Categories
ಸಿನಿ ಸುದ್ದಿ

ಮಳೆ ಹುಡುಗಿಯ ಹಾಲು ಜೇನು ! ಪೂಜಾಗಾಂಧಿ ಧ್ವನಿಯಲ್ಲಿ ಹೊರ ಬಂದ ಸ್ವರ ಮಾಧುರ್ಯ…

ಮುಂಗಾರು ಮಳೆ ಕನ್ನಡ ಚಿತ್ರರಂಗದ ಯಶಸ್ವಿ ಸಿನಿಮಾ. ಆ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಸ್ಪರ್ಶಿಸಿದ ನಾಯಕಿ ಪೂಜಾಗಾಂಧಿ. ನೋಡ ನೋಡುತ್ತಿದ್ದಂತೆಯೇ ಪೂಜಾಗಾಂಧಿ ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುವ ಮೂಲಕ ಅಪ್ಪಟ ಕನ್ನಡದ ಹುಡುಗಿಯಾಗಿ ಗಮನ ಸೆಳೆದರು. ಒಂದಷ್ಟು ಸಿನಿಮಾಗಳ ಬಳಿಕ ಪೂಜಾಗಾಂಧಿ ನಟನೆಗೆ ಬ್ರೇಕ್ ಕೊಟ್ಟಿದ್ದು ನಿಜ.

ನಂತರ, ಪೂಜಾಗಾಂಧಿ ಎಲ್ಲೋ ಕಳೆದು ಹೋದರು ಅಂದುಕೊಳ್ಳುತ್ತಿದ್ದಂತೆಯೇ, ಮಳೆ ಹುಡುಗಿ ಪೂಜಾಗಾಂಧಿ, ನಾನಿಲ್ಲೇ ಇದ್ದೇನೆ. ಈಗ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಕಲಿತಿದ್ದೇನೆ ಅಂತ ಹೇಳಿ ನಾನೂ ಕೂಡ ಈಗ ಕನ್ನಡತಿಯೇ ಅಂತ ಬೀಗಿದ್ದರು. ಅವರ ಕನ್ನಡ ಪ್ರೀತಿಗೆ ಬಹಳಷ್ಟು ಕನ್ನಡಿಗರು ಮೆಚ್ಚಿ ಜೈ ಪೂಜಾ ಅಂದಿದ್ದರು.

ಈಗ ಪೂಜಾಗಾಂಧಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮತ್ತಷ್ಟು ಕನ್ನಡಿಗರಿಗೆ ಇಷ್ಟವಾಗಿದ್ದಾರೆ. ಅದಕ್ಕೆ ಕಾರಣ, ಅವರು ಕನ್ನಡ ಹಾಡೊಂದನ್ನು ಹಾಡಿರುವುದು.
ಹೌದು, ಪೂಜಾಗಾಂಧಿ ಕನ್ನಡ ಓದುವುದು, ಬರೆಯುವುದಷ್ಟೇ ಅಲ್ಲ, ನಾನು ಕೂಡ ಹಾಡ್ತೀನಿ ಅಂತ ಹಾಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.

ಅಂದಹಾಗೆ, ಪೂಜಾಗಾಂಧಿ ಧ್ವನಿಯಾಗಿರೋದು ‘ಚಲಿಸುವ ಮೋಡಗಳು’ ಚಿತ್ರದಲ್ಲಿ ಚಿ.ಉದಯಶಂಕರ್ ಬರೆದಿರುವ ಡಾ.ರಾಜಕುಮಾರ್ ಅವರು ಹಾಡಿರುವ ‘ಜೇನಿನ ಹೊಳೆಯೋ’ ಹಾಡನ್ನು ಪೂಜಾಗಾಂಧಿ, ಅನ್ ಪ್ಲಗ್ಗಡ್ ವರ್ಷನ್ ಆಫ್ ಜೇನಿನ ಹೊಳೆಯೋ’ ಹಾಡು ಹಾಡಿದ್ದಾರೆ.

ಅರ್ಜುನ್ ಜನ್ಯ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಈ ಹಾಡು ಹಾಡಿರುವ ಪೂಜಾಗಾಂಧಿ ತಮ್ಮ ಕಂಠದ ಮೂಲಕ ಮಾಧುರ್ಯವಾಗಿ ಹಾಡುವ ಪ್ರಯತ್ನ ಮಾಡಿದ್ದಾರೆ.
ಅವರು ಹಾಡಿಗೆ ಚಂದನ್ ಗೌಡ ಕ್ಯಾಮೆರಾ ಹಿಡಿದರೆ, ಕಿರಣ್ ಗೌಡ ಸಂಕಲನ ಮಾಡಿದ್ದಾರೆ.

