Categories
ಸಿನಿ ಸುದ್ದಿ

ಬಾಲಿವುಡ್ ಅಂಗಳದಲ್ಲಿ ರಾಗಿಣಿ ಮಿರ ಮಿರ ಮಿಂಚಿಂಗ್: ಹಿಂದಿ ಸಿನಿಮಾದ ಹೊಸ ಲುಕ್ ಇದು…

ರಾಗಿಣಿ ದ್ವಿವೇದಿ…. ಈ ಹೆಸರು ಕೇಳಿದಾಕ್ಷಣ, ಪಡ್ಡೆ ಹುಡುಗರ ಕಿವಿ ನೆಟ್ಟಗಾಗುತ್ತೆ . ಕಣ್ಮುಂದೆ ಹತ್ತಾರು ಕಲ್ಪನೆಗಳು ಓಡಾಡುತ್ತವೆ. ಅದರಲ್ಲೂ ಹುಡುಗರಂತೂ ರಂಗಾದ ರಾಗಿಣಿ ಪೋಸ್ಟರ್ ನೋಡಿಯೇ ಥ್ರಿಲ್ ಆಗುವಷ್ಟರ ಮಟ್ಟಿಗೆ ರಾಗಿಣಿ ಮೋಡೊ ಮಾಡಿರುವುದಂತೂ ಸುಳ್ಳಲ್ಲ.

ಅಂದಹಾಗೆ, ರಾಗಿಣಿ ಹೆಸರು ಬರೀ ಕನ್ನಡ ಮಾತ್ರವಲ್ಲ ಭಾರತೀಯ ಚಿತ್ರರಂಗಕ್ಕೆ ಚಿರಪರಿಚಿತ. ರಾಗಿಣಿ ಈಗ ಒಂದಷ್ಟು ಸಿನಿಮಾಗಳ ಮೂಲಕ ಬ್ಯುಜಿ. ಕನ್ನಡ ಮಾತ್ರವಲ್ಲ, ಅವರು ಪರಭಾಷೆಯ ಸಿನಿಮಾಗಳಲ್ಲೂ ಕಾಣಿಸಿಕೊಳ್ಳುವ ಮೂಲಕ ಬ್ಯುಜಿಯಾಗಿದ್ದಾರೆ ಅಂದರೆ ಒಪ್ಪಲೇಬೇಕು.

ಅವರು ನಟಿಸಿರುವ ಕನ್ನಡದ ‘ಸಾರಿ’ ಕರ್ಮ ರಿಟರ್ನ್ಸ್ ಸಿನಿಮಾ ರಿಲೀಸ್ ಆಗೋಕೆ ರೆಡಿಯಾಗಿದೆ. ಈ ಸಿನಿಮಾದಲ್ಲಿ ರಾಗಿಣಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ಮೇಲೆ ರಾಗಿಣಿಗೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.

ಇದರೊಂದಿಗೆ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಅವರು ನಿರ್ದೇಶಿಸುತ್ತಿರುವ ‘ಬಿಂಗೋ’ ಸಿನಿಮಾ ಕೂಡ ಕೈಯಲ್ಲಿದೆ. ಈ ಸಿನಿಮಾದಲ್ಲೂ ರಾಗಿಣಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ‌ ನಡುವೆ ಒಂದಷ್ಟು ಕಥೆಗಳನ್ನು ಕೇಳಿರುವ ಅವರು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಡಬೇಕಷ್ಟೆ. ರಾಗಿಣಿ ಈಗಾಗಲೇ ಮಲಯಾಳಂ ಸಿನಿಮಾವೊಂದರಲ್ಲೂ ಕಾಣಿಸಿಕೊಂಡಾಗಿದೆ. ಈಗ ಬಾಲಿವುಡ್ ಅಂಗಳದಲ್ಲೂ ಸದ್ದು ಮಾಡೋಕೆ ಹೊರಟಿದ್ದಾರೆ.

ಇನ್ನೂ ಹೆಸರಿಡದ ಬಾಲಿವುಡ್ ಸಿನಿಮಾದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಆ ಸಿನಿಮಾಗಾಗಿಯೇ ರಾಗಿಣಿ ಒಂದಷ್ಟು ಹೊಸ. ಲುಕ್ ನಲ್ಲಿ ಮಿರ ಮಿರ ಮಿಂಚುತ್ತಿದ್ದಾರೆ.

ಸದ್ಯ ಹೊಸ ಬಗೆಯ ಕಥೆ ಹಾಗು ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ತಯಾರಿ ನಡೆಸುತ್ತಿರುವ ರಾಗಿಣಿ, ಸೂಕ್ತ ಕಥೆ ಮತ್ತು ಪಾತ್ರಗಳ ಆಯ್ಕೆ ಎದುರು ನೋಡುತ್ತಿದ್ದಾರೆ.

