Categories
ಸಿನಿ ಸುದ್ದಿ

ಮಸಣದಲ್ಲಿ ತಯಾರಾದ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ! ದಾರಿ ಯಾವುದಯ್ಯ ವೈಕುಂಠಕೆ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ…

ದೇಶ, ವಿದೇಶಗಳ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳ ಹಲವು ವಿಭಾಗಗಳಲ್ಲಿ ನೂರೈವತ್ತಕ್ಕೂ ಅಧಿಕ ಪ್ರಶಸ್ತಿ ಪಡೆದುಕೊಂಡಿರುವ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನೋಡುಗರಿಂದ ಮೆಚ್ಚುಗೆ ಪಡೆದುಕೊಂಡಿದೆ. ಮಾಜಿ ಸಭಾಪತಿ‌ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು ಈ ವೇಳೆ ಇದ್ದರು.

ನಿರ್ದೇಶಕ ಸಿದ್ದು ಪೂರ್ಣಚಂದ್ರ ಮಾತನಾಇಡ, “ನನ್ನ ಮೊದಲ ಚಿತ್ರ “ಕೃಷ್ಣ ಗಾರ್ಮೆಂಟ್ಸ್” ನಿರೀಕ್ಷಿತ ಗೆಲವು ಪಡೆಯಲಿಲ್ಲ. ಎರಡನೇ ಚಿತ್ರ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರ ಬಿಡುಗಡೆ ಮೊದಲೇ ಜನಪ್ರಿಯವಾಗಿದೆ.‌ ನೂರವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇಂತಹ ನನ್ನ ಕನಸಿಗೆ ಆಸರೆ ನೀಡಿದ ನಿರ್ಮಾಪಕರಿಗೆ ಧನ್ಯವಾದ. ನನ್ನ ಚಿತ್ರತಂಡಕ್ಕೆ ವಿಶೇಷ ಧನ್ಯವಾದ. ಈ ಚಿತ್ರದ ಚಿತ್ರೀಕರಣ ಬಹುತೇಕ ಭಾಗ ರಾಮನಗರದ ಸ್ಮಶಾನದಲ್ಲಿ ನಡೆದಿದೆ.‌ ಅಲ್ಲಿ ಹೋಗಿ ಸಮಾಧಿಯಲ್ಲಿ ಮಲಗಿರುವ ಹಿರಿಯರ ಆಶೀರ್ವಾದ ಪಡೆದು ಚಿತ್ರ ಮಾಡಿದ್ದೇನೆ ಎಂದರು.

ಈ ಚಿತ್ರದ ಕಥೆ ಕೇಳಿದ ದಿನವೇ ನಿರ್ಮಾಣ ಮಾಡಬೇಕೆಂದು ಮನಸು ಮಾಡಿದ್ದೆ. ನನ್ನ ಸ್ನೇಹಿತ ಪ್ರಶಾಂತ್ ಅವರ ಮೂಲಕ ನಿರ್ದೇಶಕ ಸಿದ್ದು ಪೂರ್ಣಚಂದ್ರ ಪರಿಚಿತರಾದರು. ಉತ್ತಮ ಚಿತ್ರ ಮಾಡಿಕೊಟ್ಟಿದ್ದಕ್ಕೆ ಸಿದ್ದು ಅವರಿಗೆ ಧನ್ಯವಾದಗಳು. ಮೇ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಿರ್ಮಾಪಕ ಶರಣಪ್ಪ ಎಂ ಕೊಟಗಿ.

ನನಗೆ ಉತ್ತಮ ಪಾತ್ರ ನೀಡಿದ ನಿರ್ದೇಶಕರಿಗೆ ನಾನು ಆಭಾರಿ. ಚಿಕ್ಕವಯಸ್ಸಿನಲ್ಲಿ ಅಶೋಕ ಹೋಟೆಲ್‌ ಮುಂದೆ ಓಡಾಡುವಾಗ ಒಂದು ದಿನ ಈ ಹೋಟೆಲ್ ಒಳಗೆ ಹೋಗಬೇಕು ಅಂದುಕೊಳ್ಳುತ್ತಿದೆ. ಈಗ ಇದೇ ಹೋಟೆಲ್ ನಲ್ಲಿ ನನ್ನ ಸಿನಿಮಾದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ಖುಷಿ ಎಂದರು ನಾಯಕ ವರ್ಧನ್.

ಚಿತ್ರದ ಕಲಾವಿದ ಬಲರಾಜವಾಡಿ ಸೇರಿದಂತೆ ತಂಡದ ಅನೇಕ ಕಲಾವಿದರು, ಗಣ್ಯರು ಚಿತ್ರದ ಬಗ್ಗೆ ಮಾತನಾಡಿದರು. ಮ್ಯೂಸಿಕ್ ಬಾಕ್ಸ್ ಆಡಿಯೋ ಕಂಪನಿ ಹಾಡುಗಳನ್ನು ಹೊರತಂದಿದೆ. ಹಿರಿಯ ಛಾಯಾಗ್ರಾಹಕ ಜೆ.ಜಿ.ಕೃಷ್ಣ, ಗಾಯಕ ಶಶಿಧರ್ ಕೋಟೆ ಇತರರು ಇದ್ದರು.