Categories
ಸಿನಿ ಸುದ್ದಿ

ಸುಪ್ರೀಮ್ ಹೀರೋ ಮಗನ ಸುಪರ್ ಚಿತ್ರ: ಫೆ.17ಕ್ಕೆ ಖೆಯೊಸ್ ರಿಲೀಸ್…

‌‌ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್.
ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ವಿಶೇಷವೆಂದರೆ ಸುಪ್ರೀಂ ಹೀರೋ ಶಶಿಕುಮಾರ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಪ್ಪ – ಮಗ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.‌ ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು.


ಮೂಲತಃ ವೈದ್ಯರಾಗಿರುವ ಡಾ.ಜಿ.ವಿ.ಪ್ರಸಾದ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ‌ ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಅಕ್ಷಿತ್ ಶಶಿಕುಮಾರ್ ಹಾಗೂ ಅದಿತಿ ಪ್ರಭುದೇವ ಅವರದು ಈ ಚಿತ್ರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪಾತ್ರ.
ಅಲ್ಲದೆ ಹಿರಿಯನಟ ಶಶಿಕುಮಾರ್ ಸಹ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ವಿಶೇಷ ಅತಿಥಿಗಳಾಗಿ ವಿನೋದ್ ಪ್ರಭಾಕರ್, ನಿರಂಜನ್ ಸುಧೀಂದ್ರ ಹಾಗೂ ಮಂಜು ಪಾವಗಡ ಆಗಮಿಸಿದ್ದರು. ನಟ ಶಶಿಕುಮಾರ್ “ಖೆಯೊಸ್” ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ, ಯಜಮಾನ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದರು. ನಟ ವಿನೋದ್ ಪ್ರಭಾಕರ್ ಚಿತ್ರತಂಡವನ್ನು ಅಭಿನಂದಿಸುವ ಮೂಲಕ ಹೊಸಬರ ಪ್ರಯತ್ನಕ್ಕೆ ಬೆನ್ನು ತಟ್ಟಿದರು.


ಗಾಯಕ ಶಶಾಂಕ್ ಶೇಷಗಿರಿ, ಸಂಗೀತ ನಿರ್ದೇಶಕ ವಿಜಯ್ ಹರಿತ್ಸ, ನಟರಾದ ಶಿವಾನಂದ್, ಆರ್.ಕೆ. ಚಂದನ್, ಡಾ.ಸುಮಿತ್ ತಲ್ವಾರ್, ನಟಿ ಗಗನ, ಛಾಯಾಗ್ರಾಹಕ ಸಂದೀಪ್ ವಲ್ಲೂರಿ ಮುಂತಾದವರು ಚಿತ್ರದ ಕುರಿತಂತೆ ಮಾತನಾಡಿದರು.
ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ನಿರ್ಮಾಪಕಿ ಪಾರೂಲ್ ಅಗರ್‌ವಾಲ್ ಚಿತ್ರದ ಆಶಯಗಳನ್ನು ವಿವರಿಸಿದರೆ, ನಿರ್ದೇಶಕ ಜಿ.ವಿ.ಪ್ರಸಾದ್ ಅವರು ಚಿತ್ರದ ಶೀರ್ಷಿಕೆ ಮತ್ತು ಅದನ್ನು ಚಿತ್ರದಲ್ಲಿ ಬಳಸಿಕೊಂಡಿರುವುದರ ಬಗ್ಗೆ ಹೇಳಿದರು.


ನಾಯಕ ಅಕ್ಷಿತ್ ಶಶಿಕುಮಾರ್ ಮಾತನಾಡಿ ಚಿತ್ರಕ್ಕೆ ಪ್ರತಿಯೊಬ್ಬರು ನೀಡಿದ ಸಹಕಾರವನ್ನು ನೆನೆಯುತ್ತಾ, ಇದು ನನ್ನ ಎರಡನೇ ಚಿತ್ರ. ದಯವಿಟ್ಟು ಎಲ್ಲರೂ ಪ್ರೋತ್ಸಾಹಿಸಿ ಎಂದರಲ್ಲದೆ ನಾನು ಅಪ್ಪನ ನೆರಳಿನಲ್ಲಿ ಅರಳಿದರೂ ಬೆಳೆಯಲು ಬೇರೆ ಆಶ್ರಯ ಬೇಕಾಗುತ್ತದೆ. ಈ ವಿಷಯದಲ್ಲಿ ಸ್ನೇಹಿತರು ಅತ್ಯಂತ ಸಹಕಾರ ನೀಡುತ್ತಿದ್ದಾರೆ ಎಂದರು.