Categories
ಸಿನಿ ಸುದ್ದಿ

ವೈರಂ ಎಂಬ ಆ್ಯಂಗ್ರಿ ಯಂಗ್ ಮ್ಯಾನ್ ಸ್ಟೋರಿ: ಪ್ರಣಾಮ್ ದೇವರಾಜ್ ನಟನೆಯ ಟೀಸರ್ ಹೊರಬಂತು…

ನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರ ವೈರಂ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ವೇಳೆ ಇದ್ದರು.

ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಮಾತನಾಡಿ, ಕನ್ನಡ ಚಿತ್ರರಂಗ ಈಗ ಮತ್ತೆ ಬ್ಯುಸಿಯಾಗಿದೆ. ಇಂತಹ ಸಮಯದಲ್ಲಿ ನನ್ನ ಮಗನ 2ನೇ ಸಿನಿಮಾ ಬರುತ್ತಿದೆ. ನಿರ್ದೇಶಕ ಸಾಯಿಶಿವನ್ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಚಿತ್ರದ ಹಾಡುಗಳನ್ನು ಕೇಳಿದ್ದೇನೆ. ಚೆನ್ನಾಗಿದೆ. ಈ ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು.

ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. 4 ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ. ಹಿಂದಿನ ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿದ್ದೆ. ಈ ಸಿನಿಮಾದಲ್ಲಿ ಆಕ್ಷನ್ ಹೀರೋ ಆಗಿದ್ದೇನೆ. ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಫಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಸಪೋರ್ಟ್ ಮಾಡಿದ್ದಾರೆ.

ಡಿ.ಓ.ಪಿ. ಕೆಲಸವೂ ಅದ್ಭುತವಾಗಿದೆ. ನಾನು ಇಷ್ಟು ಚೆನ್ನಾಗಿ ತೆರೆಮೇಲೆ ಕಾಣಿಸಲು ಅವರೇ ಕಾರಣ. ಒಬ್ಬ ಹೀರೋ ಗುರುತಿಸಿಕೊಳ್ಳೋದು ಅವನೆದುರು ಸ್ಟ್ರಾಂಗ್ ವಿಲನ್ ಇದ್ದಾಗ, ನನಗೆ ಎರಡನೇ ಚಿತ್ರದಲ್ಲೇ ಗರುಡರಾಮ್ ರಂಥ ಖಳನಟರೆದುರು ಅಭಿನಯಿಸುವ ಅವಕಾಶ ಸಿಕ್ತು. ಶಂಕರ್ ಅಶ್ವಥ್ ಹಾಗೂ ವೀಣಾಸುಂದರ್ ನನ್ನ ತಂದೆ, ತಾಯಿ ಪಾತ್ರ ಮಾಡಿದ್ದಾರೆ.ಚಿತ್ರದಲ್ಲಿ ಎಂಜಾಯ್ ಮಾಡುವಂಥ ೪ ಹಾಡುಗಳಿದ್ದು, ಕವಿರಾಜ್, ನಾಗೇಂದ್ರ ಪ್ರಸಾದ್, ರಾಮ್ ನಾರಾಯಣ್ ಹಾಡುಗಳನ್ನು ಬರೆದಿದ್ದಾರೆ ಎಂದು ನಾಯಕ ಪ್ರಣಾಮ್ ದೇವರಾಜ್ ತಿಳಿಸಿದರು.

ಚಿತ್ರದ ನಾಯಕಿ ಮೋನಾಲ್ ಮಾತನಾಡುತ್ತ ಇದು ನನ್ನ ಮೊದಲ ಕನ್ನಡ ಚಿತ್ರ. ಒಬ್ಬ ಕ್ರಿಶ್ಚಿಯನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಒಂದೊಳ್ಳೆ ಲವ್ ಸ್ಟೋರಿ ಚಿತ್ರದಲ್ಲಿದೆ ಎಂದರು.

ಚಿತ್ರದಲ್ಲಿ ಜನರಿಗೆ ಒಂದು ಯೂನಿವರ್ಸಲ್ ಮೆಸೇಜ್ ಇದೆ. ಜನ ಬದಲಾಗಬೇಕು ಎಂದು ಹೇಳಲಾಗಿದೆ. ಜನ ಸಪೋರ್ಟ್ ಮಾಡುತ್ತಾರೆಂಬ ನಂಬಿಕೆಯಿದೆ ಎಂದರು ಖಳನಾಯಕ ಗರುಡಾರಾಮ್.

