Categories
ಸಿನಿ ಸುದ್ದಿ

ಆರ್ಯವರ್ಧನ್ ನಿರ್ದೇಶನದ ತುಂಟರು ಚಿತ್ರಕ್ಕೆ ಚಾಲನೆ: ಮಕ್ಕಳ ಸಿನಿಮಾ ಶುರು

ಅನುರಾಗ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಆರ್ಯವರ್ಧನ್ ನಿರ್ದೇಶನದ “ತುಂಟರು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕೆಂಗೇರಿಯ ನವದುರ್ಗಿ ಶ್ರೀ ಗಂಗಮ್ಮ ಹಾಗೂ ಶ್ರೀ ಸೊಲ್ಲಾಪುರದಮ್ಮನವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

“ತುಂಟರು” ಇದು ನನ್ನ ನಿರ್ದೇಶನದ ಮೂರನೇ ಚಿತ್ರ. ಈ ಚಿತ್ರದಲ್ಲಿ ಸುಮಾರು 45 ರಿಂದ 50 ಮಕ್ಕಳು ಅಭಿನಯಿಸುತ್ತಿದ್ದಾರೆ. ಚಿತ್ರದ ನಾಯಕ, ನಾಯಕಿ, ಪೋಷಕಪಾತ್ರಗಳಲ್ಲಿ ಮಕ್ಕಳೆ ಕಾಣಿಸಿಕೊಳ್ಳುತ್ತಿದ್ದಾರೆ‌. “ತುಂಟರು” ಚಿತ್ರಕ್ಕೆ “ಪೋಲಿ ಹುಡುಗರು” ಎಂಬ ಅಡಿಬರಹವಿದೆ .

ಇದೊಂದು ಲವ್ ಜಾನರ್ ನ ಸಿನಿಮಾ. ಮೇ ಹದಿನೈದರಿಂದ ಹದಿನೈದು ದಿನಗಳ ಕಾಲ ಕೆಂಗೇರಿಯ ಕಾಲೋನಿಯೊಂದರಲ್ಲಿ ಚಿತ್ರೀಕರಣ ನಡೆಯಲಿದೆ. ಜೂನ್ ನಲ್ಲಿ ಮಕ್ಕಳಿಗೆ ಶಾಲೆ ಆರಂಭವಾಗುವುದರಿಂದ ಶನಿವಾರ ಹಾಗೂ ಭಾನುವಾರ ಚಿತ್ರೀಕರಣ ಮಾಡುವುದಾಗಿ ನಿರ್ದೇಶಕ ಆರ್ಯವರ್ಧನ್ ತಿಳಿಸಿದ್ದಾರೆ.

ನಿರ್ಮಾಪಕರ ಪೈಕಿ ನಾಗರಾಜ್ ಹಾಗೂ ಕಲಾವಿದರ ಬಳಗದಿಂದ ಸ್ನೇಹ ಚಿತ್ರದ ಕುರಿತು ಮಾತನಾಡಿದರು. ಹರ್ಷ ಕಾಗೋಡ್ ಸಂಗೀತ ನಿರ್ದೇಶನ ಹಾಗೂ ಸೂರ್ಯ ಛಾಯಾಗ್ರಹಣ “ತುಂಟರು” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ತೆಲುಗಿನ ಮಾಸ್ ಮಹಾರಾಜನಿಗೆ ಹ್ಯಾಟ್ರಿಕ್ ಹೀರೋ ಸಾಥ್ :ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಕನ್ನಡ ಫಸ್ಟ್ ಲುಕ್ ಗೆ ಶಿವಣ್ಣ ವಾಯ್ಸ್

ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್ ಕನ್ನಡ ಝಲಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.

ಕರುನಾಡ ಚಕ್ರವರ್ತಿ ಶಿವಣ್ಣ ತಮ್ಮ ಮ್ಯಾಜಿಕಲ್ ವಾಯ್ಸ್ ಮೂಲಕ ಟೈಗರ್ ನಾಗೇಶ್ವರ್ ರಾವ್ ಪ್ರಪಂಚಕ್ಕೆ ನಿಮ್ಮನ್ನು ಕೊಂಡೊಯ್ಯಲಿದ್ದಾರೆ. ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದಾರೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

Categories
ಸಿನಿ ಸುದ್ದಿ

ಮೇ 26ಕ್ಕೆ ಗಂಧದಗುಡಿಯಲ್ಲಿ ಸೈರನ್ ಸೌಂಡು: ಟ್ರೇಲರ್ ಗೆ ಮೆಚ್ಚುಗೆ

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌.

