Categories
ಸಿನಿ ಸುದ್ದಿ

ಟೋಬಿ ಫಸ್ಟ್ ಲುಕ್ ಬಂತು: ರಾಜ್ ಬಿ ಶೆಟ್ಟಿ ಸಿನಿಮಾ ಕುತೂಹಲ ತಂತು…

ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಟೋಬಿ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಫಸ್ಟ್ ಲುಕ್ ಬಾರಿ ಕುತೂಹಲ ಮೂಡಿಸಿದೆ. ರಾಜ್ ಬಿ ಶೆಟ್ಟಿ ಫಸ್ಟ್ ಲುಕ್ ನಲ್ಲಿ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಕುರುಚಲು ಗಡ್ಡ, ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ ಹೀಗೆ ಹಲವು ವಿಶೇಷತೆಗಳಗಳ್ಳುಳ ಈ ವಿಭಿನ್ನ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಸದ್ಯ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಟೀಸರ್, ಟ್ರೇಲರ್ ಸದ್ಯದಲ್ಲೇ ಬರಲಿದೆ. ಆಗಸ್ಟ್ 25 ಕ್ಕೆ ಚಿತ್ರ ತೆರೆ ಕಾಣಲಿದೆ.

ಬರಹಗಾರ ಟಿ.ಕೆ.ದಯಾನಂದ್ ‘ಟೋಬಿ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ನಾನು ಕಾರವಾರದಲ್ಲಿ ಕಂಡ ಒಬ್ಬ ವಿಲಕ್ಷಣ ವ್ಯಕ್ತಿತ್ವದ ವ್ಯಕ್ತಿಯ ಕಥೆಯಿದು. ನೀವೊಬ್ಬರನ್ನು ನೋಡಿದಾಗ ಇವರು ಇಂತಹವರು ಅಂತ ಹೇಳಬಹುದು. ಆದರೆ, ಈ ವ್ಯಕ್ತಿಯನ್ನು ಆ ರೀತಿ ಹೇಳಲಾಗದು. ನಾನು ಆತನ ಕುರಿತು ಕಥೆ ಬರೆದಿದ್ದೇನೆ. ಅದು ಈಗ “ಟೋಬಿ” ಚಿತ್ರವಾಗಿದೆ ಎಂದು ಟಿ.ಕೆ.ದಯಾನಂದ್ ತಿಳಿಸಿದರು.
.
ಸಿನಿಮಾ ನೋಡಲು ಬಂದ ಪ್ರೇಕ್ಷಕನಿಗೆ ಮೊದಲು ಸಿನಿಮಾ ಇಷ್ಟ ಆಗಬೇಕು. ಅಂತಹ ಸಿನಿಮಾ ಮಾಡುವ ಆಸೆ ನನಗೆ. “ಟೋಬಿ” ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಎನ್ನಬಹುದು. ನೀವು ಫಸ್ಟ್ ಲುಕ್ ನಲ್ಲಿ ನೋಡುತ್ತಿರುವುದು ಚಿತ್ರದ ಒಂದು ಭಾಗವಷ್ಟೆ. ಇಡೀ ಚಿತ್ರ ಈ ರೀತಿ ಇರುವುದಿಲ್ಲ. ನನಗೆ ಈ ಚಿತ್ರದ ಕಥೆ ಹೊಸತು ಎನಿಸಿತು. ನನ್ನ ಪಾತ್ರ ಕೂಡ ಹಿಂದಿನ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ನನಗೆ ಗೊತ್ತಿಲ್ಲದ ವಿಷಯವನ್ನು ಕಲಿತು ಈ ಚಿತ್ರದಲ್ಲಿ ಹೇಳಿದ್ದೇನೆ. ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ರಾಜ್ ಬಿ ಶೆಟ್ಟಿ.

ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲಂಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋಸ್ ಮತ್ತು ಸ್ಮೂತ್ ಸೈಲರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ನಿರ್ದೇಶಕ ಬಾಸಿಲ್, ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್, ಚಿತ್ರದ ನಾಯಕಿಯರಾದ ಸಂಯುಕ್ತ ಹೊರನಾಡು, ಚೈತ್ರಾ ಆಚಾರ್ ಚಿತ್ರದಲ್ಲಿ ನಟಿಸಿರುವ ಗೋಪಾಲಕೃಷ್ಣ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ, ಶ್ರೀಕಾಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ “ಟೋಬಿ” ಚಿತ್ರದ ಕುರಿತು ಮಾತನಾಡಿದರು‌.

“ಟೋಬಿ” ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ರಾಜ್ ಬಿ ಶೆಟ್ಟಿ ಅವರ ಈ ಹಂದಿನ ಚಿತ್ರಗಳಿಗಿಂತ “ಟೋಬಿ” ಬಿಗ್ ಬಜೆಟ್ ನ ಚಿತ್ರವಾಗಿದೆ.

Categories
ಸಿನಿ ಸುದ್ದಿ

ಗಿನ್ನಿಸ್ ರೆಕಾರ್ಡ್ ಮಾಡೋಕೆ ಹೊರಟ ತಂಡ! ದೇವರ ಆಟ ಬಲ್ಲವರಾರು: ಶೂಟಿಂಗ್ ಶುರು

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿರುತ್ತವೆ. ಇಂತಹ ಸಿನಿಮಾಗಳು ಯಶಸ್ವಿ ಕೂಡ ಆಗಿದೆ. “ದೇವರ ಆಟ ಬಲ್ಲವರಾರು” ಸಿನಿಮಾ ಕೂಡ ಚಿತ್ರೀಕರಣ ಹಂತದಲ್ಲೇ ಸಾಕಷ್ಟು ಭರವಸೆ ಮೂಡಿಸಿದೆ. ಈ ಚಿತ್ರ ವೇಗದ ಸೆಟ್ ವರ್ಕ್ ನಿರ್ಮಾಣ ಮಾಡಿ ಮೊದಲ ಹಂತ ಗಿನ್ನಿಸ್ ದಾಖಲಿಸಿದೆ. ಇಗ ಎರಡನೇ ಹಂತದ ಗಿನ್ನಿಸ್ ಸರದಿ. ಮಡಿಕೇರಿಯಲ್ಲಿ ಮಳೆಯಲ್ಲೇ ರಾತ್ರಿಯಿಂದ ಚಿತ್ರೀಕರಣ ಆರಂಭಿಸಿದೆ ಚಿತ್ರತಂಡ.

ಸಿ ವಿ ರಾಮನ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಜನಾರ್ದನ್ ಪಿ ಜಾನು ಗಿನ್ನಿಸ್ ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ. ಅತೀ ವೇಗದ ಕಮರ್ಷಿಯಿಲ್ ಮೂವಿ ನಿರ್ಮಾಣ ಮಾಡಿ ಗಿನ್ನಿಸ್ ದಾಖಲೆ ಬರೆಯಲು ಚಿತ್ರತಂಡ ಮುಂದಾಗಿದೆ.

ಚಿತ್ರೀಕರಣದ ಸ್ಥಳದಲ್ಲಿಯೇ 30 ದಿನಗಳ ಕಾಲ ಗಿನ್ನಿಸ್ ವೀಕ್ಷೆಣೆಯ ತಂಡದ ಸದಸ್ಯರು ಉಪಸ್ಥಿತರಿರುತ್ತಾರೆ. ಇಂದಿನಿಂದ 30 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ,ಚಿತ್ರವನ್ನು ತರೆಗೆ ತರುವ ಪ್ರಕ್ರಿಯೆ ಆರಂಭವಾಗಿದೆ.

ಮಧ್ಯರಾತ್ರಿ 12ಗಂಟೆಯಿಂದ ಶೂಟಿಂಗ್ ಆರಂಭಿವಾಗಿದೆ. ದಿನದ 24 ಗಂಟೆಯೂ ಶೂಟಿಂಗ್, ಲೈವ್ ಎಡಿಟಿಂಗ್, ರೀರೆಕಾರ್ಡಿಂಗ್ ಎಲ್ಲಾ ಕಾರ್ಯಗಳು ಚಿತ್ರೀಕರಣ ಸ್ಥಳದಲ್ಲಿಯೇ ನಡೆಸಲು ಸಿದ್ಧತೆಯಾಗಿದೆ.

