Categories
ಸಿನಿ ಸುದ್ದಿ

ರಾಕ್ಷಸರ ಆಗಮನವಾಗುತ್ತಿದೆ ಹುಷಾರ್!

ಕನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ನಿರ್ಮಿಸಿರುವ “ರಾಕ್ಷಸರು” ಚಿತ್ರ ಆಗಸ್ಟ್ ನಲ್ಲಿ ದೇಶದಾದ್ಯಂತ ತೆರೆ ಕಾಣುತ್ತಿದೆ.

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ “ರಾಕ್ಷಸರು”. ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಚಿತ್ರ.

ಚಿತ್ರ ಸಿದ್ದವಾಗಿ ಬಹಳ ದಿನಗಳಾಗಿದೆ. ಆದರೆ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿ, ಕ್ರೈಂ ಹೆಚ್ಚಾಗಿರುವುದರಿಂದ ಬಿಡುಗಡೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು.
ಆ ನಂತರ ನಿರ್ಮಾಪಕರ ಮನವಿ ಮೇರೆಗೆ ಕೆಲವು ಕಟ್ ಗಳ ಜೊತೆಗೆ A ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ.

A ಸರ್ಟಿಫಿಕೇಟ್ ನೊಂದಿಗೆ
ಆಗಸ್ಟ್‌ ಎರಡನೇ ವಾರ ಚಿತ್ರ ಭಾರತದಾದ್ಯಂತ ತೆರೆ ಕಾಣುತ್ತಿದೆ ಎಂದು ತಿಳಿಸಿರುವ ನಿರ್ಮಾಪಕರು, ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿದ್ದಾರೆ.

ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ತ್ರಿವೇಣಿ, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಸಾರಿ ಕೇಳಿದ ರಾಗಿಣಿ: ಸಿನಿಮಾದ ಲಿರಿಕಲ್ ಸಾಂಗ್ ಗೆ ಮೆಚ್ಚುಗೆ…

ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸುತ್ತಿರುವ “ಸಾರಿ” ಕರ್ಮ ರಿಟರ್ನ್ಸ್ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ ಆಗಿದ್ದು ಸಖತ್ ಟ್ರೆಂಡಿಂಗ್ ಆಗಿದೆ…

ಕರ್ನಾಟಕ‌ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ ಇವರಿಬ್ಬರೂ ಒಂದೇ ವೇದಿಕೆಯಲ್ಲಿ ಹಾಡು ರಿಲೀಸ್ ಮಾಡಿ ಶುಭ ಕೋರಿದರು.

ನಾನು ಮೂಲತಃ ವಿ.ಎಫ್.ಎಕ್ಸ್ ತಂತ್ರಜ್ಞ. ಈ ಹಿಂದೆ “ಸಿದ್ದಿಸೀರೆ” ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ.
ಇದು ಸೂಪರ್ ಹೀರೊ ಕಾನ್ಸೆಪ್ಟ್ ನ ಚಿತ್ರ. ರಾಗಿಣಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದು ಕನ್ನಡದ ಮೊದಲ ಸೂಪರ್ ಹೀರೊ ಕಾನ್ಸೆಪ್ಟ್ ನ ಚಿತ್ರ ಎನ್ನಬಹುದು. ಈ ಹಿಂದೆ ಕೆಲವು ಚಿತ್ರ ಬಂದಿದೆ ಎನ್ನುತ್ತಾರೆ. ಆದರೆ ಮೋಷನ್ ಕ್ಯಾಪ್ಚರ್ ಎಂಬ ವಿಶೇಷ ತಂತ್ರಜ್ಞಾನ ಬಳಿಸಿ ನಿರ್ಮಾಣ ಮಾಡುತ್ತಿರುವ ಮೊದಲ ಸೂಪರ್ ಹೀರೊ ಕಾನ್ಸೆಪ್ಟ್ ನ ಕನ್ನಡ ಚಿತ್ರವಿದು. ಆ ಕುರಿತು ಈಗಾಗಲೇ ಮೇಕಿಂಗ್ ವಿಡಿಯೋ ಸಹ ಬಿಡುಗಡೆ ಮಾಡಿದ್ದೇವೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ನಿರ್ದೇಶಕ ಬ್ರಹ್ಮ ಮಾಹಿತಿ ನೀಡಿದರು.

ನಾನು ಚಿತ್ರರಂಗಕ್ಕೆ ಬಂದು ಹನ್ನೊಂದು ವರ್ಷಗಳಾಯಿತು. ಈತನಕ ಹೊಸತು ಎನಿಸಿದ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾ ಬಂದಿದ್ದೀನಿ. ಕಲಾವಿದರು ಸ್ವಲ್ಪ ರಿಸ್ಕ್ ಆದರೂ ಪರವಾಗಿಲ್ಲ, ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಬೇಕು ಎಂಬುದು ನನ್ನ ಅನಿಸಿಕೆ. ನಾನು ಆ ರೀತಿ ಮಾಡಿಕೊಂಡು ಬರುತ್ತಿದ್ದೇನೆ. ನನಗೆ ಮೊದಲಿನಿಂದಲೂ ಸೂಪರ್ ಹೀರೊ ಅಂದರೆ ಇಷ್ಟ. ಈಗ ಅದೇ ಪಾತ್ರ ನನಗೆ ಸಿಕ್ಕಿರುವುದು ಖುಷಿಯಾಗಿದೆ. ನಿರ್ದೇಶಕ ಬ್ರಹ್ಮ ಸೇರಿದಂತೆ ಎಲ್ಲಾ ತಂತ್ರಜ್ಞರ ಕಾರ್ಯ ಹಾಗೂ ಅರ್ಜುನ್ ಶರ್ಮ ಸೇರಿದಂತೆ ಎಲ್ಲಾ ಸಹನಟರ ಅಭಿನಯ ಚೆನ್ನಾಗಿದೆ ಎಂದರು ರಾಗಿಣಿ ದ್ವಿವೇದಿ.

