Categories
ಸಿನಿ ಸುದ್ದಿ

ರಿಜಿಸ್ಟ್ರೇಷನ್ ಗೆ ರೆಡಿಯಾದ ಪೃಥ್ವಿ – ಮಿಲನಾ : ಫಾರ್ ರಿಜಿಸ್ಟ್ರೇಷನ್ ಫೆ.,23ಕ್ಕೆ ರಿಲೀಸ್

”ಫಾರ್ ರಿಜಿಸ್ಟ್ರೇಷನ್” ಸ್ಯಾಂಡಲ್ವುಡ್ನಲ್ಲಿ ಹಲವು ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಬಹುನಿರೀಕ್ಷಿತ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿ ನಟ ಪೃಥ್ವಿ ಅಂಬಾರ್ ಮಾತನಾಡಿ, ಫಾರ್ ರಿಜಿಸ್ಟ್ರೇಷನ್ ಎರಡು ಸಹಪಾಠಿಗಳ ಪ್ರಯತ್ನ ಇದು. ಇಬ್ಬರು ನವೀನ್ ಅವರ ಕನಸಿನ ಕೂಸು ಇದು. ತುಂಬಾ ಹಾರ್ಡ್ ವರ್ಕ್ ಆಗಿದೆ. ಈ ಚಿತ್ರಕ್ಕಾಗಿ. ಫಾರ್ ರಿಜಿಸ್ಟ್ರೇಷನ್ ಬಗ್ಗೆ ಗೊತ್ತಿರಬಹುದು. ಜಾಗ, ಗಾಡಿ ಅದು ಇದು ಅಂತಾ. ಮನಸ್ಸಿನಲ್ಲಿ ಸಂಬಂಧಗಳು ರಿಜಿಸ್ಟ್ರೇಷನ್ ಆಗಬೇಕು. ಅನ್ನೋದು ನಮ್ಮ ಆಸೆ. ಟ್ರೇಲರ್ ನೋಡಿದ್ದೀರಾ? ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಸಿನಿಮಾ ಎಲ್ಲರಿಗೂ ಹತ್ತಿರವಾಗುತ್ತದೆ. ಎಲ್ಲಾ ಪಾತ್ರ ವರ್ಗವದವರು ಅದ್ಭುತವಾಗಿ ನಟಿಸಿದ್ದಾರೆ ಎಂದು ತಿಳಿಸಿದರು.

ನಟಿ ಮಿಲನಾ ನಾಗರಾಜ್ ಮಾತನಾಡಿ, ನವೀನ್ ಸರ್ ಮನೆಗೆ ಬಂದು ಕಥೆ ವಿವರಿಸಿದರು. ತುಂಬಾ ತಯಾರಿಯಿಂದ ಬಂದಿದ್ದರು. ಫಸ್ಟ್ ಆಫ್ ಕಥೆ ಹೇಳಿ ನಿಲ್ಲಿಸಿಬಿಟ್ಟರು. ಕಂಟಿನ್ಯೂ ಮಾಡಿ ಎಂದಾಗ ನೀವು ಸಿನಿಮಾ ಒಪ್ಪಿಕೊಂಡರೇ ಕಥೆ ಹೇಳುವುದು ಎಂದರು. ಸರಿ ಸರ್ ಯೋಚನೆ ಮಾಡಿ ಹೇಳುತ್ತೇನೆ ಎಂದೆ. ಆಮೇಲೆ ಸಿನಿಮಾ ಮಾಡುತ್ತೇನೆ ಬಂದು ಕಥೆ ಹೇಳಿ ಅಂದಾಗ ಕಥೆ ಹೇಳಿದರು. ಒಂದು ರೀತಿ ಬ್ಲಾಕ್ ಮೇಲೆ ಮಾಡಿ ಹೋಗಿದ್ದರು. ನಿರ್ಮಾಪಕರಾದ ನವೀನ್ ಸರ್ ಬಹಳ ಫ್ಯಾಷನೆಟೇಡ್ ನಿರ್ಮಾಪಕರು. ಬಹಳಷ್ಟು ಇಂಟರ್ ವ್ಯೂಗಳಲ್ಲಿಯೂ ಹೇಳಿದ್ದೇನೆ. ಟೈಟಲ್ ಕೊಡುವುದರಿಂದ ಹಿಡಿದು ಕಥೆಯಲ್ಲಿ ಸಂಪೂರ್ಣವಾಗಿ ಕುತಿದ್ದಾರೆ. ಪ್ರತಿ ಶಾರ್ಟ್, ಸೀನ್ಸ್ ತೊಡಗಿಸಿಕೊಳ್ಳುತ್ತಿದ್ದಾರೆ. ನನಗೆ ಮನಸ್ಸು ಪೂರ್ತಿಯಾಗಿ ಸಿನಿಮಾ ಗೆಲ್ಲಬೇಕು. ಇಂತಹ ನಿರ್ದೇಶಕರು, ನಿರ್ಮಾಪಕರು ಗೆಲ್ಲಬೇಕು ಎಂದರು.

ನಿರ್ಮಾಪಕರಾದ ನವೀನ್ ರಾವ್ ಮಾತನಾಡಿ, ಬಹಳ ಪ್ರೀತಿಯಿಂದ ಮಾಡಿರುವ ಸಿನಿಮಾವಿದು. ಎರಡು ತಿಂಗಳು ಚರ್ಚೆ ಬಳಿಕ ಕಥೆ ರೆಡಿ ಮಾಡಿಕೊಂಡೆವು. ಕಥೆ ಡಿಮ್ಯಾಂಡ್ ಮಾಡಿದಾಗ ನಾವು ಮೊದಲ ಭೇಟಿಯಾಗಿದ್ದು ಮಿಲನಾ ಮೇಡಂ ಅವರನ್ನು. ಅವರಿಗೆ ಕಥೆ ಹೇಳಿದೆವು. ಆ ನಂತರ ಪೃಥ್ವಿ ಸರ್ ಭೇಟಿ ಮಾಡಿ ಕಥೆ ಹೇಳಿದೆವು. ಎಲ್ಲಾ ಕಲಾವಿದರು ಸಹಕಾರದಿಂದ ಈ ಚಿತ್ರವಾಗಿದೆ. ಎಲ್ಲರೂ ಶ್ರಮಪಟ್ಟು ಸಿನಿಮಾ ಮಾಡಿದ್ದೇವೆ. ನನ್ನ ಕುಟುಂಬಸ್ಥರು ಸಪೋರ್ಟ್ ಆಗಿವೆ ನಿಂತಿದ್ದಾರೆ. ಕೃಷ್ಣ ಸರ್ ಮೇಡಂ..ಸಿನಿಮಾಗೆ ಸ್ಟ್ರೇಂಥ್ ಆಗಿದ್ದರು. ಇದೇ 23ಕ್ಕೆ ಸಿನಿಮಾ ರಿಲೀಸ್ ಮಾಡಿದ್ದೇವೆ. ನೀವು ಎಲ್ಲರೂ ಸಹಕಾರ ಕೊಡಬೇಕು. ಈ ಚಿತ್ರದ ಬಳಿಕ ಮತ್ತೊಂದು ಚಿತ್ರಕ್ಕೆ ರೆಡಿಯಾಗುತ್ತಿದ್ದೇವೆ ಎಂದರು.

ನಿರ್ದೇಶಕ ನವೀನ್ ದ್ವಾರಕಾನಾಥ್ ಮಾತನಾಡಿ, ಹೊಸ ಪ್ರಯತ್ನ ಮಾಡಿದ್ದೇವೆ. ಬೆನ್ನು ತಟ್ಟಿ ಹಾರೈಸಿ. ತಪ್ಪಾಗಿದ್ದರೆ ಇನ್ನೊಮ್ಮೆ ಬೆನ್ನು ತಟ್ಟಿ ಹೇಳಿ ಚೆನ್ನಾಗಿ ಮಾಡಿ ಅಂತಾ ಹೇಳಿ ಮಾಡೋಣಾ. ನಾನು ಈ ಚಿತ್ರವನ್ನು ನನ್ನ ಗುರುಗಳಾದ ಸಿ ಆರ್ ಸಿಂಹ ಅವರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಸಂಬಂಧ ಮಹತ್ವ ಸಾರುವ ಫಾರ್ ರಿಜಿಸ್ಟ್ರೇಷನ್ ಟ್ರೇಲರ್ ಸಿನಿಮಾ ಮೇಲೆ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲಂಸ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

Categories
ಸಿನಿ ಸುದ್ದಿ

ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿದ ಮಿಸ್ಟರ್ ನಟ್ವರ್ ಲಾಲ್: ಫೆಬ್ರವರಿ 23 ಕ್ಕೆ ಸಿನಿಮಾ ರಿಲೀಸ್