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಡೆಕ್ಕನ್ ಕಿಂಗ್ ಬ್ಯಾನರ್‌ನಲ್ಲಿ ಬಿಜು ಶಿವಾನಂದ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ರಾಜಾ ವೆಂಕಯ್ಯ ಕೆಲಸ ಮಾಡಿದ್ದಾರೆ. “ಸೈರನ್” ಅವರ ನಿರ್ದೇಶನದ ಮೊದಲ ಕನ್ನಡ ಸಿನಿಮಾ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಡಾಲಿ ಧನಂಜಯ್, ‘ಪ್ರವೀರ್ ಶೆಟ್ಟಿ ಅವರನ್ನು ಮೊದಲು ನೋಡಿದಾಗ ಚಿಕ್ಕ ಹುಡುಗ. ಈಗ ಹೀರೋ ಆಗಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಹೆಚ್ಚಾಗಿ ಅವಕಾಶ ಸಿಗಲಿ’ ಎಂದು ಹಾರೈಸಿದರು.

‘ಕನ್ನಡ ಎಂದು ಬಂದಾಗ ಹೋರಾಟ ನೆನಪಾಗುತ್ತದೆ. ನಾನು ಹಲವಾರು ವರ್ಷಗಳಿಂದ ಪ್ರವೀಣ್ ಶೆಟ್ಟಿ ಅವರನ್ನು ನೋಡುತ್ತಾ ಬಂದಿದ್ದೇವೆ. ಅವರ ಮನೆಯಿಂದ ಚಿತ್ರರಂಗಕ್ಕೆ ಒಂದು ಉಡುಗೊರೆಯಾಗಿ ಮಗನನ್ನು ಕೊಡುತ್ತಿದ್ದಾರೆ. ಟ್ರೇಲರ್ ನೋಡಿದಾಗ ಹೊಸ ಹುಡುಗ ಅನಿಸಲಿಲ್ಲ. ಅಷ್ಟು ಚೆನ್ನಾಗಿ ನಟಿಸಿದ್ದಾರೆ ಪ್ರವೀರ್. ಹೊಸದಾಗಿ ಬರುವವರು ಗುರಿ ಇಟ್ಟುಕೊಂಡು ಬರಬೇಕು ಜೊತೆಗೆ ತಾಳ್ಮೆ ಇರಬೇಕು’ ಎಂದರು ರಾಕ್ ಲೈನ್ ವೆಂಕಟೇಶ್.

ಚಿತ್ರದ ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ ‘ನಾನು ಈ ದಿನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದೆ. ಶ್ರೀಮುರಳಿ ಅವರು ಟ್ರೇಲರ್‌ಗೆ ಧ್ವನಿ ಕೊಟ್ಟಿದ್ದು ಮತ್ತಷ್ಟು ಶಕ್ತಿ ಬಂದಿದೆ. ನಿರ್ದೇಶಕರು ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು.

‘ಮೂಲತಃ ನಾನು ಚೆನ್ನೈನವನು. “ಸೈರನ್” ಚಿತ್ರದ ಮೂಲಕ ಪ್ರವೀರ್ ಶೆಟ್ಟಿ ಲಾಂಚ್ ಆಗುತ್ತಿದ್ದಾರೆ. ಒಳ್ಳೆಯ ನಟನಾಗುವ ನಿರೀಕ್ಷೆ ಇದೆ’ ಎಂದರು.

ತಮಿಳು ನಟ ದೀನಾ, ಚಿತ್ರದ ನಾಯಕಿ ಲಾಸ್ಯ, ನಟಿ ಸ್ಪರ್ಶ ರೇಖಾ, ಸಂಗೀತ ನಿರ್ದೇಶಕ ಭಾರದ್ವಾಜ್, ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ರಿಚ್ಚಿಗೆ ಕುನಾಲ್ ಗಾಂಜವಾಲ ದನಿ: ಗೀತ ಸಾಹಿತಿ ಗೌಸ್ ಪೀರ್ ಬರೆದ ಹಾಡು ಮೇ 18ಕ್ಕೆ ರಿಲೀಸ್

ನಾಯಕ ಕಮ್ ನಿರ್ದೇಶಕ ಹೇಮಂತ್ ಕುಮಾರ್ ಅವರು ರಿಚ್ಚಿ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ‘ಕಳೆದು ಹೋಗಿರುವೆ’ ಹಾಡು ಮೇ 18 ರಂದು ಬಿಡುಗಡೆಯಾಗಲಿದೆ. ಗೀತ ಸಾಹಿತಿ ಗೌಸ್ ಫೀರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ.

