಶನವಾಗಿತ್ತು. ಅಮೇರಿಕಾದಲ್ಲಿ ನನ್ನ ಸಹೋದರ ನೆಲೆಸಿರೋದು ಅಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗಿದೆ ಎನ್ನುತ್ತಾರೆ ಇತಿ ಆಚಾರ್ಯ.
ನಟಿ ಹಾಗೂ ಮಾಡೆಲ್ ಆಗಿರುವ ಇತಿ ಆಚಾರ್ಯ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಒಳಗೊಂಡಂತೆ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಹಿರಿಮೆ ಇವರದ್ದು, 2022ರ ಕ್ಯಾನಿಸ್ ಫಿಲ್ಮಂ ಫೆಸ್ಟ್ ರೆಡ್ ಕಾರ್ಪೆಟ್ ನಲ್ಲೂ ಇತಿ ಹೆಜ್ಜೆ ಹಾಕಿದ್ದಾರೆ. ಇದೀಗ ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದ್ದಾರೆ.
ವುಡ್ ಕ್ರೀಪರ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) “ಗ್ಯಾಂಗ್ ಸ್ಟರ್” ಆಗಿ ಹಾಗೂ ಗಿರೀಶ್ ಕುಮಾರ್ ಬಿ “ಫ್ರಾಂಕ್ ಸ್ಟರ್” ಆಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮುಖ್ಯಪಾತ್ರದಲ್ಲಿ ನಟಿಸಿರುವ ಗಿರೀಶ್ ಕುಮಾರ್ ಬಿ. ಈ ಚಿತ್ರದ ನಿರ್ದೇಶಕರು ಹೌದು. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ.
ಕಾಮಿಡಿ – ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗಿರೀಶ್ ಕುಮಾರ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ “ಭಾವಚಿತ್ರ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಅವರಿಗೆ ಇದು ಮೂರನೇ ಚಿತ್ರ.
ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಖ್ಯಾತ ಆನಂದ್ ಆಡಿಯೋ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಲಿದೆ. ಅಜಯ್ ಕುಮಾರ್ ಛಾಯಾಗ್ರಹಣ, ರತೀಶ್ ಕುಮಾರ್ ಸಂಕಲನ ಹಾಗೂ ಗಿರೀಶ್ ಬಿಜ್ಜಳ್ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ.
ತಿಲಕ್ , ಗಿರೀಶ್ ಕುಮಾರ್, ವಿರಾಣಿಕ ಶೆಟ್ಟಿ, ಬಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕೆ.ಬಾಬು ರೆಡ್ಡಿ ಹಾಗೂ ಜಿ.ಸತೀಶ್ ಕುಮಾರ್ ನಿರ್ಮಿಸಿರುವ, ಶಿವಂ ನಿರ್ದೇಶನದ ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರ “ಲಿಲ್ಲಿ”. ಇತ್ತೀಚೆಗೆ ಈ ಚಿತ್ರದ ಹಾಡು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ನಟಿ ರಾಗಿಣಿ ದ್ವಿವೇದಿ, ಡಾ. ಮೌಲಾ ಶರೀಫ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಗೂ ತೆಲುಗು ಚಿತ್ರನಟ ಶಿವಕೃಷ್ಣ ಅತಿಥಿಗಳಾಗಿ ಆಗಮಿಸಿದ್ದರು.
ಹಾಡು ಬಿಡುಗಡೆ ಮಾಡಿದ ನಟಿ ರಾಗಿಣಿ, ಎಲ್ಲದಕ್ಕಿಂತ ಮುಖ್ಯ ಮಾನವೀಯತೆ ಎಂಬ ಉತ್ತಮ ಕಥಾಹಂದರ ಹೊಂದಿರುವ ಈ ಮಕ್ಕಳ ಚಿತ್ರ ದೊಡ್ಡಮಟ್ಟದ ಯಶಸ್ಸು ಕಾಣಲಿ ಎಂದು ಹಾರೈಸಿದರು. ಉಮೇಶ್ ಬಣಕಾರ್, ಮೌಲಾ ಶರೀಫ್ ಹಾಗೂ ನಟ ಶಿವಕೃಷ್ಣ ಸಹ ಚಿತ್ರತಂಡಕ್ಕೆ ಶುಭ ಕೋರಿದರು.
ನಾನು ಕನ್ನಡದಲ್ಲೂ ಕೆಲವು ಚಿತ್ರಗಳಿಗೆ ಕೆಲಸ ಮಾಡಿದ್ದೀನಿ. ಆದರೆ ಇದು ನಿರ್ದೇಶಕನಾಗಿ ಮೊದಲ ಚಿತ್ರ. ಮಾನವೀಯತೆಯ ಮೌಲ್ಯ ಸಾರುವ ಚಿತ್ರವಿದು. ಯಾವುದೇ ಒಂದು ವಿಷಯವನ್ನು ಮಕ್ಕಳ ಮೂಲಕ ಹೇಳಿದಾಗ ಬೇಗ ತಲುಪುತ್ತದೆ. ಈ ಹಿಂದೆ ಮಣಿರತ್ನಂ ಸರ್ ಅವರ ” ಅಂಜಲಿ” ಚಿತ್ರ ಎಲ್ಲರ ಮನ ಗೆದ್ದಿತ್ತು. ಈಗ ನಮ್ಮ “ಲಿಲ್ಲಿ” ಚಿತ್ರ ಸಹ ಮಕ್ಕಳ ಜೊತೆಗೆ ಹಿರಿಯರಿಗೂ ಇಷ್ಟವಾಗುತ್ತದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಮ್ಮ ಚಿತ್ರ ಸದ್ಯದಲ್ಲೇ ತೆರೆ ಕಾಣಲಿದೆ. ನೋಡಿ ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಶಿವಂ.
