Categories
ಸಿನಿ ಸುದ್ದಿ

BAD ಬಾಯ್ ಗೆ ಗೋಲ್ಡನ್ ಟಚ್: ಫಸ್ಟ್ ಲುಕ್ ರಿಲೀಸ್ ಮಾಡಿದ ಗಣೇಶ್

ಪಿ.ಸಿ ಶೇಖರ್ ನಿರ್ದೇಶನದ ಹತ್ತನೇ ಚಿತ್ರ ಹಾಗೂ ನಕುಲ್ ಗೌಡ(ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ “BAD” ಚಿತ್ರದ ಫಸ್ಟ್ ಲಕ್ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

ಇದು ನಾಯಕ ಪ್ರಧಾನ ಚಿತ್ರವಲ್ಲ‌‌. ಏಳು ಮುಖ್ಯಪಾತ್ರಗಳಿದೆ. ಮನುಷ್ಯನಲ್ಲಿ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯವೆಂಬ ಅರಿಷಡ್ವರ್ಗಗಳಿರುತ್ತದೆ. ಈ ಆರು ಅರಿಷಡ್ವರ್ಗಗಳನ್ನು ನಮ್ಮ ಚಿತ್ರದ ಆರು ಪಾತ್ರಗಳು ಪ್ರತಿನಿಧಿಸುತ್ತದೆ. ಆ ಪೈಕಿ “ಕ್ರೋಧ”ವನ್ನು ಪ್ರತಿನಿಧಿಸುತ್ತಿರುವ ನಕುಲ್ ಗೌಡ ಅವರ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಸಾಮಾನ್ಯವಾಗಿ ” ಕ್ರೋಧ” ವನ್ನು ಕಿರಿಚುವುದು, ಅರಚುವುದು ಮುಂತಾದ ವಿಚಿತ್ರ ರೀತಿಗಳಿಂದ ತೋರಿಸುತ್ತಾರೆ. ನಾವು ಮುಖದ ಹಾವಭಾವದಲ್ಲಿ “ಕ್ರೋಧ” ವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ಇದೊಂದು ವಿಭಿನ್ನ ಕಥೆಯ ಚಿತ್ರ ಎಂದು ತಿಳಿಸಿರುವ ಮುಖ್ಯ ಪಾತ್ರಧಾರಿ ನಕುಲ್, ನನ್ನದು ಈ ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರ. ಕ್ರೋಧವನ್ನು ಚಿತ್ರದಲ್ಲಿ ಭೀಕರವಾಗಿ ತೋರಿಸಿಲ್ಲ. ನಿರ್ದೇಶಕ ಪಿ‌.ಸಿ.ಶೇಖರ್ ಉತ್ತಮವಾದ ಕಥೆ ಮಾಡಿದ್ದಾರೆ. ಚಿತ್ರಕಥೆ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಬಹುತೇಕ ಭಾಗದ ಚಿತ್ರೀಕರಣ ಸೆಟ್ ನಲ್ಲೇ ನಡೆದಿರುವುದು ವಿಶೇಷ ಎನ್ನುತ್ತಾರೆ.

ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ” BAD” ಚಿತ್ರದಲ್ಲಿ “ರೋಷಮಾನ್ ಎಫೆಕ್ಟ್” ಎಂಬ ವಿಶೇಷ ವಿಧಾನವನ್ನು ಬಳಸಿಕೊಳ್ಳಲಾಗಿದೆ‌.

ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ “BAD” ಚಿತ್ರಕ್ಕಿದೆ.

“ಪ್ರೀತಿಯ ರಾಯಭಾರಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಪುಟ್ಟ ಅಭಿಮಾನಿಯ ಅಸೆ ಈಡೇರಿಸಿದ ಕಿಚ್ಚ: ಹೃದಯವಂತಿಕೆ ಮೆರೆದ ಸುದೀಪ್

ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ ಸುದೀಪಿಯನ್ಸ್ ಗೂ ಇದ್ದೇ ಇರುತ್ತದೆ. ಆ ಆಸೆ ಈಡೇರಿಕೆಗೆ ಸಮಯ ಕೂಡಿ ಬರಬೇಕು ಅಷ್ಟೇ. ಈಗ ಸುದೀಪ್ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ.. ಜೀವನದಲ್ಲಿ ಒಮ್ಮೆಯಾದ್ರೂ ತಮ್ಮ ನೆಚ್ಚಿನ ಸ್ಟಾರ್ ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ. ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಸಲಾಂ ಎಂದಿದ್ದಾರೆ.

