ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಬಾಚಿಕೊಂಡಿದೆ.
ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದು, ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಚಿತ್ರರಂಗಕ್ಕೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ಮೂಲಕ ಪತ್ನಿ ಅಪೇಕ್ಷಾ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.
ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ.
ಇತ್ತೀಚೆಗಷ್ಟೇ ರಿಲೀಸ್ ಆಗಿದ್ದ ಟೀಸರ್ ಭಾರೀ ಸದ್ದು ಮಾಡಿತ್ತು. ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಕೈಚಳಕ ಇರುವ ಈ ಚಿತ್ರ ಶೀರ್ಘದಲ್ಲಿಯೇ ತೆರೆಗೆ ಬರಲಿದೆ.
ಕನ್ನಡದಲ್ಲಿ ಈಗ ಸದ್ಯಕ್ಕೆ ಸುದ್ದಿಯಾಗುತ್ತಿರೋ ಚಿತ್ರ ಮಾನ್ಸೂನ್ ರಾಗ. ಹೌದು ಚಿತ್ರ ಶುರುವಾದಾಗಿಂದಲೂ ಒಂದೊಂದೇ ವಿಷಯದಲ್ಲಿ ಸದ್ದು ಮಾಡುತ್ತಲೇ ಇದೆ. ಈಗ ಸಿನಿಮಾ ರಿಲೀಸ್ ಆಗೋಕೆ ತಯಾರಿ ನಡೆಸುತ್ತಿದೆ. ಆಗಸ್ಟ್ 19ಕ್ಕೆ ರಾಜ್ಯಾದ್ಯಂತ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದೆ.
ಈಗ ಹೊಸ ಸುದ್ದಿ ಅಂದರೆ, ಮಾನ್ಸೂನ್ ರಾಗಕ್ಕಾಗಿಯೇ ಹೀರೋ ಡಾಲಿ ಧನಂಜಯ್ ಅಭಿಮಾನಿಗಳು ಫೀಲ್ಡಿಗಿಳಿದಿದ್ದಾರೆ.
ಡಾಲಿ ಧನಂಜಯ ಫ್ಯಾನ್ಸ್ ಕಟೌಟ್ಸ್ ಮಾಡಲು ಮುಂದಾಗಿರೋದೇ ಈ ಹೊತ್ತಿನ ಸುದ್ದಿ. ಡಾಲಿ ಫ್ಯಾನ್ಸ್ ಫ್ಯಾನ್ ಕಾನ್ಸೆಪ್ಟ್ ನಲ್ಲಿ ಮಾನ್ಸೂನ್ ರಾಗ ಕಟೌಟ್ಸ್ ಆಗುತ್ತಿದೆ. ಡಾಲಿ ರಚಿತಾ ಕಾಂಬಿನೇಷನ್ ಇರುವ ಸ್ಪೆಷಲ್ ಕಟೌಟ್ಸ್ ಈಗ ತಲೆ ಎತ್ತಲು ತಯಾರಾಗುತ್ತಿವೆ ಅನ್ನೋದು ವಿಶೇಷ.
ಈ ಚಿತ್ರದ ವಿಶೇಷ ಅಂದರೆ, ಮಾನ್ಸೂನ್ ರಾಗ ಪ್ರದರ್ಶನವಾಗುವ ರಾಜ್ಯದ ಪ್ರತಿ ಚಿತ್ರಮಂದಿರಗಳ್ಲೂ ಡಾಲಿ ಹಾಗು ಧನಂಜಯ್ ಅವರ ಸ್ಪೆಷಲ್ ಕಟೌಟ್ಸ್ ನಿಲ್ಲಲಿವೆ. ಇದಕ್ಕಾಗಿ ಈಗಾಗಲೇ ಡಾಲಿ ಫ್ಯಾನ್ಸ್ ಸ್ವತಃ ಕಾಳಜಿವಹಿಸಿ ಕಟೌಟ್ಸ್ ಕಾನ್ಸೆಪ್ಟ್ ಕೈಗೆತ್ತಿಕೊಂಡಿದ್ದಾರೆ. ಆಗಸ್ಟ್ 19ಕ್ಕೆ ರಿಲೀಸ್ ಆಗುತಗತಿರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಕಟೌಟ್ಸ್ ತಯಾರಿ ಭರ್ಜರಿಯಾಗಿಯೇ ನಡೆಯುತ್ತಿದೆ.