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ.ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ ಮಹದೇವ್, ಕುಶಾಲ್, ಭಾ.ಮ.ಗಿರೀಶ್, ವಿತರಕರ ವಲಯದ ಅಧ್ಯಕ್ಷರಾದ ವೆಂಕಟೇಶ್, ನಿರ್ದೇಶಕ ಹಾಗೂ ಗೀತರಚನೆಕಾರ ಬಹದ್ದೂರ್ ಚೇತನ್ ಮುಂತಾದವರು ಸಮಾರಂಭಕ್ಕೆ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ಇದೊಂದು ಕ್ರೈಂ ಥ್ರಿಲ್ಲರ್, ಆಕ್ಷನ್ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವಿ.ಲವ, ಬೆಂಗಳೂರಿನಲ್ಲಿ ನಡೆದ ನೈಜಘಟನೆ ಈ ಚಿತ್ರಕ್ಕೆ ಸ್ಪೂರ್ತಿ. ತನುಷ್ ಶಿವಣ್ಣ ಈ ಚಿತ್ರದ ನಾಯಕ. ಸೋನಾಲ್ ಮೊಂತೆರೊ ನಾಯಕಿ. ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ, ಸುಜಯ್ ಶಾಸ್ತ್ರಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಕೆ‌.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಟ್ರೇಲರ್ ನಲ್ಲಿ ಈ ಚಿತ್ರದ ಎರಡನೇ ಭಾಗ ಬರುವ ಸುಳಿವು ಕೂಡ ನೀಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

“Mr ನಟ್ವರ್ ಲಾಲ್”, ನಾನು ನಾಯಕನಾಗಿ ನಟಿಸಿರುವ ನಾಲ್ಕನೇ ಚಿತ್ರ. ನಾನು ಎಂಟು ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ. ನಿರ್ಮಾಣ ಕೂಡ ನನ್ನದೆ. ಒಂದು ಹಂತದಲ್ಲಿ ಹಣದ ಸಮಸ್ಯೆಯಿಂದಾಗಿ ಸಿನಿಮಾ ನಿಲಿಸಿ ಬಿಡೋಣ ಅಂದುಕೊಂಡೆ. ಆದರೆ ನಾನು ನಂಬಿರುವ ಅಮ್ಮನವರ ದಯೆಯಿಂದ ಅನೇಕ ಸ್ನೇಹಿತರು ನನ್ನ ಸಹಾಯಕ್ಕೆ ಬಂದರು. ಅವರೆಲ್ಲರ ಸಹಾಯ ಹಾಗೂ ನನ್ನ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇದೇ 23 ಬಿಡುಗಡೆಯಾಗುತ್ತಿದೆ ಎಂದರು ನಾಯಕ ಹಾಗೂ ನಿರ್ಮಾಪಕ ತನುಷ್ ಶಿವಣ್ಣ.

ನಂದಿನಿ ಎಂಬುದು ನನ್ನ ಪಾತ್ರದ ಹೆಸರು ಎಂದು ನಾಯಕಿ ಸೋನಾಲ್ ಮೊಂತೆರೊ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಹರಣಿ ಶ್ರೀಕಾಂತ್, ರಘು ರಮಣಕೊಪ್ಪ, ಕಾಕ್ರೋಜ್ ಸುಧೀ, ವಿಜಯ್ ಚೆಂಡೂರ್ ಹಾಗೂ ಛಾಯಾಗ್ರಾಹಕ ವಿಲಿಯಂ ಡೇವಿಡ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಈಗಾಗಲೇ ಈ ಚಿತ್ರದ ಟೀಸರ್ ಹಾಗೂ ಹಾಡುಗಳು ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಟ್ರೇಲರ್ ಕೂಡ ಸಖತಾಗಿದೆ. ನಾನು ಎರಡು ಹಾಡುಗಳನ್ನು ಬರೆದಿದ್ದೇನೆ ಎಂದರು ಬಹದ್ದೂರ್ ಚೇತನ್.

Categories
ಸಿನಿ ಸುದ್ದಿ

ಹೊಸ ಹಾಡು ಎಂ’ಜಾಯ್’: ಜೊತೆಯಲೆ ಇರಲೇ ಅಂದ್ರು ಹೊಸಬರು…

ಈ ಹಿಂದೆ ಜೆ.ಜೆ. ಮೂವೀಸ್ ಬ್ಯಾನರ್ ಮೂಲಕ ನಾನೊಂಥರಾ ಎಂಬ ಆಕ್ಷನ್ ಚಿತ್ರವನ್ನು ನಿರ್ಮಿಸಿದ್ದ ಡಾ.ಜಾಕ್ವೆಲಿನ್ ಫ್ರಾನ್ಸಿಸ್ ಅವರು ಇದೀಗ ತಮ್ಮ‌ ಪುತ್ರನನ್ನು ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಸದ್ಯ ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಜಾಯ್ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಯುವ ನಿರ್ದೇಶಕ ಆರ್ಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಯಲೇ ಇರಲೇ ಎಂಬ ರೊಮ್ಯಾಂಟಿಕ್ ವೀಡಿಯೋ ಸಾಂಗ್ ರಿಲೀಸ್ ಮಾಡುವ ಮೂಲಕ ಜಾಯ್ ನಟನೆಯ ನೂತನ ಚಿತ್ರದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.

ನಿರ್ದೇಶಕ ಆರ್ಯನ್ ಮಾತನಾಡಿ, ಪ್ರೊಡಕ್ಷನ್ ನಂ.2 ಚಿತ್ರದ ಮೂಲಕ. ಜಾಯ್ ಅವರನ್ನು ನಾಯಕನಾಗಿ ಪರಿಚಯಿಸುತ್ತಿದ್ದೇವೆ. ಅವರು ಆಕ್ಷನ್, ಡ್ಯಾನ್ಸ್, ಆಕ್ಟಿಂಗ್ ಎಲ್ಲಾ ಕಲಿತು ಫಿಟ್ ನೆಸ್ ಮೇಂಟೇನ್ ಮಾಡಿಕೊಂಡು ಬಂದಿದ್ದಾರೆ. ಇದೊಂದು ರೊಮ್ಯಾಂಟಿಕ್ ಯೂತ್ಫುಲ್
ಡ್ರಾಮಾ ಸಬ್ಜೆಕ್ಟ್ ಆಗಿದ್ದು, ವ್ಯಾಲೆಂಟೆನ್ಸ್ ಡೇ ಪ್ರಯುಕ್ತ ಈ ರೊಮ್ಯಾಂಟಿಕ್ ಸಾಂಗನ್ನು ರಿಲೀಸ್ ಮಾಡುತ್ತಿದ್ದೇವೆ. ಗೌಸ್ ಪೀರ್ ಅವರು ಸಾಹಿತ್ಯ ಬರೆದಿರುವ ಈ ಹಾಡನ್ನು ರೋಣದ ಬಕ್ಕೇಶ್ ಅವರು ಅದ್ಭುತವಾಗಿ ಕಂಪೋಸ್ ಮಾಡಿಕೊಟ್ಟಿದ್ದಾರೆ. ಅಷ್ಟೇ ಚೆನ್ನಾಗಿ ಛಾಯಾಗ್ರಾಹಕ ಅಲನ್ ಭರತ್ ಅವರು ಹಾಡನ್ನು ಸೆರೆ ಹಿಡಿದುಕೊಟ್ಟಿದ್ದಾರೆ. ಹರಿಚರಣ್ ಅವರು ಚೆನ್ನೈನಿಂದ ಬಂದು ಹಾಡಿದ್ದಾರೆ. ನಾನು ಈ ಹಿಂದೆ ಕಿಲ್ಲಿಂಗ್ ವೀರಪ್ಪನ್ ಸೇರಿದಂತೆ ಒಂದಷ್ಟು ಚಿತ್ರಗಳಿಗೆ ಅಸೋಸೊಯೇಟ್ ಆಗಿ ಕೆಲಸ ಮಾಡಿದ್ದೇನೆ. ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಮಾರ್ಚ್ ಎಂಡ್ ನಿಂದ ಚಿತ್ರದ ಟಾಕಿ ಪೋರ್ಷನ್ ಶುರು ಮಾಡಿ ಗೋವಾ ಸಿರ್ಸಿ, ಹೊನ್ನಾವರ, ಗೋಕರ್ಣ ಸುತ್ತಮುತ್ತ ಚಿತ್ರೀಕರಣ ನಡೆಸಲಿದ್ದೇವೆ. ಡಿಸೆಂಬರ್ ವೇಳೆಗೆ ಚಿತ್ರವನ್ನು ರಿಲೀಸ್ ಮಾಡೋ ಯೋಜನೆಯಿದೆ. ಚಿತ್ರದಲ್ಲಿ ಲವ್ ಸ್ಟೋರಿ ಜೊತೆಗೆ ಮದರ್ ಸೆಂಟಿಮೆಂಟ್, ಸಿಸ್ಟರ್ ಸೆಂಟಿಮೆಂಟ್, ಎಮೋಷನ್ ಸೇರಿದಂತೆ ಎಲ್ಲಾ ರೀತಿಯ ಕಮರ್ಷಿಯಲ್ ಅಂಶಗಳೂ ಇರುತ್ತವೆ. ಚಿತ್ರದಲ್ಲಿ ನಾಯಕಿಯಾಗಿ ಸ್ನಿಗ್ಧಾ ಶೆಟ್ಟಿ ಅವರು ಅಭಿನಯಿಸುತ್ತಿದ್ದಾರೆ, ಅವರಿಗೂ ಇದು ಮೊದಲ ಚಿತ್ರ ಎಂದರು.


