ಬಿ.ಸಿ.ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ “ಗರಡಿ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಸಂಜೆ 6.30ಕ್ಕೆ ರಾಣಿಬೆನ್ನೂರಿನ ಮುನ್ಸಿಪಲ್ ಗ್ರೌಂಡ್ ನಲ್ಲಿ ನಡೆಯಲಿದೆ.
ಈಗಾಗಲೇ ಸಮಾರಂಭಕ್ಕೆ ಅದ್ದೂರಿ ತಯಾರಿ ನಡೆಯುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ. ದರ್ಶನ್ ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾ ಪತ್ರ ನೀಡಿದೆ. “ಗರಡಿ” ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸೌಮ್ಯ ಫಿಲಂಸ್ ಹಾಗೂ ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.
ನಿರಂಜನ್ ಬಾಬು ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಅವರ ಸಂಕಲನವಿರುವ “ಗರಡಿ” ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸೃಷ್ಟಿ ಪಾಟೀಲ್.
ಸೂರ್ಯ ನಾಯಕರಾಗಿ ನಟಿಸಿದ್ದಾರೆ. ಬಿ.ಸಿ.ಪಾಟೀಲ್, ಸೋನಾಲ್ ಮೊಂತೆರೊ, ರವಿಶಂಕರ್, ಧರ್ಮಣ್ಣ, ಸುಜಯ್ ಬೇಲೂರ್, ರಾಘವೇಂದ್ರ, ಚೆಲುವರಾಜ್, ಬಲ ರಾಜವಾಡಿ, ತೇಜಸ್ವಿನಿ ಪ್ರಕಾಶ್, ನಯನ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ವಿಕಾ ನಾಯ್ಡು ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.
ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಷ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ.
ನಟ ಅನೀಶ್ ಮಾತನಾಡಿ, ಪ್ರತಿಯೊಂದು ಅಂತ್ಯದಲ್ಲೊಂದು ಆರಂಭ ಇರುತ್ತದೆ ಎಂಬ ಹಾಗೇ ಬೆಂಕಿ ಕಲೆಕ್ಷನ್ ಎಲ್ಲಾ ನೋಡಿ ಎಂಡ್ ಪಾಯಿಂಟ್ ನಲ್ಲಿ ಇದ್ದೇನಾ ಅನಿಸಿತು. ನನ್ನಿಂದ ಪ್ರೇಕ್ಷಕರು ಬೇರೆಯದ್ದನ್ನೂ ನಿರೀಕ್ಷೆ ಮಾಡುತ್ತಿದ್ದಾರೆ ಎಂಬುವುದು ಗೊತ್ತಾಯಿತು. ನನಗೆ ಅಂತಾ ಮಾಡಿಕೊಂಡ ಸಬ್ಜೆಕ್ಟ್ ನ್ನು ನಿನಗೆ ಅಂತಾ ಹೇಳುತ್ತೇನೆ. ಆರಾಮ್ ಅರವಿಂದ್ ಸ್ವಾಮಿ ಎಂದು ಅನೌನ್ಸ್ ಮಾಡಿದ್ದೇನೆ ಎಂದು ಅಭಿಷೇಕ್ ಶೆಟ್ಟಿ ಹೇಳಿದರು. ನಿನಗೆ ಅಂತಾ ಮಾಡಿಕೊಂಡಿದ್ದನ್ನೂ ನನಗೆ ಯಾಕೆ ಹೇಳುತ್ತೀಯಾ? ಅಂದಾಗ, ಇಲ್ಲ ನಿಮಗೆ ಮಾಡುತ್ತೇನೆ ಎಂದು ಕಥೆ ಹೇಳಿದರು. ಕಥೆ ಇಷ್ಟವಾಯ್ತು 15 ನಿಮಿಷದಲ್ಲಿ ಸಿನಿಮಾ ಮಾಡೋಣಾ ಎಂದು ರೆಡಿಯಾದೆವು. ಸಿನಿಮಾ ಹುಚ್ಚಿರುವ ಎಲ್ಲರೂ ಸೇರಿ ಮಾಡಿರುವ ಸಿನಿಮಾವೇ ಆರಾಮ್ ಅರವಿಂದ್ ಸ್ವಾಮಿ ಎಂದರು.
ನಟಿ ಮಿಲನಾ ನಾಗರಾಜ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಕಥೆಯನ್ನು ಅಭಿಷೇಕ್ ಅವರು ಬಂದು ಕಥೆ ಹೇಳಿದರು. ಅನೀಶ್ ಅವರ ಜೊತೆ ಸಿನಿಮಾ ಮಾಡೋದು..ಈ ಎರಡು ನನಗೆ ಎಕ್ಸೈಟ್ ಅನಿಸಿತು. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವ ಅನುಭವ ನನಗೆ. ನಾನು ಸಿನಿಮಾ ನೋಡಿಲ್ಲ. ಸಿನಿಮಾ ನೋಡಲು ನಾನು ಎಕ್ಸೈಟ್ ಆಗಿದ್ದಾನೆ. ಅನೀಶ್ ಅವರಿಗೆ ಈ ಕಥೆ ವಿಭಿನ್ನವಾಗಿದೆ ಅನಿಸುತ್ತದೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿದೆ ಎಂದರು.
ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ, ಗುಳ್ಟು ಪ್ರೊಡ್ಯೂಸರ್ ಹಾಗೂ ಅಕಿರಾ ಸಿನಿಮಾ ಪ್ರೊಡ್ಯೂಸರ್ ಒಂದೊಳ್ಳೆ ಕಥೆ ಇದ್ದರೆ ಹೇಳಿ ಎಂದರು. ಕಥೆ ಹೇಳಿದೆ. ಅನೀಶ್ ಅವರಿಗೆ ಕಥೆ ಹುಡುಕುತ್ತಿರುವುದು ಎಂದು ಗೊತ್ತಾಯಿತು. ನಾನು ಒಂದು ಮಾಸ್ ಕಥೆ ಮಾಡಿಕೊಂಡು ಬಂದು ಹೇಳಿದೆ. ಒಪ್ಪಿಕೊಳ್ತಾರೆ ಎಂದುಕೊಂಡಿದ್ದರು, ಅವರು ಔಟ್ ಆಫ್ ದಿ ಬಾಕ್ಸ್ ಕಥೆ ಮಾಡಲು ರೆಡಿ ಇದ್ದರು. ಆಗ ಹೇಳಿದ್ದೇ ಆರಾಮ್ ಅರವಿಂದ್ ಸ್ವಾಮಿ ಕಥೆ. ಎಲ್ಲರೂ ಬಂದು ಆರಾಮ್ ಇದ್ದೀಯಾ ಅಂದು ಕೇಳ್ತಾರೆ. ಯಾರಿಗೂ ನಮ್ಮ ಕಷ್ಟ ಹೇಳೋದಿಕ್ಕೆ ಆಗಲ್ಲ. ಹೇಳಿದ್ರೆ ಸಹಾಯ ಮಾಡ್ತೀಯಾ ಅನ್ನುತ್ತೇವೆ. ಅವರು ನಕ್ಕು ಸುಮ್ಮನೇ ಆಗುತ್ತಾರೆ. ಈ ಬೇಸ್ ಲೈನ್ ಮೇಲೆ ಶುರುವಾದ ಕಥೆ. ಅದ್ಭುತವಾಗಿ ಸಿನಿಮಾ ಬಂದಿದೆ. ಎರಡು ಸಿನಿಮಾ ಆದಾಗ ಎಲ್ಲರೂ ಒಳ್ಳೆ ಭವಿಷ್ಯವಿದೆ ಎನ್ನುವರು. ಆದರೆ ಆರಾಮ್ ಅರವಿಂದ್ ಸ್ವಾಮಿಯೇ ನನ್ನ ಭವಿಷ್ಯ. ಈ ಸಿನಿಮಾದಿಂದ ನನ್ನ ಭವಿಷ್ಯ ಶುರುವಾಗ್ತಿದೆ. ಸಿನಿಮಾಗೆ ಏನೂ ಬೇಕು ಎಲ್ಲವನ್ನೂ ನಿರ್ಮಾಪಕರು ಕೊಟ್ಟಿದ್ದಾರೆ. ಪಾತ್ರ ವರ್ಗ ಎಲ್ಲಾ ಅಭಿನಯವೂ ಚೆನ್ನಾಗಿದೆ ಎಂದರು.
ನಟಿ ಹೃತಿಕಾ ಶ್ರೀನಿವಾಸ್ ಮಾತನಾಡಿ, ಆರಾಮ್ ಅರವಿಂದ್ ಸ್ವಾಮಿ ನನ್ನ ಎರಡನೇ ಸಿನಿಮಾ. ನನ್ನ ಪಾತ್ರ ಬಹಳ ವಿಭಿನ್ನವಾಗಿದೆ. ನನ್ನ ಪಾತ್ರ ಕೇಳಿದಾಗಲೇ ಥ್ರಿಲ್ ಆಗಿದ್ದೇ. ಪ್ರಾಕ್ಟೀಸ್ ಮಾಡಿ, ಹರ್ಡ್ ವರ್ಕ್ ಪಾತ್ರ ಮಾಡಿದ್ದೇನೆ,. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ಆರಾಮ್ ಅರವಿಂದ್ ಸ್ವಾಮಿ ಒಂದೊಳ್ಳೆ ಸಿನಿಮಾ. ನಿಮ್ಮ ಬೆಂಬಲ ಚಿತ್ರದ ಮೇಲೆ ಇರಲಿ ಎಂದರು.
ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರಾ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ. ‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರಿಗೆ ಆರಾಮ್ ಅರವಿಂದ್ ಸ್ವಾಮಿ ಮೂರನೇ ಸಿನಿಮಾ.
ಈ ಚಿತ್ರದ ಮೂಲಕ ಅನೀಶ್ ತೇಜೇಶ್ವರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ ಜನವರಿ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲಿದೆ.
ಚಿತ್ರ: ಟಗರು ಪಲ್ಯ ನಿರ್ದೇಶನ: ಉಮೇಶ್ ಬಿ. ಕೃಪ ನಿರ್ಮಾಣ : ಧನಂಜಯ ತಾರಾಗಣ: ನಾಗಭೂಷಣ, ಅಮೃತಾ ಪ್ರೇಮ್, ರಂಗಾಯಣ ರಘು, ತಾರಾ, ಬಿರಾದಾರ, ಶರತ್ ಲೋಹಿತಾಶ್ವ, ಮಹಾಂತೇಶ್, ಹುಲಿ ಕಾರ್ತಿಕ್, ವಾಸುಕಿ ವೈಭವ್, ಚೈತ್ರಾ ಶೆಣೈ ಇತರರು.
‘ತಾಯಿ ನಮ್ಮವ್ವಂಗೆ ಹೆಂಗೋ ನನ್ ಲವ್ ವಿಷ್ಯ ಗೊತ್ತಾಗದೆ ಕಾಪಾಡಮ್ಮ…’
ನಾಯಕಿ ಈ ಡೈಲಾಗ್ ಹೇಳುವ ಹೊತ್ತಿಗೆ, ಆ ಹಳ್ಳಿ ಜನರೊಟ್ಟಿಗೆ ಊರ ಗೌಡ ತನ್ನ ಮಗಳ ಮದ್ವೆ ಸೆಟ್ಟೇರಿದರೆ, ಇಲ್ಲಿ ಬಂದು ಪೂಜೆ ಮಾಡಿಸಿ, ಟಗರು ಬಲಿ ಕೊಟ್ಟು ಬಾಡೂಟ ಹಾಕಿಸ್ತೀನಿ ಅಂತ ಬೆಟ್ಟದ ಕೆಳಗಿರುವ ನದಿ ಸಮೀಪದ ಕಾಡೊಳಗಿರುವ ಹೆಣ್ ದೇವ್ರಿಗೆ ಹರಕೆ ತೀರಿಸಲು ಬಂದಿರ್ತಾನೆ. ಅಲ್ಲಿ ಹರಕೆ ಈಡೇರುತ್ತಾ, ಮಗಳ ಮದ್ವೆ ನಡೆಯುತ್ತಾ, ಜನ ಬಾಡೂಟ ಸವಿತಾರ ಅನ್ನೋದೇ ಕಥೆ.
ಒಂದೇ ಮಾತಲ್ಲಿ ಹೇಳುವುದಾದರೆ, ಇದೊಂದು ಅಪ್ಪಟ ದೇಸಿ ಕಥೆಯ ಚಿತ್ರ. ಪಕ್ಕಾ ಹಳ್ಳಿ ಸೊಗಡು ತುಂಬಿರುವ ಕಥಾವಸ್ತು. ಸಿನಮಾದ ಮುಖ್ಯ ಆಕರ್ಷಣೆ ಅಂದರೆ, ಭಾಷೆ ಮತ್ತು ಇಡೀ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿರೋದು.
