Categories
ಸಿನಿ ಸುದ್ದಿ

ಹೊಸಬರಿಗೆ ಕಿಚ್ಚ ಸಾಥ್: ಟೇಲ್ಸ್ ಆಫ್ ಮಹಾನಗರ ಸಿನಿಮಾಗೆ ಸುದೀಪ್ ಧ್ವನಿ

ಅಭಿನಯ ಚಕ್ರವರ್ತಿ ಕಿಚ್ಚ‌ ಸುದೀಪ್ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಸದಾ ಮುಂದು. ಅಥರ್ವ್ ನಾಯಕರಾಗಿ ನಟಿಸಿರುವ “ಟೇಲ್ಸ್ ಆಫ್ ಮಹಾನಗರ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಟೀಸರ್ ಗೆ ಸುದೀಪ್ ಧ್ವನಿ ನೀಡಿದ್ದಾರೆ. ಟೀಸರ್ ಜನರ ಮೆಚ್ಚುಗೆ ಗಳಿಸಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸೆಪ್ಟೆಂಬರ್ 15 ರಂದು ಚಿತ್ರ ತೆರೆಗೆ ಬರಲಿದೆ.

ನಾಯಕ ಅಥರ್ವ್, ಈ ಹಿಂದೆ “ಗೆಜ್ಜೆನಾದ”, ” ನಂದ ಲವ್ಸ್ ನಂದಿತಾ”, “ಕನ್ನಡದ ಕಂದ”, “ಆಟ” ಮುಂತಾದ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಬಿ.ಎನ್ ವಿಜಯ್ ಕುಮಾರ್(ಗೆಜ್ಜೆನಾದ) ಅವರ ಪುತ್ರ. “ಗೆಜ್ಜೆನಾದ” ವಿಜಯಕುಮಾರ್ ಎಂದೇ ಖ್ಯಾತರಾಗಿರುವ ವಿಜಯಕುಮಾರ್ ಈ ಚಿತ್ರವನ್ನು ಅಥರ್ವ್ ಪಿಕ್ಚರ್ಸ್ ಲಾಂಛನದಲ್ಲಿ ಧರ್ಮೇಂದ್ರ ಎಂ ರಾವ್ ಅವರೊಟ್ಟಿಗೆ ಸೇರಿ ನಿರ್ಮಾಣವನ್ನು ಮಾಡಿದ್ದಾರೆ.

ಇದು ಮಹಾನಗರವೊಂದರಲ್ಲಿ ನಡೆಯುವ ಕಥೆಯಾಗಿದೆ. ಹೆಣ್ಣು, ಅಧಿಕಾರ ಹಾಗೂ ಧರ್ಮಕ್ಕೆ ಸಂಬಂಧಿಸಿದ ಹಾಗೆ ಮೂರು ವಿಭಿನ್ನ ಕಥೆಗಳು ಚಿತ್ರದಲ್ಲಿದೆ. ಅಥರ್ವ್ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಅಥರ್ವ್ ಹಾಗೂ ರಾಜೀವ್ ಕಿರಣ್ ವೆನಿಯಲ್ ಅವರದು.

“ಕನ್ನಡತಿ” ಧಾರಾವಾಹಿ ರೆಮೋಲ, ಸಂಪತ್ ಮೈತ್ರೇಯ, ಬಿ.ಸುರೇಶ್, ರೂಪಾ ರಾಯಪ್ಪ, ಆಶೀಶ್, ಬಿ.ಎಂ.ವೆಂಕಟೇಶ್, ಮೋಹನ್, ಆರ್ ಜೆ ಅನೂಪ, ನಾಗರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ರಾಜೀವ್ ಕಿರಣ್ ವೆನಿಯಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೌಶನ್ ಜಾ ಛಾಯಾಗ್ರಹಣ, ಪ್ರದೀಪ್ ಗೋಪಾಲ್ ಸಂಕಲನ ಹಾಗೂ ಸಿದ್ಧಾರ್ಥ್ ಪರಾಶರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಎಡಗೈ ಬಳಸೋರಿಗೊಂದು ಹೆಲ್ಮೆಟ್! ಅಪಘಾತಕ್ಕೆ ಕಾರಣಕ್ಕೊಂದು ವೇಗ ಹೆಲ್ಮೆಟ್ ಕೊಡುಗೆ

ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಸ್ ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೆ ಅಂತೀರಾ? ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಕಂಪನಿ ಎಗಡೈ ಬಳಸುವವರರಿಗಾಗಿ ಹೊಸ ಹೆಲ್ಮೆಟ್ ಲಾಂಚ್ ಮಾಡುತ್ತಿದೆ. ಇದೆ ಅಲ್ವಾ ಒಂದು ಸಿನಿಮಾದ ಸೋಷಿಯಲ್ ಇಂಪ್ಯಾಕ್ಟ್ ಅಂದರೆ..