Categories
ಸಿನಿ ಸುದ್ದಿ

ಪ್ರಜ್ವಲ್ ಹುಟ್ಟು ಹಬ್ಬಕ್ಕೆ ಮಾಫಿಯಾ ಪೋಸ್ಟರ್ ಬಂತು

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಸಿನಿಮಾ “ಮಾಫಿಯಾ”.
ಜುಲೈ 4 ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಪ್ರಜ್ವಲ್ ಅವರಿಗೆ “ಮಾಫಿಯಾ” ಚಿತ್ರತಂಡ ಶುಭಾಶಯ ಕೋರಿದೆ.

ಚಿತ್ರೀಕರಣ ಮುಕ್ತಾಯವಾಗಿ, ಪೋಸ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿರುವ ಈ ಚಿತ್ರವನ್ನು ಆಗಸ್ಟ್ ನಲ್ಲಿ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಆಕ್ಷನ್ ಪ್ರಿಯರಿಗೆ ಈ ಚಿತ್ರ ಬಹಳ ಮೆಚ್ಚುಗೆಯಾಗಲಿದೆ. “ಮಾಫಿಯಾ” ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ ಹಾಗೂ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ‌. ಇದು ಅವರ ನಟನೆಯ ಮೂವತ್ತೈದನೇ ಚಿತ್ರವೂ ಹೌದು.

ಈ ಚಿತ್ರದಲ್ಲಿ ಮೂರು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Categories
ಸಿನಿ ಸುದ್ದಿ

ಕೋಮಲ್ ಬರ್ತ್ ಡೇಗೆ ರೋಲೆಕ್ಸ್ ಪೋಸ್ಟರ್ ರಿಲೀಸ್: ಸಖತ್ ಲುಕ್ ನಲ್ಲಿ ಸೆನ್ಸೇಷನಲ್ ಸ್ಟಾರ್

ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೋಮಲ್ ಜನುಮದಿನ ಉಡುಗೊರೆಯಾಗಿ ‘ರೋಲೆಕ್ಸ್’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸೂಟು ಬೂಟೂ ತೊಟ್ಟು ಸ್ಟೈಲೀಶ್ ಲುಕ್ ನಲ್ಲಿ ಸೆನ್ಸೇಷನಲ್ ಸ್ಟಾರ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ಟೈಟಲ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿರುವ ‘ರೋಲೆಕ್ಸ್’ಗೆ ಶ್ರೀನಿವಾಸ್ ಮಂಡ್ಯ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಕೋಮಲ್ ಗೆ ಜೋಡಿಯಾಗಿ ಪಂಚತಂತ್ರ ಬ್ಯೂಟಿ ಸೋನಲ್ ಮೊಂಟೆರೋ ನಟಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ. ಈಗಾಗಲೇ ಶೇಖಡ 50ರಷ್ಟು ರೋಲೆಕ್ಸ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ.

ಉಳಿದ ಭಾಗದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆದಷ್ಟು ಬೇಗ ಶೂಟಿಂಗ್ ಮುಗಿಸಿ ಸೆಪ್ಟಂಬರ್ ವೇಳೆಗೆ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಪ್ರಜ್ವಲ್ ಬರ್ತ್ ಡೇಗೆ ಬಂತು ಗಣ ಟೀಸರ್

ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಕ್ಷಣದಲ್ಲಿ ಪ್ರಜ್ವಲ್ ನಾಯಕರಾಗಿ ನಟಿಸಿರುವ “ಗಣ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್ ದೇವರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನನಗೆ ಕನ್ನಡ ಚಿತ್ರ ನಿರ್ಮಾಣ ಮಾಡಬೇಕೆಂಬ ಆಸೆಯಾಯಿತು. ಹಾಗಾಗಿ “ಗಣ” ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪಾರ್ಥು, ಸೋಶಿಯಲ್ ಮೀಡಿಯಾದಲ್ಲಿ ನಾನು ಪ್ರಜ್ವಲ್ ಅವರನ್ನು ಫಾಲೋ ಮಾಡುತ್ತಿದ್ದೆ‌. ಅದರಲ್ಲಿ ಪ್ರಜ್ವಲ್ ಅವರ ಅಭಿಮಾನಿಗಳು ಯಾವ ರೀತಿ ಚಿತ್ರ ನಿರೀಕ್ಷಿಸುತ್ತಿದ್ದರೊ, ಅದೇ ತರಹದ ಚಿತ್ರ ಮಾಡಿದ್ದೇವೆ. ಪ್ರಜ್ವಲ್ ದೇವರಾಜ್ ಅವರು ಈವರೆಗೂ ಮಾಡಿರದ ಪಾತ್ರ ಎನ್ನಬಹುದು. ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ಸ್ ನಡೆಯುತ್ತಿದೆ. ಹರಿಪ್ರಾಸಾದ್ ಜಕ್ಕ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ ಎಂದರು.

ಕನ್ನಡದ ಕಲಾವಿದರು ಹಾಗೂ ತಂತ್ರಜ್ಞರ ಜೊತೆ ಕೆಲಸ ಸಿನಿಮಾ ಮಾಡಬೇಕೆಂದು ಬಂದ ಪಾರ್ಥು ಅವರಿಗೆ ಅಭಿನಂದನೆ ತಿಳಿಸಿ “ಗಣ” ಚಿತ್ರದ ಬಗ್ಗೆ ಮಾತು ಆರಂಭಿಸಿದ ಪ್ರಜ್ವಲ್ ದೇವರಾಜ್, “ಗಣ” ನಾನು ಈವರೆಗೂ ಮಾಡಿರುವ ಚಿತ್ರಗಳಲ್ಲೇ ಬೇಗ ಮುಗಿದಿರುವ ಚಿತ್ರ ಹಾಗೂ ಡಿಫರೆಂಟ್ ಜಾನರ್ ನ ಚಿತ್ರ ಕೂಡ. 1993 ಹಾಗೂ 2023 ಎರಡು ಕಾಲಘಟ್ಟದಲ್ಲಿ ಈ ಕಥೆ ನಡೆಯುತ್ತದೆ‌. ಸಮಯದ ಜೊತೆ ಹೋರಾಡುವ ಚಿತ್ರ ಎನ್ನಬಹುದು. ನನ್ನ ಜೊತೆ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಅದ್ಭುತವಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ಚಿತ್ರದಲ್ಲಿ ನಟಿಸಿರುವ ವೇದಿಕ, ಕೃಷಿ ತಾಪಂಡ, ಶಿವರಾಜ್ ಕೆ.ಆರ್ ಪೇಟೆ, ಮಾಸ್ಟರ್ ರಘುನಂದನ್, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಛಾಯಾಗ್ರಹಕ ಜೈ ಆನಂದ್, ಕಲಾ ನಿರ್ದೇಶಕ ಸತೀಶ್, ಸಂಕಲನಕಾರ ಹರೀಶ್ ಕೊಮ್ಮೆ ಹಾಗೂ ಗೋಪಿ ಅವರು “ಗಣ”ದ ಬಗ್ಗೆ ಮಾತನಾಡಿದರು. ಶ್ರೀನಿವಾಸ್ ಚಿಕ್ಕಬಳ್ಳಾಪುರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