Categories
ಸಿನಿ ಸುದ್ದಿ

ಲಂಕಾಸುರನಿಗೆ ಕನಸಿನ ರಾಣಿ ಸಾಥ್: ಮಾರ್ಡನ್ ಮಹಾಲಕ್ಷ್ಮಿ ಹಾಡು ರಿಲೀಸ್…

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ.

A2 ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಇತ್ತೀಚಿಗೆ ಅದ್ದೂರಿಯಾಗಿ ನಡೆದ ಈ ಹಾಡು ಬಿಡುಗಡೆ ಸಮಾರಂಭದಲ್ಲಿ ಹಿರಿಯ ನಟಿ ಶೃತಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕ ಎಂ.ಜಿ.ರಾಮಮೂರ್ತಿ, ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು.

ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಮಾಲಾಶ್ರೀ ಹಾರೈಸಿದರು.

ನಾನು ಪ್ರಭಾಕರ್ ಅವರ ಜೊತೆ ನಟಿಸಿದ್ದೆ. ಈಗ “ಮಾದೇವ” ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದೇನೆ.‌ “ಲಂಕಾಸುರ” ಚಿತ್ರದ ಮೂಲಕ ವಿನೋದ್ ಹಾಗೂ ನಿಶಾ ನಿರ್ಮಾಪಕರು ಆಗಿದ್ದಾರೆ ಒಳ್ಳೆಯದಾಗಲಿ ಎಂದರು ನಟಿ ಶೃತಿ.

ನಟ ಶ್ರೀನಗರ ಕಿಟ್ಟಿ‌, ನಿರ್ಮಾಪಕ ಎಂ.ಜಿ.ರಾಮಮೂರ್ತಿ ಸೇರಿದಂತೆ ಅನೇಕ ಗಣ್ಯರು ತಮ್ಮ ಮಾತುಗಳ ಮೂಲಕ ಶುಭ ಕೋರಿದರು.

ಇಡೀ ಚಿತ್ರತಂದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ನೋಡಿ ಹಾರೈಸಿ ಎಂದರು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್.

ಕೊರೋನ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ “ಲಂಕಾಸುರ” ಚಿತ್ರ ಆರಂಭಿಸಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ಟೀಸರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ, ಲೋಗೊ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾನು ಆಭಾರಿ. ನನ್ನ ಇಡೀ ಚಿತ್ರತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ‌. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹ ನೀಡಿ ಎಂದರು ನಾಯಕ ವಿನೋದ್ ಪ್ರಭಾಕರ್.

ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. “ಮಾರ್ಡನ್ ಮಹಾಲಕ್ಷ್ಮಿ” ಹಾಡನ್ನು ನಾನೇ ಹಾಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಹೇಳಿದರು.

ನಿರ್ದೇಶಕ ಪ್ರಮೋದ್ ಕುಮಾರ್, ಛಾಯಾಗ್ರಾಹಕ ಸುಜ್ಞಾನ್, ನೃತ್ಯ ನಿರ್ದೇಶಕ ಭಜರಂಗಿ ಮೋಹನ್ ಮುಂತಾದವರು “ಲಂಕಾಸುರ” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಫೆಬ್ರವರಿ 24ಕ್ಕೆ ಮೇರಿ ತೆರೆಗೆ: ಟ್ರೇಲರ್ ಹೊರ ಬಂತು…

‘ಆನ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಎರಡನೇ ಸಿನಿಮಾ ವೆಂಚರ್ ‘ಮೇರಿ’. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಹೊತ್ತು ಬಂದ ಚಿತ್ರತಂಡ ಸಿನಿಮಾ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ.

‘ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ವಿಕಾಸ್ ಉತ್ತಯ್ಯ, ಅನೂಷ ಕೃಷ್ಣ, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮಾ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ.