ಕನ್ನಡ ಸಿನಿಮಾಗಳ ಮಾರುಕಟ್ಟೆ ಈಗ ವಿಸ್ತರಿಸಿದೆ. ವಿಭಿನ್ನ ಬಗೆಯ ಕಥಾಹಂದರದ ಕನ್ನಡ ಚಿತ್ರಗಳು ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಎಡಗೈ ಅಪಘಾತ ಕಾರಣಕ್ಕೆ ಸಿನಿಮಾದ ಐಡಿಯಾ, ಕಾನ್ಸೆಪ್ಟ್ ವೇಗ ಹೆಲ್ಮೆಟ್ ಕಂಪನಿಯರನ್ನು ತಲುಪಿದೆ ಅಂದ್ರೆ ಇಡೀ ಚಿತ್ರತಂಡ ಮಾತ್ರವಲ್ಲ ಇಡೀ ಇಂಡಸ್ಟ್ರೀಯೇ ಖುಷಿಪಡಬೇಕಾದ ವಿಚಾರ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ತಂಡದ ಜೊತೆ ವೇಗ ಹೆಲ್ಮೆಟ್ ಕಂಪನಿ ಕೈ ಜೋಡಿಸಿದ್ದಾರೆ. ಎಡಗೈ ಬಳಸುವವರಿಗೆ ಹೊಸ ಹೆಲ್ಮೆಟ್ ಪರಿಚಯಿಸುತ್ತಿದೆ.

ಅಂದಹಾಗೆ, ಸಮರ್ಥ್ ಬಿ ಕಡಕೊಳ್ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ಹಿಡಿದರೆ, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

Categories
ಸಿನಿ ಸುದ್ದಿ

ರಿಕ್ಕಿ ಕೇಜ್ ಹಾಡಿಗೆ ಎಲ್ಲೆಡೆ ಕ್ರೇಜ್: ಹೊಸ ದಾಖಲೆ ಬರೆದ ಗ್ರ್ಯಾಮಿ ಪ್ರಶಸ್ತಿ ವಿಜೇತ- ರಾಷ್ಟ್ರಗೀತೆಗೆ ವಿಶೇಷ ರಾಗದ ಸ್ಪರ್ಶ

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ.

ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ.

ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.

Categories
ಸಿನಿ ಸುದ್ದಿ

ಕ್ಷೇತ್ರಪತಿ ನಿರೀಕ್ಷೆ ಐತಿ: ಗಮನ ಟ್ರೇಲರ್ ಬಂತು- ಆ. 18ಕ್ಕೆ ಸಿನಿಮಾ ರಿಲೀಸ್

ನಟ ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು‌. ಟ್ರೇಲರ್ ಈಗಾಗಲೇ ಜನಮನಸೂರೆಗೊಳ್ಳುತ್ತಿದ್ದು, ಚಿತ್ರ ಆಗಸ್ಟ್ 18 ರಂದು ತೆರೆಗೆ ಬರಲಿದೆ.

ಟ್ರೇಲರ್ ಬಿಡುಗಡೆ ವೇಳೆ ಮಾತನಾಡಿದ ನಟ ನವೀನ್ ಶಂಕರ್, “ಗುಲ್ಟು” ಚಿತ್ರದ ನಂತರ ನಿರ್ದೇಶಕ ಶ್ರೀಕಾಂತ್ ಕಟಗಿ, ಈ ಚಿತ್ರದ ಕಥೆ ಹೇಳಿದರು. ನಾನು ಉತ್ತರ ಕರ್ನಾಟಕದವನೇ ಆಗಿರುವುದರಿಂದ ಅಲ್ಲಿನ ಪರಿಸರದ ಚಿತ್ರ ಮಾಡುವ ಆಸೆಯಿತ್ತು. ಹಾಗಾಗಿ ತಕ್ಷಣ ಒಪ್ಪಿಕೊಂಡೆ. ಆದರೆ ಹಣ ಹೂಡಲು ನಿರ್ಮಾಪಕರು ಇರಲಿಲ್ಲ. ನಾವೇ ಒಂದೊಂದು ಲಕ್ಷ ಹಾಕಿ ಸಿನಿಮಾ ಆರಂಭ ಮಾಡಿದ್ದೆವು. ಆನಂತರ ಸಾಕಷ್ಟು ನಿರ್ಮಾಪಕರು ನಮ್ಮ ಜೊತೆಯಾದರು.

