Categories
ಸಿನಿ ಸುದ್ದಿ

ಡಾ.ಸುಧಾಕರ್‌ ಬಣ್ಣ ಹಚ್ಚಿ ನಟನೆ! ಯಡಿಯೂರಪ್ಪ ಬಳಿಕ ತನುಜಾ ಸಿನಿಮಾದಲ್ಲಿ ಅಭಿನಯಿಸಿದ ಸಚಿವ

ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಕಥೆಗೆ ಮನಸೋತು ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ.


ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು, ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ ಸಿನಿಮಾ ಕೂಡ ಸೆಟ್ಟೇರಿದ್ದು ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು .


ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ತಮ್ಮ ಪಾತ್ರಕ್ಕೆ ತಾವೇ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಇಂದು ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ವಿಶೇಷವಾಗಿದ್ದು, ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ.


ಇನ್ನು ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರ ನಿರ್ದೇಶನವಿದ್ದು, Beyond Visions Cinemas ಬಂಡವಾಳ ಹೂಡಿದೆ. ಈ ಚಿತ್ರವು ಶಿವಮೊಗ್ಗ ಸುತ್ತ ಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್ , ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದಾರೆ.

ಪ್ರದ್ಯೋತನ ಸಂಗೀತ ನಿರ್ದೇಶನ ರವೀಂದ್ರನಾಥ್ ಹಾಗೂ ಮೋಹನ್.ಎಲ್ ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನವಿದ್ದು ಆರ್ ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆ, ರಘುನಂದನ್ ಎಸ್.ಕೆ ಕಾರ್ಯಕಾರಿ ನಿರ್ಮಾಪಕರು, ಸತೀಶ್ ಬ್ರಮ್ಮಾವರ್ ನಿರ್ಮಾಣ ನಿರ್ವಹಣೆ ಇದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಶೂಟಿಂಗ್‌ ಮೊದಲೇ ಭೀಮನಿಗೆ ಭರ್ಜರಿ ಬ್ಯುಜಿನೆಸ್!‌ ದುನಿಯಾ ವಿಜಯ್‌ ಚಿತ್ರದ ಆಡಿಯೋ ದಾಖಲೆ ಮೊತ್ತಕ್ಕೆ ಖರೀದಿಸಿದ ಆನಂದ್‌ ಆಡಿಯೊ…

ಚಿತ್ರೀಕರಣಕ್ಕೂ‌ ಮೊದಲೇ ದುನಿಯಾ ವಿಜಯ್‌ ಅಭಿನಯದ ಭೀಮ ಚಿತ್ರಕ್ಕೆ ಭರ್ಜರಿ ಬ್ಯುಜಿನೆಸ್‌ ಆಗಿದೆ. ಹೌದು, ರಿಲೀಸ್‌ ಮೊದಲೇ ದುನಿಯಾ ವಿಜಯ್ ಅವರ ಭೀಮ ಚಿತ್ರದ ಆಡಿಯೋ ಹಕ್ಕನ್ನು ಆನಂದ್‌ ಆಡಿಯೋ ದಾಖಲೆ ಮೊತ್ತ ಕೊಟ್ಟು ಖರೀದಿ ಮಾಡಿದೆ. ಇದು ಚಿತ್ರತಂಡಕ್ಕೆ ಸಿಕ್ಕ ಮೊದಲ ಜಯ.

ಹೌದು, 1.50ಕೋಟಿ ದಾಖಲೆಯ ಮೊತ್ತಕ್ಕೆ ಭೀಮ ಚಿತ್ರದ ಆಡಿಯೋ ಸೋಲ್ಡೌಟ್ ಆಗಿರುವುದು ನಿಜಕ್ಕೂ ಖುಷಿಯ ವಿಷಯವೇ. ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್‌ ಹಾಗು ಆನಂದ್‌ ಅವರು ಭೀಮ ಚಿತ್ರದ ಆಡಿಯೋ ರೈಟ್ಸ್‌ ಅನ್ನು ದಾಖಲೆಯ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.