ಚಿತ್ರದಲ್ಲಿ ಹೀರೋ ಡೆಡಿಕೇಶನ್, ಇನ್ವಾಲ್ ಮೆಂಟ್ ತುಂಬಾ ಚೆನ್ನಾಗಿತ್ತು. ಆತ ಸಿಂಗಲ್ ಟೇಕ್ ಆರ್ಟಿಸ್ಟ್ ಎಂದು ನಿರ್ದೇಶಕ ಸಾಯಿಶಿವನ್, ಪ್ರಣಾಮ್ ದೇವರಾಜ್ ಅವರನ್ನು ಹೊಗಳಿದರು.

ನಿರ್ಮಾಪಕರಾದ ಜೆ.ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ಚಿತ್ರದ ಬಗ್ಗೆ ಮಾತನಾಡಿದರು.
ಗೋಪಿನಾಥ್ ಅವರ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಕೋಮಲ್ ಜೊತೆ ಪ್ರಕಾಶ್ ರೈ; ಕಾಲಾಯ ನಮಃ ಸಿನಿಮಾಗೆ ಹೊಸ ಎಂಟ್ರಿ…

ತಮ್ಮ ಅಮೋಘ ನಟನೆಯ ಮೂಲಕ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ಐದು ವರ್ಷಗಳ ನಂತರ ನಾಯಕರಾಗಿ ನಟಿಸುತ್ತಿರುವ ಚಿತ್ರ “ಕಾಲಾಯಾ ನಮಃ”.

ಚಿತ್ರಕ್ಕೆ ಈಗ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗ ಮತ್ತೊಂದು ಖುಷಿಯ ವಿಚಾರವೆಂದರೆ, ತಮ್ಮ ನಟನೆಯ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ” ಕಾಲಾಯಾ ನಮಃ” ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ.

ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕೋಮಲ್ ಕುಮಾರ್, ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಗಾಯಕಿ ಮಂಗ್ಲಿ ಈಗ ನಾಯಕಿ! ಪಾದರಾಯನ ಜೊತೆ ಹೆಜ್ಜೆ: ಚಂದ್ರಚೂಡ್ ಚಿತ್ರಕ್ಕೆ ಬಂದ ಸಿಂಗರ್- ಇದು ಆರ್.ಚಂದ್ರು ನಿರ್ಮಾಣದ ಚಿತ್ರ…

ಚಕ್ರವರ್ತಿ ಚಂದ್ರಚೂಡ್ ಪಾದರಾಯ ಸಿನಿಮಾ ಕೈಗೆತ್ತಿಕೊಂಡಿದ್ದು ಗೊತ್ತೇ ಇದೆ. ಆಗ ಸಿನಿಮಾಗೆ ಜಾಕ್ ಮಂಜು ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಪಾದರಾಯ ಸಿನಿಮಾದಿಂದ ಜಾಕ್ ಮಂಜು ಹಿಂದೆ ಸರಿದಿದ್ದಾರೆ. ಈಗ ಆರ್.ಚಂದ್ರು ಈ ಸಿನಿಮಾ ನಿರ್ಮಾಪಕರು. ಕಬ್ಜ ಜೊತೆಗೆ ಈ ಸಿನಿಮಾಗೂ ಚಂದ್ರು ಹಣ ಹಾಕಲಿದ್ದಾರೆ

ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್ ಅಪ್ಡೇಟ್ ಒಂದು ಚಿತ್ರತಂಡದಿಂದ ಹೊರಬಿದ್ದಿದೆ. ‘ಪಾದರಾಯ’ ಚಿತ್ರದ ಮೂಲಕ ಸೆನ್ಸೇಷನಲ್ ಸಿಂಗರ್ ಮಂಗ್ಲಿ ನಾಯಕಿಯಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ.

‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ, ಅಪಾರ ಖ್ಯಾತಿ ಗಳಿಸಿಕೊಂಡ ತೆಲುಗಿನ ಗಾಯಕಿ ಮಂಗ್ಲಿ. ಆ ನಂತರ ಕನ್ನಡದಲ್ಲೂ ಹಲವು ಹಾಡುಗಳಿಗೆ ದನಿಯಾಗಿರುವ ಮಂಗ್ಲಿ ಕನ್ನಡಿಗರ ಪ್ರೀತಿಗೂ ಪಾತ್ರರಾಗಿದ್ದಾರೆ. ಈಗ ನಾಯಕಿಯಾಗಿ ಚಿತ್ರರಂಗಕ್ಕೆ ಮಂಗ್ಲಿ ಪಾದರ್ಪಣೆ ಮಾಡುತ್ತಿದ್ದಾರೆ. ಅದು ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಮುಖಾಂತರ ಅನ್ನೋದು ವಿಶೇಷ.

ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ‘ಪಾದರಾಯ’ ಚಿತ್ರಕ್ಕೆ ಮಂಗ್ಲಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಈ ಮೂಲಕ ಗಾಯಕಿ, ನಿರೂಪಕಿಯಾಗಿ ಸೈ ಎನಿಸಿಕೊಂಡ ಮಂಗ್ಲಿ ನಾಯಕಿಯಾಗಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ‘ಪಾದರಾಯ’ ಚಿತ್ರದಲ್ಲಿ ಮೈನಾ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ.

ಚಿತ್ರೀಕರಣಕ್ಕೆ ಹೊರಡುವ ಮುನ್ನ ನಾಯಕ ನಟ ನಾಗಶೇಖರ್ 42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡುತ್ತಿದ್ದಾರೆ. ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ರಿಂದ ಹನುಮ ಮಾಲೆ ಹಾಕಿಸಿಕೊಂಡಿರುವ ನಾಗಶೇಖರ್ 42 ದಿನಗಳ ಕಾಲ ಅಂಜನಾದ್ರಿ ಬೆಟ್ಟದಲ್ಲಿ ವ್ರತವನ್ನು ಆಚರಿಸುತ್ತಿದ್ದಾರೆ.

‘ಪಾದರಾಯ’ ಚಿತ್ರ 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ. ಆರು ರಾಜ್ಯಕ್ಕೆ ಸಂಬಂಧಿಸಿದ ಘಟನೆ ಇದಾಗಿದ್ದು, ಯೂನಿವರ್ಸಲ್ ಸಬ್ಜೆಕ್ಟ್ಗ. ಹಾಗಾಗಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರುತ್ತಿದೆ. ಶೀಘ್ರದಲ್ಲೇ ಸಿನಿಮಾ ಸೆಟ್ಟೇರಲಿದೆ.

ಸಿದ್ದೇಶ್ವರ ಎಂಟರ್ಪ್ರೈಸಸ್ ಬ್ಯಾನರ್ ನಡಿ ಆರ್.ಚಂದ್ರು ‘ಪಾದರಾಯ’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಂದಹಾಗೆ, ಈ ಹಿಂದೆ ಈ ಸಿನಿಮಾಗೆ ಜಾಕ್ ಮಂಜು ನಿರ್ಮಾಣ ಮಾಡಲಿದ್ದಾರೆ ಎಂದು ಸ್ವತಃ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದರು. ಆದರೆ ಈಗ ನಿರ್ಮಾಪಕರಾಗಿ ಆರ್.ಚಂದ್ರು ಎಂಟ್ರಿಯಾಗಿದ್ದಾರೆ. ಇನ್ನು, ನಾಗಶೇಖರ್ ಸಹ ನಿರ್ಮಾಣವಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನವಿದೆ.

Categories
ಸಿನಿ ಸುದ್ದಿ

ಬಹು ನಿರೀಕ್ಷಿತ ಭಾರತೀಯ ಸಿನಿಮಾ ಪೈಕಿ ಕ್ರೇಜ್ ಹೆಚ್ಚಿಸಿದ ಕನ್ನಡದ ಕಬ್ಜ! ಉಪ್ಪಿ- ಕಿಚ್ಚನ ಫ್ಯಾನ್ಸ್ ಕುತೂಹಲ ಕೆರಳಿಸಿದ ಡೈರೆಕ್ಟರ್ ಆರ್.ಚಂದ್ರು ಕನಸಿನ ಚಿತ್ರ

ಕೆಲ ಸಿನಿಮಾಗಳೇ ಹಾಗೆ. ಶೀರ್ಷಿಕೆಯಿಂದಲೇ ಕುತೂಹಲ ಹುಟ್ಟಿಸಿ ಬಿಡುತ್ತವೆ. ಅಂತಹ ಸಿನಿಮಾಗಳ ಸಾಲಿಗೆ ಕಬ್ಜ ಕೂಡ ಸೇರಿದೆ. ಹೌದು, ಕಬ್ಜ ಬಹು ನಿರೀಕ್ಷಿತ ಸಿನಿಮಾ. ಕಾರಣ, ಉಪೇಂದ್ರ ಅಭಿನಯದ ಈ ಸಿನಿಮಾಗೆ ಸ್ಟಾರ್ ಡೈರೆಕ್ಟರ್ ಆರ್.ಚಂದ್ರು ನಿರ್ದೇಶನವಿದೆ. ಅದ್ಧೂರಿ ಬಜೆಟ್ ನಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಪೋಸ್ಟರ್, ಟೀಸರ್ ಮೂಲಕವೇ ಕ್ರೇಜ್ ಹೆಚ್ಚಿಸಿರುವ ಸಿನಿಮಾ ಈಗ ಭಾರತೀಯ ಇಪ್ಪತ್ತು ಸಿನಿಮಾಗಳ ಪೈಕಿ ಕನ್ನಡದ ಕಬ್ಜ ಏಳನೇ ಸ್ಥಾನದಲ್ಲಿದ್ದು, ಕ್ರೇಜ್ ಹೆಚ್ಚಿಸಿದೆ.