ಅದೇನೆ ಇರಲಿ, ಅಭಿಮಾನಿಗಳ ಅಭಿಮಾನವೇ ಅಂಥದ್ದು. ತಮ್ಮ ಪ್ರೀತಿಯ ಹಿರೋ ಸಿನಿಮಾ ತೆರೆಗೆ ಅಪ್ಪಳಿಸಲಿದೆ ಅಂತ ಗೊತ್ತಾದರೆ, ಮೊದಲು ಸಂಭ್ರಮಿಸೋದು ಕೂಡ ಅವರೇ. ಬರೀ ಕಟೌಟ್ ನಿಲ್ಲಿಸೋದಷ್ಟೇ ಅಲ್ಲ, ಹಾರ ಹಾಕಿ, ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ ಸಂತಸ ಪಡುತ್ತಾರೆ. ಈ ಮಾನ್ಸೂನ್ ರಾಗ ಚಿತ್ರದ ವಿಷಯದಲ್ಲೂ ಡಾಲಿ ಫ್ಯಾನ್ಸ್ ಅದನ್ನೇ ಮಾಡುತ್ತಿದ್ದಾರೆ.
ಇನ್ನು ಈ ಚಿತ್ರಕ್ಕೆ ರಮೇಶ್ ಅರವಿಂದ್ ಅಭಿನಯದ ಪುಷ್ಪಕ ವಿಮಾನ ಸಿನಿಮಾ ನಿರ್ದೇಶಿಸಿದ್ದ ರವೀಂದ್ರನಾಥ್ ನಿರ್ದೇಶನ ಮಾಡಿದ್ದಾರೆ.
ವಿಖ್ಯಾತ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಿಖ್ಯಾತ್ ನಿರ್ಮಾಣಕ್ಕೆ ಏನೆಲ್ಲ ಬೇಕೋ ಎಲ್ಲವನ್ನೂ ಒದಗಿಸಿದ್ದರಿಂದ ಸಿನಿಮಾ ಅಂದುಕೊಂಡಿದ್ದಕ್ಕಿಂತಲೂ ಸೊಗಸಾಗಿ ಮೂಡಿ ಬಂದಿದೆ. ಪ್ರಚಾರದ ವಿಚಾರದಲ್ಲೂ ಅವರು ಹಿಂದಿಲ್ಲ, ತಮ್ಮ ಸಿನಿಮಾವನ್ನು ಸಾಕಷ್ಟು ಕಡೆ ತಲುಪುವಲ್ಲಿಯೂ ಅವರು ತಮ್ಮದೇ ತಂಡದ ಜೊತೆ ಕೆಲಸ ನಿರ್ವಹಿಸುತ್ತಿದ್ದಾರೆ.
ಇನ್ನು ಈ ಚಿತ್ರದ ಹೈಲೆಟ್ ಇರೋದೇ ಸಂಗೀತದಲ್ಲಿ. ಸಂಗೀತ ನಿರ್ದೇಶಕ ಅನೂಪ್ ಸಿಳೀನ್ ಅವರ ಸಂಗೀತ ಹಾಡು ಈಗಾಗಲೇ ಎಲ್ಲೆಡೆ ಸದ್ದು ಮಾಡಿದೆ.
ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ “ಲಂಕೆ”. ಈಗ ಈ ಸಿನಿಮಾ ಅಮೆಜಾನ್ ನಲ್ಲಿ ರಿಲೀಸ್ ಆಗಿದ್ದು ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದೆ
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ “ಲಂಕೆ” ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ ಕಡೆ ಈಗಲೂ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.
ಅಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಈಗಾಗಲೇ ಚಿತ್ರ 300 ದಿನಗಳನ್ನು ಪೂರೈಸಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾಗಲಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ರಾಮಪ್ರಸಾದ್. ಅಂದಹಾಗೆ, ಖ್ಯಾತ ನಟ ಸಂಚಾರಿ ವಿಜಯ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದರು.
ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ ರಕ್ಕಂ ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಚಿತ್ರವನ್ನು ನಿರ್ದೇಶಿಸಿದ್ದಾರೆ
ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ. ಪುನೀತ್ ರಾಜ್‍ಕುಮಾರ್ ಅವರು ನಡೆಸಿಕೊಡುತ್ತಿದ್ದ “ಕನ್ನಡದ ಕೋಟ್ಯಾಧಿಪತಿ” ಸೇರಿದಂತೆ ಅನೇಕ ರಿಯಾಲಿಟಿ ಶೋಗಳಿಗೆ ಕೆಲಸ ಮಾಡಿದ್ದೇನೆ. ಈಗ ಹಂಸಲೇಖ ಅವರ ಬಳಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಇದು ಮೊದಲ ನಿರ್ದೇಶನದ ಚಿತ್ರ. ಕೋವಿಡ್ ಪೂರ್ವದಲ್ಲಿ ನಿರ್ಮಾಣವಾದ ಚಿತ್ರವಿದು. ಪ್ರಧಾನಮಂತ್ರಿಗಳು ಡಿಮಾನಿಟೇಸೇಶನ್ ಮಾಡಿದ ಸಮಯದಲ್ಲಿ ಹುಟ್ಡಿದ ಕಥೆ ಇದು. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಎಂದರೂ ತಪ್ಪಾಗಲಾರದು. “ರಕ್ಕಂ” ಎಂದರೆ ಹಣದ ಗಂಟು ಎಂಬ ಅರ್ಥವಿದೆ.
ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿದೆ. ರಣಧೀರ್ ಗೌಡ ನಾಯಕನಾಗಿ ನಟಿಸಿದ್ದಾರೆ. ಅಮೃತ ನಾಯರ್ ನಾಯಕಿ. ಹಿರಿಯ ಕಲಾವಿದ ನಂಜಪ್ಪ ಬೆನಕ, ಹಿರಿಯ ನಿರ್ದೇಶಕ ಬಿ.ರಾಮಮೂರ್ತಿ ಅವರು ಸೇರಿದಂತೆ ಸಾಕಷ್ಟು ಜನ ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ಇದೇ 29 ರಂದು ನಮ್ಮ ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದರು ನಿರ್ದೇಶಕ ಸೆಂದಿಲ್.
ನಿರ್ದೇಶಕರು ಹೇಳಿದ ಕಥೆ ನನಗೆ ತುಂಬಾ ಹಿಡಿಸಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕಿ ಸ್ನೇಹಲತ.
ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಹಾಗೂ ರಂಗಾಯಣದಲ್ಲಿ ಅಭಿನಯ ಕಲಿತಿದ್ದೀನಿ. ಸಹಾಯಕ ನಿರ್ದೇಶಕನಾಗೂ ದುಡಿದಿದ್ದೇನೆ. ನಾಯಕನಾಗಿ ಇದು ಮೊದಲ ಚಿತ್ರ. ರಂಗ ಎಂಬುದು ನನ್ನ ಪಾತ್ರದ ಹೆಸರು. ಎರಡು ಶೇಡ್ ಗಳಲ್ಲಿ ಅಭಿನಯಿಸಿದ್ದೇನೆ. ಮೊದಲು ಹಳ್ಳಿಯವನಾಗಿ ನಂತರ ಪಟ್ಟಣವಾಸಿಯಾಗಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ರಣಧೀರ್ ಗೌಡ.
ಚಿತ್ರದಲ್ಲಿ ನಟಿಸಿರುವ ಹಿರಿಯ ಕಲಾವಿದ ನಂಜಪ್ಪ ಬೆನಕ, ನಿರ್ದೇಶಕ ಬಿ.ರಾಮಮೂರ್ತಿ, ನಟರಾದ ವಿನಯ್ ಪಾಂಡವಪುರ, ದಯಾನಂದ್, ಸಹ ನಿರ್ದೇಶಕ ಗೋಪಾಲ್, ಛಾಯಾಗ್ರಾಹಕ ಶ್ಯಾಮ್, ಸಂಗೀತ ನಿರ್ದೇಶಕ ಶ್ರೀವತ್ಸ, ಗಾಯಕ ರವೀಂದ್ರ ಸೊರಗಾವಿ, ನೃತ್ಯ ನಿರ್ದೇಶಕರಾದ, ಚಾಮರಾಜ್, ಅರುಣ್ ಹಾಗೂ ಕಾರ್ಯಕಾರಿ ನಿರ್ಮಾಪಕ ಸಂದೇಶ್ “ರಕ್ಕಂ” ಚಿತ್ರದ ಬಗ್ಗೆ ಮಾತನಾಡಿದರು.
