Categories
ಸಿನಿ ಸುದ್ದಿ

ಗತವೈಭವಕ್ಕೆ ದುಶ್ಯಂತ್ ರೆಡಿ! ಸಿಂಪಲ್ ಸುನಿಯ ಹೊಸ ವೈಭವ…

ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್.
ಇವರಿಬ್ಬರ ಕಾಂಬಿನೇಶನ್ ನಲ್ಲಿ “ಗತವೈಭವ” ಚಿತ್ರ ಮೂಡಿಬರುತ್ತಿದೆ‌. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಇತ್ತೀಚೆಗೆ “ಗತವೈಭವ” ಕ್ಕೆ ಚಾಲನೆ ಸಿಕ್ಕಿದೆ. ಗುಬ್ಬಿ ಶಾಸಕ ಶ್ರೀನಿವಾಸ್, ಲಹರಿ ವೇಲು, ನಿರ್ಮಾಪಕ ಪುಷ್ಕರ್, ನಿರ್ದೇಶಕರಾದ ಪವನ್ ಒಡೆಯರ್ , ಮಹೇಶ್ ಕುಮಾರ್ ಹಾಗೂ ವಿತರಕ ಸುಪ್ರೀತ್ ಚಿತ್ರತಂಡಕ್ಕೆ ಶುಭ ಕೋರಿದರು.

ದುಶ್ಯಂತ್ ಹೇಳಿದ್ದಿಷ್ಟು.’ ನಾನು ಮೂಲತಃ ತುಮಕೂರಿನವನು. ವಿದೇಶದಲ್ಲಿ ಎಲ್ ಎಲ್ ಬಿ ಓದಿದ್ದೇನೆ. ಆದರೆ ಅಭಿನಯದಲ್ಲಿ ಆಸಕ್ತಿ ಹೆಚ್ಚು . ಮೊದಲು ನಾನು ಅಪ್ಪು ಅವರನ್ನು ನೆನೆಯುತ್ತೇನೆ . ಈ ಚಿತ್ರದ ಟೀಸರ್ ಕಳೆದ ವರ್ಷ ಸಿದ್ಧವಾಗಿತ್ತು. ಮೊದಲು ನಾವು ತೋರಿಸಿದ್ದೆ ಅಪ್ಪು ಅವರಿಗೆ. ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು. ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ. ಚಿತ್ರದಲ್ಲಿ ನಟಿಸು ಎಂದಿದ್ದರು ಅಪ್ಪು. ಅವರ ಮಾತುಗಳು ನನಗೆ ಸ್ಪೂರ್ತಿ.
ನಮ್ಮದು ಸಂಪ್ರದಾಯಸ್ಥರ ಕುಟುಂಬ. ಸಿನಿಮಾದಲ್ಲಿ ನಟಿಸುವುದು ನನ್ನ ತಂದೆ, ತಾಯಿಗೆ ಇಷ್ಟವಿರಲಿಲ್ಲ. ಕೊನೆಗೆ ತಾಯಿಯನ್ನು ಒಪ್ಪಿಸಿದೆ.

ತಂದೆ ಈಗಲೂ ಪೂರ್ಣ ಒಪ್ಪಿಗೆ ನೀಡಿಲ್ಲ. ನಾನು ವಿದೇಶದಲ್ಲಿ ಓದುತ್ತಿದ್ದಾಗ ದಿನ ಕನ್ನಡಿ ಮುಂದೆ ನಿಂತು ನಟನಂತೆ ಅಭಿನಯಿಸುತ್ತಿದೆ. ಬನ್ನೇರುಘಟ್ಟದ ಬಳಿ ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸುವ ನಾಟಕವೊಂದಕ್ಕೆ ಹೋದಾಗ ಕಲಾವಿದರೆಲ್ಲಾ ಒಂದು ಕಡೆ ಬನ್ನಿ ಎಂದರು . ಅವರು ಕಲಾವಿದ ಅಂದ ತಕ್ಷಣ ನನ್ನ ಮನಸ್ಸಿನಲ್ಲಿ ನಟನಾಗಬೇಕೆಂಬ ಹಂಬಲ ಹೆಚ್ಚಾಯಿತು.‌ ನಂತರ ಅಭಿನಯಕ್ಕೆ ಬೇಕಾದ ತರಬೇತಿ ಪಡೆದೆ. ನನ್ನ ಸ್ನೇಹಿತರೊಬ್ಬರ ಮೂಲಕ ಸುನಿ ಅವರ ಪರಿಚಯವಾಯಿತು.


ಕಥೆ ಸಿದ್ದವಾಯಿತು. ನಿರ್ಮಾಪಕರ ಹುಡುಕಾಟ ಆರಂಭವಾಯಿತು ಎಂದರು ದುಶ್ಯಂತ್.
ಕೆಲವರು ಹೇಳುತ್ತಾರೆ ದುಡ್ಡಿರುವವರ ಮಕ್ಕಳು ಹೀರೋ ಆಗುತ್ತಾರೆ ಅಂತ. ನಾನು ಗುಬ್ಬಿ ಶಾಸಕ ಶ್ರೀನಿವಾಸ್ ಅವರ ಪುತ್ರ. ಆದರೆ ನಮ್ಮ ತಂದೆಗೆ ನಾನು ಚಿತ್ರರಂಗಕ್ಕೆ ಬರಲು ಇಷ್ಟವಿಲ್ಲ. ನನಗೆ ಇದಲ್ಲದೆ ಬೇರೆ ಇಷ್ಟವಿಲ್ಲ ಹಾಗಾಗಿ ನಾನು ನಿರ್ಮಾಪಕರ ಹುಡುಕಿ ಹಣ ಹೊಂದಿಸಲು ಒಂದು ವರ್ಷಕ್ಕೂ ಅಧಿಕ ಸಮಯ ತೆಗೆದು ಕೊಂಡೆ ಎಂದು ದುಶ್ಯಂತ್ ತಿಳಿಸಿದರು.

ನಾವು ರಾಜಕೀಯ ವ್ಯಕ್ತಿಗಳು ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ. ಆದರೆ ನಾನು ನನ್ನ ಮಗನನ್ನು ಬೆಳೆಸಿದ ರೀತಿಯ ಬೇರೆ. ಅವನ ಆಯ್ಕೆಯೇ ಬೇರೆ. ಚುನಾವಣೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ನನಗೆ ಸಿನಿಮಾ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ ನನಗಿಷ್ಟವಿಲ್ಲದ ಕೆಲಸಕ್ಕೆ ನಾನು ಕೊಡಲ್ಲ. ಈ ಚಿತ್ರತಂಡ ನೋಡಿದರೆ ಸಂತೋಷವಾಗುತ್ತಿದೆ. ನನ್ನ ಮಗನಿಂದ ಒಳ್ಳೆಯದು ಆಗದಿದ್ದರೂ ಪರವಾಗಿಲ್ಲ ಯಾರಿಗೂ ಕೆಟ್ಟದಾಗುವುದು ಬೇಡ ಎಂದರು ಗುಬ್ಬಿ ಶಾಸಕ ಶ್ರೀನಿವಾಸ್.