ನಾನು ಈ ತನಕ ಐದಾರು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಇದೇ ಮೊದಲು. ರಾಗಿಣಿ ಅವರ ಜೊತೆ ಅಭಿನಯಿಸಿದ್ದು ಸಂತಸವಾಗಿದೆ ಎಂದರು ನಟ ಅರ್ಜುನ್ ಶರ್ಮ.

ಚಿತ್ರದಲ್ಲಿ ನಟಿಸಿರುವ ಅಫ್ಜಲ್, ಸಂಗೀತ ನೀಡಿರುವ ರಾಜು ಎಮ್ಮಿಗನೂರು, ಛಾಯಾಗ್ರಾಹಕ ರಾಜೀವ್ “ಸಾರಿ” ಬಗ್ಗೆ ಮಾತನಾಡಿದರು.

ನವೀನ್ ಕುಮಾರ್ ಈ ಚಿತ್ರದ ನಿರ್ಮಾಪಕರು . ಜೈ ಕೃಪ್ಲಾನಿ ಹಾಗೂ ಜೇನ್ ಜಾರ್ಜ್ ಸಹ ನಿರ್ಮಾಪಕರು. ಅಫ್ಜಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Categories
ಸಿನಿ ಸುದ್ದಿ

ಓ ಮೈ ಲವ್ ಎಂಬ ನಿರೀಕ್ಷೆಯ ಸಿನಿಮಾ: ರಿಲೀಸ್ ಮೊದಲೇ ಸದ್ದಾದ ಶ್ರೀನು ಚಿತ್ರ…

ನಿರ್ದೇಶಕ ಸ್ಮೈಲ್ ಶ್ರೀನು ಅವರ ನಿರ್ದೇಶನದ ಓ ಮೈ ಲವ್ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಟ ಶಶಿಕುಮಾರ್ ಪುತ್ರ ಅಕ್ಷಿತ್ ಈ ಚಿತಗರದ ಹೀರೋ. ರಿಲೀಸ್ ಮೊದಲೇ ಸಾಕಷ್ಟು ಸದ್ದು ಮಾಡುತ್ತಿರುವ ಸಿನಿಮಾದಲ್ಲಿ ಹಕವಾರು ವಿಶೇಷತೆಗಳಿವೆ….

ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸಿರುವ, ಸ್ಮೈಲ್ ಶ್ರೀನು ಚಿತ್ರಕಥೆ ಸಂಭಾಷಣೆ ಹಾಗೂ ನಿರ್ದೇಶನವಿರುವ ಓ ಮೈ ಲವ್’ ಚಿತ್ರ ಈ ವಾರ ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‌ತೆರೆ ಕಾಣುತ್ತಿದೆ.

ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾದ ಮೇಕಿಂಗ್ ಅದ್ಭುತವಾಗಿದೆ. ಸದ್ಯ ಸ್ಯಾಂಡಲ್’ವುಡ್’ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸಿನಿಮಾಗಳ ಪೈಕಿ ‘ಓ ಮೈ ಲವ್’ ಮುಂಚೂಣಿಯಲ್ಲಿದೆ.

ಈ ಚಿತ್ರದ ಎಲ್ಲಾ ಹಾಡುಗಳಿಗೆ ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಹಾಡುಗಳಿಗಿದೆ.

ಹಿರಿಯ ನಿರ್ದೇಶಕ ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.

Categories
ಸಿನಿ ಸುದ್ದಿ

ಗಾಳಿಪಟದಲ್ಲೊಂದು ಎಣ್ಣೆ ಹಾಡು! ಜುಲೈ 14ಕ್ಕೆ ರಿಲೀಸ್…

ನಿರ್ದೇಶಕ ಯೋಗರಾಜ್ ಭಟ್, ಗೀತರಚನೆಕಾರರಾಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ “ಗಾಳಿಪಟ 2” ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14 ರಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ಎರಡು ಹಾಡುಗಳು ಈಗಾಗಲೇ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಮುಂದೆ ಬಿಡುಗಡೆಯಾಗಲಿರುವ ಹಾಡಿನ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಸಿದೆ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು “ಗಾಳಿಪಟ 2” ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಸುದೀಪ್ ವಿರುದ್ಧ ಪದಬಳಕೆ: ಅಹೋರಾತ್ರ, ಚರಣ್ ಮೇಲೆ ಕ್ರಮಕ್ಕೆ ಫಿಲ್ಮ್ ಚೇಂಬರ್ ಒತ್ತಾಯ

ಸಾಮಾಜಿಕ ತಾಣಗಳಲ್ಲಿ ಖ್ಯಾತ ನಟ ಸುದೀಪ್ ಅವರನ್ನು ಮನಬಂದಂತೆ ನಿಂದಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಅಹೋರಾತ್ರ ಹಾಗು ಚರಣ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಪತ್ರದಲ್ಲಿ ಭಾ.ಮ.ಹರೀಶ್ ಅವರು, ಭಾರತೀಯ ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ಎಂದೇ ಪ್ರಖ್ಯಾತ ರಾಗಿರುವ ಸುದೀಪ್ ಅವರ ವಿರುದ್ಧ ಅಹೋರಾತ್ರ ಮತ್ತು ಚರಣ್ ಎಂಬುವವರು, ವಿನಾಕಾರಣ