ಆಗಷ್ಟೇ “ಕೆ ಜಿ ಎಫ್” ಬಿಡುಗಡೆಯಾಗಿತ್ತು. ರವಿ ಬಸ್ರೂರ್ ಅವರ ಬಳಿ ಸಂಗೀತ ಸಂಯೋಜನೆ ಮಾಡಿಸಬೇಕೆಂಬ ಇರಾದೆ ಇತ್ತು. ಅವರು ಒಪ್ಪಿಕೊಂಡರು. ಹೀಗೆ ಆರಂಭವಾದ ಚಿತ್ರ ಈಗ ಬಿಡುಗಡೆ ಹಂತಕ್ಕೆ ಬಂದು ತಲುಪಿದೆ. ನನ್ನೊಂದಿಗೆ ಅಭಿನಯಿಸಿರುವ ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಅದ್ಭುತವಾಗಿದೆ. ನಮ್ಮ ಚಿತ್ರ ನೋಡಿ ಹಾರೈಸಿ ಎಂದರು.

ನಾನು ಉತ್ತರ ಕರ್ನಾಟಕದ ಮೂಲದವನು. ಅಲ್ಲಿನ ಹಾಗೂ ಇಡೀ ದೇಶದಲ್ಲೇ ಇರುವ ಸಾಮಾಜಿಕ ಸಮಸ್ಯೆಗಳನ್ನ ಆಧರಸಿ ಕಥೆ ಮಾಡಿಕೊಂಡೆ. ನವೀನ್ ಶಂಕರ್ ಅವರಿಗೆ ಕಥೆ ಹೇಳಿದೆ. ಒಪ್ಪಿಕೊಂಡರು. ಉತ್ತರ ಕರ್ನಾಟಕದ ಭಾಗದಲ್ಲೇ ಹೆಚ್ಚು ಚಿತ್ರೀಕರಣ ಮಾಡಿದ್ದೇವೆ. ನಮ್ಮ ಚಿತ್ರ ಅಗಸ್ಟ್ 18 ತೆರೆಗೆ ಬರಲಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಮ್ಮ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶ್ರೀಕಾಂತ್ ಕಟಗಿ.

ಪತ್ರಕರ್ತೆಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕಿ ಅರ್ಚನಾ ಜೋಯಿಸ್ ಹೇಳಿದರು. ನಟರಾದ ರಾಹುಲ್ ಐನಾಪುರ, ಹರ್ಷ್ ಅರ್ಜುನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಸಹ ನಿರ್ಮಾಪಕರಾದ ಶ್ರೀನಿವಾಸ್, ದರ್ಶನ್ ಜಯಣ್ಣ, ವಿವೇಕ್ “ಕ್ಷೇತ್ರಪತಿ” ಬಗ್ಗೆ ಮಾಹಿತಿ ನೀಡಿದರು‌.

ರವಿ ಬಸ್ರೂರ್ ಮ್ಯೂಸಿಕ್, ಮೂವೀಸ್ ಅರ್ಪಿಸುತ್ತಿರುವ, ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಕ್ಷೇತ್ರಪತಿ” ಚಿತ್ರ ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ದಿ ಇಮೋಷನ್ಸ್ ಫ್ಯಾಕ್ಟರಿ ಗ್ರೂಪ್ ಸಹ ನಿರ್ಮಾಣವಿರುವ ಈ ಚಿತ್ರವನ್ನು ಕೆ.ಆರ್.ಜಿ ಸ್ಟುಡಿಯೋಸ್ ಬಿಡುಗಡೆ ಮಾಡುತ್ತಿದೆ.