“ಗತವೈಭವ” ಎಂದರೆ ಗತಿಸಿ ಹೋದ ವೈಭವ ಎಂದು. ಈ ನಮ್ಮ ಚಿತ್ರದಲ್ಲಿ ವಾಸ್ಕೋಡಿಗಾಮನ ಕಥೆ ಸೇರಿದಂತೆ ಕೆಲವು ಐತಿಹಾಸಿಕ ಸನ್ನಿವೇಶಗಳಿರುತ್ತದೆ. ಫನ್, ಸೆಂಟಿಮೆಂಟ್ ಹಾಗೂ ಮೈಂಡ್ ಗೇಮ್ ನ ಮಿಶ್ರಣ ಅನ್ನಬಹುದು. ದುಶ್ಯಂತ್ ಗೆ ಸ್ಟೇಜ್ ಫಿಯರ್ ಇಲ್ಲ. ಟೀಸರ್ ನಲ್ಲಿ ಆತನ ಅಭಿನಯಕ್ಕೆ ಹಾಗೂ ಧ್ವನಿಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿದೆ. ಏಪ್ರಿಲ್ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದರು ಸುನಿ.

ನಾನು ದುಶ್ಯಂತ್ ಅಕ್ಕಪಕ್ಕದ ಮನೆಯವರು. ಸುಮಾರು ಇಪ್ಪತ್ತು ವರ್ಷಗಳ ಪರಿಚಯ.‌ ದುಶ್ಯಂತ್ ನನ್ನ ಬಳಿ ಈ ವಿಷಯ ಹೇಳಿದಾಗ ನಿರ್ಮಾಣಕ್ಕೆ ಮುಂದಾದೆ. ನನ್ನೊಂದಿಗೆ ಸುನಿ ಸಹ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ ಎಂದರು ನಿರ್ಮಾಪಕ ದೀಪಕ್ ತಿಮ್ಮಪ್ಪ.

ಛಾಯಾಗ್ರಾಹಕ ವಿಲಿಯಂ ಡೇವಿಡ್, ಸಂಗೀತ ನಿರ್ದೇಶಕ ಭರತ್ ಬಿ.ಜೆ, ಸಂಕಲನಕಾರ ಆಶಿಕ್, ಕಲಾ ನಿರ್ದೇಶಕ ಶಿವಕುಮಾರ್, ವಿ ಎಫ್ ಎಕ್ಸ್ ಸೂಪರ್ ವೈಸರ್ ನಿರ್ಮಲ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಚೇತನ್ ಡಿಸೋಜ ಮುಂತಾದವರು ಈ ಚಿತ್ರದ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಜನಾರ್ದನ ರೆಡ್ಡಿ ಪುತ್ರ ಈಗ ಹೀರೋ! ವಾರಾಹಿ ಪ್ರೊಡಕ್ಷನ್ ಹೌಸ್ ನ 15ನೇ ಸಿನಿಮಾ ಅನೌನ್ಸ್…

ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದೆ. ಇದೀಗ ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡುತಿದ್ದು, ಈ ಚಿತ್ರದ ಮೂಲಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿಯನ್ನು ನಾಯಕನಾಗಿ ಪರಿಚಯಿಸುತ್ತಿದೆ.

ಇನ್ನೂ ಹೆಸರಿಡದ ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿದ್ದು ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರು ಈ ಸಿನಿಮಾದ ಭಾಗವಾಗಿದ್ದಾರೆ.

ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ಮಾಡಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ.

ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇತರ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

Categories
ಸಿನಿ ಸುದ್ದಿ

ಕರ್ಮದ ಮರ್ಮ ತಿಳಿಸೋ ಇನ್ ಸ್ಟಂಟ್ ಕರ್ಮ: ಏಪ್ರಿಲ್ ಗೆ ರಿಲೀಸ್

ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಎಂಬ ಮಾತಿದೆ. ಅದು ಯಾವತ್ತೊ ಅಲ್ಲ. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವ ಇಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಚಿತ್ರ ರೆಡಿಯಾಗಿದೆ . ಈ ಚಿತ್ರಕ್ಕೆ ಸಂದೀಪ್ ಮಹಾಂತೇಶ್ ನಿರ್ದೇಶಕರು.

ನಾನು ಈ ಹಿಂದೆ “D k ಬೋಸ್” ಚಿತ್ರ ನಿರ್ದೇಶನ ಮಾಡಿದ್ದೆ. ಮಾಧ್ಯಮದಿಂದ ಈ ಚಿತ್ರಕ್ಕೆ ಒಳ್ಳೆ ಪ್ರಶಂಸೆ ಸಿಕ್ಕಿತ್ತು. ಆದರೆ ನಿರೀಕ್ಷಿಸಿದಷ್ಟು ಗೆಲವು ಸಿಗಲಿಲ್ಲ. ಆ ಚಿತ್ರದಲ್ಲಾದ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ನಾಲ್ಕು ಪ್ರಮುಖ ಪಾತ್ರಗಳ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ನಾನು ನನ್ನ ತಾಯಿಯನ್ನು‌ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲೊಂದು ಘಟನೆ ನಡೆಯಿತು. ಅದನ್ನು ಸ್ಪೂರ್ತಿಯಾಗಿಟ್ಟುಕೊಂಡು ಕಥೆ ಮಾಡಿದ್ದೇನೆ. ಸೆನ್ಸಾರ್ ನಮ್ಮ ಚಿತ್ರಕ್ಕೆ ಯು\ಎ ಪ್ರಮಾಣಪತ್ರ ನೀಡಿದೆ. ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ಮಾಹಿತಿ ನೀಡಿದರು.

ಯಶ್ ಶೆಟ್ಟಿ ಚಿತ್ರದ ಪ್ರಮುಖ ಆಕರ್ಷಣೆ. ಈ ಬಗ್ಗೆ ಹೇಳುವ ಅವರು, ನಾನು ಈ ಚಿತ್ರದ ಪ್ರಮುಖ ಪಾತ್ರಧಾರಿ. ಹೀರೋ ಎನ್ನುವುದಕ್ಕಿಂತ, ಕಥೆಯೇ ಈ ಚಿತ್ರದ ಹೀರೋ ಎನ್ನಬಹುದು. ಅಷ್ಟು ಚೆನ್ನಾಗಿ ನಮ್ಮ ನಿರ್ದೇಶಕರು ಕಥೆ ಹೆಣೆದಿದ್ದಾರೆ. ನಮಗೆ ಏನೇ ಸಂದೇಹ ಬಂದರೂ ನಿರ್ದೇಶಕರು ಅದಕ್ಕೆ ಸ್ಪಷ್ಟನೆ ನೀಡುತ್ತಿದ್ದರು ಎಂದರು ನಟ ಯಶ್ ಶೆಟ್ಟಿ.