ಸಾಮಾಜಿಕ ತಾಣಗಳಲ್ಲಿ ಅವಾಚ್ಯವಾಗಿ, ಅವಹೇಳನಕಾರಿಯಾಗಿ ಪದಬಳಕೆ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹಾಗು ಸುದೀಪ್ ಅವರ ಘನತೆ, ಗೌರವಕ್ಕೆ ಚ್ಯುತಿ ತರುವಂತಹ ಹೇಳಿಕೆ ನೀಡಿರುವುದು ಬೇಸರದ ಸಂಗತಿಯಾಗಿದೆ.

ಇಂತಹ ಹೇಳಿಕೆಗಳಿಂದ ಕನ್ನಡ ಚಿತ್ರರಂಗ ಹಾಗು ಕಲಾವಿದರ ಬಗ್ಗೆ ಸಾರ್ವಜನಿಕರಲ್ಲಿ ಇಲ್ಲ ಸಲ್ಲದ ಗೊಂದಲಕ್ಕೆಎಡೆಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ತಾವು ದಯಮಾಡಿ ಅಹೋರಾತ್ರ ಮತ್ತು ಚರಣ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕು.

ಹಾಗು ಚಿತ್ರರಂಗ, ಕಲಾವಿದರ ಬೆಳವಣಿಗೆಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಸಹಕರಿಸಬೇಕೇಂದು ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

Categories
ಸಿನಿ ಸುದ್ದಿ

ಡೇವಿಡ್ ಟ್ರೇಲರ್ -ಹಾಡಿಗೆ ಭರಪೂರ ಮೆಚ್ಚುಗೆ…

ಶ್ರೇಯಸ್ ಚಿಂಗಾ ನಾಯಕನಾಗಿ ನಟಿಸಿ, ನಿರ್ದೇಶನವನ್ನು ‌ಮಾಡಿರುವ “ಡೇವಿಡ್” ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ವಾಣಿಜ್ಯೋದ್ಯಮಿ ಹಾಗೂ ಲೇಖಕರು ಆಗಿರುವ ಧನರಾಜ್ ಬಾಬು ಅವರು ಹಾಡು ಹಾಗೂ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ALL OK ಸಂಗೀತ ನೀಡಿರುವ ಈ ಹಾಡನ್ನು ಸಂಚಿತ್ ಹೆಗಡೆ ಹಾಡಿದ್ದಾರೆ. ರೋಹನ್ ಬರೆದಿದ್ದಾರೆ.

“ಡೇವಿಡ್” ಒಂದು ವಿಭಿನ್ನ ಪ್ರಯತ್ನ. ನಾನು ಹಾಗೂ ಭಾರ್ಗವ್ ಯೋಗಾಂಬರ್ ಜಂಟಿಯಾಗಿ ನಿರ್ದೇಶಿಸಿದ್ದೇವೆ. ನಾನು ನಾಯಕನಾಗೂ ನಟಿಸಿದ್ದೇನೆ. ಸಾರಾ ಹರೀಶ್ ಈ ಚಿತ್ರದ ನಾಯಕಿ. ಅವಿನಾಶ್, ಪ್ರತಾಪ್ ನಾರಾಯಣ್, ರಾಕೇಶ್ ಅಡಿಗ, ಕಾವ್ಯ ಶಾ, ಬುಲೆಟ್ ಪ್ರಕಾಶ್, ಎಸ್ ಐ.ಡಿ ಮುಂತಾದವರು ಈ ಚಿತ್ರದ ತಾರಬಳಗದಲ್ಲಿದ್ದಾರೆ.

ಈ ಚಿತ್ರ 4 ಕಥೆಗಳ ಸುತ್ತ ಸುತ್ತುತ್ತದೆ ನಾಯಕನು ತನ್ನ ಸಾಮರ್ಥ್ಯಕ್ಕೆ ಮೀರಿದ ಶಕ್ತಿಗಳ ವಿರುದ್ಧ ಬಲವಂತವಾಗಿ ತೊಡಗಿಸಿಕೊಳ್ಳುತ್ತಾನೆ. ಇದೇ ಚಿತ್ರದ ಕಥಾಹಂದರ. ಬೆಂಗಳೂರಿನಲ್ಲೇ ಚಿತ್ರೀಕರಣ ಮಾಡಿದ್ದೇವೆ. ಆಗಸ್ಟ್ ನಲ್ಲಿ ನಮ್ಮ ಚಿತ್ರವನ್ನು ತೆರೆಗೆ ತರುತ್ತೇವೆ. ನಮ್ಮ ಚಿತ್ರದ ಮತ್ತೊಂದು ವಿಶೇಷವೆಂದರೆ ಅಂತರರಾಷ್ಟ್ರೀಯ ವಿತರಕರನ್ನು ಹೊಂದಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿದೆ‌. ಕೇನ್ಸ್ ನಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರ ಇದಾಗಿದೆ . ಸಾಕಷ್ಟು ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ‌. ಧನರಾಜ್ ಬಾಬು ಅವರು ಈ ಚಿತ್ರವನ್ನು ಅರ್ಪಿಸುವ ಮೂಲಕ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ‌ ಎಂದು ನಾಯಕ ಹಾಗೂ ನಿರ್ದೇಶಕ ಶ್ರೇಯಸ್ ಚಿಂಗಾ “ಡೇವಿಡ್” ಚಿತ್ರದ ಬಗ್ಗೆ ವಿವರಣೆ ನೀಡಿದರು.