ನಿರ್ಮಾಪಕ ಸಂಜಯ್ ಬಾಬು, ನಿರ್ದೇಶಕ ಮಾ ಚಂದ್ರು ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
ಈ ಬಾರಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯಾಧಾರಿತ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್ ಬಾಗ್ ನಲ್ಲಿ ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿದೆ
ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ಶಿವರಾಜಕುಮಾರ್ ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದಿಂದ ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷರಾದ ಶ್ರೀ ವಾಸುದೇವ್. ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ. ಎಂ ಜಗದೀಶ್ ಹಾಗೂ ಲಾಲ್ ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ರವರು ಉಪಸ್ಥಿತರಿದ್ದರು.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ “ಜೇಮ್ಸ್”. ಈ ಚಿತ್ರವನ್ನು ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು.
ಜೇಮ್ಸ್” ಸಿನಿಮಾವನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ. ಜೇಮ್ಸ್” ನಂತರ ನಿರ್ದೇಶಕ ಚೇತನ್ ಕುಮಾರ್ ಅವರ ಮುಂದಿನ ಸಿನಿಮಾ ಯಾವುದು? ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಆ ಕುತೂಹಲ ಕ್ಕೆ ಈಗ ತೆರೆ ಬಿದ್ದಿದೆ.
ಸದ್ಯದಲ್ಲೇ ಚೇತನ್ ಕುಮಾರ್ ನಿರ್ದೇಶನದ ಚಿತ್ರವೊಂದು ಆರಂಭವಾಗಲಿದೆ. “ರೆಮೋ” ಚಿತ್ರದ ಇಶಾನ್ ಈ ಚಿತ್ರದ ನಾಯಕನಾಗಿ ನಟಿಸಲಿದ್ದಾರೆ.
“ರೆಮೋ” ಚಿತ್ರದ ಬಿಡುಗಡೆ ನಂತರ ಈ ಚಿತ್ರ ಆರಂಭವಾಗಲಿದೆ. ಶೀಘ್ರದಲ್ಲೇ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಚೇತನ್ ಕುಮಾರ್ ತಿಳಿಸಿದ್ದಾರೆ.
ಒಬ್ಬ ನಿರ್ದೇಶಕನಿಗೆ ತನ್ನ ಸಿನಿಮಾ ಹೀಗೇ ಮೂಡಿಬರಬೇಕೆಂಬ ಕನಸಿರುತ್ತದೆ. ಆತ ತನ್ನ ಕಲ್ಪನೆಯ ಪ್ರಕಾರವೇ ಚಿತ್ರವನ್ನು ತೆರೆಯಮೇಲೆ ತರಬೇಕಾದರೆ ಅದಕ್ಕೆ ನಿರ್ಮಾಪಕ ನೀಡುವ ಸಹಕಾರ ಬಹು ಮುಖ್ಯ. ಯಾವುದೇ ಒಂದು ಚಿತ್ರಕ್ಕೆ ಅದರ ನಿರ್ಮಾಪಕ ಹಾಗೂ ನಿರ್ದೇಶಕ ಎರಡು ಕಣ್ಣುಗಳಿದ್ದಂತೆ. ಆರಂಭದಿಂದ ಕೊನೆಯವರೆಗೂ ಇಬ್ಬರಲ್ಲಿ ಪರಸ್ಪರ ಹೊಂದಾಣಿಕೆಯಿದ್ದು, ಅಷ್ಟೇ ಪ್ರೀತಿಯಿಂದ ಚಿತ್ರವನ್ನು ಹೊರತಂದಾಗ ಅದು ಖಂಡಿತ ಉತ್ತಮ ಚಿತ್ರವಾಗಿರುತ್ತದೆ. ಹಾಗೆ ಮೂಡಿಬಂದಿರುವ ಚಿತ್ರವೇ ಓ ಮೈ ಲವ್. ಅಕ್ಷಿತ್ ಶಶಿಕುಮಾರ್, ಕೀರ್ತಿ ಕಲಕೇರಿ ಅಭಿನಯಿಸಿದ ಈ ಚಿತ್ರಕ್ಕೆ ಸ್ಮೈಲ್ ಶ್ರೀನು ಆ್ಯಕ್ಷನ್ ಕಟ್ ಹೇಳಿದ್ದಾರೆ. ರಾಮಾಂಜಿನಿ ಅವರು ತಮ್ಮದೇ ಕಥೆಗೆ ಬಂಡವಾಳ ಹೂಡಿದ್ದಾರೆ.