ಪ್ರಮುಖಪಾತ್ರದಲ್ಲಿ ನಟಿಸಿರುವ ಅಂಜನ್ ದೇವ್(ಸಲಗ), ಹರಿ, ಪ್ರಜ್ವಲ್ ಶೆಟ್ಟಿ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಧನಂಜಯ, ಪನೀತ್ ಮುಂತಾದವರು ಚಿತ್ರದ ಕುರಿತಾದ ತಮ್ಮ ಅನುಭವ ಹಂಚಿಕೊಂಡರು.

ಮೂವತ್ತೈದು ಕೆಜಿ ಭಾರವುಳ್ಳ ಕ್ಯಾಮೆರಾವನ್ನು ಇಡೀ ದಿನ ಹೆಗಲ ಮೇಲೆ ಹೊತ್ತು ಚಿತ್ರೀಕರಣ ಮಾಡಿದ ಬಗ್ಗೆ ಛಾಯಾಗ್ರಾಹಕ ಭಾಸ್ಕರ್ ಹೆಗ್ಡೆ ಹೇಳಿಕೊಂಡರು. ಸೂರಜ್ ಜೋಯಿಸ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

ಸಂತೋಷ್ ಮಹಾಂತೇಶ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಸಂದೀಪ್ ಮಹಾಂತೇಶ್ ಹಾಗೂ ಸಂಕಲನಕಾರ ಸುರೇಶ್ ಆರ್ಮುಗಂ ಕೂಡ ಈ ಚಿತ್ರದ ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ರೈತನಿಗೆ ಗಾನ ನಮನ; ಇದು ALL OK ಗೆಳೆಯರ ಶ್ರಮ

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ “ರೈತ” ನಿಜಕ್ಕೂ ಅನ್ನದಾತ.

ಇಂತಹ “ರೈತ” ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು “ರೈತ” ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ.
ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು, ಹಾಡಿ, ಸಂಗೀತ ನೀಡಿದ್ದಾರೆ. ಜೊತೆಗೆ ನಿರ್ದೇಶನವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆಯಾಗಿದೆ.
ರೈತರ ಮಕ್ಕಳು ಈ ಹಾಡನ್ನು ಲೋಕಾರ್ಪಣೆ ಮಾಡದ್ದು ವಿಶೇಷ.


ಸಾಯಿಗೋಲ್ಡ್ ಪ್ಯಾಲೆಸ್ ನ ಶರವಣ, ಯುನೈಟೆಡ್ ಆಸ್ಪತ್ರೆಯ ಶಾಂತಕುಮಾರ್, ಅನಂತು, ನಟ ಉಪೇಂದ್ರ ಅವರ ಸಹೋದರ ಸುಧೀಂದ್ರ ಸೇರಿದಂತೆ ಅನೇಕರು ಈ ಸ ಸಮಾರಂಭಕ್ಕೆ ಆಗಮಿಸಿದ್ದರು.

ನಾವು ಮಕ್ಕಳನ್ನು ನೀನು ದೊಡ್ಡವನಾದ ಮೇಲೆ ಏನಾಗುತ್ತೀಯಾ ? ಅಂತ ಕೇಳಿದಾಗ, ಅವರು ಡಾಕ್ಟರ್, ಇಂಜಿನಿಯರ್ ಆಗುತ್ತೀನಿ ಎನ್ನುತ್ತಾರೆ ಹೊರೆತು ರೈತ ಆಗುತ್ತೀನಿ ಅನ್ನುವುದಿಲ್ಲ. ನಾನು ರೈತ ಆಗುತ್ತೀನಿ ಅನ್ನುವ ದಿನ ಬೇಗ ಬರಬೇಕು ಎಂಬುದೇ ನಮ್ಮ‌ ಆಸೆ. ನಾನು ಹಾಗೂ ಸಂಜಯ್ ಗೌಡ ಇಬ್ಬರು ಬಾಲ್ಯ ಸ್ನೇಹಿತರು. ಹಿಂದೆ KA01 ಎಂಬ ಆಲ್ಬಂ ಸಾಂಗ್ ಮಾಡಿ ವಿದೇಶದಲ್ಲಿ ಬಿಡುಗಡೆ ಮಾಡಿದ್ದೆವು. ಈಗ ರೈತನ ಕುರಿತಾದ ಈ ಗೀತೆ ತಂದಿದ್ದೀವಿ. ಈ ವಿಷಯವನ್ನು ರಾಜಕೀಯ ವ್ಯಕ್ತಿಗಳು ಸೇರಿದಂತೆ ಅನೇಕ ‌ಗಣ್ಯರ ಮುಂದೆ ಹೇಳಿದಾಗ ಸಂತೋಷದಿಂದ ಸಾಥ್ ನೀಡಿದರು. ಛಾಯಾಗ್ರಾಹಕ ಆಕಾಶ್ ಜೋಶಿ ಸೇರಿದಂತೆ ಎಲ್ಲಾ ತಂತ್ರಜ್ಞರ ಸಾಹಕಾರ ಅಪಾರ ಎಂದರು ALL OK.

ನನ್ನನ್ನು ಪರದೆಯ ಮೇಲೆ ತರುವ ಸಲುವಾಗಿ ಗೆಳೆಯ ALL OK ಈ ವಿಭಿನ್ನ ಹಾಡನ್ನು ಮಾಡಿದ್ದಾನೆ.. ಆದರೆ ನಾವು ಪರದೆಯ ಮೇಲೆ ಬರುವುದಕ್ಕಿಂತ ನಮಗೆ ತಿನ್ನಲು ಅನ್ನ ನೀಡುತ್ತಿರುವ ರೈತನಿಗೆ ನಮನ ಸಲ್ಲಿಸುವ ಈ “ರೈತ” ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಗಿದೆ. ರೈತನಿಗೆ ನೋಡಿ ಪ್ರಮೋಷನ್, ಇನ್ಕ್ರಿಮೆಂಟ್, ರಿಟೈರ್ ಮೆಂಟ್ ಏನು ಇಲ್ಲ. ಯಾವಾಗಲೂ ದುಡಿಮೆಯೇ ಆತನ ಜೀವನ. ನಮ್ಮ
ಮಕ್ಕಳು ರಜೆ ದಿನಗಳಲ್ಲಿ ಅಲ್ಲಿಇಲ್ಲಿ ಕರೆದುಕೊಂಡು ಹೋಗು ಎನ್ನುವ ಬದಲು ಹೊಲ,ಗದ್ದೆಗಳಿಗೆ ಕರೆದುಕೊಂಡು ಹೋಗು ನಾನು ನೋಡಬೇಕು ಎನ್ನುವಂತಾಗಲಿ ಎಂದು ಸಂಜಯ್ ಗೌಡ ಆಶಿಸಿದರು.


