Categories
ಸಿನಿ ಸುದ್ದಿ

ದೀಪಾವಳಿಗೆ ಭೀಮನ ಭರ್ಜರಿ ಸೌಂಡು! ನವೆಂಬರ್ ಗೆ ದುನಿಯಾ ವಿಜಯ್ ಸಿನಿಮಾ ದರ್ಶನ

ಕೃಷ್ಣ ಸಾರ್ಥಕ್,ಜಗದೀಶ್ ಗೌಡ ನಿರ್ಮಾಣ ಮಾಡಿರೋ ಭೀಮ ಎಲ್ಲಾ ಆ್ಯಂಗಲ್ ನಿಂದ್ಲೂ‌ ಚಿತ್ರರಂಗದಲ್ಲಿ ದೊಡ್ಡ ನಿರಿಕ್ಷೆಯನ್ನ ಹುಟ್ಟಿಸಿದೆ.ಅಲ್ಲದೆ ಈ ವರ್ಷದ ಬಹು ನಿರೀಕ್ಷಿತ ಚಿತ್ರವಾಗಿದೆ.


ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಭೀಮ ಸಿನಿಮಾ ಕೆಲಸಗಳು‌ ಕೊನೆಯ ಹಂತ ತಲುಪುತ್ತಿದ್ದು, ಚಿತ್ರತಂಡ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್ ಮಾಡಿಕೊಳ್ಳುತ್ತಿದೆ.

ಹಾಗಾಗಿ ನವೆಂಬರ್‌ನಲ್ಲಿ ತೆರೆಗೆ ಸಿನಿಮಾ ತರೋದಕ್ಕೆ ಸಜ್ಜಾಗಿದೆ. ನವೆಂಬರ್ ನಲ್ಲಿ ದೀಪಾವಳಿ ಇರೋದ್ರಿಂದ ಅದೇ ಡೇಟ್ ಗೆ ಸಿನ್ಮಾನ ರಿಲೀಸ್ ಮಾಡ್ಬೇಕು ಅನ್ನೋ ನಿರ್ಧಾರಕ್ಕೆ ಬಂದಿದೆ. ಅಧಿಕೃತವಾಗಿ ಮುಂದಿನವಾರ ಡೇಟ್ ಅನೌನ್ಸ್ ಮಾಡುವುದರ ಜೊತೆಗೆ ಪ್ರಚಾರ ಕಾರ್ಯ ಶುರು ಮಾಡಲಿದೆ.

ದುನಿಯಾ ವಿಜಯ್,ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್,ಕಲ್ಯಾಣಿ,ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ,ವಿನೋದ್,ಗೌತಮ್ ಸಾಹಸ,ಧನು ನೃತ್ಯ ಭೀಮನಿಗಿದೆ.

Categories
ಸಿನಿ ಸುದ್ದಿ

ಪರದೆ ಮೇಲೆ ಬ್ಲಿಂಕ್ ಆಗೋಕೆ ರೆಡಿ: ಲಾಲ್ ಬಾಗ್ ನಲ್ಲಿ ಆಗಂತುಕ ಹಾಡು ರಿಲೀಸ್

ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಶ್ರೀಯುತ ರವಿಚಂದ್ರ ಎ ಜೆ ರವರ ನಿರ್ಮಿಸುತ್ತಿರುವ , ಶ್ರೀನಿಧಿ ಬೆಂಗಳೂರು ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ ಚಿತ್ರ “ಬ್ಲಿಂಕ್” ಈಗಾಗಲೇ ಎಲ್ಲಾ ಕೆಲಸಗಳನ್ನು ಮುಗಿಸಿ ಬೆಳ್ಳಿಪರದೆಗೆ ಬರಲು ಸಜ್ಜಾಗಿದೆ..
ಈ ನಿಟ್ಟಿನಲ್ಲಿ ಚಿತ್ರದ ಮೊದಲನೇ ಹಾಡನ್ನು ಸ್ವಾತಂತ್ರ ದಿನದಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.. ಇದು ರಾಪ್ ಶೈಲಿಯ ಹಾಡಗಿದ್ದು ಭಾರತದ ಪಾರಂಪರಿಕ ಸಂಗೀತವನ್ನು ಒಳಗೊಂಡಿದೆ.