ಇಲ್ಲಿ ನಿರ್ದೇಶಕರ ಜಾಣ್ಮೆ ಎದ್ದು ಕಾಣುತ್ತೆ. ರಾಶಿ ಪಾತ್ರಗಳನ್ನು ಕಟ್ಟಿಕೊಂಡು ಕಾಡೊಳಗಿನ ನದಿ ಬದಿಯ ಕಲ್ಲು ದೇವರನ್ನು ಪೂಜಿಸುವ ಮತ್ತು ಅಲ್ಲಿ ನಡೆಯುವ ಡ್ರಾಮಾಗಳೆ ಸಿನಿಮಾದ ತಾಕತ್ತು.
ಹೊಡಿ ಬಡಿ ಕಡಿ ಸಿನಿಮಾಗಳ ಮಧ್ಯೆ ಕುಟುಂಬ ಪ್ರೀತಿಯ ಕಥೆ ಕಟ್ಟಿಕೊಡುವ ಮೂಲಕ ನೋಡುಗರನ್ನು ನಗಿಸುವ ಮತ್ತು ಸಂಬಂಧಗಳ ಮೌಲ್ಯ ಸಾರುವಲ್ಲಿ ಚಿತ್ರ ಯಶಸ್ವಿ.
ಮೊದಲರ್ಧ ಹಾಸ್ಯಮಯವಾಗಿಯೇ ಸಾಗುವ ಸಿನಿಮಾದಲ್ಲಿ ಎಲ್ಲೂ ತೆಗೆದು ಹಾಕುವ ಅಂಶಗಳಿಲ್ಲ. ಯಾವ ದೃಶ್ಯದಲ್ಲೂ ಅನಗತ್ಯ ಮಾತಾಗಲಿ, ಅಸಹ್ಯ ತರುವ ದೃಶದಯಗಳಾಗಲಿ ಇಲ್ಲ. ಸಿನಿಮಾ ನೋಡುವಾಗ, ನಮ್ಮ ಅಕ್ಕಪಕ್ಕದ ಮನೆಯ ಕಥೆಯೇನೋ ಎಂಬ ಫೀಲ್ ಬರುತ್ತೆ. ಅದಕ್ಕೆಕಾರಣ ನಿರ್ದೇಶಕರು ಆಯ್ಕೆ ಮಾಡಿಕೊಂಡ ಕಥೆ ಮತ್ತು ನಿರೂಪಿಸಿರುವ ಜಾಣತನ.
ಗ್ರಾಮೀಣ್ಯ ಭಾಗದಲ್ಲಿ ನಡೆಯೋ ದೇವರ ಆಚರಣೆ, ಆಚಾರ, ವಿಚಾರಗಳ ಜೊತೆಗೆ ನಂಬಿಕೆಯ ಸುತ್ತಬಕಥೆ ಸಾಗುತ್ತೆ. ಹಾಗಾಗಿ ಇಲ್ಲಿ ಯಾವುದು ಡಮ್ಮಿ ಎನಿಸಲ್ಲ. ಎಲ್ಲವೂ ನೈಜತೆ ಎನಿಸುತ್ತೆ. ಆಯ್ಕೆ ಮಾಡಿಕೊಂಡ ಪಾತ್ರಗಳೂ ಕೂಡ ಸಿನಿಮಾ ವೇಗ ಹೆಚ್ಚಿಸಲು ಕಾರಣವಾಗಿವೆ.
ಮೊದಲಿಗೆ ಕಥೆ ಗಮನ ಸೆಳೆದರೆ, ಅದರೊಳಗಿನ ಭಾಷೆ ಆಪ್ತವೆನಿಸುತ್ತೆ. ದೇವ್ರ ಆಚರಣೆ ಅಂದರೆ ಗ್ರಾಮೀಣ ಜನರ ಭಕ್ತಿ, ನಂಬಿಕೆ, ಉತ್ಸಾಹ. ಅದಿಲ್ಲೂ ಚಾಚು ತಪ್ಪದೆ ಸೆರೆಹಿಡಿಯುವಲ್ಲಿ ನಿರ್ದೇಶಕರು ಯಶಸ್ವಿ.
ಇನ್ನು ಮೊದಲರ್ಧ ಚಿತ್ರ ಸಾಕಷ್ಟು ನಗಿಸಿಕೊಂಡೇ ಸಾಗುತ್ತೆ. ದ್ವಿತಿಯಾರ್ಧ ಕೂಡ ಸಣ್ಣ ತಿರುವು ಪಡೆದು ಒಂದಷ್ಟು ಸಂಬಂಧಗಳ ಮೌಲ್ಯ ಬಗ್ಗೆ ಹೇಳುತ್ತೆ. ಇಲ್ಲೂ ಪ್ರೀತಿ, ನಂಬಿಕೆ, ಕುಟುಂಬಗಳ ನಡುವಿನ ಬಾಂಧವ್ಯ ಇತ್ಯಾದಿ ಅಂಶಗಳು ಕಾಡುತ್ತವೆ. ಆ ಕಾರಣಕ್ಕೆ ಟಗರು ಪಲ್ಯ ಇಷ್ಟವಾಗುತ್ತೆ.
ಕಥೆ ಏನು?
ಮಗಳಿಗೆ ಸಿಟಿ ಹುಡುಗನ ಹುಡುಕಿ ಮದ್ವೆ ಸೆಟ್ಟಾದರೆ ಊರ ಬೆಟ್ಟದ ಬಳಿ ಇರುವ ಹೆಣ್ ದೇವ್ರಿಗೆ ಟಗರು ಬಲಿ ಕೊಟ್ಟು ಬಾಡೂಟ ಹಾಕಿಸ್ತೀನಿ ಎಂಬುದು ಗೌಡನ ಹರಕೆ. ಜನರ ಜೊತೆ ಹೋಗುವ ಗೌಡನ ಟಗರು ದೇವ್ರ ಮುಂದೆ ತಲೆ ಅಲ್ಲಾಡಿಸಿ, ಒದರಬೇಕು. ಆದರೆ, ಆ ಟಗರು ಒದರೋದೇ ಇಲ್ಲ. ಅಲ್ಲಿಗೆ ಬಲಿ ಕೊಡುವಂತೆಯೂ ಇಲ್ಲ. ಈ ನಂಬಿಕೆ ಪ್ರತೀತಿ ಮುಂದುವರೆಯುತ್ತಲೇ ಟಗರು ಬಲಿ ಕೊಡುವ ಪ್ರಸಂಗ ನಡೆಯುತ್ತೆ. ಅದೇ ಸಿನಿಮಾದ ಟ್ವಿಸ್ಟು. ಟಗರು ಯಾಕೆ ಒದರಲ್ಲ? ಹರಕೆ ಈಡೇರುತ್ತಾ? ಮಗಳ ಮದ್ವೆ ನಡೆಯುತ್ತಾ? ಬಾಡೂಟ ಸವಿಯಲು ಬಂದ ಜನರ ಆಸೆ ಫಲಿಸುತ್ತಾ ಅನ್ನೋದೇ ಕಥೆ. ಇಂತಹ ಮಜವಾದ ಕಥೆಯುಳ್ಳ ಚಿತ್ರ ನೋಡುವ ಕುತೂಹಲ ಇದ್ದರೆ ಮಿಸ್ ಮಾಡಬೇಡಿ.