ಸಲಗ ಚಿತ್ರ ಆಡಿಯೋ ಸಕ್ಸಸ್ ನ ಎಫೆಕ್ಟ್ ಇದಾಗಿದ್ದು, ಅಲ್ಲದೆ ದುನಿಯಾ ವಿಜಯ್ ಹಾಗೂ ಚರಣ್ ಕಾಂಬಿನೇಷನ್‌ ಸಿನಿಮಾ ಮತ್ತೆ ಮೂಡಿ ಬರುತ್ತಿರುವ ಹಿನ್ನಲೆಯಲ್ಲಿ ಈ ಭರ್ಜರಿ ಬ್ಯುಜಿನೆಸ್‌ ಆಗಿದೆ.

ಆನಂದ್ ಆಡಿಯೋದಿಂದ ಅಡ್ವಾನ್ಸ್ ಚೆಕ್ ಹಾಗೂ ಅಗ್ರಿಮೆಂಟ್ ಸ್ವೀಕರಿಸಿರುವ ಭೀಮ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಅವರು ಇದೇ ಏಪ್ರಿಲ್ 18ಕ್ಕೆ ಭೀಮ ಚಿತ್ರ ಅದ್ಧೂರಿ ಮುಹೂರ್ತ ನಡೆಸಲು ತೀರ್ಮಾನಿಸಿದ್ದಾರೆ. ದುನಿಯಾ ವಿಜಯ್ ಅವರ ಇಷ್ಟ ದೇವತೆ ಶ್ರೀ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆಯಲಿದೆ.

Categories
ಸಿನಿ ಸುದ್ದಿ

ಬೆಲ್‌ ಬಟನ್‌ ಒತ್ತಿದ ದೇಸಾಯಿ! ಹೊಸಬರಿಗೆ ‌ಸುನೀಲ್‌ ಕುಮಾರ್ ಸಾಥ್…‌

ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ, ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿ ಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು. ಅಂತಹ ನಿರ್ದೇಶಕರಿಂದ ಇತ್ತೀಚೆಗೆ “ಬೆಲ್ ಬಟನ್” ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ.

ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವ ಇರುವ ಲ‌ಕ್ಷ್ಮಿನರಸಿಂಹ. ಎಂ “ಬೆಲ್ ಬಟನ್” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಫ್ರೆಶ್ ಫಿಲಂಸ್ ಮೂಲಕ ಗಂಗರಾಜ್ ಗೌಡ ಆರ್, ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎ.ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎಸ್ ಎಂ ರಾಹಿತ್ಯ ಸಂಗೀತ ನೀಡುತ್ತಿದ್ದಾರೆ. ಗೌತಮ್ ನಾಯಕ್ ಛಾಯಾಗ್ರಹಣ ಹಾಗೂ ಎಸ್. ಆಕಾಶ್ ಮಹೇಂದ್ರಕರ್
ಸಂಕಲನ ಈ ಚಿತ್ರಕ್ಕಿದೆ.

ಕಲಾವಿದರ ಆಯ್ಕೆಯಲ್ಲಿ ‌ತೊಡಗಿರುವ ನಿರ್ದೇಶಕ ಲಕ್ಷ್ಮಿನರಸಿಂಹ ಅವರು, ಮೇನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಹೊಂದಿಸಿ ಬರೆಯಿರಿ ಅದೇ ಜೀವನ ; ಸ್ಟುಡೆಂಟ್‌ ಲೈಫ್‌ ನೆನಪಿಸೋ ಟೀಸರ್‌ ಇದು…

