Categories
ಸಿನಿ ಸುದ್ದಿ

ರಕ್ತ ಸಿಕ್ತ ಅವತಾರದಲ್ಲಿ ರಕ್ಷ್ ರಾಮ್: ಬರ್ಮ ಸಿನಿಮಾದ ಹೊಸ ಪೋಸ್ಟರ್ ಬಂತು

ಗಟ್ಟಿಮೇಳ ಸೀರಿಯಲ್ ಮೂಲಕ ಕರುನಾಡ ಮನ-ಮನೆ ಗೆದ್ದಿರುವ ರಕ್ಷ್ ರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿ ಇದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಬರ್ಮ ಚಿತ್ರತಂಡ ಹೊಸ ಪೋಸ್ಟರ್ ಉಡುಗೊರೆಯಾಗಿ ನೀಡಿದೆ. ರಕ್ಷ್ ಬರ್ತ್ ಡೇ ಅಂಗವಾಗಿ ಅವರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ಬರ್ಮ ನಯಾ ಲುಕ್ ಅನಾವರಣ ಮಾಡಿ ಚಿತ್ರತಂಡ ಶುಭಾಶಯ ಕೋರಿದೆ‌.

ರಕ್ತಸಿಕ್ತ ಅವತಾರದಲ್ಲಿ ರಕ್ಷ್ ರಾಮ್

ಬರ್ಮ ಹೊಸ ಪೋಸ್ಟರ್ ಸಖತ್ ಇಂಪ್ರೆಸಿವ್ ಆಗಿದೆ. ಕೈಯಲ್ಲಿ ಕೊಡಲಿ ಹಿಡಿದು, ರಕ್ತಸಿಕ್ತ ಅವತಾರದಲ್ಲಿ ಮಾಸ್ ಗೆಟಪ್ ನಲ್ಲಿ ರಕ್ಷ್ ರಾಮ್ ಪ್ರತ್ಯಕ್ಷರಾಗಿದ್ದಾರೆ. ಅಂದಹಾಗೇ ಬರ್ಮ ಪಕ್ಕಾ ಆಕ್ಷನ್ ಎಂಟರ್‌ಟೈನರ್ ಸಿನಿಮಾ. ಈ ಸಿನಿಮಾ ಮೂಲಕ ಕಿರುತೆರೆ ನಟ ರಕ್ಷ್ ಪ್ಯಾನ್ ಇಂಡಿಯಾ ಸ್ಟಾರ್ ಎಮರ್ಜ್ ಆಗಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹೆಚ್ಚಿರುವ ರಕ್ಷ್ ರಾಮ್, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಶ್ರೀ ಸಾಯಿ ಆಂಜನೇಯ ಕಂಪನಿಯಡಿ ಬರ್ಮ ಸಿನಿಮಾಗೆ ಹಣ ಹಾಕಿದ್ದಾರೆ.

ಚೇತನ್ ಕುಮಾರ್ ನಿರ್ದೇಶಿಸುತ್ತಿರುವ ‘ಬರ್ಮ’ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಬಹದ್ದೂರ್’ ಹಾಗೂ ‘ಭರ್ಜರಿ’ ಸಿನಿಮಾದಲ್ಲಿ ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಬರ್ಮ ಮೂಲಕ ಮೂರನೇ ಬಾರಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.

‘ಜೇಮ್ಸ್’ ಹೊರತುಪಡಿಸಿ ಚೇತನ್ ಕುಮಾರ್ ನಿರ್ದೇಶಿಸಿದ ಅಷ್ಟೂ ಸಿನಿಮಾಗಳೂ ‘ಬ’ ಇಲ್ಲವೇ ‘ಭ’ದಿಂದಲೇ ಆರಂಭ ಆಗಿರುವುದು ವಿಶೇಷ. ಇವರು ನಿರ್ದೇಶಿಸಿರುವ ಜೇಮ್ಸ್ ಸೇರಿದಂತೆ ‘ಬಹದ್ದೂರ್’, ‘ಭರ್ಜರಿ’ ಹಾಗೂ ‘ಭರಾಟೆ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹಿಟ್ ಲಿಸ್ಟ್ ಸೇರಿವೆ. ಈಗ ಹೊಸ ಸಿನಿಮಾ ‘ಬರ್ಮ’ ಅಂತ ಟೈಟಲ್‌ ಇಟ್ಟಿದ್ದಾರೆ. ಈ ಮೂಲಕ ಮತ್ತೆ ಯಶಸ್ಸನ್ನು ಹುಡುಕಿ ಹೊರಟಿದ್ದಾರೆ ಚೇತನ್.

ಶೂಟಿಂಗ್ ಅಖಾಡದಲ್ಲಿರುವ ಬರ್ಮ ಸಿನಿಮಾದಲ್ಲಿ ಶಾವರ್ ಅಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಡ ತಾರಾ ಬಳಗವೇ ಇದೆ. ಬರ್ಮ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ರಿಲೀಸ್ ಆಗುತ್ತದೆ. ಆ ನಿಟ್ಟಿನಲ್ಲಿಯೇ ದೊಡ್ಡಮಟ್ಟದಲ್ಲಿಯೇ ಈ ಚಿತ್ರ ತಯಾರಾಗುತ್ತಿದೆ.

Categories
ಸಿನಿ ಸುದ್ದಿ

ಕೊರಗಜ್ಜ ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ ಗೋಪಿ ಸುಂದರ್ ಸಂಗೀತ

ಹಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ ನಿರ್ದೇಶನದ ಕೊರಗಜ್ಜ ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ “ಗೋಪಿ ಸುಂದರ್” ಈಗ ಸಿನಿಮಾಗೆ ಬ್ಯಾಗ್ರೌಂಡ್ ಸ್ಕೋರ್ ಜೊತೆ ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೋಸ್ ಮಾಡುತ್ತಿದ್ದಾರೆ.


ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ರವರು ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ನ ಅಡಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ “ಕೊರಗಜ್ಜ” ಚಿತ್ರಕ್ಕೆ RRR, ಪುಷ್ಪ ಮೊದಲಾದ ಹಿಟ್ ಸಿನಿಮಾಗಳ ತಂತ್ರಜ್ಞರ ದಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ.


ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಈ ಸಿನಿಮಾದಲ್ಲಿ ಹಾಲಿವುಡ್- ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ. ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ ಕೊರೊಪೊಳು ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪರಿಚಯ ವಾಗುತ್ತಿದ್ದಾರೆ.


ಉಳಿದಂತೆ ಜೀತ್ ಜೊಸ್ಸಿ ಮತ್ತು ವಿದ್ಯಾಧರ್ ಶೆಟ್ಟಿ ಸಂಕಲನ, ಮನೋಜ್ ಪಿಳ್ಳೈ ಮತ್ತು ಪವನ್ ವಿ ಛಾಯಾಗ್ರಹಣ, ಸುಧೀರ್ ಅತ್ತಾವರ್ ಕಲಾ ನಿರ್ದೇಶನ, ಬಿಬಿನ್ ದೇವ್ ಸೌಂಡ್ ಡಿಸೈನಿಂಗ್ ಚಿತ್ರಕ್ಕಿದೆ. ಮಾರ್ಚ್ ಕೊನೆಗೆ ಸಿನಿಮಾ ಬಿಡುಗಡೆಗಾಗಿ ತಯಾರಿ ನಡೆದಿದೆ.

Categories
ಸಿನಿ ಸುದ್ದಿ

ರಂಗ ಸಮುದ್ರ ಜನವರಿ 19ಕ್ಕೆ ರಿಲೀಸ್: ಇದು ಭಾವನೆಗಳ ಸಮುದ್ರ!

ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶನದ ಹಾಗೂ ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ “ರಂಗ ಸಮುದ್ರ” ಚಿತ್ರ ಜನವರಿ 19ರಂದು ಬಿಡುಗಡೆಯಾಗಲಿದೆ.

ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ “ರಂಗ ಸಮುದ್ರ” ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ವಾಗೀಶ್ ಚನ್ನಗಿರಿ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ದೇಸಿ ಮೋಹನ್ ಸಂಗೀತ ನೀಡಿದ್ದಾರೆ. ಕೀರವಾಣಿ, ಕೈಲಾಶ್ ಖೇರ್, ವಿಜಯ ಪ್ರಕಾಶ್ ನವೀನ್ ಸಜ್ಜು ಮುಂತಾದ ಖ್ಯಾತ ಗಾಯಕರು ಹಾಡುಗಳನ್ನು ಹಾಡಿದ್ದಾರೆ.

ಆರ್ ಗಿರಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರಾಘವೇಂದ್ರ ರಾಜಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯ ಗೌಡ, ಮೂಗುರು ಸುರೇಶ್, ಉಗ್ರಂ ಮಂಜು, ಸ್ಕಂದ ಮುಂತಾದವರು ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಮಾರ್ಟಿನ್ ಗೆ ಭರ್ಜರಿ ಆಡಿಯೋ ರೈಟ್ಸ್: ಒಂಭತ್ತು ಕೋಟಿಗೆ ಸಾಂಗ್ಸ್ ಮಾರಾಟ

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ
ನಟಿಸುತ್ತಿರುವ ಬಹು ನಿರೀಕ್ಷಿತ “ಮಾರ್ಟಿನ್” ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ “ಸರೆಗಮ”, ” ಮಾರ್ಟಿನ್ ” ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

“ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ” ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ.

ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ ಉದಯ್ ಕೆ ಮೆಹ್ತಾ ತಿಳಿಸಿದ್ದಾರೆ.

ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ “ಮಾರ್ಟಿನ್” ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.

Categories
ಸಿನಿ ಸುದ್ದಿ

ರೊಮ್ಯಾಂಟಿಕ್ ಮೂಡಲ್ಲಿ ಪ್ರಜ್ವಲ್-ಅದಿತಿ: ಮಾಫಿಯಾ ಹಾಡು ಬಂತು

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಆಗಿದೆ. ಮಾಫಿಯಾ ಈಗಾಗಲೇ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಇದೀಗ ಪ್ರಜ್ವಲ್ ರೊಮ್ಯಾಂಟಿಕ್ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.

ಇತ್ತೀಚಿಗಷ್ಟೆ ತಾಯಿಯಾಗುತ್ತಿರುವ ಸಂಭ್ರಮವನ್ನು ಹಂಚಿಕೊಂಡಿದ್ದ ಅದಿತಿ ಇದೀಗ ಮಾಫಿಯಾ ಮೂಲಕ ಅಭಿಮಾನಿಗಳ ಮುಂದೆ ಬರಲಿ ಸಜ್ಜಾಗಿದ್ದಾರೆ.
ಅಂದಹಾಗೆ ಮಾಫಿಯಾ ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಸದ್ಯ ರಿಲೀಸ್ ಆಗಿರುವ ‘ತುಂಬನೇ ಕೇಳಲಾರೆ…’ ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಮಾಫಿಯಾ ಈಗಾಗಲೇ ಚಿತ್ರೀಕಣ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಸದ್ಯ ಟೀಸರ್ ಮತ್ತು ಹಾಡಿನ ಮೂಲಕ ಸದ್ದು ಮಾಡುತ್ತಿರುವ ಈ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರಕ್ಕೆ ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.