ಈ ಹಾಡಿನಲ್ಲಿ ನನ್ನೊಂದಿಗೆ ಸೋನು ಗೌಡ ಅಭಿನಯಿಸಿದ್ದಾರೆ. ತಂತ್ರಜ್ಞರ ಕೆಲಸ ಉತ್ತಮವಾಗಿದೆ. ರೈತರ ಮೇಲಿನ ಗೌರವದಿಂದ ಅನೇಕ ಗಣ್ಯರು ಇದರಲ್ಲಿ ಕಾಣಿಸಿಕೊಂಡಿದ್ದಾರೆ.
ಮುಂದೊಂದು ದಿನ ರೈತನ ಕುರಿತಾದ ಚಿತ್ರ ನಿರ್ಮಾಣ ಮಾಡುತ್ತೇನೆ ಎಂದ ಸಂಜಯ್ ಗೌಡ ಅವರು, ಕಾರ್ಯಕ್ರಮ ಬಂದ ಎಲ್ಲಾ ಅತಿಥಿಗಳಿಗೆ ಧನ್ಯವಾದ ತಿಳಿಸಿದರು.

ಸಂಜಯ್ ಗೌಡ ಮತ್ತು ALL OK ತಂಡದವರನ್ನು ಶರವಣ ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ವಿಮೆ ಇಲ್ಲದ ರೈತನ ಕುಟುಂಬದಲ್ಲಿ ಯಾರಿಗಾದರೂ ತೊಂದರೆಯಾದರೆ, ಕೇವಲ ಅವರ ಚಿಕಿತ್ಸೆ ವೆಚ್ಚದಲ್ಲಿ 50% ಕಡಿಮೆ ಮಾಡುವುದಾಗಿ ಯುನೈಟೆಡ್ ಆಸ್ಪತ್ರೆಯ ಶಾಂತಕುಮಾರ್ ಹೇಳಿದರು.

ಭೋಧಿ ಟ್ರೀ ಸಂಸ್ಥೆಯವರು
ಸುಮಾರು ನೂರೈವತ್ತಕ್ಕೂ ಅಧಿಕ ಮಕ್ಕಳಿಗೆ ವಿಶೇಷ ಕಿಟ್ ನೀಡಿದರು. ALL OK ಚಿತ್ರರಂಗ ಪ್ರವೇಶಿಸಿ ಹದಿನೈದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅವರ ಸ್ನೇಹಿತರು ಗೌರವಿಸಿದರು.

Categories
ಸಿನಿ ಸುದ್ದಿ

ಪೆದ್ರೊ ಹಿಂದೆ ಶಿರಸಿ ಹುಡುಗ: ಹೊಸ ಪ್ರತಿಭೆಗೆ ರಿಷಭ್ ಶೆಟ್ಟಿ ಸಾಥ್

ಶಿರಸಿ ಮೂಲದ ನಟೇಶ್ ಹೆಗಡೆ ಮಾಡಿದ ಕೆಲವು ಕಿರುಚಿತ್ರಗಳು ಜನಪ್ರಿಯವಾಗಿದೆ. ಇವರ ಒಂದು ಕಿರುಚಿತ್ರ ವೀಕ್ಷಿಸಿದ ರಾಜ್ ಬಿ‌ ಶೆಟ್ಟಿ, ನಟೇಶ್ ಅವರನ್ನು ಸಂಪರ್ಕಿಸುತ್ತಾರೆ. ನಟೇಶ್ ಅವರ ಪ್ರತಿಭೆ ಬಗ್ಗೆ ರಿಷಭ್ ಶೆಟ್ಟಿ ಅವರ ಬಳಿ ಹೇಳಿದಾಗ, ರಿಷಭ್ ” ಪೆದ್ರೊ”ಚಿತ್ರ‌ ನಿರ್ಮಾಣಕ್ಕೆ ಮುಂದಾಗುತ್ತಾರೆ.

ಈ ಚಿತ್ರ ನಿರ್ಮಾಣವಾಗಿ ವಿವಿಧ ದೇಶಗಳ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಸದ್ಯದಲ್ಲೇ ಕರ್ನಾಟಕದ ಚಿತ್ರಮಂದಿರಗಳಲ್ಲೂ “ಪೆದ್ರೊ” ಬಿಡುಗಡೆಯಾಗಲಿದೆ.

ಇತ್ತೀಚೆಗೆ ಈ‌ ಚಿತ್ರದ ಟ್ರೇಲರ್ ಅನ್ನು ನಿರ್ದೇಶಕ ಗಿರೀಶ್ ಕಾಸರವಳ್ಳಿ ಬಿಡುಗಡೆ ಮಾಡಿದರು.

ನಾನು “ಪೆದ್ರೊ” ಚಿತ್ರ ನೋಡಿ ಬೆರಗಾದೆ. ಇತ್ತೀಚೆಗೆ ದೂರವಾಗಿರುವ ಸಿನಿಮಾ ಭಾಷೆಯನ್ನು ಈ ಚಿತ್ರದಲ್ಲಿ ಚೆನ್ನಾಗಿ ಬಳಸಿಕೊಂಡಿದ್ದಾರೆ.‌‌ ಮಾಮೂಲಿ ತರಹ‌ ಅಲ್ಲದೆ ಬೇರೆಯದೇ ರೀತಿಯ ಸಿನಿಮಾ ಮಾಡಬೇಕು. ಆ ರೀತಿ ಕನ್ನಡದಲ್ಲಿ “ತಿಥಿ” ಹಾಗೂ “ಹರಿಕಥಾ ಪ್ರಸಂಗ” ಚಿತ್ರಗಳು ನನಗೆ ಹಿಡಿಸಿದ್ದವು. ಈಗ ಆ ಸಾಲಿಗೆ “ಪೆದ್ರೊ” ಸೇರಿದೆ. ರಿಷಭ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯ ದಾಗಲಿ ಎಂದು ಗಿರೀಶ್ ಕಾಸರವಳ್ಳಿ ಹಾರೈಸಿದರು.