ಯಾವುದೇ ಅಡೆತಡೆ ಯಾಗದಂತೆ ಯೋಜನೆ ಹಾಕಿಕೊಂಡು ಚಿತ್ರಿಕರಣ ಆರಂಭಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಒಟ್ಟು 4 ಕ್ಯಾಮರಗಳು, 150 ಎಕರೆ ವಿಸ್ತೀರ್ಣದ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

Categories
ಸಿನಿ ಸುದ್ದಿ

ಉಪ್ಪಿ ಹುಟ್ದಬ್ಬಕ್ಕೆ ಬುದ್ಧಿವಂತ -2 ರಿಲೀಸ್: ಇದಕ್ಕೂ ಮುನ್ನ ಬರಲಿದೆ ಟೀಸರ್

“ಚಮಕ್”, ” ಅಯೋಗ್ಯ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೊಂದು ಬಹುನಿರೀಕ್ಷಿತ ಚಿತ್ರ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರ “ಬುದ್ದಿವಂತ 2”. ನಿರ್ಮಾಣ ಪೂರ್ಣ ಗೊಂಡಿದ್ದು ಇದೀಗ ಬಿಡುಗಡೆ ಸಮಯವನ್ನು ಚಿತ್ರದ ನಿರ್ಮಾಪಕರು ಬಹಿರಂಗಗೊಳಿಸಿದ್ದಾರೆ.

ಈ ಬಾರಿಯ ಉಪೇಂದ್ರ ಅವರ ಹುಟ್ಟು ಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರವನ್ನು ಬೃಹತ್ ಪ್ರಮಾಣದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಹಾಗು ಬುದ್ದಿವಂತ -2 ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಟೀಸರ್ ಮೂಲಕವೇ ಚಿತ್ರದ ಬಿಡುಗಡೆಯ ದಿನಾಂಕ ಕೂಡ ಘೋಷಣೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ.

ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜಯರಾಮ್ ಮಾಧವನ್ “ಬುದ್ಧಿವಂತ 2” ಚಿತ್ರದ ನಿರ್ದೇಶಕರು. ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಉಪೇಂದ್ರ ಅವರಿಗೆ ನಾಯಕಿಯರಾಗಿ
ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Categories
ಸಿನಿ ಸುದ್ದಿ

ರಿಷಭ್ ಶೆಟ್ಟಿ ನಿರ್ಮಾಣದ ಲಾಫಿಂಗ್ ಬುದ್ಧ ಶೂಟಿಂಗ್ ಮುಕ್ತಾಯ

ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.

ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ.

ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಶಿವಣ್ಣ ಹುಟ್ದಬ್ಬಕ್ಕೆ ಘೋಸ್ಟ್ ಸಿನಿಮಾದ ಬಿಗ್ ಡ್ಯಾಡಿ ವಿಡಿಯೋ ರಿಲೀಸ್

ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.

ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ‌. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದ
“ಘೋಸ್ಟ್” ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.

ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಹಾಸ್ಟೆಲ್ ಹುಡುಗರ ಕೈಲಿ ದೂದ್ ಪೇಡ! ಹಾಸ್ಟೆಲ್ ಹುಡುಗರಿಗೆ ಸಾಥ್ ನೀಡಿದ ದಿಗಂತ್