ಅರ್ಜುನ್ ನಿಟ್ಟೂರ್ ಅವರು ಮುಖ್ಯ ನ್ಯಾಯಾಧೀಶರೂ ರಾಜ್ಯ ಪಾಲರೂ ಆಗಿದ್ದ ಜಸ್ಟಿಸ್ ನಿಟ್ಟೂರು ಶ್ರೀನಿವಾಸ ರಾವ್ ಅವರ ಮೊಮ್ಮಗ. ನಮ್ಮ ದೇಶದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಪ್ರಚಾರ ಮಾಡುವ ಕೆಲವೇ ಸಂಸ್ಥೆಗಳಲ್ಲಿ ಅರ್ಜುನ್ ನಿಟ್ಟೂರ್ ಅವರ ಬಸ್ಲ್ಪೋಡ್ ಕಂಪೆನಿಯು ಒಂದು. ಅರ್ಜುನ್ ನಿಟ್ಟೂರ್ ಅವರು ಫಿಲ್ಮ್ ಟೆಕ್ನಾಲಜಿ ಆಂತ್ರಪ್ರನರ್ ಆಗಿ ಇದುವರೆಗೂ ಬೇರೆ ಬೇರೆ ಭಾಷೆಗಳ ಹಲವಾರು ಚಿತ್ರಗಳನ್ನು ನೂತನ ಟೆಕ್ನಾಲಜಿ ಉಪಯೋಗಿಸಿಕೊಂಡು ಪ್ರಚಾರ ಮಾಡಿದ್ದಾರೆ .ಡೇವಿಡ್ ಸಿನಿಮಾ ಟ್ರೇಲರ್ ಅರ್ಜುನ್ ನಿಟ್ಟೂರ್ ಅವರ ನೇತೃತ್ವದಲ್ಲಿ ತಯಾರು ಮಾಡಲಾಗಿದೆ.ಅರ್ಜುನ್ ತಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ದೇಶ, ವಿದೇಶಗಳಿಗೆ ಪ್ರಮೋಟ್ ಮಾಡಲಿದ್ದಾರೆ.

“ಡೇವಿಡ್” ಚಿತ್ರದ ಟ್ರೇಲರ್ ಗೆ ಇಸ್ರೇಲ್ ನ ಖ್ಯಾತ ಸಂಗೀತ ನಿರ್ದೇಶಕ ಸಂಗೀತ ನೀಡಿರುವುದು ಹಾಗೂ ಚೆನ್ನೈ ನಲ್ಲಿ ಸೌಂಡಿಂಗ್ ಮಾಡಿಸಲಾಗಿದೆ ಎಂದು ಅರ್ಜುನ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಧನರಾಜ್ ಬಾಬು ಅವರ ನಿರ್ಮಾಣದಲ್ಲಿ ಶ್ರೇಯಸ್ಸ್ ಚಿಂಗಾ ನಾಯಕರಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 2” ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು.

Categories
ಸಿನಿ ಸುದ್ದಿ

ಸ್ಮೈಲ್ ಕೊಡುತ್ತಲೇ ಓ ಮೈ ಲವ್ ಅಂದ್ರು ಶ್ರೀನು! ಅಕ್ಷಿತ್ ಸಿನಿಮಾ ರಿಲೀಸ್ ಗೆ ರೆಡಿ- ಜುಲೈ 15ಕ್ಕೆ ರಾಜ್ಯಾದ್ಯಂತ ಬಿಡುಗಡೆ…


ಶಶಿಕುಮಾರ್ ಪುತ್ರ ಅಕ್ಷಿತ್ ಅಭಿನಯದ ಓ ಮೈ ಲವ್ ತೆರೆಗೆ ಬರಲು ರೆಡಿಯಾಗಿದೆ. ನಿರ್ದೇಶಕ ಸ್ಮೈಲ್ ಶ್ರೀನು ಅವರಿಗೆ ಸಿನಿಮಾ ಮೇಲೆ ಸಾಕಷ್ಟು ಭರವಸೆ ಇದೆ. ಅದಕ್ಕೆ ಕಾರಣ, ಸಿನಿಮಾ ಎಲ್ಲೆಡೆಯಿಂದ ಜೋರು ಸದ್ದು ಮಾಡಿರೋದು. ತಮ್ಮ ಸಿನಿಮಾ ಕುರಿತು ನಿರ್ದೇಶಕರು ಹೇಳೋದಿಷ್ಟು…

ಒಳ್ಳೆ ಪ್ರಚಾರದಿಂದ ಚಿತ್ರಕ್ಕೆ ಅದ್ಬುತ ಪ್ರತಿಕ್ರಿಯೆ ಸಿಕ್ಕಿದೆ. ಕುಟುಂಬ ಸಮೇತ ನೋಡಬಹುದಾದ ಕಮರ್ಷಿಯಲ್ ಸಿನಿಮಾವಾಗಿದ್ದು, ಹಾಡುಗಳ ಪೈಕಿ ಎರಡು ಗೀತೆಗಳನ್ನು ಹೊರಬಿಡಲಾಗಿದೆ. ಹಾಡಿಗೆ ಮೆಚ್ಚುಗೆ ಸಿಕ್ಕಿದೆ. ಸಾಹಸ ದೃಶ್ಯಗಳು ಚೆನ್ನಾಗಿ ಮೂಡಿ ಬಂದಿವೆ ಅಂತ ಎಲ್ಲರೂ ಹೇಳುತ್ತಿದ್ದಾರೆ. ಇದೇ 15ರಂದು ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ ಎಂದರು ಅವರು.