ನಂತರ ನಿರ್ಮಾಪಕಿ ಡಾ.ಜಾಕ್ವೆಲಿನ್ ಫ್ರಾನ್ಸಿಸ್ ಮಾತನಾಡುತ್ತ ನಮ್ಮ ಮೊದಲ ಚಿತ್ರಕ್ಕೆ ನೀವೆಲ್ಲ ತುಂಬಾ ಸಪೋರ್ಟ್ ಮಾಡಿದ್ದೀರಿ. ಬೇರೆಯವರ ಮೇಲೆ ಬಂಡವಾಳ ಹಾಕುವ ಬದಲು ನಮ್ಮ ಮಗನ ಪ್ರತಿಭೆಯನ್ನು ಬೆಳಕಿಗೆ ತರಬೇಕೆಂದು ಈ ಸಿನಿಮಾ ಮಾಡುತ್ತಿದ್ದೇನೆ. ಈಗಿನ ಕಾಲದ ಯೂತ್ ಬೇಸ್ ಮಾಡಿಕೊಂಡು ನಿರ್ದೇಶಕರು ಉತ್ತಮವಾದ ಕಥೆಯನ್ನು ರಡಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.


ನಾಯಕ ನಟ ಜಾಯ್ ಮಾತನಾಡಿ ಈ ಹಿಂದೆ ಸಪೋರ್ಟಿವ್ ಕ್ಯಾರೆಕ್ಟರ್ ಮಾಡಿದ್ದೆ. ನಂತರ ಮಾಡೆಲಿಂಗ್ ಕಡೆ ಗಮನ ಹರಿಸಿದೆ. ಈಗ ಸಿನಿಮಾಗೆ ಬೇಕಾದ ಎಲ್ಲಾ ರೀತಿಯ ಟ್ರೈನಿಂಗ್ ಮಾಡಿಕೊಂಡು ಮತ್ತೆ ತೆರೆಮೇಲೆ ಬರುತ್ತಿದ್ದೇನೆ. ಸಪೋರ್ಟ್ ಮಾಡಿ ಎಂದರು.

ಸಾಹಿತಿ ಗೌಸ್ ಪೀರ್ ಮಾತನಾಡಿ ನಾವೆಲ್ಲ ಡಿಸ್ಕಸ್ ಮಾಡಿ ಒಂದೊಳ್ಳೆ ಸಬ್ಜೆಕ್ಟ್ ರೆಡಿ ಮಾಡಿಕೊಂಡಿದ್ದೇವೆ. ಟೀನೇಜರ್ ಕಥೆ. ಕಾಲೇಜಿನಲ್ಲಿ ಹುಡುಗ ಹುಡುಗಿ ಮಧ್ಯೆ ನಡೆಯೋ ಪ್ರೀತಿ, ಪ್ರೇಮದ ಕಥೆ. ಚಿತ್ರದಲ್ಲಿ ಎಲ್ಲಾ ಬಾಂಡಿಂಗ್ ಬಗ್ಗೆ ಹೇಳಲಾಗಿದೆ. ರೋಣದ ಬಕ್ಕೇಶ್ ಅವರು 5 ಹಾಡುಗಳನ್ನು ಮಾಡುತ್ತಿದ್ದಾರೆ. ಈ ಹಾಡು ಇಷ್ಟು ಚೆನ್ನಾಗಿ ಮೂಡಿಬರಲು ಗಾಯಕ ಹರಿಚರಣ್ ಅವರೇ ಕಾರಣ. ಈ ಸಾಂಗ್ ನಮ್ಮ ಸಿನಿಮಾಗೆ ಇನ್ ವಿಟೇಶನ್ ಇದ್ದಹಾಗೆ. ಅದನ್ನು ನೀವೆಲ್ಲ ಜನರಿಗೆ ತಲುಪಿಸಿ ಎಂದು ಮಾಧ್ಯಮದವರಲ್ಲಿ ಕೇಳಿಕೊಂಡರು.

Categories
ಸಿನಿ ಸುದ್ದಿ

ಪ್ರಣಯಂ ಮನೋಹರಂ!

ಚಿತ್ರ ವಿಮರ್ಶೆ

ರೇಟಿಂಗ್ : 3/5

ನಿರ್ಮಾಣ : ಪರಮೇಶ್

ನಿರ್ದೇಶನ : ಎಸ್.ದತ್ತಾತ್ರೇಯ

ಪ್ರೀತಿ ಪ್ರೇಮ ನಡುವೆ ದ್ವೇಷ…. ಇದಿಷ್ಟು ಹೇಳಿದರೆ ಗೊತ್ತಾಗುತ್ತೆ ಸಿನಿಮಾದ ತಾತ್ಪರ್ಯ. ಹೌದು ಪ್ರಣಯಂ ಒಂದು ಹೊಸ ಬಗೆಯ ಲವ್ ಸ್ಟೋರಿ. ಹಾಗೆ ಹೇಳುವುದಾದರೆ, ನಾಯಕ, ನಾಯಕಿಯರ ಮಧ್ಯೆ ಪ್ರೇಮಾಂಕುರವಾಗುತ್ತೆ. ಇನ್ನೇನು ಬದುಕು ಕಟ್ಟಿಕೊಳ್ಳಬೇಕೆಂಬ ಉತ್ಸಾಹದಲ್ಲಿರೋ ಜೋಡಿ ನಡುವೆ ದುಷ್ಟನೊಬ್ಬನ ಆಗಮನವಾಗುತ್ತೆ. ಮುಂದಾ…? ಏನಾಗುತ್ತೆ ಅನ್ನೋದೇ ಪ್ರಣಯಂ ಕಥಾಹಂದರ.

ಹಾಗಾದರೆ, ಅವರಿಬ್ಬರು ಒಂದಾಗುವುದುಲ್ಲವೇ? ಇಬ್ಬರೂ ಒಂದಾದರೂ ಅಲ್ಲೊಂದು ಟ್ವಿಸ್ಟ್ ಎದುರಾಗುತ್ತೆ. ಅಲ್ಲೊಂದು ಸಣ್ಣ ಸಂಘರ್ಷಕ್ಕೆ ಕಾರಣವಾಗುತ್ತೆ. ಈ ಸನ್ನಿವೇಷವಷ್ಟೇ ಅಲ್ಲ, ಸಿನಿಮಾದ ಹಲವು ಸನ್ನಿವೇಷಗಳು ಮನಸ್ಸಿಗೆ ಮುದಕೊಡುತ್ತವೆ. ಹೇಗೆ ಅನ್ನೋದನ್ನು ಒಮ್ಮೆ ಪ್ರಣಯಂ ನೋಡಲೇಬೇಕು.

ಗೌತಮನ ಅತ್ತೆಯ ಮಗಳು ಅಮೃತಾ ಇವರಿಬ್ಬರಿಗೂ ಮದುವೆ ಗೊತ್ತಾಗುತ್ತೆ. ನಂತರ ಅವರಿಬ್ಬರ ಓಡಾಟ ಮತ್ತು ಒಡನಾಟದ ಸನ್ನಿವೇಶಗಳೇ ಬೇರೆ. ಹೀಗಿರುವಾಗಲೇ ಅವನ ಪ್ರೇಯಸಿಯ ಮೇಲೆ ಒಬ್ಬನ ಕಣ್ಣು ಬೀಳುತ್ತೆ. ಅಲ್ಲೊಂದಷ್ಟು ನೋವು ಅನುಭವಿಸಬೇಕಾಗುತ್ತೆ. ಕ್ಲೈಮ್ಯಾಕ್ಸ್ ವೇಳೆಗೆ ಹೊಸದೊಂದು ಟ್ವಿಸ್ಟ್ ಸಿಗುತ್ತೆ. ಅಲ್ಲೊಂದು ಲವ್ ಸ್ಟೋರಿ ತೆರೆದುಕೊಳ್ಳುತ್ತೆ. ಆಮೇಲೇನಾಗುತ್ತೆ ಅನ್ನೋದಕ್ಕೆ ಸಿನಿಮಾ ನೋಡಬೇಕು.