ಸಿನಿಮಾ ಮಾಡುವುದೇ ಒಂದು ಸಾಹಸ. ಸಿನಿಮಾ ಮಾಡಿ ಜನರಿಗೆ ತಲುಪಿಸುವುದು ಇನ್ನೂ ದೊಡ್ಡ ಸಾಹಸ. ಅದಕ್ಕೆ ಸರಿಯಾದ ರೀತಿಯ ಪ್ರಚಾರದ ಅವಶ್ಯಕತೆ ಬಹುಮುಖ್ಯ. ವಿಶೇಷ ರೀತಿಯ ಚಿತ್ರಕ್ಕೆ ವಿಶಿಷ್ಟ ಪ್ರಕಾರದ ಪ್ರಚಾರ‌ ಬೇಕು. ವಿಶಿಷ್ಟ ರೀತಿಯಲ್ಲಿ ಪ್ರಚಾರ ನಡೆಸುತ್ತಿರುವುದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾತಂಡ. ಆರಂಭದ ದಿನದಿಂದಲೂ ನಾನಾ ಬಗೆಯಲ್ಲಿ ಚಿತ್ರಪ್ರೇಮಿಗಳನ್ನು ಸೆಳೆಯುತ್ತಿರುವ ಈ ಚಿತ್ರಕ್ಕೀಗ ಮತ್ತೊಬ್ಬ ಸ್ಟಾರ್ ಸಾಥ್ ಕೊಟ್ಟಿದ್ದಾರೆ. ಹಾಸ್ಟೆಲ್ ಹುಡುಗರಿಗೆ ದೂದ್ ಪೇಡಾ ಸಿಹಿ ಸಿಕ್ಕಿದೆ. ಅಂದರೆ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪುನೀತ್ ರಾಜಕುಮಾರ್, ರಮ್ಯಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಬೆಂಬಲ ಕೊಟ್ಟಿರುವ ಈ ಚಿತ್ರದಲ್ಲಿ ದಿಗ್ಗಿ ಬಣ್ಣ ಹಚ್ಚಿದ್ದಾರೆ. ಆದರೆ ಅವರ ಪಾತ್ರವೇನೆಂಬುದನ್ನು ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ಜುಲೈ 7ಕ್ಕೆ ದಿಗಂತ್ ಲುಕ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದ್ದಾರೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ.

ಪ್ರತಿ ಬಾರಿ ಯುನಿಕ್ ಕಾನ್ಸಎಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಜುಲೈನಲ್ಲಿ ತೆರೆಗೆ ಬರಲಿದೆ.

Categories
ಸಿನಿ ಸುದ್ದಿ

ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ರಿಲೀಸ್: ಇದು ಕೆಜಿಎಫ್ ತಾತನ ಕೊನೆ ಚಿತ್ರ

ಕೆಮಿಸ್ಟ್ರೀ ಆಫ್ ಕರಿಯಪ್ಪ, ಕ್ರಿಟಿಕಲ್ ಕೀರ್ತನೆಗಳು ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲೊಂದು ಹೊಸ ಭರವಸೆ ಮೂಡಿಸಿದವರು ನಿರ್ದೇಶಕ ಕುಮಾರ್. ಇವರ ಸಾರಥ್ಯದ ಮಗದೊಂದು ಪ್ರಯತ್ನ ನ್ಯಾನೋ ನಾರಾಯಣಪ್ಪ. ಕೆಜಿಎಫ್ ತಾತಾ ಖ್ಯಾತಿಯ ನಟ ದಿವಂಗತ ಕೃಷ್ಣೋಜಿ ರಾವ್ ನಾಯಕನಾಗಿ ನಟಿಸಿರುವ ಈ ಸಿನಿಮಾ ಜುಲೈ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಹಾಸ್ಯದ ಜೊತೆಗೆ ಭಾವಾನತ್ಮಕ ಅಂಶವನ್ನು ಹದವಾಗಿ ಬೆರೆಸಿ ಕುಮಾರ್ ನ್ಯಾನೋ ನಾರಾಯಣಪ್ಪ ಕಥೆ ಹೆಣೆದಿದ್ದಾರೆ.