ವೈಯಕ್ತಿಕವಾಗಿ ನನಗೆ ಇಷ್ಟವಾದ ಸಿನಿಮಾ ಇದಾಗಿದೆ. ಎಲ್ಲೇ ಹೋದರೂ ಜನ ಸೇರುತ್ತಿದ್ದರು. ಶಶಿಕುಮಾರ್ ಮಗನೆಂದು ಗುರುತು ಹಿಡಿಯುತ್ತಿದ್ದಾರೆ. ಎಸ್.ನಾರಾಯಣ್ ಸರ್ ಅವರಿಂದ ಚಿತ್ರೀಕರಣ ಸಂದರ್ಭದಲ್ಲಿ ಬಹಳಷ್ಟು ಕಲಿತುಕೊಂಡೆ. ಗೆಳಯನ ಪಾತ್ರ ಮಾಡಿರುವ ಪೃಥ್ವಿ ಸೋದರನಂತೆ ಇದ್ದಾರೆ. ಒಟ್ಟಿನಲ್ಲಿ ಓ ಮೈ ಲವ್ ನನಗೆ ವೇದಿಕೆಯಾಗಿದೆ. ಇದೇ ನನಗೆ ಮೊದಲ ಸಿನಿಮಾ ಎಂದು ನಾಯಕ ಅಕ್ಷಿತ್‌ಶಶಿಕುಮಾರ್ ಹೇಳಿದರು.


ಎರಡನೇ ಸಿನಿಮಾದಲ್ಲಿ ಒಳ್ಳೆ ಪಾತ್ರ ಸಿಕ್ಕಿರುವುದಕ್ಕೆ ಖುಷಿಯಾಗಿದೆ. ಪ್ರಚಾರದ ಸಲವಾಗಿ ಕಾಲೇಜುಗಳಿಗೆ ಭೇಟಿ ನೀಡಿದಾಗ ಒಳ್ಳೆ ಸ್ಪಂದನೆ ಸಿಗುತ್ತಿತ್ತು. ಚಿತ್ರದಲ್ಲಿ ಕಾಮಿಡಿ, ಲವ್, ಫೈಟ್, ಫ್ರೆಂಡ್‌ಶಿಪ್ ಎಲ್ಲವು ಇದೆ. ನಿರ್ದೇಶಕರು ಚೆನ್ನಾಗಿ ಹೇಳಿ ಕೊಟ್ಟಿದ್ದಾರೆ. ಮತ್ತೆ ಸಕ್ಸಸ್ ಮೀಟ್‌ದಲ್ಲಿ ಭೇಟಿಯಾಗೋಣ ಅಂತ ನಾಯಕಿ ಕೀರ್ತಿಕಲ್ಕರೆ ಸಂತಸ ಹಂಚಿಕೊಂಡರು.


ಪ್ರಚಾರವನ್ನು ತುಂಬಾ ಚೆನ್ನಾಗಿ ಮಾಡುತ್ತಿದ್ದಾರೆ. ಒಳ್ಳೆ ಅಡುಗೆ ಮಾಡಿದರೆ ಸಾಲದು. ಅದಕ್ಕೆ ತಕ್ಕಂತೆ ಉತ್ತಮ ಸಲಕರಣೆಗಳು ಸಿಕ್ಕಿದೆ. ನಿರ್ದೇಶಕರು ಅಡುಗೆ ಭಟ್ಟರಾದರೆ, ನಿರ್ಮಾಪಕರು ಬೇಕಾದ ಸಲಕರಣೆಗಳನ್ನು ನೀಡಿರುವುದಕ್ಕೆ ಚಿತ್ರವು ಅದ್ಬುತವಾಗಿದೆ. ಇಂತಹ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬೇಕಾಗಿದೆ. ಸಿನಿಮಾ ನಿರ್ಮಾಣ ಎಂಬುದು ಕಷ್ಟ. ಅದೇ ರೀತಿ ಬಿಡುಗಡೆ ಮಾಡುವುದು ಸವಾಲಾಗಿದೆ. ಪ್ರಸಕ್ತ ಬಿಡುಗಡೆ ಶೈಲಿ ನೋಡಿದರೆ ಕಷ್ಟವಾಗುತ್ತದೆ. ವಾರಕ್ಕೆ 8 ಚಿತ್ರಗಳು ಬರುತ್ತಿವೆ. ಸಿನಿಮಾ ನಿರ್ಮಾಣ ಕಡಿಮೆ ಆಗಬೇಕು. ಚಿತ್ರಗಳು ಹೆಚ್ಚು ಬರುತ್ತಿದೆ. ಆದರೆ ಗುಣಮಟ್ಟ ಕಡಿಮೆ ಆಗುತ್ತಿದೆ. ನನ್ನ ಪಾತ್ರದಲ್ಲಿ ಗಂಭೀರತೆ ಇದೆ. ಶಶಿಕುಮಾರ್ ಮಗನೆಂದು ಅಹಂ ತೋರಿಸದೆ ಶ್ರದ್ದೆ ಭಕ್ತಿ ಇದೆ. ಅದನ್ನು ಉಳಿಸಿಕೊಂಡು ಹೋದರೆ, ಮುಂದೆ ಉತ್ತಮ ಕಲಾವಿದ ಆಗುತ್ತಿಯಾ. ಏನು ಗೊತ್ತಿಲ್ಲದೆ ಇರೋರು ಚೆನ್ನಾಗಿ ಬೆಳೆಯುತ್ತಾರೆ. ಎಲ್ಲಾ ಗೊತ್ತಿದೆ ಎನ್ನುವವರು ಒಂದು ಹೆಜ್ಜೆನೂ ಮುಂದಕ್ಕೆ ಹೋಗಲಿಕ್ಕೆ ಸಾಧ್ಯವಿಲ್ಲ. ಸೆಟ್‌ನಲ್ಲಿ ನಿರ್ದೇಶಕರು ಗೊಂದಲ ಪಡದೆ ಚೆನ್ನಾಗಿ ಶಾಟ್‌ಗಳನ್ನು ತೆಗೆಸುತ್ತಿದ್ದರು. ಇವರಿಗೂ ಉಜ್ವಲ ಭವಿಷ್ಯವಿದೆ. ಮಕ್ಕಳು ದಾರಿ ತಪ್ಪದೆ ಇರಲಿ ಎಂದು ಹೇಳುವ ಸಿನಿಮಾ ಇದಾಗಿದೆ ಎಂದು ದೀರ್ಘಕಾಲದ ಮಾತಿಗೆ ಎಸ್.ನಾರಾಯಣ್ ವಿರಾಮ ಹಾಕಿದರು.