ನಿರ್ದೇಶಕ ಮನೋಜ್ ಪಿ ನಡುಲುಮನೆ ಮಾತನಾಡಿ, ‘ಮೇರಿ’ ಒಂದು ತಂಡದ ಪರಿಶ್ರಮ. ಥ್ರಿಲ್ಲರ್ ಸಬ್ಜೆಕ್ ಸಿನಿಮಾ. ಪೊಲೀಸ್ ಠಾಣೆಯಲ್ಲಿ ನಡೆಯುವ ಘಟನೆ ಚಿತ್ರದಲ್ಲಿದೆ. ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲೆಯ ಕಾಡು ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್ ಠಾಣೆಗೆ ಹೊಸದಾಗಿ ಅಪಾಯಿಂಟ್ ಆದ ಎಸ್ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್ ಆಗಿದೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಅನ್ನೋದು ಈ ಸಿನಿಮಾದ ಎಳೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ನೋಡಿ ಚಿತ್ರತಂಡಕ್ಕೆ ಸಪೋರ್ಟ್ ಮಾಡಿ ಎಂದು ತಿಳಿಸಿದರು.

ನಟ ವಿಕಾಶ್ ಉತ್ತಯ್ಯ ಮಾತನಾಡಿ, ಈ ಚಿತ್ರದಲ್ಲಿ ಎಸ್ ಐ ಪಾತ್ರ ಮಾಡಿದ್ದೇನೆ. ರವಿಕುಮಾರ್ ಪಾತ್ರದಲ್ಲಿ ನಟಿಸಿದ್ದೇನೆ. ಆನ ಸಿನಿಮಾದಲ್ಲೂ ಲೀಡ್ ಆಗಿ ಮಾಡಿದ್ದೇನೆ. ಸೆಕೆಂಡ್ ಲಾಕ್ ಡೌನ್ ನಲ್ಲಿ ಮನೋಜ್ ಈ ಚಿತ್ರದ ಸ್ಕ್ರಿಪ್ಟ್ ರೆಡಿ ಮಾಡಿದ್ದರು. ತುಂಬಾ ವಿಭಿನ್ನವಾಗಿ ಸಿನಿಮಾ ಮೂಡಿ ಬಂದಿದೆ. ಎಲ್ಲರೂ ಸಿನಿಮಾ ನೋಡಿ ಸಪೋರ್ಟ್ ಮಾಡಿ ಎಂದರು.

ನಟಿ ತೇಜಸ್ವಿನಿ ಶರ್ಮಾ ಮಾತನಾಡಿ ನನ್ನ ಪಾತ್ರ ಸಿನಿಮಾ ರಿಲೀಸ್ ಆದ ಮೇಲೆ ಮಾತನಾಡುವ ಹಾಗಿದೆ. ತುಂಬಾ ಯೂನೀಕ್ ಆಗಿದೆ ನನ್ನ ಕ್ಯಾರೆಕ್ಟರ್. ಎಲ್ಲರೂ ಚಿತ್ರತಂಡಕ್ಕೆ ಸಪೋರ್ಟ್ ಮಾಡಿ ಎಂದರು.

ನಟಿ ಅನೂಷ ಕೃಷ್ಣ ಮಾತನಾಡಿ ನನ್ನ ಕ್ಯಾರೆಕ್ಟರ್ ತುಂಬಾ ಚೆನ್ನಾಗಿ ನಿರ್ದೇಶಕರು ಬರೆದಿದ್ದಾರೆ. ಈ ಪಾತ್ರ ನಾನೇ ಮಾಡಬೇಕು ಎಂದು ನಿರ್ದೇಶಕರ ಬಳಿ ಹೇಳಿದ್ದೆ ಅಷ್ಟು ಸ್ಟ್ರಾಂಗ್ ಆಗಿದೆ ಪಾತ್ರ. ಎಲ್ಲರೂ ತುಂಬಾ ಪರಿಶ್ರಮದಿಂದ ಈ ಸಿನಿಮಾ ಮಾಡಿದ್ದೇವೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ತಿಳಿಸಿದರು.

ನಿರ್ಮಾಪಕ ರನ್ವಿತ್ ಶಿವಕುಮಾರ್ ಮಾತನಾಡಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಚಿತ್ರದ ಟೆಕ್ನಿಶಿಯನ್ ಗಳು ನಿರ್ದೇಶಕ ವಿಷನ್ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಕಲಾವಿದರು ಕೂಡ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಸಿನಿಮಾ ನೋಡಿ ತಂಡಕ್ಕೆ ಸಪೋರ್ಟ್ ಮಾಡಿ ಎಂದರು.