ಇಂಜಿನಿಯರಿಂಗ್ ಕಾಲೇಜ್ ಫ್ರೊಫೆಸರ್ ಆಗಿದ್ದ ರಾಮೇನಹಳ್ಳಿ ಜಗನ್ನಾಥ್ “ಹೊಂದಿಸಿ ಬರೆಯಿರಿ” ಸಿನಿಮಾ ಮೂಲಕ ನಿರ್ದೇಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಕ್ ಲೈನ್ ಪ್ರೊಡಕ್ಷನ್ ಹೌಸ್ ನಲ್ಲಿ ಡೈರೆಕ್ಷನ್ ವಿಭಾಗದಲ್ಲಿ ಕೆಲಸ ಮಾಡಿ ಅನುಭವವಿರುವ ಜಗನ್ನಾಥ್, ಈ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಈಗಾಗಲೇ “ಹೊಂದಿಸಿ ಬರೆಯಿರಿ” ಸಿನಿಮಾದ ಫಸ್ಟ್ ಲುಕ್ ರಿಲೀಸ್ ಸಖತ್ ಸೌಂಡ್ ಮಾಡಿತ್ತು. ಈಗ ಬಿಡುಗಡೆಯಾಗಿರುವ ಟೀಸರ್ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ವಿದ್ಯಾರ್ಥಿ ಜೀವನದ ಅನುಭವ ಅನಾವರಣ
ನೆನಪು, ಕನಸು ಹಾಗೂ ವಾಸ್ತವ..ಈ ಮೂರು ಪರಿಕಲ್ಪನೆಗಳ ಮೇಲೆ ಅನಾವರಣವಾಗುವ ಸಿನಿಮಾವೇ ಹೊಂದಿಸಿ ಬರೆಯಿರಿ. ಅದರಂತೆ ಟೀಸರ್ ನಲ್ಲಿ ಕಾಲೇಜ್ ನೆನಪುಗಳನ್ನು ಕಟ್ಟಿಕೊಡಲಾಗಿದೆ. ವಿದ್ಯಾರ್ಥಿ ಜೀವನದ ಏರಿಳಿತಗಳನ್ನು ತೋರಿಸಲಾಗಿದೆ. ಟೀಸರ್ ನಲ್ಲಿ ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಗುಳ್ಟು ಖ್ಯಾತಿಯ ನವೀನ್, ವಾಸ್ತುಪ್ರಕಾರದಿಂದ ಪರಿಚಿತರಾದ ಐಶಾನಿ ಶೆಟ್ಟಿ, ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಗೆ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್, ಸಂಯುಕ್ತ ಹೊರನಾಡು, ಶ್ರೀಮಹಾದೇವ್, ವನಾರಾವ್ ಹೀಗೆ ಹಲವರಿದ್ದಾರೆ.

ಈಗಾಗಲೇ “ಹೊಂದಿಸಿ ಬರೆಯಿರಿ” ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. “ಟಗರು” ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.

ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ವಸಿಷ್ಠ ವಿಶಿಷ್ಠ ಹೆಜ್ಜೆ! ಸಿಂಹ ಆಡಿಯೋ ಶುರು ಮಾಡಿದ ಕಂಚಿನ ಕಂಠದ ನಟ!!

ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ ವಸಿಷ್ಠ ಸಿಂಹ. ಇಂದು ವಸಿಷ್ಠ ಸಿಂಹ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ ಮತ್ತು ಗಾಯಕ ಕೂಡ. ಟಾಲಿವುಡ್ ನಲ್ಲಿಯೂ ಮಿಂಚುತ್ತಿರುವ ಪ್ರತಿಭಾನ್ವಿತ ನಾಯಕ ನಟ ಅನ್ನೋದು ವಿಶೇಷ. ಗಾಯಕನಾಗಿ ಸಾಧನೆ ಮಾಡಬೇಕೆಂಬ ಕನಸು ಹೊತ್ತು ಬಂದ ವಸಿಷ್ಠ ಅವರಿಗೆ ನಾಯಕನಟ, ಖಳ‌ನಟನಾಗಿಯೂ ಕಮಾಲ್ ಮಾಡುವ ಅವಕಾಶ ಸಿಕ್ತು. ಈ ಅವಕಾಶ ಸದುಪಯೋಗಪಡಸಿಕೊಂಡು ಸಕ್ಸಸ್‌ ಕಾಣುತ್ತಲೇ ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಮ್ಮದೇ ಆಡಿಯೋ ಸಂಸ್ಥೆಯನ್ನು ಅನಾವರಣ ಮಾಡಿದ್ದಾರೆ….

