Categories
ಸಿನಿ ಸುದ್ದಿ

ಏಪ್ರಿಲ್‌ 5ರಿಂದ ಮದಗಜ ಚಿತ್ರೀಕರಣ ಶುರು ನಾಲ್ಕನೇ ಹಂತದ ಶೂಟಿಂಗ್‌ಗೆ ಟೀಮ್‌ ರೆಡಿ

ಶ್ರೀಮುರಳಿ ಅಭಿನಯದ “ಮದಗಜ” ಏಪ್ರಿಲ್‌ 5ರಿಂದ ಶುರುವಾಗಲಿದೆ. ಉಮಾಪತಿ ನಿರ್ಮಾಣದ ಈ ಚಿತ್ರದ ಚಿತ್ರೀಕರಣದ ನಾಲ್ಕನೇ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ದೊಡ್ಡ ಮಟ್ಟದ ಬಜೆಟ್‌ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ. ಬೃಹತ್ ನಾಲ್ಕು ಸೆಟ್‌ಗಳಲ್ಲಿ “ಫೈಟ್ಸ್” ಮತ್ತು “ಇಂಟ್ರೊಡಕ್ಷನ್ ಸಾಂಗ್” ಶೂಟಿಂಗ್‌ ನಿರಂತರವಾಗಿ ನಡೆಯಲಿದೆ.

ಚಿತ್ರೀಕರಣ ಸತತವಾಗಿ ನಡೆಯಲಿದೆ. ಈಗಾಗಲೇ ಎಲ್ಲೆಡೆ “ಮದಗಜ” ಚಿತ್ರದ್ದೇ ಸುದ್ದಿ. ಅದಕ್ಕೆ ಕಾರಣ, ಅವರ ಹುಟ್ಟು ಹಬ್ಬಕ್ಕೆ ಈಗಾಗಲೇ ಬಿಡುಗಡೆಯಾದ ಸಖತ್ ಟೀಸರ್‌ಗೆ ಸಿಕ್ಕಾಪಟ್ಟೆ ಮೆಚ್ಚುಗೆ ಸಿಕ್ಕಿದ್ದು, ಚಿತ್ರಕ್ಕೆ ಮಹೇಶ್‌ ಕುಮಾರ್‌ ನಿರ್ದೇಶಕರು. ಉಮಾಪತಿ ನಿರ್ಮಾಣವಿದೆ. ಚಿತ್ರಕ್ಕೆ ನವೀನ್‌ ಕುಮಾರ್‌ ಕ್ಯಾಮೆರಾ ಹಿಡಿದರೆ, ರವಿ ಬಸ್ರೂರು ಸಂಗೀತವಿದೆ.

Categories
ಸಿನಿ ಸುದ್ದಿ

ಸಿನಿಮಂದಿ ಬದುಕಲ್ಲಿ ಕೊರೋನಾ ಎಂಬ ಹೆಮ್ಮಾರಿ ನರ್ತನ – ಆತಂಕದಲ್ಲಿ ಇಡೀ ಕನ್ನಡ ಚಿತ್ರೋದ್ಯಮ

ಚಿತ್ರರಂಗದ ಪಾಡು ಮುಂದೇನು? ಅರೇ, ಇದೆಂಥಾ ಮಾತು ಎಂಬ ಪ್ರಶ್ನೆ ಎದುರಾದರೆ ಅಚ್ಚರಿ ಏನಿಲ್ಲ. ಆದರೆ, ಈಗಿನ ವಾಸ್ತವತೆಯನ್ನು ನೋಡಿದಾಗ, ಚಿತ್ರರಂಗದ ಪಾಡು ಏನಾಗಬಹುದು ಎಂಬ ಆತಂಕ ಖಂಡಿತ ಕಾಡದೇ ಇರದು. ಕನ್ನಡ ಚಿತ್ರರಂಗ ಈಗ ಅಕ್ಷರಶಃ ಕುಗ್ಗಿ ಹೋಗಿದೆ. ಮೊದಲೇ ಕೊರೊನಾ ಹೊಡೆತದಿಂದ ತತ್ತರಿಸಿದ್ದ ಸಿನಿಮಾ ಉದ್ಯಮ, ಇತ್ತೀಚೆಗಷ್ಟೇ ಚೇತರಿಸಿಕೊಳ್ಳುವ ಪ್ರಯತ್ನದಲ್ಲಿತ್ತು. ಅದರ ಬೆನ್ನಲ್ಲೇ ಈಗ ಪುನಃ ಅರ್ಧ ಭರ್ತಿ ಆದೇಶವೂ ಹೊರಬಿದ್ದಿದೆ. ಮೊದಲೇ ನಲುಗಿದ್ದ ಕನ್ನಡ ಚಿತ್ರರಂಗ, ಈಗ ಮತ್ತಷ್ಟು ನಲುಗಿ ಹೋಗುವುದಂತೂ ನಿಜ. ಕೊರೊನಾ ಎರಡನೇ ಅಲೆಯ ಅಬ್ಬರ ಜೋರಾಗುತ್ತಿದ್ದಂತೆಯೇ ಸರ್ಕಾರ ಎಚ್ಚೆತ್ತುಕೊಂಡು ಟಫ್‌ರೂಲ್ಸ್‌ಮಾಡಿದ್ದೇನೋ ನಿಜ. ಎಂಟು ಪ್ರಮುಖ ಜಿಲ್ಲೆಗಳಲ್ಲಿ ಈ ಆದೇಶ ಹೊರಬಿದ್ದಿದೆ. ಚಿತ್ರರಂಗಕ್ಕೂ ಇದರ ಬಿಸಿ ತಟ್ಟಿದೆ. ಈ ನಿರ್ಧಾರದಿಂದ ಚಿತ್ರೋದ್ಯಮ ಏನೆಲ್ಲಾ ಸಂಕಷ್ಟ ಎದುರಿಸುತ್ತೆ ಅನ್ನೋದೇ ಸದ್ಯ ಎದುರಿಗಿರುವ ಪ್ರಶ್ನೆ.

ಚಿತ್ರರಂಗವನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದವರ ಸ್ಥಿತಿಯಂತೂ ಹೇಳತೀರದು. ಇಲ್ಲಿ ಕೋಟಿ ನಿರ್ಮಾಪಕರು, ಸ್ಟಾರ್‌ನಿರ್ದೇಶಕರು, ಸ್ಟಾರ್‌ನಟರಿಂದ ಹಿಡಿದು ಕಟ್ಟ ಕಡೆಯ ಕಾರ್ಮಿಕರೂ ಇದ್ದಾರೆ. ಈಗ ಅವರೆಲ್ಲರೂ ಒಂದೇ ದೋಣಿಯಲ್ಲಿರುವಂತಹ ಪರಿಸ್ಥಿತಿ ಬಂದೊದಗಿದೆ. ಲಾಕ್‌ಡೌನ್‌ಸಂದರ್ಭದಲ್ಲಂತೂ ಚಿತ್ರರಂಗದಲ್ಲಿ ದುಡಿಮೆ ಮಾಡುವವರ ಪರಿಸ್ಥಿತಿ ಡೋಲಾಯಮಾನವಾಗಿತ್ತು. ಮೆಲ್ಲೆನೆ ಉಸಿರಾಡಲು ಅವಕಾಶ ಸಿಕ್ತು ಅಂತ ನಿಟ್ಟುಸಿರು ಬಿಡುವ ಹೊತ್ತಲೇ ಪುನಃ ಅದಕ್ಕೆ ಬ್ರೇಕ್‌ಬಿತ್ತು. ಇದರಿಂದ ಈಗ ಅಕ್ಷರಶಃ ಚಿತ್ರರಂಗದ ಅನೇಕರು ಬೀದಿಗೆ ಬರುವಂತಹ ಸ್ಥಿತಿ ಎದುರಾಗುತ್ತಿದೆ. ಇದು ಹೀಗೆ ಮುಂದುವರೆದರೆ, ಖಂಡಿತವಾಗಿಯೂ ಕನ್ನಡ ಚಿತ್ರರಂಗ ದೊಡ್ಡ ಆತಂಕದ ಅಲೆಯನ್ನು ಎದುರಿಸಬೇಕಾಗುತ್ತೆ. ಚಿತ್ರರಂಗವನ್ನು ನಂಬಿದ ಸಾವಿರಾರು ಕುಟುಂಬಗಳಿವೆ. ಲಕ್ಷಾಂತರ ಜನರಿದ್ದಾರೆ. ಎಲ್ಲಾ ನಿರ್ಮಾಣ, ನಟನೆ, ನಿರ್ದೇಶನ, ಕಾಸ್ಟ್ಯೂಮ್‌, ಪ್ರೊಡಕ್ಷನ್ಸ್‌, ಮೇಕಪ್‌, ಟ್ರಾನ್ಸ್‌ಪೋರ್ಟ್‌ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡುವ ಸಿನಿಮಂದಿ ಬದುಕು ಮೂರಾಬಟ್ಟೆಯಾಗುವಂತಹ ಭೀತಿಯಲ್ಲಿದೆ. ಕೊರೊನಾ ತಂದಿಟ್ಟ ಆತಂಕದಿಂದಾಗಿ ಇಲ್ಲಿ ಅನ್ನದಾತ ಎನಿಸಿಕೊಂಡವರೂ ಕೂಡ ಒದ್ದಾಡಿದ ಉದಾಹರಣೆಗೇನೂ ಕಮ್ಮಿ ಇಲ್ಲ.

ಈ ಕಲರ್‌ಫುಲ್‌ದುನಿಯಾದಲ್ಲಿ ಬಣ್ಣ ಬಣ್ಣದ ಕನಸು ಕಟ್ಟಿಕೊಂಡಿದ್ದ ಅದೆಷ್ಟೋ ಮಂದಿ ಮೊಗದಲ್ಲಿ ಆತಂಕದ ಛಾಯೆ ಮೂಡಿದೆ. ಕಳೆದ ಒಂದು ವರ್ಷದಿಂದಲೂ ಇದೇ ಅತಂತ್ರ ಪರಿಸ್ಥಿತಿಯಲ್ಲಿರುವ ಚಿತ್ರರಂಗಕ್ಕೆ ಮತ್ತೆ ದೊಡ್ಡ ಹೊಡೆತ ಬಿದ್ದಿರುವುದನ್ನು ನೋಡಿದರೆ, ಅಂತಿಮ ಹಂತ ತಲುಪುವ ಸೂಚನೆಯೇನೋ ಎಂಬಂತೆ ಭಾಸವಾಗುತ್ತಿದೆ.
ಈಗಷ್ಟೇ ಚಿತ್ರರಂಗ ಚೇತರಿಸಿಕೊಳ್ಳುತ್ತಿತ್ತು. ಕಳೆದ ವರ್ಷ ಇದೇ ತಿಂಗಳಲ್ಲಿ ಕೊರೊನಾ ಒಕ್ಕರಿಸಿ ಆತಂಕ ಸೃಷ್ಟಿಸಿತ್ತಲ್ಲದೆ, ಲಾಕ್‌ಡೌನ್‌ಗೂ ಕಾರಣವಾಗಿ ಎಲ್ಲರ ಬದುಕನ್ನೇ ಬರಡಾಗಿಸಿತ್ತು. ಈಗ ಮತ್ತದೇ ಆತಂಕ ಶುರುವಾಗುತ್ತಿದೆ! ಅರ್ಧ ಭರ್ತಿ ಆದೇಶದಿಂದ ಚಿತ್ರರಂಗ ಮತ್ತೆ ಮೊದಲಿನಂತಾಗಲು ವರ್ಷಗಳೇ ಬೇಕಾಗಬಹುದೇನೋ? ಕಳೆದ ಒಂದು ವರ್ಷದ ಕೊರೊನಾ ಹೊಡೆತಕ್ಕೆ ಇನ್ನೂ ಚಿತ್ರರಂಗ ಚೇತರಿಸಿಕೊಂಡಿಲ್ಲ. ಮತ್ತೆ ಕೊರೊನಾ ಹಾವಳಿ ಎದುರಾಗಿ ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ಚಿತ್ರರಂಗವನ್ನೇ ನಂಬಿದವರ ಪಾಡು ಅತಂತ್ರದಲ್ಲಿರುವುದಂತೂ ಸತ್ಯ.