ವಿನೋದ್ ಭಾರತಿ ಛಾಯಾಗ್ರಹಣ, ಸೂರಜ್ ಜೋಯ್ಸ್ ಸಂಗೀತ ನಿರ್ದೇಶನ, ನಾಗೇಂದ್ರ ಉಜ್ಜನಿ ಸಂಕಲನ ಚಿತ್ರಕ್ಕಿದೆ. ಡಿಕೆಎಸ್ ಸ್ಟುಡಿಯೋಸ್ ಬ್ಯಾನರ್ ನಡಿ ರನ್ವಿತ್ ಶಿವಕುಮಾರ್, ಹರೀಶ್ ಜಿ.ಬಿ ಮೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Categories
ಸಿನಿ ಸುದ್ದಿ

ಹೊಟ್ಟೆಪಾಡಿನ ಹಾಡು! ನಾಯಕನಾಗೋ ಆಸೆ ಹೊಟ್ಟೆಪಾಡು ಮೂಲಕ ನನಸು…

ವಂದನ ಎಂಟರ್ ಪ್ರೈಸಸ್ ಬ್ಯಾನರ್ ನಲ್ಲಿ ಡಿ.ವಿ.ರಾಧ ಅವರು ನಿರ್ಮಿಸಿರುವ, ವಸಂತ್ ಸಂಗೀತ ನಿರ್ದೇಶನ, ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ಹೊಟ್ಟೆಪಾಡು” ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿ ಸಿಂಗ್, ಅಡಕಮಾರನಹಳ್ಳಿ ರಾಜಕೀಯ ಮುಖಂಡರಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ ಸೇರಿದಂತೆ ಅನೇಕ ಗಣ್ಯರು, ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಟ್ರೇಲರ್ ಸಹ ಬಿಡುಗಡೆಯಾಗಿದ್ದು, ಜನಮನ ಗೆದ್ದಿದೆ.

ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದೆ. ಈಗ “ಹೊಟ್ಟೆಪಾಡು” ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಶ್ರೀಮತಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. “ಹೊಟ್ಟೆಪಾಡು” ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕ ಚಿತ್ರ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ. ಈ ಚಿತ್ರ ಇಲ್ಲಿಯ ತನಕ ಬರಲು ನನ್ನ ಸ್ನೇಹಿತ ಆನಂದ್ ಕಾರಣ. ನನ್ನ ತಂಡದ ಸಹಕಾರವನ್ನು ಮರೆಯುವ ಹಾಗಿಲ್ಲ. ಇಂದು ನಮ್ಮ ಸಮಾರಂಭಕ್ಕೆ ಆಗಮಿಸಿದ್ದ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ನಾಯಕ, ನಿರ್ದೇಶಕ ವಸಂತ್.

ನಿರ್ಮಾಪಕಿ ಡಿ.ವಿ.ರಾಧ, ಸಾಹಸ ನಿರ್ದೇಶಕ ಕೌರವ ವೆಂಕಟೇಶ್, ನಾಯಕಿ ಜಾಹ್ನವಿ ವಿಶ್ವನಾಥ್ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಹಾಗೂ ತಂತ್ರಜ್ಞರು “ಹೊಟ್ಟೆಪಾಡು” ಚಿತ್ರದ ಕುರಿತು ಮಾತನಾಡಿದರು.

ತನ್ಮಯ್ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನವಿರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ.

ವಸಂತ್, ಜಾಹ್ನವಿ ವಿಶ್ವನಾಥ್, ವಿನಯಪ್ರಸಾದ್, ಶೋಭ್ ರಾಜ್, ಅಪೂರ್ವ, ಶೈಲೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
.

Categories
ಸಿನಿ ಸುದ್ದಿ

ಬಿಕಿನಿ ಹಾಕಿದ್ರೆ ಬೋಲ್ಡ್​ ಆಗಲ್ಲ! ನಾವು ಮಾಡೋ ರೋಲ್ ಬೋಲ್ಡ್ ಆಗಿರಬೇಕು: ಟೀಕಿಸಿದವರಿಗೆ ಉತ್ತರ ಕೊಡ್ತೀನಿ ಅಂದ್ರು ಹಾಟ್ ಬೆಡಗಿ ಅನಿತಾ…

ಸೈಕೋ ಮೂಲಕ ಪಡ್ಡೆ ಹುಡುಗರನ್ನ ಹುಚ್ಚೆದ್ದು ಕುಣಿಸಿದ್ದ ಅಪ್ಪಟ ಕನ್ನಡತಿ ಅನಿತಾಭಟ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನಟನೆ, ಯೋಗ, ಜರ್ನಿ ಹೀಗೆ ಸದಾ ಉತ್ಸಾಹದಿಂದಲೇ ಇರುವ ಅನಿತಾಭಟ್, ತಮ್ಮ ನಿರ್ಮಾಣದ ಇಂದಿರಾ ಮೂಲಕ ಸೈ ಎನಿಸಿಕೊಂಡಿದ್ದು ಗೊತ್ತೇ ಇದೆ. ಈಗ ಹೊಸ ಸುದ್ದಿ ಅಂದರೆ, ಅವರು ಪ್ರಮುಖ ಆಕರ್ಷಣೆಯಲ್ಲಿ ನಟಿಸಿರುವ ‘ಬೆಂಗಳೂರು 69’ ಸಿನಿಮಾ ಫೆಬ್ರವರಿ 10 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸುತ್ತಿದೆ. ತಮ್ಮ ಸಿನಿಮಾ ಕುರಿತು ಭಟ್ರು ಹೇಳೋದಿಷ್ಟು