ಸಿಂಹಾ ಆಡಿಯೋ ಲೋಗೋ‌ ಲಾಂಚ್

ಅಪ್ಪನ ಮುದ್ದಿನ ಮಗನಾಗಿರುವ ವಸಿಷ್ಠ ತಂದೆಯ ಹೆಸರಿನಡಿ, ತನ್ನ ನೆಚ್ಚಿನ ಆರಾಧ್ಯ ತಾಯಿ ಚಾಮುಂಡೇಶ್ವರಿ ನೆನೆಪಿನಾರ್ಥವಾಗಿ ಸಿಂಹಾ ಎಂಬ ಹೆಸರಿನಡಿ ಆಡಿಯೋ ಕಂಪನಿ ಶುರು ಮಾಡಿದ್ದಾರೆ. ನೆಚ್ಚಿನ ಗೆಳೆಯನ ಹಾಗೂ ಅಚ್ಚುಮೆಚ್ಚಿನ ಗುರು ಸ್ವರಬ್ರಹ್ಮ ಹಂಸಲೇಖ ಸಾಥ್ ನಲ್ಲಿ ಆಡಿಯೋ‌ ಲೋಗೋ ಅನಾವರಣಗೊಂಡಿದೆ.

ಕಾಲಚಕ್ರ ಹಾಡು ಬಿಡುಗಡೆ

ಸುಮನ್ ಕ್ರಾಂತಿ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿ ಬಂದಿರುವ, ವಿಭಿನ್ನ ಗೆಟಪ್ ನಲ್ಲಿ ವಸಿಷ್ಠ ಬಣ್ಣ ಹಚ್ಚಿರುವ ಕಾಲಚಕ್ರ ಸಿನಿಮಾದ ನೀನೇ ಬೇಕು ಎಂಬ ಹಾಡು ವಸಿಷ್ಠ ಸಿಂಹ ಸಾರಥ್ಯದ ಸಿಂಹಾ ಆಡಿಯೋ ಕಂಪನಿಯಲ್ಲಿ ಬಿಡುಗಡೆಯಾಗಿದೆ. ತಮ್ಮದೆ ಸಿನಿಮಾದ ಮೊದಲ ಹಾಡು ತಮ್ಮದೇ ಆಡಿಯೋ ಕಂಪನಿ ಪಾಲಾಗಿರೋದು ವಸಿಷ್ಠಗೆ ಡಬ್ಬಲ್ ಖುಷಿಕೊಟ್ಟಿದೆ.

ಅಂದಹಾಗೆ ವಸಿಷ್ಠ ಸಿಂಹ ಕಿರಿಕ್ ಪಾರ್ಟಿ’ ಸಿನಿಮಾದ ‘ನೀಚ ಸುಳ್ಳು ಸುತ್ತೋ ನಾಲಿಗೆ..’, ‘ದಯವಿಟ್ಟು ಗಮನಿಸಿ..’ ಸಿನಿಮಾದ ‘ಮರೆತೇ ಹೋದೆನು..’ ಸೇರಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಅವರಿಗೆ ಸಂಗೀತದ ಮೇಲೂ ಆಸಕ್ತಿ ಹಾಗೂ ಹೊಸ ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಿಂಹಾ ಆಡಿಯೋ ಸಂಸ್ಥೆ ಕಣ್ತೆರೆದಿದ್ದು, ದೊಡ್ಡ ಎತ್ತರಕ್ಕೆ ಬೆಳೆಯಲಿ ಅನ್ನೋದು ಅಭಿಮಾನಿಗಳ ಹಾರೈಕೆ.