Categories
ಸಿನಿ ಸುದ್ದಿ

ಮಾರ್ಡನ್ ರೈತನಿಗೆ ಕೃಷಿ ಸಚಿವರ ಸಾಥ್: ಶಶಿ ಹುಟ್ದಬ್ಬಕ್ಕೆ ಮೆಹಬೂಬ ಪೋಸ್ಟರ್ ಬಂತು

ಬಿಗ್ ಬಾಸ್ ಖ್ಯಾತಿಯ ಶಶಿ ಜನ್ಮದಿನದಂದು. ಸ್ಪೆಷಲ್ ಆಗಿ ಚಿತ್ರತಂಡ ‘ಮೆಹಬೂಬ’. ಪೋಸ್ಟರ್ ಬಿಡುಗಡೆ ಮಾಡಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಬಳಿಕ ಸಚಿವ ಚಲುವನಾರಾಯಣಸ್ವಾಮಿ ಮಾತನಾಡಿ, ಮೆಹಬೂಬಾ ಸಿನಿಮಾಗೆ ಶಶಿ ಪ್ರೊಡ್ಯೂಸರ್ – ಹೀರೋ ಅವರೇ..ಲಾಭ-ನಷ್ಟ ಹಾಗೂ ಹೆಸರು ಅವ್ರದ್ದೇ. ರಾಜ್ಯದ ಜನ ಆಶೀರ್ವಾದ ಮಾಡಬೇಕಾಗುತ್ತದೆ. ನಾಯಕಿ ನನ್ನ ಗೆಳೆಯನ ಮಗಳು. ಹೀಗಾಗಿ ಇಬ್ಬರಿಗೆ ಸಿನಿಮಾ ಸಕ್ಸಸ್ ತರಲಿ. ಇತ್ತೀಚೆಗೆ ಅನೇಕ ಚಿತ್ರಗಳು ಸಕ್ಸಸ್ ಆಗುತ್ತಿವೆ. ಜನರಿಗೆ ಯಾವ ರೀತಿ ಚಿತ್ರಗಳು ಇಷ್ಟಪಡುತ್ತಾರೆ. ಇಷ್ಟಪಡಲ್ಲ ಅನ್ನುವುದು ಊಹೆ ಮಾಡಲು ಆಗುವುದಿಲ್ಲ. ನಿಮ್ಮೆಲ್ಲ ಸಹಕಾರ ಇಡೀ ತಂಡ ಮೇಲೆ ಇರಲಿ ಎಂದರು.

ನಾಯಕ ಶಶಿ ಮಾತನಾಡಿ, ಮೆಹಬೂಬ ನನಗೆ ಎಮೋಷನಲ್ ಜರ್ನಿ. ಒಂದು ವಿಷಯವನ್ನು ಜನರಿಗೆ ತಲುಪಬೇಕು ಎನ್ನುವುದು ನಮ್ಮ ಸಿನಿಮಾ ಅಜೆಂಡವಾಗಿರುತ್ತದೆ. 200 ಸಿನಿಮಾಗಳು ಬಂದರು. ಹೆಸರುಮಾಡೋದು 10 ರಿಮದ 15 ಸಿನಿಮಾಗಳು. ಆ 10-15 ಸಿನಿಮಾಗಳಲ್ಲಿ ನಮ್ಮೊಂದು ಒಂದು ಆಗಲಿ ಅನ್ನೋದು ನಮ್ಮ ಕನಸು. ಖುಷಿ ತಂದುಕೊಟ್ಟ ಸಿನಿಮಾ ಮೆಹಬೂಬಾ. ಶೂಟಿಂಗ್ ಕಂಪ್ಲೀಟ್ ಆಗಿದೆ. ಆ ಖುಷಿ ವಿಚಾರವನ್ನು ಹಂಚಿಕೊಳ್ಳಲು ನಿಮ್ಮ ಮುಂದೆ ಬಂದಿದ್ದೇವೆ. ಫೆಬ್ರವರಿಯಲ್ಲಿ ನಿಮ್ಮ ಮುಂದೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನಿರ್ದೇಶಕ ಅನೂಪ್ ಆಂಟೊನಿ ಮಾತನಾಡಿ, ಮೆಹಬೂಬ ನನ್ನ ಎರಡನೇ ಸಿನಿಮಾ. ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನಗ ಹಂತದಲ್ಲಿದೆ. ಫೆಬ್ರವರಿಗೆ ರಿಲಿಸ್ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಅದ್ಭುತ ಲವ್ ಸ್ಟೋರಿ. ಶಶಿ ಸರ್ ಲಾಂಚ್ ಆಗುತ್ತಿದ್ದಾರೆ. ಪವನ್ ಮೇಡಂ ಅದ್ಭುತ ನಟನೆ ಚಿತ್ರದಲ್ಲಿದೆ. ಒಟ್ಟು ಚಿತ್ರದಲ್ಲಿ 5 ಹಾಡುಗಳಿವೆ ಎಂದರು.

ಮಾರ್ಡನ್ ರೈತ ಎಂದು ಖ್ಯಾತಿ ಪಡೆದಿರುವ ಶಶಿ ಮೆಹಬೂಬ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಾಯಕನನಾಗಿ ಬಣ್ಣ ಹಚ್ಚುವುದರ ಜೊತೆಗೆ ನಿರ್ಮಾಪಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಕೇರಳದಲ್ಲಿ ನಡೆದ ನೈಜಘಟನೆಯೊಂದನ್ನು ಆಧರಿಸಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಮ್ಯಾಥ್ಯೂಸ್‌ ಮನು ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ರಘು ಶಾಸ್ತ್ರೀ ರಚಿಸಿದ್ದಾರೆ. ಸಂಭಾಷಣೆಯನ್ನು ರಘು ಶಾಸ್ತ್ರೀ ಅವರೇ ಬರೆದಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಮಾರ್ಡನ್ ರೈತನಿಗೆ ಕೃಷಿ ಸಚಿವವರ ಸಾಥ್: ಶಶಿ ಹುಟ್ದಬ್ಬಕ್ಕೆ ಮೆಹಬೂಬ ಪೋಸ್ಟರ್ ಉಡುಗೊರೆ