ಮಕ್ಕಳ ಚಿತ್ರ ಅಂತ ಯಾವುದಕ್ಕೂ ಕೊರತೆ ಬಾರದ ಹಾಗೆ ಈ ಸಿನಿಮಾ ನಿರ್ಮಾಣವಾಗಬೇಕು. ಉತ್ತಮ ಕಥೆಯಿರುವ ಈ ಚಿತ್ರ ಎಲ್ಲಾ ಭಾಷೆಯ ಜನರಿಗೂ ತಲುಪಬೇಕು ಎಂದು ನಾನು ನಿರ್ದೇಶಕರಿಗೆ ಹೇಳಿದ್ದೆ. ಅಂದುಕೊಂಡದಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ಮಾಪಕ ಬಾಬು ರೆಡ್ಡಿ.
ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿರುವ ಬೇಬಿ ನೇಹಾ, ಮಾಸ್ಟರ್ ವೇದಂತ್ ವರ್ಮ , ಬೇಬಿ ಪ್ರಣೀತಾ ರೆಡ್ಡಿ ಹಾಗೂ ರಾಜ್ ವೀರ್ ಅವರು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.
ಹಯವದನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಹೊಸ ನಾಯಕ ನಟಿಯನ್ನು ಪರಿಚಯಿಸಿತ್ತು ಇದೀಗ ಮತ್ತೊಬ್ಬ ಪ್ರತಿಭಾನ್ವಿತ ನಟಿ ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ.
ಈಗಾಗಲೇ ವೆನ್ಯ ರೈ ಎಂಬ ನವ ಪ್ರತಿಭೆಯನ್ನು ನಾಯಕಿಯಾಗಿ ಪರಿಚಯಿಸಿರುವ ಸಿನಿಮಾ ತಂಡ ಇದೀಗ ಚಿತ್ರಕ್ಕೆ ಮತ್ತೊಬ್ಬ ನಟಿಮಣಿ ಸಂಜನಾ ದಾಸ್ ರನ್ನು ಕರೆ ತಂದಿದೆ. ಕನ್ನಡದಲ್ಲಿ ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂ ನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಅನೇಕ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಹಯವದನ ನಿರ್ದೇಶನದ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ.
‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ತಂಡ ಮಹಾರಾಷ್ಟ್ರ ದಲ್ಲಿಎರಡನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದಲ್ಲಿ ‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿದ್ದಾರೆ. ತಂದೆ ಮಗನ ಬಾಂದವ್ಯದ ಜೊತೆಗೆ ಪ್ರೇಮ್ ಕಹಾನಿ, ಕಾಮಿಡಿ ಹಾಗೂ ಸೆಂಟಿಮೆಂಟ್ ಎಲಿಮೆಂಟ್ ಗಳನ್ನ ಒಳಗೊಂಡ ಜರ್ನಿ ಸಿನಿಮಾ ಇದಾಗಿದೆ.
ಚಿತ್ರದಲ್ಲಿ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ಒಳಗೊಂಡ ತಾರಾಬಳಗವಿದೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ತುಂಬಾ ದಿನಗಳ ನಂತರ ನಗುವಿನ ಕಚುಗುಳಿ ಇಡೋಕೆ ಕೋಮಲ್ ಕುಮಾರ್ ಉಂಡೆನಾಮ ಹಾಕ್ಕೊಂಡು ಬರ್ತಾ ಇದ್ದಾರೆ. ಚಿತ್ರದ ಶೀರ್ಷಿಕೆ ಯನ್ನು ಸ್ಯಾಂಡಲ್ ವುಡ್ ನ ಸೆಲೆಬ್ರಿಟಿ ಗಳು ಹೇಳುವುದರ ಮುಖಾಂತರ ವಿನೂತನವಾಗಿ ಅನಾವರಣ ಗೊಳಿಸಿದ್ದಾರೆ.
ಹೆಸರಿನಲ್ಲೇ ಹಾಸ್ಯ ಹೊಂದಿರುವ ಉಂಡೆನಾಮ ಏಪ್ರಿಲ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೋಮಲ್ ಅವರ ಜೊತೆ ಹರೀಶ್ ರಾಜ್,ಧನ್ಯ
ಲಕೃಷ್ಣ,ತಬಲಾನಾಣಿ,ಅಪೂರ್ವ,ವೈಷ್ಣವಿ,ತನಿಷ ಕುಪ್ಪಂಡ,ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ.
ಈ ಚಿತ್ರವು ಎನ್.ಕೆ. ಸ್ಟುಡಿಯೋಸ್ ನ ಅಡಿಯಲ್ಲಿ ಸಿ.ನಂದ ಕಿಶೋರ್ ಅವರು ನಿರ್ಮಿಸಿದ್ದಾರೆ. ಮಜಾಟಾಕೀಸ್,ರಾಬರ್ಟ,ಖ್ಯಾ ತಿಯ ಸಂಭಾಷಾಣೆಗಾರ ಕೆ.ಎಲ್.ರಾಜಶೇಖರ್ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಇನ್ನುಳಿದಂತೆ ಶ್ರೀಧರ್ ಸಂಭ್ರಮ ಅವರ ಸಂಗೀತ,ನವೀನ್ಕುಮಾರ್ ಛಾಯಾಗ್ರಾಹಣ,ಕೆ.ಎಮ್.ಪ್ರಕಾಶ್ ಸಂಕಲನ ಚಿತ್ರಕ್ಕಿದೆ