ಬಹಳ ವರ್ಷಗಳ ನಂತರ ಕುನಾಲ್ ಅವರು ಹಾಡಿರುವ ಕನ್ನಡ ಚಿತ್ರಗೀತೆಯಿದು. ಅಗಸ್ತ್ಯ ಸಂತೋಷ್ ಸಂಗೀತ ನೀಡಿರುವ ಈ ಹಾಡಿಗೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ರಿಚ್ಚಿ ಹಾಗೂ ರಮೋಲಾ‌ ಹೆಜ್ಜೆ ಹಾಕಿದ್ದಾರೆ.

” ರಿಚ್ಚಿ” ಲವ್ ಕಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಚಿತ್ರದ ಹಾಡುಗಳಿಗೂ ಹೆಚ್ಚಿನ ಮಹತ್ವ ನೀಡಲಾಗಿದ್ದು, ಅಗಸ್ತ್ಯ ಸಂತೋಷ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಉತ್ತಮವಾಗಿ ಮೂಡಿಬಂದಿದೆ.

ಚಿತ್ರದ ಮೊದಲ ಹಾಡು ಮೇ ಹದಿನೆಂಟರಂದು ಬಿಡುಗಡೆಯಾಗಲಿದ್ದು, ಜೂನ್ ಅಥವಾ ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ರಿಚ್ಚಿ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಹೈದರಾಬಾದ್ ಸ್ಟುಡಿಯೋದಲ್ಲಿ ರಾಧಿಕಾ ಕುಮಾರಸ್ವಾಮಿ ಚಿತ್ರ ಶುರು: ಅಜಾಗ್ರತ ಸಿನಿಮಾಗೆ ಗಣ್ಯರ ಹಾರೈಕೆ

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ .

Categories
ಸಿನಿ ಸುದ್ದಿ

ಡಬಲ್ ಇಸ್ಮಾರ್ಟ್ ಮೂಲಕ ಮತ್ತೆ ಒಂದಾದ ಪುರಿ ಜಗನ್ನಾಥ್-ರಾಮ್ ಪೋತಿನೇನಿ….2024 ಮಾರ್ಚ್ 8ಕ್ಕೆ ಸಿನಿಮಾ ರಿಲೀಸ್

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿದ್ದಾರೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ.

ನಾಳೆ ರಾಮ್ ಪೋತಿನೇನಿ ಜನ್ಮದಿನ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಟೈಟಲ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಈ ಚಿತ್ರಕ್ಕೆ ಡಬಲ್ ಇಸ್ಮಾರ್ಟ್ ಎಂಬ ಶೀರ್ಷಿಕೆ ಫಿಕ್ಸ್ ಮಾಡಿದ್ದಾರೆ. ಮುಂದಿನ ವರ್ಷ ಅಂದ್ರೆ 2024‌ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ.

ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

ಡಬಲ್ ಇಸ್ಮಾರ್ಟ್ ಪೋಸ್ಟರ್ ನಲ್ಲಿ ರಾಮ್ ಪೋತಿನೇನಿ ರಕ್ತದ ಗುರುತುಗಳ ತ್ರಿಶೂಲ್ ಹಿಡಿದು ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

Categories
ಸಿನಿ ಸುದ್ದಿ

ಹಿರಣ್ಯನಿಗೆ ಕುಂಬಳಕಾಯಿ: ಇದು ರಾಜವರ್ಧನ್ ಅಭಿನಯದ ಚಿತ್ರ

ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.

ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯೂಕ್ತ್ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ.

ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್ ಜೊತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದು, ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಡಿ ವಿಘ್ನೇಶ್ವರ. ಯು ಹಾಗೂ ವಿಜಯ್‌ ಕುಮಾರ್‌ ಬಿ.ವಿ. “ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆಸುತ್ತಿದೆ.