ಚಿಕ್ಕಂದಿನಿಂದಲೂ ನಿರ್ಮಾಣ ಮಾಡುವ ಆಸೆ ಇತ್ತು. ಅದು ಈಗ ಈಡೇರಿದೆ. ಎಲ್ಲಾ ವ್ಯವಹಾರದಲ್ಲೂ ಸಕ್ಸಸ್ ಕಂಡಿದ್ದೇನೆ. ಕೊನೆಯದಾಗಿ ಸಿನಿಮಾರಂಗಕ್ಕೆ ಬಂದಿದ್ದೇನೆ. ಅಕ್ಷಿತ್‌ಗೆ ಅಪ್ಪನಂತೆ ಹೆಸರು ಬರುತ್ತದೆ. ಒಂದು ಪಾತ್ರಕ್ಕೆ ದೇವ್‌ಗಿಲ್ ಬೇಕು ಎಂದು ಹೇಳಿದ್ದಕ್ಕೆ ಅವರನ್ನೆ ಆಯ್ಕೆ ಮಾಡಲಾಯಿತು ಎನ್ನುತ್ತಾರೆ ಕಥೆ ಬರೆದು ಬಂಡವಾಳ ಹೂಡಿರುವ ಜಿ.ರಾಮಾಂಜಿನಿ.
ನಾಯಕಿಯ ತಾಯಿ ಸಂಗೀತಾ, ಖಳನಟನ ತಂಗಿಯಾಗಿರುವ ಯಶಾ, ಗೆಳಯನಾಗಿ ಕಾಣಿಸಿಕೊಂಡಿರುವ ಪೃಥ್ವಿ ಅನುಭವಗಳನ್ನು ಹೇಳಿಕೊಂಡರು.

Categories
ಸಿನಿ ಸುದ್ದಿ

ಶಿವಣ್ಣನ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ: ಶಿವಣ್ಣ-ಸಚಿನ್ ಚಿತ್ರದ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್…

ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅಚರ ಕೈಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್ ಮಾಡಿ ಶಿವಣ್ಣ‌ನ‌ ಜನುಮದಿನಕ್ಕೆ ಶುಭಾಶಯ ಕೋರಿದೆ.

ಆಗಸ್ಟ್ ನಲ್ಲಿ ಟೈಟಲ್ ರಿವೀಲ್
ಮಹಾಭಾರತದ ವೀರರಲ್ಲಿ ಒಬ್ಬರಾದ ಅಶ್ವತ್ಥಾಮ ಸಾಹಸಗಾಥೆಯನ್ನು ಆಧಾರಿಸಿ ತಯಾರಾಗಲಿರುವ ಈ ಸಿನಿಮಾದ ಟೈಟಲ್ ನ್ನು ಆಗಸ್ಟ್ ತಿಂಗಳ ಮೊದಲ ವಾರ ರಿವೀಲ್ ಆಗಲಿದೆ. ಟೈಟಲ್ ಬಳಿಕ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಕೊಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ. ಇದೊಂದು ಪಕ್ಕಾ ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ.

Categories
ಸಿನಿ ಸುದ್ದಿ

ಪೋಲೀಸರಿಗೊಂದು ದೊಡ್ಡ ಸೆಲ್ಯೂಟ್: ಆರಕ್ಷಕರ ನೋವು ನಲಿವಿನ ಕಿರುಚಿತ್ರ…

ನಾವು ಇಂದು ಸುಲಲಿತವಾಗಿ ಜೀವನ ನಡೆಸುತ್ತಿರುವುದಕ್ಕೆ ಮುಖ್ಯ ಕಾರಣ ಆರಕ್ಷಕರು. ಅಂತಹ ಆರಕ್ಷಕರಿಗೂ ಒಂದು ಜೀವನವಿದೆ. ಅವರಿಗೂ ಹೆಂಡತಿ, ಮಕ್ಕಳು, ತಂದೆ, ತಾಯಿ ಇದ್ದಾರೆ. ಅವರಿಗಿರುವ ಸಾಕಷ್ಟು ಕಷ್ಟಗಳ ನಡುವೆ, ಕರ್ತವ್ಯ ನಿಷ್ಠೆಯನ್ನು ಹೇಗೆ ಮಾಡುತ್ತಾರೆ ಎಂಬ ವಿಚಾರವನ್ನು “ಸೆಲ್ಯೂಟ್” ಎಂಬ ಇಪ್ಪತ್ತೇಳು ನಿಮಿಷಗಳ ಕಿರುಚಿತ್ರದ ಮೂಲಕ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ ನಿರ್ದೇಶಕ ತ್ಯಾಗರಾಜ್.