“ರಾಬರ್ಟ್‌” ಚಿತ್ರ ಬಿಡುಗಡೆ ನಂತರ ಚಿತ್ರರಂಗದ ಮೊಗದಲ್ಲಿ ಮಂದಹಾಸ ಮೂಡಿತ್ತು. ಮತ್ತೆ ಆ ದಿನಗಳಿಗೆ ಚಿತ್ರರಂಗ ಮರಳುತ್ತೆ ಎಂಬ ಲೆಕ್ಕಾಚಾರವೂ ಜೋರಾಗಿತ್ತು. ಆ ಚಿತ್ರದ ಬಳಿಕ ಪುನೀತ್‌ರಾಜಕುಮಾರ್‌ಅಭಿನಯದ “ಯುವರತ್ನ” ರಿಲೀಸ್‌ಆಯ್ತು. ಎಲ್ಲೆಡೆ ಮೆಚ್ಚುಗೆ ಪಡೆಯುತ್ತಿದ್ದಂತೆಯೇ ಪುನಃ, ಅರ್ಧ ಭರ್ತಿ ಆದೇಶ ಹೊರಬಿತ್ತು. “ಯುವರತ್ನ” ಬಳಿಕ ಅದೆಷ್ಟೋ ಸಿನಿಮಾಗಳು ಚಿತ್ರಮಂದಿರಕ್ಕೆ ಬರಲು ಉತ್ಸಾಹ ತೋರಿದ್ದವು. ವರ್ಷಗಟ್ಟಲೆ ಕಾದಿದ್ದ ಸಿನಿಮಾಗಳಿಗೆ ಸರ್ಕಾರದ ಈ ಆದೇಶದಿಂದ ಆಘಾತವಾಗಿದ್ದು ಸುಳ್ಳಲ್ಲ. ಸಾಲ ಸೂಲ ಮಾಡಿ ಸಿನಿಮಾ ಮಾಡಿದ್ದ ಅನೇಕ ಹೊಸ ನಿರ್ಮಾಪಕರು, ಹೇಗೋ ರಿಲೀಸ್‌ಮಾಡಿ, ಬದುಕಿ ಬಿಡೋಣ ಅಂದುಕೊಂಡಿದ್ದರು. ಈಗ ನೋಡಿದರೆ, ಅದಕ್ಕೂ ಕಲ್ಲು ಬಿದ್ದಂತಾಗಿದೆ. ಮೂಲಗಳ ಪ್ರಕಾರ ೩೫೦ ಕ್ಕೂ ಹೆಚ್ಚು ಚಿತ್ರಗಳು ರಿಲೀಸ್‌ಗೆ ರೆಡಿಯಾಗಿವೆ. ಈ ಇಷ್ಟೂ ಚಿತ್ರಗಳ ಬಜೆಟ್‌ಲೆಕ್ಕ ಹಾಕಿದರೆ, ಸಾವಿರ ಕೋಟಿ ಮೀರುತ್ತೆ.

ಇಲ್ಲಿ ಹಣ ಹಾಕಿ ಹಣ ತೆಗೆಯುತ್ತೇನೆ ಅನ್ನೋದು ಕಷ್ಟದ ಮಾತು. ಹೋಗಲಿ ಹಾಕಿದ ಹಣ ತೆಗೆಯೋಣ ಅಂತಂದುಕೊಂಡರೂ, ಕೊರೊನಾ ಹೊಡೆತ ಕೊಟ್ಟಿದೆ. ಹೇಗೋ ಬಂದಷ್ಟು ಬರಲಿ ಅಂದುಕೊಂಡು ರಿಲೀಸ್‌ಗೆ ಸಜ್ಜಾಗಿದ್ದರೂ, ಅರ್ಧ ಭರ್ತಿ ಆದೇಶ ಮತ್ತಷ್ಟು ನರಳುವಂತೆ ಮಾಡಿಬಿಟ್ಟಿದೆ. ಹೇಗೋ ಒಂದಷ್ಟು ಸಿನಿಮಾಗಳು ಚಿತ್ರೀಕರಣ ಶುರುಮಾಡಿದ್ದವು. ಈಗ ಶೂಟಿಂಗ್‌ಮಾಡೋಕೂ ಹಿಂದೆ ಮುಂದೆ ನೋಡುವಂತಹ ಸ್ಥಿತಿ ಬಂದೊದಗಿದೆ. ಹೇಗೋ ಚಿತ್ರೀಕರಣ ಶುರುವಾಯ್ತು ಅಂತ ಕಾರ್ಮಿಕ ವಲಯ ಸಂಭ್ರಮದಲ್ಲೇ ಇತ್ತು. ಆದರೀಗ, ಅವರ ಅನ್ನಕ್ಕೂ ಕುತ್ತು ಬರುವಂತಾಗಿದೆ. ಅವರ ಗೋಳಿನ ದನಿ ಮಾತ್ರ ಅಲ್ಲೇ ಗಿರಕಿಹೊಡೆಯುವಂತಾಗಿದೆ.

ಅದೇನೆ ಇರಲಿ, ಸರ್ಕಾರದ ಈ ಕ್ರಮದಿಂದ ಸಿನಿಮಾಗಳಿಗೆ ಪೆಟ್ಟು ಕೊಟ್ಟಿದ್ದಷ್ಟೇ ಅಲ್ಲ, ನಿರ್ಮಾಪಕರನ್ನೂ ಹೈರಾಣಾಗಿಸಿದೆ. ಚಿತ್ರಮಂದಿರಗಳಲ್ಲಿ ದುಡಿಯುವ ಕೈಗಳು ಹಿಜುಕಿಕೊಳ್ಳುವಂತಾಗಿದೆ. ಈಗಷ್ಟೇ ಚಿತ್ರಮಂದಿರಗಳತ್ತ ಜನರು ದಾಪುಗಾಲು ಇಡುತ್ತಿದ್ದರು. ಈ ಬೆನ್ನಲ್ಲೇ ಪುನಃ ಚಿತ್ರಮಂದಿರಗಳಿಗೆ ಅರ್ಧ ಭರ್ತಿ ಎಂಬ ನಿರ್ಧಾರದಿಂದ ಇಡೀ ಚಿತ್ರೋದ್ಯಮವೇ ದಿಕ್ಕು ತೋಚದಂತಾಗಿ ಕುಳಿತಿದೆ. ಈಗಾಗಲೇ ಒಂದು ವರ್ಷದಿಂದ ಕಾದು ಸೋತು, ಸಣ್ಣಗಾಗಿರುವ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದ್ದವು. ಈಗ ಆ ಚಿತ್ರಗಳ ಬಿಡುಗಡೆ ದಿನಾಂಕ ಕೂಡ ಮುಂದೆ ಹೋಗುತ್ತಿವೆ. ಕೋಟಿ ಹಣ ಹಾಕಿ ನಿರ್ಮಿಸಿದ್ದ ನಿರ್ಮಾಪಕ ಕೂಡ ಮತ್ತಷ್ಟು ದಿನ ಒದ್ದಾಡುವಂತಹ ಸ್ಥಿತಿ ಬಂದೊದಗಿದೆ. “ಯುವರತ್ನ” ಮೇಲೇಳುವ ಹೊತ್ತಲ್ಲೇ ಈ ನಿರ್ಧಾರ ಹೊರಬಂದಿದೆ.

“ಕೋಟಿಗೊಬ್ಬ 3”, “ಸಲಗ”, ”ಕೆಜಿಎಫ್‌″, “ಕೃಷ್ಣ ಟಾಕೀಸ್‌”, “ಭಜರಂಗಿ” ಸೇರಿದಂತೆ ಹಲವು ಚಿತ್ರಗಳು ಬಿಡುಗಡೆ ದಿನವನ್ನು ಘೋಷಿಸಿದ್ದವು. ಈಗ ಅನಿವಾರ್ಯ ಎಂಬಂತೆ ಮಂದಕ್ಕೆ ಹೋದರೂ ಅಚ್ಚರಿ ಇಲ್ಲ. ಒಂದು ವೇಳೆ ಈ ನಿರ್ಧಾರ ಮತ್ತಷ್ಟು ಕಠಿಣಗೊಂಡರೆ, ಸಿನಿಮಾರಂಗದ ಪಾಡೇನು, ಸ್ಟಾರ್‌ಚಿತ್ರಗಳ ಜೊತೆಗೆ ಸಣ್ಣಪುಟ್ಟ ಚಿತ್ರಗಳ ದೊಡ್ಡ ಪಟ್ಟಿಯೂ ಇದೆ. ಆ ಎಲ್ಲಾ ಸಿನಿಮಾ ನಿರ್ಮಾಪಕರ ಸ್ಥಿತಿ ಏನಾಗಬೇಡ? ಚಿತ್ರರಂಗವನ್ನೇ ನಂಬಿದವರ ಬದುಕು ಹೇಗಾಗಬೇಡ? ಒಂದು ಸಿನಿಮಾ ಮಾಡುವ ಕಷ್ಟ, ನಿರ್ಮಾಪಕರಿಗಷ್ಟೇ ಗೊತ್ತು. ಎಲ್ಲಿಂದಲೋ ಹಣ ತಂದು, ಸಾಲ ಮಾಡಿ, ಬಡ್ಡಿ ಕಟ್ಟಿ, ಸಿನಿಮಾ ಮಾಡುತ್ತಾನೆ. ಆದರೆ, ಆ ಹಣ ಹಿಂದಿರುಗುತ್ತದೆ ಎಂಬ ಯಾವ ಗ್ಯಾರಂಟಿಯೂ ಇಲ್ಲಿರೋದಿಲ್ಲ. ಒಂದು ಸಿನಿಮಾ ಶುರುವಾದರೆ, ನೂರಾರು ಕುಟುಂಬ ಬದುಕು ಕಟ್ಟಿಕೊಳ್ಳುತ್ತೆ. ಆದರೆ, ಸಿನಿಮಾ ನಿರ್ಮಾಪಕನಿಗೇ ದೊಡ್ಡ ಪೆಟ್ಟು ಬಿದ್ದರೆ, ಅಂತಹ ಕುಟುಂಬಗಳೂ ಹೊಡೆತ ತಿನ್ನುತ್ತವೆ. ಇನ್ನೇನು ರಿಲೀಸ್‌ಗೆ ಸಜ್ಜಾಗುತ್ತಿರುವ ಹೊತ್ತಿಗೆ ಮತ್ತೊಂದು ಆತಂಕದ ತೂಗುಕತ್ತಿ ನೇತಾಡುತ್ತಿರುವುದು ನಿಜಕ್ಕೂ ಬೇಸರದ ವಿಷಯ. ಮತ್ತದೇ ಭಯ ಹುಟ್ಟಿಸುತ್ತಿರುವ ಕೊರೊನಾ, ಚಿತ್ರರಂಗದವರ ಬಣ್ಣವನ್ನು ಅಳಿಸದಂತಿರಲಿ ಎಂಬುದೇ ಸಿನಿಲಹರಿಯ ಆಶಯ.