ಇದೊಂದು ಸ್ಪೆಷಲ್ ಸಿನಿಮಾ. ಶೀರ್ಷಿಕೆ ಹೇಳುವಂತೆ ಇಲ್ಲಿ ಬೆಂಗಳೂರಿನ ಸ್ಪೆಷಲ್ ಸ್ಟೋರಿ ಇದೆ. ಅದು ಏನು ಅನ್ನೋದನ್ನು ಸಿನಿಮಾದಲ್ಲೇ ನೋಡಬೇಕು. ಈ
ಚಿತ್ರದಲ್ಲಿ ಬರುವ ಒಂದು ಹಾಡಿನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದೇನೆ. ಹಾಗಾಗಿಯೋ ಏನೋ ಅದೇ ರೀತಿಯ ಪಾತ್ರಗಳು ಹುಡುಕಿ ಬರುತ್ತಿವೆ ಅನ್ನೋದು ಭಟ್ಟರ ಮಾತು.

ಬೆಂಗಳೂರು 69’ ಸಿನಿಮಾದಲ್ಲಿ ಮೂರು ಪಾತ್ರಗಳು ಮುಖ್ಯವಾಗಿವೆ. ಕ್ರೈಂ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಅಲ್ಲಲ್ಲಿ ಹಲವು ಟ್ವಿಸ್ಟ್​ಗಳು ಎದುರಾಗುತ್ತವೆ. ‘ಇಬ್ಬರು ಹುಡುಗರು ಮತ್ತು ಒಂದು ಹುಡುಗಿ ನಡುವೆ ನಡೆಯುವ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ಹಾಗಂತ ಇಲ್ಲಿ ತ್ರಿಕೋನ ಪ್ರೇಮಕಥೆ ಇದೆ ಅಂದುಕೊಳ್ಳುವಂತಿಲ್ಲ. ಚಿತ್ರದಲ್ಲಿ ಅಪಹರಣವಾಗುತ್ತೆ ಯಾಕೆ ಆಗುತ್ತೆ ಅನ್ನೋದು ಸಿನಿಮಾದ ಕಥೆ. ಸಿನಿಮಾಗೆ ಶೀರ್ಷಿಕೆ ಇಡಲು ಒಂದು ಕಾರಣ ಇದೆ. ಅದನ್ನು ಸಿನಿಮಾದಲ್ಲಿ ನೋಡಬೇಕು ಎಂಬುದು ಭಟ್ಟರ ಮಾತು.

‘ಸಿನಿಮಾದಲ್ಲಿ ನಟಿಸಿರುವ ಶಫಿ ಹಾಗೂ ಪವನ್ ಶೆಟ್ಟಿ ಇಬ್ಬರೂ ನನಗೆ ಕ್ಲೋಸ್ ಫ್ರೆಂಡ್ಸ್. ಗೆಳೆಯರ ಜತೆ ನಟಿಸಿದ ಖುಷಿ ಇದೆ. ನನ್ನ ಮೇಲೆಯೇ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಭಯಾನಕ ದೃಶ್ಯಗಳಿವೆ. ಆ ದೃಶ್ಯಗಳಲ್ಲಿ ನಟಿಸಿದ್ದು ಚಾಲೆಂಜ್ ಆಗಿತ್ತು.

ಈ ಚಿತ್ರದ ಹಾಡೊಂದರಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದೇನೆ. ‘ಚಿತ್ರದ ಒಂದು ಹಾಡು ರಿಲೀಸ್ ಆಗಿದೆ. ಈ ಹಾಡು ರಿಲೀಸ್ ಆದ ಬಳಿಕ ಬೋಲ್ಡ್ ಪಾತ್ರಗಳೇ ಹುಡುಕಿ ಬಂದಿವೆ. ಬಟ್ಟೆ ಕಡಿಮೆ ಹಾಕಿ ಬೋಲ್ಡ್ ಎನ್ನಿಸಿಕೊಳ್ಳಬಾರದು. ಪಾತ್ರವೇ ಬೋಲ್ಡ್ ಆಗಿರಬೇಕು ಎಂಬುದು ಅನಿತಾ ಮಾತು.