Categories
ಸಿನಿ ಸುದ್ದಿ

ಕನ್ನಡ ಸಿನಿಮಾ ಪಿ ಆರ್ ಓ ಸುಧೀಂದ್ರ ಮಗಳ ಮದ್ವೆಗೆ ಸ್ಯಾಂಡಲ್ವುಡ್ ನಟ- ನಟಿಯರ ಶುಭ ಹಾರೈಕೆ

ಕನ್ನಡ ಚಿತ್ರರಂಗದ ಪ್ರಚಾರಕರ್ತ(ಪಿ ಆರ್ ಓ) ಸುಧೀಂದ್ರ ವೆಂಕಟೇಶ್ ಅವರ ಪುತ್ರಿ ಚಿ.ಸೌ. ಚಂದನ‌ ವಿವಾಹ ಚಿ.ರಾ.ಪ್ರಸನ್ನ ಭಾಸ್ಕರ್ ಅವರೊಂದಿಗೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ಕನ್ನಡ‌ ಸಿನಿಮಾ ತಾರೆಯರ ದಂಡೇ ಆಗಮಿಸಿ, ನೂತನ ವಧು ವರರಿಗೆ ಹರಸಿತು.

ಈ ವೇಳೆ ಕನ್ನಡ ಸಿನಿಮಾ ರಂಗದ ಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಧ್ರುವ ಸರ್ಜಾ, ಅಜೇಯ್ ರಾವ್ , ವಿನೋದ್ ಪ್ರಭಾಕರ್, ಹಂಸಲೇಖ ದಂಪತಿ, ಸುಧಾರಾಣಿ, ರಾಗಿಣಿ ದ್ವಿವೇದಿ, ಚಾಂದಿನಿ,

ಅಮೂಲ್ಯ, ಸೋನು ಗೌಡ , ಪ್ರಗತಿ ರಿಷಭ್ ಶೆಟ್ಟಿ, ಶ್ರೀನಿವಾಸಮೂರ್ತಿ, ರಮೇಶ್ ಭಟ್, ಧರ್ಮ, ತಬಲ ನಾಣಿ, ಶ್ರೀನಾಥ್, ಕೀರ್ತಿ ರಾಜ್, ಧರ್ಮ ಕೀರ್ತಿರಾಜ್, ಸಿಹಿಕಹಿ ಚಂದ್ರು, ಬಿ.ಸುರೇಶ್,

ಗುರುದತ್, ರವಿಚೇತನ್ ನಿರ್ಮಾಪಕರಾದ ಸಾ.ರಾ.ಗೋವಿಂದು, ಎಸ್.ಎ.ಚಿನ್ನೇಗೌಡ, ಎಸ್ ವಿ ಬಾಬು, ಎಂ.ಜಿ.ರಾಮಮೂರ್ತಿ, ಟಿ.ಪಿ.ಸಿದ್ದರಾಜು, ಶೈಲಜಾ ನಾಗ್ ಅಗಮಿಸಿದ್ದರು

ಇವರೊಂದಿಗೆ ರಾಜಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಆರ್ ಚಂದ್ರು, ಟಿ.ಎನ್ ಸೀತಾರಮ್, ಬಹದ್ದೂರ್ ಚೇತನ್, ಸಾಹಸ ನಿರ್ದೇಶಕ ರವಿವರ್ಮ,

ಗಾಯಕಿಯರಾದ ಮಂಜುಳಾ ಗುರುರಾಜ್, ಬಿ.ಆರ್ ಛಾಯಾ, ಸಂಗೀತ ಕಟ್ಟಿ ಸೇರಿದಂತೆ ಮುಂತಾದ ಚಿತ್ರರಂಗದ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧು-ವರರನ್ನು ಆಶೀರ್ವದಿಸಿದರು.

Categories
ಸಿನಿ ಸುದ್ದಿ

ಅನ್ನ ಹಾಕುವ ಕೈಗೆ ಜೈ ಅನ್ನಿ! ಇದು ದಣಿವ ಮನಸ್ಸಿನ ಚಿತ್ರಣ : ಶ್ರೀಮಂತ ಚಿತ್ರ: ಮೇ 19ಕ್ಕೆ ಜನರ ಹತ್ರ

ಈಗ ಎಲ್ಲೆಲ್ಲೂ ಎಲೆಕ್ಷನ್ ಜ್ವರ. ಚುನಾವಣೆ ಕಾವು ಜೋರಾಗಿಯೇ ಇದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಸಿನಿಮಾ ಜಪ ಸುಳ್ಳಲ್ಲ. ಹೌದು, ಎಲೆಕ್ಷನ್ ಸಲುವಗಿ ಕನ್ನಡ‌ ಸಿನಿಮಾಗಳ ಬಿಡುಗಡೆ ಪರ್ವ ಮುಂದೆ ಹೋಗಿತ್ತು. ಈಗ ಚುನಾವಣೆ ಮುಗಿಯೋ ಸಮಯ. ಮೇ 10 ಕ್ಕೆ ಎಲೆಕ್ಷನ್, ಮೇ 13 ಕ್ಕೆ ಕೌಂಟ್. ಇದಾದ ಬಳಿಕ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿವೆ.