Categories
ಸಿನಿ ಸುದ್ದಿ

ಬಣ್ಣ ನಂಬಿ ಬದುಕುವರ ಬಣ್ಣ ಅಳಿಸೋದು ಬೇಡ ಅಂದ್ರು ಶ್ರೀಮುರಳಿ! ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಅನ್ನೋದು ರೋರಿಂಗ್‌ ಸ್ಟಾರ್‌ ಕಳಕಳಿ

ಕೊರೊನಾ ಎರಡನೇ ಅಲೆ ಜೋರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ನಿನ್ನೆಯಷ್ಟೇ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಟಫ್‌ ರೂಲ್ಸ್‌ ಜಾರಿ ಮಾಡಿದೆ. ಚಿತ್ರಮಂದಿರಗಳಿಗೆ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಚಿತ್ರರಂಗ ದೊಡ್ಡ ಧ್ವನಿ ಎತ್ತಿದೆ.
ಈ ಆದೇಶ ಹೊರಬರುತ್ತಿದ್ದಂತೆಯೇ ಚಿತ್ರರಂಗದ ಸ್ಟಾರ್‌ ನಟರಿಂದ ಹಿಡಿದು, ಚಿತ್ರೋದ್ಯಮದ ಎಲ್ಲರೂ ಒಕ್ಕೊರಲ ಧ್ವನಿ ಎತ್ತಿದ್ದಾರೆ. ಅಂತೆಯೇ ನಟ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರೂ ಕೂಡ ತಮ್ಮ ಟ್ವೀಟ್‌ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಅವರು ಮಾಡಿರುವ ಟ್ವೀಟ್‌ನಲ್ಲಿ “ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿರೋಧ ಇಲ್ಲ. ಇದು ಅಗತ್ಯ ಕೂಡ. ಸರ್ಕಾರ ಕೈಗೊಳ್ಳುವ ನಿರ್ಧಾರಗಳಲ್ಲಿ ಬಣ್ಣವನ್ನೇ ನಂಬಿ ಬದುಕುವರ “ಬಣ್ಣ” ಅಳಿಸೋದು ಬೇಡ ಎಂಬ ಮನವಿ ನಮ್ಮದು. ಕೊರೋನಾ ಎಚ್ಚರಿಕೆ ಕ್ರಮಗಳೊಂದಿಗೆಯೇ ಮನರಂಜಿಸುವ ಕೆಲಸ ಚಿತ್ರೋದ್ಯಮದಿಂದ ಆಗುತ್ತೆ ಎಂಬ ನಂಬಿಕೆ ಸರ್ಕಾರಕ್ಕೂ ಬರಲಿ” ಎಂದು ಹೇಳಿದ್ದಾರೆ.
ಅವರ ಈ ಟ್ವೀಟ್‌ಗೆ ಫ್ಯಾನ್ಸ್‌ ಸೇರಿದಂತೆ ಸಾಮಾಜಿಕ ವಲಯದಿಂದಲೂ ಮೆಚ್ಚುಗೆ ಸಿಕ್ಕಿದ್ದು, ಎಲ್ಲರೂ ಶ್ರೀಮುರಳಿ ಅವರ ಮಾತಿಗೆ ಧ್ವನಿಗೂಡಿಸಿದ್ದಾರೆ.


ಇನ್ನು, ಸಾಮಾಜಿಕ ತಾಣದಲ್ಲಿ ಮತ್ತೊಂದು ವಿಡಿಯೋ ಹರಿಬಿಟ್ಟಿರುವ ಶ್ರೀಮುರಳಿ, “ಮನಸು ಬಹಳ ಬೇಜಾರಾಗುತ್ತಿದೆ. ಈಗಷ್ಟೇ ಒಂದು ನ್ಯೂಸ್‌ ಕೇಳಿದೆ. ಮತ್ತೊಮ್ಮೆ ಶೇ.50ರಷ್ಟು ಆಕ್ಯುಪೆನ್ಸಿಗೆ ಅವಕಾಶ ಕೊಟ್ಟಿದ್ದಾರೆ ಅಂತ. ನಿನ್ನೆ ತಾನೇ “ಯುವರತ್ನ” ರಿಲೀಸ್‌ ಆಗಿದೆ. ಅದಕ್ಕೂ ಮುಂಚೆ “ರಾಬರ್ಟ್‌” ರಿಲೀಸ್‌ ಆಗಿದೆ. ಈ ವಾರ ಒಂದಷ್ಟು ಸಿನಿಮಾಗಳು ರಿಲೀಸ್‌ ಆಗಬೇಕಿದೆ. ಏನ್‌ ಮಾಡಬೇಕು ಸರ್.‌ ರಿಲೀಸ್‌ ಆಗಿರುವ ಸಿನಿಮಾಗಳ ಗತಿ ಏನಾಗಬೇಕು ಸರ್.‌ ಹಲವು ಸಂಸಾರಗಳು ಈ ವೃತ್ತಿಯನ್ನು ನಂಬಿ ಬದುಕುತ್ತಿದ್ದೇವೆ ಸರ್.‌ ನಮಗೆ ಬೇರೇನೂ ಗೊತ್ತಿಲ್ಲ ಸರ್.‌ ಜನರಿಗೆ ಅಳಿಸ್ತೀವಿ, ಇಲ್ಲ ನಗಸ್ತೀವಿ ಇಷ್ಟೇ ಸರ್‌ ಗೊತ್ತಿರೋದು. ಎಲ್ಲೋ ಒಂದು ಕಡೆ ನಿಜವಾಗಿಯೂ ನೋವಾಗುತ್ತಿದೆ ಸರ್.‌ ಏನ್‌ ಮಾಡಬೇಕು ನಿರ್ಮಾಪಕರು.

ಅಷ್ಟೊಂದು ಖರ್ಚು ಮಾಡಿ ಎಂಟರ್‌ಟೈನ್‌ಮೆಂಟ್‌ಗೋಸ್ಕರ ಸಿನಿಮಾ ಮಾಡಿದಾಗ ನಾವೆಲ್ಲಾ ಏನ್‌ ಆಗಬೇಕು ಸರ್.‌ ದಯವಿಟ್ಟು ಇದನ್ನು ವಾಪಸ್‌ ತಗೊಳ್ಳಿ. ದಯವಿಟ್ಟು ಶೇ.100 ಆಕ್ಯುಪೆನ್ಸಿಗೆ ಅವಕಾಶ ಕೊಡಿ ಸರ್.‌ ಇದು ನಮ್ಮ ಮನವಿ. ನೀವು ಇವತ್ತು ಇದನ್ನು ಮಾಡಲಿಲ್ಲವೆಂದರೆ, ಹಲವಾರು ಜನರು‌ ನಾಳೆ ಬೀದಿಗೆ ಬರುತ್ತಾರೆ. ಇನ್ನಷ್ಟು ಸಿನಿಮಾಗಳು ರಿಲೀಸ್‌ ಆಗುತ್ತವೆ. ವ್ಯಾಕ್ಸಿನೇಷನ್‌ ಬಂದಿದೆ ಸರ್.

ಎಲ್ಲರೂ ತಗೊಂಡು ಸೇಫ್‌ ಆಗ್ತಾರೆ. ನೀವೇ ಸಲಹೆ ಕೊಟ್ಟಿದ್ದೀರಿ. ಆದರೂ ಈ ನಿರ್ಧಾರದಿಂದ ಭಯ ಆಗುತ್ತಿದೆ. ಮತ್ತೊಮ್ಮೆ ಶೇ.100ರಷ್ಟು ಆಕ್ಯುಪೆನ್ಸಿ ಕೊಡಿ” ಎಂದು ಮನವಿ ಮಾಡಿದ್ದಾರೆ.
ಅದೇನೆ ಇರಲಿ, ಈಗ ಚಿತ್ರರಂಗದ ಸ್ಟಾರ್‌ ನಟರೆಲ್ಲರೂ ಒಗ್ಗಟ್ಟಾಗಿ ಮನವಿ ಮಾಡುತ್ತಿದ್ದಾರೆ. ಸರ್ಕಾರ ಕೂಡ ಈ ಬಗ್ಗೆ ಯೋಚಿಸಿ, ಚಿತ್ರರಂಗದ ಮನವಿಗೆ ಸ್ಪಂದಿಸುವುದೇ ಎಂದು ಕಾದು ನೋಡಬೇಕಿದೆ.

Categories
ಸಿನಿ ಸುದ್ದಿ

ಸ್ಟಾರ್‌ಗಳೆಲ್ಲ ತಮ್ಮದಷ್ಟೇ ತಮಗೆ ಸಾಕು ಅಂತಂದುಕೊಂಡರೆ ಕನ್ನಡ ಚಿತ್ರೋದ್ಯಮ ಉಳಿಯುತ್ತಾ ?

ಚಿತ್ರರಂಗ ಅನ್ನೋದು ಒಂದು ಮನೆ ಇದ್ದಂತೆ… ಕನ್ನಡ ಚಿತ್ರೋದ್ಯಮದ ಮಂದಿ ಬಹಿರಂಗ ವೇದಿಕೆಗಳಲ್ಲಿ ಹೀಗೆಲ್ಲ ಹೇಳುವುದನ್ನು ನೀವು ಕೇಳಿದ್ದೀರಿ. ಹಾಗಂತ ಸ್ಟಾರ್‌ಗಳು ಕೂಡ ಮಾತನಾಡುವುದು ಮಾಮೂಲು. ಆದರೆ ಇತ್ತೀಚೆಗೆ ಚಿತ್ರರಂಗ ಒಂದೇ ಮನೆಯ ಕುಟುಂಬದಂತೆ ಕಂಡಿದ್ದು ನಿಮಗೇನಾದರೂ ಗೊತ್ತಾ ? ಇಲ್ಲ, ಅವರವರ ಸಿನಿಮಾಗಳಿಗೆ ಸಂಕಷ್ಟಗಳು, ಸವಾಲುಗಳು ಎದುರಾದಾಗೆಲ್ಲ ಅವರವರೇ ಮಾತನಾಡುವುದು ಈಗ ವಾಡಿಕೆ ಅಗಿದೆ. ಅದರ ಪರಿಣಾಮವೇ, ಸ್ಟಾರ್‌ ಗಳೆಲ್ಲ ಅವರವರ ಸಿನಿಮಾಕ್ಕೆ ಸಂಕಷ್ಟ ಬಂದಾಗ ಮಾತನಾಡುತ್ತಿದ್ದಾರೆ. ಅದೇ ಸಾಲಿನಲ್ಲೀಗ ಯುವರತ್ನನ ಸರದಿ.