Categories
ಸಿನಿ ಸುದ್ದಿ

ಮಾತಲ್ಲಿ ನಿರತನಾದ ಲಂಕಾಸುರ! ಇದು ವಿನೋದ್‌ ಪ್ರಭಾಕರ್‌ ನಿರ್ಮಾಣದ ಸಿನಿಮಾ…

ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು ಗೊತ್ತೇ ಇದೆ. ಆ ಬ್ಯಾನರ್‌ ಮೂಲಕ ” ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿರುವ ಸುದ್ದಿಯೂ ಹೊಸದೇನಲ್ಲ. ಈ ಚಿತ್ರಕ್ಕೆ ನಿಶಾ ವಿನೋದ್ ಪ್ರಭಾಕರ್ ನಿರ್ಮಾಪಕರು ವಿಷಯ ಏನಪ್ಪಾ ಅಂದರೆ, ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ಈಗ ಸಿನಿಮಾದ ಡಬ್ಬಿಂಗ್‌ ಕೆಲಸ ಜೋರಾಗಿ ಸಾಗುತ್ತಿದೆ.

ಹೌದು, ಆಕಾಶ್ ಸ್ಟುಡಿಯೋದಲ್ಲಿ ಡಬ್ಬಿಂಗ್‌ ಕೆಲಸ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ ಚಿತ್ರಕ್ಕೆ ಬಾಕಿಯಿದೆ. ಈ ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಈ ಹಿಂದೆ “ಮೂರ್ಕಲ್ ಎಸ್ಟೇಟ್” ಎಂಬ ಚಿತ್ರ ನಿರ್ದೇಶಿಸಿದ್ದ ಪ್ರಮೋದ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಐದು ಸಾಹಸ ದೃಶ್ಯಗಳಿವೆ. ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಈ ಚಿತ್ರದ ಸಾಹಸ ನಿರ್ದೇಶನ ಮಾಡಿದ್ದಾರೆ.

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ ಮಾಡಿದರೆ, ಸುಜ್ಞಾನ್ ಛಾಯಾಗ್ರಹಣವಿದೆ. ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಅವರೊಂದಿಗೆ ನಟಿಸಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದಲ್ಲಿದ್ದಾರೆ.

Categories
ಸಿನಿ ಸುದ್ದಿ

ಮಸಣದಲ್ಲಿ ತಯಾರಾದ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ! ದಾರಿ ಯಾವುದಯ್ಯ ವೈಕುಂಠಕೆ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ…

ದೇಶ, ವಿದೇಶಗಳ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳ ಹಲವು ವಿಭಾಗಗಳಲ್ಲಿ ನೂರೈವತ್ತಕ್ಕೂ ಅಧಿಕ ಪ್ರಶಸ್ತಿ ಪಡೆದುಕೊಂಡಿರುವ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನೋಡುಗರಿಂದ ಮೆಚ್ಚುಗೆ ಪಡೆದುಕೊಂಡಿದೆ. ಮಾಜಿ ಸಭಾಪತಿ‌ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು ಈ ವೇಳೆ ಇದ್ದರು.

ನಿರ್ದೇಶಕ ಸಿದ್ದು ಪೂರ್ಣಚಂದ್ರ ಮಾತನಾಇಡ, “ನನ್ನ ಮೊದಲ ಚಿತ್ರ “ಕೃಷ್ಣ ಗಾರ್ಮೆಂಟ್ಸ್” ನಿರೀಕ್ಷಿತ ಗೆಲವು ಪಡೆಯಲಿಲ್ಲ. ಎರಡನೇ ಚಿತ್ರ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರ ಬಿಡುಗಡೆ ಮೊದಲೇ ಜನಪ್ರಿಯವಾಗಿದೆ.‌ ನೂರವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇಂತಹ ನನ್ನ ಕನಸಿಗೆ ಆಸರೆ ನೀಡಿದ ನಿರ್ಮಾಪಕರಿಗೆ ಧನ್ಯವಾದ. ನನ್ನ ಚಿತ್ರತಂಡಕ್ಕೆ ವಿಶೇಷ ಧನ್ಯವಾದ. ಈ ಚಿತ್ರದ ಚಿತ್ರೀಕರಣ ಬಹುತೇಕ ಭಾಗ ರಾಮನಗರದ ಸ್ಮಶಾನದಲ್ಲಿ ನಡೆದಿದೆ.‌ ಅಲ್ಲಿ ಹೋಗಿ ಸಮಾಧಿಯಲ್ಲಿ ಮಲಗಿರುವ ಹಿರಿಯರ ಆಶೀರ್ವಾದ ಪಡೆದು ಚಿತ್ರ ಮಾಡಿದ್ದೇನೆ ಎಂದರು.