ನನ್ನ ಪ್ರಕಾರ ಕಮರ್ಷಿಯಲ್ ಸಿನಿಮಾ, ಅವಾರ್ಡ್ ಸಿನಿಮಾ ಎಂಬುದು ಇಲ್ಲ. ಸಿನಿಮಾ ಅಂದರೆ ಸಿನಿಮಾ ಅಷ್ಟೇ. ವಿಭಾಗಗಳನ್ನು ನಾವು ಮಾಡಿಕೊಂಡಿದ್ದೇವೆ. ನಾನು ಇಷ್ಟಪಡುವ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಟ್ರೇಲರ್ ಬಿಡುಗಡೆ ಮಾಡಿದ್ದು ಬಹಳ ಸಂತೋಷವಾಗಿದೆ. ಅವರ ಮಾರ್ಗದರ್ಶನ ನಮಗೆ‌ ಮುಖ್ಯ. ನಟೇಶ್ ತುಂಬಾ ಚೆನ್ನಾಗಿ ನಿರ್ದೇಶನ‌ ಮಾಡಿದ್ದಾರೆ. ಸಾಮಾನ್ಯವಾಗಿ ತಂದೆ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಾರೆ. ಆದರೆ ನಮ್ಮ ಚಿತ್ರದಲ್ಲಿ ಮಗ , ತಂದೆಯನ್ನು ಚಿತ್ರರಂಗಕ್ಕೆ ಪ್ರವೇಶ ಮಾಡಿಸಿದ್ದಾರೆ. ನಟೇಶ್ ಹೆಗಡೆ ಅವರ ತಂದೆ ಗೋಪಾಲ್ ಹೆಗಡೆ ಈ‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ, ರಾಮಕೃಷ್ಣ ಭಟ್, ಮೇಧಿನಿ ಕೆಳಮನೆ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ರಿಷಭ್ ಶೆಟ್ಟಿ.

ನಮ್ಮ ಚಿತ್ರ ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ. ಆದರೆ ಇಲ್ಲಿನವರಿಗೆ ಈ ಚಿತ್ರ ತಲುಪಬೇಕು. ಅದರ ಮೊದಲ ಹೆಜ್ಜೆಯಾಗಿ ಟ್ರೇಲರ್ ಬಿಡುಗಡೆ ಮಾಡಿದ್ದೀವಿ. ನನ್ನ ಕಥೆ ಇಷ್ಟಪಟ್ಟು ಹಣ ಹಾಕಿದ ರಿಷಭ್ ಶೆಟ್ಟಿ ಅವರಿಗೆ, ರಿಷಭ್ ರನ್ನು ಪರಿಚಯಿಸಿದ ರಾಜ್ ಶೆಟ್ಟಿ ಅವರಿಗೆ , ಚಿತ್ರದಲ್ಲಿ ನಟಿಸಿರುವ ನನ್ನ ತಂದೆ ಗೋಪಾಲ್ ಹೆಗಡೆ ಹಾಗೂ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಿರೀಶ್ ಕಾಸರವಳ್ಳಿ ಸರ್ ಅವರಿಗೆ ಅನಂತ ಧನ್ಯವಾದ ತಿಳಿಸಿದರು ನಿರ್ದೇಶಕ ನಟೇಶ್ ಹೆಗಡೆ.

ಈ ಹುಡುಗನನ್ನು ಫೇಸ್ ಬುಕ್ ಮೂಲಕ ಹುಡುಕಿ, ನಿನ್ನ ಕಿರುಚಿತ್ರವೊಂದನ್ನು ಕಳುಹಿಸು ಎಂದೆ. ಆತನ ಕಿರುಚಿತ್ರ ನೋಡಿ ಸಂತೋಷ ಪಟ್ಟೆ. ರಿಷಭ್ ಗೆ ಈತನನ್ನು ಪರಿಚಯಿಸಿದೆ. ಈಗ ಈ ಚಿತ್ರ ನಿರ್ಮಾಣವಾಗಿದೆ. ಉತ್ತಮ ಪ್ರತಿಕ್ರಿಯೆ ಕೂಡ ಸಿಗುತ್ತಿದೆ. ಈ ಹುಡುಗನಿಗೆ ಹಾಗೂ ತಂಡಕ್ಕೆ ನಿಮ್ಮ ಬೆಂಬಲವಿರಲಿ ಎಂದರು ರಾಜ್ ಬಿ ಶೆಟ್ಟಿ.

ಚಿತ್ರದಲ್ಲಿ ನಟಿಸಿರುವ ರಾಮಕೃಷ್ಣ ಭಟ್ ಹಾಗೂ ಸೌಂಡ್‌ ಡಿಸೈನರ್ ಶ್ರೇಯಾಂಕ್ ಸಹ ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ಕ್ರೇಜಿ ಸ್ಟಾರ್ ರವಿಚಂದ್ರನ್ ತಾಯಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಅವರು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


ಮೃತರು ಇಬ್ಬರು ಪುತ್ರರು ಹಾಗು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ದರ್ಶನಕ್ಕೆ ಅವರ ಮನೆಯ ಬಳಿ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Categories
ಸಿನಿ ಸುದ್ದಿ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ ಟ್ರೋಫಿ ಅನಾವರಣ: ಇದು ಮೂರನೇ ಪ್ರಶಸ್ತಿ ಟ್ರೋಫಿ

ನಟಿ ರಾಗಿಣಿ, ನಟ ರಿಷಿ ಹಾಗು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರು ಆ ಟ್ರೋಫಿಯನ್ನು ಅನಾವರಣಗೊಳಿಸಿದರು.

ಇದೇ ಸಂಧರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರು ಹಾಗೂ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಸದಾಶಿವ ಶೆಣೈ ಅವರನ್ನು ಸಿನೆಮಾ ಪತ್ರಕರ್ತರ ಪರವಾಗಿ ಸನ್ಮಾನಿಸಲಾಯಿತು.

Categories
ಸಿನಿ ಸುದ್ದಿ

ಮಾರ್ಚ್ 4ಕ್ಕೆ ಅಘೋರನ ಅಬ್ಬರ! ಇದು ವಿಭಿನ್ನ ಹಾರರ್ ಕಥನ…

ಕನ್ನಡದಲ್ಲಿ ಇತ್ತೀಚೆಗೆ ಸಿನಿಮಾಗಳು ರಿಲೀಸ್ ಆಗುವ ಮೊದಲೇ ಸದ್ದು ಮಾಡುತ್ತವೆ. ಅಂತಹ ಸಿನಿಮಾಗಳ ಸಾಲಿಗೆ ಅಘೋರ ಚಿತ್ರವೂ ಸೇರಿದೆ. ಆರಂಭದಲ್ಲಿ ಶೀರ್ಷಿಕೆಯೊಂದಿಗೇ ಸದ್ದು ಮಾಡಿದ “ಅಘೋರ” ವಿಭಿನ್ನ ಕಥೆ ಹೊಂದಿರುವ ಚಿತ್ರ. ಹೊಸತನಗಳಿಂದ ಕೂಡಿರುವ ಹೊಸಬರ ತಂಡ ಹೊಸ ರಿಲೀಸ್ ಡೇಟ್‌ನೊಂದಿಗೆ ಈಗ ಮತ್ತೆ ಸುದ್ದಿಯಲ್ಲಿದೆ.