ಬೇಕಾದರೆ ಇತ್ತೀಚಿನ ದಿನಗಳಲ್ಲೇ ಆದ ಬೆಳವಣಿಗೆ ನೋಡಿ, “ಪೊಗರುʼ ಚಿತ್ರಕ್ಕೆ ಸಂಕಷ್ಟ ಎದುರಾಗುವ ಮುನ್ಸೂಚನೆ ಸಿಕ್ಕಾಗ ನಟ ಧ್ರುವ ಸರ್ಜಾ ಅಬ್ಬರಿಸಿ, ಬೊಬ್ಬಿರಿದರು. ಸೋಷಲ್‌ ಮೀಡಿಯಾದಲ್ಲಿ ಅದಕ್ಕೆ ಕೆಲವರು ಸಾಥ್‌ ಕೊಟ್ಟರು. ಅದು ದೊಡ್ಡ ಸುದ್ದಿಯೂ ಆಯಿತು. ಸರ್ಕಾರ ಚಿತ್ರಮಂದಿರಕ್ಕೆ ಹೇರಲು ಹೊರಟಿದ್ದ ನಿರ್ಬಂಧದ ಪ್ರಸ್ತಾಪ ಅಷ್ಟಕ್ಕೆ ನಿಂತುಹೊಯಿತು. ಮುಂದೆ ರಾಬರ್ಟ್‌ ರಿಲೀಸ್‌ಗೆ ಅಡ್ಡಿಯಾದ ವಿಚಾರದಲ್ಲಿ ನಟ ದರ್ಶನ್‌ ಟಾಲಿವುಡ್‌ ವಿರುದ್ಧ ಕೆಂಡ ಕಾರಿದರು. ಅದಕ್ಕೂ ಕೆಲವರು ಸೋಷಲ್‌ ಮೀಡಿಯಾದಲ್ಲಿ ಬೆಂಬಲ ಕೊಟ್ಟರು. ಅದು ಕೂಡ ದೊಡ್ಡ ಸುದ್ದಿಯಾಯಿತು. ರಿಲೀಸ್‌ ಸಮಸ್ಯೆ ತಕ್ಷಣವೇ ಬಗೆಹರಿಯಿತು. ಈಗ ʼಯುವರತ್ನʼ ಚಿತ್ರದ ಸರದಿ.

ಯುವ ರತ್ನ ಚಿತ್ರ ರಿಲೀಸ್‌ ಆಗಿ ಇನ್ನು ಎರಡು ದಿನ ಆಗಿಲ್ಲ. ಆಗಲೇ ಸರ್ಕಾರ ಕೊರೋನಾ ಕಾರಣಕ್ಕೆ ರಾಜ್ಯದಲ್ಲಿ ಟಫ್‌ ರೂಲ್ಸ್‌ ತಂದಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿನ ಚಿತ್ರ ಮಂದಿರಗಳಲ್ಲಿ ಶೇ.50 ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ಕೊಟ್ಟಿದೆ. ಇದು ಯುವರತ್ನ ಚಿತ್ರದ ಸಕ್ಸಸ್‌ ಓಟಕ್ಕೆ ಭರ್ಜರಿ ಬ್ರೇಕ್‌ ಹಾಕಿದೆ. ಒಂಥರ ಇದು ಆಘಾತವೇ ಹೌದು.

ನಟ ಪುನೀತ್‌ ರಾಜ್‌ ಕುಮಾರ್‌ ಈಗ ಸರ್ಕಾರದ ಮೇಲೆ ಸಿಟ್ಟಾಗಿದ್ದಾರೆ. ಇದಕ್ಕಿದ್ದಂತೆ ಸರ್ಕಾರ ಈ ಆದೇಶ ಜಾರಿಗೊಳಿಸಿ, ತಮಗೆ ಅನ್ಯಾಯ ಮಾಡಿದೆ ಅಂತ ಗುಡುಗಿದ್ದಾರೆ. ಮೊದಲೇ ಸರ್ಕಾರ ಈ ರೀತಿ ಮಾಡುತ್ತೇವೆ ಅಂತ ಹೇಳದ್ರೆ, ನಾವು ಚಿತ್ರವನ್ನೇ ಬಿಡುಗಡೆ ಮಾಡುತ್ತಿರಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರೋದ್ಯಮದ ಹಲವರು ಅವರ ಮಾತಿಗೆ ಸಾಥ್‌ ಕೊಟ್ಟಿದ್ದಾರೆ.

ಹಾಗೆಯೇ ಕೆಲವರು ಪುನೀತ್‌ ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟ ಪುನೀತ್‌ ತಮ್ಮ ಅನುಕೂಲಕ್ಕೆ ತಕ್ಕಂತೆ ಬೇಡಿಕೆ ಇಡುವುದು ಸೂಕ್ತವಲ್ಲ ಅಂತ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಟಾಂಗ್‌ ಕೊಟ್ಟಿದ್ದಾರೆ. ಕೆಲವರು ಇದೆಲ್ಲ ತಮಗ್ಯಾಕೆ ಅಂತಲೂ ಮೌನ ತಾಳಿದ್ದಾರೆ. ಮತ್ತೆ ಹಲವರು ಸಂಬಂಧವೇ ಇಲ್ಲದ್ದಂತೆ ಮುಗುಮ್‌ ಅಗಿದ್ದಾರೆ. ಹೀಗೆಲ್ಲ ಆಗುವುದ್ಯಾಕೆ ಅಂದ್ರೆ, ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲದ ಕಾರಣಕ್ಕೆ.

ಒಂದು ಕಾಲದಲ್ಲಿ ಕೂಡ ಚಿತ್ರರಂಗ ಅಂದ್ರೆ ಕೂಡು ಕುಟುಂಬದಂತೆ ಇತ್ತು. ಯಾವುದೇ ಸಮಸ್ಯೆ ಎದುರಾದಾಗ ಹಿರಿಯ ನೇತೃತ್ವದಲ್ಲಿ ಒಂದಾಗಿ ಬೀದಿಗಿಳಿಯುತ್ತಿತ್ತು. ಈಗ ಅದು ಒಡೆದ ಮನೆ. ಅಲ್ಲಿ ಯಜಮಾನ ಯಾರು ಎಂಬುದೇ ಗೊತ್ತಿಲ್ಲ. ಪ್ರತಿಯೊಬ್ಬರು ಇಲ್ಲಿ ದೊಡ್ಡವರೇ. ವಿಶೇಷವಾಗಿ ಸ್ಟಾರ್‌ ಗಳಂತೂ ತಾವೇ ಮೇಲೆ, ತಾವು ಹೇಳಿದ್ದೆ ಆಗ್ಬೇಕು ಅನ್ನೋ ರೇಂಜ್‌ ನಲ್ಲಿ ಪೋಸು ನೀಡುತ್ತಿದ್ದಾರೆ. ಉದ್ಯಮ ಎನ್ನುವುದಕ್ಕಿಂತ ತಮ್ಮ ತಮ್ಮ ಸಿನಿಮಾಗಳನ್ನ ಹಿತವನ್ನು ತಾವು ಕಾಯ್ದುಕೊಳ್ಳುವುದಕಷ್ಟೇ ಸೀಮಿತವಾಗುಳಿಯುತ್ತಿದ್ದಾರೆ. ಅದೆಲ್ಲದರ ಪರಿಣಾಮ ಚಿತ್ರೋದ್ಯಮ ಇವತ್ತು ಕೊರೋನಾ ನೆಪದಲ್ಲಿ ಆರ್ಥಿಕ ದಿವಾಳಿ ಹಂತಕ್ಕೆ ಬಂದು ನಿಂತಿದೆ ಎನ್ನುವುದು ದುರಂತ.

Categories
ಸಿನಿ ಸುದ್ದಿ

ಕಬ್ಜ ಶೂಟಿಂಗ್ ವೇಳೆ ಅವಘಡ : ಉಪ್ಪಿ ತಲೆಗೆ ಬಿತ್ತು ಪೆಟ್ಟು ಅಪಾಯದಿಂದ ಪಾರಾದ ರಿಯಲ್‌ಸ್ಟಾರ್ ಉಪೇಂದ್ರ

ಚಿತ್ರೀಕರಣ ಸಮಯದಲ್ಲಿ ಆಗಾಗ ಒಂದಷ್ಟು ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ. ಇದು ಹೊಸದೇನಲ್ಲ. ಎಷ್ಟೋ ಸಲ, ಸಾಹಸ ಸನ್ನಿವೇಶಗಳಲ್ಲಿ ಇಂತಹ ಅವಘಡಗಳು ಸಂಭವಿಸುವುದುಂಟು. ಈಗ ಇಲ್ಲಿ ಹೇಳಹೊರಟಿರುವ ವಿಷಯ, “ಕಬ್ಜ’ ಚಿತ್ರದ್ದು. ಹೌದು, ಉಪೇಂದ್ರ ಅಭಿನಯದ “ಕಬ್ಜ” ಆರಂಭದಿಂದಲೂ ಜೋರು ಸದ್ದು ಮಾಡುತ್ತಲೇ ಇದೆ. ಈಗ ಮತ್ತೊಂದು ಸುದ್ದಿಗೂ ಕಾರಣವಾಗಿದೆ. ಹಾಗಂತ, ಅದು ಖುಷಿ ಪಡುವ ಸುದ್ದಿಯಲ್ಲ. ಬದಲಾಗಿ, ಬೇಸರ ಪಡುವ ಸುದ್ದಿ. ವಿಷಯ ಏನಪ್ಪಾ ಅಂದರೆ, ಉಪೇಂದ್ರ ಅವರು ಚಿತ್ರದ ಸಾಹಸ ದೃಶ್ಯದಲ್ಲಿ ನಟಿಸುತ್ತಿದ್ದರು. ಈ ವೇಳೆ, ವಿಲನ್ ಬೀಸಿದ ಕಬ್ಬಿಣದ ರಾಡ್ ಆಕಸ್ಮಿಕವಾಗಿ ಅವರ ತಲೆಗೆ ಬಿದ್ದ ಪರಿಣಾಮ, ಅವರಿಗೆ ಪೆಟ್ಟಾದ ಘಟನೆ ನಡೆದಿದೆ.