ಸಿನಿಮಾ, ಟಿವಿ ಕಾರ್ಯಕ್ರಮ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿ ತಾಣವೆನಿಸಿಕೊಂಡಿರುವ ಇಂಟರ್​ನೆಟ್​ ಮೂವಿ ಡೇಟಾಬೇಸ್​ (ಐಎಂಡಿಬಿ) ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 20 ಚಿತ್ರಗಳ ಈ ಪಟ್ಟಿಯಲ್ಲಿ ಕನ್ನಡದಿಂದ ಉಪೇಂದ್ರ ಹಾಗೂ ಸುದೀಪ್​ ಅಭಿನಯಿಸಿರುವ ಪ್ಯಾನ್​ ಇಂಡಿಯಾ ಚಿತ್ರ ‘ಕಬ್ಜ’ ಮಾತ್ರ ಇರುವುದು ವಿಶೇಷ.


‘ಕಬ್ಜ’ ಚಿತ್ರವು ಈ ಪಟ್ಟಿಯ ಏಳನೇ ಸ್ಥಾನದಲ್ಲಿದ್ದು, ಮಿಕ್ಕಂತೆ ಶಾರುಖ್​ ಖಾನ್​ ಅಭಿನಯದ ‘ಪಠಾಣ್​’, ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ – ದಿ ರೂಲ್​’, ಪ್ರಭಾಸ್​ ಅಭಿನಯದ ‘ಸಲಾರ್​’ ಮತ್ತು ‘ಆದಿಪುರುಷ್​’, ವಿಜಯ್​ ಅಭಿನಯದ ‘ವಾರಿಸು’, ಸಲ್ಮಾನ್​ ಖಾನ್​ ಅಭಿನಯದ ‘ಟೈಗರ್​ 3’, ಕಮಲ್​ ಹಾಸನ್​ ಅಭಿನಯದ ‘ಇಂಡಿಯನ್​ 2’ ಮುಂತಾದ ಚಿತ್ರಗಳಿವೆ. ಹಿಂದಿ, ತೆಲುಗು ಮತ್ತು ತಮಿಳು ಚಿತ್ರಗಳೇ ಹೆಚ್ಚಿರುವ ಈ ಚಿತ್ರಗಳ ಪಟ್ಟಿಯಲ್ಲಿ ಕನ್ನಡದಿಂದ ಏಕೈಕ ಚಿತ್ರವಾಗಿ ‘ಕಬ್ಜ’ ಹೊರಹೊಮ್ಮಿದೆ.


ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ನಡಿ ಆರ್​. ಚಂದ್ರು ಕಥೆ ಬರೆದು, ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರವು ಶುರುವಾದಾಗಿನಿಂದ ಇಲ್ಲಿಯವರೆಗೂ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಅದರಲ್ಲೂ ಇತ್ತೀಚೆಗೆ ಚಿತ್ರದ ಟೀಸರ್​ ಬಿಡುಗಡೆಯಾದ ಮೇಲೆ ಆ ನಿರೀಕ್ಷೆಗಳು ನೂರ್ಮಡಿಯಾಗಿವೆ ಎಂದರೆ ತಪ್ಪಿಲ್ಲ.

ಬರೀ ಕರ್ನಾಟಕವಷ್ಟೇ ಅಲ್ಲ, ಬೇರೆ ಭಾಷೆಗಳಲ್ಲೂ ಈ ಚಿತ್ರಕ್ಕಾಗಿ ಬೇಡಿಕೆ ಹೆಚ್ಚಿದ್ದು, ಈಗಾಗಲೇ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್​ನ ಜನಪ್ರಿಯ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್​​ ಪಡೆದುಕೊಂಡಿದೆ. ಹಿಂದಿಯಷ್ಟೇ ಅಲ್ಲ, ಬೇರೆ ಅವತರಣಿಕೆಗಳ ಹಕ್ಕುಗಳಿಗೂ ಬೇಡಿಕೆ ಹೆಚ್ಚಿದೆ.
‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.

ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ಪ್ರತಿಭಾವಂತರ ದೊಡ್ಡ ದಂಡೇ ಇರುವ ಈ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.