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ನವೀನ್ ಶಂಕರ್ , ಅರ್ಚನಾ ಜೋಯಿಸ್, ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಯುವ ನಿರ್ದೇಶಕನ ಕಣ್ಣಲ್ಲಿ ಸಿನಿಮಾ ಉದಯ! ಡೈರೆಕ್ಟರ್ ಆಗಲು ಹಂಬಲಿಸೋ ಮನಸ್ಸಿನ ಒಳಗಿರುವ ಕಥೆ ವ್ಯಥೆ ಇದು

ಸ್ಟಾರ್ಟ್, ಕ್ಯಾಮೆರಾ, ಸೌಂಡ್, ಆಕ್ಷನ್…

ಚಿತ್ರರಂಗಕ್ಕೆ ಬರುವ ಪ್ರತಿಯೊಬ್ಬ ನಿರ್ದೇಶಕ, ದೇವಸ್ಥಾನಕ್ಕೆ ಹೋಗಿ ಕೈ ಮುಗಿತಾನೋ ಇಲ್ವೋ ಗೊತ್ತಿಲ್ಲ. ಆದರೆ, ಚಿತ್ರಮಂದಿರಕ್ಕೆ ಖಂಡಿತ ಕೈ ಮುಗಿದೇ ಹೋಗ್ತಾನೆ. ಯಾಕೆಂದರೆ, ಆ ಥಿಯೇಟರ್ ಗಳೇ ಅವರಿಗೆ ದೇವಸ್ಥಾನ. ಎಷ್ಟೋ ಕಥೆ, ಚಿತ್ರಗಳು ಆ ದೇವಸ್ಥಾನದ ಹೊಸಲು ಮೆಟ್ಟಲಾಗದೆ ಅವರ ಹಾಳೆಗಳ ಮೇಲೇ ಹಾಗೆ ಉಳಿದು ಬಿಡುತ್ತವೆ…

ಈ ಬಣ್ಣದ ಲೋಕಕ್ಕೆ ಬರುವವರ ಸಂಖ್ಯೆ ಕಮ್ಮಿ ಏನಿಲ್ಲ. ದಿನ ಕಳೆದಂತೆ ನೂರಾರು ಆಸೆ-ಆಕಾಂಕ್ಷೆ ಹೊತ್ತು ಬೆಟ್ಟದಷ್ಟು ಕನಸು ಕಟ್ಟಿಕೊಂಡು ಗಾಂಧಿನಗರಕ್ಕೆ ಕಾಲಿಡುತಲೇ ಇದ್ದಾರೆ. ಆ ಸಾಲಿಗೆ ಉದಯಶಂಕರ್ ಎಂಬ ಪ್ರತಿಭೆ ಕೂಡ ಸೇರಿದೆ. ಹೌದು, ಕಳೆದ ಏಳೆಂಟು ವರ್ಷಗಳಿಂದಲೂ ಸಿನಿಮಾ ರಂಗದಲ್ಲಿ ಸಕ್ರಿಯವಾಗಿ ದುಡಿದು ತಾನೂ ನಿರ್ದೇಶಕನಾಗಬೇಕು ಅಂತ ರಾತ್ರಿ ಹಗಲು ಕನಸು ಕಾಣುತ್ತಿರುವ ಯುವ ನಿರ್ದೇಶಕ ಇವರು.

ಎಲ್ಲಾ ಯುವ ನಿರ್ದೇಶಕರಂತೆ ಕಂಗಳ ತುಂಬ ಆಸೆ ಹೊತ್ತು ಮಾಗಡಿ ಸಮೀಪದ ದೋಣ ಕುಪ್ಪೆ ಗ್ರಾಮದಿಂದ ಬಂದ ಉದಯ ಶಂಕರ್ ಈಗ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಅದರ ಹೆಸರು ‘ಸಿನಿಮಾ’. ಹದಿನಾಲ್ಕು ನಿಮಿಷದ ಈ ಸಿನಿಮಾ ಕಿರುಚಿತ್ರ, ಸಿನಿಮಾ ಮಾಡಬೇಕು ಅಂತ ಹಂಬಲಿಸುವ ಒಬ್ಬ ಯುವ ನಿರ್ದೇಶಕನ ಕಥೆ ಮತ್ತು ವ್ಯಥೆ.

ತಮ್ಮಕಿರುಚಿತ್ರ ಸಿನಿಮಾ ಕುರಿತು ಹೇಳುವ ನಿರ್ದೇಶಕ ಉದಯಶಂಕರ್, ‘ನಾನು ನಿರ್ದೇಶಕನಾಗಬೇಕು ಅಂತಾನೆ ಕಳೆದ ಏಳೆಂಟು ವರ್ಷಗಳಿಂದ ಸಿನಿಮಾ ರಂಗದಲ್ಲಿ ಕೆಲಸ‌ ಮಾಡುತ್ತಿದ್ದೇನೆ. ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಧುನಿಕ‌ ಶ್ರವಣ ಕುಮಾರ’ ಸಿನಿಮಾದಲ್ಲಿ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದೇನೆ.