ಬಿಗ್ ಬಾಸ್ ಖ್ಯಾತಿಯ ಶಶಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ‘ಮೆಹಬೂಬ’. ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಬಳಿಕ ಸಚಿವ ಚಲುವನಾರಾಯಣಸ್ವಾಮಿ ಮಾತನಾಡಿ, ಮೆಹಬೂಬಾ ಸಿನಿಮಾಗೆ ಶಶಿ ಪ್ರೊಡ್ಯೂಸರ್ – ಹೀರೋ ಅವರೇ..ಲಾಭ-ನಷ್ಟ ಹಾಗೂ ಹೆಸರು ಅವ್ರದ್ದೇ. ರಾಜ್ಯದ ಜನ ಆಶೀರ್ವಾದ ಮಾಡಬೇಕಾಗುತ್ತದೆ. ನಾಯಕಿ ನನ್ನ ಗೆಳೆಯನ ಮಗಳು. ಹೀಗಾಗಿ ಇಬ್ಬರಿಗೆ ಸಿನಿಮಾ ಸಕ್ಸಸ್ ತರಲಿ. ಇತ್ತೀಚೆಗೆ ಅನೇಕ ಚಿತ್ರಗಳು ಸಕ್ಸಸ್ ಆಗುತ್ತಿವೆ. ಜನರಿಗೆ ಯಾವ ರೀತಿ ಚಿತ್ರಗಳು ಇಷ್ಟಪಡುತ್ತಾರೆ. ಇಷ್ಟಪಡಲ್ಲ ಅನ್ನುವುದು ಊಹೆ ಮಾಡಲು ಆಗುವುದಿಲ್ಲ. ನಿಮ್ಮೆಲ್ಲ ಸಹಕಾರ ಇಡೀ ತಂಡ ಮೇಲೆ ಇರಲಿ ಎಂದರು.

ನಾಯಕ ಶಶಿ ಮಾತನಾಡಿ, ಮೆಹಬೂಬ ನನಗೆ ಎಮೋಷನಲ್ ಜರ್ನಿ. ಒಂದು ವಿಷಯವನ್ನು ಜನರಿಗೆ ತಲುಪಬೇಕು ಎನ್ನುವುದು ನಮ್ಮ ಸಿನಿಮಾ ಅಜೆಂಡವಾಗಿರುತ್ತದೆ. 200 ಸಿನಿಮಾಗಳು ಬಂದರು. ಹೆಸರುಮಾಡೋದು 10 ರಿಮದ 15 ಸಿನಿಮಾಗಳು. ಆ 10-15 ಸಿನಿಮಾಗಳಲ್ಲಿ ನಮ್ಮೊಂದು ಒಂದು ಆಗಲಿ ಅನ್ನೋದು ನಮ್ಮ ಕನಸು. ಖುಷಿ ತಂದುಕೊಟ್ಟ ಸಿನಿಮಾ ಮೆಹಬೂಬಾ. ಶೂಟಿಂಗ್ ಕಂಪ್ಲೀಟ್ ಆಗಿದೆ. ಆ ಖುಷಿ ವಿಚಾರವನ್ನು ಹಂಚಿಕೊಳ್ಳಲು ನಿಮ್ಮ ಮುಂದೆ ಬಂದಿದ್ದೇವೆ. ಫೆಬ್ರವರಿಯಲ್ಲಿ ನಿಮ್ಮ ಮುಂದೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನಿರ್ದೇಶಕ ಅನೂಪ್ ಆಂಟೊನಿ ಮಾತನಾಡಿ, ಮೆಹಬೂಬ ನನ್ನ ಎರಡನೇ ಸಿನಿಮಾ. ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನಗ ಹಂತದಲ್ಲಿದೆ. ಫೆಬ್ರವರಿಗೆ ರಿಲಿಸ್ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಅದ್ಭುತ ಲವ್ ಸ್ಟೋರಿ. ಶಶಿ ಸರ್ ಲಾಂಚ್ ಆಗುತ್ತಿದ್ದಾರೆ. ಪವನ್ ಮೇಡಂ ಅದ್ಭುತ ನಟನೆ ಚಿತ್ರದಲ್ಲಿದೆ. ಒಟ್ಟು ಚಿತ್ರದಲ್ಲಿ 5 ಹಾಡುಗಳಿವೆ ಎಂದರು.

ಮಾರ್ಡನ್ ರೈತ ಎಂದು ಖ್ಯಾತಿ ಪಡೆದಿರುವ ಶಶಿ ಮೆಹಬೂಬ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಾಯಕನನಾಗಿ ಬಣ್ಣ ಹಚ್ಚುವುದರ ಜೊತೆಗೆ ನಿರ್ಮಾಪಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಕೇರಳದಲ್ಲಿ ನಡೆದ ನೈಜಘಟನೆಯೊಂದನ್ನು ಆಧರಿಸಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಮ್ಯಾಥ್ಯೂಸ್‌ ಮನು ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ರಘು ಶಾಸ್ತ್ರೀ ರಚಿಸಿದ್ದಾರೆ. ಸಂಭಾಷಣೆಯನ್ನು ರಘು ಶಾಸ್ತ್ರೀ ಅವರೇ ಬರೆದಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಹೀಗೊಂದು ಮಿಸ್ಡ್ ಕಾಲ್ಡ್ ಲವ್ ಸ್ಟೋರಿ ಜೊತೆಯಾಗಿರು ಸಿನಿಮಾ ಟ್ರೇಲರ್ ಬಂತು

ರೇಣು ಮೂವೀಸ್ ಮೂಲಕ ಒಂದಷ್ಟು ಸ್ನೇಹಿತರೇ ಸೇರಿ ನಿರ್ಮಿಸಿರುವ ಚಿತ್ರ ಜೊತೆಯಾಗಿರು. ಅಜರಾಮರ, ನಾನೊಬ್ನೆ ಒಳ್ಳೇವ್ನು ಸೇರಿದಂತೆ ಹಲವಾರು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಸತೀಶ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಮೂರು ಹಾಡುಗಳನ್ನು ಪ್ರದರ್ಶಿಸಲಾಯಿತು.