ಹೌದು, ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ “ಕಬ್ಜ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಸ್ಟಂಟ್ ಶೂಟಿಂಗ್ ಸಮಯದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ರಾಡ್ ತಗುಲಿ ಈ ಅವಘಡ ಸಂಭವಿಸಿದೆ. ಖಳನಾಯಕ ರಾಡ್ ನಿಂದ ಹೊಡೆಯುವ ಸನ್ನಿವೇಶದಲ್ಲಿ ಉಪೇಂದ್ರ ಅವರು ತಪ್ಪಿಸಿಕೊಳ್ಳಬೇಕಾಗಿತ್ತು.

ಈ ವೇಳೆ ಆಕಸ್ಮಿಕವಾಗಿಯೇ ಉಪ್ಪಿಗೆ ರಾಡ್ ತಾಗಿದೆ. ಅಲ್ಲಿದ್ದ ಚಿತ್ರತಂಡದವರು ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಹೆಚ್ಚು ಅಪಾಯ ಸಂಭವಿಸದ ಕಾರಣ, ಪುನಃ ಉಪೇಂದ್ರ ಅವರು ಸ್ಪಲ್ಪ ಹೊತ್ತು ಚೇತರಿಸಿಕೊಂಡ ಬಳಿಕ ಶೂಟಿಂಗ್ ನಿಲ್ಲಿಸದೆಯೇ ಅದೇ ಉತ್ಸಾಹದಲ್ಲಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ದೇಶಕ ಆರ್.ಚಂದ್ರು ಅವರು, ಸ್ಥಳದಲ್ಲಿದ್ದು, ಉಪೇಂದ್ರ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಆ ನಂತರ ಒಂದಿಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಬಳಿಕ ಎಲ್ಲರೂ ಅದೇ ಉತ್ಸಾಹದಿಂದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ.

Categories
ಸಿನಿ ಸುದ್ದಿ

ಕನ್ನಡ‌ ಚಿತ್ರರಂಗಕ್ಕೆ ಅರ್ಧ ಶಾಕ್! ಸರ್ಕಾರದ ಈ ನಿರ್ಧಾರಕ್ಕೆ ನಟ ಪುನೀತ್ ಆಕ್ಷೇಪ!! ಕೂಡಲೇ ಶೇ.100ರಷ್ಟು ಭರ್ತಿಗೆ ಅವಕಾಶ ಕೊಡಿ ಎಂದ ಅಪ್ಪು

ಕನ್ನಡ‌ ಚಿತ್ರರಂಗಕ್ಕೆ ಈಗ ಮತ್ತೆ ಕೊರೊನಾ ಬಿಸಿ ತಟ್ಟುತ್ತಿದೆ. ಕೊರೊನೊ ಎರಡನೇ ಅಲೆ ಜೋರಾಗುತ್ತಿರುವಂತೆಯೇ ಕೊರೊನೊ ಸಂಖ್ಯೆ ಹೆಚ್ಚುತ್ತಿದೆ. ಈ ಕುರಿತಂತೆ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಹೀಗಾಗಿ ಟಫ್ ರೂಲ್ಸ್ ಜಾರಿ ಮಾಡಿದೆ. ಇದರಿಂದಾಗಿ ಕನ್ನಡ‌ಚಿತ್ರರಂಗಕ್ಕೂ ಸಮಸ್ಯೆ ಎದುರಾಗಿದೆ. ಚಿತ್ರಮಂದಿರಗಳಿಗೆ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಕೊಡಲಾಗಿದೆ. ಈ ನಿರ್ಬಂಧ ದಿಂದ ಇಡೀ ಚಿತ್ರೋದ್ಯಮವೇ ದಂಗಾಗಿದೆ. ಹಲವು ನಟರು, ನಿರ್ಮಾಪಕ, ನಿರ್ದೇಶಕರು ಕೂಡ ಸರ್ಕಾರದ ಈ‌ ನಿರ್ಧಾರಕ್ಕೆ ಆಕ್ಷೇಪಿಸಿದ್ದಾರೆ.

ಈಗಷ್ಟೇ ಕೊರೊನೊ ಸಮಸ್ಯೆ ತಿಳಿಯಾಗಿ ಮೆಲ್ಲನೆ ಚೇತರಿಸಿಕೊಳ್ಳುತ್ತಿರುವಂತೆಯೇ, ಈಗ ಟಫ್ ರೂಲ್ಸ್ ಜಾರಿಯಾಗಿದೆ. ಇದರಿಂದ ಪುನಃ ಸಿನಿರಂಗಕ್ಕೆ ದೊಡ್ಡ ಹೊಡೆತವೇ ಆಗಿದೆ ಎಂದು ಚಿತ್ರರಂಗದ ಹಲವರು ಸರ್ಕಾರದ ಆದೇಶಕ್ಕೆ ಆಕ್ಷೇಪಿಸಿದ್ದಾರೆ. ಅತ್ತ ನಟ ಪುನೀತ್ ರಾಜಕಾರ್ ಅವರು ಸಹ ಫೇಸ್ ಬುಕ್ ಲೈವ್ ಮಾಡುವ ಮೂಲಕ

ಮನವಿ‌ ಮಾಡಿದ್ದು, ಶೇ.50ರಷ್ಟು ಭರ್ತಿಗೆ ಆದೇಶ ಬೇಡ ಎಂದು‌ ಮನವಿ‌ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತಾಡುವುದಾಗಿಯೂ ಹೇಳಿದ್ದಾರೆ. ಇದು ನಮಗೆ ದೊಡ್ಡ ಸಮಸ್ಯೆ ಆಗುತ್ತೆ. ಈ ನಿಯಮ ಕೈ ಬಿಡಿ. ಜನರು ಮುಂಜಾಗ್ರತೆ ವಹಿಸಿ ಸಿನಿಮಾ ನೋಡುತ್ತಿದ್ದಾರೆ. ದಯವಿಟ್ಟು ಈ ನಿಯಮ ಹಿಂಪಡೆಯಿರಿ ಎಂದು‌ ಮನವಿ ಮಾಡಿದ್ದಾರೆ.

ಏಪ್ರಿಲ್ 1ರಂದು “ಯುವರತ್ನ” ಬಿಡುಗಡೆಯಾಗಿದೆ. ಮೊದಲ ದಿನ ಭರ್ಜರಿ ಗಳಿಕೆ‌ ದಾಖಲೆ ಮಾಡಿದ ಚಿತ್ರಕ್ಕೆ ಈಗ ಶೇ.50 ರಷ್ಟು ನಿಯಮ ಎಷ್ಟು‌ ಸರಿ ಎಂಬುದು ಎಲ್ಲರ ಪ್ರಶ್ನೆ.
ಇದೇ ನಿಯಮ ಮುಂದುವರೆದ್ದಲ್ಲಿ ಖಂಡಿತವಾಗಿಯೂ ಸಿನಿಮಾರಂಗ ಮತಗತೆ ಮೇಲೇಳಲು ಪರದಾಡಬೇಕಾಗುತ್ತೆ.
ಅದೇನೆ ಇರಲಿ, ಕೊರೊನೊ ಅಲೆ ಮತ್ತೆ ಶುರುವಾಗದಿರಲಿ, ಎಲ್ಲವೂ ಈಗ ನಡೆದಂತೆ ನಡೆಯಲಿ ಎಂಬುದೇ ಆಶಯ.

Categories
ಸಿನಿ ಸುದ್ದಿ

ಸ್ನೇಹರ್ಷಿ ಅಂದ್ರೆ ಇವ್ನೇನು ಮಹರ್ಷಿ ತಮ್ಮನಾ ?-ನವೀನ್ ಸಜ್ಜು‌ ಹಾಡಿಗೆ, ಕಿರಣ್‌ ನಾರಾಯಣ್‌ ಭರ್ಜರಿ ಸ್ಟೆಪ್‌ !

ತೆಲುಗಿನಲ್ಲಿ ʼಮಹರ್ಷಿ ʼ ಅಂತ ಸಿನಿಮಾ ಬಂದಿತ್ತು. ಅದು ಪ್ರಿನ್ಸ್‌ ಮಹೇಶ್‌ ಬಾಬು ಅಭಿನಯದ ಸಿನಿಮಾ. ದೊಡ್ಡ ಸದ್ದು ಮಾಡಿದ ಸಿನಿಮಾ ಅದು. ಕನ್ನಡದಲ್ಲೂ ಡಬ್‌ ಆಗಿ ಬಂತು ಅನ್ನೋದು ಬಹುತೇಕರಿಗೆ ಗೊತ್ತೇ ಇರುತ್ತೆ. ಅಂದ ಹಾಗೆ, ಈಗ ಕನ್ನಡದಲ್ಲೊಂದು “ಸ್ನೇಹರ್ಷಿ ʼಹೆಸರಲ್ಲೊಂದು ಸಿನಿಮಾ ಬರುತ್ತಿದೆ. ಟೈಟಲ್‌ ಕೇಳಿದಾಕ್ಷಣ ಇವ್ನೇನು ಮಹರ್ಷಿ ತಮ್ಮನಾ ಅಂತ ನಿಮಗೆ ಅನಿಸುತ್ತೆ. ಆದ್ರೆ ಹಾಗೆನಿಲ್ಲ. ಅದು ಬೇರೆ, ಇದೇ ಬೇರೆ. ಶ್ರೀ ಲಕ್ಷ್ಮೀ ಬೇಟೆರಾಯ ಲಾಂಛನದಲ್ಲಿ ಹೊಸ ಪ್ರತಿಭೆ ಕಿರಣ್‌ ನಾರಾಯಣ್‌ ನಿರ್ದೇಶಿಸಿ, ನಿರ್ಮಾಣ ಮಾಡಿರೋ ಚಿತ್ರ ಇದು. ವಿಶೇಷ ಅಂದ್ರೆ ಈ ಚಿತ್ರಕ್ಕೆ ಹೀರೋ ಕೂಡ ಅವರೆ.

ಸದ್ಯಕ್ಕೆ ಈ ಚಿತ್ರ ಸಾಂಗ್‌ ಲಾಂಚ್‌ ಮೂಲಕ ಸೌಂಡ್‌ ಮಾಡಿದೆ. ಚಿತ್ರೀಕರಣ ಮುಗಿಸಿ, ಚಿತ್ರ ತಂಡ ರಿಲೀಸ್‌ ಗೆ ಸಿದ್ಧತೆ ನಡೆಸಿದೆ. ಅದರ ಪ್ರಚಾರದ ಮೊದಲ ಹಂತವಾಗಿ ಈಗ ಚಿತ್ರದ ಮೊದಲ ಸಾಂಗ್‌ ಲಾಂಚ್‌ ಮಾಡಿದೆ. ಡಿ ಬಿಟ್ಸ್ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಹೊರಬಂದಿದೆ. ಗಾಯಕ ನವೀನ್ ಸಜ್ಜು ಹಾಡಿರುವ ಈ ಹಾಡು ಬಿಡುಗಡೆಯಾದ ಕೆಲವೇ ಸಮಯದಲ್ಲಿ ಅಧಿಕ‌ ವೀಕ್ಷಣೆ ಪಡೆದಿದೆ. ನಾಯಕ ಕಿರಣ್‌ ನಾರಾಯಣ್‌ ಈಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದು, ಅವರ ನೃತ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.ಫಸ್ಟ್‌ ಸಾಂಗ್‌ ಲಾಂಚ್‌ ಮೂಲಕ ಮಾಧ್ಯಮ ಮುಂದೆ ಬಂದಿದ್ದ ಚಿತ್ರ ತಂಡ ಚಿತ್ರದ ವಿಶೇಷತೆ ಹೇಳಿಕೊಂಡಿತು.