ಹಾಗೆ ಸಾಲುಗಟ್ಟಿ ನಿಂತಿರುವ ಸಿನಿಮಾಗಳು ಸಾಕಷ್ಟಿವೆ. ಆದರೆ,ಆ ಪೈಕಿ ಕೊಂಚ ಗಮನ ಸೆಳೆದಿರುವ ಮತ್ತು ಕುತೂಹಲ ಕೆರಳಿಸಿರುವ ಸಿನಿಮಾ ‘ಶ್ರೀಮಂತ. ಈ’ ಶೀರ್ಷಿಕೆ ಕೇಳಿದೊಡನೆ ಇದ್ಯಾವುದೋ ಪಕ್ಕಾ‌ ಅದ್ಧೂರಿಯ ಮಾಸ್ ಸಿನಿಮಾ ಎನಿಸಬಹುದು. ಆದರೆ, ಇದು ಅದ್ಧೂರಿ ಸಿನಿಮಾ‌ವಂತೂ ಹೌದು, ಅದಕ್ಕೆ ತಕ್ಕಂತೆ ಕ್ಲಾಸ್ ಸಿನಿಮಾ ಕೂಡ. ಶ್ರೀಮಂತ ಒಂದು ರೈತರ ಹಿನ್ನೆಲೆ ಇರುವ ಸಿನಿಮಾ. ಈ ಚಿತ್ರ ಮೇ.19ಕ್ಕೆ ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ.

ಚಿತ್ರದ ಮುಖ್ಯ ಆಕರ್ಷಣೆ ಹಂಸಲೇಖ ಹಾಗು ಎಸ್ ಪಿ ಬಿ ಕಾಂಬಿನೇಷನ್ ಹಾಡುಗಳು. ಈ ಸಿನಿಮಾಗೆ ಹಂಸಲೇಖ ಅವರ ಸಂಗೀತವಿದೆ.

ಹಂಸಲೇಖ ಹಾಗು ಎಸ್ ಪಿ ಬಿ ಜೊತೆಗಿನ ಕಾಂಬಿನೇಷನ್ ಹಾಡುಗಳನ್ನು ಮರೆಯೋಕೆ ಸಾಧ್ಯವಿಲ್ಲ. ಎಸ್ ಪಿ ಬಿ ಹಾಡಿದ ಕೊನೆಯ ಗೀತೆ ಶ್ರೀಮಂತ ಸಿನಿಮಾದಲ್ಲಿದೆ ಎಂಬುದು ವಿಶೇಷ.

ಇನ್ನು ನಿರ್ದೇಶಕ ಹಾಸನ ರಮೇಶ್ ತಮ್ಮ ‘ಶ್ರೀಮಂತ’ ಸಿನಿಮಾ ಮೂಲಕ ರೈತನೇ ನಿಜವಾದ ಶ್ರೀಮಂತ ಎಂದು ತೋರಿಸಿದ್ದಾರೆ.

ಈಗಾಗಲೇ ಸಿನಿಮಾ ತಂಡ ಬಿಡುಗಡೆಗೂ ಮುನ್ನ ಭರ್ಜರಿ ಪ್ರಚಾರ ಮಾಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಶ್ರೀಮಂತ ರೈತನಿಗೆ ಭರಪೂರ ಹೊಗಳಿಕೆ ಸಿಕ್ಕಿದೆ.

ಚಿತ್ರದ ಮತ್ತೊಂದು ವಿಶೇಷ ಅಂದರೆ, ರಿಯಲ್ ಹೀರೋ ಸೋನುಸೂದ್ ಅವರು ರೈತರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹೊಸ ಕಲಾವಿದರ ಸಮ್ಮಿಲನ ಚಿತ್ರದಲ್ಲಿದೆ.

ದೇಶದಲ್ಲಿ ಶೇ.80ರಷ್ಟು ರೈತರಿದ್ದಾರೆ. ಈ ಥಾಟ್ ಇಟ್ಟುಕೊಂಡು ಮಾಡಿರುವ ಸಂಗೀತಮಯ ಚಿತ್ರವಿದು. ಚಿತ್ರದಲ್ಲಿ ಮನರಂಜನಾತ್ಮಕ ಅಂಶಗಳಿವೆ.