Categories
ಸಿನಿ ಸುದ್ದಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಅನಾವರಣ: ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವಙ್ಉ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣ ಮಾಡಿದರು.


ನಗರದ ಪದ್ಮನಾಭನಗರದಲ್ಲಿ ನಡೆದ ಸಮಾರಂಭದಲ್ಲಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಂಡಿದ್ದು, 2023 ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ ನಡೆಯಲಿದೆ.


ಸಮಾರಂಭದಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿ ಅಧ್ಯಕ್ಷರೂ ಆದ ಕಂದಾಯ ಸಚಿವ ಆರ್.ಅಶೋಕ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳು, ಚಲನಚಿತ್ರರಂಗದ ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಫೆಬ್ರವರಿ 10ಕ್ಕೆ ರುಪಾಯಿ ನೋಡಬಹುದು! ಹೊಸಬರ ಹೊಸ ಬಗೆಯ ಸಿನಿಮಾ ರೆಡಿ…


ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ. ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ ಹಾಡಿಗೂ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆಯಾಗಿರುವ ‘ಉಸಿರಾಟ’ ಹಾಡನ್ನು ವ್ಯಾಸರಾಜ ಸೋಸಲೆ ಹಾಡಿದ್ದು, ಆನಂದ್​ ರಾಜಾವಿಕ್ರಮ್​ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ನಟ-ನಿರ್ದೇಶಕ ವಿಜಯ್​ ಜಗದಾಲ್​ ಅವರೇ ಈ ಚಿತ್ರಕ್ಕೆ ಸಾಹಿತ್ಯ ರಚಿಸಿದ್ದಾರೆ.


‘ರೂಪಾಯಿ’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರವಾಗಿದ್ದು, ಒಂದು ಕಮರ್ಷಿಯಲ್​ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳೂ ಈ ಚಿತ್ರದಲ್ಲಿದೆಯಂತೆ. ‘ಪ್ರೇಕ್ಷಕರಿಗೆ ಎಲ್ಲೂ ಬೋರ್ ಆಗದ ಹಾಗೆ ಚಿತ್ರಕಥೆ ಮಾಡಿದ್ದು, ಹಣದ ಮೌಲ್ಯದ ಕುರಿತು ನಗುವಿನ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನಗಿಸುವುದಕ್ಕೆ ಯಾವುದೇ ಪ್ರತ್ಯೇಕ ಪಾತ್ರಗಳಿಲ್ಲ. ಸನ್ನಿವೇಶಗಳೇ ನಗು ಉಕ್ಕಿಸುವಂತಿದೆ’ ಎನ್ನುತ್ತಾರೆ ವಿಜಯ್​ ಜಗದಾಲ್​. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಅವರೇ ರಚಿಸಿದ್ದಾರೆ.


ಈ ಚಿತ್ರದ ಕುರಿತು ಮಾತನಾಡುವ ವಿಜಯ್​ ಜಗದಾಲ್​, ‘ಇದೊಂದು ರೆಗ್ಯುಲರ್​ ಚಿತ್ರ ಅಲ್ಲ. ಐದು ಜನರ ಸುತ್ತ ಸುತ್ತುವ ಕಥೆ ಇಲ್ಲಿದೆ. ಅವರಿಗೆ ಆಕಸ್ಮಿಕವಾಗಿ ಒಂದಿಷ್ಟು ಹಣ ಸಿಗುತ್ತದೆ. ಒಂದು ದೊಡ್ಡ ಹಗರಣಕ್ಕೆ ಸಂಬಂಧಿಸಿದ ಹಣ, ಮಧ್ಯಮ ವರ್ಗದ ಜನರಿಗೆ ಸಿಕ್ಕಾಗ ಅವರ ಜೀವನದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದರ ಕುರಿತು ಹೇಳುವುದಕ್ಕೆ ಹೊರಟಿದ್ದೇವೆ. ದುಡ್ಡಿಗಿಂತ ಸಂಬಂಧಗಳ ಕುರಿತಾದ ಚಿತ್ರ ಇದು. ಆ ದುಡ್ಡು ಸಂಬಂಧಗಳನ್ನು ಹೇಗೆ ಹಾಳು ಮಾಡುತ್ತದೆ ಎಂದು ಹೇಳುವ ಚಿತ್ರ ಇದು’ ಎಂದು ಹೇಳುತ್ತಾರೆ.