ಸಿನಿಮಾದ ಹೈಲೆಟ್ ಅಂದರೆ ಸಂಗೀತ ಮತ್ತು ಛಾಯಾಗ್ರಹಣ.
ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮತ್ತು ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಲ್ಲಿ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಎಲ್ಲೋ ಒಂದು ಕಡೆ ಕಥೆ ಬೇರೆಡೆ ಸಾಗುತ್ತಿದೆಯಾ ಅನ್ನುತ್ತಿದ್ದಂತೆ, ಅಲ್ಲಿ ಸಂಗೀತ ಮತ್ತದೇ ಟ್ರಾಕ್ ಗೆ ತಂದು ಬಿಡುತ್ತದೆ.

ಇನ್ನು, ರಾಜವರ್ಧನ್ ಅವರಿಲ್ಲಿ ಆಕರ್ಷಣೀಯ. ಅವರ ಅಭಿನಯ ಮತ್ತು ಸ್ಟಂಟ್ ಗಳಿಂದ ಗಮನ ಸೆಳೆಯುತ್ತಾರೆ. ಎಂದಿಗಿಂತಲೂ ಇಲ್ಲಿ ಇಷ್ಟವಾಗುತ್ತಾರೆ.
ನೈನಾ ಗಂಗೂಲಿ ಕೂಡ ಸಿಕ್ಕ ಪಾತ್ರಕ್ಕೆ ಮೋಸ ಮಾಡಿಲ್ಲ. ತೆರೆ ಮೇಲೆ ಕಾಣಿಸಿಕೊಳ್ಳುವ ಪಾತ್ರಗಳೆಲ್ಲವೂ ಪಾತ್ರಕ್ಕೆ ನ್ಯಾಯ ಸಲ್ಲಿಸಿವೆ. ಹಾಸ್ಯ ಕಲಾವಿದ ಗೋವಿಂದೇಗೌಡ, ಖಳನಟ ರಾಘವ ನಾಯಕ್ , ಪವನ್ ಸೂರ್ಯ ಇಷ್ಟವಾಗುತ್ತಾರೆ.

ಕೊನೆಯಲ್ಲಿ ಒಂದು ಮಾತು ಹೇಳೋದಾದರೆ, ಒಂದೊಳ್ಳೆಯ ಮನರಂಜನಾತ್ಮಕ ಕಥೆವಿಲ್ಲಿದೆ. ಎಲ್ಲಾ ವರ್ಗ ಕುಳಿತು ನೋಡಲು ಮೋಸವಿಲ್ಲ. ಕಥೆಗೆ ಪೂರಕವಾಗಿಯೇ ಹಾಡುಗಳು ಗುನುಗುವಂತಿವೆ.

Categories
ಸಿನಿ ಸುದ್ದಿ

ಕನ್ನಡಿಗನ ಹಿಂದಿ ಚಿತ್ರ; ರಾಮನಗರ ಟು ಮುಂಬೈ; ಉದ್ಯಮಿ ಮನೋಜ್ ಸಿನಿಮಾ ಪ್ರೀತಿ

ರಾಮನಗರ… ಸಿನಿಮಾ ಮಂದಿಗೆ ಈ ಹೆಸರು ಚಿರಪರಿಚಿತ. ಕಾರಣ, ಬಾಲಿವುಡ್ ಸೂಪರ್ ಹಿಟ್ ‘ಶೋಲೆ’ ಸಿನಿಮಾ. ಹೌದು, ಇದೇ ಊರ ಬೆಟ್ಟದಲ್ಲಿ ಶೋಲೆ ಶೂಟಿಂಗ್ ಆಗಿತ್ತು. ದೂರದ‌ ಮುಂಬೈನಿಂದ ಬಂದು ಬಾಲಿವುಡ್ ಸಿನಿಮಾ ಮಾಡಿದ್ದರು. ಅದು ಇತಿಹಾಸ. ಈಗ ಇದೇ ರಾಮನಗರ ಮೂಲದ ಉದ್ಯಮಿ ಮುಂಬೈಗೆ ಹೋಗಿ ಹಿಂದಿ ಸಿನಿಮಾ ಮಾಡೋಕೆ ಅಣಿಯಾಗಿದ್ದಾರೆ. ಇದು ಇನ್ನೊಂದು ವಿಶೇಷ. ಹೌದು, ಇದೇ ಈ ಹೊತ್ತಿನ ಸುದ್ದಿ.

ಯಾರು ಈ ಉದ್ಯಮಿ ಮನೋಜ್?

ಅದು ರಾಮನಗರ ಜಿಲ್ಲೆಯೊಂದರ ಸಣ್ಣ ಊರು. ಹೆಸರು ಅನುಮಾನಹಳ್ಳಿ. ಸುಮಾರು ಎರಡು ದಶಕದ ಹಿಂದೆ ಆ ಊರಿನ ಯುವಕನೊಬ್ಬ ಕೆಲಸ ಅರಸಿ ಬೆಂಗಳೂರಿಗೆ ಬಂದಿಳಿಯುತ್ತಾನೆ. ಮಾಸ್ಟರ್ ಡಿಗ್ರಿ ಓದುವುದರ ಜೊತೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ಕೆಲಸ ಶುರು ಮಾಡ್ತಾರೆ. ಅಲ್ಲಿ ಕಲಿತ ಅನುಭವ ಅವರನ್ನು ಸ್ವಂಥದ್ದೊಂದು ಕಂಪೆನಿ ಕಟ್ಟುವಷ್ಟರ ಮಟ್ಟಿಗೆ ಬೆಳೆಸುತ್ತೆ. 2007 ರಲ್ಲಿ ಸಾಯಿ ಹಾಸ್ಪಿಟಾಲಿಟಿಸ್ ಸರ್ವೀಸಸ್ (ಎಸ್ ಎಚ್ ಎಸ್) ಕಂಪೆನಿ ಶುರು ಮಾಡ್ತಾರೆ.

ಅರಂಭದಲ್ಲಿ ಫೋರ್ಟಿಸ್ ಆಸ್ಪತ್ರೆಯಲ್ಲಿ ತಮ್ಮ ಕೆಲಸ ಶುರು ಮಾಡಿದ ಬಳಿಕ ಬೆಂಗಳೂರಿನಲ್ಲಿ ಸುಮಾರು 20 ಹಾಸ್ಪಿಟಲ್ ಗಳಲ್ಲಿ ಹೆಲ್ತಿ ಫುಡ್ ಕೇಟರಿಂಗ್ ಆರಂಭಿಸುತ್ತಾರೆ. ಯಶಸ್ವಿ ಉದ್ಯಮಿಯಾಗಿಯೂ ರೂಪುಗೊಳ್ಳುತ್ತಾರೆ. ಹಾಗೆ ಶುರುವಾದ ಅವರ ಸಂಸ್ಥೆಯಲ್ಲೀಗ 350 ಜನ ಕೆಲಸ ಮಾಡುತ್ತಿದ್ದಾರೆ. ಅಷ್ಟು ಜನರಿಗೆ ಕೆಲಸ ನೀಡಿದ ತೃಪ್ತಭಾವ ಅವರದು.

ಇವರಿಗೆ ಸಿನಿಮಾ ಅಂದರೆ ಎಲ್ಲಿಲ್ಲದ ಪ್ರೀತಿ. ಒಮ್ಮೆ ಗೆಳೆಯರೊಬ್ಬರ ಸಿನಿಮಾ ಶೂಟಿಂಗ್ ನಡೆಯುವಾಗ ಹೇಗೆ ನಡೆಯುತ್ತೆ ಎಂಬ ಕುತೂಹಲ ಹೆಚ್ಚಾಗಿ ನೋಡಲು ಬಂದವರು ಆಕಸ್ಮಿಕವಾಗಿ ನಿರ್ಮಾಪಕರಾಗಿಬಿಟ್ಟರು.

2021 ರಲ್ಲಿ ರಾಯಲ್ ಮೂವೀಸ್ ಬ್ಯಾನರ್ ಮೂಲಕ ‘ಎಂದು ನಿನ್ನ ನೋಡುವೆ’ ಎಂಬ ಕನ್ನಡ ಸಿನಿಮಾ ನಿರ್ಮಿಸಿದರು. ಅಷ್ಟೇ ಅಲ್ಲ, ಸ್ಕ್ರೀನ್ ಮುಂದೆಯೂ ಕಾಣಿಸಿಕೊಳ್ಳುವ ಧೈರ್ಯ ಮಾಡಿ ಎರಡು ಪ್ರಮುಖ ಪಾತ್ರಗಳ ಪೈಕಿ ಇವರೂ ಪ್ರಮುಖರಾಗಿ ಕಾಣಿಸಿಕೊಂಡರು. ಆ ಚಿತ್ರ ಇದೀಗ ರಿಲೀಸ್ ಗೆ ರೆಡಿಯಾಗಿದೆ. ಸಿನಿಮಾ ಪ್ರೀತಿ ಹೆಚ್ಚಾಗಿದ್ದೇ ತಡ, ಅಪ್ಪಿ ಒಪ್ಪಿಕೊಂಡು ಸಿನಿಮಾ ಕಡೆ ವಾಲಿದರು. ನಂತರ ವಿಜಯ ರಾಘವೇಂದ್ರ ನಟನೆಯ ಎಫ್ಐಆರ್ ಹಾಗು ವಿಚಾರಣೆ ಸಿನಿಮಾಗೂ ಹಣ ಹಾಕುವ ಮೂಲಕ ಸಹ ನಿರ್ಮಾಪಕರಾಗಿ, ಪಾತ್ರಗಳನ್ನೂ ನಿರ್ವಹಿಸಿದ್ದಾರೆ.