ಮನಿ ಹಂಟರ್’ ಹಾಡು ಸೂಪರ್
ಬಿಡುಗಡೆ ಹೊಸ್ತಿಲಿನಲ್ಲಿರುವ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಮನಿ ಹಂಟರ್ ಹಾಡು ಬಿಡುಗಡೆಯಾಗಿದೆ. ನಿರ್ದೇಶಕ ಕುಮಾರ್ ಸಾಹಿತ್ಯದ ಸಿಂಗಿಂಗ್ ಗೆ ಅಂಕಿತಾ ಕುಂಡು ಧ್ವನಿಯಾಗಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. ಹಾಟ್ ಅಂಡ್ ಸ್ಪೈ ನಂಬರ್ ಗೆ ಗಿರಿ ಶಿವಣ್ಣ, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ಹೆಜ್ಜೆ ಹಾಕಿದ್ದಾರೆ.

ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ನಡಿ ಕುಮಾರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅನಂತು, ಅಪೂರ್ವಾ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಮಿಡಿ, ಕಾಡುವ ಕಥೆ, ಮನೆ ಮಂದಿಯೆಲ್ಲಾ ಕುಳಿತು ಕಣ್ತುಂಬಿಕೊಳ್ಳುವ ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ಥಿಯೇಟರ್ ಪ್ರವೇಶಿಸಲಿದೆ.

Categories
ಸಿನಿ ಸುದ್ದಿ

ರಾಘವ್ ಲಾರೆನ್ಸ್-ಕಂಗನಾ ಮುಖಾಮುಖಿ! ಗಣೇಶ ಹಬ್ಬಕ್ಕೆ ಚಂದ್ರಮುಖಿ 2 ಚಿತ್ರ: ಇದು ಪಿ. ವಾಸು ನಿರ್ದೇಶನದ ಸಿನಿಮಾ

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಸಂಸ್ಥೆ ಯಿಂದ ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಇದು ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ.

2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನವಿದೆ.

ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

Categories
ಸಿನಿ ಸುದ್ದಿ

ಅಪರೂಪ ಸಿನಿಮಾ ಹಿಂದೆ ಬಂದ ಮಹೇಶ್ ಬಾಬು! ಜುಲೈ 14ಕ್ಕೆ ಹೊಸ ಲವ್ ಸ್ಟೋರಿ ಹೇಳ್ತಾರೆ

ಅರಸು, ಆಕಾಶ್‌, ಅಜಿತ್‌, ಅತಿರಥ, ಅಭಯ್‌ ಸೇರಿದಂತೆ ಹಲವರು ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ‌ ಎನಿಸಿಕೊಂಡಿರುವ ಮಹೇಶ್ ಬಾಬು ಸಾರಥ್ಯದ ಅಪರೂಪ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜುಲೈ 14ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಅಪರೂಪ ಸಿನಿಮಾ ಮೂಲಕ ಸುಘೋಷ್‌ ಮತ್ತು ಹೃತಿಕಾ ಕನ್ನಡ ಸಿನಿಮಾ ಲೋಕಕ್ಕೆ ನಾಯಕ ಹಾಗೂ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಹೊಸ ರೀತಿಯ ಪ್ರೇಮಕಥೆಯಾಗಿರುವ ಅಪರೂಪ ಸಿನಿಮಾದಲ್ಲಿ ನಾಯಕ ನಾಯಕಿಯ ನಡುವೆ ಬರುವ ಅಹಂ ವಿಲನ್‌ ಆಗುತ್ತದೆ. ಅದರಿಂದ ಏನೇನು ತೊಂದರೆ ಉಂಟಾಗುತ್ತದೆ ಅನ್ನೋದು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಾಯಕ ಸುಘೋಷ್ ಮೂಲತಃ ಮಂಡ್ಯದವರು.

ಚಿಕ್ಕಂದಿನಿಂದಲೇ ಸಿನಿಮಾ‌ ಕನಸು ಕಟ್ಟಿಕೊಂಡವರು. ಮಹೇಶ್ ನಿರ್ದೇಶನದ ಅತಿರಥ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅವರ ನಟನೆ ನೋಡಿ ಅಪರೂಪ ಸಿನಿಮಾಗೆ ನಾಯಕರನಾಗಿ ನಟಿಸುವ ಅವಕಾಶ ನೀಡಿದ್ದಾರೆ.