Categories
ಸಿನಿ ಸುದ್ದಿ

ವೆಡ್ಡಿಂಗ್‌ ಗಿಫ್ಟ್‌ ಕೊಡ್ತಾರೆ ನಟಿ ಪ್ರೇಮ! ಜೂನ್‌ ವೇಳೆ ಹೊಸ ಸಿನಿಮಾ ರಿಲೀಸ್…

ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ನಿರ್ಮಾಪಕ ಭಾ.ಮ.ಹರೀಶ್ ಹಾಗೂ ಸುನೀಲ್ ಕಾರ್ಯಕ್ರಮದ ಆಕರ್ಷಣೆಯಾಗಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಹಾಡುಗಳ ಬಿಡುಗಡೆಗೆ ಸಾಕ್ಷಿಯಾದರು.

ನಿರ್ದೇಶಕ ವಿಕ್ರಂ ಪ್ರಭು ಕಳೆದ ಹತ್ತೊಂಬತ್ತು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರದಲ್ಲಿ ಕೆಲಸ ಮಾಡಿದ್ದರು. ಆ ಬಳಿಕ ಅವರು ಇಂಡಸ್ಟ್ರಿ ಕಡೆ ಮುಖ ಮಾಡಲಿಲ್ಲ. ಆ ಕುರಿತು ಅವರು ಹೇಳುವುದಿಷ್ಟು. “ಲವ್‌ ಸಿನಿಮಾ ಬಳಿಕ ನಾನು ಪುಣೆಯಲ್ಲಿ ಬಿಜಿನೆಸ್ ಶುರುಮಾಡಿದೆ. ಹಾಗಾಗಿ ಅತ್ತ ಗಮನಹರಿಸಿದ್ದೆ. ಈಗ ಚಿತ್ರರಂಗಕ್ಕೆ ಬಂದು “ವೆಡ್ಡಿಂಗ್ ಗಿಫ್ಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ಕೆಲವು ಹೆಣ್ಣು ಮಕ್ಕಳು ಕಾನೂನನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದೇ ಕಥಾಹಂದರ.

ಹಿರಿಯ ನಟಿ ಪ್ರೇಮ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಶಾಂತ್, ಸೋನು ಗೌಡ, ಅಚ್ಯುತಕುಮಾರ್, ಪವಿತ್ರ ಲೋಕೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗ ಹಾಡುಗಳ ಬಿಡುಗಡೆಯಾಗಿದೆ. ಮೇ ತಿಂಗಳನ್ನು‌ ಪ್ರಚಾರಕ್ಕೆ ಮೀಸಲಿಟ್ಟು, ಜೂನ್ ನಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ವಿಕ್ರಂಪ್ರಭು.

ನಾನು ದುಡ್ಡಿಗಾಗಿ ಸಿನಿಮಾ ಮಾಡುವವಳಲ್ಲ. ಉತ್ತಮ ಕಥೆ ಇದ್ದರೆ ಮಾತ್ರ ಮಾಡುತ್ತೇನೆ.‌ ವಿಕ್ರಂಪ್ರಭು ಅವರು ಈ ಚಿತ್ರದ ಕಥೆ ಹೇಳಿದ ತಕ್ಷಣ ಮಾಡಬೇಕೆನಿಸಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಾಯಕನ ಪರ ವಕಾಲತ್ತು ವಹಿಸುವ ವಕೀಲೆಯಾಗಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಹಿರಿಯ ನಟಿ ಪ್ರೇಮ.

ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳು ಶುಭ ಕೋರಿದರು. ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ಗಿರ್ಕಿ ಮೋಷನ್ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಸೆಂಚುರಿ ಸ್ಟಾರ್… ಇದು ತರಂಗ ವಿಶ್ವ ಚಿತ್ರ!

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರದ ಮೋಷನ್ ಪೋಸ್ಟರನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದ್ದು, ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ.

ಲವ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ.ಎಂ.ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಹ ಇವರೇ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ.

ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ
ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, “ಬಿಗ್ ಬಾಸ್” ಖ್ಯಾತಿಯ ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

ಮಹಿರ ಖ್ಯಾತಿಯ ಮಹೇಶ್ ಗೌಡ ಹೊಸ ಸಿನಿಮಾ ಶುರು- ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ಯಲ್ಲಿ ಅಗ್ನಿ ಸಾಕ್ಷಿ ವೈಷ್ಣವಿ ನಾಯಕಿ…

ಈ ಹಿಂದೆ ಬಂದಿದ್ದ ಮಹಿರ ಎಂಬ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ಸೇರಿದಂತೆ ಒಂದಷ್ಟು ಪ್ರತಿಭಾನ್ವಿತರು ನಟಿಸಿದ್ದರು. ತಾಯಿ ಮಗಳ ಹೋರಾಟದ ಕಥೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದ ನಿರ್ದೇಶಕ ಮಹೇಶ್ ಗೌಡ ಈ ಬಾರಿಯೂ ಹೊಸ ಪ್ರಯತ್ನದ ಸಿನಿಮಾವೊಂದಕ್ಕೆ ಕೈ ಹಾಕಿದ್ದಾರೆ. ಅದರ ಮೊದಲ ಭಾಗವೆಂಬಂತೆ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ನ್ನು ಯುಗಾದಿ ಹಬ್ಬದ ಸ್ಪೆಷಲ್ ಆಗಿ ರಿಲೀಸ್ ಮಾಡಿದ್ದಾರೆ.