ಈಗ ರಾಜ್ಯದೆಲ್ಲೆಡೆ ಯಶಸ್ವೀ ಪ್ರದರ್ಶನ ಕಾಣುತ್ತಿರುವ, ಪ್ರೇಕ್ಷಕರಿಂದ ಪ್ರಶಂಸೆ ಪಡೆದಿರುವ ಈ ಚಿತ್ರದ ಪ್ರಾರಂಭದಿಂದಲೂ ನಿರ್ದೇಶಕರ ಮೇಲೆ ನಂಬಿಕೆಯಿಟ್ಟಿದ್ದ ಜಿ. ರಾಮಾಂಜಿನಿ ಅವರು ಬಿಗ್ ಬಜೆಟ್ ನಲ್ಲಿ ಭರ್ಜರಿಯಾಗಿ ಈ ಸಿನಿಮಾ ನಿರ್ಮಿಸಿದ್ದಾರೆ. ಅದರ ಫಲವಾಗಿ ಇಡೀ ಚಿತ್ರವನ್ನು ಪ್ರೇಕ್ಷಕ ಎಂಜಾಯ್ ಮಾಡುತ್ತಿದ್ದಾರೆ.
ಚಿತ್ರದ ಈ ಯಶಸ್ಸಿನ ಕುರಿತಂತೆ ಖುಷಿಯಿಂದ ಮಾತನಾಡಿರುವ ನಿರ್ದೇಶಕ ಸ್ಮೈಲ್ ಶ್ರೀನು, ಚಿತ್ರ ನೋಡಿದ ಪ್ರತಿಯೊಬ್ಬರಿಂದಲೂ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿರುವುದು ನಿರ್ಮಾಪಕರೂ ಸೇರಿದಂತೆ ಇಡೀ ಚಿತ್ರತಂಡಕ್ಕೆ ಖುಷಿ ನೀಡಿದೆ. ಚಿತ್ರದ ಪ್ರತಿ ಫ್ರೇಮ್ ಬಗ್ಗೆ ಜನ ನೀಡುತ್ತಿರುವ ಪ್ರತಿಕ್ರಿಯೆ, ಪ್ರಶಂಸೆ ವ್ಯಕ್ತಪಡಿಸುತ್ತಿರುವುದಕ್ಕೆ ನನ್ನ ಜೊತೆ ಕೆಲಸ ಮಾಡಿದ ಇಡೀ ಟೀಮ್ ಹಾಕಿದ ಎಫರ್ಟ್ ಕಾರಣ.ಮೆಲೋಡಿ ಹಾಡುಗಳನ್ನು ಮಾಡಿಕೊಟ್ಟ ಚರಣ್ ಅರ್ಜುನ್, ಇಡೀ ಚಿತ್ರವನ್ನು ಸುಂದರವಾಗಿ ಕಟ್ಟಿಕೊಟ್ಟಿರುವ ಛಾಯಾಗ್ರಾಹಕ ಎಸ್.ಹಾಲೇಶ್, ಸಂಕಲನಕಾರ ಡಿ.ಮಲ್ಲಿ, ಸಾಹಸ ನಿರ್ದೇಶಕ ರಿಯಲ್ ಸತೀಶ್,ಕೊರಿಯೋಗ್ರಾಫರ್‌ಗಳಾದ ವಿ.ಮುರುಳಿ, ಸಂತೋಷ್, ಸೇರಿದಂತೆ ಸಹಕಾರ ಎಲ್ಲರಿಗೂ ಧನ್ಯವಾದ.