Categories
ಸಿನಿ ಸುದ್ದಿ

ಕಡಲ ತೀರದಲ್ಲಿ ಮಧುರ ಗೀತೆ: ಕಡಲ ತೀರದ ಭಾರ್ಗವ ಸಿನಿಮಾ ಹಾಡು ರಿಲೀಸ್…

ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ.


ನಿರ್ದೇಶಕ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ. ಮಾಧುರ್ಯ ತುಂಬಿದ ಈ ಹಾಡನ್ನು ವಿಶೇಷವಾಗಿ ನಿರ್ಮಿಸಲಾಗಿರುವ ಸೆಟ್ನಲ್ಲಿ ಚಿತ್ರೀಕರಣ ಮಾಡುವುದರ ಜೊತೆಗೆ, ಕುಮಟದ ಸುಂದರ ಪರಿಸರದಲ್ಲಿ ಸೆರೆ ಹಿಡಿಯಲಾಗಿದೆ.


ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದು ಬಿಡುಗಡೆಗೆ ಸಜ್ಜಾಗುತ್ತಿರುವ ‘ಕಡಲ ತೀರದ ಭಾರ್ಗವ’ ಚಿತ್ರದ ಪ್ರಮೋಷನ್ ಇದೀಗ ಈ ಹಾಡಿನಿಂದ ಪ್ರಾರಂಭವಾಗಿದೆ. ಕಳೆದ ವರ್ಷ ಚಿತ್ರದ ‘ಸಮಯವೇ’ ಎಂಬ ಲಿರಿಕಲ್ ವೀಡಿಯೋ ಬಿಡುಗಡೆಯಾಗಿತ್ತು. ಈಗ ‘ಮಧುರ ಮಧುರ’ ಚಿತ್ರದ ವೀಡಿಯೋ ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯಾಗಲಿದೆ.


‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ನಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

Categories
ಸಿನಿ ಸುದ್ದಿ

ವಿನಯ್ ‘ದಿ’ ಸಿನಿಮಾಗೆ ಸಿಂಪಲ್ ಸುನಿ ಸಾಥ್- ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಕೆ

‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ‘ದಿ’ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ಚಿತ್ರದ ವಿಭಿನ್ನ ಟೈಟಲ್ ನ್ನು ನಿರ್ದೇಶಕ ಸಿಂಪಲ್ ಸುನಿ ಮೂಲಕ ರಿವೀಲ್ ಮಾಡಿಸಿದೆ. ಟೈಟಲ್ ರಿವೀಲ್ ಮಾಡಿ ನಿರ್ದೇಶಕ ವಿನಯ್ ಹಾಗೂ ಇಡೀ ಚಿತ್ರತಂಡಕ್ಕೆ ಸಿಂಪಲ್ ಸುನಿ ಶುಭ ಕೋರಿದ್ದಾರೆ. ಸದ್ಯದಲ್ಲೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ನಾಯಕ ನಾಯಕಿ ಯಾರೆಂಬುದನ್ನು ಚಿತ್ರತಂಡ ರಿವೀಲ್ ಮಾಡಲಿದೆ.

ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಡಾಲರ್ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಚಿತ್ರತಂಡ ಫೆಬ್ರವರಿ ಕೊನೆಯ ವಾರ ಸಿನಿಮಾ ತೆರೆಗೆ ತರುವ ತಯಾರಿಯಲ್ಲಿದೆ.

‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ ‘ದಿ’ ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ನಿಸರ್ಗದಲ್ಲಿ ಪರಿಸರ ರಕ್ಷಣೆಯ ಸಂದೇಶ

ನಮ್ಮ ಸುತ್ತಮುತ್ತಲಿನಲಿನ ಪರಿಸರವನ್ನು ನಾವು ಯಾವರೀತಿ ಇಟ್ಟುಕೊಳ್ಳಬೇಕು, ಅದನ್ನು ಹೇಗೆ ಶುದ್ದವಾಗಿರುವಂತೆ ನೋಡಿಕೊಳ್ಳಬೇಕು ಎನ್ನುವ ಸಾಮಾಜಿಕ ಸಂದೇಶ ಒಳಗೊಂಡಿರುವ, ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವಂಥ ಕಥಾಹಂದರ ಹೊಂದಿರುವ ವಿಶೇಷ ಚಿತ್ರ ‘ನಿಸರ್ಗ’ ಇನ್ನೇನು ಬಿಡುಗಡೆಗೆ ಸಿದ್ದವಾಗಿದೆ.

ಈಗಾಗಲೇ ಈ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದು ಸೆನ್ಸಾರ್ ನಿಂದ ಯು/ಎ ಸರ್ಟಿಫಿಕೇಟ್ ಕೂಡ ಪಡೆದುಕೊಂಡಿದೆ.