ದಿನೇಶ್ ಪಾತ್ರದಲ್ಲಿ ಮಹೇಶ್
‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಮಹೇಶ್ ಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ. ಈ ಸಿನಿಮಾಗೆ ತಾವೇ ಕಥೆ ಬರೆದು ಆಕ್ಷನ್ ಕಟ್ ಹೇಳುವುದರ ಜೊತೆಗೆ ತಮ್ಮದೇ ಹೊನ್ನುಡಿ ಪ್ರೊಡಕ್ಷನ್ ನಡಿ ಮಹೇಶ್ ಚಿತ್ರಕ್ಕೆ ಬಂಡವಾಳ ಹಾಕ್ತಿದ್ದು, ಜೊತೆ ದಿನೇಶ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹಳ್ಳಿ ಹುಡ್ಗಿ ಕವಿತಾ ಆಗಿ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ ಮಹೇಶ್ ಗೆ ಜೋಡಿಯಾಗಿ ಬಣ್ಣ ಹಚ್ಚಿದ್ದಾರೆ.

ನಾಯಕ ದಿನೇಶ್ ತೊನ್ನು(ವಿಟಿಲಿಗೋ) ಸಮಸ್ಯೆ ಇರುತ್ತೆ. ಆತ ಪಕ್ಕದ ಊರಿನ ಚೆಂದದ ಮುದ್ದು ಮುದ್ದಾದ ಹುಡ್ಗಿ ಕವಿತಾಳನ್ನು ವರಿಸುತ್ತಾರೆ. ಸಮಸ್ಯೆ ಗೊತ್ತಿದ್ರೂ ಕವಿತಾ ತನ್ನನ್ನ ಮದ್ವೆಯಾಗೋದೇಕೆ ಅನ್ನೋ ಕನ್ಫೂಷನ್ ದಿನೇಶ್ ಗೆ ಕಾಡ್ತಿರುತ್ತದೆ. ಅದನ್ನು ಕಾಮಿಡಿಯಲ್ಲಿ ಹೇಳೋದೇ ದೊಡ್ಡ ಚಾಲೆಂಜ್ ಅಂತಾರೇ ಮಹೇಶ್. ಅಂದಹಾಗೆ ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜಾನರ್ ಚಿತ್ರವಾಗಿದ್ದು, ಪಕ್ಕಾ ಮನರಂಜನೆ ನೀಡಲಿದೆ.

ಮಹೇಶ್ ಗೌಡ ತಮ್ಮದೇ ತೊನ್ನಿನ ಸಮಸ್ಯೆಯನ್ನು ಇಲ್ಲಿ ಕಥೆಯಾಗಿ ಪರಿವರ್ತಿಸಿದ್ದಾರೆ. ಇಂತಹ ಸಿನಿಮಾಗಳನ್ನು ತೆರೆಮೇಲೆ ಮಾಡೋದು ಕಷ್ಟವೇ ಸರಿ. ಅಂತಹ ಸಾಹಸಕ್ಕೆ ಮುಂದಾಗಿರುವ ಮಹೇಶ್ ಗೌಡ ಕಾರ್ಯಕ್ಕೆ ಶಹಬ್ಬಾಸ್ ಹೇಳಲೇಬೇಕು.

Categories
ಸಿನಿ ಸುದ್ದಿ

ಅಧ್ಯಕ್ಷ ನ ಬಳಿಕ ಸದಸ್ಯನ ದರ್ಬಾರು! ಹೊಸಬರ ಕಾಮಿಡಿ ಸಿನಿಮಾ…

ಕನ್ನಡದಲ್ಲಿ ಹೊಸ ಹೊಸ ಪ್ರತಿಭೆಗಳ ಅನಾವರಣವಾಗುತ್ತಿದೆ. ಆದ್ರೆ ಕಂಟೆಂಟ್ ಗಟ್ಟಿಯಾಗಿ ಇದ್ದವರು ಮಾತ್ರ ಇಲ್ಲಿ ನೆಲೆಯೂರುತ್ತಾರೆ. ಈಗ ಅದೇ ಗಟ್ಟಿ ಭರವಸೆಯೊಂದಿಗೆ ಹೊಸಬರ ತಂಡವೊಂದು ಎಂಟ್ರಿಕೊಡುತ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಸಿನಿಮಾದ ಟೈಟಲ್ ಅನ್ನು ತಂಡ ರಿವೀಲ್ ಮಾಡಿದೆ.