ಯಾರು ಹೇಗೆ?
ನಾಗಭೂಷಣ ಚಿಕ್ಕನ ಪಾತ್ರ ಮೂಲಕ ಕಾಡುತ್ತಾರೆ, ನಗಿಸಿ ಅಳಿಸುತ್ತಾರೆ. ಅಮೃತಾ ಪ್ರೇಮ್ ಮೊದಲ ಬಾಲ್ ನಲ್ಲೇ ಬೌಂಡರಿ ಬಾರಿಸಿದ್ದಾರೆ. ಸಿಕ್ಕ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರಿಗೆ ಮುಂದೆ ಚಿತ್ರರಂಗದಲ್ಲಿ ಭವಿಷ್ಯ ಎದ್ದು ಕಾಣುತ್ತೆ. ರಂಗಾಯಣ ರಘು ಪಾತ್ರ ಕೊನೆಯವರೆಗೂ ನೆನಪಲ್ಲುಳಿಯುತ್ತೆ. ಒಬ್ಬ ತಂದೆಯಾಗಿ ಅವರು ಆಪ್ತವೆನಿಸುತ್ತಾರೆ. ತಾರಾ ಅಮ್ಮನಾಗಿ ಇಷ್ಟವಾಗುತ್ತಾರೆ. ಶರತ್ವಲೋಹಿತಾಶ್ವ, ಬಿರಾದಾರ, ಮಹಾಂತೇಶ್, ಚಿತ್ರಾ ಶೆಣೈ, ವಾಸುಕಿ ವೈಭವ್ ಸೇರಿದಂತೆ ಹಲವರು ಪಾತ್ರಕ್ಕೆ ಮೋಸ ಮಾಡಿಲ್ಲ. ಹಾಡು ಹಾಗು ಹಿನ್ನೆಲೆ ಸಂಗೀತ ಕಥೆಗೆ ಪೂರಕ. ಛಾಯಾಗ್ರಹಣ ಕೂಡ ಪರಿಸರದ ಅಂದ ಹೆಚ್ಚಿಸಿದೆ.
ಕೊನೆ ಮಾತು : ಇಲ್ಲಿ ಸಂಬಂಜ ಅನ್ನೋದು ದೊಡ್ದು ಕನಾ ಅನ್ನೋದನ್ನು ಸಾಬೀತು ಮಾಡಲಾಗಿದೆ. ಅದೇ ಇಲ್ಲಿ ಭಾವುಕ ಪಯಣ ಅದು ಹೇಗೆ ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು.
ತಮಿಳಿನ ಖ್ಯಾತ ನಟ ಸೂರ್ಯ ಹಾಗೂ ನಿರ್ದೇಶಕಿ ಸುಧಾ ಕೊಂಗರ ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ.
ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಹಿನ್ನೆಲೆ ಸಂಗೀತ, ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಈ ತಂಡ ಹೊಸ ಪ್ರಾಜೆಕ್ಟ್ ಗೆ ಒಂದಾಗಿದೆ.
ಸೂರರೈ ಪೋಟ್ರೂ ಮೂಲಕ ಧಮಾಕ ಎಬ್ಬಿಸಿದ್ದ ಸೂರ್ಯ ಹಾಗೂ ಸುಧಾ ಕೊಂಗರ ಹೊಸ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಮಾಲಿವುಡ್ ಹ್ಯಾಂಡ್ಸಮ್ ಹಂಕ್ ದುಲ್ಕರ್ ಸಲ್ಮಾನ್, ನಜ್ರಿಯಾ ಫಹದ್ ಹಾಗೂ ವಿಜಯ್ ವರ್ಮಾ ಸೂರ್ಯ 43 ಚಿತ್ರದ ಭಾಗವಾಗಿದ್ದಾರೆ.
ತಾತ್ಕಾಲಿಕವಾಗಿ #Suriya43 ಎಂದು ಟೈಟಲ್ ಇಡಲಾಗಿದೆ. ಸೂರ್ಯ ಒಡೆತನದ 2D ಎಂಟರ್ಟೈನ್ಮೆಂಟ್ ನಡಿ ಜ್ಯೋತಿಕಾ, ಸೂರ್ಯ ಮತ್ತು ರಾಜಶೇಖರ್ ಕರ್ಪೂರಸುಂದರಪಾಂಡಿಯನ್ ನಿರ್ಮಿಸಲಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಜಿವಿ ಪ್ರಕಾಶ್ ಸಂಗೀತ ನಿರ್ದೇಶಿಸ್ತಿರುವ 100 ಚಿತ್ರ ಇದಾಗಿರೋದು ಮತ್ತೊಂದು ವಿಶೇಷ..ಸೂರರೈ ಪೋಟ್ರೂ ಮೂಲಕ ಮೋಡಿ ಮಾಡಿದ್ದ ಸೂರ್ಯ, ಸುಧಾ ಹಾಗೂ ಜಿವಿ ಪ್ರಕಾಶ್ ಹೊಸ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ.
ಗೊಂಬೆಗಳ ಲವ್ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.
ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಉಪೇಂದ್ರ ಮಾತನಾಡಿ, ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು.
ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ ಅಣ್ಣ ಟೀಸರ್ ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ ಮಾಡಿದ್ದೀರಿ ಎಂದರು.
ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ಲಾಕ್ ಡೌನ್ ಆದ್ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಮಲಯಾಳಂ, ತಮಿಳು ಇಂಡಸ್ಟ್ರೀಗೆ ಕಥೆ ತೆಗೆದುಕೊಂಡು. ಆದರೆ ನನಗೆ ತೃಪ್ತಿಯಾಗಲಿಲ್ಲ. ಇಲ್ಲೇ ಏನಾದರೂ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು.
ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ ಎಂದರು.