2009ರಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾದ ಕಥೆ ಈ ಚಿತ್ರದಲ್ಲಿದೆ. ನಿರ್ದೇಶಕ ಸತೀಶ್ ಕುಮಾರ್ ಮಾತನಾಡಿ, ನನ್ನ ಸ್ನೇಹಿತನ ಜೀವನದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಈ ಚಿತ್ರದ ಕಥೆ, ಚಿತ್ರಕಥೆ ಬರೆದಿದ್ದೇನೆ.‌ ಜೊತೆಗೆ ಒಂದು ಫ್ರೆಂಡ್ ಷಿಪ್ ಟ್ರ್ಯಾಕ್ ಕೂಡ ಬರುತ್ತದೆ. ಚಿತ್ರದಲ್ಲಿ ಎರಡು ಲವ್ ಸ್ಟೋರಿಗಳು ಬರುತ್ತದೆ. ಸೋಷಿಯಲ್ ಮೀಡಿಯಾ ಇಲ್ಲದ ಕೀಪ್ಯಾಡ್ ಕಾಲದಲ್ಲಿ ಮಿಸ್ ಕಾಲ್ಡ್ ನಿಂದ ಹುಟ್ಟಿದ ಪ್ರೇಮಕಥೆಯೊಂದು ಫ್ಲ್ಯಾಷ್ ಬ್ಯಾಕ್ ನಲ್ಲಿ ಬರುತ್ತದೆ. ಇನ್ನೊಂದು ಕಥೆಯಲ್ಲಿ ಹಣದ ಆಸೆಗೆ ಬಿದ್ದ ಹುಡುಗಿಯನ್ನು ಹುಡುಗ ಲವ್ ಮಾಡಿದರೆ ಏನಾಗುತ್ತೆ ಎಂಬುದನ್ನು ಹೇಳಿದ್ದೇವೆ. ಬೆಂಗಳೂರು, ಕನಕಪುರದಲ್ಲಿ ಮಾತಿನ ಭಾಗ ಹಾಗೂ ಕಳಸ, ಸಕಲೇಶಪುರ, ಕುಂದಾಪುರ, ಸುತ್ತಮುತ್ತ ಹಾಡುಗಳನ್ನು ಚಿತ್ರೀಕರಿಸಿದ್ದೇವೆ. ಮಿಸ್ ಕಾಲ್ಡ್ ನಿಂದ ಹುಟ್ಟಿದ ಪ್ರೇಮಕಥೆಯಲ್ಲಿ ವೆಂಕಟೇಶ್ ಹೆಗಡೆ, ರಶ್ಮಿಗೌಡ ಹಾಗೂ ಸುನಿಲ್ ಕಾಂಚನ್, ಪೂಜಾ ಆಚಾರ್ ಇನ್ನೊಂದು ಕಥೆಯ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದು ಸೆನ್ಸಾರ್ ನಿಂದ ಯು/ಎ ಪ್ರಮಾಣಪತ್ರವೂ ಸಿಕ್ಕಿದೆ. ಸ್ನೇಹಿತರು ಸೇರಿ ಈ ಸಿನಿಮಾ ಮಾಡಿದ್ದೇವೆ ಎಂದರು.

ನಂತರ ನಾಯಕ ವೆಂಕಟೇಶ್ ಹೆಗ್ಡೆ ಮಾತನಾಡಿ ನಾವೆಲ್ಲ ಹೊಸಬರು. ಮಿಸ್ ಕಾಲ್ ನಿಂದ ಪ್ರಾರಂಭವಾಗುವ ಲವ್ ಮುಂದೆ ಏನೇನಾಗುತ್ತೆ, ಯಾವ ತಿರುವು ತಗೊಳ್ಳುತ್ತೆ ಅನ್ನೋದು ಚಿತ್ರದಲ್ಲಿದೆ ಎಂದು ಹೇಳಿದರು.
ನಾಯಕಿ ರಶ್ಮಿಗೌಡ ಮಾತನಾಡಿ ಐಟಿಯಲ್ಲಿ ವರ್ಕ್ ಮಾಡ್ತಿದ್ದ ನಾನು ನಿರೂಪಕಿಯಾಗೂ ಕೆಲಸ ಮಾಡಿದ್ದೇನೆ. ಹಿಂದೆ ರಾಜಲಕ್ಷ್ಮಿ ಚಿತ್ರದಲ್ಲಿ ನಟಿಸಿದ್ದೆ. ಮಿಸ್ ಕಾಲ್ ಲವ್ ಸ್ಟೋರಿಯಲ್ಲಿ ನಾನು ಕಾಣಿಸಿಕೊಂಡಿದ್ದೇನೆ ಎಂದರು. ಮತ್ತೊಬ್ಬ ನಾಯಕನಟ ಸುನಿಲ್ ಕಾಂಚನ್ ಮಾತನಾಡಿ ತನ್ನ ಪಾತ್ರದ ಬಗ್ಗೆ ಹೇಳಿಕೊಂಡರು. ಉಳಿದಂತೆ ಶಂಕರ ನಾರಾಯಣ್, ಸಂತೋಷ್, ಸುಧಾ ತಮ್ಮ ಪಾತ್ರಗಳ ಕುರಿತಂತೆ ಹೇಳಿಕೊಂಡರು. ರಾಜಶೇಖರ್ ಅವರ ಸಂಭಾಷಣೆ, ವಿನು ಮನಸು ಅವರ ಸಂಗೀತ,ಕೆ ಕಲ್ಯಾಣ್,ಮನ್ವರ್ಷಿ,ಸತೀಶ್ ಕುಮಾರ್ ಸಾಹಿತ್ಯ, ಸತೀಶ್ ಚಂದ್ರಯ್ಯ ಸಂಕಲನ, ವಿ ನಾಗೇಶ್ ನೃತ್ಯ, ಲಯನ್ ಗಂಗರಾಜ್ ಸಾಹಸ,ರಾಜ ಶಿವಶಂಕರ್, ಆನಂದ್ ಇಳಯರಾಜ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಗೌರಿಶಂಕರ್ ಕೆರೆಬೇಟೆಗೆ ಡಾಲಿ ಸಾಥ್ : ಟೀಸರ್ ಹೊರಬಂತು- ಇದು ಮೀನು ಬೇಟೆ ಮಾರ್ರೆ…