ಆರಕ್ಷಕರ ಬಗ್ಗೆ ಇಪ್ಪತ್ತೇಳು ನಿಮಿಷಗಳಲ್ಲಿ ಸುಂದರವಾಗಿ ಕಿರುಚಿತ್ರದ ಮೂಲಕ ತೋರಿಸಿರುವ ನಿರ್ದೇಶಕರಿಗೆ ಹಾಗೂ ಇಂತಹ ಕಿರುಚಿತ್ರವನ್ನು ನಿರ್ಮಿಸಿರುವ ದೀಪಕ್ ಗೌಡ ಅವರಿಗೆ ವಂದನೆ. ಕೊರೋನ ಕಾಲದಲ್ಲಿ ಪೊಲೀಸರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ನಾನು ಆ ಸಮಯದಲ್ಲಿ ಕಾರ್ಯ ನಿರ್ವಹಿಸಿದ್ದೆ. ಅದೇ ಸಮಯದಲ್ಲೇ ನಿವೃತ್ತನಾದೆ. ಒಂದು ಬೇಜಾರಿನ ವಿಚಾರವೆಂದರೆ, ನಾನು ನಿವೃತ್ತನಾಗುವ ದಿವಸ ನಮ್ಮ ಠಾಣೆಯಲ್ಲಿ ನಾನು ಮಾತ್ರ ಇದ್ದೆ. ಬೇರೆ ಯಾರು ಇರಲಿಲ್ಲ.‌ ಈ ರೀತಿ ನಿವೃತ್ತಿಯಾಗಿರುವುದು ನಾನೊಬ್ಬನೆ ಅನಿಸುತ್ತದೆ ಎಂದರು ನಿವೃತ್ತ ಎಸ್.ಪಿ ಉಮೇಶ್.

ಈ ಕಿರುಚಿತ್ರ ನಿರ್ಮಿಸಿರುವ ದೀಪಕ್ ಗೌಡ ಅವರು ನನ್ನ ಅಣ್ಣ. ಅವರು ನನಗೆ ಮಾಡಿರುವ ಸಹಾಯ ‌ಅಪಾರ. ಇನ್ನೂ “ಸೆಲ್ಯೂಟ್” ಕಿರುಚಿತ್ರವನ್ನು ತ್ಯಾಗರಾಜ್ ಅದ್ಭುತವಾಗಿ ನಿರ್ದೇಶಿಸಿದ್ದಾರೆ. ನಾನು ಕೂಡ ಎರಡು ವರ್ಷಗಳ ಹಿಂದೆ ಸಮಸ್ಯೆ ಎದುರಿಸಿದೆ‌. ಅ ಸಮಯದಲ್ಲಿ ಆರಕ್ಷಕರು ಮಾಡಿದ್ದ ಸಹಾಯ ಮರೆಯುವ ಹಾಗಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ತಿಳಿಸಿದರು.

ನನಗೆ ಸ್ನೇಹಿತ ಬಾಲಾಜಿ‌ ಯಾದವ್ ಮೂಲಕ ನಿರ್ಮಾಪಕ ದೀಪಕ್ ಗೌಡ ಪರಿಚಯವಾದರು.‌ ಅವರಿಗೆ ಈ ಕಥೆ ಹೇಳಿದೆ. ಇಷ್ಟವಾಯಿತು .ನಿರ್ಮಾಣ ಮಾಡಿದರು. ಅಶ್ವಿನ್ ಹಾಸನ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಹಾಗೂ ಸಂಗೀತ ನಿರ್ದೇಶಕ ಪ್ರದ್ಯೋತ್ತನ್ ಆದಿಯಾಗಿ ಎಲ್ಲಾ ತಂತ್ರಜ್ಞರ ಕಾರ್ಯ ವೈಖರಿ ಚೆನ್ನಾಗಿದೆ ಎಂದರು ನಿರ್ದೇಶಕ ತ್ಯಾಗರಾಜನ್. ಈ ಹಿಂದೆ ಎರಡು ಕಿರುಚಿತ್ರಗಳನ್ನು ತ್ಯಾಗರಾಜನ್ ನಿರ್ದೇಶಿಸಿದ್ದಾರೆ. ಕೆಲವು ಪ್ರಶಸ್ತಿಗಳು‌ ಸಹ ಬಂದಿದೆ.

ನಾನು ಉಮಾಪತಿ ಅವರ ನಿರ್ಮಾಣದ “ಹೆಬ್ಬುಲಿ” ಚಿತ್ರದಲ್ಲಿ ಅಭಿನಯಿಸಿದ್ದೆ. ಅಲ್ಲಿ ಅವರು ಕಲಾವಿದರನ್ನು ಗೌರವಿಸುತ್ತಿದ್ದ ರೀತಿ ನೋಡಿ ಸಂತೋಷವಾಗಿತ್ತು. ಈಗ ಅವರ ಸಹೋದರ ದೀಪಕ್ ಗೌಡ ಅವರು ನಿರ್ಮಿಸಿರುವ “ಸೆಲ್ಯೂಟ್” ಕಿರುಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರು ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದರು ನಟ ಅಶ್ವಿನ್ ಹಾಸನ್.