ಆ ಅನುಭವದ ಮೇಲೆ ‘ ಇವತ್ತೇ ಲಾಸ್ಟ್ ನಾಳೆಯಿಂದ ಎಣ್ಣೆ ಹೊಡೆಯಲ್ಲ’ ಎಂಬ ಕಿರುಚಿತ್ರ ನಿರ್ದೇಶಿಸಿದೆ. ಅದಾದ ಬಳಿಕ ಈಗ ‘ ಸಿನಿಮಾ’ ಎಂಬ ಮತ್ತೊಂದು ಕಿರುಚಿತ್ರ ನಿರ್ದೇಶಿಸಿದ್ದೇನೆ. ಸದ್ಯ ಈ ಸಿನಿಮಾ ಈಗ ಭಗತ್ ಎಂಟರ್ಟೈನ್ಮೆಂಟ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದ್ದು ಎಲ್ಲೆಡೆಯಿಂದ ಉತ್ತಮ ಮೆಚ್ಚುಗೆ ಸಿಗುತ್ತಿದೆ.

ನನಗೆ ಉಪೇಂದ್ರ ಸ್ಫೂರ್ತಿ

ಇಷ್ಟಕ್ಕೂ ನಾನು ಸಿನಿಮಾ ರಂಗ ಪ್ರವೇಶ ಮಾಡಲು ನಟ, ನಿರ್ದೇಶಕ ಉಪೇಂದ್ರ ಅವರು ಕಾರಣ. ಅವರೇ ನನಗೆ ಸ್ಫೂರ್ತಿ. ಸುನಿಮಾ ನೋಡುವ ಆಸಕ್ತಿ ಇತ್ತು. ಹಾಗೆ ನೋಡ್ತಾ ನೋಡ್ತಾನೇ ಉಪೇಂದ್ರ ಅವರು ಸ್ಫೂರ್ತಿಯಾದರು. ಹಾಗಾಗಿ ನಾನು ಸಿನಿಮಾ ರಂಗಕ್ಕೆ ಬಂದೆ. ಈಗಷ್ಟೇ ಶಾರ್ಟ್ ಫಿಲ್ಮ್ ಮಾಡುವ ಮೂಲಕ ಅನುಭವ ಪಡೆಯುತ್ತಿದ್ದೇನೆ. ಮುಂದೆ ಅನಂತ್ ನಾಗ್ ಅವರಿಗೊಂದು ಸಿನಿಮಾ ನಿರ್ದೇಶನ ಮಾಡಲು ತಯಾರಿ ನಡೆಸುತ್ತಿದ್ದೇನೆ.

ಮೂಲತಃ ನಾನು ರಂಗಭೂಮಿ ಹಿನ್ನೆಲೆಯಿಂದ ಬಂದವನು. ಕಲಾವಿದನಾಗಿ ಕೆಲಸ ಮಾಡಿದ್ದೇನೆ. ಸಿನಿಮಾ ಆಕರ್ಷಣೆ ಹೆಚ್ಚಾಗಿ ನಿರ್ದೇಶನ ಮಾಡಲು ಅಣಿಯಾಗುತ್ತಿದ್ದೇನೆ.

ಇನ್ನು, ಸಿನಿಮಾ ಮಾಡೋದು ಸುಲಭವಲ್ಲ. ಇಲ್ಲಿ ನಿರ್ಮಾಪಕರನ್ನು ಹುಡುಕಿ ಕಥೆ ಹೇಳಿ ಒಪ್ಪಿಸೋದು ಕಷ್ಟದ ಕೆಲಸ. ನಿತ್ಯವೂ ನಿರ್ಮಾಪಕರ‌ ಮನೆ ಮನೆಗೆ ಅಲೆದಾಡಿದರೂ ಕಷ್ಟ. ಇವತ್ತು ನಾಳೆ ಎನ್ನುತ್ತಲೇ ನಿರ್ದೇಶಕರ ತಾಳ್ಮೆಗೆಡಿಸುತ್ತಾರೆ. ನನಗೂ ಅಂತಹ ಅನುಭವ ಆಗಿದೆ. ಅದೇ ಅನುಭವ ಇಟ್ಟುಕೊಂಡೇ ‘ಸಿನಿಮಾ’ ಕಿರುಚಿತ್ರ ಮಾಡಿದ್ದೇನೆ. ಇಲ್ಲೂ ನಿರ್ದೇಶಕನಾಗೋಕೆ ಎಷ್ಟೆಲ್ಲಾ ಒದ್ದಾಟಗಳಿವೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದ್ದೇನೆ.