ಈ ಚಿತ್ರದ ಕಥೆ ಕೇಳಿದ ದಿನವೇ ನಿರ್ಮಾಣ ಮಾಡಬೇಕೆಂದು ಮನಸು ಮಾಡಿದ್ದೆ. ನನ್ನ ಸ್ನೇಹಿತ ಪ್ರಶಾಂತ್ ಅವರ ಮೂಲಕ ನಿರ್ದೇಶಕ ಸಿದ್ದು ಪೂರ್ಣಚಂದ್ರ ಪರಿಚಿತರಾದರು. ಉತ್ತಮ ಚಿತ್ರ ಮಾಡಿಕೊಟ್ಟಿದ್ದಕ್ಕೆ ಸಿದ್ದು ಅವರಿಗೆ ಧನ್ಯವಾದಗಳು. ಮೇ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಿರ್ಮಾಪಕ ಶರಣಪ್ಪ ಎಂ ಕೊಟಗಿ.

ನನಗೆ ಉತ್ತಮ ಪಾತ್ರ ನೀಡಿದ ನಿರ್ದೇಶಕರಿಗೆ ನಾನು ಆಭಾರಿ. ಚಿಕ್ಕವಯಸ್ಸಿನಲ್ಲಿ ಅಶೋಕ ಹೋಟೆಲ್‌ ಮುಂದೆ ಓಡಾಡುವಾಗ ಒಂದು ದಿನ ಈ ಹೋಟೆಲ್ ಒಳಗೆ ಹೋಗಬೇಕು ಅಂದುಕೊಳ್ಳುತ್ತಿದೆ. ಈಗ ಇದೇ ಹೋಟೆಲ್ ನಲ್ಲಿ ನನ್ನ ಸಿನಿಮಾದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ಖುಷಿ ಎಂದರು ನಾಯಕ ವರ್ಧನ್.

ಚಿತ್ರದ ಕಲಾವಿದ ಬಲರಾಜವಾಡಿ ಸೇರಿದಂತೆ ತಂಡದ ಅನೇಕ ಕಲಾವಿದರು, ಗಣ್ಯರು ಚಿತ್ರದ ಬಗ್ಗೆ ಮಾತನಾಡಿದರು. ಮ್ಯೂಸಿಕ್ ಬಾಕ್ಸ್ ಆಡಿಯೋ ಕಂಪನಿ ಹಾಡುಗಳನ್ನು ಹೊರತಂದಿದೆ. ಹಿರಿಯ ಛಾಯಾಗ್ರಾಹಕ ಜೆ.ಜಿ.ಕೃಷ್ಣ, ಗಾಯಕ ಶಶಿಧರ್ ಕೋಟೆ ಇತರರು ಇದ್ದರು.

Categories
ಸಿನಿ ಸುದ್ದಿ

ವೆಡ್ಡಿಂಗ್‌ ಗಿಫ್ಟ್‌ ಕೊಡ್ತಾರೆ ನಟಿ ಪ್ರೇಮ! ಜೂನ್‌ ವೇಳೆ ಹೊಸ ಸಿನಿಮಾ ರಿಲೀಸ್…

ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ನಿರ್ಮಾಪಕ ಭಾ.ಮ.ಹರೀಶ್ ಹಾಗೂ ಸುನೀಲ್ ಕಾರ್ಯಕ್ರಮದ ಆಕರ್ಷಣೆಯಾಗಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಹಾಡುಗಳ ಬಿಡುಗಡೆಗೆ ಸಾಕ್ಷಿಯಾದರು.