ನಮ್ಮ ಮಣ್ಣಿನ ಪ್ರಖ್ಯಾತ ರಾಪರ್ ಆದ ಅನೂಪ್ ( ಕಾಟಕೊಡು) ಇವರು ರಾಪ್ ಭಾಗವನ್ನು ಅತ್ಯುತ್ತಮವಾದ ಸಾಹಿತ್ಯದ ಜೊತೆಗೆ ಅವರ ದನಿಯ ಮೂಲಕ ಮೆರಗು ನೀಡಿದ್ದಾರೆ.. ಬ್ಲಿಂಕ್ ಚಿತ್ರದ ಸಂಗೀತ ನಿರ್ದೇಶಕರಾದ ಪ್ರಸನ್ನ ಕುಮಾರ್ ಎಂ ಎಸ್ ರವರು ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ..ಕೌಮುದಿಯವರು ಈ ಹಾಡಿಗೆ ದನಿಯಾಗುವ ಮೂಲಕ ಕನ್ನಡ ನಾಡಿನ ಜನತೆಗೆ ಪರಿಚಯವಾಗಲಿದ್ದಾರೆ.


ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ದೀಕ್ಷಿತ್ ಶೆಟ್ಟಿ , ಚೈತ್ರ ಜೆ ಆಚಾರ್ , ಮಂದಾರ ಬಟ್ಟಲಹಳ್ಳಿ , ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು, ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

“ಆಗಂತುಕ” ಶೀರ್ಷಿಕೆಯೊಂದಿಗೆ ಹೊರ ಬರುತ್ತಿರುವ ಈ ಹಾಡು ಆಗಸ್ಟ್ 15 ರಂದು ಲಾಲ್ ಭಾಗ್ ನಲ್ಲಿ ಪುಷ್ಪ ಪ್ರದರ್ಶನದಲ್ಲಿ ಬಿಡುಗಡೆಯಾಗಿ ಜನರ ಮನಸ್ಸಿಗೆ ಮುಟ್ಟಲು ಸಜ್ಜಾಗಿದ್ದು ” ಬ್ಲಿಂಕ್ ” ಚಿತ್ರತಂಡ ಎಲ್ಲರ ಬೆಂಬಲವನ್ನು ಅಪೇಕ್ಷಿಸುತ್ತಿದೆ..

Categories
ಸಿನಿ ಸುದ್ದಿ

ಹೀಗೊಂದು ಮಾನವ ಶಾಸ್ತ್ರ ಕುರಿತ ಕಥೆ: ಆಪಲ್ ಕಟ್ ಎಂಬ ಮರ್ಡರ್ ಮಿಸ್ಟರಿ ಸಿನಿಮಾ ಮೂಲಕ ಹೊಸ ನಿರ್ದೇಶಕಿ ಆಗಮನ

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಹೆಚ್ಚುತ್ತಿದೆ. ಆ ಸಾಲಿಗೆ ಈಗ ಸಿಂಧು ಗೌಡ ಸೇರ್ಪಡೆಯಾಗಿದ್ದಾರೆ. ಸಿಂಧು ಗೌಡ “ಆಪಲ್ ಕಟ್” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಿಂಧು ಗೌಡ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ.

ನಿರ್ದೇಶಕಿ ಸಿಂಧು ಗೌಡ ಮಾತನಾಡಿ, ನಾನೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ‘ನಾನು ಕಳೆದ 10ವರ್ಷದಲ್ಲಿ ಹಲವು ಜನಪ್ರಿಯ ಧಾರಾವಾಹಿಗಲ್ಲಿ ನಟನೆ ಮಾಡಿದ್ದೇನೆ. ಈ ಮೊದಲು ಒಂದು ಶಾರ್ಟ್ ಫಿಲ್ಮ್ ನಿರ್ದೇಶಿಸಿದ್ದು, ಹಿರಿತೆರೆಯಲ್ಲಿ ಈ ಸಿನಿಮಾ ನನ್ನ ಮೊದಲ ಪ್ರಯತ್ನ. ನಿರ್ಮಾಪಕಿ ಶಿಲ್ಪ ಪ್ರಸನ್ನ ಹಾಗೂ ನಾನು ಪಾರ್ಕ್ ನಲ್ಲಿ ಭೇಟಿಯಾದೆವು. ನಂತರ ಕಥೆ ಕೇಳಿ ಅವರು ನಿರ್ಮಾಣಕ್ಕೆ ಮುಂದಾದರು.