ನಿರ್ಮಾಪಕ ಬಿ.ಎಂ.ಶ್ರೀರಾಮ್ (ಕೋಲಾರ) ಮಾತನಾಡಿ, ಉಪ್ಪಿ ಕಾರ್ಯಕ್ರಮಕ್ಕೆ ಬಂದಿದ್ದು ಬಹಳ ಖುಷಿ ಆಯ್ತು. ನಾವು ತುಂಬ ಬಡತನದಿಂದ ಮೇಲೆ ಬಂದವರು. ನಾವು ಈ ಮಟ್ಟದಲ್ಲಿ ಬೆಳೆಯಲು ಐದು ಜನರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ. ಅದರಲ್ಲಿ ಉಪ್ಪಿ ಸರ್ ಕೂಡ ಒಬ್ಬರು. ತಂದೆ ತಾಯಿ ಆಶೀರ್ವಾದ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಇದ್ದೀವಿ. ಅರುಣ್ ಅವರನ್ನು ನನ್ನ ಸ್ನೇಹಿತರು ರೆಫರ್ ಮಾಡಿದ್ದರು. ಇದು ಚಾಮರಾಜನಗ ಆಚಾರ,ವಿಚಾರ ಅಂಶಗಳು ಇರುವುದರಿಂದ ಕಥೆ ಒಪ್ಪಿಕೊಂಡೆ. ವಿನೋದ್ ಸರ್ ಅಪ್ರೋಚ್ ಮಾಡಿದ್ವಿ. ಕಥೆ ಹೇಳಿದ್ವಿ ಒಪ್ಪಿಕೊಂಡರು. ಟೀಸರ್ ಮಾಡಿದ್ಮೇಲೆ ಅರುಣ್ ಟೀ ಮೇಲೆ ಭರವಸೆ ಹೆಚ್ಚಾಯ್ತು ಎಂದರು.
‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್ಸ್ಟರ್ ಕಥೆ. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.
ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.
ಯುವ ರಾಜಕುಮಾರ್ ಅಭಿನಯದ ಯುವ ಸಿನಿಮಾ ರಿಲೀಸ್ ಡೆಡಟ್ ಅನೌನ್ಸ್ ಆಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ.
ಇಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ “ಕೆ ಜಿ ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಜನಪ್ರಿಯ ಚಿತ್ರಗಳ ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಚೊಚ್ಚಲ ಚಿತ್ರ “ಯುವ” ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.
ಅಭಿಮಾನಿಗಳಲ್ಲಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ 2024 ರ ಮಾರ್ಚ್ 28 ರಂದು ಬಿಡುಗಡೆಯಾಗುತ್ತಿದೆ. ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹೊಂಬಾಳೆ ಫಿಲಂಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ
ಕ್ರೈಮ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಸೈಕಿಕ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿವೃತ್ತ ಪೊಲೀಸ್ ಆಧಿಕಾರಿಗಳ ಉಪಸ್ಥಿತಿಯಲ್ಲಿ ನೆರವೇರಿತು. ಹತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಪುಷ್ಕರ್ ಗಿರಿಗೌಡ, ಸೈಕಿಕ್ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಕ್ರೈಮ್, ಸಸ್ಪೆನ್ಸ್, ಥ್ರಿಲ್ಲರ್ ಚಿತ್ರಗಳನ್ನು ಮಾಮೂಲಿ ಚೌಕಟ್ಟನ್ನು ಬಿಟ್ಟು ಈರೀತಿಯೂ ಮಾಡಿ ತೋರಿಸಬಹುದು ಎಂದು ಹೇಳಹೊರಟಿರುವ ನಿರ್ದೇಶಕ ಪುಷ್ಕರ ಗಿರಿಗೌಡ ಅದಕ್ಕೆ ತಕ್ಕಂತೆ ಕಥೆ, ಚಿತ್ರಕಥೆಯನ್ನೂ ರಚಿಸಿದ್ದಾರೆ. ನಿರ್ದೇಶಕ ಕೆ.ಎಂ.ಚೈತನ್ಯ, ನಿವೃತ್ತ ಎಸಿಪಿಗಳಾದ ಶಿವರಾಮ್, ಹನುಮಂತೇಗೌಡ್ರು, ಎಸ್.ಕೆ. ಉಮೇಶ್, ನಿರ್ಮಾಪಕ ದೇವೇಂದ್ರರೆಡ್ಡಿ, ಮಂಜುನಾಥ್ ನಾಯಕ ಸರ್ದಾರ್ ಸತ್ಯ, ನಾಯಕಿ ಹಂಸ ಪ್ರತಪ್ ಇತೃಉ ಇದ್ದರು.
ಸರ್ದಾರ್ ಸತ್ಯ, ಹಂಸಾ ಪ್ರತಾಪ್, ರಮೇಶ್ ಭಟ್, ಅರವಿಂದ್ (ರಥಸಪ್ತಮಿ) ಮುಖ್ಯ ಭೂಮಿಕೆಯಲ್ಲಿರುವ ಸೈಕಿಕ್ ಸಿನಿಮಾದ ಟೀಸರ್ ಎ2 ಮ್ಯೂಸಿಕ್ ಯೂ ಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಎಂ.ಎಸ್.ತ್ಯಾಗರಾಜ್ ಅವರ ಸಂಗೀತ, ಹಿನ್ನೆಲೆ ಸಂಗೀತ, ಸಿನಿಟೆಕ್ ಸೂರಿ ಅವರ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ.
ನಿರ್ದೇಶಕ ಪುಷ್ಕರ ಗಿರಿಗೌಡ ಮಾತನಾಡುತ್ತ “ಕ್ರೈಮ್-ಥ್ರಿಲ್ಲರ್- ಇನ್ವೆಸ್ಟಿಗೇಶನ್ ಸಿನಿಮಾ ಎಂದರೆ ರಕ್ತ ಸಿಕ್ತ ದೃಶ್ಯಗಳನ್ನು ವೈಭವೀಕರಿಸುವುದು ಸಾಮಾನ್ಯ. ಆದರೆ ಸೈಕಿಕ್ ಸಿನಿಮಾದಲ್ಲಿ ಅದರ ಹೊರತಾಗಿ, ಕ್ರೌರ್ಯವನ್ನು ಪರೋಕ್ಷವಾಗಿ ಮನದಟ್ಟು ಮಾಡುವ ರೀತಿಯಲ್ಲಿ ದೃಶ್ಯ ಸಂಯೋಜನೆ ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಛಾಯಾಗ್ರಹಣ, ಹಿನ್ನೆಲೆ ಸಂಗೀತ ಮತ್ತು ಶಬ್ದ ವಿನ್ಯಾಸ ಬೆಂಬಲ ನೀಡಿವೆ.