ಎಲ್ಲರೂ ನನ್ನ ಆಲೋಚನೆಗಳಿಗೆ ಜೀವ ತುಂಬಿದವರು, ನಾನು ಏನೇ ಸೌಲಭ್ಯ ಕೇಳಿದರೂ ಯಾಕೆ ಎಂದು ಕೇಳದೆ ಎಲ್ಲವನ್ನೂ ಒದಗಿಸಿಕೊಟ್ಟ ನಿರ್ಮಾಪಕ ರಾಮಾಂಜಿನಿ ಅವರು ಈ ಯಶಸ್ಸು ಪ್ರಶಂಸೆಗೆ ಕಾರಣ ಎಂದಿದ್ದಾರೆ ಶ್ರೀನು. ನಾನೇನು ಅಂದುಕೊಂಡು ಸನ್ನಿವೇಶಗಳನ್ನು ಬರೆದಿದ್ದೆನೋ ಅದೇ ರೀತಿ ಪ್ರೇಕ್ಷಕರು ಪ್ರತಿಕ್ರಯಿಸುತ್ತಿದ್ದಾರೆ, ನಟ ಶಶಿಕುಮಾರ್ ಕೂಡ ಕಾಲ್ ಮಾಡಿ ಸೂಪರ್ ಆಗಿ ಸಿನಿಮಾ ಮಾಡಿದ್ದೀಯ, ಇಷ್ಟು ಚೆನ್ನಾಗಿ ಬಂದಿರುತ್ತೆ ಅಂದ್ಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಥೇಟರ್ ಆಪರೇಟರ್‌ಗಳು ಸಹ ಕಾಲ್ ಮಾಡಿ ಇತ್ತೀಚೆಗೆ ಸ್ಟಾರ್ ಸಿನಿಮಾ ಬಿಟ್ಟರೆ ಬೇರೆ ಚಿತ್ರಗಳಿಗೆ ಜನ ಬರೋದೇ ಕಡಿಮೆಯಾಗಿತ್ತು. ನಿಮ್ಮ ಚಿತ್ರದಿಂದ ಮತ್ತೆ ಥೇಟರ್ ಜನರಿಂದ ತುಂಬುವಂತಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ತೆಲುಗಿನ ಅನೇಕ ನಿರ್ಮಾಪಕರು ಫೋನ್ ಮಾಡಿ ರೀಮೇಕ್, ಡಬ್ಬಿಂಗ್ ಮಾಡಲು ಕೇಳುತ್ತಿದ್ದಾರೆ. ಜೊತೆಗೆ ಒಂದೊಳ್ಳೆ ಕಥೆ ತನ್ನಿ, ಚಿತ್ರ ಮಾಡೋಣ ಎಂದು ಆಫರ್ ನೀಡುತ್ತಿದ್ದಾರೆ. ಇದಕ್ಕೆಲ್ಲ ಓ ಮೈ ಲವ್ ಚಿತ್ರವೇ ಕಾರಣ ಎಂದು ಹೇಳಿದ್ದಾರೆ.
ನಿರ್ಮಾಪಕರಿಗೆ ಯಾವುದೇ ಬರ್ಡನ್ ಹಾಕದೆ ಚಿತ್ರದ ವೈಭವಕ್ಕೆ ಏನು ಬೇಕೋ ಅಷ್ಟನ್ನು ಮಾತ್ರ ಖರ್ಚು ಮಾಡಿಸುವ ಸ್ಮೈಲ್ ಶ್ರೀನು ಅವರು ನಿಜವಾಗಿಯೂ ನಿರ್ಮಾಪಕರ ನಿರ್ದೇಶಕ.
“ಬಡ್ಡೀಸ್” ಹೀರೋ ಕಿರಣ್ ರಾಜ್, ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗಳಿಂದಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ. ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಲೇ ಇದ್ದಾರೆ.
ಜುಲೈ ಆರಂಭವಾದಾಗಿನಿಂದಲೂ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ ಎಷ್ಟೋ ಜನರ ನಿತ್ಯ ಜೀವನ ಸಾಗಬೇಕಿದೆ. ಬೀದಿ ಬದಿ ವ್ಯಾಪಾರಿಗಳು, ಸಿಗ್ನಲ್ ನಲ್ಲಿ ಮಾರಾಟ ಮಾಡುವವರು ಸಾಕಷ್ಟು ಜನರಿದ್ದಾರೆ. ಇಂತಹವರನ್ನು ಗುರುತಿಸಿರುವ ಕಿರಣ್ ರಾಜ್, ಮಳೆಯಿಂದ ರಕ್ಷಣೆ ನೀಡುವ ರೈನ್ ಕೋಟ್ ನೀಡಿದ್ದಾರೆ.