ಮೂಲತಃ ಇಂಜಿನಿಯರಿಂಗ್ ಆಗಿರುವ ಶ್ರೀಕಾಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾ ಸದಸ್ಯ. ಈಗಾಗಲೇ ವಾರ್ಡ್ ನಂಬರ್ 11 ಸಿನಿಮಾ ಮೂಲಕ ನಿರ್ದೇಶಕರಾಗಿರುವ ಶ್ರೀಕಾಂತ್ ಕಿರು ಚಿತ್ರಗಳ ಮೂಲಕ ಬಣ್ಣದ ಬದುಕು ಆರಂಭಿಸಿ ಈಗ ಪೂರ್ಣಪ್ರಮಾಣ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಸದಸ್ಯ ಶ್ರೀಕಾಂತ್ ನಿರ್ದೇಶನದ ಎರಡನೇ ಸಿನಿಮಾವಾಗಿದ್ದು, ಯುಗಾದಿ ಸ್ಪೆಷಲ್ ಆಗಿ ಚಿತ್ರತಂಡದ ಟೈಟಲ್ ಅನಾವರಣ ಮಾಡಿದೆ ಚಿತ್ರತಂಡ.

ಕಾಮಿಡಿ ಹೂರಣ ಒಳಗೊಂಡಿರುವ ಸದಸ್ಯ ಸಿನಿಮಾವನ್ನು ಪ್ರೊಡಕ್ಷನ್ ಫೀನಿಕ್ಸ್ ಎಂಟರ್ ಟೈನ್ ಮೆಂಟ್ ನಡಿ ಅನಿಲ್ ಕುಮಾರ್ ನಿರ್ಮಾಣ ಮಾಡ್ತಿದ್ದು, ಒಂದಷ್ಟು ಹೊಸ ಪ್ರತಿಭೆಗಳು, ಹಸಿವಿರುವ ಕಲಾವಿದರಿಗೆ ಅವಕಾಶ ನೀಡಲಿದೆ ಚಿತ್ರತಂಡ. ಸದ್ಯ ಟೈಟಲ್ ರಿವೀಲ್ ಮಾಡಿದ್ದು, ಮೇನಿಂದ ಚಿತ್ರೀಕರಣಕ್ಕೆ ಸಜ್ಜಾಗಿದ್ದು, ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲಿಯೇ ರಿವೀಲ್ ಮಾಡಲಿದೆ.

Categories
ಸಿನಿ ಸುದ್ದಿ

ನಾಗರಾಜ್ ಸೋಮಯಾಜಿ ಅಕಟಕಟ ಚಿತ್ರಕ್ಕೆ ಚೈತ್ರಾ ಆಚಾರ್ ನಾಯಕಿ

ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆದೆ ಹೊಸ ಹೊಸ ನಟಿಯರ ಆಗಮನವಾಗುತ್ತಿದೆ. ಆದ್ರೆ ಗ್ಲಾಮರ್ ಜೊತೆಗೆ ಪ್ರತಿಭೆ, ಅದೃಷ್ಟ ಇದ್ದವರು ಮಾತ್ರ ಇಲ್ಲಿ ಗಟ್ಟಿಯಾಗಿ ನೆಲೆಯೂರುತ್ತಾರೆ. ಈ ಪೈಕಿ ಪ್ರತಿಭಾನ್ವಿತ ನಾಯಕಿ ಚೈತ್ರಾ ಆಚಾರ್ ಕೂಡ ಒಬ್ಬರು. ಮಹಿರಾ, ಗಿಲ್ಕಿ, ತಲೆದಂಡ ಹೀಗೆ ಪ್ರತಿ ಸಿನಿಮಾಗಳಲ್ಲೂ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಚೈತ್ರಾ ಈಗ ಅಕಟಕಟ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪಾಸಿಟಿವ್ ಗರ್ಲ್
ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡುತ್ತಿರುವ ಅಕಟಕಟ ಸಿನಿಮಾದಲ್ಲಿ ಚೈತ್ರಾ ಆಚಾರ್‌ ಜಾನಕಿ ಎಂಬ ಪಾತ್ರ ಮಾಡಲಿದ್ದಾರೆ. ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ.. ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ, ಮಧ್ಯಮ ವರ್ಗದ ಹುಡುಗಿಯಾಗಿ ಚೈತ್ರಾ ಬಣ್ಣ ಹಚ್ಚಲಿದ್ದು, ಇಂಥ ನಾಯಕಿ ನಾಯಕ ಬದುಕಿಗೆ ಎಂಟ್ರಿ ಕೊಟ್ಟಾಗ ಏನಾಗುತ್ತೇ ಅನ್ನೋದೇ ಚೈತ್ರಾ ಆಚಾರ್ ಪಾತ್ರ.

ಸಂಚಾರಿ ವಿಜಯ್‌ ನಟಿಸಿದ್ದ ‘ಪುಕ್ಸಟ್ಟೆ ಲೈಫು’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ದೇಶಕ ನಾಗರಾಜ್‌ ಸೋಮಯಾಜಿ ಮೂಲತಃ ಫೋಟೊಗ್ರಾಫರ್‌. ರಂಗಭೂಮಿಯಲ್ಲಿಯೂ ಸಕ್ರಿಯರಾಗಿರುವ ಅವರು ಕಿರುಚಿತ್ರವೊಂದನ್ನು ನಿರ್ದೇಶನ ಮಾಡಿದ್ದರು.