ಭೂಮಿಕಾ ಸಿನಿ ಕ್ರೀಯೇಷನ್ಸ್ ಬ್ಯಾನರ್ ನಲ್ಲಿ ಶಿವಕುಮಾರ್.ಬಿ.ಕೆ, ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ಚಿತ್ರಕ್ಕೆ ನಿರ್ದೇಶನ ಸಹ ಮಾಡಿದ್ದಾರೆ. ಎಸ್,ಬಾಲು ಅವರ ಛಾಯಾಗ್ರಹಣ, ವಿಜಯ್‍ ರೈ ಅವರ ಸಂಗೀತ ನಿರ್ದೇಶನ, ರಮೇಶ್ ಜಂಗಮರಹಟ್ಟಿ ಅವರ ಸಂಕಲನ ಈ ಚಿತ್ರಕ್ಕಿದ್ದು, ಕಥೆ-ಸಂಭಾಷಣೆಯನ್ನು ಮೈಸೂರು ರಮಾನಂದ್ ರಚಿಸಿದ್ದಾರೆ. ಹಿನ್ನೆಲೆ ದ್ವನಿಯನ್ನು ಪ್ರಶು ನೀಡಿದ್ದಾರೆ. ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

ಇನ್ನು ಚಿತ್ರದ ಪ್ರಮುಖ ತಾರಾಗಣದಲ್ಲಿ ಮೈಸೂರು ರಮಾನಂದ್, ಸ್ಮೈಲ್‍ ಶಿವು, ಶಶಿಧರ್‍ ಕೋಟೆ, ರೇಖಾದಾಸ್, ಶಂಕರ್‌ ಭಟ್, ಮೀಸೆ ಆಂಜನಪ್ಪ, ಕವಿತ, ಶಿಲ್ಪ ನಿತ್ಯ ದೀಕ್ಷಿತ್, ಮೀನಾ ಪೋರ್ಚುಗಲ್, ಮಂಜು, ಪರಿಸರ ಮಂಜು, ನಾರಾಯಣ ಗೌಡ, ಗೋವರ್ದನ್‍ ದೇವಿಲಾಲ್ ಮುಂತಾದವರು ಅಭಿನಯಿಸಿದ್ದಾರೆ.

ಇದೇ ಸಂಸ್ಥೆಯ ವತಿಯಿಂದ ‘ಮಹಾಗುರು’ ಎಂಬ ಮಾತಿಲ್ಲದ ಮತೊಂದು ಪ್ರಾಯೋಗಾತ್ಮಕ ಚಿತ್ರವನ್ನು ನಿರ್ಮಾಣ ಮಾಡಲು ತಯಾರಿ ನಡೆಸುತ್ತಿದೆ. ಈ ಚಿತ್ರದಲ್ಲಿ ಸ್ಮೈಲ್‍ ಶಿವು, ಜನಾರ್ಧನ್, ಮೈಸೂರು ರಮಾನಂದ್, ಕವಿತಾ, ಅನು, ಶಶಿಧರ್‍ ಕೋಟೆ, ಸಂದೀಪ್, ವಿಲ್‍ಸನ್‍ ಜೋಸೆಪ್, ಆಪೆನ್.ಜೆ, ಇನ್ನೂ ಮುಂತಾದ ಕಲಾವಿದರು ಅಭಿನಯಿಸುತ್ತಿದ್ದಾರೆ.

ಈ ಚಿತ್ರವನ್ನು ಕಸ್ತೂರಿ ಜಗನ್ನಾಥ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲದೆ ಈ ಚಿತ್ರಕ್ಕೆ ಬೆಂಗಳೂರು, ಮಲೇಶಿಯಾ, ಬ್ಯಾಂಕಾಕ್‍ನಲ್ಲಿ ಚಿತ್ರೀಕರಣ ನಡೆಸಲು ತೀರ್ಮಾನಿಸಲಾಗಿದೆ.

ಈ ಚಿತ್ರದ ಸಹಾಯಕ ನಿದೇಶಕರಾಗಿ ಪೀಟರ್ ಜಾನ್, ಕಾರ್ಯಕಾರಿ ನಿರ್ಮಾಪಕರಾಗಿ ಟಿ.ಸಿ.ಶಾಜೀ ಕೆಲಸ ಮಾಡುತ್ತಿದ್ದು, ಆನಂದ್ ಅವರ ಛಾಯಾಗ್ರಹಣವಿದೆ.