ಈ ಬಾರಿ ಇಂತಹ ಸಾಮಾಜಿಕ ಕಾರ್ಯವನ್ನು ಕಿರಣ್ ರಾಜ್ ತಾವಷ್ಟೇ ಮಾಡಿಲ್ಲ. ಸಾಮಾಜಿಕ ಸೇವೆಯಲ್ಲಿ ಆಸಕ್ತಿಯಿರುವ ಕಾಲೇಜು ವಿದ್ಯಾರ್ಥಿಗಳ ಮೂಲಕ ಕೂಡ ಮಾಡಿಸಿದ್ದಾರೆ.
ಇಂತಹ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಖುಷಿ ತಂದಿದೆ. ಮುಂದೆ ತಾವು ಸಹ ಸಹಾಯ ಮಾಡುವ ಗುಣಗಳನ್ನು ಮೈಗೂಡಿಸಿಕೊಳ್ಳಲು ಇಂತಹ ಕಾರ್ಯಗಳು ಅವರಿಗೆ ಅನುಕೂಲವಾಗಲಿದೆ.
ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಮನಸ್ಸಿರುವ ವಿದ್ಯಾರ್ಥಿಗಳು ಕಿರಣ್ ರಾಜ್ ಫೌಂಡೇಶನ್ ಅನ್ನು ಸಂಪರ್ಕಿಸಬಹುದು ಎನ್ನುತ್ತಾರೆ ನಟ ಕಿರಣ್ ರಾಜ್.
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವವರು ನಿರ್ದೇಶಕ ಶಶಾಂಕ್. ಅವರ ನಿರ್ದೇನದಲ್ಲಿ ಮೂಡಿಬಂದಿದ್ದ “ಮೊಗ್ಗಿನ ಮನಸ್ಸು” ಚಿತ್ರಕ್ಕೆ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಅವರ ನಿರ್ದೇಶನದ “ಲವ್ 360” ಚಿತ್ರದ “ಭೋರ್ಗರೆದು” ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್ ಅವರೆ ಬರೆದಿರುವ ಈ ಹಾಡನ್ನು ಕೀರ್ತನ್ ಹೊಳ್ಳ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ನಾನು “ಲವ್ 360” ಸಿನಿಮಾದ ಈ ಹಾಡನ್ನು ಇಂದು ಬಿಡುಗಡೆ ಮಾಡಲು ಪ್ರಮುಖ ಕಾರಣವಿದೆ. ಅದೇನೆಂದರೆ, ನನ್ನ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರ ತೆರೆಕಂಡು ಇಂದಿಗೆ(ಜಲೈ 18)ಹದಿನಾಲ್ಕು ವರ್ಷಗಳಾಗಿದೆ. ಹಾಗಾಗಿ ಇಂದು ಆ ಚಿತ್ರದ ನೆನಪುಗಳೊಂದಿಗೆ “ಲವ್ 360” ಚಿತ್ರದ ಮೂರನೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. “ಮೊಗ್ಗಿನ ಮನಸ್ಸು” ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದ ಗಂಗಾಧರ್ ಅವರಿಂದ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಶುಭಾ ಪುಂಜಾ ಮುಂತಾದವರು ಅಭಿನಯಿಸಿದ್ದ ಸಿನಿಮಾವದು. ಚಿತ್ರ ಹಾಗೂ ಹಾಡುಗಳು ಈಗಲೂ ಜನಪ್ರಿಯ.
ಮುಂದೊಂದು ದಿನ “ಮೊಗ್ಗಿನ ಮನಸ್ಸು ಭಾಗ 2” ಮಾಡುವ ಆಸೆಯಿದೆ. ಆ ಚಿತ್ರವನ್ನೂ ಹೊಸ ಕಲಾವಿದರೊಂದಿಗೆ ಮಾಡುತ್ತೇನೆ. ಇನ್ನು ಇಂದು ಬಿಡುಗಡೆಯಾಗಿರುವ “ಲವ್ 360” ಚಿತ್ರದ “ಭೋರ್ಗರೆದು” ಹಾಡನ್ನು ನಾನೇ ಬರೆದಿದ್ದೇನೆ. ಕೀರ್ತನ್ ಹೊಳ್ಳ ಹಾಡಿದ್ದಾರೆ. ಇನ್ನೊಂದು ಹಾಡಿದೆ. ಅದನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಜನಪ್ರಿಯವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನಾವು ಅಂದುಕೊಂಡದಕ್ಕಿಂತ ದೊಡ್ಡ ಯಶಸ್ಸು ಕಂಡಿದೆ. ರೀಲ್ಸ್ ನಲ್ಲೂ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವವರು ಹೆಚ್ಚಾಗಿದ್ದಾರೆ ಎಂದು ನಿರ್ದೇಶಕ ಶಶಾಂಕ್ ಮಾಹಿತಿ ನೀಡಿದರು.