ಈಗ ಅಕಟಕಟ ಸಿನಿಮಾಗೆ ಕಥೆಯನ್ನು ನಾಗರಾಜ್‌ ಅವರೇ ಬರೆದಿದ್ದು ನಿರ್ದೇಶನ ಕೂಡ ಮಾಡ್ತಿದ್ದು, ಶೀಘ್ರದಲ್ಲೇ ನಾಯಕ ಮತ್ತು ಉಳಿದ ವಿವರಗಳನ್ನು ಶೀಘ್ರದಲ್ಲಿ ರಿವೀಲ್ ಮಾಡಲಿದೆ.

Categories
ಸಿನಿ ಸುದ್ದಿ

ಬಾನದಾರಿಯಲ್ಲಿ ಗಣೇಶ್ ಸಂಚಾರ! ಮತ್ತೆ ಪ್ರೀತಂ ಗುಬ್ಬಿ ಜೊತೆಯಾದ ಗೋಲ್ಡನ್ ಸ್ಟಾರ್…

“ಮಳೆಯಲಿ ಜೊತೆಯಲಿ” ಸಿನಿಮಾಗೆ ಜೊತೆಯಾಗಿದ್ದ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಜೋಡಿ ಈಗ ಹೊಸ ಚಿತ್ರ”ಬಾನದಾರಿಯಲ್ಲಿ” ಮೂಲಕ ಸಾಗಲಿದೆ.

ಇವರಿಬ್ಬರ ಕಾಂಬಿನೇಶನಲ್ಲಿ ಬರುತ್ತಿರುವ ಈ ಚಿತ್ರಕ್ಕೆ “ಬಾನದಾರಿಯಲ್ಲಿ” ಎಂದು ಹೆಸರಿಡಲಾಗಿದೆ. ಮೇನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಯುಗಾದಿ ಹಬ್ಬದ ಶುಭದಿನದಂದು ಪೋಸ್ಟರ್ ಬಿಡುಗಡೆಯಾಗಿದೆ.

ಪ್ರೀತಂಗುಬ್ಬಿ ನಿರ್ದೇಶನದಲ್ಲಿ ಗಣೇಶ್ ಈ ಹಿಂದೆ “ಮಳೆಯಲಿ ಜೊತೆಯಲಿ” , “ದಿಲ್ ರಂಗೀಲಾ” ಹಾಗೂ “99” ಚಿತ್ರಗಳಲ್ಲಿ ನಟಿಸಿದ್ದರು. ಇದು ಅವರ ಕಾಂಬಿನೇಷನ್ ನ ನಾಲ್ಕನೇ ಚಿತ್ರ. “ಬಾನದಾರಿಯಲ್ಲಿ” ಗೆ ನೋಡು ಎಂಥಾ ಚೆಂದ ಎಂಬ ಅಡಿಬರಹವಿದೆ.

ವಿ.ಹರಿಕೃಷ್ಣ ಸಂಗೀತ ನಿರ್ದೇಶನ, ಪ್ರೀತ ಜಯರಾಂ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಪುನೀತ್ ರಾಜಕುಮಾರ್ ಅವರು ಹಾಡಿದ್ದ “ಬಾನದಾರಿಯಲ್ಲಿ” ಹಾಡು ಇಂದಿಗೂ, ಎಂದೆಂದಿಗೂ ಜನಪ್ರಿಯ.. ಆ ಹಾಡಿನ ಮೊದಲ ಪದವೇ‌ ಈ ಚಿತ್ರದ ಶೀರ್ಷಿಕೆಯಾಗಿದ್ದು, ಆ ಹಾಡಿನಷ್ಟೇ ಈ ಚಿತ್ರ ಕೂಡ ಯಶಸ್ಸು ಕಾಣಲಿ ಅನ್ನೋದು ಹಾರೈಕೆ.

Categories
ಸಿನಿ ಸುದ್ದಿ

ಚಿನ್ನಾರಿ ಮುತ್ತ ಈಗ ರಾಘು : ಥ್ರಿಲ್ಲರ್ ಎಕ್ಸ್ ಪೆರಿಮೆಂಟಲ್ ‘ರಾಘು’ ಫಸ್ಟ್ ಲುಕ್ ರಿಲೀಸ್!

ಹೊಸಬಗೆಯ, ಹೊಸತನ ಸಿನಿಮಾಗಳನ್ನು ಮಾಡುವುದರಲ್ಲಿ ಹೊಸಬರಿಗೆ ಅವಕಾಶ ಕೊಡುವುದರಲ್ಲಿ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಸದಾ ಮುಂದು. ಸೀತಾರಾಮ್ ಬಿನೋಯ್ ಕೇಸ್ ನಂಬರ್ 18 ಸಿನಿಮಾ ಬಳಿಕ ಈಗ ವಿಜಯ್ ರಾಘವೇಂದ್ರ ಮತ್ತೊಮ್ಮೆ ಹೊಸಬರ ಜೊತೆ ಕೈ ಜೋಡಿಸಿದ್ದಾರೆ. ಅವರೀಗ ರಾಘು ಆಗಿ ಮಿಂಚಲಿದ್ದಾರೆ.

ಟೈಟಲ್ ಫಸ್ಟ್ ಲುಕ್ ರಿಲೀಸ್
ಆನ, ಬ್ಯಾಂಗ್ ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಆನಂದ್ ರಾಜ್ ರಾಘು ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. ಈ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಹುಟ್ಟಿಸುತ್ತಿದೆ.