“ಚಿತ್ರಕ್ಕೆ‌ ನನ್ನ ನಾಗತಿಹಳ್ಳಿ ಪ್ರತಿಭಾಕಥೆ ಬರೆದಿದ್ದಾರೆ. ಅಮ್ಮ ಹೇಳುವ ಕಥೆ ಬೇರೆಯವರಿಗಿಂತ ನನಗೆ ಬೇಗ ಅರ್ಥವಾಗುತ್ತದೆ. ಹಾಗಾಗಿ ಈ ಚಿತ್ರವನ್ನು ನಿರ್ದೇಶಿಸಲು ಮುಂದಾದೆ.‌ ಸಾಮಾಜಿಕ ಕಾಳಜಿಯ ಕಥಾಹಂದರವಿದ್ದು, ನಾನೇ ಚಿತ್ರಕಥೆ ಬರೆದಿದ್ದೇನೆ. ಬರವಣಿಗೆಯಲ್ಲಿ ಅಂದುಕೊಂಡಿದ್ದೆಲ್ಲವೂ ತೆರೆ ಮೇಲೆ ಬಂದಿದೆʼ ಎಂದರು.
ನಾಗತಿಹಳ್ಳಿ ಪ್ರತಿಭಾ ಹಾಗೂ ಕಿರಣ್ ನಾರಾಯಣ್ ಈ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ಸುಧಾ ಬೆಳವಾಡಿ, ನಾಗತಿ ಹಳ್ಳಿ ಜಯಪ್ರಕಾಶ್‌, ಚಕ್ರವರ್ತಿ, ನವೀನ್, ದೇವಕಿ, ರಂಗನಾಥ್, ಮಾರುತಿ, ಸೌಮ್ಯ ಮುಂತಾದವರಿದ್ದಾರೆ. ಅಂದು ಫಸ್ಟ್‌ ಸಾಂಗ್‌ ಲಾಂಚ್‌ ಸಂದರ್ಭದಲ್ಲಿ ನಟಿ ಸುಧಾ ಬೆಳವಾಡಿ ಹಾಜರಿದ್ದು ಮಾತನಾಡಿದರು.”ಸಾಧಾರಣ ಕಥೆಯೊಂದು ಅಸಾಧಾರಣ ರೀತಿಯಲ್ಲಿ ತೆರೆಗೆ ಬಂದಿದೆ.ಕಥೆ ತುಂಬಾ ಚೆನ್ನಾಗಿದೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಸಿನಿರಂಗ ಪ್ರವೇಶಿಸುತ್ತಿರುವ ಈ ಹುಡುಗನಿಗೆ ಒಳ್ಳೆಯದಾಗಲಿʼಎಂದು ಶುಭ ಕೋರಿದರು.ಚಿತ್ರದಲ್ಲಿ ಮಾಧ್ಯಮ ಪ್ರತಿನಿಧಿ ಪಾತ್ರ ನಿರ್ವಹಿಸಿರುವ ಕಿರಣ್ ನಾರಾಯಣ್ ಅವರ ಸೋದರ ಮಾವ ನಾಗತಿಹಳ್ಳಿ ಜಯಪ್ರಕಾಶ್ ತಮ್ಮ ಪಾತ್ರದ ಬಗ್ಗೆ ವಿವರಿಸಿದರು.ಆಕಾಶ್ ಅಯ್ಯಪ್ಪ “ಸ್ನೇಹರ್ಷಿ” ಗೆ ಸಂಗೀತ ನೀಡಿದ್ದು, ರವಿಕಿಶೋರ್ ಛಾಯಾಗ್ರಹಣ ಹಾಗೂ ಶ್ರೀಕಾಂತ ಅವರ ಸಂಕಲನವಿದೆ.ರಾಜು ಎನ್.ಕೆ ಗೌಡ ಗೀತರಚನೆ ಮಾಡಿದ್ದಾರೆ. ಇಷ್ಟರಲ್ಲಿಯೇ ಚಿತ್ರ ತೆರೆಗೆ ಬರಲಿದೆಯಂತೆ.

Categories
ಸಿನಿ ಸುದ್ದಿ

ಹಾಡುಗಳ ಸಂಭ್ರಮದಲ್ಲಿ ರಿಯಾ- ಸಸ್ಪೆನ್ಸ್‌, ಥ್ರಿಲ್ಲರ್‌ ಕಥೆಗೆ ಆಕ್ಷನ್‌ ಕಟ್‌ ಹೇಳಿದ್ದಾರೆ ನಿರ್ದೇಶಕಿ ವಿಜಯಾ !

ಕನ್ನಡಕ್ಕೆ ಮತ್ತೊಬ್ಬರು ಮಹಿಳಾ ನಿರ್ದೇಶಕಿ ಎಂಟ್ರಿ ಆಗಿದ್ದಾರೆ. ಅವರ ಹೆಸರು ವಿಜಯಾ ನರೇಶ್.‌ ʼರಿಯಾʼ ಹೆಸರಿನ ಚಿತ್ರದ ಮೂಲಕ ಸ್ಯಾಂಡಲ್‌ ವುಡ್‌ನಲ್ಲಿ ಅವರು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಚಿತ್ರದ ಮೂಲಕವೇ ಗಮನ ಸೆಳೆಯುವ ರಿಯಾ ಒಂದು ಹಾರಾರ್‌ ಸಸ್ಸ್ಪೆನ್ಸ್‌ ಹಾಗೂ ಥ್ರಿಲ್ಲರ್‌ ಜಾನರ್‌ ಸಿನಿಮಾ. ಅದರ ಜತೆಗೆ ಇಲ್ಲಿ ಸೆಂಟಿಮೆಂಟ್‌ ಅಂಶಗಳು ಇವೆಯಂತೆ. ಸದ್ಯಕ್ಕೀಗ ಚಿತ್ರತಂಡ ಚಿತ್ರದ ಹಾಡುಗಳ ಬಿಡುಗಡೆ ಮೂಲಕ ಮಾಧ್ಯಮ ಮುಂದೆ ಹಾಜರಾಗಿತ್ತು. ನಿರ್ದೇಶಕಿ ವಿಜಯಾ ನರೇಶ್‌ ಅವರ ಪರಿ ಕನಿಗೊಂಡ ನರೇಶ್‌ ಈ ಚಿತ್ರದ ನಿರ್ಮಾಪಕರು. ಕಾರ್ತಿಕ್‌ ವರ್ಣೇಕರ್‌ ಇದರ ಕಾರ್ಯಕಾರಿ ನಿರ್ಮಪಕರು. ಕನ್ನಡದಲ್ಲಿ ಈ ತಂಡಕ್ಕಿದು ಚೊಚ್ಚಲ ಚಿತ್ರ.

ನಿರ್ದೇಶಕಿ ವಿಜಯಾ, ನಿರ್ಮಾಪಕ ಕನಿಗೊಂಡ ನರೇಶ್‌ ದಂಹತಿಗಳದ್ದು ಆಂಧ್ರ ಮೂಲ. ನಿರ್ದೇಶಕಿ ವಿಜಯಾ ಅವರು ವೃತ್ತಿಯಲ್ಲಿ ಶಿಕ್ಷಕಿಯಂತೆ. ಆದರೂ ಉತ್ತಮ ಕಥೆ ಸಿಕ್ಕರೆ ಸಿನಿಮಾ ನಿರ್ದೇಶನ ಮಾಡಬೇಕೆನ್ನುವ ಮಹಾದಾಸೆಯ ಮೂಲಕ ʼರಿಯಾʼ ಚಿತ್ರಕ್ಕೆ ಅಕ್ಷನ್‌ ಕಟ್‌ ಹೇಳಿದ್ದಾರಂತೆ. ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿರುವ ಕಾರ್ತಿಕ್‌ ವರ್ಣೇಕರ್‌ ಅವರೇ ಈ ಚಿತ್ರದ ನಾಯಕರು. ಅವರಿಗೆ ಇಲ್ಲಿ ಜೋಡಿಯಾಗಿ ಸಾವಿತ್ರಿ ಅಭಿನಯಿಸಿದ್ದಾರೆ. ಅವರೊಂದಿಗೆ ವಿಕಾಸ್ ಕುಲಕರ್ಣಿ, ರಣ್ವೀರ್, ಶ್ವೇತಾ ಮತ್ತಿತರರು ಚಿತ್ರದಲ್ಲಿದ್ದಾರೆ, ವಿಶೇಷವಾಗಿ ಮೈಸೂರಿನ ಬಾಲಕಿ ಅನನ್ಯ ಈ ಚಿತ್ರದ ಪ್ರಮುಖ ಪಾತ್ರ ರಿಯಾಗೆ ಬಣ್ಣ ಹಚ್ಚಿದ್ದಾರೆ. ಆಡಿಯೋ ಲಾಂಚ್‌ ಸಂದರ್ಭದಲ್ಲಿ ಅವರೆಲ್ಲ ಹಾಜರಿದ್ದು ಚಿತ್ರದಲ್ಲಿನ ಪಾತ್ರ ಹಾಗೂ ಚಿತ್ರೀಕರಣ ಅನುಭವ ಹಂಚಿಕೊಂಡರು.
ಚಿತ್ರ ತಂಡಕ್ಕೆ ಇದೊಂದು ಹೊಸ ಅನುಭವ. ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ಇದು ಮೊದಲ ಸಿನಿಮಾ ಎನ್ನುವ ಹಾಗೆಯೇ, ಇಲ್ಲಿರುವ ಬಹುತೇಕ ಕಲಾವಿದರಿಗೂ ಇದು ಮೊದಲ ಸಿನಿಮಾ. ಅಷ್ಟು ಕಲಾವಿದರನ್ನು ನಿರ್ದೇಶಕರು ಆಡಿಷನ್ಸ್‌ ಮೂಲಕವೇ ಆಯ್ಕೆ ಮಾಡಿಕೊಂಡಿದೆಯಂತೆ. ಚಿತ್ರದ ವಿಶೇಷತೆ ಕುರಿತು ನಿರ್ದೇಶಕಿ ವಿಜಯಾ ನರೇಶ್‌ ಮಾತನಾಡಿದರು. ” ಇದೊಂದು ಹಾರಾರ್, ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳ ಕಥೆಯುಳ್ಳ ಚಿತ್ರ. ಕನ್ನಡ ಹೆಚ್ಚಾಗಿ ಮಾತನಾಡಲು ಬಾರದ ನನಗೆ, ಚಿತ್ರ ಯಾವುದೇ ತೊಂದರೆ ಇಲ್ಲದೇ ಸಿದ್ಧವಾಗಲು ಹಲವರು ಸಹಕರಿಸಿದ್ದಾರೆʼ ಎಂದರು. ಚಿತ್ರದ ಎರಡು ಹಾಡುಗಳಿಗೆ ಸಂಗೀತ ನೀಡಿರುವ ಹೇಮಂತ್ ಕುಮಾರ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