ಹೌದು, ಅಘೋರ ಫೆಬ್ರವರಿ 25ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಅದರ ಬದಲು ಮಾರ್ಚ್ 4ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮೋಕ್ಷ ಸಿನಿಮಾಸ್ ಬ್ಯಾನರಲ್ಲಿ ನಿರ್ಮಾಣವಾಗಿರುವ “ಅಘೋರ” ಚಿತ್ರವನ್ನು ಪ್ರಮೋದ್ ರಾಜ್ ಎನ್. ಎಸ್ ನಿರ್ದೆಶಿಸಿದ್ದಾರೆ. ಚಿತ್ರ ನಿರ್ದೆಶಕರಾಗುವ ಮೊದಲು ಪ್ರಮೋದ್ ಹಲವು ಚಿತ್ರಗಳಲ್ಲಿ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾ ಪ್ರಚಾರವನ್ನು ಹೊಸ ಹೊಸ ರೀತಿಯಲ್ಲಿ ಮಾಡುತ್ತಿದ್ದಾರೆ.

ಈಗ ಮೆಟ್ರೋ ನಿಲ್ದಾಣಕ್ಕೂ ಸಿನಿಮಾದ ಪಬ್ಲಿಸಿಟಿ ಎಂಟ್ರಿ ಕೊಟ್ಟಿದೆ. ಈ ಹಿಂದೆ ಕೆಲ ಸಿನಿಮಾಗಳು ಮಾತ್ರ ಮೆಟ್ರೊ ನಿಲ್ದಾಣದಲ್ಲಿ ಪ್ರಚಾರ ಮಾಡಿದ್ದವು. ಈ ಸಿನಿಮಾಗಳ ಸಾಲಿಗೆ ಈಗ “ಅಘೋರ” ಸಿನಿಮಾ ತಂಡವೂ ಸಹ ಸೇರಿಕೊಂಡಿದೆ. ಬೆಂಗಳೂರಿನ ಹಲವು ಮೆಟ್ರೊ ನಿಲ್ದಾಣಗಳಲ್ಲಿ ಚಿತ್ರದ ಸ್ಟ್ಯಾಂಡೀಸ್ ನಿಲ್ಲಿಸುವ ಮೂಲಕ ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ.

ಹಾರರ್ ಕಥೆವುಳ್ಳ ಈ ಸಿನೆಮಾದಲ್ಲಿ ಸಾವಿನ ಮುನ್ಸೂಚನೆ ಹಾಗೂ ಸತ್ತ ನಂತರದ ಆಗು ಹೋಗುಗಳನ್ನು ರಿಸರ್ಚ್ ಮಾಡಿ ಕಥೆ ಮಾಡಿದ್ದಾರೆ ನಿರ್ದೇಶಕ ಪ್ರಮೋದ್. ಪಂಚ ಭೂತಗಳಾದ ಆಕಾಶ, ನೀರು, ಗಾಳಿ, ಅಗ್ನಿ, ಪ್ರಕೃತಿ ಕೂಡ ‘ಅಘೋರ”ದಲ್ಲಿ ಪಾತ್ರಧಾರಿಗಳಾಗಿದ್ದು, ಅದು ಚಿತ್ರದ ಹೈಲೈಟ್ಸ್ . ಪ್ರಕೃತಿಯೊಂದಿಗಿನ ಬದುಕು ಯಾಕೆ? ಸಾವು ಏಕೆ ಅನಿವಾರ್ಯ? ಇದನ್ನೆಲ್ಲ ಮಾಡುವವರಾರು ಎಂಬುದು ಯಾರಿಗೂ ತಿಳಿಯದ ನಿಗೂಢ. ಆದರೆ ಕರ್ಮವೆಂಬುದು ಯಾರನ್ನು ಬಿಡುವುದಿಲ್ಲ ಎನ್ನುವುದೇ ಸಿನಿಮಾದ ಸಾರಾಂಶ.

ಅಘೋರಿಯ ಪಾತ್ರದಲ್ಲಿ ಹಿರಿಯ ನಟ ಅವಿನಾಶ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ಅಶೋಕ್ ಶರ್ಮಾ, ಪುನೀತ್ ಗೌಡ, ರಚನಾ ದಶರಥ್, ದ್ರವ್ಯ ಶೆಟ್ಟಿ ಪ್ರಮುಖ ನಟಿಸಿದ್ದಾರೆ. ಶರತ್ ಜಿ ಕ್ಯಾಮೆರಾ ಕೆಲಸ ಕುತೂಹಲ ಮೂಡಿಸಿದೆ. ಈಗಾಗಲೇ ಟ್ರೇಲರ್ ಮೂಲಕವೇ ಅಘೋರ ನಿರೀಕ್ಷೆ ಹೆಚ್ಚಿಸಿದೆ.

ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ ಹಾಗು ಸಂಗೀತ ಚಿತ್ರಕ್ಕಿದೆ. ಎಲ್ .ಆರ್. ಜೀವನ್ ಸಂಭಾಷಣೆ ಬರೆದಿದ್ದಾರೆ. ಎ ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎ ಬಿ ಮುರುಳೀಧರನ್ ಹಾಗೂ ರಾಮ್ ಗೋಪಾಲ್ ವರ್ಮಾ ಬಳಿ ಕೆಲಸ ಮಾಡಿರುವ ಪ್ರವೀಣ್ ಬಿಜಿಎಂ ವರ್ಕ್ ಮಾಡಿದ್ದಾರೆ.

ತ್ಯಾಗರಾಜ್ ಚಿತ್ರಕ್ಕೆ ಶೀರ್ಷಿಕೆ ಸಂಗೀತ ನೀಡಿದ್ದಾರೆ. ಸಂಚಿತ್ ಹೆಗ್ಡೆ, ಸರಿಗಮಪ ಖ್ಯಾತಿಯ ಹನುಮಂತ, ಸಚಿನ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಯುಡಿವಿ ವೆಂಕಟೇಶ್ ಸಂಕಲನವಿದೆ. ಮಾಸ್ ಮಾದ ಅವರ ಸಾಹಸವಿದೆ. ಚಿತ್ರದ ಟ್ರೇಲರ್ ಎಲ್ಲೆಡೆ ಸದ್ದು ಮಾಡಿದ್ದು ಇದೇ ಮಾರ್ಚ್ 4ರಂದು ಕೆಆರ್‌ಜಿ ಸ್ಟುಡಿಯೋಸ್ ಮೂಲಕ ರಿಲೀಸ್ ಆಗಲಿದೆ.