‘ಆಪಲ್ ಕಟ್’, ಐದು ಜನ ಗೆಳೆಯರ ಸುತ್ತ ನಡೆಯುವ ಕಥೆ. ಜೊತೆಗೆ ನಾನು ಮಾನವಶಾಸ್ತ್ರ ಓದಿದ್ದು, ಚಿತ್ರದಲ್ಲಿ ಮಾನವಶಾಸ್ತ್ರದ ಒಂದು ಅಂಶ ಸೇರಿಸಲಾಗಿದೆ. ಒಂದು ಆಸ್ಪತ್ರೆಯಲ್ಲಿ ಅನುಮತಿ ಪಡೆದು ಶವವೊಂದನ್ನು ಸಹ ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅದು ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ ಎನ್ನಬಹುದು.
ಮೊದಲಿನಿಂದಲೂ ನಾನು ತಂದೆ ಜೊತೆ ಶೂಟಿಂಗ್‌ಗೆ ಹೋಗುತ್ತಿದ್ದೆ. ಹಾಗಾಗಿ ಸಿನಿಮಾ ಆಸಕ್ತಿ ಬೆಳೆಯುತ್ತಾ ಬಂತು. ಸದ್ಯ ‘ಆಪಲ್ ಕಟ್’ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಇನ್ನೆರಡು ತಿಂಗಳಲ್ಲಿ ಸೆನ್ಸಾರ್ ಮುಗಿಸಿಕೊಂಡು ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಸಿನಿಮಾ ಚೆನ್ನಾಗಿ ಬರಲು ತಂಡದ ಸಹಕಾರ ತುಂಬಾ ಇದೆ’ ಎಂದು ಹೇಳಿದರು.

ಚಿತ್ರದ ನಾಯಕ ಸೂರ್ಯ ಗೌಡ, ‘ನಾನು ಈ ಚಿತ್ರದಲ್ಲಿ ಸತ್ಯ ಹೆಸರಿನ ಮಾನವಶಾಸ್ತ್ರ ಪ್ರೊಫೆಸರ್ ಪಾತ್ರ ಮಾಡಿದ್ದೇನೆ. ಹಲವಾರು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡುತ್ತಾ ಬಂದಿದ್ದು ಇದೇ ಮೊದಲಬಾರಿ ಮುಖ್ಯ ಪಾತ್ರ ನಿರ್ವಹಿಸಿದ್ದೇನೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ನಟಿಸಿದ್ದೇನೆ. ಇದರಲ್ಲಿ ಕಥೆಯಷ್ಟೇ ತಾಯಿ-ಮಗನ ಬಾಂಧವ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ’ ಎಂದರು.

‘ನಾನು ಮೂಲತಃ ಬಾಗೆಪಲ್ಲಿ ಹುಡುಗಿ. ಒಳ್ಳೆ ಕಂಟೆಂಟ್ ಇರುವ ಮರ್ಡರ್ ಮಿಸ್ಟರಿ ಸಿನಿಮಾದಲ್ಲಿ ಸೈಕಾಲಜಿ ಸ್ಟೂಡೆಂಟ್ ಆಗಿ ನಟಿಸಿದ್ದೇನೆ” ಎಂದರು ನಾಯಕಿ ಅಶ್ವಿ‌ನಿ ಪೋಲೆಪಲ್ಲಿ.

ಹಾಸ್ಯ ನಟ ಅಪ್ಪಣ್ಣ, ಅಭಿಜಿತ್, ತಾಯಿ ಪಾತ್ರ ಮಾಡಿರುವ ಮೀನಾಕ್ಷಿ ತಮ್ಮ ಅನುಭವ ಹಂಚಿಕೊಂಡರು. ಬಾಲು ರಾಜವಾಡಿ ಸಹ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಿನಿಮಾವನ್ನು ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಮೊದಲಬಾರಿ ನಿರ್ಮಾಣ ಮಾಡಿರುವ ಶಿಲ್ಪ ಪ್ರಸನ್ನ ಮಾತನಾಡುತ್ತಾ, ಕಥೆ ಕೇಳಿದಾಗ ತುಂಬಾ ಇಷ್ಟವಾಗಿ ನಿರ್ಮಾಣ ಮಾಡಿರುವುದಾಗಿ ಹೇಳಿದರು.

ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಯೋಗರಾಜ್ ಭಟ್, ಸತ್ಯಪ್ರಕಾಶ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ “ಆಪಲ್ ಕಟ್” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ರೂಪೇಶ್ ಶೆಟ್ಟಿ ಹೊರಡಿಸಿದ ಹೊಸ ಅಧಿಪತ್ರ! ಹುಟ್ದಬ್ಬಕ್ಕೆ ಸಿನಿಮಾ ಅನೌನ್ಸ್

ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ ಎಂಬುವರು ಅಧಿಪತ್ರ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಅಧಿಪತ್ರ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

ರೂಪೇಶ್ ಶೆಟ್ಟಿ ಡೇಂಜರ್ ಝೋನ್, ನಿಶ್ಯಬ್ದ-2, ಅನುಷ್ಕಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅಧಿಪತ್ರ‌ ಮೂಲಕ ಹೊಸ ಬಗೆಯ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲಿದ್ದಾರೆ.

Categories
ಸಿನಿ ಸುದ್ದಿ

ತೆಲುಗಿನ ಟೈಗರ್ ನಾಗೇಶ್ವರ್ ರಾವ್ ಸಿನಿಮಾಗೆ ಅನುಪಮ್‌ ಖೇರ್ ಎಂಟ್ರಿ: ಸ್ವಾತಂತ್ರ್ಯ ದಿನಕ್ಕೆ ಫಸ್ಟ್ ಲುಕ್ ರಿಲೀಸ್

ತೆಲುಗಿನ ಮಾಸ್ ಮಹಾರಾಜ ರವಿತೇಜ ಅವರ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಅಂಗಳಕ್ಕೆ ಬಾಲಿವುಡ್ ದಿಗ್ಗಜ ಅನುಪಮ್ ಖೇರ್ ಎಂಟ್ರಿಯಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ, ಅನುಪಮ್ ಖೇರ್ ಅವರ ಪಾತ್ರ ಹಾಗೂ ಲುಕ್ ಪರಿಚಯಿಸಿದೆ. ಗುಪ್ತಚರ ಇಲಾಖೆಯ ಅಧಿಕಾರಿ ರಾಘವೇಂದ್ರ ರಜಪುತ್ ಪಾತ್ರದಲ್ಲಿ ಅನುಪಮ್ ಖೇರ್ ನಟಿಸುತ್ತಿದ್ದು, ಇದೇ 17ರಿಂದ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಗಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗುತ್ತಿದೆ.

Categories
ಸಿನಿ ಸುದ್ದಿ

ಪರಿಮಳ ಡಿಸೋಜಾ ಟ್ರೇಲರ್ ರಿಲೀಸ್- ಇದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ


ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ‘ವಿಲೇಜ್ ರೋಡ್ ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದೇ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್, ನಿರ್ಮಾಪಕ ಎಂ.ಎನ್ ಸುರೇಶ್ ಹಾಗೂ ನಟಿ ಭವ್ಯ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ನಿರ್ಮಾಪಕ ಕಮ್ ನಟ ವಿನೋದ್ ಶೇಷಾದ್ರಿ ಮಾತನಾಡಿ, ‘ಈ ಚಿತ್ರ ನಿರ್ಮಾಣ ಮಾಡುವ ಜೊತೆಗೆ ಪೊಲೀಸ್ ಪಾತ್ರ ಕೂಡ ಮಾಡಿದ್ದೇನೆ. ಜೊತೆಗೆ ಚಿತ್ರದ ಒಂದು ಗೀತೆಗೆ ಸಾಹಿತ್ಯ ಕೂಡ ಬರೆದಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಆ್ಯಕ್ಷನ್, ಸೆಂಟಿಮೆಂಟ್, ಫ್ಯಾಮಿಲಿ ಮನರಂಜನೆ ಇರುವ ಕೌಟುಂಬಿಕ ಚಿತ್ರ. ಚಿತ್ರದಲ್ಲಿ ಒಟ್ಟು 107 ಕಲಾವಿದರು ನಟಿಸಿದ್ದಾರೆ’ ಎಂದು ಹೇಳಿದರು.