ಇನ್ನು, ಪ್ರಮುಖ ಪಾತ್ರದಲ್ಲಿ ಹಿರಿಯ ನಟ ರಮೇಶ್ ಭಟ್ ನಟಿಸಿದ್ದಾರೆ. ನಿರ್ದೇಶಕನ ಕನಸು ಕಾಣುವ ಪಾತ್ರದಲ್ಲಿ ನಾನು ನಟಿಸಿದ್ದೇನೆ. ನನ್ನ ತಾಯಿ ಪಾತ್ರದಲ್ಲಿ ನಟಿ ಮಂಜುಳಾರೆಡ್ಡಿ ಅವರು ಅಭಿನಯಿಸಿದ್ದಾರೆ. ಅವರು ನಮ್ಮ ಪ್ರಯತ್ನಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಉಳಿದಂತೆ ಮಹೇಶ್, ಸವಿತ, ವಿನಯ್, ಹೇಮಂತ್ ನಟಿಸಿದ್ದಾರೆ.

ಅಶೋಕ್ ರಾಜ್ ‘ಸಿನಿಮಾ’ ಕಣ್ಣಾದರೆ, ಅರ್ಜುನ್ ಸಂಗೀತವಿದೆ. ಮಹೇಶ್ ನಿರ್ಮಾಣವಿದೆ. ಕಥೆ, ಚಿತ್ರಕಥೆ, ಸಂಭಾಷಣೆ, ನಾನೇ ಬರೆದಿದ್ದೇನೆ ಎನ್ನುವ ಉದಯಶಂಕರ್ ಕನ್ನಡ ಸಿನಿಮಾ ರಂಗದಲ್ಲಿ ಸದಭಿರುಚಿಯ ಸಿನಿಮಾ ನಿರ್ದೇಶನ ಮಾಡುವ ಇಂಗಿತ ವ್ಯಕ್ತಪಡಿಸುತ್ತಾರೆ.

Categories
ಸಿನಿ ಸುದ್ದಿ

ಶಿವಣ್ಣ ಅಭಿನಯದ ಘೋಸ್ಟ್ ಶೂಟಿಂಗ್ ಮುಗೀತು: ಇದು ನಿರ್ದೇಶಕ ಶ್ರೀನಿ ಸಿನಿಮಾ

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದೆ.

ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ “ಬೀರ್ ಬಲ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ “ಬೀರ್ ಬಲ್” ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ “ಬೀರ್ ಬಲ್” ಪಾತ್ರದಲ್ಲಿ ಅಭಿನಯಿಸಿರುವುದು, “ಬೀರ್ ಬಲ್ ” ಭಾಗ 2 ಬರಬಹುದಾ ? ಎಂಬ ಪ್ರಶ್ನೆ ಮೂಡಿದೆ.

ಈಗಾಗಲೇ “ಘೋಸ್ಟ್” ಫಸ್ಟ್ ಲುಕ್, “BIG DADDY” ಟೀಸರ್ ಅಭಿಮಾನಿಗಳ ಮನ ಗೆದ್ದಿದೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಿದೆ.

ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಅನಿರುದ್ಧ ಸಿನಿಮಾಗೆ ಪೂಜೆ: ಶೆಫ್ ಚಿದಂಬರನಿಗೆ ಭಾರತಿ ವಿಷ್ಣುವರ್ಧನ್, ಉಪೇಂದ್ರ ಚಾಲನೆ

ನಟ ಅನಿರುದ್ಧ್ ನಾಯಕರಾಗಿ ನಟಿಸುತ್ತಿರುವ, ಎಂ.ಆನಂದರಾಜ್ ನಿರ್ದೇಶನದ “ಶೆಫ್ ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಹನುಮಂತನಗರದ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಹಿರಿಯ ನಟಿ‌ ಭಾರತಿ ವಿಷ್ಣುವರ್ಧನ್ ಕ್ಯಾಮೆರಾ ಚಾಲನೆ ಮಾಡಿದರು.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ.

ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್ ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು.

ನಿರ್ದೇಶಕರು ಹೇಳಿದ ಹಾಗೆ ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಕಾಮಿಡಿಯೊಂದಿಗೆ ಕೌತುಕವು ಇದೆ. ಒಂದು ಕೊಲೆಯ ಸುತ್ತ ಕಥೆ ನಡೆಯುತ್ತದೆ. ನಾನು ಶಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ . ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ.‌ ಕಳೆದ ತಿಂಗಳು ಮೈಸೂರಿನ ಡಾ||ವಿಷ್ಣುವರ್ಧನ್ ಸಮಾಧಿ ಬಳಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು. ಅಂದು ಕೂಡ ಭಾರತಿ ಅಮ್ಮ ಅವರು ಆಗಮಿಸಿದ್ದರು. ಚಿತ್ರದ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ನಿಮ್ಮ ಜೊತೆ ನಾನು ಇದ್ದೀನಿ ಎಂದು ಭರವಸೆ ನೀಡಿದರು.

ಮುಹೂರ್ತ ಸಮಾರಂಭಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅವರು ಆಗಮಿಸಿ ಶುಭ ಕೋರಿದರು. ಎಲ್ಲರಿಗೂ ನನ್ನ ಧನ್ಯವಾದ.‌ ನಿರ್ಮಾಪಕಿ ರೂಪ ಅವರ ಪತಿ ಸರ್ವೋತ್ತಮ ಅವರು ನನ್ನ ಸ್ನೇಹಿತರು. ಅವರಿಗೆ ಕಥೆ ಇಷ್ಟವಾಗಿ , ನಿರ್ಮಾಣ‌ ಮಾಡುತ್ತಿದ್ದಾರೆ ಎಂದು ನಟ ಅನಿರುದ್ಧ್ ತಿಳಿಸಿದರು.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು.‌ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರೂಪ.

ನಾಯಕಿಯರಾದ ನಿಧಿ ಸುಬ್ಬಯ್ಯ, ರೆಚೆಲ್ ಡೇವಿಡ್, ನಟ ರಘು ರಮಣ ಕೊಪ್ಪ ಹಾಗೂ ಛಾಯಾಗ್ರಹಕ ಉದಯ್ ಲೀಲ ಚಿತ್ರದ ಕುರಿತು ಮಾತನಾಡಿದರು.

ಈ ಸ್ಥಳಕ್ಕೆ ಬಂದಾಗ ನಮ್ಮ ಯಜಮಾನರ “ಯಜಮಾನ” ಚಿತ್ರದ ಮುಹೂರ್ತ ಸಮಾರಂಭ ನೆನಪಾಯಿತು. ಆ ಚಿತ್ರದ ಮುಹೂರ್ತ ಕೂಡ ಇಲ್ಲೇ ನಡೆದಿತ್ತು. ಈ ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಭಾರತಿ ವಿಷ್ಣುವರ್ಧನ್ ಹಾರೈಸಿದರು.

ಚಿತ್ರದ ಕ್ಯಾರೆಕ್ಟರ್ ಟೀಸರ್ ಉಪೇಂದ್ರ ಬಿಡುಗಡೆ ಮಾಡಿದರು. ಅನಿರುದ್ದ್ ಅವರ ಪತ್ನಿ ಕೀರ್ತಿ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಸಮಂತಾ-ವಿಜಯ್ ದೇವರಕೊಂಡ ಫುಲ್ ಖುಷಿ! ಸಿನಿಮಾದ ಟ್ರೇಲರ್ ರಿಲೀಸ್ : ಪ್ರೀತಿ, ಪ್ರೇಮ, ಸಂಸಾರ ಜಗಳವೇ ಇಲ್ಲಿ ಹೈಲೆಟ್

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.

ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು.

ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ.

ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲಾ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ.

ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ರಕ್ಷಿತ್ ಸಿನಿಮಾದ ಟೈಟಲ್ ಟ್ರ್ಯಾಕ್ ಗೆ ಫ್ಯಾನ್ಸ್ ಫಿದಾ: ಸಪ್ತ ಸಾಗರದಾಚೆ ಎಲ್ಲೋ ನೋಡಲು ಕಾತರ

ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ” ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಈ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

“ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದ್ದು, ಸೈಡ್ 2 ಅಕ್ಟೋಬರ್ 20ಕ್ಕೆ ತೆರೆ ಕಾಣಲಿದೆ. ಬಹು ನಿರೀಕ್ಷಿತ ಈ ಚಿತ್ರದ ಬಿಡುಗಡೆಗೆ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನ “ಸಪ್ತ. ಸಾಗರದಾಚೆ ಎಲ್ಲೋ” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ದಿಗಂತ್-ಧನ್ಯ ರಾಮ್ ಕುಮಾರ್ ಹಾಡಿನ ಜಡ್ಜ್ ಮೆಂಟ್! ಅದ್ಧೂರಿ ಹಾಡಿಗೆ ದೂದ್ ಪೇಡ ಸ್ಟೆಪ್

ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ಇಂದಿನ ಯುವಜನತೆಯ ಮಧ್ಯೆ ಟ್ರೆಂಡ್ ಆಗುವ “ಪಬ್ ಸಾಂಗ್” ಒಂದನ್ನು “ಡೆಕ್ ಆಫ್ ಬ್ರೆವ್ಯುಸ್” ಪಬ್ ನಲ್ಲಿ “ದ ಜಡ್ಜ್ ಮೆಂಟ್” ಚಿತ್ರಕ್ಕಾಗಿ ಅದ್ಧೂರಿಯಾಗಿ ಚಿತ್ರಿಸಿಕೊಂಡಿದ್ದಾರೆ.

ಈ ಹಾಡಿಗೆ ಹೆಜ್ಜೆ ಹಾಕಿದ್ದು ದಿಗಂತ್ ಮತ್ತು ಧನ್ಯ ರಾಮಕುಮಾರ್. ಇವರಿಬ್ಬರಿಗೂ ಜೊತೆಯಾದವರು ಕಲಾವಿದರಾದ ಅಶ್ವಿನ್, ಸುಶೀಲ್ ನಾಗ್ ಮತ್ತು ಸುವೀಷ್. ಈ ಹಾಡಿಗಾಗಿ ಸುಮಾರು 75 ಜನ ನೃತ್ಯ ಕಲಾವಿದರು ಮತ್ತು 50 ಜನ ಸಹ ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಹಾಡನ್ನು ಸಂಯೋಜಿಸಿದ ಅನೂಪ್ ಸೀಳಿನ್ ಮತ್ತು ಹಾಡು ಬರೆದ ಪ್ರಮೋದ್ ಮರವಂತೆ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಹೊಸತನದ ಹಾಡಿಗಾಗಿ, ಬಾಲಿವುಡ್ ನಿಂದ ಊರ್ವಶಿ ಮತ್ತು ಗೋವಾದಿಂದ ಸಾನಿಯಾರವರನ್ನು, ಸಿನಿಮಾ ತಂಡ ವಿಶೇಷವಾಗಿ ಆಹ್ವಾನಿಸಿದ್ದರು. ಹಾಡಿನ ನೃತ್ಯ ಸಂಯೋಜನೆ ಮಾಡಿದ್ದು ಯುವ ನಿರ್ದೇಶಕ ರಾಮ್ ಕಿರಣ್ ಮತ್ತು ಅವರ ತಂಡ.

“ದ ಜಡ್ಜ್ ಮೆಂಟ್” ಕಥೆ ಲೀಗಲ್ ಥ್ರಿಲ್ಲರ್ ಶೈಲಿಯಾಗಿದ್ದು, ಇಂದಿನ ಪ್ರಸ್ತುತ ವಿದ್ಯಮಾನಗಳನ್ನು, ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು, ಕಥೆ ಹೆಣೆಯಲಾಗಿದೆ. ಈ ಸಿನೆಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವುದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ)ಯವರ ಗಟ್ಟಿ ನಂಬಿಕೆ.

ಕ್ರೇಜಿ ಸ್ಟಾರ್ ಡಾ.ವಿ. ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ ಬೆಳವಾಡಿ, ಕೃಷ್ಣ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ್, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ, ಪ್ರಮೋದ್ ಮರವಂತೆ ಗೀತರಚನೆ ಇದೆ.

ರವಿವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನವಿದೆ. ಎಂ ಎಸ್ ರಮೇಶ್
ಸಂಭಾಷಣೆ ಬರೆದಿದ್ದಾರೆ.
ಸ್ಕ್ರಿಪ್ಟ್ ಸೂಪರವೈಸರ್ ಆಗಿ ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ

error: Content is protected !!