ಮೂರು ರೀತಿಯ ಲವ್ ಸ್ಟೋರಿಗಳನ್ನು ಇಲ್ಲಿ ಹೇಳಿದ್ದೇವೆ. ಚಿತ್ರದ ಹಲವಾರು ಮುಖ್ಯ ಅಂಶಗಳನ್ನು ಟೀಸರ್ ನಲ್ಲಿ ಬಿಟ್ಟುಕೊಟ್ಟಿಲ್ಲ. ಮುಂದೆ ಟ್ರೇಲರ್ ನಲ್ಲಿ ಅದನ್ನು ಹೇಳುತ್ತೇವೆ. ಚಿತ್ರದಲ್ಲಿ ಕೊಲೆ, ಅಪರಾಧ, ತನಿಖೆ ಇದ್ದರೂ ಅದರ ಜೊತೆ ಸಮಾಜಕ್ಕೆ ಒಂದೊಳ್ಳೆ ಸಂದೇಶವನ್ನು ಕೊಡುವ ಪ್ರಯತ್ನ ಮಾಡಿದ್ದೇವೆ ಎಂದರು. ಹಂಸ ಪ್ರತಾಪ್ ಮಾತನಾಡಿ ಪೊಲೀಸ್ ಪಾತ್ರ ಮಾಡಬೇಕೆನ್ನುವುದು ನನ್ನ ಬಹುದಿನಗಳ ಕನಸು. ಅದು ಈ ಚಿತ್ರದಲ್ಲಿ ನೆರವೇರಿದೆ ಎಂದರು. ತುಂಬಾ ದಿನಗಳ ನಂತರ ಸರ್ದಾರ್ ಸತ್ಯ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತುಂಬಾ ಸ್ಟ್ರಾಂಗ್ ಕಂಟೆಂಟ್ ಇರುವ ಚಿತ್ರ. ಇಲ್ಲಿ ನಾನು ಈವರೆಗೂ ಮಾಡಿರದ ಹೊಸತನದ ಪಾತ್ರ ಮಾಡಿದ್ದೇನೆ ಎಂದರು.
ಉಳಿದಂತೆ ಕೈಲಾಸ್ ದೇವ್, ನಿಖಿತಾ ದೋರ್ತೋಡಿ, ರೇಷ್ಮಾ ಲಿಂಗರಾಜಪ್ಪ, ರೋಹಿತ್ ನಾಗೇಶ್, ಕೇಶವ್ ಮೊದಲಾದವರು ಸೈಕಿಕ್ ಚಿತ್ರದ ತಾರಬಳಗದಲ್ಲಿದ್ದಾರೆ. ಸಿಲ್ಕ್ ಸಿನಿಮಾ ಅರ್ಪಿಸುವ ಸೈಕಿಕ್ ಚಿತ್ರವನ್ನು ಚೇತನ್ ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ವೈ.ಎಸ್.ಶ್ರೀಧರ್ ಅವರ ಸಂಕಲನ, ಪ್ರಸನ್ನ ಶೆಟ್ಟಿ ಅವರ ಸಂಭಾಷಣೆ ಹಾಗೂ ಗೋಪಿ ಜಾ ಅವರ ಸಾಹಸ ಸಂಯೋಜನೆಯಿದೆ.
ಡಾಲಿ ಧನಂಜಯ್ ನಿರ್ಮಾಣದ ಟಗರು ಪಲ್ಯ ಚಿತ್ರದ ಪ್ರಚಾರ ಶುರು ಆಗಿದೆ. ಇದೇ ವಾರವೇ ಸಿನಿಮಾ ರಿಲೀಸ್ ಆಗುತ್ತಿದೆ. ನಿರ್ಮಾಪಕ ಧನಂಜಯ್ ಹಾಗೂ ಇಡೀ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಸಾಕಷ್ಟು ವಿಷಯ ಹಂಚಿಕೊಂಡಿದೆ.
ವಿತರಕ ಕಾರ್ತಿಕ್ ಗೌಡ ಮಾತನಾಡಿ, 45 ದಿನ ಮೊದಲೇ ಸಿನಿಮಾ ತೋರಿಸಿದ್ದರು. ಬಡವ ರಾಸ್ಕಲ್ ಕೂಡ ರಿಲೀಸ್ ಗೂ ಮುನ್ನ ಎರಡು ಮೂರು ತಿಂಗಳು ಮೊದಲೇ ತೋರಿಸಿದ್ದರು. ವಾಸುಕಿ ಆಗ ಒಂದು ಮಾತು ಹೇಳಿದ್ದರು. ಒಟಿಟಿ ನೋಡಿ ನಮ್ಮಲ್ಲೇ ಈ ರೀತಿ ಸಿನಿಮಾ ಬರಲ್ಲ ಅಂತಾರೇ. ಇದು ಎಲ್ಲಾರ ಮೆಚ್ಚುಗೆಗೆ ಸೇರುವ ಸಿನಿಮಾ. ಸಂಪ್ರದಾಯ, ಕನ್ನಡ ಭಾಷೆ ಎಲ್ಲವೂ ಚಿತ್ರದಲ್ಲಿ ಚೆನ್ನಾಗಿದೆ. ಪ್ರತಿ ಪಾತ್ರವೂ ಅದ್ಭುತವಾಗಿ ನಟಿಸಿದ್ದಾರೆ. ಮನರಂಜನೆ ಜೊತೆಗೆ ನಮ್ಮ ರಾಜ್ಯದ ಒಂದು ಭಾಗದ ಸಂಪ್ರದಾಯವನ್ನು ಅಚ್ಚುಕಟ್ಟಾಗಿ ತೋರಿಸಿದ್ದಾರೆ. ನಾವು ಈ ವರ್ಷದಲ್ಲಿ ವಿತರಣೆ ಮಾಡ್ತಿರುವ ಬೆಸ್ಟ್ ಸಿನಿಮಾ ಎಂದರು. 175 ಥಿಯೇಟರ್ ನಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಸಿಎಂ ಟಗರು ಪಲ್ಯ ನೋಡಲು ಬರ್ತಾರೆ ಎಂದರು.