ರಾಘು ಥ್ರಿಲ್ಲರ್ ಎಕ್ಸ್ ಪಿರಿಮೆಂಟಲ್ ಸಿನಿಮಾವಾಗಿದ್ದು, ಕನ್ನಡದಲ್ಲಿ ಇದೊಂದು ಹೊಸತನದ ಸಿನಿಮಾ. ವಿಜಯ್ ರಾಘವೇಂದ್ರ ಹಿಂದೆಂದೂ ಮಾಡದ ವಿಭಿನ್ನ ಪಾತ್ರವೊಂದಕ್ಕೆ ಜೀವ ತುಂಬಲಿದ್ದಾರೆ. ಡಿಕೆಎಸ್ ಸ್ಟುಡಿಯೋಸ್ ಮತ್ತು ಕೋಟ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ನಡಿ ರಣ್ವೀತ್‌ ಶಿವಕುಮಾರ್‌, ಅಭಿಷೇಕ್‌ ಕೋಟ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಬ್ಯಾಂಗ್’, ‘ಫ್ಯಾಮಿಲಿ ಪ್ಯಾಕ್’ ಖ್ಯಾತಿಯ ಉದಯ್‌ ಲೀಲಾ ಕ್ಯಾಮೆರಾ ವರ್ಕ್, ಸೂರಜ್‌ ಜೋಯಿಸ್‌ ಸಂಗೀತ ಸಂಯೋಜನೆ, ಅಥರ್ವ್ ಆರ್ಯ ಸಂಭಾಷಣೆ ಬರೆಯುತ್ತಿದ್ದಾರೆ. ಮೇ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯ ಟೈಟಲ್ ಹಾಗೂ ಫಸ್ಟ್ ಲುಕ್ ಬಿಟ್ಟು ಚಿತ್ರರಸಿಕರ ಕ್ಯೂರಿಯಾಸಿಟಿಯನ್ನು ರಾಘು ಚಿತ್ರತಂಡ ದುಪ್ಪಟ್ಟು ಮಾಡಿದೆ.

Categories
ಸಿನಿ ಸುದ್ದಿ

ವಿಕ್ರಾಂತ್‌ ರೋಣ ರಿಲೀಸ್‌ ಡೇಟ್‌ ಘೋಷಣೆಗೆ ದಿನಗಣನೆ; ಏಪ್ರಿಲ್‌ 2ರಂದು ಸ್ಟಾರ್‌ ನಟರಿಂದ ಅಧಿಕೃತ ಮಾಹಿತಿ

ಬಾದ್ ಷಾ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡುವ ವಿಶೇಷ ಟೀಸರ್ ಏಪ್ರಿಲ್ 2 ರಂದು ರಿಲೀಸ್ ಆಗುತ್ತಿದೆ… ಈ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಅಷ್ಟೇ ಅಲ್ಲ, ಇಂಗ್ಲೀಷ್‌, ಅರೇಬಿಕ್‌, ಜರ್ಮನ್‌, ರಷ್ಯನ್‌, ಮ್ಯಾಂಡರಿನ್‌ ಭಾಷೆಯಲ್ಲೂ ಡಬ್‌ ಆಗುತ್ತಿರುವುದು ವಿಶೇಷತೆಗಳಲ್ಲೊಂದು. ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸ್ಟಾರ್‌ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡುವ ಟೀಸರ್‌ ಬಿಡುಗಡೆ ಮಾಡಲಿದ್ದಾರೆ…

ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ ನಲ್ಲಿ ಅದ್ದೂರಿ ವೆಚ್ಚದಲ್ಲಿ ತಯಾರಾಗಿರುವ 3ಡಿ ಆ್ಯಕ್ಷನ್ ಅಡ್ವೆಂಚರ್‌, ಮಿಸ್ಟ್ರಿ ಥ್ರಿಲ್ಲರ್ ಇದಾಗಿದ್ದು, ವಿಕ್ರಾಂತ್ ರೋಣ ಚಿತ್ರದ ಅಪ್ಡೇಟ್‍ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಅಂದು ಸಿಹಿಯಾದ ಮಾಹಿತಿ ದೊರಕಲಿದೆ.

ಅನೂಪ್ ಭಂಡಾರಿ ಅವರು ವಿಕ್ರಾಂತ್ ರೋಣ ಬಗ್ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಅನೌನ್ಸಿಂಗ್ ದಿ ಅರೈವಲ್ ಆಫ್ ದಿ ಡೆವಿಲ್ ಎಂದಿರುವ ಅನೂಪ್, ವಿಕ್ರಾಂತ್ ರೋಣ ಸಿನಿಮಾದ ವಿಶೇಷ ಟೀಸರ್ ಏಪ್ರಿಲ್ 2ರಂದು ಬೆ.9:55ಕ್ಕೆ ರಿಲೀಸ್ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಚಿತ್ರದ ಅಪ್ಡೇಟ್‍ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಈಗ ಫುಲ್ ಖುಷ್ ಆಗಿದ್ದಾರೆ. ಇದನ್ನು ಕಿಚ್ಚ ಸಹ ಶೇರ್ ಮಾಡಿಕೊಂಡಿದ್ದಾರೆ. ಕಿಚ್ಚನನ್ನು ತೆರೆಮೇಲೆ ನೋಡಬೇಕೆಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತುಕೊಂಡಿದ್ದಾರೆ.