ನಮ್ಮ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ. “ಜಗವೇ ನೀನು” ಹಾಡಿನಿಂದ ಈಗಾಗಲೇ ಜನ ನನ್ನನ್ನು ಹೋದ ಕಡೆ ಎಲ್ಲಾ ಗುರುತಿಸುತ್ತಿದ್ದಾರೆ. ಚಿತ್ರದ ಗೆಲುವಿನ ಖುಷಿಯನ್ನು ಈ ಹಾಡು ನನಗೆ ಈಗಾಗಲೇ ನೀಡಿದೆ. ಇಂತಹ ಅದ್ಭುತ ಹಾಡು ಕೊಟ್ಟಿರುವ ನಿರ್ದೇಶಕರಿಗೆ ಹಾಗೂ ಮೆಚ್ಚಿಕೊಂಡಿರುವ ಕಲಾರಸಿಕರಿಗೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಪ್ರವೀಣ್.
ಬಿಡುಗಡೆಯಾಗಿರುವ ಎರಡು ಹಾಡುಗಳು ಗೆದ್ದಿದೆ. ಹಿರಿಯರು, ಕಿರಿಯರು ಎಲ್ಲಾ ವಯಸ್ಸಿನವರಿಗೂ “ಜಗವೇ ನೀನು ಗೆಳತಿಯೆ” ಹಾಡು ಇಷ್ಟವಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂದರು ನಾಯಕಿ ರಚನಾ ಇಂದರ್.
“ಲವ್ 360” ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿರುವುದಕ್ಕೆ ಆನಂದ್ ಆಡಿಯೋ ಶ್ಯಾಮ್ ಸಂತಸಪಟ್ಟರು. ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ ಇದ್ದರು.
ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳುತ್ತಿರೋದು ನಿಮಗೆಲ್ಲ ಗೊತ್ತೇ ಇದೆ.
ವಸಿಷ್ಠ ನಾಯಕ ನಟನಾಗಿ ನಟಿಸುತ್ತಿರುವ ‘ಲವ್ ಲಿ’ ಸೆಟ್ಟೇರಿ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ.
ಈ ಚಿತ್ರಕ್ಕೆ ವಸಿಷ್ಠ ಸಿಂಹ ಜೊತೆ ತೆರೆ ಹಂಚಿಕೊಳ್ಳುವರ್ಯಾರು ಎಂಬ ಕುತೂಹಲ ಎಲ್ಲರಲ್ಲಿತ್ತು. ಆ ಕುತೂಹಲಕ್ಕೀಗ ಬ್ರೇಕ್ ಬಿದ್ದಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಆಯ್ಕೆಯಾಗಿದ್ದಾರೆ. ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ.
ಈಗಾಗಲೇ ಸ್ಟೆಫಿ ಪಟೇಲ್ ‘ಲವ್ ಲಿ’ ಚಿತ್ರತಂಡ ಸೇರಿಕೊಂಡಿದ್ದು ಜುಲೈ 19ರಿಂದ ಚಿತ್ರದ ಸೆಕೆಂಡ್ ಶೆಡ್ಯೂಲ್ ಆರಂಭವಾಗಲಿದೆ. ವಸಿಷ್ಠ ಸಿಂಹ ಹಾಗೂ ಸ್ಟೆಫಿ ಕಾಂಬಿನೇಶನ್ ಒಳಗೊಂಡ ಪೋಸ್ಟರ್ ಜುಲೈ 21ರಂದು ಚಿತ್ರತಂಡ ರಿವೀಲ್ ಮಾಡಲಿದೆ.
‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಕ್ಯಾಮೆರಾ ವರ್ಕ್ ಅಶ್ವಿನ್ ಕೆನಡಿ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.