ಇಷ್ಟಕ್ಕೂ ಅವರು ಈ ಫೀಲ್ಡ್ ಗೆ ಎಂಟ್ರಿಯಾಗಲು ಕಾರಣ, ಸಿನಿಮಾ ಪ್ರೀತಿ ಜೊತೆಗೆ ಇಲ್ಲೂ ಒಂದಷ್ಟು ಜನರಿಗೆ ಕೆಲಸ ಕೊಡಬಹುದು ಎಂಬ ಉದ್ದೇಶದಿಂದ . ಹಣ ಮುಖ್ಯವಲ್ಲ ಒಂದಷ್ಟು ಒಳ್ಳೆಯ ಚಿತ್ರ ಕೊಡುವ ಕನಸಿದೆ.ಆ ಮೂಲಕ ಚಿತ್ರ ರಂಗದಲ್ಲಿ ಗಟ್ಟಿ ನೆಲೆಯೂರುವಾಸೆ ಎನ್ನುತ್ತಾರೆ ಮನೋಜ್ ಗೌಡ.

ಎಲ್ಲಾ ರಂಗ ಕೈ ಬೀಸಿ ಕರೆಯಲ್ಲ. ಸಿನಿಮಾ ರಂಗ ಕೈ ಬೀಸಿ ಕರೆಯಿತು. ಆಸಕ್ತಿ ಪ್ರೀತಿ ಇದ್ದುದರಿಂದಲೇ ಬಂದೆ. ಇಲ್ಲಿ ಒಂದಷ್ಟು ಸದಭಿರುಚಿಯ ಸಿನಿಮಾ ಮಾಡುವ ಆಸೆ ಎನ್ನುವ ಅವರು, ಜೀರೋದಿಂದ ಸಿನಿಮಾ ಲೋಕಕ್ಕೆ ಎಂಟ್ರಿಯಾಗಿದ್ದೇನೆ.

ಇಲ್ಲಿ ಕಲಿಯೋದು ಸಾಕಷ್ಟಿದೆ. ಪ್ರೊಡಕ್ಷನ್ಸ್ ಬಗ್ಗೆ ತಿಳಿದೆ. ರಾಯಲ್ ಮೂವೀಸ್ ಬ್ಯಾನರ್ ಕೇವಲ ಕನ್ನಡಕ್ಕೆ ಸೀಮಿತವಾಗಬಾರದು. ಬಾಲಿವುಡ್ ನಲ್ಲೂ ಸಿನಿಮಾ ಮಾಡಬೇಕು ಎಂಬ ನಿಟ್ಟಿನಲ್ಲಿ ಅಲ್ಲೂ ‘ರಾಯಲ್ ಮೂವೀಸ್ ಬೆಂಗಳೂರು’ ಹೆಸರಲ್ಲಿ ಬ್ಯಾನರ್ ಮಾಡಿದ್ದು, ಹಿಂದಿ ಸಿನಿಮಾ ಮಾಡುವ ತಯಾರಿ ನಡೆಯುತ್ತಿದೆ ಎನ್ನುತ್ತಾರೆ ಮನೋಜ್.

ಅದೇನೆ ಇರಲಿ, ಬಾಲಿವುಡ್ ಮಂದಿ ‘ಶೋಲೆ’ ಸಿನಿಮಾ ಮಾಡೋಕೆ ಮುಂಬೈನಿಂದ ರಾಮನಗರಕ್ಕೆ ಬಂದಿದ್ದು ಇತಿಹಾಸ. ಈಗ ರಾಮನಗರದಿಂದ ಮುಂಬೈ ಅಂಗಳಕ್ಕೆ ಜಿಗಿದು ಹಿಂದಿ ಸಿನಿಮಾ ಮಾಡಲು ಹೊರಟ ಮನೋಜ್ ಗೌಡ ಅವರ ಸಾಹಸ ದೊಡ್ಡದು.

ರಾಮನಗರದಿಂದ ಹೊರಟ ಮನೋಜ್ ಗೌಡ ಕಣ್ಣಲ್ಲಿ ನೂರಾರು ಕನಸು ಹೊತ್ತು ಬೆಂಗಳೂರಿಗೆ ಬಂದವರು, ಮತ್ತೆ ಊರಿಗೆ ವಾಪಾಸ್ ಹೋಗೋಕೆ ಹಣ, ಇಲ್ಲದ ಕಾರಣ, ಹೋಟೆಲ್ ಕೆಲಸ ಮಾಡಿ, ಅಲ್ಲೇ ದುಡಿದು, ಅದರಲ್ಲೇ ಓನರ್ ಆಗಿ, ಈಗ ಸಿನಿಮಾ ನಿರ್ಮಾಣ ಮಾಡಿರೋದು ಸಾಮಾನ್ಯ ಸಂಗತಿಯಲ್ಲ. ಈಗ ಅವರು ನಿರ್ಮಾಣ ಜೊತೆ ನಟನೆ ಕಡೆಯೂ ಗಮನಹರಿಸಿದ್ದಾರೆ.

ಸುಮ್ಮನೆ ಕ್ಯಾಮೆರಾ ಮುಂದೆ ನಿಲ್ಲಬಾರದು ಅಂದುಕೊಂಡು, ನಟನೆ ತರಬೇತಿ ಪಡೆದು ಕಲಾವಿದನಾಗಿ ಗಟ್ಟಿ ನೆಲೆ ಕಾಣೋ ಆಸೆಯಲ್ಲಿದ್ದಾರೆ.

Categories
ಸಿನಿ ಸುದ್ದಿ

ವಿನಯ್ ಪ್ರೇಮಕಥಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಾಕ್ಷಿ: ಫೆ.9ಕ್ಕೆ ಸಿನಿಮಾ ರಿಲೀಸ್

ದೊಡ್ಮನೆ ಕುಡಿ ವಿನಯ್ ರಾಜ್‍ಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಚಿತ್ರತಂಡ ಬುಧವಾರ ಪ್ರೀ-ರಿಲೀಸ್ ಕಾರ್ಯಕ್ರಮ ಏರ್ಪಡಿಸಿತ್ತು. ಕಾರ್ಯಕ್ರಮಕ್ಕೆ ದೊಡ್ಮನೆಯ ಹಲವು ಅತಿಥಿಗಳು ಆಗಮಿಸಿದ್ದರು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಪತ್ನಿ. ವಿನಯ್ ರಾಜ್ಕುಮಾರ್ ಸಹೋದರ ಯುವ ರಾಜ್ಕುಮಾರ್, ಶ್ರೀಮುರಳಿ, ಧಿರೇನ್ ರಾಮ್ ಕುಮಾರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಶ್ರೀಮುರಳಿ ಮಾತನಾಡಿ, ಒಂದು ಸರಳ ಪ್ರೇಮಕಥೆಯಲ್ಲಿ ವಿನು ಬಹಳ ಚೆನ್ನಾಗಿ ಕಾಣಿಸಿದ ಎನಿಸುತ್ತಿದೆ. ವಿನು ಕ್ಯಾರೆಕ್ಟರ್ ಬಿಟ್ಟು ಕಿಂಚಿತ್ತು ಅಲ್ಲಾಡದೆ, ಪಾತ್ರವನ್ನು ಬಹಳ ತೂಕದಿಂದ, ಜವಾಬ್ದಾರಿಯಿಂದ ನಿಭಾಯಿಸಿದ್ದಾರೆ ಎಂಬ ನಂಬಿಕೆ ಇದೆ. ಈ ಬಗ್ಗೆ ಹೆಮ್ಮೆ ಇದೆ. ಈ ಚಿತ್ರದಲ್ಲಿ ಪ್ರತಿಯೊಂದು ಕ್ಯಾರೆಕ್ಟರ್ಸ್, ಆಕ್ಟರ್ಸ್ ತುಂಬಾ ಅಚ್ಚುಕಟ್ಟಾಗಿ ಕಾಣಿಸಿದ್ರಿ. ಇಬ್ಬರು ಹೀರೋಯಿನ್ ಇಬ್ಬರು ಮುದ್ದಾಗಿ ಕಾಣಿಸ್ತಾರೆ. ಸುನಿ ಅವರ ಮೇಕಿಂಗ್ ಸ್ಟೈಲ್ ಸೂಪರ್. ಅವರು ಚೆನ್ನಾಗಿ ಪ್ರಿಪೇರ್ ಆಗ್ತಾರೆ. ಅವರು ಹೀರೋನಾ ಪ್ರೀತಿಸ್ತಾರೆ. ಸಿನಿಮಾ ಚೆನ್ನಾಗಿ ಮೂಡಿ ಬರುತ್ತದೆ. ನಾಳೆ ಚಿತ್ರ ಬಿಡುಗಡೆಯಾಗುತ್ತಿದ್ದು, ಇಡೀ ಸರಳ ಪ್ರೇಮಕಥೆ ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