ನಿರ್ದೇಶಕ ವಿಕ್ರಂ ಪ್ರಭು ಕಳೆದ ಹತ್ತೊಂಬತ್ತು ವರ್ಷಗಳ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರದಲ್ಲಿ ಕೆಲಸ ಮಾಡಿದ್ದರು. ಆ ಬಳಿಕ ಅವರು ಇಂಡಸ್ಟ್ರಿ ಕಡೆ ಮುಖ ಮಾಡಲಿಲ್ಲ. ಆ ಕುರಿತು ಅವರು ಹೇಳುವುದಿಷ್ಟು. “ಲವ್‌ ಸಿನಿಮಾ ಬಳಿಕ ನಾನು ಪುಣೆಯಲ್ಲಿ ಬಿಜಿನೆಸ್ ಶುರುಮಾಡಿದೆ. ಹಾಗಾಗಿ ಅತ್ತ ಗಮನಹರಿಸಿದ್ದೆ. ಈಗ ಚಿತ್ರರಂಗಕ್ಕೆ ಬಂದು “ವೆಡ್ಡಿಂಗ್ ಗಿಫ್ಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ಕೆಲವು ಹೆಣ್ಣು ಮಕ್ಕಳು ಕಾನೂನನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದೇ ಕಥಾಹಂದರ.

ಹಿರಿಯ ನಟಿ ಪ್ರೇಮ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಶಾಂತ್, ಸೋನು ಗೌಡ, ಅಚ್ಯುತಕುಮಾರ್, ಪವಿತ್ರ ಲೋಕೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗ ಹಾಡುಗಳ ಬಿಡುಗಡೆಯಾಗಿದೆ. ಮೇ ತಿಂಗಳನ್ನು‌ ಪ್ರಚಾರಕ್ಕೆ ಮೀಸಲಿಟ್ಟು, ಜೂನ್ ನಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ವಿಕ್ರಂಪ್ರಭು.

ನಾನು ದುಡ್ಡಿಗಾಗಿ ಸಿನಿಮಾ ಮಾಡುವವಳಲ್ಲ. ಉತ್ತಮ ಕಥೆ ಇದ್ದರೆ ಮಾತ್ರ ಮಾಡುತ್ತೇನೆ.‌ ವಿಕ್ರಂಪ್ರಭು ಅವರು ಈ ಚಿತ್ರದ ಕಥೆ ಹೇಳಿದ ತಕ್ಷಣ ಮಾಡಬೇಕೆನಿಸಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಾಯಕನ ಪರ ವಕಾಲತ್ತು ವಹಿಸುವ ವಕೀಲೆಯಾಗಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಹಿರಿಯ ನಟಿ ಪ್ರೇಮ.

ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳು ಶುಭ ಕೋರಿದರು. ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

Categories
ಸಿನಿ ಸುದ್ದಿ

ಗಿರ್ಕಿ ಮೋಷನ್ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಸೆಂಚುರಿ ಸ್ಟಾರ್… ಇದು ತರಂಗ ವಿಶ್ವ ಚಿತ್ರ!

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರದ ಮೋಷನ್ ಪೋಸ್ಟರನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದ್ದು, ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ.

ಲವ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ.ಎಂ.ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಹ ಇವರೇ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ.

ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ
ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, “ಬಿಗ್ ಬಾಸ್” ಖ್ಯಾತಿಯ ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

ಮಹಿರ ಖ್ಯಾತಿಯ ಮಹೇಶ್ ಗೌಡ ಹೊಸ ಸಿನಿಮಾ ಶುರು- ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ಯಲ್ಲಿ ಅಗ್ನಿ ಸಾಕ್ಷಿ ವೈಷ್ಣವಿ ನಾಯಕಿ…