ಹಿರಿಯ ನಟ ಬ್ಯಾಂಕ್ ಜನಾರ್ದನ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಆಡಿಯೋ ಲಾಂಚ್‌ ಗೆ ಅತಿಥಿಯಾಗಿ ಬಂದಿದ್ದರು. ಸದ್ಯ ಸಿನಿಮಾ ಚಿತ್ರೀಕರಣ ಮುಗಿಸಿ, ರಿಲೀಸ್‌ ಗೆ ರೆಡಿಯಾಗಿದೆ. ಚಿತ್ರದ ಬಹುತೇಕ ಭಾಗ ದುಬಾರೆ ಫಾರೆಸ್ಟ್‌ ಬಳಿಯೇ ಚಿತ್ರೀಕರಣಗೊಂಡಿದೆ. ಈಗಾಗಲೇ ಈ ಚಿತ್ರದ ಟ್ರೇಲರ್‌ ಗೆ ಸಿಕ್ಕಾಪಟ್ಟೆ ಸದ್ದು ಮಾಡಿದೆಯಂತೆ. ಇದೀಗ ಆಡಿಯೋ ಸಾಂಗ್‌ ಮೂಲಕ ಸದ್ದು ಮಾಡುತ್ತಿದೆ. ಆಕಾಶ್‌ ಆಡಿಯೋ ಸಂಸ್ಥೆ ಹಾಡುಗಳನ್ನು ಹೊರತಂದಿದೆ.

Categories
ಸಿನಿ ಸುದ್ದಿ

ಶಿಕ್ಷಣ ಮಾಫಿಯಾ ವಿರುದ್ಧ ಯುವರತ್ನನ ಹೋರಾಟ, ನೋಡುವ ಪ್ರೇಕ್ಷಕನಿಗೂ ಕೊಡ್ತಾನೆ ಒಂದಷ್ಟು ಪೇಚಾಟ!

ಯುವರತ್ನ ಚಿತ್ರ ವಿಮರ್ಶೆ

ಯುವರತ್ನ ಸ್ಟಾರ್‌ ಕಥೆಯಾ ಅಥವಾ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರಾ? ಸಿನಿಮಾ ನೋಡಿ ಹೊರ ಬಂದ ಪ್ರೇಕ್ಷಕರು ಹೀಗೊಂದು ಜಡ್ಜ್‌ ಮೆಂಟ್‌ಗೆ ಬರೋದು ಅಷ್ಟು ಸುಲಭ ಇಲ್ಲ. ಯಾಕಂದರೆ, ಯುವರತ್ನ ಪುನೀತ್‌ ರಾಜ್‌ಕುಮಾರ್‌ ಸಿನಿಮಾ ಅನ್ನೋದು ಎಷ್ಟು ಸತ್ಯವೋ, ಹಾಗೆಯೇ ಪುನೀತ್‌ ರಾಜ್‌ಕುಮಾರ್‌ ಯುವರತ್ನದ ಸ್ಟಾರ್‌ ಅನ್ನೋದು ಅಷ್ಟು ಸತ್ಯ. ಹೌದು, ಯುವರತ್ನ ಇರೋದೇ ಹಾಗೆ. ಮಾಸ್‌, ಕ್ಲಾಸ್‌ ಅಂತ ಎರಡು ಮಿಕ್ಸ್‌ ಆದ ಒಂದು ಸಿನಿಮಾ ಹೇಗಿರಬೇಕೋ ಹಾಗೆಯೇ ಈ ಚಿತ್ರವೂ ಇದೆ. ಈಗಾಗಲೇ ಇದು ಜನಪ್ರಿಯತೆ ಪಡೆದುಕೊಂಡಂತೆ ಪಕ್ಕಾ ಪವರ್‌ ಪ್ಯಾಕ್ಡ್‌ ಸಿನಿಮಾ. ಮುಖ್ಯವಾಗಿ ಯುವ ಜನರೇ ಇದರ ಟಾರ್ಗೆಟ್.

‌ಹಾಗಂತ ಬರೀ ಯೂತ್‌ಗಷ್ಟೇ ಸಿಮೀತವಾದ ಕಥೆ ಇದಲ್ಲ, ಮಕ್ಕಳ ಭವಿಷ್ಯ ಹಾಗಿರಬೇಕು, ಹೀಗಿರಬೇಕು ಅಂತೆಲ್ಲ ಕನಸು ಕಾಣುವ ಪ್ರತಿಯೊಬ್ಬ ತಂದೆ-ತಾಯಿ ಕೂಡ ನೋಡಲೇಬೇಕಾದ ಸಿನಿಮಾ. ಯಾಕಂದ್ರೆ ಈ ಸಿನಿಮಾ ಕಥೆ ಇರೋದೆ ಎಜುಕೇಷನ್‌ ಮಾಫಿಯಾ ಕುರಿತು. ಶಿಕ್ಷಣ ಅನ್ನೋದು ಇವತ್ತು ಪ್ರತಿಯೊಬ್ಬರಿಗೂ ಅತ್ಯಗತ್ಯ. ಹಾಗಂತ ಅದೀಗ ಪುಕ್ಕಟ್ಟೆ ಸಿಗುತ್ತಿಲ್ಲ. ಅದು ಕೂಡ ಬಿಸಿನೆಸ್.‌ ಅದನ್ನೇ ಬಂಡವಾಳವಾಗಿಸಿಕೊಂಡವರು ಸರ್ಕಾರಿ ಕಾಲೇಜುಗಳನ್ನು ಹೇಗೆ ಮುಗಿಸುವ ಸಂಚು ರೂಪಿಸುತ್ತಾರೆ ಎನ್ನುವುದರ ಸುತ್ತವೇ ಯುವರತ್ನದ ಕಥೆ ಹೆಣೆದಿದ್ದಾರೆ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್.

ಕಥೆ ತುಂಬಾ ಪ್ರಸ್ತುತವಾದದ್ದು. ಅಂದರೆ ಸಮಕಾಲೀನ ವಿಷಯ. ಅದನ್ನು ಒಂದು ಕಥೆಯಾಗಿಸಿ, ಅಚ್ಚುಕಟ್ಟಾಗಿ ನಿರೂಪಿಸಿರುವುದೇ ವಿಶೇಷ. ಅದರೆ, ತಾವಂದುಕೊಂಡಿದ್ದೆನ್ನೆಲ್ಲಾ ಸಿನಿಮಾದಲ್ಲಿ ತೋರಿಸಬೇಕೆನ್ನುವ ನಿರ್ದೇಶಕರ ಹಂಬಲವನ್ನು ಪ್ರೇಕ್ಷಕ ತಡೆದುಕೊಳ್ಳುವುದು ಕೊಂಚ ಕಷ್ಟವಂತೂ ಹೌದು. ಒಂದಷ್ಟು ಲ್ಯಾಗ್‌ ಎನಿಸಿದ ಹಾಗನಿಸುತ್ತೆ. ಮೊದಲರ್ಧ ಸರಾಗವಾಗಿಯೇ ಸಾಗುವ ಸಿನಿಮಾ, ದ್ವಿತಿಯಾರ್ಧ ಕೊಂಚ ಭಾರವೇನೋ ಎಂಬ ಭಾಸವಾಗುತ್ತದೆ. ಯವರತ್ನ ಪವರ್ ಪ್ಯಾಕ್ಡ್ ಚಿತ್ರ ಎಂಬುದನ್ನು ಮುಲಾಜಿಲ್ಲದೆಯೇ ಹೇಳಿಬಿಡಬಹುದು. ಪವರ್ ಇದ್ಮೇಲೆ ಕಂಪ್ಲೀಟ್ ಫ್ಯಾಮಿಲಿ ಪ್ಯಾಕ್ ಇದ್ದೇ ಇರುತ್ತೆ‌ ಅನ್ನೋದ್ರಲ್ಲಿ ಎರಡು ಮಾತಿಲ್ಲ.

ಅಂದಹಾಗೆ, ಯುವರತ್ನ ಹೈವೋಲ್ಟೇಜ್ ಆಕ್ಷನ್ ಸೀಕ್ವೆನ್ಸ್ ಜೊತೆ ಸಮಾಜಕ್ಕೆ ಒಂದೊಳ್ಳೆ ಸಂದೇಶವನ್ನು ಹೊತ್ತು ಬಂದಿದೆ. ಈ ಹಿಂದೆ ಅದನ್ನು ಟೀಸರ್ ಮತ್ತು ಟ್ರೇಲರ್ ಸಾಬೀತುಪಡಿಸಿತ್ತು. ಇದೀಗ ಸಿನಿಮಾ ತೆರೆಕಂಡಿದ್ದು ಯುವರತ್ನ ಸಮಾಜಕ್ಕೆ‌ ಮಾದರಿ ಚಿತ್ರ ಎಂಬುದಂತೂ ಪಕ್ಕಾ. ಅಭಿ ಸಿನಿಮಾ ನಂತರ ಕಾಲೇಜ್ ಹುಡುಗನ ಪಾತ್ರಕ್ಕೆ ಬಣ್ಣ ಹಚ್ಚಿರುವ ಅಪ್ಪು, ಪವರ್ ಆಫ್ ಯೂತ್ ಅನ್ನೋದನ್ನ ಮತ್ತೆ ಇಲ್ಲಿ ಸಾಬೀತುಪಡಿಸಿದ್ದಾರೆ. ಲಾಸ್ಟ್ ಬೆಂಚ್ ಸ್ಟುಡೆಂಟ್ ಪವರ್ ಏನು‌ ಎಂಬುದನ್ನು ಇಲ್ಲಿ ಅಪ್ಪು ಪ್ರೂ ಮಾಡಿ ತೋರಿಸಿದ್ದಾರೆ. ಅಪ್ಪು ಯುವರತ್ನನ ರೂವಾರಿ. ಅವರಿಗೆ ನಾಯಕಿ ಸಯೇಶಾ. ಅವರ ಸುತ್ತ ಪ್ರಕಾಶ್‌ ರೈ, ಸಾಯಿ ಕುಮಾರ್‌, ಅವಿನಾಶ್‌, “ಡಾಲಿ” ಧನಂಜಯ್‌, ದಿಗಂತ್‌, ಸೋನುಗೌಡ, ರಂಗಾಯಣ ರಘು, ಸಾಧು ಕೋಕಿಲ, ಕುರಿ ಪ್ರತಾಪ್‌, ರಾಜೇಶ್‌ ನಟರಂಗ, ಸುಧಾರಾಣಿ, ಅರುಣ ಬಾಲರಾಜ್‌, ಕಾಕ್ರೋಚ್‌ ಸುಧಿ, ಅರುಗೌಡ ಹೀಗೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಒಂದು ರೀತಿ ಅಗತ್ಯಕ್ಕಿಂತಲೂ ಹೆಚ್ಚೇ ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಇಷ್ಟಾದರೂ ಪ್ರತಿಯೊಂದು ಪಾತ್ರವೂ ಇಲ್ಲಿ ಹೈಲೈಟ್‌ ಎನಿಸುತ್ತದೆ. ಅವರೆಲ್ಲ ಏನೆಲ್ಲ ಪಾತ್ರಗಳಲ್ಲಿ ಹೇಗೆಲ್ಲ್‌ ರಂಜಿಸುತ್ತಾರೆ ಅನ್ನೋದನ್ನು ನೀವು ಚಿತ್ರದಲ್ಲೇ ನೋಡ್ಬೇಕು.
ಯುವರತ್ನನಿಗೆ ಪವರ್ ತುಂಬಿರುವುದು ದೊಡ್ಮನೆ ರಾಜಕುಮಾರ.