ವಿಕ್ರಾಂತ್ ರೋಣ ಕನ್ನಡ, ಹಿಂದಿ, ತೆಲುಗು ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಅಲ್ಲದೇ ಇಂಗ್ಲೀಷ್, ಅರೇಬಿಕ್, ಜರ್ಮನ್, ರಷಿಯನ್, ಮ್ಯಾಂಡರಿನ್ ಭಾಷೆಗೂ ಡಬ್ ಆಗುತ್ತಿದೆ. ಈ ಚಿತ್ರದಲ್ಲಿ ಕಿಚ್ಚನ ಸಾಹಸವನ್ನು 3ಡಿಯಲ್ಲಿ ನೋಡಬಹುದಾಗಿದೆ.
ಝೀ ಸ್ಟುಡಿಯೋ ಅರ್ಪಿಸುತ್ತಿರುವ ಈ ಚಿತ್ರವನ್ನು ಶಾಲಿನಿ ಪ್ರೊಡಕ್ಷನ್ಸ್ ಮೂಲಕ ಜಾಕ್ ಮಂಜುನಾಥ್ ಅವರು ನಿರ್ಮಿಸುತ್ತಿದ್ದು, ಅಲಂಕಾರ್ ಪಾಂಡಿಯನ್ ಕೋ ಪ್ರೊಡ್ಯೂಸರ್ ಆಗಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ , ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಹಲವು ನಟರು ಚಿತ್ರದಲ್ಲಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

ತ್ರಿಕೋನ ಸಿನಿಮಾ ರಿಲೀಸ್‌ ಡೇಟ್‌ ಬದಲು; ಏಪ್ರಿಲ್‌ 1ರ ಬದಲಾಗಿ 8ಕ್ಕೆ ಬಿಡುಗಡೆ

ಏ.1ರಂದು ಬಿಡುಗಡೆ ಆಗಬೇಕಿದ್ದ ತ್ರಿಕೋನ ಚಿತ್ರ ಬಿಡುಗಡೆಯ ದಿನವನ್ನು ಮುಂದೂಡಿದೆ. ಹೌದು, ಏಪ್ರಿಲ್ 8ಕ್ಕೆ ಸಿನಿಮಾ ರಿಲೀಸ್‌ ಆಗಲಿದೆ. ಈ ಕುರಿತಂತೆ ನಿರ್ಮಾಪಕ ರಾಜಶೇಖರ್​, ರಾಯಭಾರಿ ಸುಚೇಂದ್ರ ಪ್ರಸಾದ್​ ಮತ್ತು ನಿರ್ದೇಶಕ ಚಂದ್ರಕಾಂತ್​ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.

ಪುನೀತ್​ ರಾಜಕುಮಾರ್​ ಅಭಿನಯದ “ಜೇಮ್ಸ್​” ಚಿತ್ರವು ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ವಿತರಕರ ಜತೆಗೆ ಮಾತನಾಡುವಾಗ, “ಜೇಮ್ಸ್​’ ಚಿತ್ರವು ಎಲ್ಲೆಲ್ಲಿ ಪ್ರದರ್ಶನವಾಗುತ್ತಿದೆ, ಆ ಕೆಲವು ಚಿತ್ರಮಂದಿರಗಳನ್ನು ಕೊಡಿಸುವುದಾಗಿ ಹೇಳಿದರು. ನಾನು ಪುನೀತ್​ ಅಭಿಮಾನಿಯಾಗಿ, ಅವರ ಚಿತ್ರ ಓಡುತ್ತಿರುವ ಚಿತ್ರಮಂದಿರಗಳಲ್ಲಿ ನಮ್ಮ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಮನಸ್ಸು ಒಪ್ಪುತ್ತಿಲ್ಲ. ಇದು ಮೊದಲ ಕಾರಣ. ನಾವು ಏಪ್ರಿಲ್​ 1ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದಾಗ ಒಂದು ಚಿತ್ರ ಸಹ ಘೋಷಣೆಯಾಗಿರಲಿಲ್ಲ. ಒಂದು ಅಥವಾ ಎರಡು ಸಿನಿಮಾಗಳು ಬಿಡುಗಡೆ ಆಗಬಹುದು ಎಂದು ಊಹಿಸಿದ್ದೆವು. ಅದರಂತೆ ಪ್ರಚಾರ ಶುರು ಮಾಡಿದ್ದೆವು.