ನಿರ್ಮಾಪಕ ಧನಂಜಯ್ ಮಾತನಾಡಿ, ಕೆಲವೊಂದು ಯಾಕೆ ಘಟಿಸುತ್ತದೆ. ಹೇಗೆ ಘಟಿಸುತ್ತದೆ ಗೊತ್ತಿಲ್ಲ. ಬಡವ ರಾಸ್ಕಲ್ ಪ್ರೊಡಕ್ಷನ್ ಮಾಡಿದ್ವಿ. ಹೆಡ್ ಬುಷ್ ಪ್ರೊಡಕ್ಷನ್ ಮಾಡಿದ್ವಿ. ಕಳೆದ ವರ್ಷ ನನ್ನ ಬರ್ತ್ ಡೇಯಲ್ಲಿ ಕಾರ್ತಿಕ್ ಜೊತೆ ಚರ್ಚೆ ಮಾಡುವಾಗ ಪ್ರೊಡಕ್ಷನ್ ಕಂಟಿನ್ಯೂ ಮಾಡಬೇಕು. ಒಳ್ಳೆ ಕಥೆ ನಿರ್ಮಾಣ ಮಾಡಬೇಕು ಎಂದಾಗ. ಆಗ ಆಡಿಯನ್ಸ್ ಗೆ ಪ್ರಾಮಿಸ್ ಮಾಡಿ. ಹೊಸಬರಿಗೆ ವರ್ಷಕ್ಕೆ ಒಂದು ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು. ಅವತ್ತು ಅವರು ಹೇಳಿದಾಗ ನಿಜ ಅನಿಸಿತು. ಅದನ್ನು ನನ್ನ ಹುಟ್ಟುಹಬ್ಬದಲ್ಲಿ ಅನೌನ್ಸ್ ಮಾಡಿದೆ. ಸಿನಿಮಾಗೆ ಒಂದೊಳ್ಳೆ ಕಥೆಗೆ ಏನ್ ಬೇಕು ಅದೆಲ್ಲವನ್ನೂ ಟಗರು ಪಲ್ಯಗೆ ಒದಗಿಸಿದ್ದೇವೆ.
ಈ ಚಿತ್ರವನ್ನು ಯಾಕೆ ನೋಡಿಕ್ಕೆ ಬನ್ನಿ ಎಂದು ರಿಕ್ವೆಸ್ಟ್ ಮಾಡಿಕೊಳ್ತೀವಿ ಎಂದರೆ, ನಮ್ಮ ಸಂಸ್ಥೆ ಕಡೆಯಿಂದ ನಾವೆಲ್ಲರೂ ಸೇರಿ ಒಂದೊಳ್ಳೆ ಪ್ರಾಡೆಕ್ಟ್ ಹೆಮ್ಮೆಯಿಂದ ಅರ್ಪಿಸುತ್ತಿದ್ದೇವೆ. ನಮ್ಮಗೆ ತುಂಬಾ ಕನೆಕ್ಟ್ ಆಗುವ ಸಬ್ಜೆಕ್ಟ್. ಬೇರೆ ಭಾಷೆ ಸಿನಿಮಾ ನೋಡಿದಾಗ ನಮ್ಮಲ್ಲಿ ಬರಬೇಕು ಅಂತೀವಲ್ಲ. ಆ ರೀತಿ ಕಥೆ ಇದು. ಬಡವರ ಮನೆ ಮಕ್ಕಳು ಬೆಳೆಯಬೇಕು ಎಂದು ನಾನು ಯಾವತ್ತೂ ನನಗೋಸ್ಕರ ಹೇಳಿಕೊಂಡಿಲ್ಲ. ಅದು ಬೇರೆಯವರಿಗೆ ಸ್ಫೂರ್ತಿ ಆಗಲಿ ಎಂದು. ಯಾವುದೇ ಬ್ಯಾಗ್ ಗ್ರೌಂಡ್ ಇಲ್ಲದೇ ಬಂದವರು ನಮ್ಮ ಪ್ರೊಡಕ್ಷನ್ ನಿಂದ ಮೂವರು ಜನ ನಿರ್ದೇಶಕರು ಬಂದಿದ್ದಾರೆ ಅನ್ನೋದು ನಮ್ಮ ಹೆಮ್ಮೆ ಎಂದರು.
ನಟಿ ತಾರಾ ಅನುರಾಧಾ ಮಾತನಾಡಿ, ದಸರಾ ಹಬ್ಬ ಆದ ತಕ್ಷಣ ಸಖತ್ ಊಟ ಅಂದರೆ ಅದು ಟಗರು ಪಲ್ಯ. ನಿರ್ಮಾಪಕನಿಗೆ ವಯಸ್ಸು ಮುಖ್ಯ ಅಲ್ಲ. ಅವನ ಕೆಲಸ ಮುಖ್ಯ. ಡಾಲಿಗೆ ಇಡೀ ತಂಡದ ಪರವಾಗಿ ಧನ್ಯವಾದ. ಉಮೇಶ್ ಎಲ್ಲಿಯೂ ತಾನೊಬ್ಬ ಹೊಸ ನಿರ್ದೇಶಕ ಅನಿಸದೇ ಇರುವಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ. ಅಮೃತಾ ಹೊಸ ಹುಡುಗಿ ಅನಿಸುವುದಿಲ್ಲ. ತುಂಬಾ ಚೆನ್ನಾಗಿ ನಟಿಸಿದ್ದಾಳೆ. ನಾಗು ಒಳ್ಳೆ ಆಕ್ಟರ್. ನಮ್ಮ ಅದೃಷ್ಟ ಏನೂ ನಾನು ರಘು ಮಾಡಿದ ಎಲ್ಲಾ ಚಿತ್ರಗಳು ಚೆನ್ನಾಗಿ ಆಗುತ್ತಿವೆ ಎಂದರು.
ಉಮೇಶ್ ಕೃಪ ಆಕ್ಷನ್ ಕಟ್ ಹೇಳಿರೋ ‘ಟಗರು ಪಲ್ಯ’ ಇದೇ ಶುಕ್ರವಾರ ತೆರೆ ಮೇಲೆ ಮೂಡಿ ಬರಲಿದೆ. ಹೀಗಾಗಿ ಟಗರು ಪಲ್ಯ ಪ್ರಮೋಷನ್ ಗಾಗಿ ಟ್ರಕ್ ಹತ್ತಿ ಹೊರಟಿದ್ದಾರೆ ಡಾಲಿ. ಕ್ಯಾಂಟರ್ ಓಡಿಸಿರೋ ಡಾಲಿ ಊರೂರು ಸುತ್ತಿದ್ದಾರೆ. ಆ ವೀಡಿಯೋ ವೈರಲ್ ಆಗಿದೆ.
ಟಗರು ಪಲ್ಯ ಚಿತ್ರವನ್ನು ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿ ನಟ ಧನಂಜಯ್ ನಿರ್ಮಿಸಿದ್ದಾರೆ. ಉಮೇಶ್ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ಅಮೃತಾ ತಂದೆ ಪಾತ್ರದಲ್ಲಿ ರಂಗಾಯಣ ರಘು ಹಾಗೂ ತಾಯಿ ಪಾತ್ರದಲ್ಲಿ ತಾರಾ ಅನುರಾಧಾ ನಟಿಸಿದ್ದಾರೆ. ಟ್ರೇಲರ್ ನೋಡಿ ಸಿನಿಪ್ರಿಯರು ಕೂಡಾ ಮೆಚ್ಚಿದ್ದಾರೆ.