ನಾರಾಯಣಪ್ಪ, ಸಂಜಯ್‌ಬಾಬು ಹಾಗೂ ಹಾಸನ್ ರಮೇಶ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.

ಇನ್ನು, ಯುವ ನಟ ಕ್ರಾಂತಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ನಾಯಕಿಯರಾಗಿ ಮುಂಬೈ ಬೆಡಗಿ ವೈಷ್ಣವಿ ಪಟುವರ್ಧನ್ , ವೈಷ್ಣವಿ ಚಂದ್ರನ್ ಮೆನನ್ ಇದ್ದಾರೆ. ಅಲ್ಲದೆ ನಟ ಚರಣರಾಜ್ ಇಲ್ಲೊಂದು ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ನಟಿ ಕಲ್ಯಾಣಿ ಇಲ್ಲಿ ನಾಯಕನ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಸಾಧುಕೋಕಿಲ, ರಮೇಶ್ ಭಟ್, ಕುರಿ ರಂಗ ಇತರರು ಇದ್ದಾರೆ. ಕೆ.ಎಂ.ವಿಷ್ಣುವರ್ಧನ್ ಹಾಗೂ ರವಿಕುಮಾರ್ ಸನಾ ಅವರು ಕ್ಯಾಮೆರಾ ಹಿಡಿದಿದ್ದಾರೆ. ಮಾಸ್ ಮಾದ ಸಾಹಸವಿದೆ. ಮದನ್ ಹರಿಣಿ, ಮೋಹನ್ ಅವರ ನೃತ್ಯ ನಿರ್ದೇಶನವಿದೆ. ಕೆ.ಎಂ. ಪ್ರಕಾಶ್ ಸಂಕಲನ ಮಾಡಿದ್ದಾರೆ.

ಒಂದೊಳ್ಳೆಯ ಕಥಾ ಹಂದರದ ಈ ಸಿನಿಮಾ ನೋಡಲು ರೈತಾಪಿ ವರ್ಗ ಕೂಡ ಕಾದಿದೆ. ಮೇ 19 ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸಲಿದ್ದು, ಶ್ರೀಮಂತನನ್ನು ಕಣ್ತುಂಬಿಕೊಳ್ಳುವ ಸರದಿ ಪ್ರೇಕ್ಷಕರದ್ದು.

Categories
ಸಿನಿ ಸುದ್ದಿ

ರಾಧಿಕಾ ಕುಮಾರಸ್ವಾಮಿ ಅಭಿನಯದ ಹೊಸ ಚಿತ್ರ ಅಜಾಗ್ರತ: ವಿಭಿನ್ನ ಕಥೆ ಸಿನಿಮಾ ಮೇ 13ಕ್ಕೆ ಶುರು

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಮೇ 13 ರಂದು ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ‌.

ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಯುವ ನಿರ್ದೇಶಕ ಎಂ.ಶಶಿಧರ್ ನಿರ್ದೇಶಿಸುತ್ತಿದ್ದಾರೆ.

ಎಂ.ಎಸ್.ಸಿ ಇನ್ ಫಿಲಂ ಮೇಕಿಂಗ್ ಕಲಿತಿರುವ ನಿರ್ದೇಶಕ ಶಶಿಧರ್ ವಿ, ಎಫ್ ಎಕ್ಸ್ ನಲ್ಲೂ ಪರಿಣತಿ ಹೊಂದಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ “ಘಾರ್ಗ” ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ.

“ಅಜಾಗ್ರತ ” ಒಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ನೇರ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ.

ಕನ್ನಡ ಚಿತ್ರರಂಗದ ರಾಧಿಕಾ ಕುಮಾರಸ್ವಾಮಿ, ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು .
ಹಾಗೆ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಕಾಲಿವುಡ್ ನಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ್ ಪ್ರಕಾಶ್ ಮತ್ತು ಬಾಲಿವುಡ್ ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಚಿತ್ರ ಪ್ರೇಮಿಗಳಿಗೆ ಹೊಸ ಅನುಭವ ಕೊಡಲು ಅವರವರ ಭಾಷೆ ಯಲ್ಲಿ ಚಿತ್ರೀಕರಿಸಿ, ಅವರವರಭಾಷೆ ಯಲ್ಲೇ “ಅಜಾಗ್ರತ ” ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ನಡೆಸಿದೆ..

error: Content is protected !!