Categories
ಸಿನಿ ಸುದ್ದಿ

ಮಾರ್ಚ್ 4ಕ್ಕೆ ಅಘೋರನ ಅಬ್ಬರ!

ಕನ್ನಡದಲ್ಲಿ ಇತ್ತೀಚೆಗೆ ಸಿನಿಮಾಗಳು ರಿಲೀಸ್ ಆಗುವ ಮೊದಲೇ ಸದ್ದು ಮಾಡುತ್ತವೆ. ಅಂತಹ ಸಿನಿಮಾಗಳ ಸಾಲಿಗೆ ಅಘೋರ ಚಿತ್ರವೂ ಸೇರಿದೆ. ಆರಂಭದಲ್ಲಿ ಶೀರ್ಷಿಕೆಯೊಂದಿಗೇ ಸದ್ದು ಮಾಡಿದ “ಅಘೋರ” ವಿಭಿನ್ನ ಕಥೆ ಹೊಂದಿರುವ ಚಿತ್ರ. ಹೊಸತನಗಳಿಂದ ಕೂಡಿರುವ ಹೊಸಬರ ತಂಡ ಹೊಸ ರಿಲೀಸ್ ಡೇಟ್‌ನೊಂದಿಗೆ ಈಗ ಮತ್ತೆ ಸುದ್ದಿಯಲ್ಲಿದೆ.

ಹೌದು, ಅಘೋರ ಫೆಬ್ರವರಿ 25ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಅದರ ಬದಲು ಮಾರ್ಚ್ 4ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮೋಕ್ಷ ಸಿನಿಮಾಸ್ ಬ್ಯಾನರಲ್ಲಿ ನಿರ್ಮಾಣವಾಗಿರುವ “ಅಘೋರ” ಚಿತ್ರವನ್ನು ಪ್ರಮೋದ್ ರಾಜ್ ಎನ್. ಎಸ್ ನಿರ್ದೆಶಿಸಿದ್ದಾರೆ. ಚಿತ್ರ ನಿರ್ದೆಶಕರಾಗುವ ಮೊದಲು ಪ್ರಮೋದ್ ಹಲವು ಚಿತ್ರಗಳಲ್ಲಿ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾ ಪ್ರಚಾರವನ್ನು ಹೊಸ ಹೊಸ ರೀತಿಯಲ್ಲಿ ಮಾಡುತ್ತಿದ್ದಾರೆ. ಈಗ ಮೆಟ್ರೋ ನಿಲ್ದಾಣಕ್ಕೂ ಸಿನಿಮಾದ ಪಬ್ಲಿಸಿಟಿ ಎಂಟ್ರಿ ಕೊಟ್ಟಿದೆ. ಈ ಹಿಂದೆ ಕೆಲ ಸಿನಿಮಾಗಳು ಮಾತ್ರ ಮೆಟ್ರೊ ನಿಲ್ದಾಣದಲ್ಲಿ ಪ್ರಚಾರ ಮಾಡಿದ್ದವು. ಈ ಸಿನಿಮಾಗಳ ಸಾಲಿಗೆ ಈಗ “ಅಘೋರ” ಸಿನಿಮಾ ತಂಡವೂ ಸಹ ಸೇರಿಕೊಂಡಿದೆ. ಬೆಂಗಳೂರಿನ ಹಲವು ಮೆಟ್ರೊ ನಿಲ್ದಾಣಗಳಲ್ಲಿ ಚಿತ್ರದ ಸ್ಟ್ಯಾಂಡೀಸ್ ನಿಲ್ಲಿಸುವ ಮೂಲಕ ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ.

ಹಾರರ್ ಕಥೆವುಳ್ಳ ಈ ಸಿನೆಮಾದಲ್ಲಿ ಸಾವಿನ ಮುನ್ಸೂಚನೆ ಹಾಗೂ ಸತ್ತ ನಂತರದ ಆಗು ಹೋಗುಗಳನ್ನು ರಿಸರ್ಚ್ ಮಾಡಿ ಕಥೆ ಮಾಡಿದ್ದಾರೆ ನಿರ್ದೇಶಕ ಪ್ರಮೋದ್. ಪಂಚ ಭೂತಗಳಾದ ಆಕಾಶ, ನೀರು, ಗಾಳಿ, ಅಗ್ನಿ, ಪ್ರಕೃತಿ ಕೂಡ ‘ಅಘೋರ”ದಲ್ಲಿ ಪಾತ್ರಧಾರಿಗಳಾಗಿದ್ದು, ಅದು ಚಿತ್ರದ ಹೈಲೈಟ್ಸ್ . ಪ್ರಕೃತಿಯೊಂದಿಗಿನ ಬದುಕು ಯಾಕೆ? ಸಾವು ಏಕೆ ಅನಿವಾರ್ಯ? ಇದನ್ನೆಲ್ಲ ಮಾಡುವವರಾರು ಎಂಬುದು ಯಾರಿಗೂ ತಿಳಿಯದ ನಿಗೂಢ. ಆದರೆ ಕರ್ಮವೆಂಬುದು ಯಾರನ್ನು ಬಿಡುವುದಿಲ್ಲ ಎನ್ನುವುದೇ ಸಿನಿಮಾದ ಸಾರಾಂಶ.

ಅಘೋರಿಯ ಪಾತ್ರದಲ್ಲಿ ಹಿರಿಯ ನಟ ಅವಿನಾಶ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ಅಶೋಕ್ ಶರ್ಮಾ, ಪುನೀತ್ ಗೌಡ, ರಚನಾ ದಶರಥ್, ದ್ರವ್ಯ ಶೆಟ್ಟಿ ಪ್ರಮುಖ ನಟಿಸಿದ್ದಾರೆ. ಶರತ್ ಜಿ ಕ್ಯಾಮೆರಾ ಕೆಲಸ ಕುತೂಹಲ ಮೂಡಿಸಿದೆ. ಈಗಾಗಲೇ ಟ್ರೇಲರ್ ಮೂಲಕವೇ ಅಘೋರ ನಿರೀಕ್ಷೆ ಹೆಚ್ಚಿಸಿದೆ.

ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ ಹಾಗು ಸಂಗೀತ ಚಿತ್ರಕ್ಕಿದೆ. ಎಲ್ .ಆರ್. ಜೀವನ್ ಸಂಭಾಷಣೆ ಬರೆದಿದ್ದಾರೆ. ಎ ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎ ಬಿ ಮುರುಳೀಧರನ್ ಹಾಗೂ ರಾಮ್ ಗೋಪಾಲ್ ವರ್ಮಾ ಬಳಿ ಕೆಲಸ ಮಾಡಿರುವ ಪ್ರವೀಣ್ ಬಿಜಿಎಂ ವರ್ಕ್ ಮಾಡಿದ್ದಾರೆ. ತ್ಯಾಗರಾಜ್ ಚಿತ್ರಕ್ಕೆ ಶೀರ್ಷಿಕೆ ಸಂಗೀತ ನೀಡಿದ್ದಾರೆ. ಸಂಚಿತ್ ಹೆಗ್ಡೆ, ಸರಿಗಮಪ ಖ್ಯಾತಿಯ ಹನುಮಂತ, ಸಚಿನ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಯುಡಿವಿ ವೆಂಕಟೇಶ್ ಸಂಕಲನವಿದೆ. ಮಾಸ್ ಮಾದ ಅವರ ಸಾಹಸವಿದೆ. ಚಿತ್ರದ ಟ್ರೇಲರ್ ಎಲ್ಲೆಡೆ ಸದ್ದು ಮಾಡಿದ್ದು ಇದೇ ಮಾರ್ಚ್ 4ರಂದು ಕೆಆರ್‌ಜಿ ಸ್ಟುಡಿಯೋಸ್ ಮೂಲಕ ರಿಲೀಸ್ ಆಗಲಿದೆ.

Categories
ಸಿನಿ ಸುದ್ದಿ

ಲೀಸ ರಿಲೀಸ್ ಮೊದಲೇ ಜೋರು ಸದ್ದು! ಇದು ಮಹಿಳಾ ಪ್ರಧಾನ ಸಿನಿಮಾ…

ಹುಡುಗರ ಬ್ರಹ್ಮಚಾರಿ ಜೀವನ ಹೇಗಿರುತ್ತದೆಂದು ಎಲ್ಲರಿಗೂ ತಿಳಿದಿದೆ. ಅದೇ ಹುಡುಗಿಯರ ಬ್ಯಾಚುಲರ್ ಲೈಫು ಯಾವ ರೀತಿ ಇರುತ್ತದೆಂದು ’ಲೀಸ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಮತ್ತು ಮೂರು ಹಾಡುಗಳನ್ನು ತೋರಿಸಲಾಗಿದೆ. ಅದರಲ್ಲೂ ತಪಸ್ವಿ ಬರೆದಿರುವ ’ಅಮ್ಮ’ ಕುರಿತಾದ ಗೀತೆ ಎಲ್ಲರ ಮನ ಕಾಡುತ್ತದೆ. ಹಾಡು ಭಾವುಕತೆಯನ್ನೂ ಹೆಚ್ಚಿಸುತ್ತದೆ. ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನ ಮಾಡಿರುವುದು ಮುತ್ತು. ಪಾರ್ವತಿ ತಾಯಿ ಕೋರಳ್ಳಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಆಳಂದ ಮೂಲದ ರಾಜಕೀಯ ಮುಖಂಡ ಸೂರ್ಯಕಾಂತ್.ಕೆ.ಕೋರಳ್ಳಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ದೇವಿಶ್ರೀ, ಮುತ್ತು, ದಯಾನಂದ ಹಾಗೂ ಅವಿನಾಶ್ ಸಹ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ.

ಬದುಕಿನಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಮಸ್ಯೆ ಇರುತ್ತದೆ. ಅದೇ ರೀತಿ ಮಹಿಳಾ ಪ್ರಧಾನ ಕಥಾ ನಾಯಕಿ ಲೀಸ ಇಂತಹುದಕ್ಕೆ ಒಳಗಾಗಿರುತ್ತಾಳೆ. ಹಾಗಂತ ಇದನ್ನು ಖಾಯಿಲೆ ಎನ್ನಲು ಆಗುವುದಿಲ್ಲ. ಈ ತರಹದ ಗುಣವುಳ್ಳವರು ದುಶ್ಚಟಗಳಿಗೆ ಯಾವ ರೀತಿ ವ್ಯಸನಿಗಳಾಗುತ್ತಾರೆ. ಅದರಿಂದ ಅವರು ಏನೇನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಕೊನಗೆ ವೈದ್ಯರ ಸಲಹೆ ಪಡೆದುಕೊಂಡು ಯಾವ ರೀತಿ ಹೊರಗಡೆ ಬರುತ್ತಾರೆ ಎಂಬುದು ಸಾರಾಂಶ. ಐವರು ಹುಡುಗಿಯರ ಸುತ್ತ ಸಿನಿಮಾ ಸಾಗುತ್ತದೆ. ನಿರ್ದೇಶಕರು ಇದಕ್ಕಂದೆ ಸಂಶೋಧನೆ ನಡೆಸಿ, ಅದರಲ್ಲಿ ಸಿಕ್ಕಂತ ವಿಷಯಗಳನ್ನು ಬಳಸಿಕೊಂಡು, ಕಾಲ್ಪನಿಕ ಕಥೆಯನ್ನು ಸೃಷ್ಟಿಸಿದ್ದಾರಂತೆ.

ಚಿತ್ರದಲ್ಲಿ ರೂಪನಟರಾಜ್ , ಶ್ರಾವ್ಯಗಣಪತಿ, ಮೇಘನಾರಾಮ್, ತೇಜಸ್ವಿನಿ, ಪಾರ್ವತಿ ಇದ್ದಾರೆ. ಚಿತ್ರದಲ್ಲಿ ತಾಯಿಯಗಿ ಕಲಾವಿದೆ ಮಂಜುಳಾರೆಡ್ಡಿ ಅವರು ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಂಗೀತ, ನಿಸರ್ಗ ನಟಿಸಿದ್ದಾರೆ.

ಮೂರು ಹಾಡುಗಳಿಗೆ ಎಸ್.ಆರ್.ಪ್ರಭು-ಸುರೇಂದ್ರನಾಥ್ ಸಂಗೀತ ನೀಡಿದರೆ, ಸಿನಿಟೆಕ್‌ಸೂರಿ ಛಾಯಾಗ್ರಹಣವಿದೆ. ಜ್ಞಾನೇಶ್ ಸಂಕಲನವಿದೆ.
ಬೆಂಗಳೂರು ಮತ್ತು ಬೀದರ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸೆನ್ಸಾರ್‌ನಿಂದ ಮೆಚ್ಚುಗೆ ಪಡೆದುಕೊಂಡಿರುವ ಚಿತ್ರವು ಸದ್ಯದಲ್ಲೆ ಬಿಡುಗಡೆಯಾಗಲಿದೆ.

error: Content is protected !!