ಆದರೆ, ಒಂದೊಂದೇ ಸಿನಿಮಾಗಳು ಘೋಷಣೆಯಾದವು. ಆರರಿಂದ ಏಳು ಸಿನಿಮಾಗಳು ಅಂದು ಬಿಡುಗಡೆಯಾಗಲಿವೆ. ನಾವು ಕನ್ನಡ ಸಿನಿಮಾದವರೇ ಚಿತ್ರಮಂದಿರಗಳಿಗಾಗಿ ಪರಸ್ಪರ ಕಿತ್ತಾಡುವ ಪರಿಸ್ಥಿತಿ ಇದೆ. ನಾವು ಮುಂಚೆಯೇ ಘೋಷಣೆ ಮಾಡಿದ್ದೇವೆ, ನೀವು ತಡವಾಗಿ ಬಿಡುಗಡೆ ಮಾಡಿ ಎಂದು ಹೇಳುವುದು ಎಷ್ಟು ಸೂಕ್ತ? ಎಂದು ಪ್ರಶ್ನೆ ಹಾಕಿಕೊಂಡಾಗ, ನಾವೇ ಮುಂದಕ್ಕೆ ಹೋಗೋಣ ಎಂದು ಚರ್ಚಿಸಿ, ಏಪ್ರಿಲ್​ 8ಕ್ಕೆ ಬಿಡುಗಡೆ ಮಾಡುವ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮೂರನೇ ಕಾರಣ ಎಂದರೆ, ಈ ಚಿತ್ರದ ಮೂಲಕ ನಾವು ತಾಳ್ಮೆಯ ಬಗ್ಗೆ ಹೇಳುವುದಕ್ಕೆ ಹೊರಟಿದ್ದೇವೆ. ಈಗಾಗಲೇ ಟೀಸರ್​ ಮತ್ತು ಟ್ರೇಲರ್​ನಲ್ಲಿ ಅಹಂ, ಶಕ್ತಿ ಮತ್ತು ತಾಳ್ಮೆಯ ನಡುವೆ ಯಾರಿಗೆ ಜಯ ಸಿಗುತ್ತದೆ ಎಂದು ಹೇಳ ಹೊರಟಿದ್ದೇವೆ. ನಾವು ಪ್ರಚಾರ ಮಾಡಿದ್ದೀವಿ, ಇನ್ನೂ ಮಾಡುತ್ತೇವೆ ಎನ್ನುವ ಶಕ್ತಿ ಪ್ರದರ್ಶನವಾಗಲಿ ಅಥವಾ ಚಿತ್ರ ಚೆನ್ನಾಗಿ ಬಂದಿದ್ದು ನೋಡಿದವರು ಒಪ್ಪಿಕೊಳ್ಳುತ್ತಾರೆ ಎಂಬ ಅಹಂಕಾರವಾಗಲಿ ಇಲ್ಲ. ನಾವು ತಾಳ್ಮೆಯಿಂದ ಒಂದು ವಾರ ಮುಂದಕ್ಕೆ ಹೋದರೂ ಪರವಾಗಿಲ್ಲ ಎಂದು ಏಪ್ರಿಲ್ 8 ರಂದು ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ಮಾಪಕ ಹಾಗೂ ಕಥೆಗಾರ ರಾಜಶೇಖರ್ ಹೇಳಿದರು.

ಚಿತ್ರದ ರಾಯಭಾರಿ ಸುಚೇಂದ್ರ ಪ್ರಸಾದ್​, ನಿರ್ಮಾಪಕರ ಕಷ್ಟ ಅರ್ಥ ಮಾಡಿಕೊಂಡಿರುವವರು ನೀವು. ಆಗು ಹೋಗುಗಳ ಜತೆಗೆ ನಿರ್ಮಾಪಕರ ಚಡಪಡಿಕೆ ನಿಮಗೆ ಗೊತ್ತಿರುತ್ತದೆ. ತ್ರಿಕೋನದ ಗುರಿ ಹೆಚ್ಚಿನ ಜನರಿಗೆ ಹೇಗೆ ತಲುಪುವುದು ಎಂಬ ಕಡೆ ಇದೆ. ಈ ಚಿತ್ರವನ್ನು ಸಿದ್ಧಸೂತ್ರಗಳ ಜಾಡಿನಿಂದ ಹೊರತಪ್ಪಿಸಿ ಮಾಡಿದ್ದಾರೆ. ಸಿನಿಮಾ ಹೆಸರಿನಲ್ಲಿ ಇನ್ನೂ ಏನೇನೋ ಮಾಡುವುದಕ್ಕೆ ಸಾಧ್ಯವಿದೆ ಎಂದು ತೋರಿಸುವ ಪ್ರಯತ್ನ ಮಾಡಿದ್ದಾರೆ.

ತ್ರಿಕೋನವನ್ನು ಹಲವರಿಗೆ ತಲುಪಿಸುವ ಪ್ರಯತ್ನ ಮಾಡಿದ್ದೀರಿ. ಎಂಟರಂದು ಅದು ಇನ್ನಷ್ಟು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೈಜೋಡಿಸಿ. ಮಿಕ್ಕಂತೆ ಈ ಚಿತ್ರ ಚರ್ವಿತಚರ್ವಣವಾಗಿರದೆ, ಅಭಿರುಚಿಯನ್ನು ಬಿತ್ತುವ ಕೆಲಸ ಮಾಡಲಿ ಎಂಬುದು ನನ್ನ ಹಾರೈಕೆ ಎಂದರು. ನಿರ್ದೇಶಕ ಚಂದ್ರಕಾಂತ್ ಸಹ ತಮ್ಮ ಸಿನಮಾ ಬಿಡುಗಡೆ ಮುಂದಕ್ಕೆ ಹೋಗಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು.

error: Content is protected !!