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತಿವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ಕನ್ನಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ, ಅದು ‘ಕೆರೆಬೇಟೆ’. ಈಗಾಗಲೇ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ‘ಕೆರೆಬೇಟೆ’, ಇದೀಗ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.

ಇದು ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. ಕೆರೆಬೇಟೆ, ಗೌರಿ ಶಂಕರ್ ನಾಯಕನಾಗಿ ನಟಿಸಿದ್ದಾರೆ. ರಾಜ್‌ಗುರು ಆಕ್ಷನ್ ಕಟ್ ಹೇಳಿದ್ದಾರೆ. ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದ ಗೌರಿ ಶಂಕರ್, ಇದೀಗ ಕೆರೆಬೇಟೆ ಮೂಲಕ ಮತ್ತೆ ಎಂಟ್ರಿ ಕೊಡುತ್ತಿದ್ದಾರೆ. ನಿರ್ದೇಶಕ ರಾಜ್‌ಗುರು ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಅವರಿಗೆ ಸಿನಿಮಾ ರಂಗ ಹೊಸದೇನಲ್ಲ, ಈ ಮೊದಲು ನಿರ್ದೇಶಕ ಪವನ್ ಒಡೆಯರ್ ಜೊತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಇದೀಗ ಕೆರೆಬೇಟೆ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.

ಕೆರೆಬೇಟೆ ಶೈಲಿಯಲ್ಲಿಯೇ ಪ್ರೆಸ್ ಮೀಟ್ ಮಾಡಿರುವುದು ವಿಶೇಷವಾಗಿತ್ತು. ಬೆಂಗಳೂರಿನ ಮಲ್ಲತಹಳ್ಳಿ ಕೆರೆದಂಡೆಯಲ್ಲಿ ನಡೆದ ಟೀಸರ್ ರಿಲೀಸ್ ಈವೆಂಟ್ ಗಮನಸೆಳೆಯಿತು.

ಟೀಸರ್ ರಿಲೀಸ್ ಈವೆಂಟ್ ನ ವಿಶೇಷ ಅತಿಥಿಗಳಾಗಿದ್ದ ಡಾಲಿ ಧನಂಜಯ ಮತ್ತು ದಿನಕರ್ ತೂಗುದೀಪ್ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಪವನ್ ಒಡೆಯರ್, ಗುರು ದೇಶಪಾಂಡೆ, ಜಡೇಶ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದರು.

ಟೀಸರ್ ರಿಲೀಸ್ ಮಾಡಿ ಮಾತನಾಡಿದ ಡಾಲಿ, ‘ನಮ್ಮ ನೆಲದ ಸಿನಿಮಾಗಳು ಯಾವಾಗಲು ಸೋಲಲ್ಲ. ಕೆರೆಬೇಟೆ ಕೂಡ ನಮ್ಮ ನೆಲದ ಸಿನಿಮಾ. ಎಷ್ಟೋ ಜನರಿಗೆ ಕೆರೆಬೇಟೆಯ ಬಗ್ಗೆ ಗೊತ್ತಿಲ್ಲ. ಈ ಸಿನಿಮಾ ಮೂಲಕ ಎಲ್ಲರಿಗೂ ಗೊತ್ತಾಗಿದೆ. ನಮ್ಮ ಸಂಸ್ಕೃತಿಯ ಸಿನಿಮಾವಿದು’ ಎಂದರು.

ದಿನಕರ್ ತೂಗುದೀಪ ಮಾತನಾಡಿ, ‘ನಾಯಕ ಗೌರಿಶಂಕರ್ ನನಗೆ ತುಂಬಾ ಸಮಯದಿಂದ ಗೊತ್ತಿದೆ. ಈ ಸಿನಿಮಾ ಈಗಾಗಲೆ ನಾನು ನೋಡಿದ್ದೇನೆ, ತುಂಬಾ ಚೆನ್ನಾಗಿದೆ, ಈ ಸಿನಿಮಾ ಗೆದ್ದೇಗೆಲ್ಲುತ್ತೆ’ ಎಂದರು.

ಚಿತ್ರದ ನಿರ್ದೇಶಕ ರಾಜ್ ಗುರು ಮಾತನಾಡಿ, ‘ನಾನು ಮಲೆನಾಡಿನ ಹುಡುಗ‌. ಚಿಕ್ಕ ವಯಸ್ಸಿನಿಂದ ಕೆರೆಬೇಟೆ ನೋಡಿಕೊಂಡು ಬೆಳೆದವನು. ಈ ಸಿನಿಮಾ ಮಾಡಬೇಕು ಎನ್ನುವುದು ನನ್ನ ಕನಸಾಗಿತ್ತು. ಇದೀಗ ನನಸಾಗಿದೆ’ ಎಂದರು.