ನೃತ್ಯದಲ್ಲಿಯೂ ಪರಿಣಿತರಾಗಿರುವ ಸುಘೋಷ್, ಕಷ್ಟಕರವಾದ ಸ್ಟೆಪ್ಸ್ ಗಳನ್ನು ಸರಾಗವಾಗಿ ಮಾಡಬಲ್ಲರು. ಅವರು ಹೆಜ್ಜೆ ಹಾಕಿರುವ ‘ಲವ್ ಗೆ ನೋ ನೋ’ ಎಂಬ ಹಾಡು ಈಗಾಗಲೇ ಸಖತ್ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ನಾಯಕಿ ಹೃತಿಕಾ ತೆಲುಗಿನ ಖ್ಯಾತ ನಟಿ ಅಮನಿ ಸಹೋದರನ ಪುತ್ರಿ. ವಿಷ್ಣುವರ್ಧನ್ ನಟನೆಯ ಅಪ್ಪಾಜಿ ಚಿತ್ರದಲ್ಲಿ ಅಮನಿ ನಾಯಕಿಯಾಗಿ ಬಣ್ಣ ಹಚ್ಚಿದ್ದರು.

ಅಶೋಕ್ , ಅರುಣಾ ಬಲರಾಜ್, ಅವಿನಾಶ್, ಕುರಿಪ್ರತಾಪ್ , ದಿನೇಶ್ ಮಂಗಳೂರು, ವಿಜಯ್ ಚೆಂಡೂರು, ಕಡ್ಡಿಪುಡಿ‌ ಚಂದ್ರು, ಮೋಹನ್ ಜುನೇಜಾ ಅಪರೂಪ ಸಿನಿಮಾದ ಭಾಗವಾಗಿದ್ದಾರೆ. ಪ್ರಜ್ವಲ್‌ ಪೈ ಸಂಗೀತ ಹಾಡುಗಳಿಗೆ ಅರ್ಮನ್ ಮಲ್ಲಿಕ್, ಅನಿರುದ್ಧ್ ಶಾಸ್ತ್ರೀ, ಸಂಗೀತ ರವೀಂದ್ರನಾಥ್, ಪ್ರಜ್ವಲ್ ಪೈ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡಿಗೆ ಧ್ವನಿಯಾಗಿರುವುದು ವಿಶೇಷ.

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಕಾಶ್ಮೀರದಲ್ಲಿ ಶೂಟಿಂಗ್ ನಡೆಸಲಾಗಿದ್ದು, ಸೂರ್ಯಕಾಂತ್‌ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಸುಗ್ಗಿ ಸಿನಿಮಾಸ್ ಬ್ಯಾನರ್ ನಡಿ ತಯಾರಾಗಿರುವ ಅಪರೂಪ ಸಿನಿಮಾವನ್ನು ಕೆಆರ್ ಜಿ ಸ್ಟುಡಿಯೋಸ್ ರಾಜ್ಯಾದ್ಯಂತ ವಿತರಣೆ ಮಾಡಲಿದೆ.

Categories
ಸಿನಿ ಸುದ್ದಿ

ಕೋಟೆಯೊಳು ಸುತ್ತಾಡಿದ ಮಾರ್ಗರೇಟ್ ಮತ್ತು ರಾಮಾಚಾರಿ! ಮೊದಲ ಹಂತದ ಶೂಟಿಂಗ್ ಫಿನಿಷ್: ಹೀರೋ ಅಭಿಲಾಶ್ ಖುಷ್…

ಯುವ ಪ್ರತಿಭೆ ಅಭಿಲಾಷ್ ಹಾಗೂ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್, ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.

ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಜಹಾಂಗೀರ್, ಸುಮನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವನಿತಾ ಎಚ್.ಎನ್. ಹಾಗೂ ಹರೀಶ್ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಎರಡನೆ ಹಂತದ ಚಿತ್ರೀಕರಣಕ್ಕೆ ತಯಾರಾಗುತ್ತಿದೆ.

error: Content is protected !!