ವಿನಯ್ ರಾಜ್ ಕುಮಾರ್ ಮಾತನಾಡಿ, ಕಳೆದೊಂದು ವಾರದಿಂದ ಸಾಕಷ್ಟು ಪ್ರಚಾರ ಮಾಡಿದ್ದೇವೆ. ತುಂಬಾ ಒಳ್ಳೆ ಪ್ರತಿಕ್ರಿಯೆ ಬಂತು. ಸಾಕಷ್ಟು ಪ್ರೀತಿ ಬಂತು. ಶೂಟಿಂಗ್ ನಂತರ ಎಲ್ಲರನ್ನೂ ನೋಡುತ್ತಿದ್ದೇನೆ. ಖುಷಿಯಾಗುತ್ತಿದೆ. ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂದರೆ ನನಗೆ ತುಂಬಾ ಇಷ್ಟ. ಮನಸಿಗೆ ಸಾಕಷ್ಟು ಸಮಾಧಾನ ಕೊಡುತ್ತದೆ. ಖುಷಿ, ತೃಪ್ತಿ ಸಿಗುತ್ತದೆ. ಅತಿಶಯ ಪಾತ್ರ ಪ್ಲೇ ಮಾಡಲು ತುಂಬಾ ಖುಷಿಕೊಡ್ತು ಎಂದರು.

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ನಮ್ಮ ಸಿನಿಮಾಗೆ ಹಾರೈಸಲು ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು. ಅಶ್ವಿನಿಮೇಡಂ ಸಿನಿಮಾ ಸೆಟ್ ಗೆ ಬಂದಿದ್ರಿ, ಸಾಂಗ್ ರಿಲೀಸ್ ಮಾಡಿಕೊಟ್ರಿ. ಪ್ರತಿಯೊಂದು ಹೆಜ್ಜೆಯಲ್ಲಿ ನಮ್ಮ ಜೊತೆಗೆ ಇರೋದಿಕ್ಕೆ ಧನ್ಯವಾದ. ಒಂದು ಸರಳ ಪ್ರೇಮಕಥೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದಾಗ ರಿಜಿಸ್ಟ್ರಾರ್ ಮಾಡಿದ ಟೈಟಲ್. ನಾಳೆ ನಮ್ಮ ಸಿನಿಮಾ ನಿಮ್ಮ ಎದುರು ಬರಲಿದೆ ನಿಮ್ಮ ಬೆಂಬಲ ಹಾರೈಕೆ ಇರಲಿ ಎಂದರು.

ನಾಯಕಿ ಸ್ವಾತಿಷ್ಠ ಕೃಷ್ಣನ್ ಮಾತನಾಡಿ, ಒಂದು ಸರಳ ಪ್ರೇಮ ಕಥೆ ನನ್ನ ಮೊದಲ ಕನ್ನಡ ಸಿನಿಮಾ. ತುಂಬಾ ಖುಷಿಯಾಗುತ್ತಿದೆ. ನಾನು ಜರ್ನಲಿಸ್ಟ್ ಪಾತ್ರ ಮಾಡಿದ್ದೇನೆ. ರಿಯಲ್ ಲೈಫ್ ನಲ್ಲಿ ನಾನು ಜರ್ನಲಿಸಂ ಸ್ಟೂಡೆಂಟ್. ಸುನಿ ಸರ್, ವಿನಯ್ ಅವರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಇಡೀ ತಂಡಕ್ಕೆ ತುಂಬಾ ಧನ್ಯವಾದಗಳು. ಇದೊಂದು ಪಕ್ಕ ಫ್ಯಾಮಿಲಿ ಎಂಟರ್ ಟೈನರ್. ನಿಮ್ಮ ಕುಟುಂಬದ ಜೊತೆ ನೋಡಿ ನಿಮಗೆ ಇಷ್ಟವಾಗುತ್ತದೆ ಎಂದುಕೊಳ್ಳುತ್ತೇನೆ. ಕನ್ನಡ ಹುಡುಗಿಯನ್ನು ಬಿಟ್ಟುಕೊಂಡುವುದಿಲ್ಲ ಅಂತಾ ಗೊತ್ತು. ನಿಮ್ಮ ಬೆಂಬಲ ಬೇಕು ಎಂದರು.

ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ನಾಯಕನಾಗಿ, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ , ಸ್ವಾತಿಷ್ಠ ಕೃಷ್ಣನ್ ನಾಯಕಿಯರಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ.ರಾಮ್ ಮೂವೀಸ್ ಬ್ಯಾನರ್ ಅಡಿ ಮೈಸೂರು ರಮೇಶ್ ಬಂಡವಾಳ ಹೂಡಿದ್ದಾರೆ.ನಾಳೆ ಒಂದು ಸರಳ ಪ್ರೇಮಕಥೆ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದೆ.

Categories
ಸಿನಿ ಸುದ್ದಿ

ಸುಧೀರ್ ಅತ್ತಾವರ ಸಿನಿಮಾಗೆ ಅತ್ಯುತ್ತಮ ಜ್ಯೂರಿ ಚಿತ್ರ ಪ್ರಶಸ್ತಿ: ಜೈಪುರ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮೃತ್ಯೋರ್ಮ ಇಂಡಿಯನ್ ಪನೋರಮಕ್ಕೆ ಆಯ್ಕೆ

ಜೈಪುರದಲ್ಲಿ ಫೆ 9 ರಿಂದ13ರ ವರೆಗೆ ನಡೆಯುವ ಜೈಪುರ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸುಧೀರ್ ಅತ್ತಾವರ ನಿರ್ದೇಶನದ ಮ್ರತ್ಯೋರ್ಮ ಚಿತ್ರ ಇಂಡಿಯನ್ ಪನೋರಮಕ್ಕೆ ಆಯ್ಕೆ ಗೊಂಡು, ಅತ್ಯುತ್ತಮ ಚಿತ್ರ ಜ್ಯೂರಿ ಪ್ರಶಸ್ತಿಗೆ ಭಾಜನವಾಗಿದೆ.


ಸುಮಾರು 67 ದೇಶಗಳಿಂದ 329 ಚಿತ್ರಗಳು ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು, 101 ಚಲನಚಿತ್ರಗಳು ಸ್ಪರ್ಧಾ ಕಣದಲ್ಲಿದ್ದವು.
ತ್ರಿವಿಕ್ರಮ ಸಪಲ್ಯ ರವರು ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಿಸಿರುವ ಈ ಚಿತ್ರವು ಇತ್ತೀಚೆಗೆ ಮೂನ್ ವೈಟ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಸೇರಿ 4 ಪ್ರಶಸ್ತಿಗಳನ್ನು ಬಾಚಿಕೊಂಡು ಮಹಾರಾಷ್ಟ್ರ ಗವರ್ನರ್ ರಮೇಶ್ ಬಯಾಸ್ ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಲಾಗಿತ್ತು.

ಗವರ್ನರ್ ವಿಶೇಷವಾಗಿ ಚಿತ್ರವನ್ನು ಹೊಗಳಿದ್ದು, ರಾಜ್ಯಪಾಲರ ಅಧಿಕ್ರತ ವೆಬ್ಸೈಟ್ ನಲ್ಲೂ ಇದನ್ನು ದಾಖಲಿಸಿರುವುದು ವಿಶೇಷ.
“ಮ್ರತ್ಯೋರ್ಮ” ಚಿತ್ರವು ಈಗಾಗಲೇ ಅಮೇರಿಕ, ಯುರೋಪ್, ಕೀನ್ಯಾ ದೇಶಗಳ ಹಲವಾರು ಚಿತ್ರೋತ್ಸವಗಳಲ್ಲೂ ಭಾಗವಹಿಸುತ್ತಿದೆ.