Categories
ಸಿನಿ ಸುದ್ದಿ

ಕೋಮಲ್ ಹುಟ್ದಬ್ಬಕ್ಕೆ ಯಲಾಕುನ್ನಿ ಫಸ್ಟ್ ಲುಕ್: ವಜ್ರಮುನಿ ಗೆಟಪ್ ಗೆ ಫ್ಯಾನ್ಸ್ ಫಿದಾ

ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ ಮಹೇಶ್ ಗೌಡ್ರು ನಿರ್ಮಿಸುತ್ತಿರುವ ಹಾಗೂ ಎನ್ ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ “ಯಲಾ ಕುನ್ನಿ” ಚಿತ್ರದ ಫಸ್ಟ್ ಲುಕ್ ನಾಯಕ ಕೋಮಲ್ ಕುಮಾರ್ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ. ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಕೋಮಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಈ ಫಸ್ಟ್ ಲುಕ್ ನಲ್ಲಿ ಕೋಮಲ್ ಅವರು ಹಿರಿಯ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಫಸ್ಟ್ ಲುಕ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರರಂಗದ ಗಣ್ಯರು ಈ ಫಸ್ಟ್ ಲುಕನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

“ಯಲಾಕುನ್ನಿ” ಚಿತ್ರದಲ್ಲಿ ಕೋಮಲ್ ಅವರು ಬಹುಭಾಗ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.”ಮೇರಾ ನಾಮ್ ವಜ್ರಮುನಿ ” ಎಂಬ ಅಡಿಬರಹ ಹಾಗೂ “ನರಕ ತುಂಬಿ ಮರಳಿ ಬಂದ ರಾಮನ ಗುಣದ ರಾವಣ” ಎಂಬ ಬರಹದೊಂದಿಗೆ “ಯಲಾಕುನ್ನಿ” ಚಿತ್ರ ಬರಲಿದೆ. ನವರಸ ನಾಯಕ ಜಗ್ಗೇಶ್ ರವರ ಮಗ “ಯತಿರಾಜ್” ಮತ್ತು ವಜ್ರಮುನಿ ಅವರ ಮೊಮ್ಮಗ ಆಕರ್ಶ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ವಿಶೇಷ.

Categories
ಸಿನಿ ಸುದ್ದಿ

ಹೊಂಬಾಳೆ ಫಿಲಂಸ್ ನ ಬಹು ನಿರೀಕ್ಷಿತ ‘ಸಲಾರ್’ ಚಿತ್ರದ ಟೀಸರ್ ಜುಲೈ 6ಕ್ಕೆ ರಿಲೀಸ್

ಈ ವರ್ಷದ ಅತೀ ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್’. ಪ್ರಭಾಸ್ ನಾಯಕರಾಗಿ ನಟಿಸಿರುವ ಈ ಚಿತ್ರದ ಟೀಸರ್ ಜುಲೈ 6 ರಂದು ಬಿಡುಗಡೆಯಾಗುತ್ತಿದೆ.
ಚಿತ್ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರ ಹೇಗೆ ಮೂಡಿಬಂದಿರಬಹುದು ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದು, ಆ ಎಲ್ಲಾ ಕುತೂಹಲಗಳಿಗೆ ಜುಲೈ 6 ರ ಗುರುವಾರ ತೆರೆಬೀಳಲಿದೆ.
ಜುಲೈ 06ರಂದು ಬೆಳಿಗ್ಗೆ 5.12ಕ್ಕೆ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

ಕಳೆದ ವರ್ಷ ಭಾರತೀಯ ಚಿತ್ರರಂಗಕ್ಕೆ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡಿದಂತಹ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಸಲಾರ್’ ಚಿತ್ರವನ್ನು ನಿರ್ಮಿಸುತ್ತಿದೆ.

ಕಳೆದ ಎರಡು ವರ್ಷಗಳಿಂದ ಚಿತ್ರತಂಡದವರು ಚಿತ್ರೀಕರಣ ಮಾಡುತ್ತಿದ್ದರೂ, ಚಿತ್ರದ ಬಗ್ಗೆ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಪ್ರಮೋದ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕನ್ನಡದ ಭುವನ್ ಗೌಡ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.

Categories
ಸಿನಿ ಸುದ್ದಿ

ಜುಲೈ 21ಕ್ಕೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ!

ಟೀಸರ್, ಸಾಂಗ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಯರು ಸಾಥ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ ಸೇರಿದ್ದಾರೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ.