ನಾಯಕ ಗೌರಿಶಂಕರ್ ಮಾತನಾಡಿ, ‘ಶ್ರದ್ದೆಯಿಂದ ಸಿನಿಮಾ ಮಾಡಿದ್ದೇವ. ಎಲ್ಲರೂ ಸಿನಿಮಾ ನೋಡಿ. ಸಿನಿಮಾಗೆ ಕೇವಲ ಮೌತ್ ಪಬ್ಲಿಸಿಟಿ ಮಾತ್ರ ಅಲ್ಲ, ಪ್ರಮೋಷನ್ ಬೇಕು’ ಎಂದರು.

ಇನ್ನು ಈ ಸಿನಿಮಾದಲ್ಲಿ ನಾಯಕಿಯಾಗಿ ಬಿಂದು ಕಾಣಿಸಿಕೊಂಡಿದ್ದಾರೆ. ಬಿಂದು ಅವರಿಗೆ ಇದು ಮೊದಲ ಸಿನಿಮಾ. ಉಳಿದಂತೆ, ನಟ ಸಂಪತ್, ಗೋಪಾಲ್ ದೇಶಪಾಂಡೆ, ನಟಿ ಹರಿಣಿ ಸೇರಿದಂತೆ ಅನೇಕರು ಕಾಣಿಕೊಂಡಿದ್ದಾರೆ.

ಕೆರೆಬೇಟೆ ಎಂದರೇನು?

ಕೆರೆಬೇಟೆ ಎಂದರೆ ಮಲೆನಾಡು ಭಾಗದದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಮಲೆನಾಡಿನಲ್ಲಿ ವರ್ಷಕೊಮ್ಮೆ ಕೆರೆಬೇಟೆಯಾಡುತ್ತಾರೆ. ಇದು ದೊಡ್ಡ ದೊಡ್ಡ ಕೆರೆಗಳಲ್ಲಿ ನಡೆಯುತ್ತದೆ. ಇದೇ ಈ ಸಿನಿಮಾದ ಮುಖ್ಯ ಎಳೆಯಾಗಿದೆ. ಕೆರೆಬೇಟೆ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಕೆರೆಬೇಟೆ ಜನಮನ ಸಿನಿಮಾ ಸಂಸ್ಥೆಯ ಹೆಮ್ಮೆಯ ಕಾಣಿಕೆ. ಇದುವರೆಗೂ ನೋಡಿರದ ಒಂದು ಹಳ್ಳಿ ಸೊಗಡಿನ ಕಥೆಯನ್ನು ಕನ್ನಡ ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.

ಈ ಚಿತ್ರಕ್ಕೆ ಜೈ ಶಂಕರ್ ಪಟೇಲ್ ಹಾಗೂ ನಾಯಕ ಗೌರಿ ಶಂಕರ್ ಇಬ್ಬರೂ ತಮ್ಮ ಜನಮನ ಸಿನಿಮಾ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಕೆರೆಬೇಟೆ ಸಿನಿಮಾದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ.

ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದೆ. ಸದ್ಯ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಯಾವಾಗ ತೆರೆಮೇಲೆ ಬರಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

Categories
ಸಿನಿ ಸುದ್ದಿ

ಲೈಫ್ Today’ ಸಿನಿಮಾಗೆ ಧ್ರುವ ಸರ್ಜಾ ಸಾಥ್: ಇದು ಕಾಂತ ಕನ್ನಲ್ಲಿ ಹೊಸ ಚಿತ್ರ

ಇರುವುದೆಲ್ಲವ ಬಿಟ್ಟು ಕಥೆ ಹೇಳಿ ಗೆದ್ದಿದ್ದ ಕಾಂತ ಕನ್ನಲ್ಲಿ ಈಗ ಮತ್ತೊಂದು ಫ್ರೆಶ್ ಕಂಟೆಂಟ್ ಮೂಲಕ ಪ್ರೇಕ್ಷಕ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ’ಲೈಫ್ Today’ ಮುಹೂರ್ತ ನೆರವೇರಿದೆ. ನಿರ್ದೇಶಕ ಮಹೇಂದರ್ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೈಟಲ್ ಹಾಗೂ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಬಳಿಕ ಮಾಧ್ಯಮದವರೊಂದಿಗೆ ಧ್ರುವ ಸರ್ಜಾ ಮಾತನಾಡಿ, ಟೈಟಲ್ ಸಿನಿಮಾ ನೋಡಬೇಕು ಎಂಬ ನಿರೀಕ್ಷೆ ಹುಟ್ಟಿಸುತ್ತದೆ. ನಿರ್ದೇಶಕರು ಅತ್ತಿಯವರ ಇರುವುದೆಲ್ಲವನ್ನು ಬಿಟ್ಟು ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಆ ಚಿತ್ರ ಚೆನ್ನಾಗಿತ್ತು. ಈಗ ಲೈಫ್ Today ಮಾಡ್ತಿದ್ದಾರೆ. ಸಿನಿಮಾದಲ್ಲಿ ಹೊಸಬರು ಇದ್ದಾರೆ. ಹಳೆಬರು ಇದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ನಿರ್ದೇಶಕ ಕಾಂತ ಕನ್ನಲ್ಲಿ ಮಾತನಾಡಿ, ಇರುವುದೆಲ್ಲವ ಬಿಟ್ಟು ಸಿನಿಮಾಗೆ ನೀವು ತೋರಿಸಿದ ಪ್ರೀತಿ, ಪ್ರೋತ್ಸಾಹ ಹಾಗೂ ಸಹಕಾರವನ್ನು ಎಂದು ಮರೆಯಲಾಗುವುದಿಲ್ಲ. ಆ ಸಹಕಾರವೇ ನನ್ನ ಇನ್ನೊಂದು ಸಿನಿಮಾ ಮಾಡಲು ವೇದಿಕೆ ಸೃಷ್ಟಿಸಿದೆ. ’ಲೈಫ್ Today’ ಸಿನಿಮಾಗೆ ಬೆಂಬಲ ಕೊಡಲು ಆಗಮಿಸಿರುವ ಧ್ರುವ ಸರ್, ಶ್ರೀಧರ್ ಸರ್, ಮಹೇಂದರ್ ಸರ್ ಗೆ ಧನ್ಯವಾದ ಎಂದು ತಿಳಿಸಿದರು.