Categories
ಸಿನಿ ಸುದ್ದಿ

ಜಸ್ಟ್ ಪಾಸ್ ಹುಡುಗರ ಹಾವಳಿ: ಫೆಬ್ರವರಿ 9ಕ್ಕೆ ರಿಲೀಸ್

ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರ ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 9 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸಾಮಾನ್ಯವಾಗಿ ಹೆಚ್ಚು ಅಂಕಗಳನ್ನು ತೆಗೆದುಕೊಂಡವರಿಗೆ ಸಾಕಷ್ಟು ಕಾಲೇಜುಗಳಿರುತ್ತದೆ. ವಿಶೇಷವೆಂದರೆ ಈ ಚಿತ್ರದಲ್ಲಿ “ಜಸ್ಟ್ ಪಾಸ್” ಆದವರಿಗೆ ಅಂತಲೇ ಒಂದು ಕಾಲೇಜು ಇದೆ. ಆ ಕಾಲೇಜಿನ ವಿದ್ಯಾರ್ಥಿಗಳ ತರಲೆ, ತಮಾಷೆಗಳನ್ನು ನಿರ್ದೇಶಕ ರಘು ಈ ಚಿತ್ರದಲ್ಲಿ ತೋರಿಸಿದ್ದಾರೆ. ವಿದ್ಯಾರ್ಥಿಗಳಿಗಂತೂ ಅಪ್ಪಟ್ಟ ಮನೋರಂಜನೆಯ ರಸದೌತಣ ಸಿಗುವುದಂತು ಖಚಿತ. ಬರೀ ಇಷ್ಟೇ ಅಲ್ಲ. ಉತ್ತಮ ಸಂದೇಶ ಸಹ ಈ ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕರು.

ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸುಜಯ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಅರ್ಜುನ್ ಅವರ ಸಾಹಸ ನಿರ್ದೇಶನವಿರುವ “ಜಸ್ಟ್ ಪಾಸ್” ಚಿತ್ರಕ್ಕೆ ಕೆ.ಎಂ.ರಘು ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಶ್ರೀ, ಪ್ರಣತಿ, ರಂಗಾಯಣರಘು ಸಾಧುಕೋಕಿಲ ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಧೈರ್ಯಂ ಅಂತಾನೆ ಸಿನಿಮಾ ಸಾಧನೆ ಮಾಡಲು ಬಂದ ನವ ನಟ: ಗಟ್ಟಿ ನೆಲೆಯೂರುವೆ ಅಂದ್ರು ವಿವಾನ್

ಕನ್ನಡ ಚಿತ್ರರಂಗದಲ್ಲಿ ಹೊಸ ನಾಯಕ ನಟರ ಆಗಮನ ಹೆಚ್ಚಾಗೆ ಇದೆ, ಈ ಸಾಲಿನಲ್ಲಿ ಧೈರ್ಯಂ ಸರ್ವತ್ರ ಸಾಧನಂ ಚಿತ್ರದ ನಾಯಕ ನಟ ವಿವಾನ್ ಕೆಕೆ ಕೂಡ ಒಬ್ಬರು,
ಇವರು ಮೂಲತಃ ಕೋಲಾರ ಜಿಲ್ಲೆಯವರು.

ತಂದೆ ಉದ್ಯಮಿ. ವಿವಾನ್ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ ನಂತರ ಧೈರ್ಯಂ ಸರ್ವತ್ರ ಸಾಧನಂ ಚಿತ್ರದ ನಿರ್ದೇಶಕರಿಗೆ ಪರಿಚಯವಾಗಿ ಅವರ ಗರಡಿಯಲ್ಲೇ, ಕಳೆದ 4 ವರ್ಷದಿಂದ ಅಭಿನಯ, ನೃತ್ಯ, ಸಾಹಸ, ವಿಭಾಗಗಳಲ್ಲಿ ಪರಿಣಿತಿ ಪಡೆದು, ಧೈರ್ಯಂ ಸರ್ವತ್ರ ಸಾಧನಂ ಚಿತ್ರಕ್ಕೆ ನಾಯಕ ನಟನಾಗಿ ಆಯ್ಕೆ ಆಗಿದ್ದರ ಬಗ್ಗೆ ಹೇಳುತ್ತಾರೆ.

ಈ ನಡುವೆ ಸಿನಿಮಾದ ಆ ಪಾತ್ರಕ್ಕಾಗಿ, ಸತತ 5 ತಿಂಗಳು ಶೂಟಿಂಗ್ ಮಾಡುವ ಲೋಕೇಶನಲ್ಲೇ ವಾಸವಿದ್ದು ಅಲ್ಲಿನ, ಹಳ್ಳಿ ಜನರನ್ನು ಅರಿತು ಪಾತ್ರಕ್ಕಾಗಿ ತಯಾರಿಗೆ, ಮೇಕೆ ಮೇಯಿಸುವುದು, ಕೊಟ್ಟಿಗೆಯಲ್ಲಿ ಹಸು ಕಸ ಗುಡಿಸುವುದರಿಂದ ಹಿಡಿದು, ಕಾಡಿನಲ್ಲಿ ಅಭ್ಯಾಸಕ್ಕಾಗಿ ರಾತ್ರಿಯ ಹೊತ್ತು, ನಿರ್ದೇಶಕರ ಜೊತೆ ಕಾಡು ಪ್ರಾಣಿಗಳನ್ನು ನೋಡಲು ಹೋಗುತ್ತಿದ್ದರಂತೆ,

ಹೀಗೆ ತಯಾರಿ ನಡೆಸಿ, ಶೂಟಿಂಗ್ ಮಾಡುವಾಗ, ಅದರಲ್ಲೂ ಫೈಟಿಂಗ್ ಸೀನ್ ಮಾಡುವಾಗ ಅನೇಕ ಪೆಟ್ಟುಗಳಾಗಿ, ಸಾಕಷ್ಟು ಬಾರಿ ವಿಷ ಹಾವುಗಳಿಂದ ಪಾರಾಗಿದ್ದಾಗಿಯೂ ಹೇಳುವ ಅವರು, ಒಟ್ಟಾರೆ ಧೈರ್ಯಂ ಸರ್ವತ್ರ ಸಾಧನಂ ಚಿತ್ರಕ್ಕೆ ಧೈರ್ಯ ಮಾಡಿ ಅಭಿನಯಿಸಿ ಪಾತ್ರಕ್ಕೆ ದುಡಿದಿದ್ದಾಗಿ ನಾಯಕ ವಿವಾನ್ ತಿಳಿಸುತ್ತಾರೆ.


ಇದೆ ತಿಂಗಳು 23ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಆಗುತ್ತಿದ್ದು, ನಾಡಿನ ಜನತೆ ಚಿತ್ರವನ್ನು ನೋಡಿ ನಮ್ಮ ಬೆನ್ನು ತಟ್ಟಿದರೆ, ಅದೇ ನಮಗೆ ಉತ್ತಮ ಪಲಿತಾಂಶ ಎನ್ನುತ್ತಾರೆ.
ಕನ್ನಡ ಚಿತ್ರರಂಗದಲ್ಲಿ ವಿವಾನ್ ಕೆಕೆ ಗಟ್ಟಿಯಾಗಿ ನಿಲ್ಲಲು ಎಲ್ಲಾ ತಯಾರಿ ನಡೆಸುತ್ತಿದ್ದು, ಒಳ್ಳೆಯ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

Categories
ಸಿನಿ ಸುದ್ದಿ

ನಿರೀಕ್ಷೆ ಹೆಚ್ಚಿಸಿದ ಮಾರಿಗೋಲ್ಡ್ ಟೀಸರ್: ಇದು ದಿಗಂತ್- ಸಂಗೀತಾ ಜೋಡಿ ಯ ಮೋಡಿ

ಇದೇ ಮೊದಲ ಸಲ ದಿಗಂತ್ ವಿಭಿನ್ನ ಪಾತ್ರದ ಮೂಲಕ ಕಾಣಿಸಿಕೊಂಡಿರುವ ಮಾರಿಗೋಲ್ಡ್ ಸಿನಿಮಾ ಇದೀಗ ರಿಲೀಸ್ ಗೆ ರೆಡಿಯಾಗಿದೆ. ಅದಕ್ಕೂ ಮುನ್ಮ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಮೆಚ್ಚಿಗೆ ಪಡೆದಿದೆ. ಅಷ್ಟೇ ಅಲ್ಲ ನಿರೀಕ್ಷೆ ಹೆಚ್ಚಿಸಿದೆ. ಅಂದಹಾಗೆ, ಇದು ಆ‌ರ್.ವಿ. ಕ್ರಿಯೇಷನ್ಸ್ ಬ್ಯಾನರ್ ಅಡಿ‌ ರಘುವರ್ದನ್ ನಿರ್ಮಾಣ ಮಾಡಿ ರಾಘವೇಂದ್ರ ಎಂ. ನಾಯಕ್ ಆಕ್ಷನ್ ಕಟ್ ಹೇಳಿದ್ದಾರೆ.