ನಾನು “ಸೆಲ್ಯೂಟ್” ಕಿರುಚಿತ್ರವನ್ನು ನನ್ನ ತಂದೆ ಗೋವಿಂದರಾಜು ಅವರಿಗೆ ಅರ್ಪಿಸುತ್ತಿದ್ದೇನೆ. ಅವರು ಸಹ ಪೊಲೀಸ್ ಅಧಿಕಾರಿಯಾಗಿದ್ದರು. ಈ ಕಿರುಚಿತ್ರವನ್ನು ಡಿ ಬೀಟ್ಸ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ದೀಪಕ್ ಗೌಡ.

ಸಂಗೀತ ನಿರ್ದೇಶಕ ಪ್ರದ್ಯೋತ್ತನ್ ಸಹ “ಸೆಲ್ಯೂಟ್” ಬಗ್ಗೆ ಮಾತನಾಡಿದರು.

ಅಜಿತ್ ಎ.ಯು ಛಾಯಾಗ್ರಹಣ, ರವಿ ಸಹ ನಿರ್ದೇಶನ ಹಾಗೂ ಕಿರಣ್ ಅವರ ಸಂಕಲನವಿರುವ ಈ ಕಿರುಚಿತ್ರದಲ್ಲಿ ಅಶ್ವಿನ್ ಹಾಸನ್, ಶ್ರೀನಾಥ್ ಚಿತ್ತಾರ, ನವೀನ್ ಸಾಣೇಹಳ್ಳಿ, ಲೋಕೇಶ್ ಆಚಾರ್, ವಾಣಿಶ್ರೀ ಕುಲಕರ್ಣಿ ಮುಂತಾದವರು ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಹುಡುಗಿ ಹಿಂದೆ ಬಿದ್ದ ರಾಮ್ ಗೋಪಾಲ್ ವರ್ಮ! ಕನ್ನಡದಲ್ಲೂ ಬರಲಿದೆ ಆರ್ ಜಿ ವಿ ಸಿನಿಮಾ…

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತವೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ‌ ಮಾಡುವುದರಲ್ಲಿ ಸದಾ ಮುಂದೆ.
ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದು, ಆ ಚಿತ್ರ‌ ಹುಡುಗಿ ಎಂಬ ಶೀರ್ಷಿಕೆಯಡಿ ಕನ್ನಡದಲ್ಲೂ ರಿಲೀಸ್ ಮಾಡಲಾಗ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ರಾಮ್ ಗೋಪಾಲ್ ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರ ನಡೆಸಿದರು.

ಮಾಧ್ಯಮಗಳೊಟ್ಟಿಗೆ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದು ತುಂಬಾ ವಿಶೇಷವಾದ ಸಿನಿಮಾ. ನಾನು ಚಿಕ್ಕವನಿದ್ದಾಗ ಎಂಟರ್ ದಿ ಡ್ರ್ಯಾಗನ್ ಸಿನಿಮಾ ನೋಡಿದ್ದೆ. ಆ ಕಥೆಯ ನಾಯಕ‌ ಬ್ರೂಸ್ಲಿಯಿಂದ ಸ್ಪೂರ್ತಿಯಿಂದ ಈ ಸಿನಿಮಾ ಮಾಡಿದ್ದು, ಮಾರ್ಷಲ್ ಆರ್ಟ್ಸ್ ಗೆ ಸಂಬಂಧಪಟ್ಟ ಸಿನಿಮಾವಾಗಿದೆ.

ಈ ಕಲೆ ಮಾಡುವವರ ಸಂಖ್ಯೆ ತೀರಾ ವಿರಳ. ಅದ್ರಲ್ಲೂ ಹೆಣ್ಣು ಮಕ್ಕಳು ಮಾಡೋದು‌ ಕಡಿಮೆ. ನಾಯಕಿ ಪೂಜಾ ಹನ್ನೆರೆಡು ವರ್ಷದಿಂದ ಸಮರಕಲೆ ಅಭ್ಯಾಸ ಮಾಡ್ತಿದ್ದು, ಹೀಗಾಗಿ ಆಕೆಯನ್ನು ನಾಯಕಿಯನ್ನು ಆಕೆ ಮಾಡಲಾಗಿದೆ. ಟ್ರಯಾಂಗಲ್ ಲವ್ ಸ್ಟೋರಿ ಕೂಡ ಸಿನಿಮಾದಲ್ಲಿದೆ ಎಂದು ತಿಳಿಸಿದರು.

ಹುಡುಗಿ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮಾರ್ಷಲ್ ಆರ್ಟ್ಸ್ ಹಿನ್ನೆಲೆಯಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ಸಿನಿಮಾದಲ್ಲಿ ಪೂಜಾ ಭಾಲೇಕರ್ ನಾಯಕಿಯಾಗಿ ನಟಿಸಿದ್ದಾರೆ. ಭಾರತ ಹಾಗೂ ಚೀನಾದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.

ಈ ಸಿನಿಮಾ ಚೀನಾದಲ್ಲಿ ಬಿಡುಗಡೆಯಾಗುತ್ತಿದೆ. ಆರ್ಟ್ಸಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿರುವ ಈ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಬೆಳ್ಳಿತೆರೆಗೆ ಜುಲೈ 15ಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ.

error: Content is protected !!