ನಿರ್ದೇಶಕ ಡಾ.ಗಿರಿಧರ್ ಹೆಚ್ ಟಿ. ಮಾತನಾಡಿ ‘ಇದೊಂದು ಸಾಂಸಾರಿಕ ಕಥೆ ಒಳಗೊಂಡ ಸಿನಿಮಾ. ಹಿಂದೂ ಕುಟುಂಬದ ಮನೆಗೆ ಕ್ರಿಶ್ಚಿಯನ್ ಹುಡುಗಿ ಸೊಸೆಯಾಗಿ ಬರುತ್ತಾರೆ. ಎಲ್ಲವೂ ಚೆನ್ನಾಗಿ ನಡೆಯುತ್ತಿರುವಾಗ ಒಂದು ಘಟನೆ ನಡೆಯುತ್ತದೆ ಆ ಘಟನೆ ಏನು? ಅದರಿಂದ ಏನೆಲ್ಲಾ ಆಗುತ್ತದೆ ಎಂಬುದೇ ಈ ಚಿತ್ರದ ಕಥಾವಸ್ತು. ಇದರಲ್ಲಿ ಹೀರೋ ಅಂತ ಯಾರು ಇಲ್ಲ ಕಥೆಯೇ ನಾಯಕ ಎಂದರು.

‘ಇದೊಂದು ಥ್ರಿಲ್ಲರ್, ಸಸ್ಪೆನ್ಸ್ ಸಿನಿಮಾ. ಸೆಪ್ಟೆಂಬರ್ 15ರಂದು ಸಿನಿಮಾ ರಿಲೀಸ್ ಆಗಲಿದೆ. ಅದ್ಭುತವಾಗಿ ಸಿನಿಮಾ ಮೂಡಿ ಬಂದಿದೆ’ ಎಂದು ಹೇಳಿದರು ನಟಿ ಭವ್ಯ.

ಇದೇ ಸಂದರ್ಭದಲ್ಲಿ ಕಲಾವಿದರಾದ ಕೋಮಲ ಬನವಾಸೆ, ಸುನೀಲ್ ಮೋಹಿತ್, ರೋಹಿಣಿ ಜಗನ್ನಾಥ, ಚಂದನಾ ಶ್ರೀನಿವಾಸ, ಶಿವಕುಮಾರ ಆರಾಧ್ಯ ಹಾಗೂ ಸಂಕಲನಕಾರ ಸಂಜೀವ ರೆಡ್ಡಿ, ಗಾಯಕಿ ಶೃತಿ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ಆಗಸ್ಟ್ 17ಕ್ಕೆ ಮೈಸೂರಲ್ಲಿ ವಾಮನ ಟೀಸರ್ ರಿಲೀಸ್

ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವಾಮನ” ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಸಹ ಇದೆ.

EQUINOX GLOBAL ENTERTAINMENT ಲಾಂಛನದಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ ಮೊದಲ ಚಿತ್ರವಿದು.

ಶಂಕರ್ ರಾಮನ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನವಿದೆ.

ಭೂಷಣ್ ನೃತ್ಯ ನಿರ್ದೇಶನ, ಅರ್ಜುನ್ ರಾಜ್, ವಿಕ್ರಂ ಮೋರ್ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ನವೀನ್ ಹಾಡೋನಳ್ಳಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಧನ್ವೀರ್ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ತಾರಾ, ಸಂಪತ್ ರಾಜ್, ಆದಿತ್ಯ ಮೆನನ್, ಅವಿನಾಶ್, ಅಚ್ಯುತಕುಮಾರ್, ಕಾಕ್ರೋಜ್ ಸುಧಿ, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕೆ.ಜಿ.ಸಚ್ಚು, ಅರುಣ್ ಶ್ರೀರಾಮಯ್ಯ ಮುಂತಾದವರು “ವಾಮನ” ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಹಯ್ಯೋಡಾ ಅಂದ್ರು ಶಾರುಖ್ ಖಾನ್: ಜವಾನ್ ಸಿನಿಮಾ ಹಾಡು ರಿಲೀಸ್

ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ.
‘ಜವಾನ್’ ಚಿತ್ರದ ‘ಹಯ್ಯೋಡಾ’ ಎಂಬ ಹಾಡು ಬಿಡುಗಡೆಯಾಗಿದೆ.

ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್ ಮತ್ತು ಮಧುರಗೀತೆಗಳಿಗೆ ಜನಪ್ರಿಯರಾದ ಶಾರುಖ್ ಖಾನ್ ಹೆಜ್ಜೆ ಹಾಕಿದ್ದಾರೆ. ಈ ಹಾಡನ್ನು ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದು, ಅನಿರುದ್ಧ್ ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಈ ಸುಮಧುರ ಹಾಡಿಗೆ ವಿವೇಕ್ ಸಾಹಿತ್ಯ ರಚಿಸಿದ್ದಾರೆ.


ಇದೇ ಮೊದಲ ಬಾರಿಗೆ ತೆರೆಯ ಮೇಲೆ ಒಟ್ಟಾಗಿ ಕಾಣಿಸಿಕೊಂಡಿರುವ ಶಾರುಖ್ ಖಾನ್ ಮತ್ತು ನಯನತಾರಾ, ತೆರೆಯ ಮೇಲೆ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ತಮ್ಮ ಅಭಿನಯದಿಂದ ನೋಡುಗರನ್ನು ಮಂತ್ರಮುಗ್ಧರನ್ನಾಗಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಇನ್ನು, ಭಾರತೀಯ ಚಿತ್ರರಂಗದ ಜನಪ್ರಿಯ ಕೊರಿಯೋಗ್ರಾಫರ್ ಆಗಿರುವಂತಹ ಫರಾ ಖಾನ್ ನೃತ್ಯ ನಿರ್ದೇಶನ ಮಾಡಿದ್ದಾರೆ.


‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸಿದರೆ, ಗೌರವ್ ವರ್ಮಾ ಸಹನಿರ್ಮಾಪಕರಾಗಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶಿಸಿರುವ ಈ ಚಿತ್ರವು ಜಗತ್ತಿನಾದ್ಯಂತ ಸೆಪ್ಟೆಂಬರ್ 7ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ಡಿ ಜೆ ಸೌಂಡು ಶುರು ಗುರು! ಮತ್ತೆ ಬಂದ ಚಕ್ರವರ್ತಿ ಚಂದ್ರಚೂಡ: ನಿರ್ದೇಶನದ ಸಿನಿಮಾಗೆ ಮಿಲಿಂದ್ ಗೌತಮ್ ಹೀರೋ

ಪತ್ರಕರ್ತ, ಉತ್ತಮ ಮಾತುಗಾರ, ನಟ ಮತ್ತು ನಿರ್ದೇಶಕ ಬಿಗ್ ಬಾಸ್ ಖ್ಯಾತಿಯ ಡಿ.ಜೆ. ಚಕ್ರವರ್ತಿ ಚಂದ್ರಚೂಡ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಪತ್ರಕರ್ತರಾಗಿ ಗುರುತಿಸಿಕೊಂಡು, ಸಾಹಿತ್ಯ ಲೋಕದಲ್ಲೂ ಮಿಂದೆದ್ದು, ಬಣ್ಣದ ಲೋಕವನ್ನೂ ಸ್ಪರ್ಶಿಸಿ ಸದ್ದು ಮಾಡಿದವರು. ಈಗ ಮತ್ತೊಂದು ಹೊಸ ಇನ್ನಿಂಗ್ಸ್ ಶುರುವಿಗೆ ಸಜ್ಜಾಗುತ್ತಿದ್ದಾರೆ.

ಹೌದು, ಚಕ್ರವರ್ತಿ ಚಂದ್ರಚೂಡ್ ನಿರ್ದೇಶನಕ್ಕಿಳಿಯುತ್ತಿದ್ದಾರೆ. ನಿರ್ದೇಶನ ಅವರಿಗೆ ಹೊಸದಲ್ಲ. ಈ ಬಾರಿ ಹೊಸತನದ ಕಥೆಯೊಂದಿಗೆ ಎಂಟ್ರಿಕೊಡುತ್ತಿದ್ದಾರೆ. ಮಯೂರ ಮೋಷನ್ ಪಿಕ್ಚರ್ಸ್‌ ನಿರ್ಮಾಣದ ನೂತನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ .ಜೆ.ಚಕ್ರವರ್ತಿ ಸಿನಿಮಾಗೆ ಮಂಜುನಾಥ್ ಡಿ ನಿರ್ಮಾಪಕರು. ಅವರು ಅನ್ ಲಾಕ್ ರಾಘವ ನಂತರ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ.