ಪ್ರತಿ ಬಾರಿ ಯುನಿಕ್ ಕಾನ್ಸಎಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಚಿತ್ರದ ಶ್ರೀಮಂತಿಕೆ ಹೆಚ್ಚಿಸಿದೆ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ನಿಮ್ಮೆಲ್ಲರ ಆಶೀರ್ವಾದ ಈ ಸಿನಿಮಾ ತಂಡದ ಮೇಲಿರಲಿ: ಪೋಸ್ಟರ್ ರಿಲೀಸ್ ಆಯ್ತು; ಶೀಘ್ರವೇ ಚಿತ್ರ ಬಿಡುಗಡೆ

ವರುಣ್ ಸಿನಿ ಕ್ರಿಯೇಷನ್ಸ್ ಚೊಚ್ಚಲ ಹೆಜ್ಜೆ ನಿಮ್ಮೆಲ್ಲರ ಆರ್ಶೀರ್ವಾದ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ವರುಣ್ ಹೆಗ್ಡೆ ಹಣ ಹಾಕಿದ್ದು, ಇದು ಇವರ ಮೊದಲ ಪ್ರಯತ್ನವಾಗಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು,‌ ನೋಡುಗರ ಗಮನಸೆಳೆಯುತ್ತಿದೆ.

ಕೌಟುಂಬಿಕ ಕಥಾಹಂದರದ ನಿಮ್ಮೆಲ್ಲರ ಆಶೀರ್ವಾದ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್‌ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್‌ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.

ನಿಮ್ಮೆಲ್ಲರ ಆಶೀರ್ವಾದ ಸಿನಿಮಾಗೆ
ಯುವ ನಿರ್ದೇಶಕ ರವಿಕಿರಣ್‌ ಆಕ್ಷನ್ ಕಟ್ ಹೇಳಿದ್ದು, ಸರವಣನ್‌ ಜಿ.ಎನ್‌.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ.
ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. ಅದಕ್ಕೂ ಮುನ್ನ ಚಿತ್ರತಂಡ ಇದೇ ವಾರ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದೆ.

Categories
ಸಿನಿ ಸುದ್ದಿ

ಮನಸು ಜಾರಿದೆ ಆಲ್ಬಂ ಸಾಂಗ್ ಬಿಡುಗಡೆ ವೇಳೆ ಪ್ರಣಯ ರಾಜ ಶ್ರೀನಾಥ್ ಗೆ ಸನ್ಮಾನ

ಭಜರಂಗಿ 2 ಖ್ಯಾತಿಯ ಚೆಲುವರಾಜು ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಟಿ ವಿದ್ಯಾವಿಜಯ್ ಅಭಿನಯಿಸಿರುವ “ಮನಸು ಜಾರಿದೆ” ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದೇ ಸಂದರ್ಭದಲ್ಲಿ ಪ್ರಣಯ ರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವರಾದ ಕೃಷ್ಣಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಲ್ಲಿರುವವರೆಲ್ಲ ಬಹಳ ಚಿಕ್ಕವರು. ಈಗಿನ ಪೀಳಿಗೆಯವರು ನನಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ತುಂಬಾ ಖುಷಿಯಾಗಿದೆ ಎಂದರು ಪ್ರಣಯರಾಜ ಶ್ರೀನಾಥ್.

ವಿದ್ಯಾವಿಜಯ್ ಅವರು ಸಹ “ಮನಸು ಜಾರಿದೆ” ಆಲ್ಬಂ ಸಾಂಗ್ ಕುರಿತು ಹಾಗೂ VIDIS ಎಂಟರ್ಟೈನ್ಮೆಂಟ್ ಮೂಲಕ ಆಯೋಜಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆದ ಈ ಸಮಾರಂಭದಲ್ಲಿ ಮಕ್ಕಳಿಗಾಗಿ ದೇಸಿಶೈಲಿಯ “ದೇಸಿ ನಡಿಗೆ” ಎಂಬ ಫ್ಯಾಶನ್ ಶೋ ಕೂಡ ಆಯೋಜಿಸಲಾಗಿತ್ತು.

error: Content is protected !!