ಕಲಾನಿರ್ದೇಶಕ-ಎಸ್. ಸಿಲ್ವಸ್ಟಾರ್, ಸಂಕಲನ-ರಮೇಶ್ ಜಂಗಮರಹಟ್ಟಿ, ಲೆಜನಿಂಗ್ ಆಪೀಸರ್-ಪ್ಲೇಮಿಂಗ್.ಜೆ, ಪ್ರೋಡಕ್ಷನ್ ಕನ್‍ಟ್ರೋಲರ್ ಆಗಿ ಜೆಸ್ಟೀನ್‍ಜೊಸೆಪ್ ಕೆಲಸ ಮಾಡುತ್ತಿದ್ದಾರೆ.

Categories
ಸಿನಿ ಸುದ್ದಿ

ಗರಡಿ ಚಿತ್ರಕ್ಕೆ ಕುಂಬಳಕಾಯಿ: ಇದು ಬಿ.ಸಿ. ಪಾಟೀಲ್ ಸಿನಿಮಾ

ನಟ ಹಾಗೂ ಶಾಸಕ ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಮುಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ‌ಗರಡಿಮನೆ ಸೆಟ್ ಹಾಕಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸುವುದರೊಂದಿಗೆ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣದ ನಂತರ ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ “ಗರಡಿ” ಮನೆ ಸೆಟ್ ನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಹಂತದ ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶಸ್ ಸೂರ್ಯ, ಸೋನಾಲ್ ‍ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ. “ಗರಡಿ” ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಯೋಗರಾಜ್ ಭಟ್.

ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದ ಬಿ.ಸಿ.ಪಾಟೀಲ್ ಅವರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

ನಾನು ಪೈಲ್ವಾನ್ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕ ಯಶಸ್ ಸೂರ್ಯ.

ನಾಯಕಿ ಸೋನಾಲ್ ಮೊಂತೆರೊ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

ನಟ “ಆರ್ಮುಗಂ” ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದರು.

ನಟ ಸುಜಯ್ ಬೇಲೂರ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಕಲಾವಿದರಾದ ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಹಾಗೂ ಕಥೆ ಬರೆದಿರುವ ವಿಕಾಸ್ “ಗರಡಿ” ಚಿತ್ರದ ಕುರಿತು ಮಾತನಾಡಿದರು.

ನಿರ್ಮಪಕಿ ಸೃಷ್ಟಿ ಪಾಟೀಲ್ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ ಸಮಸ್ತ ತಂಡಕ್ಕೂ ಧನ್ಯವಾದ ತಿಳಿಸಿದರು.

ಚಿತ್ರದ ವಿಶೇಷಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯಿಸಿದ್ದಾರೆ. ನಿರ್ಮಾಪಕ ಬಿ.ಸಿ.ಪಾಟೀಲ್, ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಾಯಕ ಯಶಸ್ ಸೂರ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದರು.

Categories
ಸಿನಿ ಸುದ್ದಿ

ಹೊಸ ಸಿನಿಮಾ ಒಪ್ಪಿದ ಶಿವಣ್ಣ: ಇದು ನಿತಿನ್ ಶಿವಾರ್ಜುನ ಚಿತ್ರ…

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ವೇದ” ಚಿತ್ರ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸ ಚಿತ್ರದ ಬಗ್ಗೆ ಮಾಹಿತಿ ಬಂದಿದೆ.

ನಿಶ್ಚಿತ ಕಂಬೈನ್ಸ್ ಬ್ಯಾನರ್ ನಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ ಈ ನೂತನ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ನಿತಿನ್ ಶಿವಾರ್ಜುನ್ ಈ ಚಿತ್ರದ ಸಹ ನಿರ್ಮಾಪಕರು. ಈ ಸಂಸ್ಥೆಯಿಂದ ಹಿಂದೆ “ಶಿವಾರ್ಜುನ” ಚಿತ್ರ ನಿರ್ಮಾಣವಾಗಿತ್ತು.

ಕನ್ನಡದ ರಿಯಾಲಿಟಿ ಶೋ “ಮಜಾ ಟಾಕೀಸ್” ಹಾಗೂ ಸೃಜನ್ ಲೋಕೇಶ್ ಅಭಿನಯದ “ಎಲ್ಲಿದೆ ಇಲ್ಲಿತನಕ” ಚಿತ್ರದ ನಿರ್ದೇಶಕ ತೇಜಸ್ವಿ ಕೆ ನಾಗ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌

ಶಿವಣ್ಣ ಈ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜಕುಮಾರ್ ಅವರು ಈ ತನಕ ಮಾಡದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿರ್ದೇಶಕ ತೇಜಸ್ವಿ ಕೆ ನಾಗ್ ತಿಳಿಸಿದ್ದಾರೆ.

error: Content is protected !!