ಇನ್ನು ಮಿಲಿಂದ್ ಗೌತಮ್ ನಾಯಕ. ಡಿ.ಜೆ. ಚಕ್ರವರ್ತಿ ಚಂದ್ರಚೂಡ್ ಏಳು ವರ್ಷಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

“ಅನ್ ಲಾಕ್ ರಾಘವ” ನಂತರ ಮಿಲಿಂದ್ ಗೌತಮ್ ಅವರು ಸತತ ಮೂರು ತಿಂಗಳುಗಳಿಂದ ಈ ಹೊಸ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

ಈಗಾಗಲೇ ಕದ್ರಿ ಮಣಿಕಾಂತ್ ಹಾಡುಗಳು ಸಂಯೋಜನೆಯಲ್ಲಿದು, ಚಿತ್ರೀಕರಣಕ್ಕೆ ಪೂರ್ವ ತಯಾರಿ ಭರದಿಂದ ಸಾಗಿದೆ.

ಆಗಸ್ಟ್ 18ರಂದು ಟೀಸರ್ ಚಿತ್ರೀಕರಣ ನಡೆಯಲಿದ್ದು, ಸೆಪ್ಟೆಂಬರ್ 2 , ಅಭಿನಯ ಚಕ್ರವರ್ತಿ ಸುದೀಪ್ ರವರ ಹುಟ್ಟಿದ ದಿನದಂದು ಟೀಸರ್ ಬಿಡುಗಡೆ ಮಾಡಲಿದ್ದಾರೆ.

ನಿರ್ದೇಶಕರ ಹುಟ್ಟುಹಬ್ಬದಂದು(ಆಗಸ್ಟ್ 15) ಟೀಮ್ ಅನೌನ್ಸ್ ಆಗಲಿದೆ. ಈ ಪೋಸ್ಟರ್ ನಲ್ಲಿರುವ ಸ್ಕ್ಯಾನ್ ಮಾಡಿ ಮ್ಯಾಜಿಕ್ ನೋಡಿ! ನಿಮಗೊಂದು ಅಪರೂಪದ ವಿಷಯ ಸಿಗಲಿದೆ.

Categories
ಸಿನಿ ಸುದ್ದಿ

ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆ

ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ಅವರು ನೇರ ಪ್ರಸಾರದಲ್ಲಿ ಮಾತನಾಡುತ್ತಿದ್ದ ವೇಳೆ, ದಲಿತ ಸಮುದಾಯ ಕುರಿತ ಪದ ಬಳಕೆ ಮಾಡಿದ್ದರ ವಿರುದ್ಧ ದಾಖಲಾಗಿದ್ದ ಕೇಸ್ ಗೆ ಹೈಕೋರ್ಟ್ ತಡೆ ನೀಡಿದೆ.

ಉಪೇಂದ್ರ ಆಡಿದ ಮಾತಿನಿಂದ ಆ ಸಮುದಾಯದವರ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂದು ಆರೋಪಿಸಿ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು.

ಈ ಕುರಿತು ಉಪೇಂದ್ರ ಅವರು ದೂರು ರದ್ದು ಪಡಿಸುವಂತೆ ಮನವಿ ಮಾಡಿ , ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಉಪೇಂದ್ರ ಅವರು ಯಾವುದೇ ಸಮುದಾಯಕ್ಕೆ ನೋವುಂಟು ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡಿರಲಿಲ್ಲ. ಆಕಸ್ಮಿಕವಾಗಿ ಗಾದೆ ಮಾತಿನ ಪದ ಬಳಕೆ ಮಾಡಿದ್ದಾರೆ. ಆದರೂ ಅವರು ಕ್ಷಮೆ‌ ಕೋರಿ, ಮಾತಾಡಿದ ವಿಡಿಯೋ ಡಿಲೀಟ್ ಮಾಡಿದ್ದಾರೆ. ಹಾಗಾಗಿ ದಾಖಲಾಗಿರುವ ಪ್ರಕರಣಕ್ಕೆ ತಡೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ‌ ಮಾಡಿದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ನೀಡಿದೆ.

ಈ ಬಗ್ಗೆ ತಮ್ಮ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ‘ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ, ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ ನನಗೆ ಕೊಡೆ’ ಎಂದು ಧನ್ಯವಾದ ಹೇಳಿದ್ದಾರೆ.

error: Content is protected !!