ಅಕ್ಟೋಬರ್ 27 ರಂದು ಸಿನಿಮಾ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಇಕ್ಕಟ್ ಖ್ಯಾತಿಯ ನಾಗಭೂಷಣ್, ಮೈಸೂರು ಆರ್ಕೆಸ್ಟ್ರಾ ಖ್ಯಾತಿಯ ಪೂರ್ಣಚಂದ್ರ, ವೈಜನಾಥ್ ಬಿರಾದಾರ್, ಚಿತ್ರಾ ಶೆಣೈ, ಶ್ರೀನಾಥ್ ವಸಿಷ್ಠ ಹಾಗೂ ಇನ್ನಿತರರು ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದು ಅವರೂ ಕೂಡಾ ಒಂದು ಪಾತ್ರದಲ್ಲಿ ನಟಿಸಿದ್ದಾರೆ
ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಲಿದ್ದಾರೆ.
ಕ್ಯಾಪ್ಚರ್ ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ.
ಮಾನ್ವಿತಾ ಏನಂತಾರೆ?
‘ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಮೊದಲ ತುಂಬಾ ಭಯವಿತ್ತು. ಆದರೆ ಪಾತ್ರ ಚೆನ್ನಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ. 15 ದಿನಗಳು ಗೋವಾದಲ್ಲಿ ಶೂಟಿಂಗ್ ಮಾಡಿದ್ವಿ, ಪ್ರಿಯಾಂಕಾ ಮೇಡಮ್ ಜೊತೆ ಕೆಲಸ ಮಾಡಿದ್ದು ತುಂಬಾ ಇಷ್ಟವಾಯಿತು. ಶೂಟಿಂಗ್ ಮುಗಿಸಿ ಮನೆಗೆ ಬಂದಾಗ ತುಂಬಾ ದೃಷ್ಟಿ ಆಗಿತ್ತು ಅನಿಸುತ್ತೆ. ಜ್ವರ ಕೂಡಡ ಬಂದಿತ್ತು. ದೃಷ್ಟಿ ತೆಗಿಸಿಕೊಂಡ ಮೇಲೆ ಸರಿ ಆಯಿತು’ ಎನ್ನುತ್ತಾರೆ.
ಮಾನ್ವಿತಾ ಕೊನೆಯದಾಗಿ ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ವರ್ಷದ ಬಳಿಕ ತೆರೆಮೇಲೆ ಬರುತ್ತಿದ್ದಾರೆ. ಕ್ಯಾಪ್ಚರ್ ಸಿನಿಮಾದಲ್ಲಿ ಮಾನ್ವಿತಾ ಲುಕ್ ಹೇಗಿರಲಿದೆ ಎನ್ನುವುದು ಸದ್ಯದಲ್ಲೇ ರಿವೀಲ್ ಆಗಲಿದೆ. ಕ್ಯಾಪ್ಚರ್ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ.
ನ್ಯಾಚುರಲ್ ಸ್ಟಾರ್ ನಾನಿ ಈಗ ಸಿಕ್ಕಾಪಟ್ಟೆ ಬ್ಯೂಸಿಯಾಗಿದ್ದಾರೆ. ದಸರಾ ಸಿನಿಮಾದ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಅವರು ಸಾಲು ಸಾಲು ಚಿತ್ರಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮೊನ್ನೆಯಷ್ಟೇ ನಾನಿ 31ನೇ ಸಿನಿಮಾ ಅನೌನ್ಸ್ ಆಗಿತ್ತು. ಈ ಹಿಂದೆ ಕಾಮಿಡಿ ಕಥಾಹಂದರದ ಅಂಟೆ ಸುಂದರಾನಿಕಿ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿವೇಕ್ ಆತ್ರೇಯಾ ಮತ್ತೊಮ್ಮೆ ನಾನಿ ಜೊತೆ ಕೈ ಜೋಡಿಸಿದ್ದಾರೆ.
ದಸರಾ ಹಬ್ಬದ ಅಂಗವಾಗಿ ಹೈದ್ರಾಬಾದ್ ನಲ್ಲಿ ’ಸೂರ್ಯನ ಶನಿವಾರ’ ಸಿನಿಮಾ ಸೆಟ್ಟೇರಿದೆ. ನಿರ್ಮಾಪಕ ಡಿವಿವಿ ದಾನಯ್ಯ ಚಿತ್ರಕಥೆಯನ್ನು ನಿರ್ದೇಶಕರಿಗೆ ಹಸ್ತಾಂತರಿಸಿದರು. ನಿರ್ಮಾಪಕ ದಿಲ್ ರಾಜು ಕ್ಯಾಮೆರಾಗೆ ಚಾಲನೆ ನೀಡಿದ್ರೆ, ವಿವಿ ವಿನಾಯಕ್ ಕ್ಲಾಪ್ ಮಾಡಿದರು. ನಟ ಎಸ್.ಜೆ.ಸೂರ್ಯ ಸೇರಿದಂತೆ ಇಡೀ ಚಿತ್ರತಂಡ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.
’ಸೂರ್ಯನ ಶನಿವಾರ’ ಪಕ್ಕ ಮಾಸ್ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಈ ಸಿನಿಮಾದ ಕಥೆ ಹಾಗೂ ಪಾತ್ರಕ್ಕಾಗಿ ನಾನಿ ಸಾಕಷ್ಟು ವರ್ಕೌಟ್ ಮಾಡುತ್ತಿದ್ದಾರೆ. ಪ್ರಿಯಾಂಕಾ ಅರುಳ್ ಮೋಹನ್ ನಾಯಕಿಯಾಗಿದ್ದು, ತಮಿಳು ಸ್ಟಾರ್ ನಟ ಎಸ್ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ಜೇಕ್ಸ್ ಬಿಜಾಯ್ ಸಂಗೀತ, ಮುರಳಿ ಜಿ ಛಾಯಾಗ್ರಹಣವಿದೆ.
’ಸೂರ್ಯನ ಶನಿವಾರ’ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿಬರಲಿದೆ. ತ್ರಿಬಲ್ ಆರ್ ಸೇರಿದಂತೆ ಹಲವರು ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಡಿಡಿವಿ ಎಂಟರ್ ಟೈನರ್ ಬ್ಯಾನರ್ ನಡಿಯಲ್ಲಿ ದಾನಯ್ಯ ಹಾಗೂ ಕಲ್ಯಾಣ್ ದಾಸರಿ ’ಸೂರ್ಯನ ಶನಿವಾರ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.