ವಿವಿಧ್​ ಸಿನಿಮಾಸ್​ ಬ್ಯಾನರ್​ನಡಿ ಮಂಜುನಾಥ್​ ಎಂ, ಹರೀಶ್​ ಬಿ.ಕೆ ಮತ್ತು ವಿನೋದ ಎನ್​ ಜಂಟಿಯಾನಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಜಯ್ ಜಗದಾಲ್​ ಜೊತೆಗೆ ಕೃಷಿ ತಾಪಂಡ, ಯಶ್ವಿಕ್​, ‘ಮೈತ್ರಿ’ ಜಗದೀಶ್​, ಶಂಕರ್​ ಮೂರ್ತಿ, ರಾಮ್​ ಚಂದನ್​, ಚಂದನಾ ರಾಘವೇಂದ್ರ, ಪ್ರಮೋದ್​ ಶೆಟ್ಟಿ, ರಾಕ್​ಲೈನ್​ ಸುಧಾಕರ್​, ಮೋಹನ್​ ಜನೇಜ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಆನಂದ್ ರಾಜವಿಕ್ರಮ್​ ಅವರ ಸಂಗೀತ, ಆರ್​.ಡಿ. ನಾಗಾರ್ಜುನ್​ ಅವರ ಛಾಯಾಗ್ರಹಣ ಮತ್ತು ಶಿವರಾಜ್​ ಮೇಹು ಅವರ ಸಂಕಲನವಿದೆ.

Categories
ಸಿನಿ ಸುದ್ದಿ

ಶರಣ್ ಹುಟ್ಟು ಹಬ್ಬಕ್ಕೆ ಛೂ ಮಂತರ್ ಸ್ಪೆಷಲ್ ಗ್ಲಿಂಪ್ಸ್

ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ವಿಷ್ಯುವಲ್ಸ್ ನೋಡಿದರೆ, ಹಾಲಿವುಡ್ ಚಿತ್ರಗಳು ನೆನಪಾಗುತ್ತದೆ.

ಟೀಸರ್ ನಲ್ಲೇ ಉತ್ತರ ಕಾಂಡವನ್ನು ಅನುಪ್ ಕಟ್ಟುಕರನ್ ಅದ್ಭುತವಾಗಿ ತೋರಿದ್ದಾರೆ. ಶರಣ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿರುವ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ.

ಶರಣ್, ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

.

Categories
ಸಿನಿ ಸುದ್ದಿ

ವಿನಾಯಕ ಮೆಸ್ ನಲ್ಲಿ ಲಿಖಿತ್ ಶೆಟ್ಟಿ ಫುಲ್ ಮೀಲ್ಸ್…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ ಹಾಗೂ ಗುರುಕಿರಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರು, ರಾಮನಗರ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಎನ್.ವಿನಾಯಕ ಚಿತ್ರದ ಕುರಿತು ಮಾಹಿತಿ ನೀಡಿದರು.

ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್. ಮದುವೆ ಮನೆಗೆ ಫೋಟೋ ತೆಗೆಯಲು ಹೋದಾಗ ಮದುಮಗಳ ಮೇಲೆ ಪ್ರೀತಿಯಾಗುತ್ತದೆ. ಆನಂತರ ಏನಾಗುತ್ತದೆ? ಎಂಬುದನ್ನು ಚಿತ್ತದಲ್ಲೇ ನೋಡಬೇಕು. ಒಟ್ಟಿನಲ್ಲಿ ನಾವು ಇಡೀ ತಂಡ ಸೇರಿ ಪ್ರೇಕ್ಷಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದೇವೆ ಎಂದರು ನಾಯಕ ಲಿಖಿತ್ ಶೆಟ್ಟಿ.

ನಾಯಕಿಯರಾದ ಖುಷಿ ರವಿ, ತೇಜಸ್ವಿನಿ ಶರ್ಮ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

ಕಲಾವಿದರಾದ ರಂಗಾಯಣ ರಘು, ಚಂದ್ರಕಲಾ ಮೋಹನ್, ರಮೇಶ್ ಪಂಡಿತ್, ಗಣೇಶ್ ರಾವ್, ವಿಜಯ್ ಚೆಂಡೂರ್, ಛಾಯಾಗ್ರಾಹಕ ಮನೋಹರ್ ಜೋಶಿ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್ ರಾಜಣ್ಣ “ಫುಲ್ ಮೀಲ್ಸ್” ಬಗ್ಗೆ ಮಾತನಾಡಿದರು.

error: Content is protected !!