ನಾಯಕ ಕಿರಣ್ ಆನಂದ್ ಮಾತನಾಡಿ, ನನ್ನ ಮೊದಲ ಸಿನಿಮಾ ಕನ್ನಲ್ಲಿ ಸರ್ ಜೊತೆ ಕೆಲಸ ಮಾಡಲು ಎಕ್ಸೈಟ್ ಆಗಿದ್ದಾರೆ. ನಮ್ಮ ಡಿಒಪಿ ನನ್ನ ಅಣ್ಣನ ತರ..ಶ್ರೀಧರ್ ಸರ್ ನಮ್ಮ ಸಿನಿಮಾಗೆ ಮ್ಯೂಸಿಕ್ ಮಾಡ್ತಾ ಇರೋದು ನಮಗೆ ಅದೃಷ್ಟ. ನಾಯಕಿ ಲೇಖಾ ಅವರು ಅವರಿಂದ ಕಲಿಯುವುದು ತುಂಬಾ ಇದೆ. ನಿರ್ಮಾಪಕರು ನನಗೆ ಅಣ್ಣನಿಗಿಂತ ಹೆಚ್ಚು ಎಂದರು.

ನಿರ್ದೇಶಕ ಮಹೇಂದರ್ ಮಾತನಾಡಿ, ’ಲೈಫ್ Today’ ಚಿತ್ರದ ಟೈಟಲ್ ನ್ನು ಧ್ರುವ ಸರ್ಜಾ ಪ್ರೇಕ್ಷಕರಿಗೆ ಅರ್ಪಿಸಿದ್ದಾರೆ. ಯುವ ತಂಡ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದೆ. ತೆರೆಹಿಂದೆ ಇರುವವರೆಲ್ಲ ನನ್ನ ಅಚ್ಚುಮೆಚ್ಚಿನ ತಂಡ. ಶಿಷ್ಯಂದಿರೇ ಅನ್ನಬಹುದು. ಕಲೆ ಎನ್ನುವುದು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ.ಎಲ್ಲರನ್ನೂ ಅಪ್ಪಿಕೊಳ್ಳುತ್ತದೆ. ಇದು ಸತ್ಯವಾದ ಮಾತು. ಬಹಳಷ್ಟು ಹೊಸಬರು ಇದ್ದೀರಾ? ನಿಮ್ಮನ್ನು ಕಲೆ ಕೈಬೀಸಿ ಕರೆದಿದೆ. ಅದು ನಿಮ್ಮನ್ನೇ ಅಪ್ಪಿಕೊಳ್ಳಲಿ ಎಂದು ಹಾರೈಸಿದರು.

ನಿರ್ದೇಶಕ ಶಶಾಂಕ್ ಮಾತನಾಡಿ, ’ಲೈಫ್ Today’ ಟೈಟಲ್ ತುಂಬಾ ಟ್ರೆಂಡಿಯಾಗಿದೆ. ಸಿನಿಮಾಗೆ ಒಳ್ಳೆದಾಗಲಿ. ಇಂತಹ ಹೊಸಬರ ತಂಡಕ್ಕೆ ಧ್ರುವ ಸರ್ಜಾ ಪ್ರೋತ್ಸಾಹ ಕೊಟ್ಟಿದ್ದಾರೆ. ’ಲೈಫ್ Today’ ಸಿನಿಮಾದಿಂದ ಎಲ್ಲರ ಲೈಫ್ ನಲ್ಲಿಯೂ ಗೋಲ್ಡನ್ ಡೇಸ್ ಬರಲಿದೆ ಎಂದು ಹಾರೈಸುತ್ತೇನೆ ಎಂದರು.

’ಲೈಫ್ Today’ ಲವ್ ಫ್ಯಾಮಿಲಿ ಕಥಾಹಂದರ ಹೊಂದಿದ್ದು, ಈ ಚಿತ್ರದ ಮೂಲಕ ಕಿರಣ್ ಆನಂದ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದು, ಲೇಖಾ ಚಂದ್ರ ನಾಯಕಿಯಾಗಿ ನಟಿಸುತ್ತಿದ್ದಾರೆ. ಜನವರಿ ತಿಂಗಳಾಂತ್ಯಕ್ಕೆ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದ್ದು, ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ’ಲೈಫ್ Today’ ಸಿನಿಮಾಗೆ ಶ್ರೀಧರ್ ವಿ ಸಂಭ್ರಮ ಸಂಗೀತ ನಿರ್ದೇಶನವಿದ್ದು, ಸತೀಶ್ ಕುಮಾರ್ ಕ್ಯಾಮೆರಾ ಹಿಡಿಯಲಿದ್ದಾರೆ. ಮೇಘನಾ ಪ್ರೊಡಕ್ಷನ್ ಮೇಘನಾ ಪ್ರದೀಪ್ ’ಲೈಫ್ Today’ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

error: Content is protected !!