ಇಂಟರ್ವೆಲ್‌ವರೆಗೆ ಫುಲ್ ಪವರ್ ಫುಲ್. ಇಂಟರ್ವೆಲ್‌ ನಂತರ ಸಿನಿಮಾ ವೇಗ ಕೊಂಚ ಮಂದಗತಿಯಲ್ಲಿ ಸಾಗುತ್ತದೆ. ಯುವರತ್ನ ಲ್ಯಾಗ್ ಎನಿಸೋಕೂ ಶುರುವಾಗುತ್ತೆ. ಆದರೂ ಅಲ್ಲಲ್ಲಿ ಕಾಣುವ ಹಾಡುಗಳು, ಸ್ಟಂಟ್‌ಗಳು ಅವೆಲ್ಲವನ್ನೂ ಪಕ್ಕಕ್ಕೆ ಸರಿಸುತ್ತದೆ. ಯೂಥ್‌ಗೆ ಇಲ್ಲಿ ಮನರಂಜನೆಗಂತೂ ಮೋಸ ಆಗೋದಿಲ್ಲ. ಸಯೇಶಾ ಮತ್ತು ಪುನೀತ್‌ ಅವರ ಕೆಮಿಸ್ಟ್ರಿ ಅಷ್ಟೇನು ಕಿಕ್ ಕೊಡಲ್ಲ ಅನ್ನೋದು ಬಿಟ್ಟರೆ, ಸಂಭಾಷಣೆಯಲ್ಲಿ ಧಮ್‌ ಇದೆ. ಚಿತ್ರಕಥೆ ಕೂಡ ವೇಗದಲ್ಲಿದೆ. ಚಂದದ ನಿರೂಪಣೆಯೂ ಇದೆ. ಭರ್ಜರಿ ಮೇಕಿಂಗ್‌ ಕೂಡ ಇಷ್ಟವಾಗುತ್ತದೆ. ಇವೆಲ್ಲವನ್ನೂ ಅಂದಗಾಣಿಸಿರೋದು ಕ್ಯಾಮರಾ ಕೈಚಳಕ‌. ಕೆಲವು ಹಾಸ್ಯ ದೃಶ್ಯಗಳಲ್ಲಿ ಕತ್ತರಿ ಪ್ರಯೋಗ ಮಾಡಬಹುದಿತ್ತು. ಅನಗತ್ಯ ದೃಶ್ಯಕ್ಕೆ ಕತ್ತರಿ ಬಿದ್ದಿದ್ದರೆ, “ಯುವರತ್ನ” ಇನ್ನಷ್ಟು ಶೈನ್‌ ಆಗಿರುತ್ತಿದ್ದ. ಆದರೂ, ಇಲ್ಲಿ ಕೊಟ್ಟ ಕಾಸಿಗೆ ಮೋಸವಂತೂ ಇಲ್ಲ.

ಪುನೀತ್‌ ನಟನೆ ಇಲ್ಲಿ ಗಮನಸೆಳೆಯುತ್ತೆ. ಅದಕ್ಕಿಂತಲೂ ಹೆಚ್ಚಾಗಿ ಒಬ್ಬ ಸ್ಟುಡೆಂಟ್‌ ಆಗಿ ಇಷ್ಟವಾಗುತ್ತಾರೆ. ಡ್ಯಾನ್ಸ್‌ನಲ್ಲೂ ಮೋಡಿ ಮಾಡಿದ್ದಾರೆ. ಇಲ್ಲೂ ಕೂಡ ಸಿಗ್ನೇಚರ್‌ ಸ್ಟೆಪ್‌ ಇದೆ. ಅದನ್ನು ಹೇಳುವುದಕ್ಕಿಂತ ನೋಡಿ ಅನ್ನುವುದೇ ಒಳಿತು. ಸಯೇಶಾ ಅಂದವಾಗಿದ್ದಾರೆ ಅನ್ನೋದು ಬಿಟ್ಟರೆ, ನಟನೆಗೆ ಹೆಚ್ಚು ಜಾಗ ಗಿಟ್ಟಿಸಿಕೊಂಡಿಲ್ಲ. ಹಾಗಾಗಿ ಅವರ ನಟನೆ ಬಗ್ಗೆ ಹೆಚ್ಚು ಹೇಳುವುದು ಕಷ್ಟ. ಇಡೀ ಸಿನಿಮಾದಲ್ಲಿ ಮತ್ತೊಂದು ವಿಶೇಷತೆ ಅಂದರೆ ಅದು ಪ್ರಕಾಶ್‌ ರೈ. ಅವರು ಚಿತ್ರದುದ್ದಕ್ಕೂ ಕಾಣಿಸಿಕೊಂಡಿದ್ದಾರೆ. ಚಿತ್ರದ ಕೇಂದ್ರಬಿಂದು ಅಂದರೂ ತಪ್ಪಿಲ್ಲ. ಅವರ ಸುತ್ತ ಸಾಗುವ ಯುವರತ್ನ ಚಿತ್ರದಲ್ಲಿ ಕಾಣಿಸಿಕೊಂಡಿರುವ ಪ್ರತಿ ಪಾತ್ರಗಳು ತಮ್ಮದೇ ಛಾಪು ಮೂಡಿಸಿವೆ. ತಮನ್‌ ಸಂಗೀತದ ಹಾಡುಗಳಲ್ಲಿ ಎರಡು ಪರವಾಗಿಲ್ಲ. ಹಿನ್ನೆಲೆ ಸಂಗೀತ ಕೂಡ ಸುಮ್ಮನೆ ನೋಡಿಸಿಕೊಂಡು ಹೋಗುತ್ತೆ. ಸಂಕಲನ ಕೂಡ ಚಿತ್ರದ ವೇಗಕ್ಕೆ ಹೆಗಲು ಕೊಟ್ಟಿದೆ. ಇನ್ನು ಒಂದೊಂದು ಫೈಟ್‌ ಕೂಡ ಅಷ್ಟೇ ಅದ್ಧೂರಿಯಾಗಿ ಮೂಡಿಬಂದಿವೆ. ಅದೇನೆ ಇದ್ದರೂ, ಯುವರತ್ನ ಒಂದೇ ವರ್ಗಕ್ಕಂತೂ ಸೀಮಿತವಲ್ಲ ಅನ್ನುವುದನ್ನು ಸಿನಿಮಾ ನೋಡಿದವರಿಗೆ ಗೊತ್ತಾಗುತ್ತೆ. ಯುವರತ್ನ ಯಾವುದರ ವಿರುದ್ಧ ಹೋರಾಡುತ್ತಾನೆ, ಯಾರ ವಿರುದ್ಧ ಗುಡುಗುತ್ತಾನೆ ಎಂಬ ಕುತೂಹಲವಿದ್ದರೆ ಒಮ್ಮೆ ಯುವರತ್ನನನ್ನು ಕಣ್ತುಂಬಿಕೊಳ್ಳಿ.

ಚಿತ್ರ : ಯುವರತ್ನ * ನಿರ್ದೇಶಕ : ಸಂತೋಷ್‌ ಆನಂದ ರಾಮ್‌ * *ನಿರ್ಮಾಪಕ : ವಿಜಯ್‌ ಕಿರಗಂದೂರು * ತಾರಾಗಣ : ಪುನೀತ್‌, ಸಯ್ಯೇಶಾ, ಪ್ರಕಾಶ್‌ ರೈ, ಅವಿನಾಶ್‌, ಡಾಲಿ ಧನಂಜಯ್‌, ಸಾಯಿಕುಮಾರ್‌, ದಿಗಂತ್‌, ಸೋನುಗೌಡ ಇತರರು.

Categories
ಸಿನಿ ಸುದ್ದಿ

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾ ಸಾಹೇಬ್‌ ಫಾಲ್ಕೆ ಪುರಸ್ಕಾರ-ತಲೈವಾ ನಮ್ಮವರು ಎಂಬುದೇ ನಮಗೆ ಹೆಮ್ಮೆ….

ಕನ್ನಡದವರೇ ಆದ ದಕ್ಷಿಣ ಚಿತ್ರರಂಗದ ಸೂಪರ್‌ ಸ್ಟಾರ ರಜನಿಕಾಂತ್‌, ಪ್ರತಿಷ್ಟಿತ ದಾದಾ ಸಾಹೇಬ್‌ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ಪುರಸ್ಕಾರಕ್ಕೆ ರಜನಿ ಪಾತ್ರರಾಗಿರುವುದು ತಮಿಳು ಚಿತ್ರರಂಗಕ್ಕೆ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕೂ ದೊಡ್ಡ ಹೆಮ್ಮೆಯೇ. ಕೇಂದ್ರ ಸಚಿವ ಪ್ರಕಾಶ್‌ ಜಾವ್ಡೆಕರ್‌ ಗುರುವಾರ ಈ ಕುರಿತು ಅಧಿಕೃತ ಮಾಹಿತಿ ರಿವೀಲ್‌ ಮಾಡಿದ್ದಾರೆ. 2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ.

ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ. ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.2020 ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ರಜನಿಕಾಂತ್ ಹೆಸರನ್ನು ಫೋಷಿಸುತ್ತಿರುವುದು ಸಂತಸ ತಂದಿದೆ ಅಂತಲೂ ಹೇಳಿದ್ದಾರೆ. ಸದ್ಯ ತಮಿಳು ನಾಡಿನಲ್ಲಿ ಚುನಾವಣೆ ಕಾವು ಜೋರಾಗಿದೆ. ಈ ನಡುವೆಯೂ ರಜನಿ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ. ಕನ್ನಡ ಚಿತ್ರೋದ್ಯಮ ಕೂಡ ರಜನಿ ಅವರಿಗೆ ಅಭಿನಂದನೆ ಸಲ್ಲಿಸಿದೆ. ಈ ಮಧ್ಯೆ ಪ್ರಧಾನಿ ಮೋದಿ ಕೂಡ ರಜನಿ ಕಾಂತ್‌ ಅವರಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

error: Content is protected !!