ನಿರ್ಮಾಪಕ ರಘುವರ್ಧನ್, ಗುಣವಂತ ಸೇರಿ ಹಲವು ಚಿತ್ರ ನಿರ್ದೇಶನ ಮಾಡಿದ್ದೇನೆ. ರಾಘವೇಂದ್ರ ನಾಯಕ್ ಹೇಳಿದ ಕಥೆ ಇಷ್ಟವಾಯಿತು. ನಾನು ನಿರ್ಮಾಣ ಮಾಡುತ್ತೇನೆ. ನೀವೇ ನಿರ್ದೇಶನ ಮಾಡಿ ಎಂದು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಚಿತ್ರ ಅಂದುಕೊಂಡದಕ್ಕಿಂತ ಚೆನ್ನಾಗಿ ಮೂಡಿ ಬಂದಿದೆ. ನಾಯಕ ದಿಗಂತ್, ನಾಯಕಿ ಸಂಗೀತ ಸಹಕಾರ ಅದ್ಬುವಾಗಿತ್ತು. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಎರಡನೇ ಅಥವಾ ಮೂರನೇ ವಾರ ಚಿತ್ರ ತೆರೆಗೆ ತರುವ ಉದ್ದೇಶವಿದೆ ಸಹಕಾರವಿರಲಿ ಎಂದರು.


ನಿರ್ದೇಶಕ ರಾಘವೇಂದ್ರ ಎಂ, ನಾಯ್ಕ್ ಮಾತನಾಡಿ, ಮಾರಿ ಗೋಲ್ಡ್ ಗೋಲ್ಡ್ ಬಿಸ್ಕಟ್ ಮಾರಲು ಹೋದವರ 4 ಜನರ ಹುಡುಗರ ಕಥೆ, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರ ಕಡೆ ಚಿತ್ರಿಕರಣ ಮಾಡಲಾಗಿದೆ. ಕೋವಿಡ್ ಆದ ಮೇಲೆ ಆ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು. ಈಗ ಬಿಡುಗಡೆಗೆ ಸಜ್ಜಾಗಿದೆ. ಟೀಸರ್ ಮೂಲಕ ಪ್ರಚಾರ ಆರಂಬಿಸಿದ್ದೇವೆ ಎಂದು ಹೇಳಿದರು.


ಶುದ್ದ ಮನರಂಜನೆಗೆ ಒತ್ತು ನೀಡಿ ಚಿತ್ರ ಮಾಡಲಾಗಿದೆ. ಚಿತ್ರದ ಮೂಲಕ ದಿಗಂತ ಅವರನ್ನು ಬೇರೆ ರೀತಿ ತೋರಿಸುವ ಪ್ರಯತ್ನ ಮಾಡಲಾಗಿದೆ‌. ಚಿತ್ರೀಕರಣಕ್ಕೂ ಮುನ್ನ ದಿಗಂತ್ ಅವರಿಗೆ ರಿಹಸರ್ಲ್ ಮಾಡಲಾಗಿದೆ. ಮನರಂಜನೆ ಡ್ರಾಮ ಮತ್ತು ಥ್ರಿಲ್ಲರ್ ಕಥೆ ಹೊಂದಿದೆ ಎಂದು ಮಾಹಿತಿ ನೀಡಿದರು.

ನಟ ದಿಗಂತ್, ಮಾತನಾಡಿ ಹೆಸರಾಂತ ನಿರ್ಮಾಪಕ. ಹಣ ನೀಡಿದ್ದು ಆದರೆ ಅದು ಅಲ್ಲಿಯೇ ನಿಂತಿದೆ. ಮಾರಿ ಗೋಲ್ಡ್ ಮೇಲೆ ನಿರ್ದೇಶಕರ ಜೊತೆ ಸಿನಿಮಾ ಮಾಡಬಹುದು, ಕಥೆ ಇಷ್ಡವಾಯಿತು, ಯಶ್ ಶೆಟ್ಟಿ,ಸಂಗೀತ ಶೆಟ್ಟಿ, ಸಂಪತ್, ಕಾಕ್ರೋಚ್ ಸುಧಿ ಇತರರುಬಿದ್ದಾರೆ. ಈ ಟೀಸರ್ ಇಷ್ಟವಾದರೆ ಎಲ್ಲರಿಗೂ ಹೇಳಿ, ಸಿನಿಮಾ ಗೆದ್ದರೆ ಮತ್ತಷ್ಟು ಮಾಡೋಣ ಎಂದಿದ್ದಾರೆ. ಚಿತ್ರದಲ್ಲಿ ಬುದ್ದಿವಂತ ಸ್ಕಾಮರ್ ಪಾತ್ರ ಎಂದು ಮಾಹಿತಿ ಹಂಚಿಕೊಂಡರು


ನಟಿ ಸಂಗೀತ ಶೃಂಗೇರಿ, ನಟ ದಿಗಂತ್ ನನ್ನ ಚೇಲ್ಡ್ ವುಡ್ ಕ್ರಷ್, ಅದನ್ನು ಅವರಿಗೂ ಹೇಳಿದ್ದೇನೆ. ಎಲ್ಲವೂ ಊಹೆ ಮಾಡಿಕೊಂಡು ಸಿನಿಮಾ ಮಾಡಿದ್ಸಾರೆ, ಛಾಯಾಗ್ರಾಹಕ ಚಂದ್ರಶೇಖರ್ ಉತ್ತಮವಾಗಿ ತೋರಿಸಿದ್ದಾರೆ‌.ಚಿತ್ರದಿಂದ ಸುಮಾರು‌ ವರ್ಷದ ಕನಸು ಕನಸಾಗಿದೆ ಎಂದರು.


ಕಲಾವಿದ ಭಜರಂಗ ಶೆಟ್ಟಿ ಮಾತನಾಡಿ, ಮಾರಿ ಗೋಲ್ಡ್ ನಲ್ಲಿ ನಟಿಸಲು ಗೆಳೆಯ ಯಶ್ ಶೆಟ್ಟಿ ಕಾರಣ ಕೋವಿಡ್ ಸಮಯದಲ್ಲಿ ಊರಲ್ಲಿ‌ಮೀನು ಹಿಡಿಯುತ್ತಿದ್ದೆಮಮ ಬಳಿಕ ಕಾಕ್ ರೋಚ್ ಸುಧಿ ಮಾತನಾಡಿದರು ನಂತರ ನಿರ್ದೇಶಕರು ಮಾತನಾಡಿದ ಬಳಿಕ ಮಾಹಿತಿ ಹಂಚಿಕೊಂಡರು.


ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ವಿಭಿನ್ನ ಸಂಭಾಷಣೆ ಇದೆ ಎಂದರೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ , ಚಿತ್ರದಲ್ಲಿ ಎರಡೆ ಹಾಡು ಇವೆ. ಇದೊಂದು ಥ್ರಿಲ್ಲರ್ ಸಿನಿಮಾ ಆಕ್ಷನ್ ಸಿನಿಮಾ, ಸಿನಿಮಾ‌ಹಿಟ್ ಆದರೆ ದಿಗಂತ್ ಆಕ್ಷನ್ ಹೀರೋ ಆಗಲಿದ್ಸಾರೆ. ಯೋಗರಾಜ್ ಭಟ್, ವಿಜಯ್ ಭರಮಸಾಗರ, ಕವಿರಾಜ್ ಹಾಡು ಬರೆದಿದ್ದಾರೆ, ಗೆಲವಿನ ಆಶಾಕಿರಣ ಇದೆ ಎಂದರು.


ಛಾಯಾಗ್ರಾಹಕ ಚಂದ್ರಶೇಖರ್ ಹೊಸ ಜಾನರ್ ಸಿನಿಮಾ , ಥ್ರಿಲ್ಲರ್ ಸಿನಿಮಾ ಮಾಡಿರಲಿಲ್ಲ. ನಿರ್ಮಾಪಕ ರಘುವರ್ಧನ್ ಜೊತೆ ಗುಣವಂತದಲ್ಲಿ ಕೆಲಸ ಮಾಡಿದ್ದೇ ಈಗ ಅವರ ನಿರ್ಮಾಣದಲ್ಲಿ ಕೆಲಸ ಮಾಡಿದ್ದೇವೆ ಎಂದರು


ಚಿತ್ರದಲ್ಲಿ ದಿಗಂತ್ ಮಂಚಾಲೆ, ಸಂಗೀತ ಶ್ರಂಗೇರಿ, ಸಂಪತ್ ಮೈತ್ರೇಯ, ಯಶ್ ಶೆಟ್ಟಿ , ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಬಾಲಾ ರಾಜವಾಡಿ, ಮಹಂತೇಶ್, ಸಂದೀಪ್ ಮಲಾನಿ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.


ಚಿತ್ರಕ್ಕೆ ವೀ‌ರ್ ಸಮರ್ಥ್ ಸಂಗೀತ, ರಘು ನಿಡುವಳ್ಳಿ ಸಂಭಾಷಣೆಣ , ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪ್ರಶಾಂತ್ ಗೌಡ ಕಲೆ, ನೃತ್ಯ ಕಲೈ, ಸಾಹಸ ಅರ್ಜುನ್ ರಾಜ್ ಹಾಗು ನಿರ್ಮಾಣ ನಿರ್ವಹಣೆ: ಜೇವಿಯ‌ರ್ ಫರ್ನಾಂಡಿಸ್‌ ಚಿತ್ರಕ್ಕಿದೆ.

error: Content is protected !!