ಈ ಹಿಂದೆ ಬಂದಿದ್ದ ಮಹಿರ ಎಂಬ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ಸೇರಿದಂತೆ ಒಂದಷ್ಟು ಪ್ರತಿಭಾನ್ವಿತರು ನಟಿಸಿದ್ದರು. ತಾಯಿ ಮಗಳ ಹೋರಾಟದ ಕಥೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದ ನಿರ್ದೇಶಕ ಮಹೇಶ್ ಗೌಡ ಈ ಬಾರಿಯೂ ಹೊಸ ಪ್ರಯತ್ನದ ಸಿನಿಮಾವೊಂದಕ್ಕೆ ಕೈ ಹಾಕಿದ್ದಾರೆ. ಅದರ ಮೊದಲ ಭಾಗವೆಂಬಂತೆ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ನ್ನು ಯುಗಾದಿ ಹಬ್ಬದ ಸ್ಪೆಷಲ್ ಆಗಿ ರಿಲೀಸ್ ಮಾಡಿದ್ದಾರೆ.

ದಿನೇಶ್ ಪಾತ್ರದಲ್ಲಿ ಮಹೇಶ್
‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಮಹೇಶ್ ಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ. ಈ ಸಿನಿಮಾಗೆ ತಾವೇ ಕಥೆ ಬರೆದು ಆಕ್ಷನ್ ಕಟ್ ಹೇಳುವುದರ ಜೊತೆಗೆ ತಮ್ಮದೇ ಹೊನ್ನುಡಿ ಪ್ರೊಡಕ್ಷನ್ ನಡಿ ಮಹೇಶ್ ಚಿತ್ರಕ್ಕೆ ಬಂಡವಾಳ ಹಾಕ್ತಿದ್ದು, ಜೊತೆ ದಿನೇಶ್ ಎಂಬ ಪಾತ್ರ ಮಾಡುತ್ತಿದ್ದಾರೆ. ಹಳ್ಳಿ ಹುಡ್ಗಿ ಕವಿತಾ ಆಗಿ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ ಮಹೇಶ್ ಗೆ ಜೋಡಿಯಾಗಿ ಬಣ್ಣ ಹಚ್ಚಿದ್ದಾರೆ.

ನಾಯಕ ದಿನೇಶ್ ತೊನ್ನು(ವಿಟಿಲಿಗೋ) ಸಮಸ್ಯೆ ಇರುತ್ತೆ. ಆತ ಪಕ್ಕದ ಊರಿನ ಚೆಂದದ ಮುದ್ದು ಮುದ್ದಾದ ಹುಡ್ಗಿ ಕವಿತಾಳನ್ನು ವರಿಸುತ್ತಾರೆ. ಸಮಸ್ಯೆ ಗೊತ್ತಿದ್ರೂ ಕವಿತಾ ತನ್ನನ್ನ ಮದ್ವೆಯಾಗೋದೇಕೆ ಅನ್ನೋ ಕನ್ಫೂಷನ್ ದಿನೇಶ್ ಗೆ ಕಾಡ್ತಿರುತ್ತದೆ. ಅದನ್ನು ಕಾಮಿಡಿಯಲ್ಲಿ ಹೇಳೋದೇ ದೊಡ್ಡ ಚಾಲೆಂಜ್ ಅಂತಾರೇ ಮಹೇಶ್. ಅಂದಹಾಗೆ ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜಾನರ್ ಚಿತ್ರವಾಗಿದ್ದು, ಪಕ್ಕಾ ಮನರಂಜನೆ ನೀಡಲಿದೆ.

ಮಹೇಶ್ ಗೌಡ ತಮ್ಮದೇ ತೊನ್ನಿನ ಸಮಸ್ಯೆಯನ್ನು ಇಲ್ಲಿ ಕಥೆಯಾಗಿ ಪರಿವರ್ತಿಸಿದ್ದಾರೆ. ಇಂತಹ ಸಿನಿಮಾಗಳನ್ನು ತೆರೆಮೇಲೆ ಮಾಡೋದು ಕಷ್ಟವೇ ಸರಿ. ಅಂತಹ ಸಾಹಸಕ್ಕೆ ಮುಂದಾಗಿರುವ ಮಹೇಶ್ ಗೌಡ ಕಾರ್ಯಕ್ಕೆ ಶಹಬ್ಬಾಸ್ ಹೇಳಲೇಬೇಕು.

error: Content is protected !!